Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ರಾಜ್ಯದ ಮೂರು ವಿಧಾನಸಭಾ ಉಪಚುನಾವಣೆಯ ಫಲಿತಾಂಶ ಇನ್ನೇನು ಕೆಲವೇ ಕ್ಷಣಗಳಲ್ಲಿ ಹೊರಬೀಳಲಿದ್ದು, ಈಗಾಗಲೇ ಸಂಡೂರಿನಲ್ಲಿ ಬಿಜೆಪಿ ಅಭ್ಯರ್ಥಿ ಬಂಗಾರು ಹನುಮಂತು ವಿರುದ್ಧ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ಇ ತುಕಾರಾಮ ಅವರು ಭಾರಿ ಮುನ್ನಡೆ ಸಾಧಿಸಿದ್ದಾರೆ. 8,881 ಮತಗಳ ಅಂತರದಿಂದ ಅನ್ನಪೂರ್ಣ ಅವರು ಮುನ್ನಡೆ ಸಾಧಿಸಿದ್ದಾರೆ. ಆದರೆ ಇನ್ನು ಉಳಿದ ಎರಡು ಕ್ಷೇತ್ರಗಳಲ್ಲಿ ಮಾಜಿ ಮುಖ್ಯಮಂತ್ರಿಗಳ ಪುತ್ರರು ಸ್ಪರ್ಧೆ ಮಾಡಿದ್ದರು. ರಾಮನಗರ ಜಿಲ್ಲೆಯ ಚನ್ನಪಟ್ಟಣದಲ್ಲಿ ಮಾಜಿ ಮುಖ್ಯಮಂತ್ರಿ ಹಾಗೂ ಹಾಲಿ ಕೇಂದ್ರ ಸಚಿವ ಕುಮಾರಸ್ವಾಮಿ ಅವರ ಪುತ್ರ ನಿಖಿಲ್ ಅವರು ಸ್ಪರ್ಧೆ ಮಾಡಿದ್ದರೆ. ಹಾವೇರಿ ಜಿಲ್ಲೆಯ ಶಿಗ್ಗಾವಿ ಕ್ಷೇತ್ರದಲ್ಲಿ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಪುತ್ರ ಭರತ್ ಬೊಮ್ಮಾಯಿ ಸ್ಪರ್ಧೆ ಮಾಡಿದ್ದರು. ಇದೀಗ ಈ ಎರಡು ಕ್ಷೇತ್ರಗಳಲ್ಲಿ ನಿಖಿಲ್ ಕುಮಾರಸ್ವಾಮಿ ಹಾಗೂ ಭರತ್ ಬೊಮ್ಮಾಯಿಗೆ ಭಾರಿ ಹಿನ್ನಡೆಯಾಗಿದೆ. ಹೌದು ಶಿಗ್ಗಾವಿ ಕಾಂಗ್ರೆಸ್ ಅಭ್ಯರ್ಥಿ ಯಾಸಿರ್ ಪಠಣ್ ಅವರಿಗೆ 70,306 ಮತಗಳಿಂದ ಮುನ್ನಡೆ ಸಾಧಿಸಿದ್ದರೆ, ಇನ್ನು ಬಿಜೆಪಿಯ ಭರತ್ ಬೊಮ್ಮಾಯಿ…
ಬೆಂಗಳೂರು : ಇಷ್ಟು ದಿನ ಕರ್ನಾಟಕ ಸಾರಿಗೆ ಸಂಸ್ಥೆಯ ಬಸ್ಸಿನಲ್ಲಿ ಜನರು ನಗದು ಹಣ ನೀಡಿ ಟಿಕೆಟ್ ಪಡೆಯುತ್ತಿದ್ದರು. ಈ ವೇಳೆ ಕಂಡಕ್ಟರ್ ಮತ್ತು ಪ್ರಯಾಣಿಕರ ನಡುವೆ ಚಿಲ್ಲರೆ ವಿಷಯವಾಗಿ ಗಲಾಟೆ ನಡೆಯುತ್ತಿತ್ತು. ಆದರೆ ಇದೀಗ ಪ್ರಯಾಣಿಕರ ಬೇಡಿಕೆಯಂತೆ ಕೆಎಸ್ಆರ್ಟಿಸಿಯು ಇನ್ನು ಮುಂದೆ ಬಸ್ಗಳಲ್ಲಿ ಯುಪಿಐ ಮೂಲಕ ಹಣ ಪೇ ಮಾಡಿ ಟಿಕೆಟ್ ಪಡೆದುಕೊಳ್ಳುವ ಅವಕಾಶವನ್ನು ಕಲ್ಪಿಸಿದೆ. ಹೌದು ಪ್ರಯಾಣಿಕರ ಬಹುದಿನಗಳ ಬೇಡಿಕೆಯಂತೆ ಇದೀಗ KSRTC ಸಂಸ್ಥೆಯು ಒಂದು ಹೆಜ್ಜೆ ಮುಂದೆ ಹೋಗಿ, ದುಡ್ಡು ಕೊಟ್ಟು ಚಿಲ್ಲರೆ ವಿಚಾರವಾಗಿ ಕಂಡಕ್ಟರ್ ಜೊತೆಗೆ ಸಣ್ಣಪುಟ್ಟ ಕಿರಿಕ್ ಆಗುತ್ತಿದ್ದವು. ಆದರೆ ಇದೀಗ ಆ ಚಿಂತೆ ಬಿಟ್ಟುಬಿಡಿ. ಡೈನಮಿಕ್ ಕ್ಯೂಆರ್ ಕೋಡ್ ಮೂಲಕ ಹಣ ಪಾವತಿ ಮಾಡಬಹುದಾಗಿದೆ. ರಾಜ್ಯದ 8800 ಬಸ್ಗಳಲ್ಲಿ ಯುಪಿಐ ಮೂಲಕ ಹಣ ಪಾವತಿಸಬಹುದಾಗಿದೆ ಆನ್ಲೈನ್ ಹಣ ಸಂದಾಯ ಮಾಡುವ ಆಪ್ ಗಳಾದ ಗೂಗಲ್ ಪೇ, ಫೋನ್ ಪೇ, ಪೇಟಿಎಂ ಹಾಗೂ ಭೀಮ್ ಆಪ್ ಮೂಲಕ ಹಣ ಪಾವತಿಸಬಹುದಾಗಿದೆ. ಮುಂದಿನ ದಿನಗಳಲ್ಲಿ ಎಟಿಎಂ…
ತಿರುವನಂತಪುರಂ : ವಯನಾಡು ಲೋಕಸಭಾ ಕ್ಷೇತ್ರದ ಉಪಚುನಾವಣೆಯ ಮತ ಎಣಿಕೆ ಆರಂಭವಾಗಿದ್ದು, ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕಾ ಗಾಂಧಿ ಸದ್ಯಕ್ಕೆ ಬಂದಿರುವ ಮಾಹಿತಿ ಪ್ರಕಾರ 2,38,935 ಮತಗಳನ್ನು ಪಡೆದಿದ್ದು, 1 ಲಕ್ಷ 75 ಸಾವಿರಕ್ಕೂ ಅಧಿಕ ಮತಗಳಿಂದ ಮುನ್ನಡೆ ಸಾಧಿಸಿದ್ದಾರೆ. ಬಹುತೇಕ ಸಮೀಕ್ಷೆಗಳೆಲ್ಲ ಪ್ರಿಯಾಂಕಾ ಅವರ ಗೆಲುವಿನ ಭವಿಷ್ಯ ನುಡಿದಿದ್ದು, ಅದರಂತೆ ಅವರು ಆರಂಭಿಕ ಮುನ್ನಡೆ ಸಾಧಿಸಿದ್ದಾರೆ. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ನ ಭದ್ರಕೋಟೆ ಎನಿಸಿಕೊಂಡಿರುವ ಉತ್ತರ ಪ್ರದೇಶದ ರಾಯ್ ಬರೇಲಿ ಮತ್ತು ವಯನಾಡು ಎರಡೂ ಕಡೆ ರಾಹುಲ್ ಗಾಂಧಿ 3 ಲಕ್ಷಕ್ಕೂ ಅಧಿಕ ಮತಗಳಿಂದ ಜಯಭೇರಿ ಭಾರಿಸಿದ್ದರು. ಕೊನೆಗೆ ಅನಿವಾರ್ಯವಾಗಿ ವಯನಾಡು ಕ್ಷೇತ್ರಕ್ಕೆ ರಾಜೀನಾಮೆ ಸಲ್ಲಿಸಿದ್ದರು. ಹೀಗಾಗಿ ಇಲ್ಲಿ ಉಪ ಚುನಾವಣೆ ಘೋಷಿಸಲಾಗಿತ್ತು. ನ. 13ರಂದು ಇಲ್ಲಿ ಮತದಾನ ನಡೆದಿತ್ತು. ಕಾಂಗ್ರೆಸ್ ಭದ್ರಕೋಟೆಯಾಗಿದ್ದರೂ ಇಲ್ಲಿ ಈ ಬಾರಿ ಜಿದ್ದಾಜಿದ್ದಿನ ಹೋರಾಟ ನಡೆದಿದೆ. ಸುಮಾರು 16 ಮಂದಿ ಕಣದಲ್ಲಿದ್ದು, ಈ ಪೈಕಿ ಕಾಂಗ್ರೆಸ್ ನೇತೃತ್ವದ ಯುಡಿಎಫ್, ಸಿಪಿಐ ನೇತೃತ್ವದ ಎಲ್‌ಡಿಎಫ್ ಮತ್ತು…
ಚನ್ನಪಟ್ಟಣ : ರಾಜ್ಯದಲ್ಲಿ ನವೆಂಬರ್ 13ರಂದು ನಡೆದ ಮೂರೂ ಕ್ಷೇತ್ರಗಳ ವಿಧಾನಸಭಾ ಉಪಚುನಾವಣೆಗೆ ಇಂದು ಫಲಿತಾಂಶ ಹೊರಬೀಳಲಿದ್ದು, ಇದೀಗ ಚನ್ನಪಟ್ಟಣ, ಶಿಗ್ಗಾವಿ ಹಾಗೂ ಸಂಡೂರಿನಲ್ಲಿ ಮೂರೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮುನ್ನಡೆ ಸಾಧಿಸಿದ್ದು ಬಿಜೆಪಿ ಹಾಗೂ ಜೆಡಿಎಸ್ ಗೆ ಹಿನ್ನಡೆಯಾಗಿದೆ. ಹೌದು ರಾಜ್ಯದಲ್ಲಿ ನಡೆದ ಮೂರು ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಬೇರೆ ಕ್ಷೇತ್ರಗಳಿಗಿಂತ ಹೆಚ್ಚು ಕುತೂಹಲ ಮೂಡಿಸಿರುವ ಚನ್ನಪಟ್ಟಣ ಕ್ಷೇತ್ರದಲ್ಲಿ ಇದೀಗ ಕಾಂಗ್ರೆಸ್ ಅಭ್ಯರ್ಥಿ ಸಿ ಪಿ ಯೋಗೇಶ್ವರ್ 15 ಸಾವಿರಕ್ಕೂ ಅಧಿಕ ಮತಗಳೊಂದಿಗೆ ಮುನ್ನಡೆ ಸಾಧಿಸಿದ್ದಾರೆ ಈ ನೆಲೆಯಲ್ಲಿ ಮತ ಕೇಂದ್ರದ ಬಳಿ ಕಾಂಗ್ರೆಸ್ ಕಾರ್ಯಕರ್ತರು ಸಂಭ್ರಮಾಚರಣೆ ಆರಂಭಿಸಿದ್ದಾರೆ. ಸಿಪಿ ಯೋಗೇಶ್ವರ್ 15,000 ಮತಗಳ ಮುನ್ನಡೆ ಸಾಧಿಸಿದ್ದು, ಇನ್ನು ಸಂಡೂರಿನಲ್ಲಿ ಅನುಪೂರ್ಣ ತುಕಾರಾಮ ಅವರು ಕೇವಲ 108 ಮತಗಳ ಅಂತರದಿಂದ ಮುನ್ನಡೆ ಸಾಧಿಸಿದ್ದಾರೆ.ಅದೇ ರೀತಿಯಾಗಿ ಶಿಗ್ಗಾವಿಯಲ್ಲಿ ಯಾಸೀರ್ ಪಠಾಣ್ ಖಾನ್ ಅವರು ರತ್ನಮಾ ವಿರುದ್ಧ 1158 ದ ಮತಗಳ ಅಂತರದಿಂದ ಮುನ್ನಡೆ ಸಾಧಿಸಿದ್ದಾರೆ. ಆರಂಭಿಕ ಸತ್ತುಗಳ ಮತ ಎಣಿಕೆಯಲ್ಲಿ ಬಿಜೆಪಿ ಅಭ್ಯರ್ಥಿಗಳು…
ಮಹಾರಾಷ್ಟ್ರ : ಇಂದು ಮಹಾರಾಷ್ಟ್ರದ ವಿಧಾನಸಭಾ ಚುನಾವಣೆಯ ಫಲಿತಾಂಶ ಹೊರಬೀಳಲಿದ್ದು, ಈಗಾಗಲೇ ಮಹಾಯುತಿಯು 160 ಸ್ಥಾನಗಳ ಮುನ್ನಡೆ ಸಾಧಿಸುವುದರೊಂದಿಗೆ ಮ್ಯಾಜಿಕ್ ನಂಬರ್ ಅನ್ನು ದಾಟಿದೆ. ಇನ್ನು ಮಹಾವಿಕಾಸ್ ಅಘಾಡಿಯು 105 ಸ್ಥಾನದಲ್ಲಿ ಮುನ್ನಡೆ ಸಾಧಿಸಿದೆ. ಅಲ್ಲದೇ ಪಕ್ಷೇತರ ಅಭ್ಯರ್ಥಿಗಳು 10 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ. ಹೀಗಾಗಿ ಮಹಾರಾಷ್ಟ್ರದಲ್ಲಿ ಬಹುತೇಕ ಬಿಜೆಪಿ ಸರ್ಕಾರ ರಚನೆ ಮಾಡಲಿದೆ ಎನ್ನಲಾಗಿದೆ. ಮ್ಯಾಜಿಕ್ ನಂಬರ್ ದಾಟಿದ ಮಹಾಯುತಿಯು ಸರ್ಕಾರ ರಚನೆ ಮಾಡುವುದಕ್ಕೆ ಸಿದ್ಧತೆ ಮಾಡಿಕೊಂಡಿದ್ದು ಈ ಹಿನ್ನೆಲೆಯಲ್ಲಿ 2022ರಲ್ಲಿ ಮಹಾರಾಷ್ಟ್ರದ ರಾಜಕೀಯದಲ್ಲಿ ಏಕನಾಥ್ ಶಿಂಧೆ ದೊಡ್ಡ ಬದಲಾವಣೆಯನ್ನು ತಂದವರು. ತಮ್ಮ ನಾಯಕರಾದ ಉದ್ಧವ್ ಠಾಕ್ರೆ ವಿರುದ್ಧವೇ ತಿರುಗಿಬಿದ್ದ ಶಿಂಧೆ ಶಕ್ತಿಶಾಲಿ ಬಣವನ್ನು ತಯಾರಿಸಿ ಶಿವಸೇನೆಗೆ ದೊಡ್ಡ ಅಘಾತವನ್ನು ಕೊಟ್ಟಿದ್ದರು. ಈ ಮೂಲಕ ಮಹಾರಾಷ್ಟ್ರದಲ್ಲಿ ರಾಜಕೀಯ ಸಮೀಕರಣಗಳನ್ನೇ ಬುಡಮೇಲು ಮಾಡಿ, ತಮ್ಮ ಪ್ರಭಾವವನ್ನು ಬೆಳೆಸಿಕೊಂಡಿದ್ದರು. ಹಾಗಾಗಿ ಬಿಜೆಪಿಯು ತನ್ನದೇ ಆದ ನಾಯಕನನ್ನು ಮುಖ್ಯಮಂತ್ರಿಯಾಗಿ ನೇಮಿಸುವ ಸಾಧ್ಯತೆಯಿದೆ. ಅಂದರೆ ಅವರು ಶಿಂಧೆ ಬಣವನ್ನು ಬಳಸಿಕೊಂಡು ಸ್ವತಂತ್ರವಾಗಿ ಸರ್ಕಾರ ಸ್ಥಾಪನೆಗೆ ಪ್ರಯತ್ನಿಸಬಹುದು.…
ಬೆಂಗಳೂರು : ಮಹಾರಾಷ್ಟ್ರದ ವಿಧಾನಸಭಾ ಚುನಾವಣೆಗೆ ಮತ ಎಣಿಕೆ ಆರಂಭವಾಗಿದ್ದು, ಈಗಾಗಲೇ ಮಹಾಯುತಿಯು ಮ್ಯಾಜಿಕ್ ನಂಬರ್ ದಾಟಿದ್ದು ಇನ್ನು ಮಹಾವಿಕಾಸ್ ಅಘಾಡಿಯು 112 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ಸಿನ ಹೈಕಮಾಂಡ್ ರಾಜ್ಯ ಕಾಂಗ್ರೆಸ್ ನಾಯಕರಿಗೆ ಒಂದು ಟಾಸ್ಕ್ ನೀಡಿದ್ದು ಆಪರೇಷನ್ ತಡೆಯುವ ನಿಟ್ಟಿನಲ್ಲಿ ಮುಂಬೈಗೆ ತೆರಳಿ ಎಂದು ಸೂಚನೆ ನೀಡಿದೆ. ಎಂವಿಎ ಶಾಸಕರನ್ನು ರಾಜ್ಯಕ್ಕೆ ಕರೆ ತರುವ ಸಾಧ್ಯತೆ ಇದ್ದು, ಕರ್ನಾಟಕ ಹಾಗೂ ತೆಲಂಗಾಣದಲ್ಲಿ ಪ್ರತ್ಯೇಕವಾಗಿ ತಂಗಲು ವ್ಯವಸ್ಥೆ ಮಾಡಲಾಗಿದೆ. ಸಂಜೆ ನಾಲ್ಕು ಗಂಟೆಯೊಳಗೆ ಮುಂಬೈಯಲ್ಲಿ ಇರುವಂತೆ ಕಾಂಗ್ರೆಸ್ ಹೈಕಮಾಂಡ್ ರಾಜ್ಯ ಕಾಂಗ್ರೆಸ್ ನಾಯಕರಿಗೆ ಸೂಚನೆ ನೀಡಿದೆ. ಫಲಿತಾಂಶದ ಬಳಿಕ ಆಪರೇಷನ್ ತಡೆಯುವ ನಿಟ್ಟಿನಲ್ಲಿ ಕಾಂಗ್ರೆಸ್ ಎಚ್ಚರಿಕೆ ಹೆಜ್ಜೆ ಇಟ್ಟಿದೆ. ರಾಜ್ಯ ಕಾಂಗ್ರೆಸ್ ನಾಯಕರಿಗೆ ಹೈಕಮಾಂಡ್ ಇದೊಂದು ಪ್ರಮುಖ ಟಾಸ್ಕ್ ನೀಡಿದೆ. ರಾಜ್ಯ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹಾಗೂ ಬೃಹತ್ ಕೈಗಾರಿಕಾ ಸಚಿವ ಎಂ ಬಿ ಪಾಟೀಲ್ ಗೆ ಕಾಂಗ್ರೆಸ್ ಹೈಕಮಾಂಡ್ ಈ ಒಂದು ಜವಾಬ್ದಾರಿ ವಹಿಸಿದ್ದು,…
ಬೆಂಗಳೂರು: ಲೋಕಸಭೆ ಚುನಾವಣೆ ವೇಳೆ ವಿದ್ಯಾರ್ಥಿಗಳಿಗೆ ಆಮಿಷವೊಡ್ಡುವ ಮೂಲಕ ನೀತಿ ಸಂಹಿತೆ ಉಲ್ಲಂಘಿಸಿದ ಆರೋಪದ ಮೇಲೆ ಸಂಸದ ಕೋಟ ಶ್ರೀನಿವಾಸ ಪೂಜಾರಿ ವಿರುದ್ಧ ದಾಖಲಾಗಿದ್ದ ದೂರನ್ನು ಹೈಕೋರ್ಟ್ ರದ್ದುಪಡಿಸಿದೆ. ಹೌದು ಕಳೆದ ಲೋಕಸಭೆ ಚುನಾವಣೆ ವೇಳೆ ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಕಟಪಾಡಿ ಗ್ರಾಮದ ಖಾಸಗಿ ಕಾಲೇಜು ಆವರಣದಲ್ಲಿ ರಾಜಕೀಯ ಭಾಷಣ ಮಾಡಿ ವಿದ್ಯಾರ್ಥಿಗಳಿಗೆ ಆಮಿಷವೊಡ್ಡುವ ಮೂಲಕ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ ಆರೋಪದ ಮೇಲೆ ಉಡುಪಿ-ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ವಿರುದ್ಧ ದಾಖಲಾಗಿದ್ದ ದೂರನ್ನು ಹೈಕೋರ್ಟ್ ರದ್ದುಪಡಿಸಿದೆ. ತಮ್ಮ ವಿರುದ್ಧ ಚುನಾವಣಾ ಸಂಚಾರ ಜಾಗೃತ ದಳದ ಅಧಿಕಾರಿಯು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ದಾಖಲಿಸಿದ ದೂರನ್ನು ರದ್ದುಪಡಿಸುವಂತೆ ಕೋರಿ ಸಂಸದ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿ ದಾರರ ಪರ ಹಾಜರಾಗಿದ್ದ ಹಿರಿಯ ವಕೀಲ ಎಂ.ಅರುಣ್ ಶ್ಯಾಮ್, ಪ್ರಕರಣಕ್ಕೆ ಸಂಬಂಧಿಸಿದಂತೆ ಚುನಾವಣಾ ಸಂಚಾರ ಜಾಗೃತದಳದ ಅಧಿಕಾರಿಯು ಅರ್ಜಿ ದಾರರ ವಿರುದ್ಧ ಐಪಿಸಿ ಸೆಕ್ಷನ್ 188ರ ಅಡಿಯಲ್ಲಿ ದೂರು ದಾಖಲಿಸಿದ್ದಾರೆ. ಈ ಅಧಿಕಾರ…
ಚನ್ನಪಟ್ಟಣ : ರಾಜ್ಯದಲ್ಲಿ ನಡೆದ ಮೂರು ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಬೇರೆ ಕ್ಷೇತ್ರಗಳಿಗಿಂತ ಹೆಚ್ಚು ಕುತೂಹಲ ಮೂಡಿಸಿರುವ ಚನ್ನಪಟ್ಟಣ ಕ್ಷೇತ್ರದ ಮತ ಎಣಿಕೆ ಪ್ರಕ್ರಿಯೆ ಆರಂಭವಾಗಿದ್ದು, ಕಾಂಗ್ರೆಸ್ ಅಭ್ಯರ್ಥಿ ಸಿ ಪಿ ಯೋಗೇಶ್ವರ್ ಮತ್ತು ಜೆಡಿಎಸ್ ಪಕ್ಷದ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಸಮಬಲದ ಹೋರಾಟ ನಡೆಸುತ್ತಿದ್ದಾರೆ. ಈಗಾಗಲೇ ಮತ ಎಣಿಕೆ ಆರಂಭವಾಗಿದ್ದು ಮೊದಲ ಸುತ್ತಿನಲ್ಲಿ ಎನ್.ಡಿ.ಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಅವರು ಭಾರಿ ಮುನ್ನಡೆ ಸಾಧಿಸಿದ್ದರು. ಇದೀಗ ಎರಡನೇ ಸುತ್ತಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಿಪಿ ಯೋಗೇಶ್ವರ್ 31 ಮತಗಳ ಮುನ್ನಡೆ ಸಾಧಿಸಿದ್ದಾರೆ. ಹೀಗಾಗಿ ಈ ಒಂದು ಹಾವು ಏಣಿಯ ಆಟದಲ್ಲಿ ಕೊನೆಗೆ ವಿಜಯಲಕ್ಷ್ಮಿ ಯಾರಿಗೆ ಒಲಿಯುತ್ತಾಳೆ ಎನ್ನುವುದು ಕೊನೆಯ ಹಂತದಲ್ಲಿ ತಿಳಿದು ಬರುತ್ತದೆ. ಇನ್ನು ಅದೇ ರೀತಿಯಾಗಿ ಸಂಡೂರು ವಿಧಾನಸಭಾ ಉಪಚುನಾವಣೆಯ ಮೊದಲ ಸುತ್ತಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ತುಕಾರಾಂ ಅವರು ಆರಂಭಿಕ ಮುನ್ನಡೆ ಸಾಧಿಸಿದ್ದಾರೆ. ಶಿಗ್ಗಾವಿ ಕ್ಷೇತ್ರದಲ್ಲಿ ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಪುತ್ರ ಭರತ್ ಬೊಮ್ಮಾಯಿ ಅವರು ಕಾಂಗ್ರೆಸ್…
ರಾಮನಗರ : ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಇಂದು ಮತ ಎಣಿಕೆ ಆರಂಭವಾಗಿದ್ದು, ಮೂರೂ ಕ್ಷೇತ್ರಗಳ ಪೈಕಿ ಅತ್ಯಂತ ಪ್ರಮುಖ ಹಾಗೂ ಕುತೂಹಲ ಮೂಡಿಸುವಂತಹ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ NDA ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಅವರು ಕಾಂಗ್ರೆಸ್ ಅಭ್ಯರ್ಥಿ ಸಿಪಿ ಯೋಗೇಶ್ವರ್ ವಿರುದ್ಧ ಮೊದಲ ಸುತ್ತಿನಲ್ಲಿ ಆರಂಭಿಕ ಮುನ್ನಡೆ ಸಾಧಿಸಿದ್ದಾರೆ. ಇನ್ನು ಅದೇ ರೀತಿಯಾಗಿ ಸಂಡೂರು ವಿಧಾನಸಭಾ ಉಪಚುನಾವಣೆಯ ಮೊದಲ ಸುತ್ತಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ತುಕಾರಾಂ ಅವರು ಆರಂಭಿಕ ಮುನ್ನಡೆ ಸಾಧಿಸಿದ್ದಾರೆ. ಏನೋ ಶಿಗ್ಗಾವಿ ಕ್ಷೇತ್ರದಲ್ಲಿ ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಪುತ್ರ ಭಾರತ್ ಬೊಮ್ಮಾಯಿ ಅವರು ಕಾಂಗ್ರೆಸ್ ಅಭ್ಯರ್ಥಿ ಯಾಸಿರ್ ಪಠಣ ಅವರ ವಿರುದ್ಧ ಆರಂಭಿಕ ಮುನ್ನಡೆಯನ್ನು ಸಾಧಿಸಿದ್ದಾರೆ ಎಂದು ತಿಳಿದುಬಂದಿದೆ. ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ನಿಖಿಲ್ ಕುಮಾರಸ್ವಾಮಿ ಅವರು, ನಾನು ಪ್ರಾರಂಭದಲ್ಲಿ ಚುನಾವಣೆ ಕಣದ ಬಳಿಕ ಒಂದು ಮಾತನ್ನು ಹೇಳಿದ್ದೆ ನನಗೆ ಆತ್ಮವಿಶ್ವಾಸವಿದೆ. ಚನ್ನಪಟ್ಟಣದಲ್ಲಿ ಜನರು ಆಶೀರ್ವಾದ ಮಾಡುತ್ತಾರೆ ಎಂದು ನಂಬಿಕೆ ಇದೆ. ಹಳ್ಳಿಗಳ…
ಬೆಂಗಳೂರು : ನವೆಂಬರ್ 27ರಿಂದ 3 ದಿನಗಳ ಕಾಲ ರಾಜ್ಯದ 10 ಜಿಲ್ಲೆಗಳಲ್ಲಿ ಚಂಡಮಾರುತದ ಹಿನ್ನೆಲೆಯಲ್ಲಿ ಭಾರಿ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ.ಕರ್ನಾಟಕದ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ಹಿಂದೂ ಮಹಾಸಾಗರದಲ್ಲಿ ಚಂಡಮಾರುತ ಪರಿಚಲನೆ ಉಂಟಾಗಿದೆ. ಇಂದು ಬಂಗಾಳಕೊಲ್ಲಿಯಲ್ಲಿ ಕಡಿಮೆ ಒತ್ತಡ ಪ್ರದೇಶವು ರೂಪುಗೊಳ್ಳುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.













