Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ಮಾಜಿ ಮುಖ್ಯಮಂತ್ರಿ ಎಸ್ಎಂ ಕೃಷ್ಣ ಅವರು ನಿನ್ನೆ ಹೃದಯಾಘಾತದಿಂದ ಸಾವನಪ್ಪಿದ್ದಾರೆ. ಇಂದು ಅವರ ಸ್ವಗ್ರಾಮವಾದ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಸೋಮನಹಳ್ಳಿಯಲ್ಲಿ ಅಂತ್ಯಕ್ರಿಯೆ ನೆರವೇರಲಿದೆ. ಈ ಒಂದು ಅಂತ್ಯಕ್ರಿಯೆಯಲ್ಲಿ ಸಿಎಂ ಸಿದ್ದರಾಮಯ್ಯ ಡಿಸಿಎಂ ಡಿಕೆ ಶಿವಕುಮಾರ್ ಸೇರಿದಂತೆ ಅನೇಕ ಗಣ್ಯ ವ್ಯಕ್ತಿಗಳು ಭಾಗಿಯಾಗಲಿದ್ದಾರೆ. ಎಸ್ ಎಂ ಕೃಷ್ಣ ಅವರ ಕುರಿತು ಸಿಎಂ ಸಿದ್ದರಾಮಯ್ಯ ತಮ್ಮ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ನುಡಿ ನಮನ ಸಲ್ಲಿಸಿದ್ದು, ಬಹುಶಃ ನಾನು ಮರಳಿನ ಮೇಲೆ ಅಕ್ಷರಾಭ್ಯಾಸ ಮಾಡುತ್ತ, ವೀರ ಮಕ್ಕಳ ಕುಣಿತ ಕಲಿಯುವ ಹೊತ್ತಲ್ಲಿ ಎಸ್.ಎಂ. ಕೃಷ್ಣರವರು ವಿದೇಶದಲ್ಲಿ ವ್ಯಾಸಂಗ ಮಾಡುತ್ತಿದ್ದರು. ಕೃಷ್ಣರವರ ವೈಶಿಷ್ಟ್ಯವೆಂದರೆ ವಿದೇಶದಲ್ಲಿ ಶಿಕ್ಷಣ ಪಡೆದರೂ ಊರಿಗೆ ಮರಳಿ ಮಣ್ಣಿನ ಮಗನಾದರು. ದ್ವೇಷದ ರಾಜಕಾರಣದಿಂದ ಬಹುದೂರವೇ ಇದ್ದ ಎಸ್.ಎಂ. ಕೃಷ್ಣ ಅವರೊಬ್ಬ ಸಜ್ಜನಿಕೆಯ ಜಂಟಲ್‌ಮೆನ್ ರಾಜಕಾರಣಿ. ಈ ಕಾರಣಕ್ಕಾಗಿಯೇ ಅಜಾತಶತ್ರುವಾಗಿ ನಮ್ಮ ನೆನಪುಗಳಲ್ಲಿ ಶಾಶ್ವತವಾಗಿರಲಿದ್ದಾರೆ. ಜಾಗತಿಕ ಭೂಪಟದಲ್ಲಿ ಬೆಂಗಳೂರನ್ನು ಸಿಲಿಕಾನ್ ವ್ಯಾಲಿಯಾಗಿಸುವ ನಿಟ್ಟಿನಲ್ಲಿ ಎಸ್.ಎಂ. ಕೃಷ್ಣರವರ ಕೊಡುಗೆ ಅಪಾರ. ವಿಧಾನಸಭೆ,…
ರಾಯಚೂರು : ಈಗಾಗಲೇ ಬಳ್ಳಾರಿಯಲ್ಲಿ ಹಾಗೂ ಬೆಳಗಾವಿಯಲ್ಲಿ ಬಾಣಂತಿಯರ ಹಾಗೂ ಶಿಶುಗಳ ಸಾವು ಪ್ರಕರಣ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶಕ್ಕೆ ಕಾರಣವಾಗಿದೆ. ಇದರ ಬೆನ್ನಲ್ಲೇ ಇದೀಗ ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ಕಳೆದ ಅಕ್ಟೋಬರ್ ಒಂದೇ ತಿಂಗಳಲ್ಲಿ ನಾಲ್ವರು ಬಾಣಂತಿಯರು ಸಾವನ್ನಪ್ಪಿರುವುದು ತಡವಾಗಿ ಬೆಳಕಿಗೆ ಬಂದಿದೆ. ಹೌದು ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ಕಳೆದ ಅಕ್ಟೋಬರ್ ತಿಂಗಳಿನಲ್ಲಿ ನಾಲ್ವರು ಬಾಣಂತಿಯರು ಹೆರಿಗೆ ದಾಖಲಾಗಿದ್ದರು ಈ ವೇಳೆ ಹೆರಿಗೆ ಬಳಿಕ ನಾಲ್ವರು ಬಾಣಂತಿಯರು ಸಾವನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಮೃತ ಬಾಣಂತಿಯರನ್ನು ಚಂದ್ರಕಲಾ(26), ರೇಣುಕಮ್ಮ(32), ಮೌಸಮಿ ಮಂಡಲ್(22), ಹಾಗೂ ಚೆನ್ನಮ್ಮ ಎಂದು ಗುರುತಿಸಲಾಗಿದೆ. ಕಳೆದ ಅಕ್ಟೋಬರ್ ತಿಂಗಳಲ್ಲಿ ಒಟ್ಟು 300 ಬಾಣಂತಿಯರ ಹೆರಿಗೆಯಾಗಿತ್ತು. ಅವರಲ್ಲಿ 7 ಬಾಣಂತಿಯರ ಆರೋಗ್ಯ ಸ್ಥಿತಿ ಗಂಭೀರವಾಗಿತ್ತು. ಈ ವೇಳೆ . ಅ.21 ರಂದು ಚನ್ನಮ್ಮ ಅವರಿಗೆ ಸಿಜೇರಿಯನ್ ಮೂಲಕ ಹೆರಿಗೆಯಾಗಿತ್ತು. ಅದಾದ 9 ದಿನಗಳ ಬಳಿಕ ಸಾವನ್ನಪ್ಪಿದ್ದರು. ಅ.22 ರಂದು ಆರ್‌ಎಚ್ ಕ್ಯಾಂಪ್-3ರಲ್ಲಿ…
ಚಿತ್ರದುರ್ಗ : ಬಳ್ಳಾರಿಯ ಬಿಮ್ಸ್ ಹಾಗೂ ಬೆಳಗಾವಿಯಲ್ಲಿ ಬಾಣಂತಿಯ ಸಾವು ಪ್ರಕರಣ ಈಗಾಗಲೇ ರಾಜ್ಯದಲ್ಲಿ ಭಾರಿ ಸಂಚಲನ ಸೃಷ್ಟಿಸಿದ್ದು ಇದೀಗ ಚಿತ್ರದುರ್ಗದ ಜಿಲ್ಲಾಸ್ಪತ್ರೆಯಲ್ಲಿ ಬಾಣಂತಿಯೊಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ. ಇದಕ್ಕೆ ವೈದ್ಯರ ನಿರ್ಲಕ್ಷವೇ ಕಾರಣ ಎಂದು ಆರೋಪ ಕೇಳಿ ಬರುತ್ತಿದೆ. ಹೌದು ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಜಾಗನೂರು ಹಟ್ಟಿಯ ಗ್ರಾಮದ ರೋಜಾ (25) ಮೃತ ಬಾಣಂತಿ ಎಂದು ತಿಳಿದು ಬಂದಿದೆ. ಚಿತ್ರದುರ್ಗದ ಜಿಲ್ಲಾ ಆಸ್ಪತ್ರೆಯ ವೈದ್ಯೆ ಡಾ.ರೂಪಶ್ರೀ ಎನ್ನುವವರು ರೋಜಾಗೆ ಸಿಸೇರಿಯನ್ ಮೂಲಕ ಹೆರಿಗೆ ಮಾಡಿದ್ದರು. ಹರಿಗೆ ಬಳಿಕ ರೋಜಾ ಮನೆಗೆ ತೆರಳಿದ್ದರು. ಇವಳೆ ಹೊಲಿಗೆ ಹಾಕಿದ ಭಾಗದಲ್ಲಿ ರೋಜಾ ಗೆ ತೀವ್ರ ನೋವು ಕಾಣಿಸಿಕೊಂಡಿದೆ. ಹೊಟ್ಟೆ ಭಾಗದಲ್ಲಿ ತೀವ್ರ ನೋವು ಹಾಗೂ ಸೋಂಕಿನಿಂದ ರೋಜಾ ಬಳಲುತ್ತಿದ್ದರು. ಅಲ್ಲದೇ ವಾಂತಿ ಭೇದಿಯಿಂದ ಕೂಡ ನೋವು ಅನುಭವಿಸುತ್ತಿದ್ದರು.ಹಾಗಾಗಿ ನಿನ್ನೆ ಜಿಲ್ಲಾ ಆಸ್ಪತ್ರೆಗೆ ಮತ್ತೆ ಬಂದು ದಾಖಲಾಗಿದ್ದರು ಎಂದು ತಿಳಿದುಬಂದಿದೆ. ಈ ಸಂದರ್ಭದಲ್ಲಿ ಜಿಲ್ಲಾ ಆಸ್ಪತ್ರೆಯಲ್ಲಿ ದಾಖಲಾಗಿದ್ದ ರೋಜಾ ಗೆ ವೈದ್ಯರು ಹಾಗೂ…
ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಲೋಕಾಯುಕ್ತ ತನಿಖೆಯ ಮೇಲೆ ನನಗೆ ನಂಬಿಕೆ ಇಲ್ಲ ಎಂದು ದೂರುದಾರ ಸ್ನೇಹಮಯಿ ಕೃಷ್ಣ ಅವರು ಸಿಬಿಐ ತನಿಖೆ ನಡೆಸುವಂತೆ ಹೈಕೋರ್ಟಿಗೆ ಅರ್ಜಿ ಸಲ್ಲಿಸಿದ್ದರು. ಇದೀಗ ಹೈಕೋರ್ಟ್ ಡಿಸೆಂಬರ್ 19 ರಂದು ವಿಚಾರಣೆಗೆ ದಿನಾಂಕ ನಿಗದಿ ಮಾಡಿದೆ. ವಿಚಾರಣೆ ವೇಳೆ ಸರ್ಕಾರದ ಪರ ವಾದಿಸಿದ ಅಡ್ವೋಕೇಟ್ ಜನರಲ್ ಶಶಿಕಿರಣ್ ಶೆಟ್ಟಿ, ಪ್ರಕರಣ ಸಂಬಂಧ ಈವರೆಗೂ ಕೆಲ ಪ್ರತಿವಾದಿಗಳಿಗೆ ನೋಟಿಸ್ ಜಾರಿಯಾಗಿಲ್ಲ. ಹೀಗಾಗಿ ಕಾಲಾವಕಾಶ ನೀಡಬೇಕು ಎಂದು ಕೋರಿದರು.ಅಲ್ಲದೆ, ದೂರುದಾರ ಸ್ನೇಹಮಯಿ ಕೃಷ್ಣ ವಿನಾಕಾರಣ ಅಡ್ವೋಕೇಟ್ ಜನರಲ್ ವಿರುದ್ದ ವೈಯಕ್ತಿಕ ಆರೋಪ ಮಾಡುತ್ತಿದ್ದಾರೆ. ಇದನ್ನು ಕೋರ್ಟ್ ಗಂಭೀರವಾಗಿ ಪರಿಗಣಿಸಬೇಕು ಎಂದು ಪೀಠಕ್ಕೆ ಮನವಿ ಮಾಡಿದರು. ಸ್ನೇಹಮಯಿ ಕೃಷ್ಣ ಪರ ವಕೀಲ ವಾದ ಮಂಡಿಸಿ, ಮುಡಾ ಹಗರಣದ ಆರೋಪಿ ಸಿಎಂ ಆಗಿದ್ದಾರೆ. ಅವರೇ ರಾಜ್ಯದ ಮುಖ್ಯಸ್ಥರಾಗಿದ್ದು, ರಾಜ್ಯ ಸರ್ಕಾರದ ಹಿಡಿತದಲ್ಲಿಲ್ಲದ ಸಿಬಿಐ ಅಥವಾ ಬೇರೆ ಸ್ವತಂತ್ರ ಸಂಸ್ಥೆಗೆ ತನಿಖೆ ವಹಿಸಲು ಕೋರಿದರು. ಅಲ್ಲದೆ, ಪ್ರಕರಣದ ಎಲ್ಲ ಮಾಹಿತಿ ನ್ಯಾಯಪೀಠಕ್ಕೆ…
ಮಂಡ್ಯ : ಮಾಜಿ ಸಿಎಂ ಹಾಗೂ ಮಾಜಿ ವಿದೇಶಾಂಗ ಸಚಿವ SM ಕೃಷ್ಣ ಅವರು ಇಂದು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಈಗಾಗಲೇ ಸಿಎಂ ಸಿದ್ದರಾಮಯ್ಯ ಡಿಸಿಎಂ ಡಿಕೆ ಶಿವಕುಮಾರ್ ಸೇರಿದಂತೆ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ.ಇದೀಗ ಕೋಡಿಶ್ರೀಗಳು ಸಹ SM ಕೃಷ್ಣ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. ಮಂಡ್ಯ ಜಿಲ್ಲೆಯ ಕೆ.ಆರ್ ಪೇಟೆಯಲ್ಲಿ ಮಾತನಾಡಿದ ಅವರು, ಸರ್ಕಾರ ಆರ್ಥಿಕ ಅವಲಂಬನೆ ಹೆಚ್ಚಾಗಿರೋಕೆ ಎಸ್.ಎಂ.ಕೃಷ್ಣ ದೂರ ದೃಷ್ಟಿಯೇ ಕಾರಣ. ವರನಟ ಡಾ. ರಾಜಕುಮಾರ್ ಅಪಹರಣ ಆದಾಗ ಎಸ್.ಎಂ.ಕೃಷ್ಣ ನನ್ನನ್ನ ಮನೆಗೆ ಕರೆಸಿದ್ದರು. ಆ ವೇಳೆ ಎಸ್.ಎಂ.ಕೃಷ್ಣ ದಂಪತಿ ಚಿಂತಾಕ್ರಾಂತರಾಗಿದ್ದರು. 107 ದಿನಗಳ ಬಳಿಕ ರಾಜ್ ಕುಮಾರ್ ಬಿಡುಗಡೆ ಆಗ್ತಾರೆ ಎಂದು ಭವಿಷ್ಯ ನುಡಿದಿದ್ದೆ. ಆದ್ದರಿಂದ ಕೃಷ್ಣರೊಂದಿಗೆ ನಿಕಟ ಹಾಗೂ ಪ್ರೀತಿ ಸಂಪರ್ಕವಿತ್ತು ಎಂದು ಶ್ರೀಗಳು ಅವರ ಜತೆಗಿನ ನೆನಪನ್ನು ಮೆಲುಕು ಹಾಕಿದ್ದಾರೆ. ನಾನು ಬೆಂಗಳೂರಿನಲ್ಲಿ ಓದುವಾಗ ಕಾನೂನು ಕಾಲೇಜಿನಲ್ಲಿ ಎಸ್.ಎಂ.ಕೃಷ್ಣ ಅವರು ಪ್ರಾಧ್ಯಪಕಾರಾಗಿ ಕೆಲಸ ಮಾಡ್ತಿದ್ದರು. ಅದಾದ ಬಳಿಕ ಮೂರು ಬಾರಿ ಮಠಕ್ಕೆ ಭೇಟಿ ನೀಡಿದ್ರು.…
ಬೆಂಗಳೂರು : ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ವಿರುದ್ಧ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಂತರ ತಡೆಯಾಜ್ಞೆ ತೆರವು ಕೋರಿ ಸರ್ಕಾರ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಇಂದು ಹೈಕೋರ್ಟ್ ಏಕ ಸದಸ್ಯ ಪೀಠದಲ್ಲಿ ನಡೆಯಿತು. ಈ ವೇಳೆ ವಾದ ಪ್ರತಿವಾದಗಳನ್ನು ಆಲಿಸಿದ ಹೈಕೋರ್ಟಿನ ನ್ಯಾಯಮೂರ್ತಿಗಳು, ವಿಚಾರಣೆಯನ್ನು ಡಿಸೆಂಬರ್ 12ರಂದು ಮಧ್ಯಾಹ್ನ 3:30ಕ್ಕೆ ಮಂದೂಡಿ ಆದೇಶ ಹೊರಡಿಸಿದ್ದರು. ಇಂದು ವಿಚಾರಣೆ ಆರಂಭವಾದ ವೇಳೆ, ಬಿ ಎಸ್ ಯಡಿಯೂರಪ್ಪ ಪರ ಹಿರಿಯ ವಕೀಲ ಸಿವಿ ನಾಗೇಶ್ ಅವರು, ಆರೋಪಿತ ಘಟನೆ ನಡೆದಿರುವುದು ಫೆಬ್ರವರಿ 2 ಬೆಳಗ್ಗೆ 11 ರಿಂದ 11:30 ವರೆಗೆ ಬಿಎಸ್ ಯಡಿಯೂರಪ್ಪ ಅವರ ಮನೆಯಲ್ಲಿ ಈ ಒಂದು ಘಟನೆ ನಡೆದಿರುವುದು ಆರೋಪವಿದೆ. 20 ಮತ್ತು 25 ಜನರ ಸಮ್ಮುಖದಲ್ಲಿ ಹೇಗೆ ನಡೆಯುವುದು ಸಾಧ್ಯವೇ? ಒಂದುವರೆ ತಿಂಗಳ ಬಳಿಕ ದೂರು ದಾಖಲಿಸಲಾಗಿದೆ. ಈ ಮಧ್ಯೆ ಹಲವು ಬಾರಿ ದೂರುದಾರರು ಬಿಎಸ್ ಯಡಿಯೂರಪ್ಪ ಅವರ ಮನೆಗೆ ಬಂದಿದ್ದಾರೆ. ದೂರುದಾರ ಮಹಿಳೆ ನಟೋರಿಯಸ್ ಆಗಿದ್ದು, ಮಹಿಳೆ…
ಬೆಳಗಾವಿ : ಮಾಜಿ ಮುಖ್ಯಮಂತ್ರಿ ಹಾಗೂ ಮಾಜಿ ವಿದೇಶಾಂಗ ಸಚಿವ ಎಸ್ ಎಂ ಕೃಷ್ಣ ಅವರು ತಡರಾತ್ರಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ನಾಳೆ ಅವರ ಹುಟ್ಟೂರಾದ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಸೋಮನಹಳ್ಳಿಯಲ್ಲಿ ಸಕಲ ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ ನೆರವೇರಲಿದೆ. ಒಂದು ಅಂತ್ಯಕ್ರಿಯೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಡಿಎನ್ ಡಿಕೆ ಶಿವಕುಮಾರ್ ಸೇರಿದಂತೆ ಎಲ್ಲಾ ನಾಯಕರು ಭಾಗಿಯಾಗಲಿದ್ದಾರೆ. ಈ ಕುರಿತು ಬೆಳಗಾವಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಮಾಜಿ ಸಿಎಂ ಎಸ್ಎಂ ಕೃಷ್ಣ ಅವರ ನಿಧಾನದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮೂರು ದಿನ ಶೋಕಾಚರಣೆ ಘೋಷಣೆ ಮಾಡಲಾಗಿದೆ. ಅಲ್ಲದೇ ನಾಳೆ ರಾಜ್ಯಾದ್ಯಂತ ಸರ್ಕಾರಿ ರಜೆಯನ್ನು ಘೋಷಿಸಲಾಗಿದೆ. ಎಸ್ಎಮ್ ಕೃಷ್ಣ ಕಠಿಣ ಸವಾಲುಗಳನ್ನು ಸಹ ಜಾಣ್ಮೆಯಿಂದ ಬಗೆಹರಿಸಿದರು. ಕುಟುಂಬ ಅಭಿಮಾನಿಗಳಿಗೆ ದುಃಖ ಭರಿಸುವ ಶಕ್ತಿ ನೀಡಲಿ. ನಾನು ಎರಡು ತಿಂಗಳ ಹಿಂದೆ ಎಸ್ಎಂ ಕೃಷ್ಣ ಅವರನ್ನು ಭೇಟಿಯಾಗಿದ್ದೆ. ನಾಳೆ ಎಸ್ಎಂ ಕೃಷ್ಣ ಅಂತ್ಯಕ್ರಿಯೆಯಲ್ಲಿ ಭಾಗಿಯಾಗುತ್ತೇನೆ. ಎಸ್ಎಂ ಕೃಷ್ಣ ಪುತ್ಥಳಿ ನಿರ್ಮಾಣದ ಬಗ್ಗೆ ಚರ್ಚೆ ಮಾಡಿ ತೀರ್ಮಾನಿಸಲಾಗುತ್ತದೆ. ಎಂದು…
ಬೆಳಗಾವಿ : ಪಂಚಮಸಾಲಿ ಸಮುದಾಯಕ್ಕೆ 2A ಮೀಸಲಾತಿ ಸಂಬಂಧ ಬೆಳಗಾವಿಯ ಸುವರ್ಣಸೌಧದ ಎದುರುಗಡೆ ಪಂಚಮಸಾಲಿ ಹೋರಾಟಗಾರರು ಪ್ರತಿಭಟನೆ ನಡೆಸುತ್ತಿದ್ದು, ಇದೀಗ ಈ ಒಂದು ಪ್ರತಿಭಟನೆ ಹಿಂಸಾತ್ಮಕ ಸ್ವರೂಪ ತಾಳಿದ್ದು ಪ್ರತಿಭಟನೆಯಲ್ಲಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಹೌದು ಇಂದು ಬೆಳಗಾವಿಯ ಸುವರ್ಣಸೌಧದ ಮುಂದೆ ಪಂಚಮಸಾಲಿ ಮೀಸಲಾತಿಗೆ ಆಗ್ರಹಿಸಿ ಪ್ರತಿಭಟನೆಯನ್ನು ನಡೆಸಲಾಗುತ್ತಿತ್ತು. ಪ್ರತಿಭಟನೆ ವಿಕೋಪಕ್ಕೆ ತಿರುಗಿ ಸುವರ್ಣ ಸೌಧಕ್ಕೆ ಮುತ್ತಿಗೆ ಹಾಕೋದಕ್ಕೆ ಯತ್ನಿಸಲಾಯಿತು. ಈ ವೇಳೆ ಪ್ರತಿಭಟನಾಕಾರರನ್ನು ತಡೆಯೋದಕ್ಕೆ ಪೊಲೀಸರು ಎಷ್ಟೇ ಹರಸಾಹಸ ಪಟ್ಟರು ಸಾಧ್ಯವಾಗಲಿಲ್ಲ.ಈ ಹಿನ್ನಲೆಯಲ್ಲಿ ಪ್ರತಿಭಟನಾಕಾರರ ಮೇಲೆ ಎಡಿಜಿಪಿ ಹಿತೇಂದ್ರರಿಂದಲೇ ಲಾಠಿಚಾರ್ಜ್ ನಡೆಸಲಾಯಿತು. ಲಾಠಿ ಏಟು ತಿಂದರು. ತಮ್ಮ ಹಠವನ್ನು ಬಿಡದಂತ ಅನೇಕರು ಸುವರ್ಣ ಸೌಧಕ್ಕೆ ಮುತ್ತಿಗೆ ಹಾಕೋದಕ್ಕೆ ಮುಂದಾದರು. ಪೊಲೀಸರ ಲಾಠಿ ಏಟಿನಿಂದಾಗಿ 50ಕ್ಕೂ ಹೆಚ್ಚು ಪ್ರತಿಭಟನಾಕಾರರಿಗೆ ಗಾಯವಾಗಿದೆ ಎಂಬುದಾಗಿ ತಿಳಿದು ಬಂದಿದೆ. ಇವಳೇ ಶಾಸಕ ಯತ್ನಾಳ್ ಹಾಗೂ ಬಸವ ಜಯ ಮೃತ್ಯುಂಜಯ ಶ್ರೀಗಳನ್ನು ಕೂಡ ಪೊಲೀಸರು…
ಬೆಳಗಾವಿ : ಜಿಲ್ಲೆಯಲ್ಲಿ ವಿಧಾನಮಂಡಲದ ಅಧಿವೇಶನ ನಡೆಯುತ್ತಿದ್ದಂತ ಸಂದರ್ಭದಲ್ಲಿಯೇ ಪಂಚಮಸಾಲಿ ಮೀಸಲಾತಿಗೆ ಒತ್ತಾಯಿಸಿ ಪ್ರತಿಭಟನೆ ತೀವ್ರಗೊಂಡಿದೆ. ಇಂದು ಸುವರ್ಣಸೌಧಕ್ಕೆ ಮುತ್ತಿಗೆ ಹಾಕಲು ಪ್ರತಿಭಟನಾಕಾರರು ಯತ್ನಿಸಿದರು. ಈ ವೇಳೆ ಪೊಲೀಸರು ಲಾಠಿ ಚಾರ್ಜ್ ಮಾಡಿದ್ದಾರೆ. ಈ ಒಂದು ಲಾಟರಿ ಚಾರ್ಜ್ ನಲ್ಲಿ 50ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎನ್ನಲಾಗಿದೆ. ಹೌದು ಇಂದು ಬೆಳಗಾವಿಯ ಸುವರ್ಣಸೌಧದ ಮುಂದೆ ಪಂಚಮಸಾಲಿ ಮೀಸಲಾತಿಗೆ ಆಗ್ರಹಿಸಿ ಪ್ರತಿಭಟನೆಯನ್ನು ನಡೆಸಲಾಗುತ್ತಿತ್ತು. ಪ್ರತಿಭಟನೆ ವಿಕೋಪಕ್ಕೆ ತಿರುಗಿ ಸುವರ್ಣ ಸೌಧಕ್ಕೆ ಮುತ್ತಿಗೆ ಹಾಕೋದಕ್ಕೆ ಯತ್ನಿಸಲಾಯಿತು. ಈ ವೇಳೆ ಪ್ರತಿಭಟನಾಕಾರರನ್ನು ತಡೆಯೋದಕ್ಕೆ ಪೊಲೀಸರು ಎಷ್ಟೇ ಹರಸಾಹಸ ಪಟ್ಟರು ಸಾಧ್ಯವಾಗಲಿಲ್ಲ. ಈ ಹಿನ್ನಲೆಯಲ್ಲಿ ಪ್ರತಿಭಟನಾಕಾರರ ಮೇಲೆ ಎಡಿಜಿಪಿ ಹಿತೇಂದ್ರರಿಂದಲೇ ಲಾಠಿಚಾರ್ಜ್ ನಡೆಸಲಾಯಿತು. ಲಾಠಿ ಏಟು ತಿಂದರು ತಮ್ಮ ಹಠವನ್ನು ಬಿಡದಂತ ಅನೇಕರು ಸುವರ್ಣ ಸೌಧಕ್ಕೆ ಮುತ್ತಿಗೆ ಹಾಕೋದಕ್ಕೆ ಮುಂದಾದರು. ಪೊಲೀಸರ ಲಾಠಿ ಏಟಿನಿಂದಾಗಿ 50ಕ್ಕೂ ಹೆಚ್ಚು ಪ್ರತಿಭಟನಾಕಾರರಿಗೆ ಗಾಯವಾಗಿದೆ ಎಂಬುದಾಗಿ ತಿಳಿದು ಬಂದಿದೆ.
ಬೆಂಗಳೂರು : ಇಂದು ನಾಡು ಕಂಡ ಅತ್ಯಂತ ಮುತ್ಸದ್ದಿ ರಾಜಕಾರಣಿ, ಮಾಜಿ ಮುಖ್ಯಮಂತ್ರಿ ಹಾಗೂ ಮಾಜಿ ವಿದೇಶಾಂಗ ಸಚಿವರಾದಂತಹ ಎಸ್ಎಂ ಕೃಷ್ಣ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. 92 ವಯಸ್ಸಿನ ಎಸ್ಎಂ ಕೃಷ್ಣ ಅವರು ತಮ್ಮ ರಾಜಕೀಯ ಜೀವನದಲ್ಲಿ ರಾಜ್ಯಕ್ಕೆ ಅಪಾರವಾದ ಕೊಡುಗೆ ನೀಡಿದ್ದಾರೆ. ಅದರಲ್ಲೂ ಬಹಳ ಪ್ರಮುಖವಾದಂತಹ ಯೋಜನೆಯಾದ ಸರ್ಕಾರಿ ಶಾಲೆಗಳಲ್ಲಿ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟ ಯೋಜನೆಯನ್ನು ಇವರು ಮುಖ್ಯಮಂತ್ರಿ ಆಗಿದ್ದ ಅವಧಿಯಲ್ಲಿ ಜಾರಿಗೊಳಿಸಲಾಯಿತು. ರಾಜ್ಯದ ಹಿಂದುಳಿದ ಪ್ರದೇಶವಾದ ರಾಯಚೂರಿನಲ್ಲಿ 2001ರಲ್ಲಿ ಈ ಒಂದು ಯೋಜನೆಗೆ ಚಾಲನೆ ನೀಡಲಾಯಿತು. ಹೌದು ರಾಜ್ಯದಲ್ಲಿ ಸರ್ಕಾರಿ ಶಾಲೆಯ ಮಕ್ಕಳಿಗೆ ಮಧ್ಯಾಹ್ನ ಬಿಸಿಯೂಟ ಯೋಜನೆಯನ್ನು ಜಾರಿಗೆ ತಂದರು. ಈ ಮೂಲಕ ಮೊದಲ ಬಾರಿಗೆ ರಾಯಚೂರು ಜಿಲ್ಲೆಯ ದೇವದುರ್ಗ ತಾಲ್ಲೂಕಿನ ಅರಕೇರಾದಲ್ಲಿ ಬಿಸಿಯೂಟ ಯೋಜನೆಗೆ ಚಾಲನೆ ನೀಡಿದರು.ಸಿಎಂ ಎಸ್.ಎಂ ಕೃಷ್ಣ ಅವರಿಗೆ ಅಂದಿನ ಶಿಕ್ಷಣ ಸಚಿವ ಹೆಚ್.ವಿಶ್ವನಾಥ್, ರಾಯಚೂರು ಸಂಸದ ವೆಂಕಟೇಶ ನಾಯಕ ಅವರು ಸಾಥ್ ನೀಡಿದ್ದರು. 2001ರಲ್ಲಿ ಆಗಿನ ಸಿಎಂ ಆಗಿದ್ದ ಎಸ್‌ಎಂ ಕೃಷ್ಣ ಅವರು…













