Author: kannadanewsnow05

ಬೆಂಗಳೂರು : ತಂದೆಯೊಬ್ಬರು ತಮ್ಮ ಮಗನನ್ನು ಶಾಲೆಗೆ ಬಿಡಲು ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ, ಓವರ್ ಟೇಕ್ ಮಾಡುವ ಭರದಲ್ಲಿ ಕೆಳಗೆ ಬಿದ್ದಿದ್ದಾರೆ. ಈ ವೇಳೆ ಹಿಂಬದಿ ಕುಳಿತಿದ್ದ ತಮ್ಮ ಮಗನು ರಸ್ತೆಗೆ ಬಿದ್ದಿದ್ದಾನೆ.ತಕ್ಷಣ ವೇಗವಾಗಿ ಬಂದಂತಹ ಟ್ರಾಕ್ಟರ್ ಒಂದು ಆತನ ಮೇಲೆ ಹರಿದ ಪರಿಣಾಮ ಬಾಲಕ ಸಾವನಪ್ಪಿರುವ ಘಟನೆ ಬೆಂಗಳೂರಿನ ಹಗದೂರು ಮುಖ್ಯ ರಸ್ತೆ ವೈಟ್​ಫೀಲ್ಡ್​ನಲ್ಲಿ ನಡೆದಿದೆ. ಮೃತ ಬಾಲಕ ಕಾಂಗೇದ್ರ ತಂದೆ ಮಗನನ್ನು ಶಾಲೆಗೆ ಡ್ರಾಪ್​ ಮಾಡಲು ಕರೆದೊಯ್ಯುತ್ತಿದ್ದರು. ಈ ವೇಳೆ ಮುಂದೆ ಹೋಗುತ್ತಿದ್ದ ಟ್ರ್ಯಾಕ್ಟರ್​ರನ್ನು ಓವರ್​ ಟೇಕ್​ ಮಾಡಲು ಮುಂದಾಗಿದ್ದಾರೆ. ಆದರೆ ಓವರ್​ಟೇಕ್​ ಮಾಡುವ ವೇಳೆ ಎದುರುಗಡೆಯಿಂದ ಮತ್ತೊಂದು ಬೈಕ್ ಬಂದಿದ್ದು. ಈ ವೇಳೆ ನಿಯಂತ್ರಣ ತಪ್ಪಿದ ಬೈಕ್​ ಕೆಳಗೆ ಬಿದ್ದಿದೆ. ಈ ವೇಳೆ ಬಾಲಕ ಕಾಗೇಂದ್ರ ಪಕ್ಕದಲ್ಲಿ ಸಾಗುತ್ತಿದ್ದ ಟ್ರ್ಯಾಕ್ಟರ್​ ಟ್ಯಾಂಕರ್​ ಕೆಳಗೆ ಬಿದ್ದಿದ್ದಾನೆ. ಈ ವೇಳೆ ಬಾಲಕನ ಮೇಲೆ ಟ್ಯಾಂಕರ್​ ಹರಿದಿದೆ. ಗಾಯಗೊಂಡಿದ್ದ ಬಾಲಕನನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಯಿತು.ಆದರೆ ಚಿಕಿತ್ಸೆ ಫಲಿಸದೆ ಬಾಲಕ ಸಾವನ್ನಪ್ಪಿದ್ದಾನೆ.…

Read More

ಬೆಂಗಳೂರು : ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ಅಶ್ಲೀಲ ಪದ ಬಳಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಿಜೆಪಿ ಎಂಎಲ್ಸಿ ಸಿಟಿ ರವಿ ಅವರನ್ನು ಬೆಳಗಾವಿಯ ಹಿರೇಬಾಗೇವಾಡಿ ಪೊಲೀಸರು ಅರೆಸ್ಟ್ ಮಾಡಿದ್ದರು. ಇದೀಗ ಈ ಒಂದು ಪ್ರಕರಣಕ್ಕೆ ಸಂಬಂಧಪಟ್ಟಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೊಟ್ ಅವರು ಪ್ರಕರಣದ ಕುರಿತು ಪೊಲೀಸ್ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಪತ್ರ ಬರೆದಿದ್ದಾರೆ ಎನ್ನಲಾಗಿದೆ. ಹೌದು ಸಿಟಿ ರವಿ ಬಂಧನ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕಳೆದ ಡಿಸೆಂಬರ್ 31ರಂದೆ ಥಾವರ್ ಚಂದ್ ಗೆಹ್ಲೊಟ್ ಅವರು ಪತ್ರ ಬರೆದಿದ್ದು, ಪೊಲೀಸ್ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಸಿಎಂ ಸಿದ್ದರಾಮಯ್ಯಗೆ ಸಲಹೆ ನೀಡಿ ಪತ್ರ ಬರೆದಿದ್ದಾರೆ. ಸಿಟಿ ರವಿ ಬಂಧನವನ್ನು ಗಂಭೀರವಾಗಿ ಪರಿಗಣಿಸಿ. ಇದು ಚುನಾಯಿತ ಜನಪ್ರತಿನಿಧಿಗೆ ಸಂಬಂಧಿಸಿದಂತಹ ವಿಚಾರವಾಗಿದೆ. ಹೀಗಾಗಿ ಮಧ್ಯಪ್ರದೇಶ ಮಾಡಿದ ರಾಜ್ಯಪಾಲರು, ಕ್ರಮ ಕೈಗೊಳ್ಳಿ ಎಂದು ಸಿಎಂಗೆ ಬರೆದ ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಸದನದಲ್ಲಿ ಎಂಎಲ್ಸಿ ಸಿಟಿ ರವಿ ಅವರು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಪ್ರಾಸ್ಟಿಟ್ಯೂಟ್…

Read More

ಉತ್ತರಪ್ರದೇಶ : ಉತ್ತರ ಪ್ರದೇಶದ ಹರ್ದೋಯಿಯಲ್ಲಿ ಭಿಕ್ಷುಕನ ಜೊತೆ ಓಡಿಹೋದೆ ಎಂದು ಪತಿ ಆರೋಪಿಸಿರುವುದು ಸುಳ್ಳು. ತನ್ನ ಪತಿ ಪದೇ ಪದೇ ನಿಂದನೆ ಮತ್ತು ಥಳಿಸಿದ್ದರಿಂದ ಸಂಬಂಧಿಕರ ಮನೆಗೆ ತೆರಳಿದ್ದೆ ಎಂದು ಮಹಿಳೆಯು ಪೊಲೀಸರಿಗೆ ತಿಳಿಸಿದ್ದಾರೆ. ಹೌದು ನಿನ್ನೆ ನೀಡಿದ ಹೇಳಿಕೆಯಲ್ಲಿ, ಎಫ್‌ಐಆರ್ ದಾಖಲಾದ ನಂತರ ಮಹಿಳೆ ಪೊಲೀಸ್ ಠಾಣೆಗೆ ಭೇಟಿ ನೀಡಿದ್ದರು ಎಂದು ಹರ್ದೋಯ್ ಪೊಲೀಸರು ತಿಳಿಸಿದ್ದಾರೆ. ಪತಿ ರಾಜು ತನ್ನನ್ನು ನಿಂದಿಸಿ ಥಳಿಸುತ್ತಾನೆ ಎಂದು ರಾಜೇಶ್ವರಿ ಹೇಳಿದ್ದಾರೆ.ಇದರಿಂದ ಮನನೊಂದ ಆಕೆ ಫರೂಕಾಬಾದ್‌ನಲ್ಲಿರುವ ತನ್ನ ಸಂಬಂಧಿಕರ ಮನೆಗೆ ಹೋಗಿದ್ದಾಳೆ. ಮಹಿಳೆ ಯಾರೊಂದಿಗಾದರೂ ಹೋಗಿದ್ದಾಳೆ ಎಂಬ ಆರೋಪ ಸುಳ್ಳು ಮತ್ತು ನಿರಾಧಾರವಾಗಿದೆ, ನಾವು ಮುಂದಿನ ಕ್ರಮ ಕೈಗೊಳ್ಳುತ್ತಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಕರಣ ಹಿನ್ನೆಲೆ? ರಾಜು ತನ್ನ ದೂರಿನಲ್ಲಿ ತನ್ನ ಪತ್ನಿ ರಾಜೇಶ್ವರಿ ಮತ್ತು ಅವರ ಮಕ್ಕಳೊಂದಿಗೆ ಹರ್ದೋಯ್ನ ಹರ್ಪಾಲ್ಪುರ ಪ್ರದೇಶದಲ್ಲಿ ವಾಸಿಸುತ್ತಿದ್ದಾರೆ ಎಂದು ಹೇಳಿದ್ದಾರೆ. 45 ವರ್ಷದ ಭಿಕ್ಷುಕ ನನ್ಹೆ ಪಂಡಿತ್ ಕೆಲವೊಮ್ಮೆ ತಮ್ಮ ನೆರೆಹೊರೆಯಲ್ಲಿ ಭಿಕ್ಷೆ ಬೇಡುತ್ತಿದ್ದರು ಮತ್ತು…

Read More

ಚಿಕ್ಕಮಗ : ಕರ್ನಾಟಕದಲ್ಲಿ ಇಂದು ಬಹು ದೊಡ್ಡ ಶರಣಾಗತಿ ನಡೆಯುತ್ತಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಈ ಒಂದು ಶರಣಾಗತಿ ನಡೆಯಲಿದೆ. ದಕ್ಷಿಣ ಭಾರತದ ಮೋಸ್ಟ್ ವಾಂಟೆಡ್ ಆರು ಜನ ನಕ್ಸಲರು ಇಂದು ಚಿಕ್ಕಮಂಗಳುರು ಜಿಲ್ಲಾ ಆಡಳಿತದ ಮುಂದೆ ಶರಣಾಗಬೇಕಿತ್ತು.ಆದರೆ ಸಿಎಂ ಸಿದ್ದರಾಮಯ್ಯ ಅವರ ಸೂಚನೆಯ ಮೇರೆಗೆ ಇದೀಗ ನಕ್ಸಲರು ಬೆಂಗಳೂರಿಗೆ ಆಗಮಿಸುತ್ತಿದ್ದು ಸಿಎಂ ಸಿದ್ದರಾಮಯ್ಯ ಹಾಗೂ ಗೃಹ ಸಚಿವ ಜಿ ಪರಮೇಶ್ವರ್ ಅವರ ಎದುರು ಶರಣಾಗಲಿದ್ದಾರೆ ಎಂದು ತಿಳಿದು ಬಂದಿದೆ . ಹೌದು ಸಿಎಂ ಹಾಗೂ ಗೃಹ ಸಚಿವರ ಮುಂದೆ 6 ನಕ್ಸಲರು ಶರಣಾಗಲಿದ್ದಾರೆ. ಬಾಳೆಹೊನ್ನುರಿನಿಂದ ಈಗಾಗಲೇ ನಕ್ಸಲರು ಬೆಂಗಳೂರಿಗೆ ಆಗಮಿಸುತ್ತಿದ್ದಾರೆ. ನಕ್ಸಲರನ್ನು ಶಾಂತಿಗಾಗಿ ನಾಗರಿಕ ವೇದಿಕೆ ಸದಸ್ಯರು ಕರೆತರುತ್ತಿದ್ದಾರೆ. ಚಿಕ್ಕಮಂಗಳೂರು ಎಸ್ಪಿ ವಿಕ್ರಂ ಆಮ್ಟೆ, ISD ಎಸ್ ಪಿ ಹರಿರಾಮ ಶಂಕರ್, ಪಶ್ಚಿಮ ವಲಯದ ಐಜಿಪಿ ಅಮಿತ್ ಸಿಂಗ್ ನೇತೃತ್ವದಲ್ಲಿ ಶರಣಾಗತಿ ಅಗಲಿದ್ದಾರೆ.ಸಿಎಂ ಸಿದ್ದರಾಮಯ್ಯ ಅವರ ಸೂಚನೆಯ ಮೇರೆಗೆ 6 ನಕ್ಸಲರು ಇದೀಗ ಬೆಂಗಳೂರಿನ ಕಡೆಗೆ ಬರುತ್ತಿದ್ದಾರೆ. ಸಿಎಂ ಗೃಹ…

Read More

ಬೆಂಗಳೂರು : ಬೃಹತ್​ ಬೆಂಗಳೂರು ಮಹಾನಗರ ಪಾಲಿಕೆ ಅಧಿಕಾರಿಯ ಕಚೇರಿ ಮೇಲೆ ನಿನ್ನೆ ED ಅಧಿಕಾರಿಗಳು ದಾಳಿ ನಡೆಸಿದ್ದರು. ಚೀಫ್ ಕಮಿಷನರ್ ಕಚೇರಿ ಮೇಲೆ ಬೆಳಗ್ಗೆ 11 ಗಂಟೆ ವೇಳೆ ED ಅಧಿಕಾರಿಗಳು ದಾಳಿ ನಡೆಸಿ, ತಡರಾತ್ರಿ ವಾಪಾಸ್ ಆಗಿದ್ದು ಇಂದು ಬೆಳಿಗ್ಗೆ ಮತ್ತೆ ಕಚೇರಿಯಲಿ ಪರಿಶೀಲನೆ ನಡೆಸುತ್ತಿದ್ದಾರೆ. ಹೌದು ಬಿಬಿಎಂಪಿ ಕಚೇರಿಯಲ್ಲಿ ಪರಿಶೀಲನೆ ಮುಂದುವರೆಸಿದ ED ಅಧಿಕಾರಿಗಳು ತಡರಾತ್ರಿ ಬಿಬಿಎಂಪಿ ಕಚೇರಿಯಿಂದ ತೆರಳಿದ್ದರು. ಇದೀಗ ಇಂದು ಬೆಳಿಗ್ಗೆ ಮತ್ತೆ ದಾಖಲೆ ಪರಿಶೀಲನೆ ಮುಂದುವರಿಸಿದ್ದಾರೆ.ಬಿಬಿಎಂಪಿ ಚೀಫ್ ಇಂಜಿನಿಯರ್ ಪ್ರಹ್ಲಾದ್ ಕಚೇರಿಯಲ್ಲಿ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ನಿನ್ನೆ ED ಅಧಿಕಾರಿಗಳು ಕಚೇರಿಯಿಂದ ಸಾಕಷ್ಟು ದಾಖಲೆ ಮತ್ತು ಕಡತಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಮೂರು ವರ್ಷಗಳ ಅವಧಿಯಲ್ಲಿ ಸುಮಾರು 960 ಕೋಟಿ ಪಡೆಯಲಾಗಿತ್ತು ಈ ಬಿಲ್ಗೆ ಕಾಮಗಾರಿಯ ಗುಣಮಟ್ಟ ಸುಳಿ ಲೆಕ್ಕದ ಆರೋಪ ಕೂಡ ಕೇಳಿ ಬಂದಿತ್ತು ಹೀಗಾಗಿ ಚೀಫ್ ಇಂಜಿನಿಯರ್ ಕಚೇರಿಯ ಮೇಲೆ ಇಡಿ ಅಧಿಕಾರಿಗಳು ನಿನ್ನೆ ದಾಳಿ ಮಾಡಿದ್ದರು ಎಲ್ಲಾ ವಲಯದ ಇಂಜಿನಿಯರ್ಗಳನ್ನು ಕರೆಸಿ…

Read More

ಮೈಸೂರು : ಮೈಸೂರು ಕಾರಾಗೃಹದಲ್ಲಿ ಕೈದಿಗಳು ಎಸ್ಸೆನ್ಸ್ ಸೇವಿಸಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ರಮೇಶ್ ಎನ್ನುವ ಮೂರನೇ ಕೈದಿ ಕೂಡ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾನೆ ಎಂದು ವರದಿಯಾಗಿದೆ.ಅಸ್ವಸ್ಥಗೊಂಡಿದ್ದ ಮತ್ತೊಬ್ಬ ಕೈದಿ ರಮೇಶ್ ಕೂಡ ಇದೀಗ ಸಾವನ್ನಪ್ಪಿದ್ದಾನೆ. ಆ ಮೂಲಕ ಹೊಸ ವರ್ಷಚಾರಣೆ ವೇಳೆ ಎಸೆನ್ಸ್ ಸೇವಿಸಿದ್ದ ಮೂವರು ಕೈದಿಗಳು ಇದೀಗ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ. ಹೊಸ ವರ್ಷದ ದಿನ ಕೇಕ್ ತಯಾರಿಸಲು ಎಸೆನ್ಸ್ ತರಿಸಲಾಗಿದ್ದು, ಜೈಲಿನ ಬೇಕರಿ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದ ಮೂವರು ಕೈದಿಗಳು ಕೇಕ್ ತಯಾರಿಸಲು ಇಟ್ಟಿದ್ದ ಎಸೆನ್ಸ್ ಕುಡಿದಿದ್ದರು. ಹೊಟ್ಟೆ ನೋವು ಕಾಣಿಸಿಕೊಂಡ ಹಿನ್ನೆಲೆ ಜೈಲಿನಲ್ಲಿ ಚಿಕಿತ್ಸೆ ನೀಡಲಾಗಿತ್ತು. ಬಳಿಕ ಮೂರು ಕೈದಿಗಳನು, ಮೈಸೂರಿನ ಕೆ ಆರ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಬಳಿಕ ಮೈಸೂರಿನ ಕೆ.ಆರ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ನಿನ್ನೆ ನಿನ್ನೆ ಮೈಸೂರಿನ ಸಾತಗಳ್ಳಿಯ ಮಾದೇಶ್ ಮೃತಪಟ್ಟಿದ್ದರು. ಇಂದು ಚಾಮರಾಜನಗರದ ಕೈದಿ ನಾಗರಾಜ್ ಕೆಆರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದ್ದಾರೆ.  ಇದೀಗ ಮತ್ತೊಬ್ಬ ಕೈದಿ…

Read More

ಬೆಂಗಳೂರು : ಇಂದು ಕರ್ನಾಟಕದಲ್ಲಿ ಬಹು ದೊಡ್ಡ ಶರಣಾಗತಿ ಆಗಲಿದ್ದು, ಚಿಕ್ಕಮಂಗಳೂರಿನಲ್ಲಿ ದಕ್ಷಿಣ ಭಾರತದ ಮೋಸ್ಟ್ ವಾಂಟೆಡ್ ಆರು ಜನ ನಕ್ಸಲರು ಜಿಲ್ಲಾಡಳಿತದ ಮುಂದೆ ಇನ್ನೇನು ಕೆಲವೇ ಕ್ಷಣಗಳಲ್ಲಿ ಶರಣಾಗಲಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಗೃಹ ಸಚಿವ ಡಾ. ಜಿ ಪರಮೇಶ್ವರ್ ಪ್ರತಿಕ್ರಿಯೆ ನೀಡಿ ಶರಣಾಗುವ ನಕ್ಸಲರ ವಿರುದ್ಧ ಹಲವು ಪ್ರಕರಣಗಳಿದ್ದು ಆ ಕುರಿತು ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದರು. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಚಿಕ್ಕಮಗಳೂರಲ್ಲಿ ಇಂದು ನಕ್ಸಲರು ಶರಣಾಗತಿ ಆಗುತ್ತಿರುವ ವಿಚಾರವಾಗಿ, ಬಾಕಿ ಉಳಿದ ವಿಚಾರವಾಗಿ ನಾನು ಈಗ ಮಾತನಾಡುವುದಿಲ್ಲ. ಆದರೆ ವಿಕ್ರಂ ಎನ್ಕೌಂಟರ್ ವೇಳೆ ನಕ್ಸಲರಿಗೆ ಶರಣಾಗಲು ಕರೆ ನೀಡಲಾಗಿತ್ತು. ಕಾಡಿನಲ್ಲಿದ್ದು ಈ ರೀತಿ ಜೀವನ ಏಕೆ ಮಾಡುತ್ತಿದ್ದೀರಿ, ಸಮಾಜದ ಮುಖ್ಯ ವಾಹಿನಿಗೆ ಬನ್ನಿ ಅಂತ ಹೇಳಿದ್ದೇವೆ. ನಕ್ಸಲರ ವಿರುದ್ಧ ಹಲವು ಪ್ರಕರಣಗಳಿವೆ ನಿಜ, ಪ್ರಕರಣಗಳ ವಿಚಾರದಲ್ಲಿ ಕಾನೂನು ಪ್ರಕಾರ ಕ್ರಮ ಆಗಲಿದೆ ಎಂದು ತಿಳಿಸಿದರು.

Read More

ಬೆಂಗಳೂರು : ಸದ್ಯ ರಾಜ್ಯ ರಾಜಕಾರಣದಲ್ಲಿ ಡಿನ್ನರ್ ಪಾರ್ಟಿ ಭಾರಿ ಸದ್ದು ಮಾಡುತ್ತಿದ್ದು, ಸಚಿವ ಸತೀಶ್ ಜಾರಕಿಹೊಳೆ ಡಿನ್ನರ್ ಪಾರ್ಟಿ ನೀಡಿದ್ದೇ ತಡ, ಇತ್ತ ಗೃಹ ಸಚಿವ ಡಾ.ಜಿ ಪರಮೇಶ್ವರ್ ವಿದೇಶದಿಂದ ಆಗಮಿಸಿದ ತಕ್ಷಣ ಇಂದು ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಡಿನ್ನರ್ ಪಾರ್ಟಿ ಆಯೋಜನೆ ಮಾಡಲು ಸಿದ್ಧತೆ ಮಾಡಿಕೊಂಡಿದ್ದರು. ಆದರೆ ಹೈಕಮಾಂಡ್ ಖಡಕ್ ಸೂಚನೆ ಮೇರೆಗೆ ಇದೀಗ ಇಂದು ನಡೆಯಬೇಕಿದ್ದ ಡಿನ್ನರ್ ಪಾರ್ಟಿ ರದ್ದಾಗಿದೆ. ಈ ಕುರಿತು ಸಚಿವ ಜಿ ಪರಮೇಶ್ವರ ಡಿನ್ನರ್ ರದ್ದಾಗಿಲ್ಲ ಮುಂದೂಡಲಾಗಿದೆ ಎಂದು ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಇಂದು ನಡೆಯಬೇಕಿದ್ದ ಔತಣಕೂಟ ರದ್ದಾಗಿಲ್ಲ ಬದಲಾಗಿ ಡಿನ್ನರ್ ಪಾರ್ಟಿ ದಿನಾಂಕ ಮುಂದೂಡಲಾಗಿದೆ. ಹೈಕಮಾಂಡ್ ಡಿನ್ನರ್ ಪಾರ್ಟಿಗೆ ಯಾವುದೇ ವಿರೋಧ ವ್ಯಕ್ತಪಡಿಸಿಲ್ಲ ಎಂದು ಜಿ ಪರಮೇಶ್ವರ್ ಸ್ಪಷ್ಟನೆ ನೀಡಿದರು. ಡಿಕೆ ಶಿವಕುಮಾರ್ ಹೈಕಮಾಂಡ್ಗೆ ದೂರು ನೀಡಿರುವ ಬಗ್ಗೆ ನನಗೆ ಗೊತ್ತಿಲ್ಲ. ಈ ಸಭೆಗೆ ಡಿಸಿಎಂ ಡಿಕೆ ಅವರನ್ನು ಕರೆಯಬೇಕು ಅಂತ ಚರ್ಚೆಯಾಗಿತ್ತು. ರಾಜಕಾರಣ ಮಾಡುವುದಾದರೆ ಓಪನ್…

Read More

ಧಾರವಾಡ-ಹುಬ್ಬಳ್ಳಿ : ಕೇಂದ್ರ ಸಚಿವ ಅಮಿತ್ ಶಾ ಅವರು ಡಾ. ಬಿ ಆರ್ ಅಂಬೇಡ್ಕರ್ ಅವರ ಕುರಿತು ನೀಡಿರುವ ಹೇಳಿಕೆಗೆ ಇದೀಗ ತೀವ್ರ ಖಂಡನೆ ವ್ಯಕ್ತವಾಗಿದ್ದು. ಈ ಹಿನ್ನೆಲೆ ನಾಳೆ ಹುಬ್ಬಳ್ಳಿ ಧಾರವಾಡ ಬಂದ್ ಗೆ ದಲಿತ ಸಂಘಟನೆಗಳು ಕರೆ ನೀಡಿವೆ. ಇದಕ್ಕೆ ಕಾಂಗ್ರೆಸ್ ಶಾಸಕ ಪ್ರಸಾದ ಅಬ್ಬಯ್ಯ ಕೂಡ ಬೆಂಬಲ ಘೋಷಣೆ ಮಾಡಿದ್ದು, ಇದಕ್ಕೆ ಬಿಜೆಪಿ ವಿರೋಧ ವ್ಯಕ್ತಪಡಿಸಿದ್ದರಿಂದ ಇದೀಗ ಈ ಒಂದು ಬಂದ್ ಕರೆ ರಾಜಕೀಯ ತಿರುವು ಪಡೆದುಕೊಂಡಿದೆ. ಹೌದು ನಾಳೆ ಹುಬ್ಬಳ್ಳಿ ಧಾರವಾಡ ಬಂದ್ ಗೆ ದಲಿತ ಸಂಘಟನೆಗಳು ಕರೆಗೆ ಕಾಂಗ್ರೆಸ್ ಶಾಸಕ ಪ್ರಸಾದ್ ಅಬ್ಬಯ್ಯ ಬೆಂಬಲ ಘೋಷಣೆ ಮಾಡಿದ್ದು, ಇತ್ತ ಹುಬ್ಬಳ್ಳಿ ಧಾರವಾಡ ನಗರ ಬಂದ್ ಗೆ ಬಿಜೆಪಿ ವಿರೋಧಿಸುತ್ತಿದೆ. ಹಾಗಾಗಿ ನಾಳೆ ಹುಬ್ಬಳ್ಳಿ ಧಾರವಾಡ ಬಂದ್ ಕರೆ ರಾಜಕೀಯ ತಿರುವು ಪಡೆದುಕೊಂಡಿದೆ ಎನ್ನಲಾಗಿದೆ. ಹುಬ್ಬಳ್ಳಿ ಧಾರವಾಡ ಬಂದ್ ಮಾಡಿದರೆ ನಾವು ಬಂದ್ ಗೆ ಕರೆ ಕೊಡುತ್ತೇವೆ. ನಿಮಗೆ ಪ್ರತಿಯಾಗಿ ನಾವು ಕೂಡ ಬಂದ್ ಗೆ…

Read More

ಬಳ್ಳಾರಿ : ಇಂದು ರಾಜ್ಯಾದ್ಯಂತ ಬೆಳ್ಳಂ ಬೆಳಿಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಅಧಿಕಾರಿಗಳು ಬಿಗ್ ಶಾಕ್ ನೀಡಿದ್ದು, ವಿವಿಧಡೆ ಅಕ್ರಮ ಆಸ್ತಿ ಗಳಿಕೆ ಆರೋಪದ ಮೇಲೆ ಸರ್ಕಾರಿ ಅಧಿಕಾರಿಗಳ ನಿವಾಸದ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ. ಇದೀಗ ಬಳ್ಳಾರಿ ಜಿಲ್ಲೆಯಲ್ಲಿ ತಾಲೂಕು ಬಿಸಿಎಂ ಹಾಸ್ಟೆಲ್ ಅಧಿಕಾರಿ ಲೋಕೇಶ್ ಮನೆ ಮೇಲೆ ದಾಳಿ ಮಾಡಿದ್ದು ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ. ಹೌದು ಬಳ್ಳಾರಿ ಜಿಲ್ಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದು ತಾಲೂಕು ಬಿಸಿಎಂ ಅಧಿಕಾರಿ ಲೋಕೇಶ್ ಮನೆಯ ಮೇಲೆ ದಾಳಿ ಮಾಡಿದ್ದಾರೆ. ಅಲ್ಲದೆ ಅಧಿಕಾರಿ ಲೋಕೇಶ್ ಸ್ನೇಹಿತರ ಮನೆಗಳ ಮೇಲು ಅಧಿಕಾರಿಗಳು ದಾಳಿ ಮಾಡಿದ್ದಾರೆ. ಬಳ್ಳಾರಿಯ ರಾಮಾಂಜನೇಯ ನಗರದಲ್ಲಿರುವ ಲೋಕೇಶ್ ನಿವಾಸದ ಮೇಲೆ ದಾಳಿ ಮಾಡಿ ದಾಖಲೆ ಪರಿಶೀಲನೆ ನಡೆಸುತ್ತಿದ್ದಾರೆ. ಈ ಹಿಂದೆ ವಾರ್ಡನ್ ಆಗಿದ್ದ ಲೋಕೇಶ್ ಇದೀಗ ತಾಲೂಕು ಬಿಸಿಎಂ ಹಾಸ್ಟೆಲ್ ಅಧಿಕಾರಿಯಾಗಿದ್ದಾನೆ. ಆದಾಯ ಮೀರಿ ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ದಾಳಿ ನಡೆಸಲಾಗಿದೆ. ಅಲ್ಲದೇ ಲೋಕೇಶ್…

Read More