Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ನಿನ್ನೆ ತಾನೆ ಬೆಂಗಳೂರಿನಲ್ಲಿ ಸಾಲದಿಂದಾಗಿ ಟೆಕ್ಕಿ ದಂಪತಿಗಳು ತಮ್ಮ ಇಬ್ಬರೂ ಮಕ್ಕಳಿಗೆ ವಿಷ ಹಾಕಿ ಕೊಂದು, ತಾವು ಕೂಡ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದರು. ಈ ಘಟನೆ ಮಾಸುವ ಮುನ್ನವೇ ಇದೀಗ ಬೆಂಗಳೂರಿನಲ್ಲಿ ಸಾಲದಿಂದ ಬಡ್ಡಿ ಟಾರ್ಚರ್ಗೆ ಬೇಸತ್ತು, ಉದ್ಯಮಿಯೊಬ್ಬರು ನೇಣಿಗೆ ಶರಣಾಗಿರುವ ಘಟನೆ ಬೆಂಗಳೂರಿನ ಅಕ್ಷಯ ನಗರದಲ್ಲಿ ನಡೆದಿದೆ. ಹೌದು ಬೆಂಗಳೂರಿನಲ್ಲಿ ಸಾಲದಿಂದ ಬೇಸತ್ತು ಉದ್ಯಮಿ ನೇಣಿಗೆ ಶರಣಾಗಿದ್ದಾರೆ. ಹುಳಿಮಾವು ಠಾಣಾ ವ್ಯಾಪ್ತಿಯ ಅಕ್ಷಯ ನಗರದಲ್ಲಿ ಈ ಒಂದು ಘಟನೆ ನಡೆದಿದೆ. ಮನೆಯಲ್ಲಿ ನೇಣು ಬಿಗಿದುಕೊಂಡು ಕಲಾಲ್ ದತ್ತ (40) ಆತ್ಮಹತ್ಯೆಗೆ ಶರಣಾಗಿರುವ ವ್ಯಕ್ತಿ ಎಂದು ತಿಳಿದುಬಂದಿದೆ. ಸಾಲಕ್ಕೆ ಬಡ್ಡಿ ನೀಡುವ ಟಾರ್ಚರ್ಗೆ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಇದೀಗ ಆರೋಪ ಕೇಳಿ ಬಂದಿದೆ.ನಿನ್ನೆ ಸಂಜೆ ಉದ್ಯಮಿ ಕಲಾಲ್ ದತ್ತ ನೇಣಿಗೆ ಶರಣಾಗಿದ್ದಾರೆ. ಹುಳಿಮಾವು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಬೆಂಗಳೂರು : ವಿಧಾನಸೌಧದಲ್ಲಿ ಕಾಂಗ್ರೆಸ್ ಸಚಿವರು 60 ಪರ್ಸೆಂಟ್ ಕಮಿಷನ್ ಪಡೆಯುತ್ತಿದ್ದಾರೆ ಎಂದು ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಆರೋಪಕ್ಕೆ ಸಿಎಂ ಸಿದ್ದರಾಮಯ್ಯ ಅವರು ದಾಖಲೆ ಇದ್ದರೆ ಬಿಡುಗಡೆ ಮಾಡಲಿ ಎಂದು ಸವಾಲು ಹಾಕಿದ್ದರು. ಇದೀಗ ಹೆಚ್ ಡಿ ಕುಮಾರಸ್ವಾಮಿ ಅವರು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರಿಕೆಗಳು ಪ್ರಕಟಿಸಿದ್ದನ್ನು ಉಲ್ಲೆಖಿಸಿ ತಿರುಗೇಟು ನೀಡಿದ್ದಾರೆ. ದಾಖಲೆ ಕೊಡಿ.. ದಾಖಲೆ ಕೊಡಿ ಎನ್ನುತ್ತಿದ್ದೀರಿ.. ಇಲ್ನೋಡಿ ಸನ್ಮಾನ್ಯ ಸಿದ್ದರಾಮಯ್ಯ ನವರೇ.. ನಿಮ್ಮ ಖೊಟ್ಟಿ ಗ್ಯಾರಂಟಿ ಸರಕಾರದ ಲೂಟಿ ಸಾಕ್ಷಿಗುಡ್ಡೆ. ಪತ್ರಿಕೆಯವರೇ ನಿಮ್ಮ ಸಾಕ್ಷಿಗುಡ್ಡೆಯ ಸಾಕ್ಷಾತ್ಕಾರ ಮಾಡಿಸಿದ್ದಾರೆ!! ನಿಮ್ಮ ಸರಕಾರ ಗುತ್ತಿಗೆದಾರರನ್ನು ಎಷ್ಟು ನಿರ್ಲಜ್ಜವಾಗಿ ಸುಲಿಗೆ ಮಾಡುತ್ತಿದೆ ಎನ್ನುವುದಕ್ಕೆ ಈ ಸಾಕ್ಷಿಗುಡ್ಡೆ ಸಾಕ್ಷ್ಯ ಸಾಲದೇ ಮುಖ್ಯಮಂತ್ರಿಗಳೇ..? ಚೆಂಬು ಹಾಕಿ ಹಂಡೆ ಹೊಡೆದರು ಎನ್ನುವಂತೆ ಗ್ಯಾರಂಟಿ ಹೆಸರಿನಲ್ಲಿ ಬಿಡಿಗಾಸು ಕೊಟ್ಟು ಕೋಟಿ ಕೋಟಿ ಲೂಟಿ ಮಾಡುತ್ತಿದ್ದೀರಿ.ಗುತ್ತಿಗೆದಾರರ ₹32,000 ಕೋಟಿಯಷ್ಟು ಬಿಲ್ ಬಾಕಿ ಬಿದ್ದಿದೆ. ಈ ಬಾಕಿ ಮೇಲೆ ನಿಮ್ಮ ಪರ್ಸಂಟೇಜ್ ಕರಿನೆರಳು…
ಬೆಂಗಳೂರು : ಕಾಂಗ್ರೆಸ್ ನಾಯಕರು ಸಾಲು ಸಾಲಾಗಿ ಡಿನ್ನರ್ ಪಾರ್ಟಿ ಆಯೋಜನೆ ಮಾಡುತ್ತಿದ್ದಾರೆ ಕಳೆದ ಕೆಲವು ದಿನಗಳ ಹಿಂದೆ ಪಿಡಬ್ಲ್ಯೂಡಿ ಸಚಿವ ಸತೀಶ ಜಾರಕಿಹೊಳಿ ಅವರು ಔತಣಕೂಟ ಏರ್ಪಡಿಸಿದ್ದರು. ಈ ಒಂದು ಔತಣಕೂಟದಲ್ಲಿ ಸಿಎಂ ಸಿದ್ದರಾಮಯ್ಯ ಇವಳು ಸಚಿವರು ಹಾಗೂ 35 ಶಾಸಕರು ಭಾಗಿಯಾಗಿದ್ದರು ಇದೀಗ ನಾಳೆ ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಗ್ರಹ ಸಚಿವ ಜಿ ಪರಮೇಶ್ವರ್ ಅವರು ಕೂಡ ಡಿನ್ನರ್ ಆಯೋಜನೆ ಮಾಡಿದ್ದಾರೆ. ಇದೇ ವಿಚಾರವಾಗಿ ಬೆಂಗಳೂರಿನಲ್ಲಿ ವಿರೋಧ ಪಕ್ಷದ ನಾಯಕ ಆರ್ ಅಶೋಕ್ ರಾಜ್ಯ ಕಾಂಗ್ರೆಸ್ ನಾಯಕರು ವಿರುದ್ಧ ವಾಗ್ದಾಳಿ ನಡೆಸಿದ್ದು, ಒದ್ದು ಕಿತ್ತು ಕೊಳ್ಳುತ್ತೇನೆ ಅಂತ ಡಿಸಿಎಂ ಡಿಕೆ ಶಿವಕುಮಾರ್ ಅವರು ಹೇಳಿದ್ದಾರೆ. ಸಿಎಂ ಸಿದ್ದರಾಮಯ್ಯಗೆ ಈ ಡಿನ್ನರ್ ಫೇರ್ವೆಲ್ ಪಾರ್ಟಿ ಇದ್ದಂತೆ. ಮೇಯರ್ ಅವಧಿ ಮುಗಿದ ಮೇಲೆ ಬೀಳ್ಕೊಡುಗೆ ಇಟ್ಟುಕೊಳ್ಳುತ್ತಿದ್ದೇವೆ ಆ ರೀತಿ ಆಗಿದೆ ಇವರ ಡಿನ್ನರ್ ಮೀಟಿಂಗ್ ಎಂದು ಅಶೋಕ್ ವ್ಯಂಗ್ಯವಾಡಿದರು. ಡಿಕೆ ಶಿವಕುಮಾರ್ ಯಾವಾಗ ಡಿನ್ನರ್ ಹಾಕಿಸುತ್ತಾರೆ ಅವಾಗ ಈ ಸರ್ಕಾರ…
ಬೀದರ್ : ಬೀದರ್ ನಲ್ಲಿ ಅಮಾನವೀಯ ಘಟನೆ ಒಂದು ನಡೆದಿದ್ದು ಮಗುವಿನ ಜನನ ಮತ್ತು ಹೆರಿಗೆ ಮುಚ್ಚಿಡುವ ಉದ್ದೇಶದಿಂದ ಗಂಡು ಮಗುವಿನ ಮರ್ತ ದೇಹವನ್ನು ಅಂಬೇಡ್ಕರ್ ವೃತ್ತದ ಬಳಿ ಬಿಸಾಡಿ ಹೋಗಿರುವ ಘಟನೆ ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ರುದನೂರ ಗ್ರಾಮದಲ್ಲಿ ನಡೆದಿದೆ. ಹೌದು ಬೀದರ್ ಜಿಲ್ಲೆಯ ಭಾಲ್ಕಿ ತಾಲ್ಲೂಕಿನ ರುದನೂರ ಗ್ರಾಮದಲ್ಲಿ ಅಂಬೇಡ್ಕರ್ ವೃತ್ತದ ಬಳಿ ನಿಜನ್ನೇ ಮಧ್ಯರಾತ್ರಿ ಅಪರಿಚಿತರು ಗಂಡು ಮಗುವಿನ ಮೃತ ದೇಹ ಬಿಸಾಡಿದ ಘಟನೆ ಜರುಗಿದೆ. ಘಟನೆಯ ಸಂಭಂದ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಯ ಆದೇಶದ ಮೇರೆಗೆ ತಾಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿ ದೂರಿನ ಅನ್ವಯ ಭಾಲ್ಕಿ ತಾಲೂಕು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು : ಕಳೆದ ಎರಡು ದಿನಗಳ ಹಿಂದೆ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಅವರು ಸರ್ಕಾರದ ಸಚಿವರುಗಳು ವಿಧಾನಸೌಧದಲ್ಲೇ 60% ಕಮಿಷನ್ ಪಡೆಯುತ್ತಿದ್ದಾರೆ ಎಂದು ಗಂಭೀರವಾದ ಆರೋಪ ಮಾಡಿದ್ದರು. ಇದೀಗ ಇವರ ಒಂದು ಆರೋಪಕ್ಕೆ ವಿಪಕ್ಷ ನಾಯಕ ಆರ್.ಅಶೋಕ್ ಧ್ವನಿಗೂಡಿಸಿದ್ದು, ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಅವರ ಹೇಳಿಕೆಯನ್ನು ನಾನು ಸಮರ್ಥನೆ ಮಾಡಿಕೊಳ್ಳುತ್ತೇನೆ. 60% ಪಡೆಯುತ್ತಿರುವುದು ನಿಜ ಎಂದು ಬೆಂಗಳೂರಿನಲ್ಲಿ ವಿಪಕ್ಷ ನಾಯಕ ಆರ್ ಅಶೋಕ್ ಕಾಂಗ್ರೆಸ್ ಸರ್ಕಾರದ ವಿರುದ್ಧ ಆರೋಪಿಸಿದರು. ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಮಿಷನ್ಗಾಗಿ ಕಾಂಗ್ರೆಸ್ ರಾಜ್ಯವನ್ನು ಲೂಟಿ ಮಾಡಿದೆ. ಸ್ವಲ್ಪ ಅಡ್ಜಸ್ಟ್ ಮಾಡಿಕೊಳ್ಳಿ ಅಂತ ಶಾಸಕ ಹಿಟ್ನಾಳ್ ಹೇಳಿದ್ದಾರೆ. ಓಟ್ ಹಾಕುವಾಗ ಅಡ್ಜಸ್ಟ್ ಮಾಡಿಕೊಳ್ಳಿ ಅಂತ ಹೇಳಬೇಕಿತ್ತು. ಕಾಂಗ್ರೆಸ್ ಶಾಸಕ ರಾಜು ಕಾಗೆ ಪ್ರತಿದಿನವೂ ಕೂಗುತ್ತಿದ್ದಾರೆ. ಅಭಿವೃದ್ಧಿ ಕುಂಠಿತ ಆಗಿದೆ ಎಂದು ಕಾಂಗ್ರೆಸ್ ಶಾಸಕರು ಹೇಳುತ್ತಿದ್ದಾರೆ. ಶೇಕಡ 5ರಷ್ಟು ಕಮಿಷನ್ ಜಾಸ್ತಿ ಮಾಡಲು ಕಾಂಗ್ರೆಸ್ ಹೊರಟಿದೆ. ಮುಂದಿನ…
ಬೆಂಗಳೂರು : ಅರಣ್ಯ ಅಪರಾಧ ತಡೆಗೆ ರಾಜ್ಯ ಸರ್ಕಾರ ಇದೀಗ ಮಹತ್ವದ ಕ್ರಮ ಕೈಗೊಂಡಿದ್ದು, ಅರಣ್ಯ ಅಪರಾಧ ತಡೆಗೆ ಆನ್ಲೈನ್ ಎಫ್ಐಆರ್ ವ್ಯವಸ್ಥೆಗೆ ಚಾಲನೆ ಅರಣ್ಯ ಇಲಾಖೆಯ ಸಚಿವ ಈಶ್ವರ ಖಂಡ್ರೆ ಅವರು ಇಂದು ಚಾಲನೆ ನೀಡಿದರು. ವಿಧಾನಸೌಧದಲ್ಲಿಂದು ಅರಣ್ಯ ಇಲಾಖೆ Wild Life Trust of India (WTI) ಸಹಯೋಗದೊಂದಿಗೆ ಅಭಿವೃದ್ಧಿಪಡಿಸಿರುವ ಗರುಡಾಕ್ಷಿ ಆನ್‌ಲೈನ್ / ಡಿಜಿಟಲ್ FIR ವ್ಯವಸ್ಥೆಗೆ ಚಾಲನೆ ನೀಡಿ ಮಾತನಾಡಿದ ಅವರು, ಇಂದಿನ ಆಧುನಿಕ ಯುಗಮಾನದ ಅಗತ್ಯಕ್ಕೆ ಅನುಗುಣವಾಗಿ ಅರಣ್ಯ ಇಲಾಖೆ ಬದಲಾಗುತ್ತಿದ್ದು, ಅರಣ್ಯ ಒತ್ತುವರಿ, ಅಕ್ರಮ ಮರ ಕಡಿತಲೆ, ಕಳ್ಳಬೇಟೆ, ಅತಿಕ್ರಮ ಪ್ರವೇಶ ಇತ್ಯಾದಿ ಅರಣ್ಯ ಅಪರಾಧಗಳಿಗೆ ಇನ್ನು ಮುಂದೆ ಗರುಡಾಕ್ಷಿ ಅಸ್ತ್ರ ಪ್ರಯೋಗಿಸಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಹೇಳಿದರು. ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಅರಣ್ಯ ಅಪರಾಧ ತಡೆಯಲು, ತಪ್ಪಿತಸ್ಥರಿಗೆ ಶಿಕ್ಷೆ ಆಗುವುದನ್ನು ಖಾತ್ರಿ ಪಡಿಸಲು ಹಾಗೂ ಆ ಮೂಲಕ ಅರಣ್ಯ ಮತ್ತು ವನ್ಯಜೀವಿ ಅಪರಾಧಗಳನ್ನು…
ತುಮಕೂರು : ಯುವಕನೋರ್ವ ಚಿರತೆ ಬಾಲ ಹಿಡಿದು ಬೋನಿಗೆ ಹಾಕಿದ ಘಟನೆ ತುಮಕೂರು ಜಿಲ್ಲೆ ತಿಪಟೂರು ತಾಲೂಕಿನ ರಂಗಾಪುರ ಗ್ರಾಮದಲ್ಲಿ ನಡೆದಿದೆ. ಯುವಕನ ಈ ಒಂದು ಸಾಹಸ ಹಾಗೂ ಧೈರ್ಯಕ್ಕೆ ಸ್ವತಃ ಅರಣ್ಯ ಸಂಬಂಧಿಗಳೇ ಶಾಕ್ ಗೆ ಒಳಗಾಗಿದ್ದಾರೆ. ಹೌದು ತುಮಕೂರು ಜಿಲ್ಲೆ ತಿಪಟೂರು ತಾಲೂಕಿನ ರಂಗಾಪುರ ಗ್ರಾಮದಲ್ಲಿ ಯುವಕನೋರ್ವ ಚಿರತೆ ಬಾಲ ಹಿಡಿದು ಬೋನಿಗೆ ಹಾಕಿದ ಘಟನೆ ಜರುಗಿದೆ.ಇಂದು ಪುರಲೇಹಳ್ಳಿ ರಸ್ತೆಯಲ್ಲಿರುವ ಕುಮಾರ್ ಎಂಬವರ ಮನೆ ಬಳಿ ಚಿರತೆ ಕಾಣಿಸಿಕೊಂಡಿದೆ.ಈ ಹಿನ್ನೆಲೆ ಅರಣ್ಯ ಇಲಾಖೆ ಸಿಬ್ಬಂದಿಗೆ ಮಾಹಿತಿ ನೀಡಲಾಗಿತ್ತು. ಅರಣ್ಯ ಇಲಾಖೆ ಸಿಬ್ಬಂದಿ ಬಲೆ ಬಿಟ್ಟು ಚಿರತೆ ಸೆರೆಹಿಡಿಯುವ ಸಲುವಾಗಿ ಸಕಲ ಸಲಕರಣೆಗಳೊಂದಿಗೆ ಬಂದಿದ್ದರು. ಆದರೆ ಚಿರತೆ ಸೆರೆಹಿಡಿಯಲಾಗದೇ ಕೈಚೆಲ್ಲಿ ಕುಳಿತರು. ಈ ವೇಳೆ ಗ್ರಾಮದ ಆನಂದ್ ಎಂಬವರು ಚಿರತೆ ಬಾಲ ಹಿಡಿದು ಬೋನಿಗೆ ಹಾಕಿದ್ದಾರೆ. 5 ವರ್ಷದ ಚಿರತೆಯನ್ನು ಯುವಕ ಸೆರೆಹಿಡಿದಿದ್ದನ್ನು ಕಂಡು ಅರಣ್ಯ ಇಲಾಖೆ ಸಿಬ್ಬಂದಿ ಶಾಕ್ ಆಗಿದ್ದಾರೆ.ಆನಂದ್ ಸಾಹಸಕ್ಕೆ ಇಡೀ ಸುತ್ತಮುತ್ತಲಿನ ಗ್ರಾಮಸ್ಥರೆಲ್ಲಾ ಖುಷಿಯಾಗಿದ್ದು, ಅವರ…
ಉತ್ತರಪ್ರದೇಶ : ಗಾಳಿಪಟ ಹಾರಿಸಲು ಗಾಜು ಮಿಶ್ರಿತ ದಾರ (ಮಾಂಜಾ) ವನ್ನು ಖರೀಸಿದ ಯುವಕರು, ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ಯುವಕನ ಕುತ್ತಿಗೆಗೆ ತಾಗಿದೆ. ಈ ವೇಳೆ ದಾರದಿಂದ ಕತ್ತು ಸೀಳಿ ಯುವಕ ಸಾವನ್ನಪ್ಪಿರುವ ಘೋರ ಘಟನೆ ಉತ್ತರ ಪ್ರದೇಶದ ಮೀರತ್ ನಲ್ಲಿ ನಡೆದಿದೆ. ಮೃತನನ್ನು ಸುಹೇಲ್(22) ಎಂದು ಗುರುತಿಸಲಾಗಿದೆ. ಸುಹೇಲ್ ಮತ್ತು ಆತನ ಸ್ನೇಹಿತ ನವಾಜಿಶ್ ಶಾಪಿಂಗ್ ಮುಗಿಸಿ ಮನೆಗೆ ಹಿಂತಿರುಗುತ್ತಿದ್ದಾಗ ಈ ಘಟನೆ ನಡೆದಿದೆ. ಘಟನೆಯಲ್ಲಿ ನವಾಜಿಶ್ ಗಂಭೀರವಾಗಿ ಗಾಯಗೊಂಡಿದ್ದಾನೆ ಎಂದು ತಿಳಿದು ಬಂದಿದೆ. ಇಬ್ಬರು ಗ್ಲಾಸ್ ಲೇಪಿತ ಗಾಳಿಪಟದ ತಂತಿಗಳನ್ನು ಖರೀದಿಸಿದ್ದರು, ಅದನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಚೈನೀಸ್ ಮಾಂಜಾ ಎಂನುಗ ಈ ಒಂದು ಗಾಜು ಮಿಶ್ರಿತ ದಾರವು ಭಾರತದಲ್ಲಿ ನಿಷೇಧವಿದ್ದರೂ ಅಕ್ರಮವಾಗಿ ಮಾರಾಟ ಮಾಡಲಾಗುತ್ತಿದೆ. ಘಟನೆಯ ನಂತರ, ಮೀರತ್ ಪೊಲೀಸರು ಚೈನೀಸ್ ಮಾಂಜಾವನ್ನು ಮಾರಾಟ ಮಾಡುವ ಅಂಗಡಿಗಳ ಮೇಲೆ ದಾಳಿ ನಡೆಸಿ ಐವರು ವ್ಯಾಪಾರಿಗಳನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ಚೈನೀಸ್ ಮಾಂಜಾವನ್ನು ತುಂಬಿದ ಮೂರು ಚೀಲಗಳನ್ನು ಜಪ್ತಿ ಮಾಡಿಕೊಂಡಿದ್ದಾರೆ.
ರಾಯಚೂರು : ಬಿಜೆಪಿಯ ಮಾಜಿ ಶಾಸಕ ಬಸವರಾಜ್ ದಡೆಸೂಗೂರು ವಿರುದ್ಧ ಇದೀಗ ಅಕ್ರಮ ಗಣಿಗಾರಿಕೆ ಆರೋಪ ಕೇಳಿ ಬಂದಿದ್ದು, ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಬೂದಿವಾಳ ಕ್ಯಾಂಪ್ ಬಳಿ ಅಕ್ರಮವಾಗಿ ಮರಮ್ ಗಣಿಗಾರಿಕೆ ನಡೆಸುತ್ತಿದ್ದಾರೆ ಎನ್ನುವ ಗಂಭೀರ ಆರೋಪ ಕೇಳಿ ಬಂದಿದೆ. ಹೌದು ಬಸವರಾಜ್ ದಡೆಸುಗೂರು ವಿರುದ್ಧ ಈ ಒಂದು ಗಂಭೀರವಾದ ಆರೋಪ ಕೇಳಿ ಬಂದಿದ್ದು, ಅಕ್ರಮ ಅವ್ಯಾಹತ ಗಣಿಗಾರಿಕೆ ನಡೆಸುತ್ತಿದ್ದುರು ಸಹ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಮೌನ ವಹಿಸಿದೆ. ಸರ್ವೇ ನಂಬರ್ 278/3 ರಲ್ಲಿ ಈ ಅಕ್ರಮ ಗಣಿಗಾರಿಕೆ ನಡೆಯುತ್ತಿದೆ. ರಾಜಧನ & ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅನುಮತಿ ಕೂಡ ಇಲ್ಲ. ಬಸವರಾಜ ದಡೆಸುಗುರು ವಿರುದ್ಧ ಅಕ್ರಮ ಗಣಿಗಾರಿಕೆ ನಡೆಸುತ್ತಿರುವ ಆರೋಪ ಕೇಳಿ ಬಂದಿದ್ದು, ವಕೀಲ ಜಗದೀಶ್ ಎನ್ನುವವರು ಕಳೆದ ನಾಲ್ಕೈದು ತಿಂಗಳಿಂದ ಹೋರಾಟ ಮಾಡುತ್ತಿದ್ದಾರೆ.ಈ ಕುರಿತು ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಸಿಂಧನೂರು ಇಲಾಖೆಗೆ ಹಾಗೆ ದೂರು ಕೊಟ್ಟಿದ್ದಾರೆ. ಆದರೆ ದೂರು…
ಬೆಂಗಳೂರು : ಆರ್ಥಿಕ ಸಹಾಯ ಮಾಡುವುದಾಗಿ ಕರೆದೊಯ್ದು ಬಲವಂತವಾಗಿ ಮದ್ಯ ಕುಡಿಸಿ 26 ವರ್ಷದ ಯುವತಿಯ ಮೇಲೆ ಅತ್ಯಾಚಾರ ನಡೆಸಿರುವ ಆರೋಪದ ಹಿನ್ನೆಲೆಯಲ್ಲಿ ಇದೀಗ ಬಿಜೆಪಿ ಮುಖಂಡ ಸೋಮಶೇಖರ್ ಜಯರಾಜ್ ವಿರುದ್ಧ ಸಂತ್ರಸ್ತ ಯುವತಿ ಬೆಂಗಳೂರಿನ ಅಶೋಕ್ ನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾಳೆ.ಈ ಸಂಬಂಧಪಟ್ಟ ಪೊಲೀಸರು ಬಿಜೆಪಿ ಮುಖಂಡನ ವಿರುದ್ಧ FIR ದಾಖಸಿಕೊಂಡಿದ್ದಾರೆ. ದೂರುದಾರ ಯುವತಿಗೆ ಆಕೆಯ ಸ್ನೇಹಿತ ಇಂದ ಸೋಮಶೇಖರ್ ಪರಿಚಯವಾಗಿತ್ತು ಕಳೆದ ವರ್ಷ ಯುವತಿಯ ಮದುವೆ ಹಿನ್ನೆಲೆಯಲ್ಲಿ ಸೋಮಶೇಖರ್ ಬಳಿ ಹಣದ ಸಹಾಯ ಕೇಳಿದ್ದಳು. ಹಾಗಾಗಿ ಸೋಮಶೇಖರ್ ಮಹಿಳೆ ಇರುವ ಪೀಜಿಗೆ ತೆರಳಿ, ಅಲ್ಲಿಂದ ಆಕೆಯನ್ನು ತನ್ನ ಫ್ಲಾಟ್ ಗೆ ಕರೆದುಕೊಂಡು ಹೋಗಿ ಬಲವಂತವಾಗಿ ಮದ್ಯ ಕುಡಿಸಿ ಅತ್ಯಾಚಾರ ಎಸಗಿದ್ದಾನೆ. ಅತ್ಯಾಚಾರ ಎಸಗಿದ ಬಳಿಕ ಯಾರಿಗಾದರೂ ಹೇಳಿದರೆ ಕೊಲೆ ಮಾಡುವ ಬೆದರಿಕೆ ಕೂಡ ಹಾಕಿದ್ದ ಎಂದು ಸಂತ್ರಸ್ತ ಯುವತಿ ದೂರಿನಲ್ಲಿ ತಿಳಿಸಿದ್ದಾರೆ. ಇದೀಗ ಯುವತಿಯ ದೂರಿನ ಅನ್ವಯ ಬಿಜೆಪಿ ಮುಖಂಡ ಸೋಮಶೇಖರ್ ಜಯರಾಜ್ ವಿರುದ್ಧ ಬೆಂಗಳೂರಿನ ಅಶೋಕ್…













