Subscribe to Updates
Get the latest creative news from FooBar about art, design and business.
Author: kannadanewsnow05
ಬೆಳಗಾವಿ : ಇನ್ನೇನು ಕೆಲವೇ ಕ್ಷಣಗಳಲ್ಲಿ ಬೆಳಗಾವಿಯ ಸುವರ್ಣ ಸೌಧದಲ್ಲಿ ಅಧಿವೇಶನ ಆರಂಭವಾಗಲಿದೆ. ಈ ಒಂದು ಅಧಿವೇಶನದಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಾಲ್ಮೀಕಿ ಹಗರಣ, ಮುಡಾ ಹಗರಣ, ವಕ್ಫ್ ವಿವಾದ, BPL ಕಾರ್ಡ್ ಪರಿಷ್ಕರಣೆ ಕುರಿತಂತೆ ವಿಪಕ್ಷಗಳು ಸರ್ಕಾರದ ವಿರುದ್ಧ ಮುಗಿಬೀಳುವ ಸಾಧ್ಯತೆ ಇದೆ ಎನ್ನಲಾಗಿದೆ. ಇದರ ಮಧ್ಯ ಬಳ್ಳಾರಿಯಲ್ಲಿ ಬಾಣಂತಿಯರ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮಾತನಾಡಿ, ಬಾಣಂತಿಯರ ಮರಣಗಳು ಆಗುತ್ತಿವೆ, ಪ್ರತಿ ವರ್ಷ ಆಸ್ಪತ್ರೆಯಲ್ಲಿ ಸಾವಿನ ಸಂಖ್ಯೆ ಇದ್ದೇ ಇರುತ್ತದೆ. ಅದನ್ನೆ ಮುಂದಿಟ್ಟುಕೊಂಡು ರಾಜಕೀಯ ಉದ್ದೇಶದಿಂದ ಮಾತನಾಡಬಾರದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು. ವ್ಯವಸ್ಥೆಗಳನ್ನು ಸರಿಪಡಿಸುವ ಕೆಲಸ ಸಾಕಷ್ಟು ಆಗುತ್ತಿದೆ. ಬಾಣಂತಿಯರ ಮರಣಗಳ ಬಗ್ಗೆ ಬೆಳಗಾವಿ ಅಧಿವೇಶನಲ್ಲಿ ಉತ್ತರ ಕೊಡಲಾಗುವುದು. ಸರ್ಕಾರ ಮೇಡಿಕಲ್ ಮಾಫಿಯಾ ಹಿಡಿತಕ್ಕೆ ಸಿಲುಕಿದೆಯಾ ಎಂಬ ವಿಚಾರವಾಗಿ ಸದನದಲ್ಲಿ ನಾನು ಚರ್ಚೆ ಮಾಡುತ್ತೇನೆ ಎಂದರು. ಆರೋಗ್ಯ ಇಲಾಖೆ ಬಗ್ಗೆ ಮಾತನಾಡಬೇಕು. ಬಳ್ಳಾರಿ ಆಸ್ಪತ್ರೆಯಲ್ಲಿ ಬಾಣಂತಿಯರ ಮರಣದ ವಿಚಾರವಾಗಿ ನಮಗೆ…
ಬಳ್ಳಾರಿ : ಬಳ್ಳಾರಿಯಲ್ಲಿ ಕೇವಲ ಒಂದೇ ತಿಂಗಳಲ್ಲಿ 6 ಜನ ಬಾಣಂತಿಯರು ಸಾವನ್ನಪ್ಪಿರುವ ಘಟನೆ ಭಾರಿ ಸದ್ದು ಮಾಡುತ್ತಿದೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಲಾಖೆಯ ಅಧಿಕಾರಿಗಳು ಬಾಣಂತಿಯರಿಗೆ ನೀಡಿದ್ದ ‘IV ಫ್ಲೂಯಿಡ್’ ಮಾದರಿಯನ್ನು ಪಡೆದು ಪರೀಕ್ಷೆಗೆ ಕಳುಹಿಸಿದ್ದರು. ಇದೀಗ ವರದಿ ಅಧಿಕಾರಿಗಳ ಕೈ ಸೇರಿದೆ. ‘ಎಂಡೋ ಟಾಕ್ಸಿನ್’ ಎಂಬ ಬ್ಯಾಕ್ಟೀರಿಯಾ ಅಂಶ ಪತ್ತೆ! ಅಧಿಕಾರಿಗಳ ಕೈ ಸೇರಿದ IV ಫ್ಲೂಯಿಡ್ ವರದಿಯಲ್ಲಿ ಬೆಚ್ಚಿಬಿಳಿಸುವ ಮಾಹಿತಿ ಬಹಿರಂಗವಾಗಿದ್ದು, ಫ್ಲೂಯಿಡ್‌ನಲ್ಲಿ ಎಂಡೋ ಟಾಕ್ಸಿನ್ ಎಂಬ ಬ್ಯಾಕ್ಟೀರಿಯಾ ಅಂಶ ಪತ್ತೆಯಾಗಿದೆ. ಇದು ಸಾವಿಗೆ ಕಾರಣವಾಗುವಂತಹ ಬ್ಯಾಕ್ಟೀರಿಯಾ ಎಂದು ಹೇಳಲಾಗುತ್ತದೆ. ಅಲ್ಲದೇ ಬಾಣಂತಿಯರಿಗೆ ಕೊಟ್ಟಿದ್ದ ಗ್ಲೂಕೋಸ್ ನಲ್ಲಿ ನ್ಯೂನತೆ ಕಂಡು ಬಂದಿದೆ.ಬಳ್ಳಾರಿಯಲ್ಲಿ ಬಾಣಂತಿಯರ ಸರಣಿ ಸಾವು ಸಂಭವಿಸಲು ಗ್ಲೂಕೋಸ್ ಕಾರಣವಾಗಿದೆ. ಯೋಗ್ಯವಲ್ಲದ ಐವಿ ಫ್ಲೂಯಿಡ್ ಬಳಕೆ ಮಾಡಲಾಗಿದೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮಾತನಾಡಿ, ಈ ಪ್ರಕರಣಕ್ಕೆ ಸಂಬಂಧಿಸಿ ಪಶ್ಚಿಮ ಬಂಗಾಳದ ತಯಾರಿಕಾ ಘಟಕಕ್ಕೆ ನಮ್ಮ ಅಧಿಕಾರಿಗಳು ಭೇಟಿ ನೀಡಿದ್ದರು. ಈಗಾಗಲೇ…
ಬೆಂಗಳೂರು : ಬೆಂಗಳೂರಿನಲ್ಲಿ ಇಂದು ಮತ್ತೊಂದು ಜೋಡಿ ಕೊಲೆ ನಡೆದಿದ್ದು, ಇಬ್ಬರು ಸೆಕ್ಯೂರಿಟಿ ಗಾರ್ಡ್ ಗಳನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಯಲಹಂಕ ನ್ಯೂ ಟೌನ್ ಬಸವೇಶ್ವರ ದೇವಸ್ಥಾನದ ಬಳಿ ಈ ಒಂದು ಜೋಡಿ ಕೊಲೆ ನಡೆದಿದೆ. ವಿಕ್ರಂ (21) ಮತ್ತು ತೂರಿ (33) ಕೊಲೆಯಾದ ಮೃತ ದುರ್ದೈವಿಗಳು ಎಂದು ತಿಳಿದುಬಂದಿದೆ. ಯಲಹಂಕ ಬಳಿಯ ಬಯಲು ಬಸವೇಶ್ವರ ದೇವಸ್ಥಾನದ ಬಳಿ ಈ ಒಂದು ಘಟನೆ ನಡೆದಿದೆ ಎನ್ನಲಾಗಿದೆ. ಇವರಿಬ್ಬರು ಸೆಕ್ಯೂರಿಟಿ ಗಾರ್ಡ್ ಗಳಾಗಿ ಕಾರ್ಯನಿರ್ವಹಿಸುತ್ತಿದ್ದರು ಎನ್ನಲಾಗಿದೆ. ನೇಪಾಳ ಮತ್ತು ಬಿಹಾರ ಮೂಲದ ಸೆಕ್ಯೂರಿಟಿ ಗಾರ್ಡ್ ಗಳಾಗಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ. ತಡರಾತ್ರಿ ಪಾರ್ಟಿ ಮಾಡುವ ವೇಳೆ ಗಲಾಟೆಯಾಗಿ ಕೊಲೆ ಆಗಿರಬಹುದು ಎಂದು ಶಂಕೆ ವ್ಯಕ್ತಪಡಿಸಲಾಗಿದೆ. ಘಟನ ಸ್ಥಳಕ್ಕೆ ಯಲಹಂಕ ನ್ಯೂ ಟೌನ್ ಪೊಲೀಸರು ಭೇಟಿ ನೀಡಿದ್ದು ಪರಿಶೀಲನೆ ನಡೆಸುತ್ತಿದ್ದಾರೆ.
ಬೆಳಗಾವಿ : ಇತ್ತೀಚಿಗೆ ಕಲಬುರ್ಗಿ ಕೇಂದ್ರ ಕಾರಾಗೃಹದಲ್ಲಿ ಕೈದಿಗಳು ಗಾಂಜಾ, ಸಿಗರೇಟ್, ಗುಟ್ಕಾ ಹಾಗೂ ಎಣ್ಣೆ ಪಾರ್ಟಿ ಮಾಡುತ್ತಿರುವ ವಿಡಿಯೋ ಭಾರಿ ಸದ್ದು ಮಾಡಿತ್ತು. ಜೈಲಿನ ಮುಖ್ಯ ಅಧಿಕ್ಷಕಿ ಅನಿತಾ ಅವರು ಇದಕ್ಕೆಲ್ಲ ಬ್ರೇಕ್ ಹಾಕಿದಕ್ಕೆ ನನ್ನ ವಿರುದ್ಧ ಕೈದಿಗಳು ಪಿತೂರಿ ನಡೆಸಿದ್ದಾರೆ ಎಂದು ಅನಿತಾ ಕೂಡ ಆರೋಪಿಸಿದ್ದರು. ಇದೀಗ ಬೆಳಗಾವಿಯ ಹಿಂಡಲಗಾ ಜೈಲಿನ ಕರ್ಮಕಾಂಡ ಕೂಡ ಬಯಲಾಗಿದೆ. ಹೌದು ಇಂದಿನಿಂದ ಬೆಳಗಾವಿಯಲ್ಲಿ ಅಧಿವೇಶನ ನಡೆಯುತ್ತಿದೆ. ಇದೇ ಸಂದರ್ಭದಲ್ಲಿ ಬೆಳಗಾವಿ ಹಿಂಡಲಗಾ ಜೈಲಿನ ಕೈದಿಗಳ ಐಷಾರಾಮಿ ಜೀವನ ಕೂಡ ಬಟಾ ಬಯಲಾಗಿದೆ. ಜೈಲಲ್ಲಿ ಇರುವ ಕೈದಿಗಳಿಗೆ ಗಾಂಜಾ, ಸಿಗರೇಟ್, ಬೀಡಿ ಸೇರಿದಂತೆ ಎಲ್ಲವೂ ಹೊರಗಿನಿಂದಲೇ ಸಪ್ಲೈ ಆಗುತ್ತಿದೆ. ಜೈಲಿನ ಸರ್ಕಲ್ ನಂಬರ್ 2ನೇ ಬ್ಯಾರಕ್ನಲ್ಲಿ ಕೈದಿಗಳು ಐಷಾರಾಮಿ ಜೀವನ ನಡೆಸುತ್ತಿದ್ದಾರೆ. ಹಣ ಕೊಟ್ಟರೆ ಕೈದಿಗಳಿಗೆ ಇಪ್ಪತ್ತು ಸಾವಿರ ಬೆಲೆ ಆಂಡ್ರಾಯ್ಡ್ ಮೊಬೈಲ್ ಕೂಡ ಸಿಗುತ್ತಿದೆ. ಶಿಕ್ಷೆ ಅನುಭವಿಸುತ್ತಿರುವ ಕೈದಿಯಿಂದಲೇ ಐಷಾರಾಮಿ ಜೀವನ ಅನಾವರಣವಾಗಿದೆ. ಜೈಲು ಅಧಿಕ ಕೃಷ್ಣಮೂರ್ತಿ.ಹಣ ಕೊಟ್ಟರೆ ಎಲ್ಲಾ ವ್ಯವಸ್ಥೆ…
ಬೆಂಗಳೂರು : ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ, ಬೆನ್ನು ನೋವಿನ ಸಮಸ್ಯೆ ತಿಳಿಸಿ ನಟ ದರ್ಶನವರು ಮಧ್ಯಂತರ ಜಾಮೀನು ಪಡೆದುಕೊಂಡಿದ್ದಾರೆ. ಆದರೆ 5 ವಾರ ಕಳೆದರೂ ಕೂಡ ಇದುವರೆಗೂ ದರ್ಶನ್ ಸರ್ಜರಿ ಮಾಡಿಸಿಲ್ಲ. ಹಾಗಾಗಿ ನಾಳೆ ಹೈಕೋರ್ಟ್ ನಲ್ಲಿ ನಟ ದರ್ಶನ್ ಅವರ ಜಾಮೀನು ಭವಿಷ್ಯ ನಿರ್ಧಾರವಾಗಲಿದೆ. ಹೌದು ನಾಳೆ ಹೈ ಕೋರ್ಟ್ ನಲ್ಲಿ ನಟ ದರ್ಶನ್ ಅವರ ಜಾಮೀನು ಅರ್ಜಿ ವಿಚಾರಣೆ ನಡೆಯಲಿದೆ. ಸರ್ಜರಿ ಕಾರಣ ನೀಡಿ ದರ್ಶನ್ ಅವರು ಮಧ್ಯಂತರ ಜಾಮೀನು ಪಡೆದುಕೊಂಡಿದ್ದಾರೆ. ಆದರೆ 5 ವಾರಗಳು ಕಳೆದರೂ ಕೂಡ ನಟ ದರ್ಶನವರು ಶಸ್ತ್ರಚಿಕಿತ್ಸೆ ಇದುವರೆಗೂ ಮಾಡಿಸಿಲ್ಲ. ಡಿಸೆಂಬರ್ 11ಕ್ಕೆ ಅವರ ಮಧ್ಯಂತರ ಜಾಮೀನು ಅವಧಿ ಅಂತ್ಯವಾಗಲಿದೆ. ಹಾಗಾಗಿ ಮಧ್ಯಂತರ ಜಾಮೀನು ವಿಸ್ತರಣೆಗೆ ಅರ್ಜಿ ಸಲ್ಲಿಸುವ ಸಾಧ್ಯತೆ ಇದೆ ಎನ್ನಲಾಗಿದೆ. ಕಳೆದ ವಿಚಾರಣೆಯ ವೇಳೆ ನಟ ದರ್ಶನ್ ಪರ ಹಿರಿಯ ವಕೀಲರಾದಂತಹ ಸಿವಿ ನಾಗೇಶ್ ಅವರು, ಸುಧೀರ್ಘವಾದ ಅಂತಹ ವಾದ ಮಂಡನೆ ಮಾಡಿದ್ದರು. ಬಳಿಕ ಸರ್ಕಾರದ…
ಹಾವೇರಿ : ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಕಾಂಗ್ರೆಸ್ 3 ಕ್ಷೇತ್ರಗಳಲ್ಲಿ ಗೆದ್ದು ಬೀಗಿದೆ ಈ ಹಿನ್ನೆಲೆಯಲ್ಲಿ ಇಂದು ಹಾವೇರಿ ಜಿಲ್ಲೆಯ ಸವಣೂರಲ್ಲಿ ಕಾಂಗ್ರೆಸ್ ಕೃತಜ್ಞತಾ ಸಮಾವೇಶ ಹಮ್ಮಿಕೊಂಡಿದೆ. ಈ ಒಂದು ಸಮಾವೇಶದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಅರ್ಹ ಬಿಪಿಎಲ್ ಕಾರ್ಡ್ ಫಲಾನುಭವಿಗಳಿಗೆ ಯಾವುದೇ ಕಾರಣಕ್ಕೂ ಅಕ್ಕಿ ಕಡಿಮೆ ಮಾಡಲ್ಲ ಎಂದು ತಿಳಿಸಿದರು. ಇಂದು ಹಾವೇರಿ ಜಿಲ್ಲೆಯ ಸವಣೂರಲ್ಲಿ ಕಾಂಗ್ರೆಸ್ ಕೃತಜ್ಞತಾ ಸಮಾವೇಶದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಅರ್ಹ ಬಿಪಿಎಲ್ ಕಾರ್ಡ್ ದಾರರಿಗೆ ಅಕ್ಕಿ ಕಡಿಮೆ ಮಾಡಲ್ಲ. ಬಿಪಿಎಲ್ ಕಾರ್ಡ್ ಕಿತ್ತುಕೊಳ್ಳಲ್ಲ. ಅರ್ಹ ಇರುವ ಎಲ್ಲರಿಗೂ ಅಕ್ಕಿ ಕೊಡುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದರು. ದೇಶದಲ್ಲಿ ನಮ್ಮ ರಾಜ್ಯದಲ್ಲಿ ಅಷ್ಟೇ 10 ಕೆಜಿ ಅಕ್ಕಿ ಕೊಡುತ್ತಿದ್ದೇವೆ. 5 ಕೆಜಿ ಅಕ್ಕಿ ಹಾಗೂ 5 ಕೆಜಿ ಅಕ್ಕಿಗೆ ತಗುಲುವ ಹಣ ಕೊಡುತ್ತಿದ್ದೇವೆ. ಕೇಂದ್ರ ಸರ್ಕಾರ ಅಕ್ಕಿ ಇಟ್ಟುಕೊಂಡು ಸಹ ಅಕ್ಕಿ ಕೊಡಲಿಲ್ಲ. ಬಿಜೆಪಿ ಅಧಿಕಾರ ಇರುವ ರಾಜ್ಯದಲ್ಲಿ 10 ಕೆಜಿ…
ಹಾವೇರಿ : ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಕಾಂಗ್ರೆಸ್ 3 ಕ್ಷೇತ್ರಗಳಲ್ಲಿ ಗೆದ್ದು ಬೀಗಿದೆ ಈ ಹಿನ್ನೆಲೆಯಲ್ಲಿ ಇಂದು ಹಾವೇರಿ ಜಿಲ್ಲೆಯ ಸವಣೂರಲ್ಲಿ ಕಾಂಗ್ರೆಸ್ ಕೃತಜ್ಞತಾ ಸಮಾವೇಶ ಹಮ್ಮಿಕೊಂಡಿದೆ. ಈ ಒಂದು ಸಮಾವೇಶದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಕರ್ನಾಟಕ ಬಿಟ್ಟು ಬಿಜೆಪಿ ಅಧಿಕಾರದಲ್ಲಿರುವ ರಾಜ್ಯಗಳಲ್ಲಿ 10 ಕೆಜಿ ಅಕ್ಕಿ ಕೊಡುತ್ತಿದ್ದರೆ ನಾನು ರಾಜೀನಾಮೆ ಕೊಡುತ್ತೇನೆ ಎಂದು ಸವಾಲು ಹಾಕಿದರು. ಇಂದು ಹಾವೇರಿ ಜಿಲ್ಲೆಯ ಸವಣೂರಲ್ಲಿ ಕಾಂಗ್ರೆಸ್ ಕೃತಜ್ಞತಾ ಸಮಾವೇಶದಲ್ಲಿ ಮಾತನಾಡಿದ ಅವರು, ದೇಶದಲ್ಲಿ ನಮ್ಮ ರಾಜ್ಯದಲ್ಲಿ ಅಷ್ಟೇ 10 ಕೆಜಿ ಅಕ್ಕಿ ಕೊಡುತ್ತಿದ್ದೇವೆ. 5 ಕೆಜಿ ಅಕ್ಕಿ ಹಾಗೂ 5 ಕೆಜಿ ಅಕ್ಕಿಗೆ ತಗುಲುವ ಹಣ ಕೊಡುತ್ತಿದ್ದೇವೆ. ಕೇಂದ್ರ ಸರ್ಕಾರ ಅಕ್ಕಿ ಇಟ್ಟುಕೊಂಡು ಸಹ ಅಕ್ಕಿ ಕೊಡಲಿಲ್ಲ. ಬಿಜೆಪಿ ಅಧಿಕಾರ ಇರುವ ರಾಜ್ಯದಲ್ಲಿ 10 ಕೆಜಿ ಅಕ್ಕಿ ಕೊಡುತ್ತಾರಾ? ಬಿಜೆಪಿ 10 ಕೆಜಿ ಅಕ್ಕಿ ಕೊಡ್ದಿದ್ರೆ ರಾಜೀನಾಮೆ ಕೊಡುತ್ತೇನೆ ಎಂದು ಸವಾಲು ಹಾಕಿದರು. ಬಡವರ ಹೊಟ್ಟೆಯ ಮೇಲೆ ಹೊಡೆಯುತ್ತಿದ್ದಾರೆ ಎಂದು…
ಬೆಂಗಳೂರು : ಈಗಾಗಲೇ ಫೆಂಗಲ್ ಚಂಡಮಾರುತದ ಪರಿಣಾಮದಿಂದ ರಾಜ್ಯದ ಅನೇಕ ಕಡೆಗಳಲ್ಲಿ ಅವಾಂತರ ಸೃಷ್ಟಿಯಾಗಿವೆ, ಇದರ ಬೆನ್ನಲ್ಲೇ ಮುಂದಿನ ಎರಡು ವಾರಗಳ ಕಾಲ ಮಂಗಳ ಕೊಲ್ಲಿ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗಲಿದ್ದು ರಾಜ್ಯದಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಲಿದ್ದು, ಇದರ ಪ್ರಭಾವದಿಂದ ದಕ್ಷಿಣ ಒಳನಾಡಿನ ಬಹುತೇಕ ಎಲ್ಲಾ ಜಿಲ್ಲೆಗಳು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಡಿಸೆಂಬರ್ 14 ಮತ್ತು 15 ರಂದು ಮಳೆಯಾಗಲಿದೆ. 2 ನೇ ವಾಯುಭಾರ ಕುಸಿತ ಡಿಸೆಂಬರ್ 16 ಕ್ಕೆ ಉಂಟಾಗಲಿದ್ದು, ಡಿಸೆಂಬರ್ 17 – 18 ಕ್ಕೆ ಜೋರು ಮಳೆಯಾಗಲಿದೆ ಎಂದು ಹವಾಮಾನ ತಜ್ಞರು ಮಾಹಿತಿ ನೀಡಿದ್ದಾರೆ. ಕಳೆದ ಒಂದು ವಾರ ಫೆಂಗಲ್ ಚಂಡಮಾರುತ ಅಬ್ಬರಕ್ಕೆ ದಕ್ಷಿಣ ಕರ್ನಾಟಕ ಹಾಗೂ ಕರಾವಳಿ ಜನ ಕಂಗಾಲಾಗಿದ್ದಾರೆ.ಕಳೆದ ಒಂದು ವಾರ ಪೂರ್ತಿ ದಕ್ಷಿಣ ಕರ್ನಾಟಕ ಜಿಲ್ಲೆಗಳು, ಕರಾವಳಿಯ ಮೂರು ಜಿಲ್ಲೆಗಳ ಮಳೆ, ಗಾಳಿ, ಚಳಿ ಹೆಚ್ಚಿತ್ತು. ಈ ಫೆಂಗಲ್ ಚಂಡಮಾರುತದ ಹಾನಿಯಿಂದ…
ಬೆಂಗಳೂರು : ತಮಿಳುನಾಡಿನಲ್ಲಿ ಉಂಟಾದ ಫೆಂಗಲ್ ಚಂಡಮಾರುತದ ಪರಿಣಾಮ ಕರ್ನಾಟಕದ ಮೇಲು ಬೀರಿದೆ. ಕಳೆದ ಹಲವಾರು ದಿನಗಳಿಂದ ರಾಜ್ಯದ ಹಲವು ಭಾಗಗಳಲ್ಲಿ ಹಲವಾರು ಅವಾಂತರ ಸೃಷ್ಟಿಯಾಗಿವೆ. ಈ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಏಕಾಏಕಿ ತರಕಾರಿ ಬೆಲೆ ಏರಿಕೆಯಾಗಿದೆ. ಹೌದು ಫೆಂಗಲ್ ಚಂಡಮಾರುತದಿಂದಾಗಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಿದ್ದು, ತರಕಾರಿ ಇಳುವರಿ ಮೇಲೆ ಪರಿಣಾಮ ಬೀರಿದೆ. ಇದರಿಂದಾಗಿ ಮಾರುಕಟ್ಟೆಗೆ ಪೂರೈಕೆ ಗಣನೀಯವಾಗಿ ಇಳಿದಿದ್ದು, ತರಕಾರಿ ಬೆಲೆ ಗಗನಕ್ಕೇರಿದೆ. ದಿಢೀರ್ ತರಕಾರಿ ಬೆಲೆ ಏರಿಕೆಯಿಂದಾಗಿ ಜನರ ಜೇಬಿಗೆ ಮತ್ತಷ್ಟು ಕತ್ತರಿ ಬಿದ್ದಿದೆ. ಟೊಮ್ಯಾಟೋ ಕೆಜಿಗೆ 60 ರಿಂದ 70 ಏರಿಕೆಯಾಗಿದೆ, ಅದೇ ರೀತಿಯಾಗಿ ನುಗ್ಗೇಕಾಯಿ 500 ರೂ, ಬಟಾಣಿ, ಕೆಜಿಗೆ 180 ರಿಂದ 200 ರೂ, ಮೆಣಸಿನಕಾಯಿ ಕೆಜಿಗೆ 40 ರಿಂದ 50 ರೂ, ಆಲೂಗಡ್ಡೆ ಕೆಜಿಗೆ 35 ರಿಂದ 40 ರೂ, ಬೀನ್ಸ್ ಕೆಜಿಗೆ 60 ರೂ, ಕ್ಯಾರೆಟ್ ಕೆಜಿಗೆ 60 ರಿಂದ 80 ರೂ, ಹಾಗೂ ಗ್ರೀನ್ ಕ್ಯಾಪ್ಸಿಕ್ಸಂ ಕೆಜಿಗೆ 50…
ಹುಬ್ಬಳ್ಳಿ : ಬಳ್ಳಾರಿಯಲಿ ಬಾಣಂತಿಯರ ಸಾವು ಪ್ರಕರಣಕ್ಕೆ ಸಂಬಂಧಪಟ್ಟಂತೆ, ಈಗಾಗಲೇ ಸರ್ಕಾರ ತನಿಖೆಗೆ ಆದೇಶ ನೀಡಿದೆ. ಇದರ ಬೆನ್ನಲ್ಲೇ ಬೆಳಗಾವಿಯಲ್ಲಿಯೂ ಕೂಡ ಬಾಣಂತಿಯರ ಹಾಗೂ ಶಿಶುಗಳ ಸಾವು ಬೆಳಕಿಗೆ ಬಂದಿದೆ. ಇದೀಗ ಈ ಎಲ್ಲಾ ಬಾಣಂತಿಯರ ಸಾವಿಗೆ ಅಂದಿನ ಸಿಎಂ ಹಾಗೂ ಆರೋಗ್ಯ ಸಚಿವರೇ ಹೊಣೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಗಂಭೀರವಾದ ಆರೋಪ ಮಾಡಿದರು. ಹುಬ್ಬಳ್ಳಿಯಲ್ಲಿ ಮಾಧ್ಯಮಗಳೊಂದಿಗೆ, ಬಳ್ಳಾರಿಯಲಿ ಬಾಣಂತಿಯರ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ನೀಡುತ್ತೇವೆ. ಬಿಜೆಪಿಗರು ಕೋವಿಡ್ ವೇಳೆ ಔಷಧಿಯನ್ನು ಖರೀದಿಸಿದ್ದಾರೆ. ಅಲ್ಲದೆ ಒಂದಕ್ಕೆ ಹತ್ತು ಪಟ್ಟು ದುಡ್ಡು ಕೊಟ್ಟು ಖರೀದಿಸಿದ್ದಾರೆ. ಟೆಂಡರ್ ಕರೆಯದೆ ಔಷಧ ಖರೀದಿ ಮಾಡಿದ್ದಾರೆ. ಅಂದಿನ ಸಿಎಂ ಮತ್ತು ಆರೋಗ್ಯ ಸಚಿವರು ಇದಕ್ಕೆ ಹೊಣೆ ಎಂದು ವಾಗ್ದಾಳಿ ನಡೆಸಿದರು. ಕಳಪೆ ಔಷಧಿ ಕೊಟ್ಟ ಕಂಪನಿಯ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ. ಕಳಪೆ ಔಷಧ ನೀಡಿದಂತಹ ಕಂಪನಿ ಬ್ಲಾಕ್ ಲಿಸ್ಟ್ ಗೆ ಸೇರಿಸಲು ಹೇಳಿದ್ದೇನೆ. ಡ್ರಗ್ ಕಂಟ್ರೋಲರ್ ಅವರನ್ನು…











