Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ರಾಜ್ಯದಲ್ಲಿ ದಿನದಿಂದ ದಿನಕ್ಕೆ ರಸ್ತೆ ಅಪಘಾತಗಳು ಹೆಚ್ಚುತ್ತಿವೆ. ಈ ಕುರಿತಾಗಿ ಟ್ವೀಟ್ ಮಾಡಿರುವ ಟ್ರಾಫಿಕ್ ಹಾಗೂ ರಸ್ತೆ ಸುರಕ್ಷತಾ ವಿಭಾಗದ ಎಡಿಜಿಪಿ ಅಲೋಕ್ ಕುಮಾರ್ ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ ರಸ್ತೆ ಅಪಘಾತಗಳಲ್ಲಿ 51 ಜನರು ಸಾವನ್ನಪ್ಪಿದ್ದಾರೆ ಎಂದು ತಿಳಿಸಿದ್ದಾರೆ. ಬೈಕ್ ಗೆ ಲಾರಿ ಡಿಕ್ಕಿ : ಪ್ರಿಯಕರ ಸಾವು, ಯುವತಿಗೆ ಗಾಯ ಅದರಂತೆ ಇಂದು ಬೈಕ್ಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಯುವಕ ಸ್ಥಳದಲ್ಲೇ ಸಾವನ್ನಪ್ಪಿದ್ದು, ಹಿಂಬದಿ ಕುಳಿತಿದ್ದ ಯುವತಿಗೆ ಗಂಭೀರ ಗಾಯವಾಗಿರುವಂತಹ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ರಾಷ್ಟ್ರೀಯ ಹೆದ್ದಾರಿ4 ಟಿ.ಬೇಗೂರು ಬಳಿ ಅಪಘಾತ ಸಂಭವಿಸಿದೆ. ಯುವಕ ಮತ್ತು ಯುವತಿ ಟ್ರಿಪ್ ಮುಗಿಸಿ ವಾಪಸ್ ಬರುತ್ತಿದ್ದರು.ತುಮಕೂರಿನ ಮಂದಾರ ಗಿರಿಯಿಂದ ವಾಪಸ್ ಬರುವ ವೇಳೆ ಅಪಘಾತ ಸಂಭವಿಸಿದೆ. ಕೊಪ್ಪಳದ ಜೇಮ್ಸ್ (23) ಮೃತ ಯುವಕ ಎಂದು ಹೇಳಲಾಗುತ್ತಿದ್ದು, ಚೈತ್ರ (23)ಗೆ ಹೆಸರಘಟ್ಟ ರಸ್ತೆಯ ಸಪ್ತಗಿರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನಿಡಲಾಗುತ್ತಿದೆ. ಅಪಘಾತ ಬಳಿಕ…
ಬೆಂಗಳೂರು : ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ವಿದೇಶದಲ್ಲಿ ಇರುವ ಪ್ರಜ್ವಲ್ ರೇವಣ್ಣ ಬರೋಬ್ಬರಿ ಒಂದು ತಿಂಗಳ ನಂತರ ಪ್ರತ್ಯಕ್ಷವಾಗಿದ್ದಾರೆ ವಿದೇಶದಲ್ಲಿ ಇದ್ದುಕೊಂಡು ವಿಡಿಯೋ ಮುಖಾಂತರ ಹೇಳಿಕೆ ನೀಡಿದ್ದು ಮೇಲ್ 31 ರಂದು 10 ಗಂಟೆಗೆ ಎಸ್ಐಟಿ ವಿಚಾರಣೆಗೆ ಹಾಜರಾಗಲಿದ್ದೇನೆ ಎಂದು ಹೇಳಿದ್ದಾರೆ. ಇದೀಗ ಈ ಒಂದು ವಿಡಿಯೋ ವಿಚಾರ ರಾಜ್ಯದಲ್ಲಿ ಭಾರಿ ಸದ್ದು ಮಾಡುತ್ತಿದ್ದು, ಸಚಿವರುಗಳು ಎಲ್ಲಾ ಪಕ್ಷದ ನಾಯಕರಗಳು ಒಂದೊಂದು ರೀತಿಯಲ್ಲಿ ಪ್ರತಿಕ್ರಿಯೆ ನೀಡುತ್ತಿದ್ದಾರೆ ಇದೀಗ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಕೂಡ ಪ್ರತಿಕ್ರಿಯೆ ನೀಡಿದ್ದು, ಎಲ್ಲದಕ್ಕೂ ಕಾಲವೇ ಉತ್ತರಿಸಲಿದೆ ಎಂದು ತಿಳಿಸಿದ್ದಾರೆ. ತನ್ನ ವಿಡಿಯೋದಲ್ಲಿ ಪಜ್ವಲ್, ನನ್ನ ವಿರುದ್ಧ ಪಿತೂರಿ ನಡೆದಿದೆ, ಷಡ್ಯಂತ್ರವೊಂದಕ್ಕೆ ತಾನು ಬಲಿಯಾಗಿದ್ದೇನೆ ಅಂತ ಹೇಳಿರುವುದಕ್ಕೆ ಪ್ರತಿಕ್ರಯಿಸಿದ ಶಿವಕುಮಾರ್, ಯಾರು ಏನು ಬೇಕಾದರೂ ಹೇಳಿಕೊಳ್ಳಲಿ, ಮಾತಾಡುವವರ ಬಾಯಿಗೆ ಬೀಗ ಹಾಕಲಾಗುತ್ತಾ ಅಂತ ಹೇಳಿದರು. ರಾಹುಲ್ ಗಾಂಧಿಯ ಹೆಸರು ಸಹ ಪ್ರಜ್ವಲ್ ಪ್ರಸ್ತಾಪ ಮಾಡಿದ್ದಾರೆ ಎಂದಾಗ ಶಿವಕುಮಾರ್ ಎಲ್ಲಾದಕ್ಕೂ ಕಾಲವೇ ಉತ್ತರ ನೀಡಲಿದೆ ಎಂದರು.
ಚಿಕ್ಕಬಳ್ಳಾಪುರ : ಪ್ರಜ್ವಲ್ ಪೆನ್ ಡ್ರೈವ್ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದು ಸಚಿವರು, ಅಧಿಕಾರಿಗಳೇ ನಿಮಗೂ ಅಕ್ಕ, ತಂಗಿ, ತಾಯಿ ಇಲ್ವಾ? ಎಂದು ಆಕ್ರೋಶವನ್ನು ಹೊರಹಾಕಿದ್ದಾರೆ. ಚಿಕ್ಕಬಳ್ಳಾಪುರದಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್ಡಿ ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದು, ತಪ್ಪಿತಸ್ಥರು ಯಾರೇ ಆಗಿದ್ರೂ ಶಿಕ್ಷೆಯಾಗಲಿ. ಪೆನ್ಡ್ರೈವ್ ಹಂಚಿದವರ ತಪ್ಪು ಇಲ್ಲ ಅಂತಾ ಸಿಎಂ ಹೇಳಿದ್ದಾರೆ. ಪೆನ್ಡ್ರೈವ್ ಹಂಚಿದವರ ರಕ್ಷಣೆಗೆ ಇದ್ದೇವೆಂದು ಹೇಳಿದಂತಾಗಿದೆ. ನೊಂದವರಿಗೆ ಸರ್ಕಾರ ಏನು ಸಾಂತ್ವನ ಹೇಳ್ತಿದೆ ವಾಗ್ದಾಳಿ ಮಾಡಿದ್ದಾರೆ. ಒಂದು ಚುನಾವಣೆ ಗೆಲ್ಲಲು ಇಷ್ಟು ಕೀಳು ಮಟ್ಟಕ್ಕೆ ಇಳಿದಿದ್ದಾರೆ. ಸಚಿವರು, ಅಧಿಕಾರಿಗಳೇ ನಿಮಗೂ ಅಕ್ಕ, ತಂಗಿ, ತಾಯಿ ಇಲ್ವಾ? ಪ್ರಜ್ವಲ್ ಪ್ರಕರಣದ ತನಿಖೆಯನ್ನು ಸಮರ್ಪಕವಾಗಿ ಮಾಡುತ್ತಿಲ್ಲ. ಪ್ರಕರಣವನ್ನು ಸಿಬಿಐಗೆ ಕೊಟ್ಟರೆ ಸರ್ಕಾರ ಸಿಕ್ಕಿ ಹಾಕಿಕೊಳ್ಳುತ್ತದೆ. ಪೆನ್ಡ್ರೈವ್ ಹಂಚಿದವರು ಸಿಕ್ಕಿ ಬೀಳ್ತಾರೆ, ಅದಕ್ಕೆ ಸಿಬಿಐಗೆ ಕೊಡುತ್ತಿಲ್ಲ ಎಂದು ಹೇಳಿದ್ದಾರೆ.
ತುಮಕೂರು : ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಜ್ವಲ್ ರೇವಣ್ಣ ತಾನೇ ಶರಣಾದರು SIT ಅರೆಸ್ಟ್ ಮಾಡಿದರು ಬಂಧನ ಆಗೋದಂತೂ ಖಚಿತ ಎಂದು ಗೃಹ ಖಾತೆ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ. ತುಮಕೂರಲ್ಲಿ ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ಪ್ರಜ್ವಲ್ ವಿರುದ್ಧ ಅರೆಸ್ಟ್ ವಾರಂಟ್ ಜಾರಿ ಆಗಿದೆ. ಬ್ಲೂ ಕಾರ್ನರ್ ನೋಟಿಸ್, ವಾರಂಟ್ ಜಾರಿ ಹಿನ್ನೆಲೆ ಅರೆಸ್ಟ್ ಮಾಡಬೇಕು. ಎಸ್ಐಟಿಯವರು ಯಾವ ರೀತಿ ಕ್ರಮ ತೆಗೆದುಕೊಳ್ಳತ್ತಾರೆಂದು ನೋಡಬೇಕು ಎಂದು ಹೇಳಿದ್ದಾರೆ. ಪ್ರಜ್ವಲ್ ರೇವಣ್ಣ ವಿಡಿಯೋ ಮೂಲಕ ಇದೇ ತಿಂಗಳ 31 ರಂದು ಬೆಳಗ್ಗೆ 10 ಗಂಟೆಗೆ ಎಸ್ ಐಟಿ ಗೆ ಬರ್ತಿನಿ ಎಂದಿದ್ದಾರೆ. ಅವರಿಗೆ ಸಹಕಾರ ಮಾಡ್ತಿನಿ ಅಂತ ಹೇಳ್ತಿರೋದನ್ನ ನಾನು ಸ್ವಾಗತ ಮಾಡುತ್ತೇನೆ. ಕರ್ನಾಟಕದ ಇತಿಹಾಸದಲ್ಲಿ ಇಂತಹ ಘಟನೆ ನಡೆದಿರಲಿಲ್ಲ. ಇಡೀ ಜಗತ್ತೆ ಮಾತನಾಡುವ ಸಂದರ್ಭದಲ್ಲಿ ಅವರನ್ನ ಕರೆತರುವ ಪ್ರಯತ್ನವನ್ನ ಎಲ್ಲ ರೀತಿ ನಡೆಯುತ್ತಿತ್ತು. ಪ್ರಧಾನಮಂತ್ರಿಗಳಿಗೆ, ಮುಖ್ಯಮಂತ್ರಿಗಳು ಎರಡು ಬಾರಿ ಪತ್ರ ಬರೆದಿದ್ದರು. ಸಿಬಿಐಗೆ ರಿಕ್ವೆಸ್ಟ್ ಮಾಡಿಕೊಂಡಿದ್ದೆವು. ಇಂಟರ್ ಪೋಲ್ ಗೆ…
ತುಮಕೂರು : ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ವಿದೇಶದಲ್ಲಿರುವ ಸಂಸದ ಪ್ರಜ್ವಲ ರೇವಣ್ಣ ವಿಡಿಯೋ ಹೇಳಿಕೆ ಬಿಡುಗಡೆ ಮಾಡಿದ್ದಾರೆ ಈ ಕುರಿತಂತೆ ಪ್ರತಿಕ್ರಿಯೆ ನೀಡಿದ ಜಿ ಪರಮೇಶ್ವರ್ ಅವರು, ಪ್ರಜ್ವಲ್ ಪ್ರಕರಣದಲ್ಲಿ ಕೇಂದ್ರ ಸರ್ಕಾರ ನಮಗೆ ಸಹಕಾರ ಕೊಡಲಿಲ್ಲ ಎಂದರು. ಸಂಸದ ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣ ಕೇಂದ್ರ ಸರ್ಕಾರದ ಮೇಲೆ ಗೂಬೆಕೂರಿಸಿದ ಗೃಹ ಸಚಿವ ಪರಮೇಶ್ವರ್, ಪ್ರಜ್ವಲ್ ಪ್ರಕರಣದಲ್ಲಿ ಕೇಂದ್ರ ಸರ್ಕಾರ ನಮಗೆ ಸಹಕಾರ ಕೊಡಲಿಲ್ಲ ಎಂದು ತುಮಕೂರಿನಲ್ಲಿ ಸಚಿವ ಜಿ ಪರಮೇಶ್ವರ್ ಹೇಳಿಕೆ ನೀಡಿದರು. ರಾಜತಾಂತ್ರಿಕ ಪಾಸ್ಪೋರ್ಟ್ ರದ್ದು ಮಾಡುತ್ತೇವೆ ಎಂದು ಹೇಳಿದ್ದರೂ ಅಷ್ಟೇ ವಿದೇಶಾಂಗ ಇಲಾಖೆ ಸಚಿವರು ಪಾಸ್ ಪೋರ್ಟ್ ರದ್ದು ಮಾಡಿರಲಿಲ್ಲ ನಾವು ಬರೆದ ಪತ್ರಗಳಿಗೆ ಇನ್ನೂ ಯಾವುದೇ ಪ್ರತಿಕ್ರಿಯೆ ಬಂದಿಲ್ಲ ಎಂದು ತುಮಕೂರಿನಲ್ಲಿ ಗ್ರಹ ಇಲಾಖೆ ಸಚಿವ ಜಿ ಪರಮೇಶ್ವರ್ ತಿಳಿಸಿದರು. ಪ್ರಜ್ವಲ್ ರೇವಣ್ಣ ವಿಡಿಯೋ ಮೂಲಕ ಇವತ್ತು ತಿಳಿಸಿದ್ದಾರೆ 31ರಂದು ಎಸ್ಐಟಿ ಅಧಿಕಾರಿಗಳ ಮುಂದೆ ಹಾಜರಾಗಿ ಸಾಕಾರ ನೀಡುತ್ತೇನೆ ಎಂದು…
ಬೆಂಗಳೂರು : ಮೈಸೂರಿನ ಕೆ ಆರ್ ನಗರ ಮಹಿಳೆ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣಗೂ ಕೂಡ ಬಂಧನದ ಭೀತಿ ಎದುರಾಗಿದ್ದರಿಂದ ಅವರು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ವಿಚಾರಣೆಯನ್ನು ನಡೆಸಿದ ನ್ಯಾಯಾಲಯವು ಅರ್ಜಿ ವಿಚಾರಣೆಯನ್ನು ನಾಳೆಗೆ ಮುಂದೂಡಿದೆ. ಮೈಸೂರಿನ ಕೆ ಆರ್ ನಗರ ಮಹಿಳೆಯ ಅಪಹರಣ ಪ್ರಕರಣದಲ್ಲಿ ಬಂಧನದ ಭೀತಿಯಿಂದ ನಿರೀಕ್ಷಣ ಜಾಮೀನು ಅರ್ಜಿಯನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ವಿಚಾರಣೆ ನಡೆಯಿಸಲಾಯಿತು. ವಿಚಾರಣೆಗೆ ಹಾಜರಾಗುವಂತೆ ಭವಾನಿಗೆ ನೋಟಿಸ್ ನೀಡಲಾಗಿದೆ.ಯಾವ ನಿಯಮದರಿ ನೋಟಿಸ್ ನೀಡಿದ್ದಾರೆ ಎಂದು ಎಸ್ಐಟಿ ತಿಳಿಸಿಲ್ಲ. ಹೀಗಾಗಿ ಭವಾನಿ ರೇವಣ್ಣಗೂ ಬಂಧನದ ಭೀತಿ ಇರುವುದರಿಂದ ಭವಾನಿ ರೇವಣ್ಣ ಪರ ವಕೀಲರು ಮದನ್ ತರ ನಿರೀಕ್ಷಣ ಜಾಮೀನು ನೀಡುವಂತೆ ಮನವಿ ಮಾಡಿದ್ದಾರೆದೆ. ಆದ್ದರಿಂದ ಆಕ್ಷೇಪಣೆ ಸಲ್ಲಿಸುವಂತೆ ಎಸ್ಐಟಿ ಪೊಲೀಸರಿಗೆ ಇದೀಗ ಕೋರ್ಟ್ ನೋಟಿಸ್ ನೀಡಿದೆ. ಭವಾನಿ ನಿರೀಕ್ಷಣ ಜಾಮೀನು ಅರ್ಜಿಯನ್ನು ನಾಳೆಗೆ ಮುಂದೂಡಿದೆ.
ಬೆಂಗಳೂರು : ಮಹಿಳೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣಗೆ ಬಂಧನದ ಭೀತಿ ಎದುರಾಗಿರುವ ಹಿನ್ನೆಲೆಯಲ್ಲಿ ಇದೀಗ ಅವರು ನಿರೀಕ್ಷಣಾ ಜಾಮೀನು ಕೋರಿ ಅರ್ಜಿಯನ್ನು ಸಲ್ಲಿಸಿದ್ದಾರೆ. ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟಿಗೆ ಅರ್ಜಿ ಸಲ್ಲಿಸಿದ್ದಾರೆ. ಈಗಾಗಲೇ ಮಹಿಳೆ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಎಚ್ ಡಿ ರೇವಣ್ಣ ಅವರಿಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಶರತ್ತು ಬದ್ಧ ಜಾಮೀನು ಮಂಜೂರು ಮಾಡಿತ್ತು. ಇದೀಗ ಈ ಒಂದು ಪ್ರಕರಣದಲ್ಲಿ ಭವಾನಿ ರೇವಣ್ಣ ಹೆಸರು ಕೇಳಿ ಬಂದಿರುವ ಹಿನ್ನೆಲೆಯಲ್ಲಿ ಇದೀಗ ಅವರು ಬಂಧನದ ಭೀತಿಯಿಂದ ನಿರೀಕ್ಷಣಾ ಜಾಮೀನು ಕೋರಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಅಲ್ಲಿ ಭವಾನಿ ರೇವಣ್ಣ ಅರ್ಜಿ ಸಲ್ಲಿಸಿದ್ದಾರೆ.
ಬೆಂಗಳೂರು : ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ವಿದೇಶದಲ್ಲಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿದೇಶದಲ್ಲಿ ಇದ್ದು ವಿಡಿಯೋ ಒಂದನ್ನು ರಿಲೀಸ್ ಮಾಡಿದ್ದಾರೆ. ಇದೀಗ ಪ್ರಜ್ವಲ್ ವಿಡಿಯೋ ಬಿಡುಗಡೆ ಮಾಡಿದ ಕ್ಷಣ ಎಸ್ ಐ ಟಿ ಅಧಿಕಾರಿಗಳು ಫುಲ್ ಅಲರ್ಟ್ ಆಗಿದ್ದಾರೆ. ವಿಡಿಯೋ ಬಿಟ್ಟಿದ್ದು ಎಲ್ಲಿಂದ ಯಾವ ದೇಶದಿಂದ ಈ ಕುರಿತು ಎಸ್ಐಟಿಯಿಂದ ಪರಿಶೀಲನೆ ಶುರು ಮಾಡಿದೆ.ಪ್ರಜ್ವಲ್ ರೇವಣ್ಣ ವಿಡಿಯೋ ಬೆನ್ನಲ್ಲೇ ಪ್ರಜ್ವಲ್ ರೇವಣ್ಣ ಕಾಂಟ್ಯಾಕ್ಟ್ ಗೆ ಮುಂದಾದ ಎಸ್ಐಟಿ, ಈಗಾಗಲೇ ಪ್ರಜ್ವಲ್ ರೇವಣ್ಣ ವಿರುದ್ಧ ಲುಕ್ ಔಟ್ ನೋಟಿಸ್ ಜಾರಿ ಮಾಡಲಾಗಿದೆ. ಹಾಸನ ಸಂಸದ ಪ್ರಜ್ವಲ್ ವಿರುದ್ಧ ಹರೆಸ್ಟ್ ವಾರಂಟ್ ಕೂಡ ಇದೆ ಒಂದು ತಿಂಗಳಿನಿಂದ ಏರ್ಪೋರ್ಟ್ ನಲ್ಲಿ ಎಸ್ಐಟಿ ಠಿಕಾಣಿ ಹೂಡಿದ್ದಾರೆ. ಯಾವ ವಿಮಾನದಲ್ಲಿ ಬರುತ್ತಾನೆ ಎಂದು ಮಾಹಿತಿ ಪಡೆಯುವ ಎಸ್ ಐ ಟಿ ಅದಕ್ಕೂ ಮುಂಚೆ ಪ್ರಜ್ವಲ್ ನನ್ನು ಇಮಿಗ್ರೇಷನ್ ಅಧಿಕಾರಿಗಳು ವಶಕ್ಕೆ ಪಡೆಯಲಿದ್ದಾರೆ. ವಶಕ್ಕೆ ಪಡೆದು ಇಮಿಗ್ರೇಶನ್ ಅಧಿಕಾರಿಗಳು ಎಸ್ಐಟಿಗೆ ಒಪ್ಪಿಸಲಿದ್ದಾರೆ.ಅದಾದ ಬಳಿಕ ಎಸ್ಐಟಿಯಿಂದ ಪ್ರಜ್ವಲ್…
ಚಿಕ್ಕಬಳ್ಳಾಪುರ : ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಒಬ್ಬರಿ ಒಂದು ತಿಂಗಳ ನಂತರ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಪ್ರತ್ಯಕ್ಷವಾಗಿದ್ದು ವಿದೇಶದಲ್ಲಿ ಇದ್ದುಕೊಂಡೆ ವಿಡಿಯೋ ರಿಲೀಸ್ ಮಾಡಿದ್ದಾರೆ ಮೇ 31ರಂದು ಎಸ್ ಐ ಟಿ ವಿಚಾರಣೆಗೆ ಹಾಜರಾಗುತ್ತೇನೆ ಎಂದು ತಿಳಿಸಿದ್ದಾರೆ. ಈ ಒಂದು ವಿಚಾರಕ್ಕೆ ಸಂಬಂಧಿಸಿದಂತೆ ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದು, ಪ್ರಕರಣವನ್ನು ಎಲ್ಲಿಗೆ ತಂದು ನಿಲ್ಲಿಸುತ್ತಾರೋ ಕಾದು ನೋಡೋಣ ಎಂದು ತಿಳಿಸಿದರು. ಚಿಕ್ಕಬಳ್ಳಾಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಎಚ್ ಡಿ ಕುಮಾರಸ್ವಾಮಿ, ಅಶ್ಲೀಲ ವಿಡಿಯೋ ಪ್ರಕರಣ ಸಂಬಂಧ ದೇವೇಗೌಡರು ಮತ್ತು ನಾನು ಎಲ್ಲೇ ಇದ್ದರೂ ಎಸ್ಐಟಿಗೆ ಹಾಜರಾಗಿ ತನಿಖೆಗೆ ಸಹಕಾರ ಕೊಡಬೇಕೆಂದು ದೇವೇಗೌಡರು ಎಚ್ಚರಿಕೆಯನ್ನು ಕೊಟ್ಟಿದ್ದರೂ.ಹಾಗೂ ನಾನು ಒಂದು ಮನವಿ ಕೂಡ ಮಾಡಿದ್ದೆ ಅಲ್ಲದೆ ಕಾರ್ಯಕರ್ತರು ಮೇಲೆ ಗೌರವಿದ್ದರೆ ತಕ್ಷಣ ಬರಬೇಕೆಂದು ಮನೆ ಮಾಡಿದ್ದೆ. ಅದಕ್ಕೆ ಓಗೊಟ್ಟು ಬರುವುದಕ್ಕೆ ನಮಗೂ ಕೂಡ ಸ್ವಲ್ಪ ಸಮಾಧಾನವಿದೆ.ಅದರಿಂದ ಮುಂದಿನ ದಿನಗಳಲ್ಲಿ ತನಿಖೆಯಲ್ಲಿ…
ಬೆಂಗಳೂರು : ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರು ವಿದೇಶದಲ್ಲಿ ಇದ್ದುಕೊಂಡೆ ಇದೀಗ ಮೊದಲ ಬಾರಿಗೆ ವಿಡಿಯೋ ಮೂಲಕ ಹೇಳಿಕೆಯನ್ನು ನೀಡಿದ್ದಾರೆ ಮೇ 31ರಂದು ಬೆಳಿಗ್ಗೆ 10 ಗಂಟೆಗೆ ಎಸ್ಐಟಿ ವಿಚಾರಣೆಗೆ ಹಾಜರಾಗುತ್ತೇನೆ ಎಂದು ವಿಡಿಯೋದಲ್ಲಿ ತಿಳಿಸಿದ್ದಾರೆ. ವಿಡಿಯೋದಲ್ಲಿ ಹಾಸನ ಸಂಸದ ಪ್ರಜ್ವಲ್ ರೇವಣ್ಣ ನನ್ನ ವಿದೇಶ ಪ್ರವಾಸ ಮೊದಲೇ ನಿಗದಿಯಾಗಿತ್ತು. ವಿದೇಶಕ್ಕೆ ಹೋದ ಮೂರು ನಾಲ್ಕು ದಿನದ ಬಳಿಕ ಪ್ರಕರಣದ ಬಗ್ಗೆ ಮಾಹಿತಿ ತಿಳಿದು ಬಂದಿದೆ. ಆನಂತರ ಎಸ್ ಐಟಿ ನೋಟಿಸ್ ನೀಡಿದ ಬಗ್ಗೆ ಮಾಹಿತಿ ಸಿಕ್ಕಿತು.ನನ್ನ ವಿರುದ್ಧದ ಎಲ್ಲಾ ಆರೋಪಗಳು ಸುಳ್ಳು ಎಂದು ವಿದೇಶದಿಂದ ವಿಡಿಯೋ ರಿಲೀಸ್ ಮಾಡಿರುವ ಸಂಸದ ಪ್ರಜ್ವಲ್ ರೇವಣ್ಣ ಹೇಳಿಕೆ ನೀಡಿದ್ದಾರೆ. ಹಾಗಾಗಿ ಮೇ 31ರಂದು ಎಸ್ಐಟಿ ವಿಚಾರಣೆಗೆ ಹಾಜರಾಗುತ್ತೇನೆ. ಅಂದು ಬೆಳಗ್ಗೆ 10 ಗಂಟೆಗೆ ಎಸ್ಐಟಿ ವಿಚಾರಣೆಗೆ ಹಾಜರಾಗುತ್ತೇನೆ ನನ್ನ ತಂದೆ ತಾಯಿ ಹಾಗೂ ತಾತನ, ಕುಮಾರಣ್ಣನ ಕ್ಷಮೆ ಕೋರುತ್ತೇನೆ ರಾಜ್ಯದ ಜನತೆ ಕಾರ್ಯಕರ್ತರ ಬಳಿಯು ಕ್ಷಮೆ…











