Author: kannadanewsnow05

ರಾಯಚೂರು : ಚಾಮರಾಜನಗರದಲ್ಲಿ ಶಾಲಾ ಕಟ್ಟಡವನ್ನು ಉದ್ಘಾಟಿಸಿ ಸಿಎಂ ಸಿದ್ದರಾಮಯ್ಯ ಅವರು ಮಾತನಾಡಿ, ನಾನು ರಾಜಕೀಯದ ಕೊನೆಗಾಲದಲ್ಲಿದ್ದೇನೆ ಎಂದು ಹೇಳಿಕೆ ನೀಡಿದ್ದರು. ಇದಕ್ಕೆ ಸಚಿವ ಎನ್.ಎಸ್ ಬೋಸರಾಜು,78 ವರ್ಷ ವಯಸ್ಸಾಗುತ್ತಿದೆ ಎನ್ನುವ ಕಾರಣಕ್ಕೆ ರಾಜಕೀಯ ಕೊನೇ ಹಂತ ತಲುಪಿದ್ದೇನೆ ಎಂದು ಹೇಳಿದ್ದಾರೆ ಅಷ್ಟೇ. ಮುಂದಿನ ಚುನಾವಣೆ ಅವರ ನೇತೃತ್ವದಲ್ಲೇ ನಡೆಯುತ್ತದೆ ಎಂದು ತಿಳಿಸಿದರು. ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿ ಬಳಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರು ರಾಜಕೀಯ ಬಿಡಲ್ಲ. 78 ವರ್ಷ ವಯಸ್ಸಾಗುತ್ತಿದೆ ಎನ್ನುವ ಕಾರಣಕ್ಕೆ ರಾಜಕೀಯ ಕೊನೇ ಹಂತ ತಲುಪಿದ್ದೇನೆ ಎಂದು ಹೇಳಿದ್ದಾರೆ ಅಷ್ಟೇ.ಪವರ್ ಶೇರಿಂಗ್ ವಿಚಾರ ಆವತ್ತು ಇಲ್ಲ, ಇವತ್ತೂ ಬಂದಿಲ್ಲ. ಮುಂದಿನ ಚುನಾವಣೆ ಅವರ ನೇತೃತ್ವದಲ್ಲೇ ನಡೆಯುತ್ತದೆ ಎಂದು ಹೇಳಿದರು. ಯಾರು ರಾಜಕಾರಣದಲ್ಲಿ ಜನರ ಪ್ರೀತಿ ವಿಶ್ವಾಸ ಹೊಂದಿರುತ್ತಾರೋ, ಪಕ್ಷ, ಜನರ ಅಭಿಪ್ರಾಯದ ಮೇಲೆ ಹಾಗೂ ಸರ್ವೇ ಮೇಲೆ ನಡೆಯುತ್ತದೆ. ಸಿಎಂ ಬದಲಾಗಲ್ಲ, ಎಲ್ಲರೂ ಸ್ಪಷ್ಟೀಕರಣ ಕೊಟ್ಟಿದ್ದಾರೆ. ಅಂತಹ ಯಾವುದೇ ಪ್ರಸಂಗ ಬಂದಿಲ್ಲ. ಯಾವುದೇ…

Read More

ಶಿವಮೊಗ್ಗ : ಶಿವಮೊಗ್ಗದಲ್ಲಿ ಘೋರ ದುರಂತ ಒಂದು ಸಂಭವಿಸಿದ್ದು ಚಲಿಸುತ್ತಿದ್ದ ಟ್ಯಾಂಕರ್ ಗೆ ವಿದ್ಯುತ್ ತಂತಿ ತಗುಲಿ ಕ್ಯಾಂಟರ್​​ ಚಾಲಕ ಮೃತಪಟ್ಟ ಘಟನೆ ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಸುತ್ತುಕೋಟೆ ಗ್ರಾಮದಲ್ಲಿ ನಡೆದಿದೆ. ಮೃತ ಕ್ಯಾಂಟರ್ ಚಾಲಕನನ್ನು ಶಿರಾಳಕೊಪ್ಪದ ಮಠದಗದ್ದೆ ನಿವಾಸಿ ಮೊಹಮ್ಮದ್​ ಈಶಾಮ್​ (32) ಎಂದು ತಿಳಿದುಬಂದಿದೆ. ಡಿ.5ರಂದು ಶಿಕಾರಿಪುರ ತಾಲೂಕಿನ ಬಳ್ಳಿಗಾವಿಯಿಂದ ಸೊರಬ ತಾಲೂಕಿನ ಸುತ್ತಕೋಟೆಗೆ ತೆರಳುವ ರಸ್ತೆಮಾರ್ಗದಲ್ಲಿ ಸಾಸರಹಳ್ಳಿ ಸಮೀಪ ಜೋತು ಬಿದ್ದ ವಿದ್ಯುತ್ ತಂತಿ ಕ್ಯಾಂಟರ್​ಗೆ ತಗುಲಿದೆ. ಈ ಒಂದು ದುರ್ಘಟನೆಗೆ ಮೆಸ್ಕಾಂ ಸಿಬ್ಬಂದಿ ಮತ್ತು ಅಧಿಕಾರಿಗಳೇ ಕಾರಣ ಎಂದು ಗ್ರಾಮದ ಜನರು ಮೆಸ್ಕಾಂ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಸೊರಬ ಪೊಲೀಸ್ ಠಾಣೆಯಲ್ಲಿ ಮೃತ ಮೊಹಮ್ಮದ್ ಈಶಮ್ ಅವರ ತಂದೆ ರಿಯಾಜ್ ಮೆಸ್ಕಾಂ ವಿರುದ್ಧ ದೂರು ನೀಡಿದ್ದಾರೆ.

Read More

ಗದಗ : ಇತ್ತೀಚಿಗೆ ಮಕ್ಕಳ ಮೇಲೆ ಬೀದಿ ನಾಯಿಗಳ ಹಾವಳಿ ಹೆಚ್ಚುತ್ತಿದ್ದು, ಬೀದಿ ನಾಯಿಗಳ ನಿಯಂತ್ರಣಕ್ಕೆ ಎಷ್ಟೇ ಪ್ರಯತ್ನಿಸಿದರು ಕೂಡ ಅವುಗಳ ಕಾಟ ತಪ್ಪಿಲ್ಲ ಇದೀಗ ಗದಗ ಜಿಲ್ಲೆಯ ಮುಂಡರಗಿ ಪಟ್ಟಣದಲ್ಲಿ ಆಟವಾಡುತ್ತಿದ್ದ ಬಾಲಕನ ಮೇಲೆ ಬೀದಿ ನಾಯಿ ದಾಳಿ ಮಾಡಿದ್ದು ಬಾಲಕ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಹೌದು ಗದಗ ಜಿಲ್ಲೆಯ ಮುಂಡರಗಿ ಪಟ್ಟಣದ ಅಂಬಾಭವಾನಿ ನಗರದಲ್ಲಿ ಈ ಒಂದು ಘಟನೆ ನಡೆದಿದ್ದು, 3 ವರ್ಷದ ಬಾಲಕನ ಮೇಲೆ ಬೀದಿನಾಯಿ ಡೆಡ್ಲಿ ಅಟ್ಯಾಕ್ ಮಾಡಿದೆ. ಬಾಲಕನ ತುಟಿ, ಹಣೇ ಹಾಗೂ ಗಲ್ಲವನ್ನು ಬೀದಿ ನಾಯಿ ಕಚ್ಚಿ ತಿಂದಿದೆ. ರುದ್ರಪ್ರಿಯ ದೊಡ್ಡಕಾಶಿ (3) ಎನ್ನುವ ಬಾಲಕನಿಗೆ ಗಂಭೀರವಾದ ಗಾಯಗಳಾಗಿವೆ, ಆಟವಾಡುತ್ತಿದ್ದ ಬಾಲಕನ ಮೇಲೆ ದಿಢೀರ್ ಆಗಿ ಬೀದಿನಾಯಿ ಎಗರಿದೆ. ಸದ್ಯ ಬಾಲಕನಿಗೆ ಜಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಬೀಗತನದ ಹೋಳಿಗೆ ಊಟಕ್ಕೆ ಬಾಲಕನ ಕುಟುಂಬಸ್ಥರು ಬಂದಿದ್ದರು.ಈ ವೇಳೆ ಈ ಒಂದು ಘಟನೆ ನಡೆದಿದೆ.

Read More

ಬಳ್ಳಾರಿ : ಇತ್ತೀಚಿಗೆ ಬಳ್ಳಾರಿಯಲಿ ಬಾಣಂತಿಯರ ಸಾವು ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಮೃತರ ಕುಟುಂಬಸ್ಥರಿಗೆ ಸಿಎಂ ಸಿದ್ದರಾಮಯ್ಯ ಅವರು 5 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ.ಬಳ್ಳಾರಿ ಜಿಲ್ಲೆಯ ಸಂಡೂರಿನಲ್ಲಿ ಸಿಎಂ ಸಿದ್ದರಾಮಯ್ಯ ಮೃತರ ಕುಟುಂಬಗಳಿಗೆ ಘೋಷಣೆ ಮಾಡಿದ್ದಾರೆ. ಪ್ರಕರಣದ ಕುರಿತು ಮಾತನಾಡಿದ ಅವರು ಬಳ್ಳಾರಿಯಲ್ಲಿ ಕಳೆದ ಒಂದು ತಿಂಗಳಲ್ಲಿ ಐದು ಬಾಣಂತಿಯರ ಸಾವಾಗಿದೆ.ಈ ಕುರಿತಂತೆ ಕ್ಯಾಬಿನೆಟ್ ಸಭೆಯಲ್ಲಿ ಕಳಪೆ ಔಷಧ ನೀಡಿದ್ದರಿಂದ ಸಾವನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಮೊದಲು ಎರಡು ಲಕ್ಷ ಪರಿಹಾರ ಘೋಷಿಸಿದ್ದೆ. ಈಗ ಪರಿಹಾರದ ಮೊತ್ತ ಹೆಚ್ಚಿಸಿದ್ದು, ಮೃತ ಕುಟುಂಬಸ್ಥರಿಗೆ 5 ಲಕ್ಷ ರೂಪಾಯಿ ನೀಡಲಾಗುತ್ತೆ ಅಂತ ಸಿಎಂ ಸಿದ್ದರಾಮಯ್ಯ ಘೋಷಿಸಿದರು.

Read More

ಬೆಂಗಳೂರು: 220/66/11 ಕೆವಿ ಎಸ್‌ಆರ್‌ಎಸ್ ಪೀಣ್ಯ ಸಬ್‌ಸ್ಟೇಷನ್ ಕೆಪಿಟಿಸಿಎಲ್‌ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಪೀಣ್ಯ ವಿಭಾಗದಲ್ಲಿ ಈ ಕೆಳಕಂಡ ಪ್ರದೇಶಗಳಲ್ಲಿ ದಿನಾಂಕ: 08.12.2024 (ಭಾನುವಾರ) ರಂದು ಬೆಳಗ್ಗೆ 10:00 ಯಿಂದ ಮಧ್ಯಾಹ್ನ 03:30 ಗಂಟೆವರೆಗೆ ವಿದ್ಯುತ್‌ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. “ಪೀಣ್ಯ ಗ್ರಾಮ, ಎಸ್ ಆರ್ ಎಸ್ ರಸ್ತೆ, 4ನೇ ಬ್ಲಾಕ್, ಎಂಇಐ ಕಾರ್ಖಾನೆ, ರಾಜಗೋಪಾಲ ನಗರ, ಕಸ್ತೂರಿ ಬಡಾವಣೆ, ಜೆಕೆಡಬ್ಲೂ ಲೇಔಟ್, ಬೈರವೇಶ್ವರ ನಗರ, 10ನೇ ಕ್ರಾಸ್, 1ನೇ ಕ್ರಾಸ್, 1ನೇ ಹಂತ ಪೀಣ್ಯ ಕೈಗಾರಿಕಾ ಪ್ರದೇಶ, 3ನೇ ಕ್ರಾಸ್, 4ನೇ ಅಡ್ಡರಸ್ತೆ, ಎಸ್ ಎಸ್ ಟ್ರೇಜ್ ಏರಿಯಾ 1ನೇ ಕ್ರಾಸ್, ಅನುಸೋಲಾರ್ ರಸ್ತೆ, ಚೇರದ ಫ್ಯಾಕ್ಟರಿ ರಸ್ತೆ, ಜನರಲ್ ಮೆಟಲ್ ಸರ್ಕಲ್, ಸ್ನೋ ವೈಟ್ ರಸ್ತೆ, ಮೈಸೂರು ಇಂಜಿನಿಯರ್ ರಸ್ತೆ, ಸನ್ ರೈಸ್ ಕಾಸ್ಟಿಂಗದ ರಸ್ತೆ, 3ನೇ ಹಂತ, ವೈಷ್ಣವಿ ಮಾಲ್+ ಕಾವೇರಿ ಮಾಲ್ ಮತ್ತು ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.

Read More

ಬೆಂಗಳೂರು : ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಲ್ಲಿ 2500 ನಿರ್ವಾಹಕ ಹುದ್ದೆಯ ನೇಮಕಾತಿ ಸಂಬಂಧ 371-ಜೆ (ಕಲ್ಯಾಣ ಕರ್ನಾಟಕ) ಮೀಸಲಾತಿಯಡಿ 212 ಅಭ್ಯರ್ಥಿಗಳನ್ನು ಆಯ್ಕೆಗೊಳಿಸಿದ್ದು, ಇಂದು ಸದರಿ ಅಭ್ಯರ್ಥಿಗಳಿಗೆ ಸಾರಿಗೆ ಮತ್ತು ಮುಜರಾಯಿ ಸಚಿವರು ನೇಮಕಾತಿ ಆದೇಶ ಪತ್ರಗಳನ್ನು ವಿತರಿಸುವ ಮೂಲಕ ನೇಮಕಾತಿ ಪ್ರಕ್ರಿಯೆಗೆ ಚಾಲನೆ ನೀಡಿದರು. ಜಾಹೀರಾತುಪಡಿಸಿದ ಹುದ್ದೆಗಳ ಸಂಖ್ಯೆ 214 ಅದಕ್ಕೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಸಂಖ್ಯೆ 5410, ಶೇ. 30 ಹಾಗೂ ಅದಕ್ಕಿಂತ ಹೆಚ್ಚಿನ ಅಂಕ ಗಳಿಸಿದ ಅಭ್ಯರ್ಥಿಗಳ ಸಂಖ್ಯೆ 1334 ಅದರಲ್ಲಿ ಮೂಲ ದಾಖಲೆ/ದೇಹದಾರ್ಢ್ಯತೆ ಪರಿಶೀಲನೆ ನಡೆಸಿ, ಅಂತಿಮವಾಗಿ 212 ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗಿದೆ. ಸರ್ಕಾರವು 9000 ಹೊಸ ಹುದ್ದೆಗಳ ನೇಮಕಾತಿಗೆ ಅನುಮತಿ ನೀಡಿದ್ದು, ಅದರಂತೆ ಈಗಾಗಲೇ 2500 ನಿರ್ವಾಹಕ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಬಿಎಂಟಿಸಿ ಯಲ್ಲಿ ಕೊನೆಗೊಂಡಿದ್ದು, ನೇಮಕಾತಿ ಆದೇಶ ನೀಡುವುದು ಬಾಕಿಯಿದೆ. 2000 ಚಾಲಕ-ಕಂ- ನಿರ್ವಾಹಕ ಹುದ್ದೆಗಳ ನೇಮಕಾತಿ ಕೆ‌ಎಸ್ ಆರ್ ಟಿ ಸಿ ಯಲ್ಲಿ, 1000 ವಾಯವ್ಯ ರಸ್ತೆ ಸಾರಿಗೆ ಸಂಸ್ಥೆಯಲ್ಲಿ ನಡೆಯುತ್ತಿದೆ.…

Read More

ಬೆಂಗಳೂರು : ಬೆಂಗಳೂರಿನ ನಮ್ಮ ಮೆಟ್ರೋ ಪ್ರಯಾಣಿಕರ ಓಡಾಟದಲ್ಲಿ ದಾಖಲೆ ನಿರ್ಮಿಸಿದ್ದು, ಒಂದೇ ದಿನ ಮೆಟ್ರೋದಲ್ಲಿ ಸಂಚರಿಸುವವರ ಸಂಖ್ಯೆ ಭಾರೀ ಏರಿಕೆ ಕಂಡಿದ್ದು, ಗರಿಷ್ಠ ಪ್ರಮಾಣ ತಲುಪಿದೆ. ಈ ವಿಷಯದ ಕುರಿತಾಗಿ ಬಿಎಂಆರ್‌ಸಿಎಲ್ ಮಾಹಿತಿಯನ್ನು ಹಂಚಿಕೊಂಡಿದ್ದು, ನಮ್ಮ ಮೆಟ್ರೋ’ ಪ್ರಯಾಣಿಕರ ಸಂಚಾರದಲ್ಲಿ ಹೊಸ ದಾಖಲೆ ನಿರ್ಮಾಣವಾಗಿದ್ದು, ಡಿ. 6 ರಂದು ಬೆಂಗಳೂರಿನ ನಮ್ಮ ಮೆಟ್ರೋದಲ್ಲಿ 9.20 ಲಕ್ಷ ಕ್ಕೂ ಅಧಿಕ ಪ್ರಯಾಣಿಕರು ಸಂಚಾರ ಮಾಡುವ ಮೂಲಕ ಹೊಸ ದಾಖಲೆ ನಿರ್ಮಾಣವಾಗಿದೆ ಎಂದು ಬಿಎಂಆರ್‌ಸಿಎಲ್ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಮಾಹಿತಿ ನೀಡಿದೆ. ನೇರಳೆ ಮಾರ್ಗದಲ್ಲಿ 4,39,616 ಜನ ಪ್ರಯಾಣಿಸಿದ್ದು, ಹಸಿರು ಮಾರ್ಗದಲ್ಲಿ 3,12,248 ಜನ ಪ್ರಯಾಣಿಸಿದ್ದಾರೆ. ಕೆಂಪೇಗೌಡ ನಿಲ್ದಾಣದಿಂದ ಮಾರ್ಗ ಬದಲಿಸುವ ಮೂಲಕ 1,67,617 ಜನ ಪ್ರಯಾಣಿಸಿದ್ದಾರೆ.ಕಳೆದ ಆಗಸ್ಟ್ 14ರಂದು ನಮ್ಮ ಮೆಟ್ರೋದಲ್ಲಿ ಒಂದೇ ದಿನ ಬರೋಬ್ಬರಿ 9.17 ಲಕ್ಷ ಮಂದಿ ಸಂಚರಿಸುವ ಮೂಲಕ ದಾಖಲೆ ಸೃಷ್ಟಿಸಿತ್ತು. ಇದೀಗ ನಮ್ಮ ಮೆಟ್ರೋದಲ್ಲಿ 9.20 ಲಕ್ಷಕ್ಕೂ ಅಧಿಕ ಜನ ಪ್ರಯಾಣಿಸುವ ದಾಖಲೆಯನ್ನು ಮುರಿದಿದೆ.…

Read More

ಮುಂಬೈ : ಕಳೆದ ನವೆಂಬರ್ 27 ರಂದು ಪ್ರಧಾನಿ ಮೋದಿ ಅವರಿಗೆ ಬೆದರಿಕೆ ಸಂದೇಶ ಬಂದಿತ್ತು, ಇದರ ಬೆನ್ನಲ್ಲೇ ಇದೀಗ ಮೋದಿ ಅವರ ಹತ್ಯೆಗೆ ಸಂಚು ರೂಪಿಸಲಾಗಿದೆ ಎಂದು ಮತ್ತೊಂದು ಸಂದೇಶ ಬಂದಿದೆ. ಬಾಂಬ್ ಸ್ಫೋಟದ ಮೂಲಕ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಹತ್ಯೆ ನಡೆಸಬಹುದು ಎಂದು ಮುಂಬೈ ಟ್ರಾಫಿಕ್ ಪೊಲೀಸರಿಗೆ ಪಾಕಿಸ್ತಾನದ ಪ್ರಧಾನ ಸಂಸ್ಥೆಯಾದ ಐಎಸ್‌ಐ ಮಾಹಿತಿ ನೀಡಿದ್ದಾರೆ. ಹೌದು ಈ ಸಂದೇಶದಲ್ಲಿ ಇಬ್ಬರು ವ್ಯಕ್ತಿಗಳನ್ನು ಹೆಸರಿಸಲಾಗಿದ್ದು, ಅವರು ಪಾಕಿಸ್ತಾನದ ಐಎಸ್‌ಐ ಏಜೆಂಟ್‌ಗಳಾಗಿದ್ದಾರೆ ಎಂದು ಆರೋಪಿಸಲಾಗಿದೆ.ಪ್ರಧಾನಿ ಮೋದಿಗೆ ಜೀವ ಬೆದರಿಕೆ ಇದೆ ಎಂಬ ಮೆಸೇಜ್ ಮುಂಬೈ ಪೊಲೀಸರಿಗೆ ಈ ಮೊದಲು ಕೂಡ ಬಂದಿತ್ತು. ನವೆಂಬರ್ 27ರಂದು ಪೊಲೀಸರಿಗೆ ಅನಾಮಧೇಯ ಕರೆ ಬಂದಿದ್ದು, ಪ್ರಧಾನಿಯನ್ನು ಹತ್ಯೆ ಮಾಡುವುದಾಗಿ ಬೆದರಿಕೆ ಹಾಕಲಾಗಿತ್ತು. ಕರೆ ಮಾಡಿದ್ದಾರೆ ಎನ್ನಲಾದ 34 ವರ್ಷದ ಮಹಿಳೆಯನ್ನು ವಶಕ್ಕೆ ಪಡೆಯಲಾಗಿದ್ದು, ಆಕೆಯ ಹಿನ್ನೆಲೆಯನ್ನು ಅಧಿಕಾರಿಗಳು ಪರಿಶೀಲಿಸುತ್ತಿದ್ದಾರೆ.

Read More

ಬೆಳಗಾವಿ : ಸರ್ಕಾರದ ಮಹತ್ವಾಕಾಂಕ್ಷಿ ಗೃಹಲಕ್ಷ್ಮೀ ಯೋಜನೆ, ಮಹಿಳೆಯರ ಜೀವನಕ್ಕೆ ಆಧಾರ ಆಗಬೇಕು ಎಂಬುದೇ ನನ್ನ ಉದ್ದೇಶ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಇಂದು ಬೆಳಗಾವಿ ಜಿಲ್ಲೆಯ ಹಿರೇಬಾಗೇವಾಡಿ ಗ್ರಾಮದಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಟ್ರಸ್ಟ್ ವತಿಯಿಂದ ಶನಿವಾರ ನಡೆದ ಮಹಿಳಾ ವಿಚಾರ ಗೋಷ್ಠಿ ಹಾಗೂ ಸಾಮಾನ್ಯ ಸಹಾಯ ಕೇಂದ್ರವನ್ನು ಉದ್ಘಾಟಿಸಿ ಮಾತನಾಡಿದ ಸಚಿವರು, ಗೃಹಲಕ್ಷ್ಮೀ ಯೋಜನೆಯಿಂದ ಬರುವ ಹಣವನ್ನು ಸೇರಿಸಿ ಸ್ವಯಂ ಉದ್ಯೋಗ ಶುರುಮಾಡಿ ಆರ್ಥಿಕವಾಗಿ ಸಬಲರಾಗಬೇಕು ಎಂಬುದೇ ನನ್ನ ಬಯಕೆ ಎಂದರು. ಜೀವನ ಅಭಿವೃದ್ಧಿ ಆಗಬೇಕು, ಮಕ್ಕಳಿಗೆ ಶಿಕ್ಷಣ ಸಿಗಬೇಕು, ಎಲ್ಲರಿಗೂ ಆರೋಗ್ಯ ಸಿಗಬೇಕು ಎಂಬುದೇ ಗೃಹಲಕ್ಷ್ಮೀ ಯೋಜನೆಯ ಮೂಲ ಉದ್ದೇಶ.ಮಹಿಳೆಯರು ತಮ್ಮ ಆರೋಗ್ಯವನ್ನು ಚೆನ್ನಾಗಿ ಇಟ್ಟುಕೊಳ್ಳಬೇಕು, ಆರ್ಥಿಕ ಸಬಲೀಕರಣದ ಜೊತೆಗೆ ಸಮಾಜದ ಸ್ವಾಸ್ಥ್ಯ ಕಾಪಾಡಬೇಕು, ಎಲ್ಲರೊಂದಿಗೆ ಉತ್ತಮ ಬಾಂಧವ್ಯ ಬೆಳೆಸಿಕೊಳ್ಳಬೇಕು, ಆತ್ಮವಿಶ್ವಾಸ ವೃದ್ಧಿಸಿಕೊಳ್ಳಬೇಕು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಕರೆ ನೀಡಿದರು. ಧರ್ಮಸ್ಥಳ ಅಭಿವೃದ್ಧಿ ಸಂಘದ ಜೊತೆಗೆ…

Read More

ಬೆಂಗಳೂರು : ರಾಜ್ಯ ಬಿಜೆಪಿಯಲ್ಲಿ ಯಾವುದೇ ಬಣ ರಾಜಕೀಯ ಇಲ್ಲ. ಅಲ್ಲದೆ ಬಿವೈ ವಿಜಯೇಂದ್ರ ಅವರನ್ನು ರಾಜ್ಯಾಧ್ಯಕ್ಷ ಸ್ಥಾನದಿಂದ ಸದ್ಯಕ್ಕೆ ಬದಲಾವಣೆ ಮಾಡಲ್ಲ ಎಂದು ರಾಜ್ಯ ಬಿಜೆಪಿ ಉಸ್ತುವಾರಿ ರಾಧಾಮೋಹನ್ ದಾಸ್ ಅಗರ್ವಾಲ್ ತಿಳಿಸಿದರು. ಇಂದು ಬೆಂಗಳೂರಿನ ಮಲ್ಲೇಶ್ವರಂ ಬಳಿ ಇರುವ ಬಿಜೆಪಿ ಕಚೇರಿಯಲ್ಲಿ ರಾಜ್ಯ ಬಿಜೆಪಿ ಉಸ್ತುವಾರಿ ರಾಧಾ ಮೋಹನ್ ದಾಸ್ ಅಗರ್ವಾಲ್ ನೇತೃತ್ವದಲ್ಲಿ ಕೋರ್ ಕಮಿಟಿ ಸಭೆ ನಡೆಯಿತು. ಸಭೆ ಅಂತ್ಯವಾದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸದ್ಯ ವಿಜಯೇಂದ್ರ ಸರಿ ಅನಿಸಿದ್ದಾರೆ. ಹೀಗಾಗಿ ಅವರಿಗೆ ನಾಯಕತ್ವ ನೀಡಲಾಗಿದೆ. ರಾಜ್ಯಾಧ್ಯಕ್ಷ ಸ್ಥಾನದಿಂದ ವಿಜೇಂದ್ರ ಬದಲಾವಣೆ ಇಲ್ಲ ಎಂದು ಸ್ಪಷ್ಟನೆ ನೀಡಿದರು. ನಾಯಕತ್ವ ಬದಲಾಯಿಸುವ ಅಧಿಕಾರ ಇಬ್ಬರಿಗೆ ಮಾತ್ರ ಇದೆ. ಪಕ್ಷದ ಕಾರ್ಯಕರ್ತರಿಗೆ ಹಾಗೂ ಇನ್ನೊಂದು ಹೈಕಮಾಂಡ್ ಅವರಿಗೆ ನೇಮಕ ಮಾಡೋದು. ಬದಲಾಯಿಸುವುದು ಇಬ್ಬರು ಮಾತ್ರ.ಯಾರೋ ಹೇಳಿದರು ಅಂತ ಪಕ್ಷದ ನಾಯಕತ್ವ ಬದಲಿಸಲ್ಲ. ಯಾವಾಗ ಸರಿ ಅನಿಸುತ್ತೋ ಅವಾಗ ನಿರ್ಧಾರ ಕೈಗೊಳ್ಳುತ್ತೇವೆ. ರಾಜ್ಯ ಬಿಜೆಪಿಯಲ್ಲಿ ಯಾವುದೇ ಬಣ ರಾಜಕೀಯ ಇಲ್ಲ.…

Read More