Author: kannadanewsnow05

ಕಲಬುರ್ಗಿ : ಕಲ್ಬುರ್ಗಿ ಜಿಲ್ಲೆಯಲ್ಲಿ ಗುಡುಗು ಸಹಿತ ಬಾರಿ ಮಳೆಯಾಗುತ್ತಿದ್ದು ಜಿಲ್ಲೆಯ ಚಿತ್ತಾಪುರ ತಾಲೂಕಿನ ಲಾಡ್ಲಾಪುರದಲ್ಲಿ ಮರದ ಕೆಳಗಡೆ ನಿಂದಿದ್ದ ಇಬ್ಬರೂ ವ್ಯಕ್ತಿಗಳು ಸಿಡಿಲು ಬಡಿದು ದಾರುಣವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಹೌದು ಕಲ್ಬುರ್ಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಲಾಡ್ಲಾಪುರ ಗ್ರಾಮದಲ್ಲಿ ಈ ಒಂದು ದುರ್ಘಟನೆ ಸಂಭವಿಸಿದೆ. ಏಕನಾಥ ವಾಗಮೋಡೆ (55) ಸತೀಶ ಶೆಳಕೆ (40) ಸಾವನ್ನಪ್ಪಿದ್ದಾರೆ ಎಂದು ಹೇಳಲಾಗುತ್ತಿದೆ.ಇಬ್ಬರು ವಾಡಿ ಪಟ್ಟಣದ ರೈಲ್ವೆ ಕಾಲೋನಿಯ ನಿವಾಸಿಗಳು ಎಂದು ಹೇಳಲಾಗುತ್ತಿದೆ. ಹೊಲದಲ್ಲಿ ಕೆಲಸ ಮುಗಿಸಿಕೊಂಡು ಮನೆಗೆ ವಾಪಸ್ ಆಗುವಾಗ ಜೋರಾಗಿ ಮಳೆ ಬಂದಿದೆ ಈ ವೇಳೆ ಮಳೆ ಬಂದ ಹಿನ್ನೆಲೆಯಲ್ಲಿ ಮರದಡಿ ನಿಂತಿದ್ದಾಗ ಸಿಡಿಲು ಬಡದು ಸಾವನ್ನಪ್ಪಿದ್ದಾರೆ. ಘಟನೆ ಕುರಿತಂತೆ ವಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Read More

ಉತ್ತರಕನ್ನಡ : ರಾಜ್ಯದ ಕರಾವಳಿ ಜಿಲ್ಲೆಗಳಾದ ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಸುಂದರ ಯುವತಿಯರ ಸ್ನೇಹ ಗಿಟ್ಟಿಸಿಕೊಂಡು ಅವರೊಂದಿಗೆ ಪ್ರೀತಿಯ ನಾಟಕವಾಡಿ ಫೋಟೋ ತೆಗೆಸಿಕೊಂಡು ಅವುಗಳನ್ನು ಅಶ್ಲೀಲವೆಂಬಂತೆ ಎಡಿಟ್ ಮಾಡಿ ಬೆದರಿಸಿ ಅತ್ಯಾಚಾರವೆಸಗುತ್ತಿದ್ದ ಕಾಮುಕರ ಗುಂಪಿನ ಸದಸ್ಯರನ್ನು ಪೊಲೀಸರು ಬಂಧಿಸಿದ್ದಾರೆ. ಹೌದು ಅತ್ಯಾಚಾರ ಪ್ರಕರಣದ ಆರೋಪಿ ಬಂಧಿಸಲು ತೆರಳಿದ್ದಾಗ ಪೊಲೀಸರ ಮೇಲೆ ಕಲ್ಲುತೂರಾಟ ನಡೆಸಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಮಳಲಿ ಎಂಬ ಗ್ರಾಮದಲ್ಲಿ ನಡೆದಿದೆ. ಸಮವಸ್ತ್ರದಲ್ಲಿದ್ದ ಮೂವರು ಪೊಲೀಸ್ ಸಿಬ್ಬಂದಿ ಮೇಲೆ ಕಲ್ಲುತೂರಾಟ ನಡೆಸಿದ್ದಾರೆ. ಅರ್ಜುನ್ ಅಲಿಯಾಸ್ ಅರುಣ ಲಕ್ಷ್ಮಣಗೌಡನನ್ನು ಪೊಲೀಸರು ಬಂಧಿಸಲು ತೆರಳಿದ್ದಾರೆ.ಅರ್ಜುನ ವಿರುದ್ಧ ಬನವಾಸಿ ಠಾಣೆಯಲ್ಲಿ ಅತ್ಯಾಚಾರ ಕೇಸ್ ದಾಖಲಾಗಿತ್ತು. ಶಿರಸಿ ಪೊಲೀಸ್ ಠಾಣೆಯಲ್ಲಿ ಐಟಿ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು. ಅಲ್ಲದೆ ಉಡುಪಿ ಜಿಲ್ಲೆಯ ಕುಂದಾಪುರ ಠಾಣೆಯಲ್ಲೂ ಕೂಡ ಒಂದು ಕೇಸ್ ದಾಖಲಾಗಿತ್ತು. ಯುವತಿಯರ ಜೊತೆ ಚಾಟ್ ಮಾಡುತ್ತಾ ಅರ್ಜುನ್ ಅವರನ್ನು ಬಲೆಗೆ ಬೀಳಿಸಿಕೊಳ್ಳುತ್ತಿದ್ದ. ನಂತರ ಸಲುಗೆಯನ್ನು ಬೆಳೆಸಿ ಬೆತ್ತಲೆ ಫೋಟೋ ತೆಗೆದುಕೊಂಡು…

Read More

ನವದೆಹಲಿ : ದೆಹಲಿಯ ವಿವೇಕ್ ವಿಹಾರ್ ಪ್ರದೇಶದ ಮಕ್ಕಳ ಆಸ್ಪತ್ರೆಯಲ್ಲಿ ಅಗ್ನಿ ಅವಘಡ ಸಂಭವಿಸಿ ನವಜಾತ ಶಿಶುಗಳು ಸಾವನ್ನಪ್ಪಿರುವ ಘಟನೆಗೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಆಸ್ಪತ್ರೆಯ ಮಾಲೀಕ ನವೀನ್ ಖಿಚಿಯನ್ನು ಇದೀಗ ಪೊಲೀಸರು ಬಂಧಿಸಿದ್ದಾರೆ. ಹೌದು ದೆಹಲಿಯ ವಿವೇಕ್ ವಿಹಾರ್ ಪ್ರದೇಶದ ಖಾಸಗಿ ಆಸ್ಪತ್ರೆಯಲ್ಲಿ ಈ ಒಂದು ದುರ್ಘಟನೆ ನಡೆದಿತ್ತು.ಶನಿವಾರ ರಾತ್ರಿ 11.30 ರ ಸುಮಾರಿಗೆ ವಿವೇಕ್ ವಿಹಾರ್ ಪೊಲೀಸ್ ಠಾಣೆಗೆ ನವಜಾತ ಶಿಶು ಆರೈಕೆ ಆಸ್ಪತ್ರೆ ಮತ್ತು ಪಕ್ಕದ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿರುವ ಬಗ್ಗೆ ಪಿಸಿಆರ್ ಕರೆ ಬಂದಿದೆ. ಉನ್ನತ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದರೆ, ಡಿಎಫ್‌ಎಸ್ ಒಂಬತ್ತು ಅಗ್ನಿಶಾಮಕ ಟೆಂಡರ್ಗಳನ್ನು ಕಳುಹಿಸಿದೆ. ರಕ್ಷಣಾ ಕಾರ್ಯಾಚರಣೆ ಇನ್ನೂ ನಡೆಯುತ್ತಿದೆ ಎಂದು ಖಚಿತಪಡಿಸಿದ ಡಿಎಫ್‌ಎಸ್ ಮುಖ್ಯಸ್ಥ ಅತುಲ್ ಗರ್ಗ್, ಬೆಂಕಿಯ ಕಾರಣವನ್ನು ಇನ್ನೂ ಕಂಡುಹಿಡಿಯಲಾಗಿಲ್ಲ ಎಂದು ಹೇಳಿದರು. ಏತನ್ಮಧ್ಯೆ, ರಕ್ಷಿಸಿದ 11 ನವಜಾತ ಶಿಶುಗಳನ್ನು ಹೆಚ್ಚಿನ ಚಿಕಿತ್ಸೆಗಾಗಿ ಪೂರ್ವ ದೆಹಲಿ ಅಡ್ವಾನ್ಸ್ ಎನ್‌ಐಸಿಯು ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.

Read More

ಹಾಸನ : ಇಂದು ಬೆಳ್ಳಂ ಬೆಳಗ್ಗೆ ಹಾಸನದ ಹೊರವಲಯ ಈಚನಹಳ್ಳಿಯಲ್ಲಿ ಪ್ರಕಡಿಕೆಯಾಗಿ ಕಾಡಿನಲ್ಲಿದ್ದ ಮಗು ಸೇರಿ ಆರು ಮಂದಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆಗೆ ಸಂಬಂಧಿಸಿದಂತೆ, ಅಪಘಾತದಲ್ಲಿ ತಂದೆ-ತಾಯಿಯನ್ನು ಕಳೆದುಕೊಂಡ ಮಕ್ಕಳನ್ನು ಇಂದು ಚಿಕ್ಕಬಳ್ಳಾಪುರ ಕ್ಷೇತ್ರದ ಶಾಸಕ ಪ್ರದೀಪ್ ಈಶ್ವರ್ ಭೇಟಿ ಮಾಡಿ ಸಾಂತ್ವನ ಹೇಳಿದರು. ಅಪಘಾತದಲ್ಲಿ ತಂದೆ ತಾಯಿ ಕಳೆದುಕೊಂಡು ಅನಾಥರಾಗಿರುವ ಇಬ್ಬರು ಬಾಲಕಿಯರು ಎಂದು ಹೇಳಲಾಗುತ್ತಿದೆ. ಚಿಕ್ಕಬಳ್ಳಾಪುರ ತಾಲೂಕಿನ ಚಿಗಟೇನಹಳ್ಳಿ ಅಜ್ಜಿಯ ಮನೆಯಲ್ಲಿರುವ ಇಬ್ಬರು ಬಾಲಕಿಯರನ್ನು ಭೇಟಿ ಮಾಡಿ ಶಾಸಕ ಪ್ರದೀಪ್ ಈಶ್ವರ್ ಸಾಂತ್ವನ ಹೇಳಿದ್ದಾರೆ. ಶಾಸಕ ಪ್ರದೀಪ ಈಶ್ವರ ಪಲ್ಲವಿ ಹಾಗೂ ಪೂರ್ಣಿಮಾಳಿಗೆ ಸಾಂತ್ವನ ಹೇಳಿದ್ದು ಅಲ್ಲದೆ, ಇಬ್ಬರ ಹೆಸರಿನಲ್ಲಿ ತಲಾ ಒಂದು ಲಕ್ಷ ಪೋಸ್ಟಲ್ ಡಿಪಾಸಿಟ್ ಮಾಡುವ ಭರವಸೆ ನೀಡಿದ್ದಾರೆ. ಅದರ ಜೊತೆಗೆ ಉಚಿತ ವಿದ್ಯಾಭ್ಯಾಸ ಕೊಡಿಸುವುದಾಗಿ ಪ್ರದೀಪ್ ಈಶ್ವರ್ ಭರವಸೆ ನೀಡಿದ್ದಾರೆ. ಘಟನೆ ಹಿನ್ನೆಲೆ? ಹಾಸನದಲ್ಲಿ ಬೆಳ್ಳಂಬೆಳಗ್ಗೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಮಗು ಸೇರಿ 6 ಮಂದಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಹಾಸನದ…

Read More

ಹಾಸನ : ಕಳೆದ ಜನವರಿಯಿಂದ ಚಿಕ್ಕಮಂಗಳೂರು ಹಾಸನ ಮಡಿಕೇರಿ ಕೊಡಗು ಈ ಭಾಗದಲ್ಲಿ ಕಾಡಾನೆ ದಾಳಿಯಿಂದ ಹಲವಾರು ಜನರು ಮೃತಪಟ್ಟಿದ್ದಾರೆ ಇದೀಗ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಕೆಸಗುಲಿ ಎಂಬಲ್ಲಿ ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದ ವೃದ್ಧೆಯ ಮೇಲೆ ಕಾಡಾನೆ ದಾಳಿ ನಡೆಸಿದೆ. ಹೌದು ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದ ವೃದ್ಧೆಯ ಮೇಲೆ ಕಾಡಾನೆ ದಾಳಿ ನಡೆಸಿದ. ಕೆಸಗುಲಿ ಬಳಿ ಕಾಫಿ ತೋಟದಲ್ಲಿ ದಾಕ್ಷಾಯಿಣಿ ಎನ್ನುವ ವೃದ್ಧೆಯ ಮೇಲೆ ಏಕಾಏಕಿ ಆನೆ ದಾಳಿ ನಡೆಸಿದೆ. ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಕೆಸಗುಲಿ ಗ್ರಾಮದಲ್ಲಿ ಆನೆ ದಾಳಿ ಮಾಡಿದೆ. ಕಾಡಾನೆ ದಾಳಿಯಿಂದ ಲಕ್ಕುಂದದ ದಾಕ್ಷಾಯಿಣಿ ಗಂಭೀರವಾಗಿ ಗಾಯಗೊಂಡಿದ್ದು, ಸದ್ಯ ಸ್ಥಿತಿ ಗಂಭೀರವಾಗಿದೆ. ಈ ವೇಳೆ ಅರಣ್ಯ ಅಧಿಕಾರಿಗಳು ಆಸ್ಪತ್ರೆಗೆ ಭೇಟಿ ನೀಡಿ ದಾಕ್ಷಾಯಿಣಿ ಆರೋಗ್ಯ ವಿಚಾರಿಸಿದ್ದಾರೆ. ಘಟನೆ ಕುರಿತಂತೆ ಸಕಲೇಶಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬೆಂಗಳೂರು :  ಕಾಂಗ್ರೆಸ್ ಮುಕ್ತ ಕರ್ನಾಟಕವೇ ಈ ಮೈತ್ರಿ ಉದ್ದೇಶ. ಎರಡೂ ಪಕ್ಷಗಳ ಉದ್ದೇಶ ಒಂದೇ, ಕಾಂಗ್ರೆಸ್ ವಿರೋಧಿ ನೀತಿ. ಹೀಗಾಗಿ ನಾವು ಒಂದಾಗಿದ್ದೇವೆ. ಒಗ್ಗಟ್ಟಾಗಿ ಚುನಾವಣೆ ಎದುರಿಸಿದ್ದೇವೆ. ದೇವೇಗೌಡರು ಮೋದಿ ಅವರು ಈ ಮೈತ್ರಿಗೆ ಕಾರಣರು ಮಾಜಿ ಡಿಸಿಎಂ ಡಾ.ಸಿ.ಎನ್.ಅಶ್ವತ್ಥನಾರಾಯಣ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು‌. ಸಮೃದ್ಧ ಕರ್ನಾಟಕ ನಿರ್ಮಾಣ ಈ ಮೈತ್ರಿಕೂಟದಿಂದ ಸಾಧ್ಯ. ಕಾಂಗ್ರೆಸ್ ಎದುರಿಸಲು ನಾವು ಒಂದಾಗಿದ್ದೇವೆ. ಕುಮಾರಸ್ವಾಮಿ ಅವರ ಪ್ರೀತಿಗೆ ನಾವು ಪೂರ್ಣವಾಗಿ ಸೋತಿದ್ದೇವೆ. ನಮ್ಮನ್ನೆಲ್ಲ ಪ್ರೀತಿಯಿಂದ ಕರೆದು ಮಾತನಾಡಿದ್ದಾರೆ. ಜನರು ಕಾರ್ಯಕರ್ತರು ನಮ್ಮನ್ನು ಒಪ್ಪಿದ್ದಾರೆ. ಮೊದಲ ಪರೀಕ್ಷೆಯಲ್ಲಿ ನಾವು ಪಾಸಾಗುತ್ತೇವೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ವಿಫಲವಾಗಿದೆ. ಬರ ನಿರ್ವಹಣೆ, ಆರೋಗ್ಯ, ಮೂಲ ಸೌಕರ್ಯದಲ್ಲಿಯೂ ವಿಫಲವಾಗಿದೆ ಈ ಸರ್ಕಾರ. ಕೇವಲ ಒಂದು ಸಮುದಾಯವನ್ನು ತುಷ್ಟೀಕರಣ ಮಾಡುತ್ತಿದೆ. ಕೊಲೆ ಸುಲಿಗೆ, ಅತ್ಯಾಚಾರದಂತ ಘಟನೆಗಳು ನಿರಂತರವಾಗಿ ನಡೆಯುತ್ತಿದ್ದರೂ ಅದರ ಬಗ್ಗೆ ಮಾತನಾಡುತ್ತಿಲ್ಲ. ಕಾಂಗ್ರೆಸ್ ನವರು ಭಂಡತನದವರು, ಅವರಿಗೆ ಸೂಕ್ಷ್ಮತೆಯೇ ಇಲ್ಲ. ಅವರ ಐವತ್ತು ವರ್ಷದ ಅನುಭವ ಬರೀ ಭಾಷಣದ…

Read More

ಬೆಂಗಳೂರು: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಎನ್ನುವುದು ಎಷ್ಟು ಹದಗೆಟ್ಟು ಹೋಗಿದೆ ಎಂದರೆ, ಹೋಮ್ ಮಿನಿಸ್ಟರ್ ಯಾರು ಅನ್ನೋದೇ ಗೊತ್ತಾಗ್ತಾ ಇಲ್ಲ. ಹೆಣ್ಣು ಮಕ್ಕಳು ಶಾಲೆಗೆ ಹೋದರೆ, ಮಹಿಳೆಯರು ಕೆಲಸಕ್ಕೆ ಹೋದರೆ ಮನೆಗೆ ವಾಪಸ್ ಬರುವ ಗ್ಯಾರಂಟಿಯೇ ಇಲ್ಲ ಎಂದು ಪ್ರತಿಪಕ್ಷ ನಾಯಕರಾದ ಆರ್ ಅಶೋಕ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಶಿವರಾಮೇಗೌಡ ಎನ್ನುವ ವ್ಯಕ್ತಿ ಹೇಳುತ್ತಾನೆ.. ಮೋದಿಗೆ ಹೇಳಿ ಜೆಡಿಎಸ್ -ಬಿಜೆಪಿ ಭಾಗ ಮಾಡಿಬಿಟ್ಟರೆ ನಮಗೆ ಒಳ್ಳೆಯದು. ಇವರೆಂಥಾ ಚಂಡಾಳರು ಎನ್ನುವುದು ಇದರಿಂದ ಗೊತ್ತಾಗುತ್ತದೆ. ಮುಂದಿನ ವಿಧಾನಸಭೆ ಚುನಾವಣೆವರೆಗೂ ಇವರು ಒಂದಾಗಿದ್ದರೆ ನಮಗೆ ಉಳಿಗಾಲ ಇಲ್ಲ ಎನ್ನುವುದು ಅವರ ಹೆದರಿಕೆ ಎಂದು ಅವರು ಲೇವಡಿ ಮಾಡಿದರು. ಇವರು ಕುಮಾರಸ್ವಾಮಿ ಅವರ ಬೆನ್ನಿಗೆ ಚೂರಿ ಹಾಕಿದರು ಎಂದು ಕಾಂಗ್ರೆಸ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಅಶೋಕ್ ಅವರು; ಕೆಲಸ ಆಗಬೇಕಾದರೆ ಕೈ ಎತ್ತು. ಕೆಲಸ ಆದ ಮೇಲೆ ಚೂರಿ ಹಾಕು. ಇದೇ ಕಾಂಗ್ರೆಸ್ ನೀತಿ. ನಾನು ಹದಿನಾಲ್ಕು ತಿಂಗಳು ದುಷ್ಟರ ಸಹವಾಸ ಮಾಡಿದ್ದೆ, ಅವರನ್ನು…

Read More

ಬೆಂಗಳೂರು: ವಿಧಾನಸಭೆ ಮತ್ತು ಲೋಕಸಭೆ ಚುನಾವಣೆಯಲ್ಲಿ ಮಾಡಿದಂತೆ ಪ್ರಸಕ್ತ ವಿಧಾನ ಪರಿಷತ್ ಚುನಾವಣೆಯಲ್ಲಿ ಕೂಡ ಕಾಂಗ್ರೆಸ್ ಪಕ್ಷ ಹಣ, ಗಿಫ್ಟ್ ಗಳನ್ನು ಹಂಚಿ ಗೆಲುವು ಸಾಧಿಸಲು ಹೊರಟಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷರಾದ ಹೆಚ್.ಡಿ.ಕುಮಾರಸ್ವಾಮಿ ಅವರು ಆರೋಪ ಮಾಡಿದರು. ಜೆಡಿಎಸ್ ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಭಾನುವಾರ ನಡೆದ ಬೆಂಗಳೂರು ಪದವೀಧರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆ ಕುರಿತ ಜೆಡಿಎಸ್ -ಬಿಜೆಪಿ ಸಮನ್ವಯ ಸಭೆಯಲ್ಲಿ ಪಾಲ್ಗೊಂಡು ಅವರು ಮತನಾಡಿದರು.ಶಿಕ್ಷಕರು, ಪದವೀಧರರು ಮತ ಹಾಕುವ ಈ ಚುನಾವಣೆಯನ್ನು ಕಾಂಗ್ರೆಸ್ ಕಲುಷಿತಗೊಳಿಸುತ್ತಿದೆ. ಹಣ, ಗಿಫ್ಟ್, ಕೂಪನ್ ಹಂಚುವ ಕೆಲಸವನ್ನು ಯಥೇಚ್ಛವಾಗಿ ಮಾಡುತ್ತಿದೆ. ಈಗಾಗಲೇ ಅಧಿಕಾರಿಗಳು ಅನೇಕ ಕಡೆ ದಾಳಿ ನಡೆಸಿ ಕಾಂಗ್ರೆಸ್ ಅಭ್ಯರ್ಥಿ ಹಂಚುತ್ತಿದ್ದ ಗಿಫ್ಟ್ ಬಾಕ್ಸ್ ಗಳನ್ನು ವಶಕ್ಕೆ ತೆಗೆದುಕೊಂಡಿದ್ದಾರೆ ಎಂದು ಕುಮಾರಸ್ವಾಮಿ ಅವರು ಹೇಳಿದರು. ಹಣದ ಆಮಿಷ ಒಡ್ಡಿ ಮತ ಪಡೆಯುವ ಕೆಲಸ ಮಾಡುತ್ತಿರುವ ಕಾಂಗ್ರೆಸ್ ಪಕ್ಷಕ್ಕೆ ವಿದ್ಯಾವಂತರಾದ ಪದವೀಧರರು ತಕ್ಕ ಪಾಠ ಕಲಿಸಬೇಕು. ಎರಡೂ ಪಕ್ಷಗಳ…

Read More

ಗದಗ : ಭಜನಾ ಮಂಡಳಿಯಿಂದ ಹೇಳದೆ ಕೇಳದೆ ತೆಗೆದಿದ್ದಕ್ಕೆ ಆಕ್ರೋಶಗೊಂಡ ವ್ಯಕ್ತಿ ಒಬ್ಬ ಸಂಘದ ಪ್ರಮುಖನ ಮೇಲೆ ಹಲ್ಲೆ ನಡೆಸಿ ಚಾಕುವಿನಿಂದ ಇರಿದಿರುವ ಘಟನೆ ಗದಗ ನಗರದ ಟಾಂಗಾಕೂಟ ಬಳಿ ಈ ಒಂದು ದುರ್ಘಟನೆ ಸಂಭವಿಸಿದೆ. ಹೌದು ಚಾಕುವಿನಿಂದ ಇರಿದು ಗೋವಿಂದರಾಜ ಶಿರಹಟ್ಟಿ ಎಂಬುವವರ ಮೇಲೆ ಹಲ್ಲೆ ನಡೆಸಲಾಗಿದೆ. ಭಜನಾ ಮಂಡಳಿಗೆ ಸೇರಿಸಿಕೊಳ್ಳದಿದ್ದಕ್ಕೆ ವಿನಾಯಕ್ ಕಬಾಡಿ ಇಂದ ಹಲ್ಲೆ ನಡೆಸಲಾಗಿದೆ. ಇಸ್ಕಾನ್ ಕೀರ್ತನೆ ಸಂಘದಿಂದ ಗೋವಿಂದರಾಜ ವಿನಾಯಕ್ನನ್ನು ತೆಗೆದಿದ್ದ ಎನ್ನಲಾಗಿದೆ. ಇಸ್ಕಾನ್ ಕೀರ್ತನೆ ಸಂಘವನ್ನು ಗೋವಿಂದರಾಜ ಶಿರಹಟ್ಟಿ ನಡೆಸುತ್ತಿದ್ದ. ಕಳೆದ ಒಂದು ವರ್ಷದಿಂದ ಕೀರ್ತನ ಸಂಘದಿಂದ ದೂರ ಇಟ್ಟಿದ್ದಕ್ಕೆ ಆಕ್ರೋಶ ವ್ಯಕ್ತಪಡಿಸಿದ ವಿನಾಯಕ್, 2018 ರಿಂದ 2023ರ ವರೆಗೆ ಕೀರ್ತನ ಸಂಘದಿಂದ ದೂರವಿಟ್ಟಿದ್ದರು. ಕಾರಣ ತಿಳಿಸಿದೆ ಸಂಘದಿಂದ ತೆಗೆದಿದ್ದಕ್ಕೆ ವಿನಾಯಕ್ ಸಹಜವಾಗಿ ಆಕ್ರೋಶಗೊಂಡಿದ್ದ ಎನ್ನಲಾಗಿದೆ. ಇದೇ ವಿಚಾರಕ್ಕೆ ಒಂದು ವರ್ಷದಿಂದ ಗೋವಿಂದರಾದ ಜೊತೆಗೆ ವಿನಾಯಕ್ ಗಲಾಟೆ ಮಾಡುತ್ತಿದ್ದ. ಇಂದು ಅಂಗಡಿಯಲ್ಲಿ ಕೂತಿದ್ದಾಗ ಗೋವಿಂದರಾಜ ಶಿರಹಟ್ಟಿ ಮೇಲೆ ವಿನಾಯಕ್ ಹಲ್ಲೆ ನಡೆಸಿದ್ದಾನೆ.ಗದಗ ನಗರದ…

Read More

ಬೆಂಗಳೂರು : ಬ್ರ್ಯಾಂಡ್ ಬೆಂಗಳೂರು ಹೆಸರಲ್ಲಿ ಲೂಟಿ ನಡೀತಿದೆ. ಇದು ಬ್ರ್ಯಾಂಡ್ ಬೆಂಗಳೂರು ಅಲ್ಲ ಲೂಟಿ ಬೆಂಗಳೂರು ಎಂದು ಮಾಜಿ ಸಿಎಂ ಹೆಚ್‌.ಡಿ.ಕುಮಾರಸ್ವಾಮಿ ಡಿಕೆಶಿ ವಿರುದ್ಧ ವಾಗ್ದಾಳಿ ನಡೆಸಿದರು‌. ಬೆಂಗಳೂರಿನ ಜೆಪಿ ಭವನದಲ್ಲಿ ನಡೆದ ಬಿಜೆಪಿ-ಜೆಡಿಎಸ್ ಸಮನ್ವಯ ಸಭೆಯಲ್ಲಿ ಮಾತಾಡಿದ ಕುಮಾರಸ್ವಾಮಿ, ಬೆಂಗಳೂರಿಗೆ ಈ ಸರ್ಕಾರ ಕೊಟ್ಟ ಕೊಡುಗೆಯಾದರೂ ಏನು? ಅಕ್ಕಿ ಕೊಡುವುದಕ್ಕೆ ಯೋಗ್ಯತೆ ಇಲ್ಲ. ಈ ಸರ್ಕಾರಕ್ಕೆ ಯೋಗ್ಯತೆ ಇಲ್ಲ. 5 ಕೆಜಿ ಅಕ್ಕಿ ಮೋದಿ ಸರ್ಕಾರ ನೀಡುತ್ತಿದೆ ಎಂದು ತಿಳಿಸಿದರು. ಹೆಚ್ಚುವರಿ ಐದು ಕೆಜಿ ಹೆಚ್ಚು ಕೊಟ್ಟಿಲ್ಲ.ಈ ಕಡೆ ಹಣವು ಇಲ್ಲ ಕಳೆದ ಮೂರು ತಿಂಗಳಿನಿಂದ ಹೆಚ್ಚುವರಿ ಹಣ ನೀಡಿಲ್ಲ ಮಾ ತೆತ್ತಿದರೆ ಬ್ರಾಂಡ್ ಮಂಗಳೂರು ಎಂದು ಹೇಳುತ್ತಾರೆ.ಬ್ರಾಂಡ್ ಬೆಂಗಳೂರು ಅಲ್ಲ ಇದು ಲೂಟಿ ಬೆಂಗಳೂರು ಎಂದು ಕಾಂಗ್ರೆಸ್ ವಿರುದ್ಧ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ನಡೆಸಿದರು. ಎರಡು ಮೂರು ಮಳೆಗೇ ಬೆಂಗಳೂರಿನಲ್ಲಿ ಮನೆಗಳಿಗೆ ನೀರು ತುಂಬಿಕೊಂಡಿದೆ. ಬಿಡಿಎನಲ್ಲಿ ಮೊನ್ನೆ ಕ್ಲೋಸ್ಡ್ ಡೋರ್ ಮೀಟಿಂಗ್ ಮಾಡಿದ್ದಾರಂತೆ. ಬಹಳ ರಹಸ್ಯವಾಗಿ ಸಭೆ…

Read More