Subscribe to Updates
Get the latest creative news from FooBar about art, design and business.
Author: kannadanewsnow05
ಬಳ್ಳಾರಿ : ಬಳ್ಳಾರಿಯ ಬಿಮ್ಸ್ ಆಸ್ಪತ್ರೆಯಲ್ಲಿ ಬಾಣಂತಿಯರ ಸರಣಿ ಸಾವು ಪ್ರಕರಣವನ್ನು ಸರ್ಕಾರ ಇದೀಗ ಗಂಭೀರವಾಗಿ ಪರಿಗಣಿಸಿದ್ದು, ಇದೀಗ ಈ ಒಂದು ಪ್ರಕರಣಕ್ಕೆ ಲೋಕಾಯುಕ್ತ ಎಂಟ್ರಿ ಆಗಿದೆ. ಇದೀಗ ಬಳ್ಳಾರಿಯ ಬಿಮ್ಸ್ ಆಸ್ಪತ್ರೆಯ ಮೇಲೆ ಲೋಕಾಯುಕ್ತ ದಾಳಿ ಮಾಡಿ, ಘಟನೆಗೆ ಸಂಬಂಧಿಸಿದಂತೆ ಮಾಹಿತಿ ಕಲೆ ಹಾಕುತ್ತಿದೆ. ಬಾಣಂತಿಯರ ಸಾವಿನ ತನಿಖೆಗೆ ಇಳಿದ ಲೋಕಾಯುಕ್ತ ಇಂದು ಬಳ್ಳಾರಿಯ ಬಿಮ್ಸ್ ಆಸ್ಪತ್ರೆಗೆ ಲೋಕಾಯುಕ್ತ ತಂಡದವರು ಇದೀಗ ಭೇಟಿ ನೀಡಿದ್ದಾರೆ. ಸರಣಿ ಸಾವಿನ ಬಗ್ಗೆ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಬಿಮ್ಸ್ ಆಸ್ಪತ್ರೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಮಾಹಿತಿಯನ್ನು ಕಲೆ ಹಾಕುತ್ತಿದ್ದಾರೆ ಎಂದು ತಿಳಿದುಬಂದಿದೆ. ಇದುವರೆಗೂ ಜಿಲ್ಲಾಸ್ಪತ್ರೆ ಹಾಗೂ ಬಿಮ್ಸ್ ಸೇರಿ ಇದುವರೆಗೆ ಬಳ್ಳಾರಿಯಲ್ಲಿ 6 ಬಾಣಂತಿಯರು ಸಾವನ್ನಪ್ಪಿದ್ದು, ಸಾರ್ವಜನಿಕರು ಆಸ್ಪತ್ರೆಗಳ ವಿರುದ್ಧ ಭಾರೀ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಈ ಒಂದು ಪ್ರಕರಣ ತನಿಖೆಯ ಹಂತದಲ್ಲಿ ಇರುವಾಗಲೇ ನಿನ್ನೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸುಮಯ್ಯ ಎಂಬ ಬಾಣಂತಿ ಮಹಿಳೆ ಸಾವನ್ನಪ್ಪಿದ್ದಾರೆ. ಬಾಣಂತಿಯರ ಸಾವಿಗೆ ಗ್ಲುಕೋಸ್ ಸಹಿತ ‘IV ಗ್ಲೋಕೋಸ್’ ಕಾರಣ!…
ಬೆಳಗಾವಿ : ಇತ್ತೀಚೆಗೆ ಬೆಳಗಾವಿಯ ತಹಶೀಲ್ದಾರ್ ಕಚೇರಿಯಲ್ಲಿಯೇ ಎಸ್ ಡಿ ಎ ನೌಕರರೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದರು. ಆ ಒಂದು ಘಟನೆ ಇಡೀ ರಾಜ್ಯದಲ್ಲಿ ಭಾರಿ ಸದ್ದು ಮಾಡಿತ್ತು. ಆ ಬಳಿಕ ಇದೀಗ ಎಎಸ್ಐ ಒಬ್ಬರು ಮನೆಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಆತ್ಮಹತ್ಯೆ ಮಾಡಿಕೊಂಡಂತಹ ASI ಅವರನ್ನ ಶಂಭು ಮೇತ್ರಿ (52) ಎಂದು ತಿಳಿದುಬಂದಿದೆ.ಐಗಳಿ ಪೊಲೀಸ್ ಠಾಣೆಯಲ್ಲಿ ಎಎಸ್‌ಐ ಆಗಿ ಕಾರ್ಯ ನಿರ್ವಹಿಸುತ್ತಿದ್ದ ಶಂಭು ಅವರು ಶನಿವಾರ ಅನಂತಪುರ ಗ್ರಾಮದ ತಮ್ಮ ಮನೆಯಲ್ಲಿ ನೇಣಿಗೆ ಕೊರಳೊಡ್ಡಿದ್ದಾರೆ. ಅವರ ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಸಾವಿನ ವಿಚಾರ ಗೊತ್ತಾಗುತ್ತಿದ್ದಂತೆ ಸ್ಥಳಕ್ಕೆ ಅಥಣಿ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದು, ತನಿಖೆ ಚುರುಕುಗೊಳಿಸಿದ್ದಾರೆ.
ಕಲ್ಬುರ್ಗಿ : ಕಲ್ಬುರ್ಗಿ ಸೆಂಟ್ರಲ್ ಜೈಲಿನಲ್ಲಿ ಮತ್ತಷ್ಟು ಕರ್ಮಕಾಂಡದ ವಿಡಿಯೋಗಳು ಈಗ ಬಯಲಾಗಿದೆ. ಕೈದಿಗಳು, ಎಣ್ಣೆ ಹೊಡೆಯುತ್ತಾ ಸಿಗರೇಟ್ ಸೇದುತ್ತ ಎಂಜಾಯ್ ಮಾಡುತ್ತಿದ್ದು, ಹಾಗೂ ಗುಟ್ಕಾ ಗಳ ರಾಶಿ ರಾಶಿ ವಿಡಿಯೋ ಇದೀಗ ವೈರಲ್ ಆಗಿದೆ. ಹಿರೇವಿಚಾರವಾಗಿ ಜೈಲಿನ ಮುಖ್ಯ ಅಧೀಕ್ಷಕಿ ಡಾ. ಅನಿತಾ ಅವರು ನನ್ನ ವಿರುದ್ಧ ಷಡ್ಯಂತರ ಮಾಡಿರೋದು ಪಕ್ಕಾ ಎಂದು ಪ್ರತಿಕ್ರಿಯಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಇದೆಲ್ಲವೂ ಪಕ್ಕಾ ಪ್ಲಾನ್ ಮಾಡಿಯೇ ಮಾಡುತ್ತಿದ್ದಾರೆ. ಅಕ್ಟೋಬರ್ 14ರಂದು ನಾನು ಜೈಲಿನ ಅಧೀಕ್ಷಕಿಯಾಗಿ ಅಧಿಕಾರ ಸ್ವೀಕರಿಸಿದ್ದೇನೆ. ಮರುದಿನ ಅಂದರೆ ಅಕ್ಟೊಬರ್ 15, 16 ಮತ್ತು 17ರಂದು ನಮ್ಮ ಹಿರಿಯ ಅಧಿಕಾರಿಗಳೇ ಜೈಲಿಗೆ ತನಿಖೆ ನಡೆಸಲು ಬಂದಿದ್ದರು. ಅಲ್ಲಿಯವರೆಗೂ ನಾನು ಯಾರನ್ನು ಭೇಟಿಯಾಗಿಲ್ಲ. ವೈರಲ್ ಆದಂತಹ ವಿಡಿಯೋದಲ್ಲಿ ಅಕ್ಟೋಬರ್ 15 ರ ದಿನಾಂಕ ಇದೆ. ಅಂದರೆ ಇವರು ನನ್ನ ವಿರುದ್ಧ ಷಡ್ಯಂತರ ಮಾಡುತ್ತಿರುವುದು ಪಕ್ಕಾ ಆಗಿದೆ. ಆದಷ್ಟು ಬೇಗ ಎಲ್ಲವನ್ನೂ ವಿವರಿಸುತ್ತೇನೆ. ಇದರ ಹಿಂದಿನ ಷಡ್ಯಂತ್ರವೇನು ಅನ್ನೋದನ್ನ ಶೀಘ್ರವೇ ಹೇಳುತ್ತೇನೆ ಎಂದು…
ರಾಯಚೂರು : ಎರಡು ಬಣಗಳ ಬಡಿದಾಟ ನಡೆಯುತ್ತಿದ್ದರು, ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ರಾಯಚೂರು ತಾಲೂಕಿನ ಇಡಪನೂರು ಠಾಣೆಯ ಪಿಎಸ್ಐ ಅವಿನಾಶ್ ಕಾಂಬ್ಳೆ ಕರ್ತವ್ಯ ಲೋಪ ಹಿನ್ನೆಲೆಯಲ್ಲಿ ಅಮಾನತುಗೊಳಿಸಲಾಗಿದೆ. ಸೆಪ್ಟೆಂಬರ್ 6 ರಂದು ಎರಡು ಬಣಗಳ ನಡುವೆ ಗಲಾಟೆ ನಡೆದಿತ್ತು. ಸೆಪ್ಟೆಂಬರ್ ತಿಂಗಳಲ್ಲಿ ಮಿರ್ಜಾಪುರ ಗ್ರಾಮದಲ್ಲಿ ಎರಡು ಬನಗಳ ನಡುವೆ ಗಲಾಟೆ ನಡೆದಿತ್ತು. ಈ ಒಂದು ಘಟನೆಯಲ್ಲಿ ಓರ್ವ ಮೃತಪಟ್ಟಿದ್ದು 6 ಜನರು ಗಾಯಗೊಂಡಿದ್ದರು. ಗಲಾಟೆಯ ವೇಳೆ ಕುಟುಂಬಸ್ಥರು ಪೊಲೀಸರಿಗೆ ಕರೆ ಮಾಡಿದ್ದರು. ಆದರೂ ಪಿಎಸ್ಐ ಅವಿನಾಶ್ ಸೂಕ್ತ ಕ್ರಮ ಕೈಗೊಂಡಿಲ್ಲ ಎನ್ನುವ ಆರೋಪ ಕೇಳಿ ಬಂದಿದೆ.ಪಿಎಸ್ಐ ಅವಿನಾಶ್ ಕಾಂಬಳೆ ನಿರ್ಲಕ್ಷ ಸಾಬೀತಾಗಿದೆ. ಈ ಹಿನ್ನಲೆಯಲ್ಲಿ ಇಡಪನೂರು ಠಾಣೆಯ ಪಿಎಸ್ಐ ಅವಿನಾಶ್ ಕಾಂಬಳೆ ಸಸ್ಪೆಂಡ್ ಆಗಿದ್ದಾರೆ. ಬಳ್ಳಾರಿ ವಲಯ ಐಜಿಪಿ ಲೋಕೇಶ್ ಕುಮಾರ್ ಅವರು ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.
ಕಲಬುರ್ಗಿ : ಕಲ್ಬುರ್ಗಿಯ ಸೆಂಟ್ರಲ್ ಜೈಲಿನ ಕರ್ಮಕಾಂಡ ಬಯಲಾಗಿದೆ. ಸೆಂಟ್ರಲ್ ಜೈಲಿನೊಳಗಡೆ ಕೈದಿಗಳು ಎಣ್ಣೆ ಪಾರ್ಟಿ ಮಾಡುತ್ತಾ ಸಿಗರೇಟ್ ಸಿಗುತ್ತಾ ಬಿಂದಾಸ್ ಆಗಿದ್ದಾರೆ. ಅಲ್ಲದೆ ಸೆಲ್ ಒಳಗಡೆ ಕಂತೆ ಕಂತೆ ನೋಟು ಎಣಿಸಿಕೊಳ್ಳುತ್ತಿದ್ದಾರೆ. ಕೈದಿಗಳು ಮೋಜು ಮಾಸ್ತಿ ಮಾಡುತ್ತಿರುವ ವಿಡಿಯೋ ಇದೀಗ ವೈರಲ್ ಆಗಿದೆ. ಹೌದು ಕಲ್ಬುರ್ಗಿ ಸೆಂಟ್ರಲ್ ಜೈಲಿನ ಮತ್ತಷ್ಟು ವಿಡಿಯೋಗಳು ಇದೀಗ ವೈರಲ್ ಆಗಿದೆ. ನಿನ್ನೆ ಕಲಬುರ್ಗಿ ಜೈಲಿನಿಂದ ಆರು ಕೈದಿಗಳ ಸ್ಥಳಾಂತರ ಹಿನ್ನೆಲೆಯಲ್ಲಿ ಜೈಲಿನಲ್ಲಿ ಕೈದಿಗಳು ಮದ್ಯ ಸೇವಿಸುತ್ತಿರುವ ವಿಡಿಯೋ ವೈರಲ್ ಆಗಿದೆ. ಎರಡು ತಿಂಗಳ ಹಿಂದಿನ ವಿಡಿಯೋ ಕೈದಿಗಳು ವೈರಲ್ ಮಾಡಿದ್ದಾರೆ ಎನ್ನಲಾಗುತ್ತಿದೆ. ಸ್ಮಾರ್ಟ್ ಫೋನ್ ಗಳು, ಬಿಡಿ ಸಿಗರೇಟ್, ರಾಶಿ ಹಾಕಿರುವ ವಿಡಿಯೋಗಳು ವೈರಲ್ ಆಗಿವೆ. ಜೈಲು ಮುಖ್ಯ ಅಧಿಕ್ಷಕಿ ಅನಿತಾ ಅವರನ್ನು ಟಾರ್ಗೆಟ್ ಮಾಡಿ ವಿಡಿಯೋ ಮಾಡಿದ್ದಾರೆ ಎನ್ನಲಾಗಿದೆ. ಮುಖ್ಯ ಅಧಿಕ್ಷಕಿ ಅನಿತಾ ಅವರ ವರ್ಗಾವಣೆಗೆ ಈ ಒಂದು ಹುನ್ನಾರ ನಡೆದಿದೆಯಾ ಎಂಬ ಅನುಮಾನ ವ್ಯಕ್ತವಾಗುತ್ತಿದೆ. ಅಕ್ಟೋಬರ್ 14ರಂದು ಅನಿತಾ ಅವರು ಜೈಲು…
ಮೈಸೂರು : ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಪ್ರಕರಣವು ದಿನದಿಂದ ದಿನಕ್ಕೆ ಸ್ಫೋಟಕ ತಿರುವು ಪಡೆದುಕೊಳ್ಳುತ್ತಿದೆ. ನಿನ್ನೆ ಮುಡಾದಲ್ಲಿ ಸೈಟ್ ಕ್ರಯ ಆಗುವ ಮುನ್ನವೇ ಅಗ್ರಿಮೆಂಟ್ ಸೇಲ್ ಮಾಡಲಾಗುತ್ತಿತ್ತು ಎಂಬ ಆರೋಪ ಕೇಳಿ ಬಂದಿತ್ತು. ಇದೀಗ ಮತ್ತೊಂದು ಆರೋಪ ಕೇಳಿ ಬಂದಿದ್ದು, ಕೋಟ್ಯಾಂತರ ರೂಪಾಯಿಗೆ ಬೆಲೆಬಾಳುವ ಸೈಟ್ಗಳನ್ನು ಕೇವಲ 3 ಸಾವಿರಕ್ಕೆ ಮಾರಾಟ ಮಾಡಿದ್ದು ಇದರಿಂದ ಸರ್ಕಾರಕ್ಕೆ 300 ಕೋಟಿ ನಷ್ಟವಾಗಿದೆ ಎಂದು ಹೇಳಲಾಗುತ್ತಿದೆ. ಹೌದು ಮೈಸೂರಿನ ವಿಜಯನಗರದಲ್ಲಿ ಸುಮಾರು ಒಂದು ಕೋಟಿ ರೂಪಾಯಿಗೂ ಅಧಿಕ ಬೆಲೆಬಾಳುವ 23 ನಿವೇಶನಗಳನ್ನು ಕೇವಲ 3 ಸಾವಿರ ರೂ.ಗೆ ಮಾರಾಟ ಮಾಡಿರುವ ಆರೋಪ ಮುಡಾದ ವಿರುದ್ಧ ಕೇಳಿಬಂದಿದೆ. ಇದರಿಂದ ಸರ್ಕಾರದ ಬೊಕ್ಕಸಕ್ಕೆ 300 ಕೋಟಿ ರೂಪಾಯಿಗೂ ಅಧಿಕ ನಷ್ಟವಾಗಿದೆ ಎಂದು ಹೇಳಲಾಗುತ್ತಿದೆ.ಮುಡಾ ಮಾಜಿ ಆಯುಕ್ತ ದಿನೇಶ್ ಮತ್ತು ರಿಯಲ್ ಎಸ್ಟೇಟ್ ಉದ್ಯಮಿ ಕಾರ್ತಿಕ ಬಡಾವಣೆಯ ಮಂಜುನಾಥ್ನಿಂದ ಮಹಾ ಭೂಗಳ್ಳತನ ನಡೆದಿದೆ ಎಂಬ ಆರೋಪ ಕೇಳಿಬಂದಿದೆ. ಇಡಿ ಮುಂದೆ ವಿಚಾರಣೆಗೆ ಹಾಜರಾಗಿದ್ದ ಮುಡಾ ಮಾಜಿ ಆಯುಕ್ತ ದಿನೇಶ್…
ತುಮಕೂರು : ಪ್ರೀತಿಸಿದ ಅಪ್ರಾಪ್ತೆ ಯುವತಿಯನ್ನು ಆಕೆಯ ಮನೆಯವರು ಮದುವೆ ಮಾಡಿಕೊಡಲು ಒಪ್ಪದೇ ಇದ್ದುದ್ದರಿಂದ ಮನನೊಂದ ಯುವಕನೊಬ್ಬ ಯುವತಿಯ ಮನೆಯ ಮುಂದೇನೆ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತುಮಕೂರಿನ ಜಯನಗರ ಬಳಿಯ ಚೆನ್ನಪ್ಪನಪಾಳ್ಯದಲ್ಲಿ ಘಟನೆ ನಡೆದಿದೆ ನಡೆದಿದೆ. ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ಮಂಜುನಾಥ್ (32) ಎಂದು ತಿಳಿದುಬಂದಿದೆ. ಕೆಲ ತಿಂಗಳಿಂದ ಪಕ್ಕದ ಮನೆ ಹುಡುಗಿಯನ್ನು ಮಂಜುನಾಥ ಪ್ರೀತಿಸುತ್ತಿದ್ ಮದುವೆ ಮಾಡಿ ಕೊಡಲು ಯುವತಿ ಮನೆಯವರನ್ನು ಮಂಜುನಾಥ ಕೇಳಿದ್ದ ಹುಡುಗಿ ಮನೆಯವರು ಮದುವೆ ಮಾಡಿಕೊಡಲು ನಿರಾಕರಣೆ ಮಾಡಿದ್ದರೆ. ಈ ಹಿನ್ನೆಲೆಯಲ್ಲಿ ತಡರಾತ್ರಿ ಯುವತಿಯ ಮನೆಯ ಮುಂದೆ ಚಾಲಕ ಮಂಜುನಾಥ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.ಅಪ್ರಾಪ್ತೆ ಯಾಗಿದ್ದರಿಂದ ಮದುವೆಗೆ ನಿರಾಕರಣೆ ಮಾಡಿದ ಆರೋಪ ಕೇಳಿಬಂದಿದೆ. ಘಟನೆಗೆ ಸಂಬಂಧಿಸಿದಂತೆ ಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
ಶಿವಮೊಗ್ಗ : ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಣಾ ಇಲಾಖೆಯು 2024-25ನೇ ಸಾಲಿಗೆ ಬಿ.ಇಡಿ ಹಾಗೂ ಡಿ.ಇಡಿ ಕೋರ್ಸ್ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರ (ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ ಹಾಗೂ ಪಾರ್ಸಿ) ಸಮುದಾಯದ ವಿದ್ಯಾರ್ಥಿಗಳಿಗೆ ವಿಶೇಷ ಪ್ರೋತ್ಸಾಹಧನ ಯೋಜನೆಯಡಿ ಆನ್‌ಲೈನ್ ಅರ್ಜಿ ಆಹ್ವಾನಿಸಿದೆ. ಅಭ್ಯರ್ಥಿಗಳು ಕರ್ನಾಟಕ ರಾಜ್ಯದ ನಿವಾಸಿಯಾಗಿದ್ದು, ವಿದ್ಯಾರ್ಥಿಗಳ ಪೋಷಕರ ವಾರ್ಷಿಕ ಗರಿಷ್ಟ ವರಮಾನ ರೂ. 6.00 ಲಕ್ಷಕ್ಕೆ ಮೀರಿರಬಾರದು. ಅಭ್ಯರ್ಥಿಗಳನ್ನು ಅರ್ಹತೆ ಪರೀಕ್ಷೆ/ಹಿಂದಿನ ಸಾಲಿನ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು. ಆಸಕ್ತ ಅರ್ಹ ವಿದ್ಯಾರ್ಥಿಗಳು ಇಲಾಖಾ ವೆಬ್‌ಸೈಟ್ sevasindhu.karnataka.gov.in ಮೂಲಕ ದಿನಾಂಕ: 25/12/2024 ರೊಳಗಾಗಿ ಸಲ್ಲಿಸಬೇಕು. ನಂತರ ಸಂಬಧಪಟ್ಟ ಕಾಲೇಜಿನ ಪ್ರಾಂಶುಪಾಲರ ಮೊಹರು ಮತ್ತು ಸಹಿ/ದೃಢೀಕರಣ ಪಡೆದುಕೊಂಡು, ಅರ್ಜಿಯೊಂದಿಗೆ ಸೂಕ್ತ ದಾಖಲೆಗಳ ಪ್ರತಿಯೊಂದಿಗೆ ಜಿಲ್ಲಾ ಅಧಿಕಾರಿಗಳ ಕಚೇರಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, 1ನೇ ಮಹಡಿ, ಸತ್ಯಶ್ರೀ ಆರ್ಕೆಡ್, 5ನೇ ಪ್ಯಾರಲಲ್ ರಸ್ತೆ, ದುರ್ಗಿಗುಡಿ, ಶಿವಮೊಗ್ಗ ಇಲ್ಲಿಗೆ ಸಲ್ಲಿಸುವಂತೆ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.…
ರಾಯಚೂರು : ನಾವೆಲ್ಲರೂ ರಾಜಾಹುಲಿ ಸಿನಿಮಾ ವನ್ನು ನೋಡಿದ್ದೇವೆ. ಅದರಲ್ಲಿ ನಟ ಯಶ್ ಅವರು ಹಾಗೂ ಆತನ ಬಾಲ್ಯ ಸ್ನೇಹಿತ ಒಂದೇ ಹುಡುಗಿಯನ್ನು ಪ್ರೀತಿಸುತ್ತಿರುತ್ತಾರೆ. ಆದರೆ ಆಕೆಯು ನಟ ಯಶ್ ಅವರನ್ನ ಪ್ರೀತಿಸುತ್ತಿದ್ದಳು. ಹೀಗಾಗಿ ಈ ಒಂದು ಹುಡುಗಿಯ ವಿಚಾರವಾಗಿ ಇಬ್ಬರ ಮಧ್ಯೆ ಗಲಾಟೆ ಆಗಿ ಹೊಡೆದಾಡಿಕೊಳ್ಳುತ್ತಾರೆ. ಆದರೆ ಇಂಥದ್ದೇ ಸ್ಟೈಲ್ ನಲ್ಲಿ ರಾಯಚೂರಿನಲ್ಲಿ ಒಂದು ಘಟನೆ ನಡೆದಿದ್ದು, ಒಂದೇ ಹುಡುಗಿಯನ್ನು ಇಬ್ಬರು ಬಾಲ್ಯ ಸ್ನೇಹಿತರು ಪ್ರೀತಿಸುತ್ತಿದ್ದರು. ಈ ವೇಳೆ ಇದೆ ವಿಚಾರವಾಗಿ ಸ್ನೇಹಿತ ತನ್ನ ಇನ್ನೊಬ್ಬ ಬಾಲ್ಯ ಸ್ನೇಹಿತನನ್ನು ಮಾತುಕತೆಗೆ ಕರೆಸುತ್ತಾನೆ. ಈ ಸಂದರ್ಭದಲ್ಲಿ ಮಾತಿಗೆ ಮಾತು ಬೆಳೆದು ಒಬ್ಬ ಸ್ನೇಹಿತ ತನ್ನ ಸಹಚರರೊಂದಿಗೆ ಸೇರಿ ಬಾಲ್ಯ ಸ್ನೇಹಿತನನ್ನೇ ಕೊಲ್ಲುತ್ತಾನೆ.ಮೃತನನ್ನು ಸಮೀರ್ ಎಂದು ಗುರುತಿಸಲಾಗಿದೆ.ನವೆಂಬರ್ 26ರಂದು ಈ ಒಂದು ಘಟನೆ ನಡೆದಿದ್ದು, ಇದೀಗ ಪೊಲೀಸರ ತನಿಖೆಯ ವೇಳೆ ಬೆಳಕಿಗೆ ಬಂದಿದೆ. ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ರಾಯಚೂರು ಜಿಲ್ಲೆಯ ಸಿರವಾರ ಪೊಲೀಸ್ ಠಾಣೆಯಲ್ಲಿ 6 ಮಂದಿ ವಿರುದ್ಧ ಎಫ್ಐಆರ್ ದಾಖಲಾಗಿದೆ.…
ಬೆಂಗಳೂರು : ವಿದ್ಯುತ್ ತರ ಏರಿಸುವ ಕುರಿತಂತೆ ಕರ್ನಾಟಕ ವಿದ್ಯುತ್ ಶಕ್ತಿ ನಿಯಂತ್ರಣ ಆಯೋಗಕ್ಕೆ ಈಗಾಗಲೇ ಬೆಸ್ಕಾಂ ಸೇರಿದಂತೆ ರಾಜ್ಯದ ಎಲ್ಲ ಎಸ್ಕಾಂಗಳು ಪ್ರಸ್ತಾವನೆ ಸಲ್ಲಿಸಿವೆ. ಪ್ರತಿ ಯುನಿಟ್ ದರ ಹೆಚ್ಚಳ ಮಾಡುವಂತೆ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ (KSRC)ಕ್ಕೆ ಮನವಿ ಸಲ್ಲಿಸಿರುವುದಾಗಿ ತಿಳಿದುಬಂದಿದೆ. 2025-26 ರಲ್ಲಿ ಪ್ರತಿ ಯೂನಿಟ್ ಗೆ 67 ಪೈಸೆ, 2026-27 ರಲ್ಲಿ ಪ್ರತಿ ಯೂನಿಟ್ಗೆ 75 ಪೈಸೆ ಹಾಗೂ 2027-28 ರಲ್ಲಿ 91 ಪೈಸೆ ದರ ಏರಿಕೆಗೆ ಪ್ರಸ್ತಾವನೆ ಸಲ್ಲಿಸಿವೆ. ದರ ಏರಿಕೆ ಪ್ರಸ್ತಾವನೆ ಸಲ್ಲಿಸಲು ನ.30 ಕೊನೆಯ ದಿನವಾಗಿತ್ತು. ಆ ಗಡುವಿನೊಳಗೆ ಎಲ್ಲಾ ಎಸ್ಕಾಂಗಳು ಕೂಡ ದರ ಏರಿಕೆಗೆ ಪ್ರಸ್ತಾವನೆ ಕೊಟ್ಟಿವೆ. ದರ ಏರಿಕೆ ಒಟ್ಟೊಟ್ಟಿಗೆ ಬಹುತೇಕ ಏಕ ಮಾದರಿಯಲ್ಲಿಯೇ ಆಗಲಿದೆ ಎಂದು ಕೆಇಆರ್‌ಸಿ ಮೂಲಗಳು ತಿಳಿಸಿವೆ. ದರ ಏರಿಕೆ ಪ್ರಸ್ತಾವನೆ ಸಲ್ಲಿಸಲು ನವೆಂಬರ್ 30 ಕೊನೆ ದಿನವಾಗಿತ್ತು. ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ ಫೆಬ್ರುವರಿಯಲ್ಲಿ ಉದ್ಯಮಿಗಳು, ವ್ಯಾಪಾರಸ್ಥರು, ಸಾರ್ವಜನಿಕರು, ತಜ್ಞರ ಸಭೆ ನಡೆಸಲಿದ್ದು,…














