Subscribe to Updates
Get the latest creative news from FooBar about art, design and business.
Author: ಸುರೇಶ್
"ಕನ್ನಡ ನ್ಯೂಸ್ ನೌ ಜಾಲತಾಣದ ಮುಖ್ಯ ಸಂಪಾದಕರಾದ ಸುರೇಶ್ ಅವರು ಕಳೆದ 4 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದಾರೆ. ಸರ್ಕಾರದ ಯೋಜನೆಗಳು, ಶಿಕ್ಷಣ ಮತ್ತು ಪ್ರಚಲಿತ ವಿದ್ಯಮಾನಗಳನ್ನು ಸಾಮಾನ್ಯ ಜನರಿಗೂ ಅರ್ಥವಾಗುವಂತೆ ವಿವರಿಸುವುದು ಇವರ ವಿಶೇಷತೆ. ಈ ಮೊದಲು ವಿವಿಧ ವೆಬ್‌ಸೈಟ್‌ಗಳಲ್ಲಿ ನಾಗರಿಕ ಸಮಸ್ಯೆಗಳ ಬಗ್ಗೆ ವರದಿಗಾರರಾಗಿ ಕೆಲಸ ಮಾಡಿರುವ ಇವರು, ಸಮಯೋಚಿತ ಹಾಗೂ ವಿಶ್ವಾಸಾರ್ಹ ಮಾಹಿತಿ ನೀಡುವ ಮೂಲಕ ಓದುಗರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಡಿಜಿಟಲ್ ಸಾಕ್ಷರತೆ ಇವರ ನೆಚ್ಚಿನ ವಿಷಯಗಳಲ್ಲೊಂದು
ಬೆಂಗಳೂರು : ಬಿಗ್ಬಾಸ್ ಮಾಜಿ ಸ್ಪರ್ಧಿ ರಜತ್ ಕಿಶನ್ ಮತ್ತೊಮ್ಮೆ ಕಾನೂನು ಸಂಕಷ್ಟಕ್ಕೆ ಸಿಲುಕಿದ್ದಾರೆ. ಪೆಟ್ರೋಲ್ ಬಾಂಬ್ ಮಾದರಿಯ ವಸ್ತು ಬ್ಲಾಸ್ಟ್ ಆಗುವ ದೃಶ್ಯ ಹೊಂದಿರುವ ರೀಲ್ಸ್ ಮಾಡಿರುವ ಬಗ್ಗೆ ರಜತ್ ವಿರುದ್ಧ ಕನಕಪುರದ ಕಗ್ಗಲೀಪುರ ಠಾಣೆ ಪೊಲೀಸರು ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿದ್ದಾರೆ. ರಜತ್, ಇತ್ತೀಚೆಗೆ ಕೆಲ ದಿನಗಳ ಹಿಂದೆ ಸಾಮಾಜಿಕ ಜಾಲತಾಣದಲ್ಲಿ ಈ ರೀಲ್ಸ್ ಅಪ್ಲೋಡ್ ಮಾಡಿದ್ದರು. ಬೈಕ್ನಲ್ಲಿ ಸ್ಟೈಲ್ ಆಗಿ ಬರುವ ರಜತ್ ಹಿಂದೆ ಪೆಟ್ರೋಲ್ ಬಾಂಬ್ ಮಾದರಿಯ ವಸ್ತು ಸ್ಫೋಟವಾಗುವ ದೃಶ್ಯ ಇದಾಗಿತ್ತು. ಆ ರೀಲ್ಸ್ಗೆ ಹಲವರು ಆಕ್ಷೇಪ ವ್ಯಕ್ತಪಡಿಸಿದ್ದರು. ನಂತರ ತಮ್ಮ ತಪ್ಪು ಅರಿತು ರಜತ್ ಕ್ಷಮೆ ಸಹ ಕೇಳಿದ್ದರು. ಆದರೀಗ, ಬಿಗ್ಬಾಸ್ ಮಾಜಿ ಸ್ಪರ್ಧಿ ವಿರುದ್ಧ ಮತ್ತೊಂದು ಪ್ರಕರಣ ದಾಖಲಾಗಿದೆ. ಈ ಘಟನೆ ಕುರಿತು ಡಿವೈಎಸ್ಪಿ ಶ್ರೀನಿವಾಸ್ ಅವರು ಮಾಧ್ಯಮದೊಂದಿಗೆ ಮಾತನಾಡಿ, ರಜತ್ ಅವರು ಸಾರ್ವಜನಿಕ ಶಾಂತಿಗೆ ಭಂಗ, ಅನುಚಿತ ವರ್ತನೆ, ರಸ್ತೆ ನಿಯಮ ಉಲ್ಲಂಘನೆ, ಸಾರ್ವಜನಿಕ ಆಸ್ತಿಗೆ ನಷ್ಟ ಮಾಡಿದ್ದಾರೆ. ಬಿಎನ್ಎಸ್ನ…
ಬೆಂಗಳೂರು : ನಗರದ ಬೌರಿಂಗ್ ಆಸ್ಪತ್ರೆಯ ಕಾಂಪೌಂಡ್ ಕುಸಿದು ಏಳು ಮಂದಿ ದುರ್ಮರಣಕ್ಕೀಡಾದ ಬೆನ್ನಲ್ಲೇ ಎಚ್ಚೆತ್ತುಕೊಂಡಿರುವ ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ್ ಪಾಟೀಲ್ ಅವರು ಮಹತ್ವದ ಆದೇಶ ಹೊರಡಿಸಿದ್ದಾರೆ. ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ಸಚಿವರು, ಬೆಂಗಳೂರು ನಗರದಾದ್ಯಂತ ಇರುವ ಎಲ್ಲಾ ಸರ್ಕಾರಿ ಆಸ್ಪತ್ರೆಗಳ ಕಟ್ಟಡಗಳ ಸುಸ್ಥಿತಿ ಹಾಗೂ ಸುರಕ್ಷತೆಯ ಬಗ್ಗೆ ತಕ್ಷಣವೇ ಸಮಗ್ರ ಪರಿಶೀಲನೆ ನಡೆಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಬೆಂಗಳೂರಿನ ಬೌರಿಂಗ್ ಆಸ್ಪತ್ರೆ ವಿಕ್ಟೋರಿಯಾ ಆಸ್ಪತ್ರೆ ಕೆ ಸಿ ಜನರಲ್ ಆಸ್ಪತ್ರೆ ಸಿವಿ ರಾಮನ್ ನಗರ ಆಸ್ಪತ್ರೆ ಸರ್ಕಾರಿ ಆಸ್ಪತ್ರೆ ಕಾಂಪೌಂಡ್ ಸೇರಿದಂತೆ ಕಟ್ಟಡಗಳ ಕ್ವಾಲಿಟಿ ಚೆಕ್ಕಗೆ ಸಚಿವ ಡಾಕ್ಟರ್ ಶರಣ ಪ್ರಕಾಶ್ ಪಾಟೀಲ್ ಅವರು ಆದೇಶ ಹೊರಡಿಸಿದ್ದಾರೆ. ಹಳೆಯದಾದ ಮತ್ತು ಶಿಥಿಲಾವಸ್ಥೆಯಲ್ಲಿರುವ ಕಟ್ಟಡಗಳನ್ನು ಗುರುತಿಸಿ, ಮುಂದಾಗಬಹುದಾದ ಇಂತಹ ಅನಾಹುತಗಳನ್ನು ತಡೆಗಟ್ಟಲು ಈ ಕ್ರಮ ಕೈಗೊಳ್ಳಲಾಗಿದೆ. ಈ ತಪಾಸಣಾ ಕಾರ್ಯದ ವರದಿಯನ್ನು ಶೀಘ್ರವಾಗಿ ಸಲ್ಲಿಸಬೇಕು ಮತ್ತು ಸಾರ್ವಜನಿಕರ ಸುರಕ್ಷತೆಯಲ್ಲಿ ಯಾವುದೇ ರಾಜಿ ಮಾಡಿಕೊಳ್ಳಬಾರದು ಎಂದು ಸಚಿವರು ಕಟ್ಟುನಿಟ್ಟಿನ ನಿರ್ದೇಶನ ನೀಡಿದ್ದಾರೆ.…
ಬೆಂಗಳೂರು : ಬೆಂಗಳೂರಿನಲ್ಲಿ ಭಾರಿ ಮಳೆಗೆ ಮತ್ತೊಂದು ಬಲಿಯಾಗಿದ್ದು, ಮನೆಯ ಮೇಲ್ಚಾವಣಿ ಸಿಮೆಂಟ್ ಇಟ್ಟಿಗೆ ಬಿದ್ದು ಮಂಜುನಾಥ್ ಸಾವನಪ್ಪಿದ್ದಾರೆ. ಬೆಂಗಳೂರಿನ ಚಾಮರಾಜಪೇಟೆ ಬಳಿ ಈ ಒಂದು ದುರಂತ ಸಂಭವಿಸಿದ್ದು ಸದ್ಯ ವಿಕ್ಟೋರಿಯಾ ಆಸ್ಪತ್ರೆಗೆ ಮಂಜುನಾಥ್ ಮೃತದೇಹವನ್ನು ಶಿಫ್ಟ್ ಮಾಡಲಾಗಿದೆ ಚಾಮರಾಜ ಪೊಲೀಸ್ ಠಾಣೆಯಲ್ಲಿ ಈ ಕುರಿತಂತೆ ಪ್ರಕರಣ ದಾಖಲಾಗಿದೆ.ಬೆಂಗಳೂರಿನಲ್ಲಿ ರಕ್ಕಸ ಮಳೆಗೆ ಇದುವರೆಗೂ 9 ಜನ ಸಾಾವನಪ್ಪಿದ್ದು ಇದೀಗ ಮಂಜುನಾಥ್ ಸಾವಿನಿಂದ ಸಾವಿನ ಸಂಖ್ಯೆ 10ಕ್ಕೆ ಏರಿಕೆಯಾಗಿದೆ. ಇನ್ನು ಬೆಂಗಳೂರಿನಲ್ಲಿ ಮರದ ಕೊಂಬೆ ಬಿದ್ದು ಇಬ್ಬರಿಗೆ ಗಂಭೀರವಾದ ಗಾಯಗಳಾಗಿದ್ದು ಬಸವನಗುಡಿ ರಾಮಕೃಷ್ಣ ಮಠದ ಸಮೀಪ ಈ ಒಂದು ಘಟನೆ ಸಂಭವಿಸಿದೆ. ಕಾರಿನಲ್ಲಿ ತೆರಳುತ್ತಿರುವಾಗ ಮರದ ಕೊಂಬೆ ಮುರಿದುಬಿದ್ದು ಈ ಒಂದು ದುರಂತ ಸಂಭವಿಸಿದೆ. ಘಟನೆಯಲ್ಲಿ ಇಬ್ಬರು ಗಾಯಗೊಂಡಿದ್ದು, ರಾಕೇಶ್ ಎನ್ನುವವರಿಗೆ ಗಂಭೀರವಾದ ಗಾಯಗಳಾಗಿವೆ. ಇನ್ನು ಸಣ್ಣ ಪುಟ್ಟ ಗಾಯಗಳೊಂದಿಗೆ ಮಂಜುನಾಥ ಎನ್ನುವವರು ಪಾರಾಗಿದ್ದಾರೆ. ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಹಾಸನ : ಹಾಸನದಲ್ಲಿ ಹೃದಯವಿದ್ರಾವಕ ಘಟನೆ ಒಂದು ನಡೆದಿದ್ದು ಪ್ರೀವೆಡ್ಡಿಂಗ್ ಶೂಟ್ ಗೆ ಕಾರಿನಲ್ಲಿ ವರ ತೆರಳುವಾಗ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದಿದೆ. ವೇಗವಾಗಿ ಬಂದ ಕಾರು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ವರ ಸ್ಥಳದಲ್ಲೆ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಮೂಗಲಿ ಗ್ರಾಮದದಲ್ಲಿ ಇಂದು ಬೆಳಿಗ್ಗೆ ಸಂಭವಿಸಿದೆ. ಅಪಘಾತದಲ್ಲಿ ಮೃತಪಟ್ಟ ದುರ್ದೈವಿ ಯುವಕನನ್ನು ಮನು.ಎಲ್.ಎನ್. (29) ಎಂದು ಗುರುತಿಸಲಾಗಿದೆ. ಇವರು ಬೇಲೂರು ತಾಲ್ಲೂಕಿನ, ಲಕ್ಕುಂದ ಗ್ರಾಮದ, ದರ್ಬಾರ್ ಪೇಟೆ ನಿವಾಸಿಯಾಗಿದ್ದರು. ಮೇ 10 ರಂದು ಆಲೂರು ತಾಲೂಕು ತೊಗರನಹಳ್ಳಿ ಗ್ರಾಮದ ಕಾಂಚನ ಜೊತೆ ಮನು ಅವರ ಮದುವೆ ನಿಶ್ಚಯವಾಗಿತ್ತು. ಆಲೂರು ಬೈರಾಪುರ ರಸ್ತೆಯಲ್ಲಿರುವ ಶ್ರೀ ವೀರಶೈವ ಕಲ್ಯಾಣ ಮಂಟಪದಲ್ಲಿ ಮದುವೆ ನಿಗದಿಯಾಗಿತ್ತು. ಮದುವೆಗೆ ಎರಡೂ ಕುಟುಂಬಗಳಲ್ಲಿ ಭರದಿಂದ ಸಿದ್ಧತೆಗಳು ನಡೆಯುತ್ತಿದ್ದವು. ಈ ನಡುವೆ ಇಂದು ಬೆಳಿಗ್ಗೆ ಮನು ಅವರು ಪ್ರೀವೆಡ್ಡಿಂಗ್ ಶೂಟಿಂಗ್‌ಗಾಗಿ ವಧುವನ್ನು ಕರೆತರಲು ತಮ್ಮ ವಿಟಾರಾ ಬ್ರೆಝಾ ಕಾರಿನಲ್ಲಿ ಒಬ್ಬರೇ ಹೊರಟಿದ್ದರು.…
ಬೆಂಗಳೂರು : ಬೆಂಗಳೂರಿನಲ್ಲಿ ಮಳೆಯಿಂದ ಭಾರಿ ಅವತಾರ ಸೃಷ್ಟಿಯಾಗಿದ್ದು, ಇದೀಗ ಸಿಎಂ ಸಿದ್ದರಾಮಯ್ಯ ಕಾವೇರಿ ನಿವಾಸಕ್ಕೂ ಮೊದಲ ಮಳೆಯ ಹೊಡೆತ ತಟ್ಟಿದೆ. ಕಾವೇರಿ ನಿವಾಸದಲ್ಲಿ 4-5 ಮರಗಳು ಧರೆಗೆ ಉರುಳಿವೆ. ಕಾವೇರಿ ನಿವಾಸದ ಕಾಂಪೌಂಡ್ ಮೇಲೆ ಮರಗಳು ಬಿದ್ದು ಅವಾಂತರ ಸೃಷ್ಟಿಯಾಗಿದೆ. ಕಾಂಪೌಂಡ್ ಮೇಲೆ ಗ್ರೌಂಡಿನ ಕಬ್ಬಿಣದ ವಾಲ್ಗಳು ಬಿದ್ದಿವೆ. ಸಿಎಂ ಸಿದ್ದರಾಮಯ್ಯ ಮನೆಯಲ್ಲಿದ್ದಾಗಲೇ ಕಬ್ಬಿಣದ ವಾಲ್ಗಳು ಉರುಳಿ ಬಿದ್ದಿವೆ. ಈ ವೇಳೆ ಮ್ಯಾನ್ ಹೋಲ್ ಬ್ಲಾಕ್ ಆಗಿದ್ದರೆ ಕೂಡಲೇ ಸರಿಪಡಿಸಿ ಎಂದು ಜಿಬಿಎಗೆ ಸಿಎಂ ಸಿದ್ದರಾಮಯ್ಯ ಖಡಕ್ ಸೂಚನೆ ಕೊಟ್ಟಿದ್ದಾರೆ. ರಸ್ತೆ ಪಕ್ಕದ ಎಲ್ಲಾ ಗಟರ್ಗಳ ಹೂಳುಗಳನ್ನು ತೆಗೆಯಿರಿ. ಬೀಳುವ ಹಂತದ ರಂಬೆ ಕೊಂಬೆಗಳನ್ನು ತೆರವುಗೊಳಿಸಿ, ರಸ್ತೆಗಳಲ್ಲಿ ನೀರು ನಿಲ್ಲದಂತೆ ಎಚ್ಚರಿಕೆ ವಹಿಸಬೇಕು. ಬೌಲಿಂಗ್ ರೀತಿ ದುರ್ಘಟನೆ ನಡೆಯದಂತೆ ಎಚ್ಚರವಹಿಸಿ ಎಂದು ಜಿಬಿಎ ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಸೂಚನೆ ಕೊಟ್ಟಿದ್ದಾರೆ.
BREAKING : ಬೇಡಿಕೆ ಈಡೇರದ ಹಿನ್ನೆಲೆ : ಮೇ.20ಕ್ಕೆ ರಾಜ್ಯಾದ್ಯಂತ ಸಾರಿಗೆ ನೌಕರರಿಂದ ಮತ್ತೆ ಅನಿರ್ದಿಷ್ಟಾವಧಿ ಮುಷ್ಕರ
ಬೆಂಗಳೂರು: ಬೆಂಗಳೂರಿನಲ್ಲಿ ಕಳೆದ ಬಾರಿ ಸಾರಿಗೆ ನೌಕರರ ಮುಷ್ಕರ ನಡೆದಾಗ ಒಂದಷ್ಟು ಆಶ್ವಾಸನೆ ನೀಡಿದ್ದ ಸರ್ಕಾರ ಬುಧವಾರ (ಏ. 29) ನೌಕರರ ಸಂಘಟನೆಗಳ ಜೊತೆಗೆ ಮತ್ತೊಮ್ಮೆ ಸಭೆ ನಡೆಸಿತು. ಈ ಮಾತುಕತೆ ವಿಫಲವಾದ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿಯಿಂದ ಮತ್ತೆ ಅನಿರ್ದಿಷ್ಟಾವಧಿ ಮುಷ್ಕರ ನಡೆಸಲು ತಿರ್ಮಾನಿಸಲಾಗಿದೆ. ಮುಂದಿನ ತಿಂಗಳು ಮೇ 20ರಂದು ರಾಜ್ಯವ್ಯಾಪಿ ಮುಷ್ಕರ ಜರುಗಲಿದೆ. ರಾಜ್ಯ ಸರ್ಕಾರ ಇಂದು ಸಾರಿಗೆ ನೌಕರರ ಮೊದಲ ಕಂತಿನ ಹಿಂಬಾಕಿ ವೇತನ ಬಿಡುಗಡೆಗೆ ಅನುಮೋದನೆ ನೀಡಿ ಆದೇಶಿಸಿತು. ಅದರ ಬೆನ್ನಲ್ಲೆ ಸಂಧಾನಸಭೆಯ ಮಾತುಕತೆ ವಿಫಲವಾಯಿತು. ಶೇ.7ರಷ್ಟು ವೇತನ ಹೆಚ್ಚಳ ಪ್ರಸ್ತಾವನೆ ಮುಂದಿಟ್ಟರು. ಅದನ್ನು ನೌಕರರ ಸಂಘಟನೆ ಮುಖ್ಯಸ್ಥರು ಒಪ್ಪದ ಹಿನ್ನೆಲೆ ಸಭೆಯಲ್ಲಿ ಸೂಕ್ತ ನೀರ್ಣಯಕ್ಕೆ ಬರಲಾಗಲಿಲ್ಲ. ನೌಕರರ ಬೇಡಿಕೆಗಳೇನು? ನೌಕರರ ಮೂಲ ವೇತನ ಶೇ.25ರಷ್ಟು ಹೆಚ್ಚಳ, ಶೇ.31ರಷ್ಟು ತುಟ್ಟಿಭತ್ಯೆ ಮೂಲ ವೇತನದಲ್ಲಿ ವಿಲೀನ ಮಾಡುವುದು. ವೇತನ ಶ್ರೇಣಿ ರಚಿಸಿ ಬಾಕಿ ಹಣ ಪಾವತಿಸುವುದು, 26…
ಮಂಡ್ಯ : ಬೆಂಗಳೂರಿನಲ್ಲಿ ಬಾರಿ ಗಾಳಿ ಮಳೆಗೆ ಅವಾಂತರ ಸೃಷ್ಟಿಯಾಗಿ ನಿನ್ನೆ ಹತ್ತಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದ ಘಟನೆ ನಡೆದಿದೆ ಬೆಂಗಳೂರು ಅಷ್ಟೇ ಅಲ್ಲದೆ ಮಂಡ್ಯದಲ್ಲಿ ಕೂಡ ರಾತ್ರಿ ಬಿರುಗಾಳಿ ಸಹಿತ ಧಾರಾಕಾರ ಮಳೆ ಅವಾಂತರ ಸೃಷ್ಟಿಯಾಗಿದ್ದು, ಬಾರಿ ಬಿರುಗಾಳಿಗೆ ಕಾರ್ಯಕ್ರಮಕ್ಕೆ ಹಾಕಿದ್ದ ಶಾಮಿಯಾನದ ಪೆಂಡಾಲ್ ಕುಸಿತವಾಗಿದೆ. ಮಂಡ್ಯದ ವಿವಿ ಆವರಣದಲ್ಲಿ ಘಟನೆ ನಡೆದಿದೆ. ಹಾಗಾಗಿ ಮಂಡ್ಯದ ವಿ.ವಿ ಆವರಣದಲ್ಲಿ ನಡೆಯಬೇಕಿದ್ದ ನವವಸಂತ ಸಾಂಸ್ಕೃತಿಕ ಕಾರ್ಯಕ್ರಮ ರದ್ದು ಮಾಡಲಾಗಿದೆ. ಇಂದಿನ ಎಲ್ಲಾ ಕಾರ್ಯಾಕ್ರಮವನ್ನು ತಾತ್ಕಾಲಿಕ ರದ್ದು ಮಾಡಿ ಮುಂದೂಡಿಕೆ ಮಾಡಿದ್ದು, ಇಂದು ನಡೆಯಬೇಕಿದ್ದ ಮಂಡ್ಯ ವಿವಿ ಪ್ರವೇಶದ್ವಾರ ಹಾಗು ಎರಡು ಕೋಟಿ ವೆಚ್ಚದ ಕಾಮಗಾರಿಗೆ ಭೂಮಿ ಪೂಜೆ ಕಾರ್ಯಕ್ರಮ ಇತ್ತು. ಈ ಕಾರ್ಯಕ್ರಮವನ್ನು ಕೃಷಿ ಸಚಿವ ಚಲುವರಾಯ ಸ್ವಾಮಿಯಿಂದ ನೆರವೇರಬೇಕಿದ್ದ ಶಂಕುಸ್ಥಾಪನೆ ನಡೆಯಬೇಕಿತ್ತು. ಅಕಾಲಿಕ ಮಳೆಯಿಂದಾಗಿ ಕಾರ್ಯಕ್ರಮಕ್ಕೆ ಹಾಕಿದ್ದ ಶಾಮಿಯಾನದ ಪೆಂಡಾಲ್ ಕುಸಿತ. ಕಾರ್ಯಕ್ರಮ ನಡೆಯಬೇಕಿದ್ದ ವಿವಿ ಕ್ರೀಡಾಂಗಣದಲ್ಲಿ ಒದ್ದೆಯಾಗಿ ನೀರು ನಿಂತಿರೋದ್ದಕ್ಕೆ ಕಾರ್ಯಕ್ರಮ ರದ್ದು ಪಡಿಸಲಾಗಿದೆ. ಕಾರ್ಯಕ್ರಮ ರದ್ದುಗೊಳಿಸಿ ಮುಂದೂಡಿಕೆ…
ಬೆಂಗಳೂರು : ರಾಜ್ಯದಲ್ಲಿ ಬಿಸಿಲಿನ ತಾಪಕ್ಕೆ ಜನ ಹೈರಾಣಾಗಿದ್ದಾರೆ. ಇನ್ನು ಕೆಲವು ಜಿಲ್ಲೆಗಳಲ್ಲಿ ಭಾರಿ ಮಳೆ ಸುರಿಯುತ್ತಿದೆ. ಇದೀಗ ರಾಜಧಾನಿ ಬೆಂಗಳೂರಲ್ಲಿ ಇಂದು ಸಂಜೆ ಧಾರಾಕಾರವಾಗಿ ಮಳೆ ಸುರಿಯಿತು. ಬೆಂಗಳೂರಿನ ಶಾಂತಿನಗರ, ರಿಚ್ಮಂಡ್ ಸರ್ಕಲ್, ಕೋರಮಂಗಲ, ಮೆಜೆಸ್ಟಿಕ್, ಮಾರ್ಕೆಟ್ ಸೇರಿದಂತೆ ಹಲವೆಡೆ ಭಾರಿ ಮಳೆ ಸುರಿಯುತ್ತಿದೆ. ಈ ವೇಳೆ ವಾಹನ ಸವಾರರು ರಸ್ತೆಯಲ್ಲಿ ಸಿಲುಕಿ ಪರದಾಟ ನಡೆಸಿದ ಘಟನೆ ನಡೆಯಿತು. ರಾಜ್ಯಾದ್ಯಂತ ಮಳೆ ಮುನ್ಸೂಚನೆ: ಹಳದಿ ಅಲರ್ಟ್ (Yellow Alert): ಇಂದು (ಏಪ್ರಿಲ್ 29, 2026) ರಾಜ್ಯದ ಸುಮಾರು 25 ಜಿಲ್ಲೆಗಳಲ್ಲಿ ಹವಾಮಾನ ಇಲಾಖೆ ಹಳದಿ ಅಲರ್ಟ್ ಘೋಷಿಸಿದೆ. ಇದರಲ್ಲಿ ದಕ್ಷಿಣ ಕನ್ನಡ, ಉಡುಪಿ, ಕೊಡಗು, ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳು ಸೇರಿವೆ. ಉತ್ತರ ಕರ್ನಾಟಕ: ಬೆಳಗಾವಿ, ಗದಗ, ಹಾವೇರಿ ಮತ್ತು ಧಾರವಾಡ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆ ಮತ್ತು ಆಲಿಕಲ್ಲು ಮಳೆ (Hailstorm) ಆಗುವ ಸಾಧ್ಯತೆಯಿದೆ. ಇಲ್ಲಿ ಗಾಳಿಯ ವೇಗ ಗಂಟೆಗೆ 40-50 ಕಿ.ಮೀ ಇರಲಿದೆ ಎಂದು ಅಂದಾಜಿಸಲಾಗಿದೆ.…
ಮೈಸೂರು : ರಾಜ್ಯದಲ್ಲಿ ಮತ್ತೊಂದು ಭೀಕರವಾದ ಅಪಘಾತ ಸಂಭವಿಸಿದ್ದು, ದಂಪತಿ ತೆರಳುತ್ತಿದ್ದ ಬೈಕ್ ಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಬೈಕ್ ನಲ್ಲಿ ತೆರಳುತ್ತಿದ್ದ ಪತ್ನಿ ಸಾವನ್ನಪ್ಪಿದ್ದು ಪತಿಗೆ ಗಂಭೀರವಾದ ಗಾಯಗಳಾಗಿರುವ ಘಟನೆ ಮೈಸೂರಲ್ಲಿ ನಡೆದಿದೆ. ಮೈಸೂರು ಜಿಲ್ಲೆಯ ನಂಜನಗೂಡು ಫ್ಲೈ ಓವರ್ ಬಳಿ ಅಪಘಾತ ಸಂಭವಿಸಿದೆ. ಪತ್ನಿ ರಾಣಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಪತಿ ನಾಗೇಂದ್ರಗೆ ಗಂಭೀರವಾದ ಗಾಯಗಳಾಗಿವೆ. ಮದುವೆ ಕಾರ್ಯಕ್ರಮ ಮುಗಿಸಿ ಮೈಸೂರಿಗೆ ದಂಪತಿಗಳು ತೆರಳುತ್ತಿದ್ದರು.ಈ ವೇಳೆ ವೇಗವಾಗಿ ಬಂದಂತಹ ಲಾರಿ ಬೈಕ್ ಗೆ ಡಿಕ್ಕಿ ಹೊಡೆದಿದೆ. ಸ್ಥಳಕ್ಕೆ ನಂಜನಗೂಡು ಸಂಚಾರಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ರಾಯಚೂರು : ತಮ್ಮ ತಂದೆಯವರನ್ನು ಹೈಕಮಾಂಡ್ ಸಿಎಂ ಸ್ಥಾನದಿಂದ ಇಳಿಸಿದರೆ ದಲಿತ ಸಿಎಂ ವಿಚಾರ ಮತ್ತೆ ಮುನ್ನೆಲೆಗೆ ಬರುವುದು ಸಹಜ ಎಂದು ಎಂಎಲ್‌ಸಿ ಯತೀಂದ್ರ ಸಿದ್ದರಾಮಯ್ಯ ಹೇಳಿದರು. ರಾಯಚೂರಿನಲ್ಲಿ ಮಾಧ್ಯಮಗಳ ಜೊತೆ ಅವರು ಮಾತನಾಡಿದರು. ಈ ವೇಳೆ ಡಿಸಿಎಂ ಡಿ.ಕೆ ಶಿವಕುಮಾರ್ ಅವರ ಹುಟ್ಟುಹಬ್ಬಕ್ಕೆ ಹೈಕಮಾಂಡ್‌ನಿಂದ ಗುಡ್ ನ್ಯೂಸ್ ಸಿಗಲಿದೆ ಎಂಬ ವಿಚಾರಕ್ಕೆ ಅವರು ಪ್ರತಿಕ್ರಿಯಿಸಿದರು. ಹೈಕಮಾಂಡ್ ಏನು ತೀರ್ಮಾನ ತೆಗೆದುಕೊಳ್ಳುತ್ತದೆಯೋ ಅದಕ್ಕೆ ಎಲ್ಲರೂ ಬದ್ಧರಾಗಿರುತ್ತೇವೆ ಎಂದರು. ಮೇ 15 ರೊಳಗೆ ಸಿಎಂ ಬದಲಾವಣೆ ಹಾಗೂ ಸಂಪುಟ ವಿಸ್ತರಣೆ ವಿಚಾರವಾಗಿ ನವೆಂಬರ್‌ನಿಂದಲೂ ಹೇಳುತ್ತಿದ್ದಾರೆ. ನಾನೂ ಅದಕ್ಕೆಲ್ಲ ಉತ್ತರ ಕೊಟ್ಟುಕೊಂಡು ಬರುತ್ತಿದ್ದೇನೆ. ಈ ವಿಚಾರದಲ್ಲಿ ಏನು ಹೇಳಬೇಕೋ ಈಗಾಗಲೇ ಎಲ್ಲಾ ಹೇಳಿ ಆಗಿದೆ. ನಾನು ಈ ವಿಷಯವಾಗಿ ಏನು ಮಾತನಾಡುವುದಿಲ್ಲ. ಏನೇ ಇದ್ದರೂ ಸಿಎಂ ಹಾಗೂ ಹೈಕಮಾಂಡ್‌ನ್ನೇ ಕೇಳಬೇಕು. ಯತೀಂದ್ರ ಸಿದ್ದರಾಮಯ್ಯ ಅವರ ಹೇಳಿಕೆಯ ಮುಖ್ಯಾಂಶಗಳು: ದಲಿತ ಸಿಎಂ ವಿಚಾರ: ಒಂದು ವೇಳೆ ಹೈಕಮಾಂಡ್ ಸಿದ್ದರಾಮಯ್ಯನವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಿದರೆ, ಆ ಸ್ಥಾನಕ್ಕೆ…














