Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ಇಂದು ಬೆಂಗಳೂರಿನ ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ ಮಾಡಲಾಗಿದೆ. ಶಾಸಕರು, ಸಚಿವರು ಭಾಗಿಯಾಗಿದ್ದರು. 20 ವಿಷಯಗಳ ಬಗ್ಗೆ ಸಂಪುಟ ಸಭೆಯಲ್ಲಿ ಚರ್ಚೆ ಮಾಡಲಾಗಿದೆ. ಅದರಲ್ಲಿ ಪ್ರಮುಖವಾಗಿ ಕಟ್ಟಡ ಕಲ್ಲು, ಮೈನಿಂಗ್ ಸ್ಟೋನ್ ರಾಯಲ್ಟಿ ಹೆಚ್ಚಿಸಲಾಗಿದೆ. ಆ ಮೂಲಕ ಕಟ್ಟಡ ನಿರ್ಮಾಣದ ಕನಸಿಗೆ ಬೆಲೆ ಏರಿಕೆಯ ಹೊರೆ ತಟ್ಟಿದೆ. ಸಚಿವ ಸಂಪುಟ ಸಭೆ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವ ಹೆಚ್.ಕೆ.ಪಾಟೀಲ್, ಸಂಪುಟ ಸಭೆಯಲ್ಲಿ 20 ವಿಷಯಗಳ ಬಗ್ಗೆ ಇಂದು ಚರ್ಚೆಯಾಗಿದೆ. ಉಪಖನಿಜ ರಿಯಾಯಿತಿ ತಿದ್ದುಪಡಿಗೆ ಒಪ್ಪಿಗೆ ಸೂಚಿಸಿದ್ದು, ಅಕ್ರಮ ಕಲ್ಲು ಗಣಿಗಾರಿಕೆ ವಿಚಾರ ಬಗ್ಗೆ ಚರ್ಚೆಯಾಗಿದೆ.ರಾಯಲ್ಟಿ ಪರಿಷ್ಕರಣೆ ಮಾಡಲು ಸಮ್ಮತಿ ಸೂಚಿಸಾಲಾಗಿದೆ.ಕಟ್ಟಡ ಕಲ್ಲು,ಮೈನಿಂಗ್ ಸ್ಟೋನ್ ರಾಜಧನ ಹೆಚ್ಚಳ ಮಾಡಿದ್ದು, ಪ್ರತಿಟನ್ ಗೆ 80 ರೂ ರಾಯಲ್ಟಿ ನಿಗದಿ ಮಾಡಲಾಗಿದೆ. ಇದರಿಂದ 311.55 ಕೋಟಿ ಹೆಚ್ಚುವರಿ ಸಂಗ್ರಹವಾಗಲಿದೆ.ಮೊದಲು ಮೆಟ್ರಿಕ್ ಟನ್ 70 ರೂ ಇತ್ತು ಈಗ 10 ರೂ ಪ್ರತಿ ಮೆಟ್ರಿಕ್ ಟನ್ ಗೆ ಹೆಚ್ಚಳ ಮಾಡಲಾಗಿದೆ.…
ಬೆಂಗಳೂರು : ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಂದು ನಟ ದರ್ಶನ್ ಹಾಗೂ ಡಿ ಗ್ಯಾಂಗ್ ಜಾಮೀನು ಅರ್ಜಿ ವಿಚಾರಣೆ ಹೈಕೋರ್ಟ್ ನಲ್ಲಿ ನಡೆದಿದ್ದು, ಹೈಕೋರ್ಟಿನ ನ್ಯಾಯಮೂರ್ತಿಗಳಾದ ಎಸ್ ವಿಶ್ವಜಿತ್ ಶೆಟ್ಟಿ ಅವರು ವಿಚಾರಣೆಯನ್ನು ಡಿಸೆಂಬರ್ 9ಕ್ಕೆ ಮುಂದೂಡಿ ಆದೇಶ ಹೊರಡಿಸಿದರು. ವಿಚಾರಣೆಯ ವೇಳೆ ಪೊಲೀಸರ ಎಸ್ ಪಿ ಪಿ ಪ್ರಸನ್ನ ಕುಮಾರ್ ವಾದ ಮಂಡಿಸಿದ್ದು, ಅಕ್ಟೋಬರ್ 30ರ ತಮ್ಮ ಆದೇಶದ ಬಗ್ಗೆ ಎರಡು ನಿಮಿಷ ವಾದಿಸುತ್ತೇನೆ ಎಂದು ಹೇಳಿ, ತಕ್ಷಣ ಸರ್ಜರಿ ಆಗದಿದ್ದರೆ ಲಕ್ವ ಹೊಡೆಯುತ್ತದೆ ಎಂದು ವಾದಿಸಿದ್ದರು. ಮೊದಲ ಮೆಡಿಕಲ್ ರಿಪೋರ್ಟ್ ಅನ್ನು ನಾನು ಓದಬಯಸುತ್ತೇನೆ. ಒಂದು ವಾರದ ಬಳಿಕ ವೈದ್ಯರ ವರದಿ ಸಲ್ಲಿಸಿದ್ದರು. ನವೆಂಬರ್ 6 ಮತ್ತು 11ರಂದು 2 ವರದಿ ಸಲ್ಲಿಸಿದ್ದಾರೆ. ದರ್ಶನ್ ಅವರನ್ನು ಸರ್ಜರಿಗೆ ಸಿದ್ಧತೆ ಮಾಡಲಾಗುತ್ತಿದೆ ಎಂದು ಹೇಳಿದ್ದರು. ಮೊದಲ ವರಿದಿಯಲ್ಲಿ ಹೀಗೆ ಎಂದು ವೈದ್ಯರು ಹೇಳಿದ್ದರು. ಅದಾದ 15 ದಿನದ ಬಳಿಕವೂ ದರ್ಶನ್ ಅವರನ್ನು ಸಿದ್ಧಪಡಿಸಲಾಗುತ್ತಿದೆ ಎಂದು ಬಿಪಿಯಲ್ಲಿ…
ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಇದೀಗ ಮತ್ತೊಂದು ಬೆಳವಣಿಗೆ ಆಗಿದ್ದು, ಮುಡಾದ ಈ ಹಿಂದಿನ ಆಯುಕ್ತರಾಗಿದ್ದ ಡಿಬಿ ನಟೇಶ್ ಅವರು ಇಡಿ ತನಿಖೆಗೆ ತಡೆಯಾಜ್ಞೆ ಕೋರಿ ಹೈಕೋರ್ಟಿಗೆ ರಿಟ್ ಅರ್ಜಿ ಸಲ್ಲಿಸಿದ್ದಾರೆ. ಹೌದು ಪ್ರಕರಣದಲ್ಲಿ ಇಡಿ ತನಿಖೆ ತಡೆಯಾಜ್ಞೆ ಕುರಿ ಅರ್ಜಿ ಮೋಡಾದ ಮಾಜಿ ಆಯುಕ್ತ ಡಿಬಿ ನಟೇಶ್ ಅರ್ಜಿ ಸಲ್ಲಿಕೆ ಮಾಡಿದ್ದಾರೆ. ಇಡಿ ಯಿಂದ ಲೋಕಾಯುಕ್ತ ಪೊಲೀಸರಿಗೆ ಪತ್ರದ ಬೆನ್ನಲ್ಲೆ ಅವರು ಅರ್ಜಿ ಸಲ್ಲಿಸಿದ್ದಾರೆ. ಅಕ್ಟೋಬರ್ 28 ಮತ್ತು 29 ರಂದು ಈಡಿ ತಮ್ಮ ಹೇಳಿಕೆ ಪಡೆದಿರುವುದು ಕಾನೂನುಬಾಹಿರ. ಹಾಗಾಗಿ ಪಿಎಮ್ಎಲ್ಎ ಕಾಯ್ದೆಯ ಅಡಿ ಶೋಧನೆಯನ್ನು ರದ್ದು ಪಡಿಸಲು ಅವರು ಅರ್ಜಿಯಲ್ಲಿ ಮನವಿ ಮಾಡಿಕೊಂಡಿದ್ದಾರೆ. ಜಾರಿ ನಿರ್ದೇಶನಲಯ ನೀಡಿದ್ದ ಪಡಿಸಲು ನಟೇಶ್ ಅವರು ಹೈಕೋರ್ಟ್ ಗೆ ಮನವಿ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.
BREAKING : ಉತ್ತರಪ್ರದೇಶದಲ್ಲಿ ಭೀಕರ ಅಪಘಾತ :ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿಯಾದ ಕಾರು, ಸ್ಥಳದಲ್ಲೇ ಐವರ ದುರ್ಮರಣ!
ಉತ್ತರಪ್ರದೇಶ : ಉತ್ತರ ಪ್ರದೇಶದಲ್ಲಿ ಭೀಕರ ಅಪಘಾತವಾಗಿದ್ದು, ಪಿಲಿಭಿತ್-ತನಕ್‌ಪುರ ರಸ್ತೆಯ ನಿಯೋರಾ ಪ್ರದೇಶದಲ್ಲಿ ಅಪಘಾತ ಸಂಭವಿಸಿದೆ. ಸುಮಾರು 11 ಜನರನ್ನು ಹೊತ್ತೊಯ್ಯುತ್ತಿದ್ದ ಕಾರು ಮತ್ತೊಂದು ವಾಹನವನ್ನು ಹಿಂದಿಕ್ಕಲು ಪ್ರಯತ್ನಿಸಿದಾಗ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದು ಕಂದಕಕ್ಕೆ ಉರುಳಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತರನ್ನು ಮುನ್ನಿ (65), ಮಂಜೂರ್ ಅಹ್ಮದ್ (60), ಬಹಿಯುದ್ದೀನ್ (55), ಷರೀಫ್ ಅಹ್ಮದ್ (60), ಸಾಹೇ ಆಲಂ (35), ಮತ್ತು ರಕೀಮ್ (11) ಎಂದು ಗುರುತಿಸಲಾಗಿದೆ. ಗಾಯಗೊಂಡವರಲ್ಲಿ ಮೂವರನ್ನು ಹೆಚ್ಚು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಉಳಿದ ಇಬ್ಬರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಪ್ರಾಥಮಿಕ ಚಿಕಿತ್ಸೆ ಬಳಿಕ ಬಿಡುಗಡೆಗೊಳಿಸಲಾಯಿತು. ಉತ್ತರಾಖಂಡದ ಖತಿಮಾ ಜಿಲ್ಲೆಯ ಜಮೂರ್ ಗ್ರಾಮದ ನಿವಾಸಿಗಳಾದ ಸಂತ್ರಸ್ತರು, ಪಿಲಿಭಿತ್‌ನ ಚಂದೋಯ್ ಗ್ರಾಮದಲ್ಲಿ ನಡೆದ ವಿವಾಹದ ನಂತರದ ಆಚರಣೆಯಿಂದ ಹಿಂತಿರುಗುತ್ತಿದ್ದಾಗ ಈ ಒಂದು ಭೀಕರ ಅಪಘಾತ ಸಂಭವಿಸಿದೆ.
ಬೆಂಗಳೂರು : ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಅವರು ಬೆನ್ನು ನೋವಿನ ಸಮಸ್ಯೆಯ ಕಾರಣ ತಿಳಿಸಿ ಮಧ್ಯಂತರ ಜಾಮೀನು ಪಡೆದು ಬಳ್ಳಾರಿ ಜೈಲಿನಿಂದ ಬಿಡುಗಡೆಯಾಗಿದ್ದಾರೆ. ಇದೀಗ ಡಿಸೆಂಬರ್ 10 ರಂದು ಅವರ ಮಧ್ಯಂತರ ಜಾಮೀನು ಅವಧಿ ಅಂತ್ಯವಾಗಲಿದ್ದು, ದರ್ಶನ್ ಪರ ವಕೀಲರು ಹೈಕೋರ್ಟಿಗೆ ಈ ಒಂದು ಮಧ್ಯಂತರ ಜಾಮೀನು ಅವಧಿಯನ್ನು ವಿಸ್ತರಿಸಿ ಎಂದು ಮತ್ತೊಂದು ಅರ್ಜಿ ಸಲ್ಲಿಸಿದ್ದಾರೆ ಎನ್ನಲಾಗಿದೆ. ಈಗಾಗಲೇ ಕಳೆದ ಒಂದು ವಿಚಾರಣೆಯ ಸಂದರ್ಭದಲ್ಲಿ ದರ್ಶನ್ ಅವರ ಆರೋಗ್ಯದಲ್ಲಿ ಬಿಪಿ ಏರುಪೇರು ಆಗುತ್ತಿದ್ದು, ಹೀಗಾಗಿ ಸರ್ಜರಿ ಮಾಡಲು ಆಗುತ್ತಿಲ್ಲ ಎಂದು ನಟ ದರ್ಶನ್ ಪರ ವಕೀಲ ಸಿವಿ ನಾಗೇಶ್ ಅವರು ನ್ಯಾಯಾಧೀಶರ ಗಮನಕ್ಕೆ ತಂದಿದ್ದರು.ಪದೇ ಪದೇ ರಕ್ತದೊತ್ತಡ ಏರುಪೇರಿನಿಂದಾಗಿ ಶಸ್ತ್ರ ಚಿಕಿತ್ಸೆ ಮಾಡಲಾಗುತ್ತಿಲ್ಲ ಎಂದು ಈಗಾಗಲೇ ದರ್ಶನ್ ಪರ ವಕೀಲರು ಕೋರ್ಟಿಗೆ ಮಾಹಿತಿ ನೀಡಿದ್ದರು. ಆದ್ದರಿಂದ ಶಸ್ತ್ರಚಿಕಿತ್ಸೆಗಾಗಿ ಮೆಡಿಕಲ್ ಬೇಲ್ ಪಡೆದು ಜೈಲಿನಿಂದ ಹೊರಬಂದಿರುವ ದರ್ಶನ್ ಜಾಮೀನು ಅವಧಿ ವಿಸ್ತರಣೆ ಮಾಡಲು ಮಧ್ಯಂತರ ಆದೇಶ ನೀಡಬೇಕೆಂದು ದರ್ಶನ್…
ಉಡುಪಿ : ಕಳೆದ ಆಗಸ್ಟ್ 24ರಂದು ಉಡುಪಿ ಜಿಲ್ಲೆಯ ಕಾರ್ಕಳದಲ್ಲಿ ಯುವತಿಗೆ ಮಾದಕ ದ್ರವ್ಯ ನೀಡಿ ಮೂವರು ಸಾಮೂಹಿಕ ಅತ್ಯಾಚಾರ ನಡೆಸಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಉಡುಪಿಯ ಜಿಲ್ಲಾ ಹೆಚ್ಚುವರಿ ನ್ಯಾಯಾಲಯದಿಂದ ಪ್ರಮುಖ ಆರೋಪಿ ಅಲ್ತಾಫ್ ಗೆ ಜಾಮೀನು ನೀಡಿ ಆದೇಶಸಿದೆ. ಹೌದು ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನಲ್ಲಿ ಗ್ಯಾಂಗ್ ರೇಪ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪ್ರಮುಖ ಆರೋಪಿ ಅಲ್ತಾಫ್ ಗೆ ನ್ಯಾಯಾಲಯದಿಂದ ಜಾಮೀನು ನೀಡಲಾಗಿದ್ದು, ಉಡುಪಿ ಜಿಲ್ಲಾ ಹೆಚ್ಚುವರಿ ಕೋರ್ಟಿನಿಂದ ಇದೀಗ ಜಾಮೀನು ಮಂಜೂರು ಮಾಡಲಾಗಿದೆ. ಆಗಸ್ಟ್ 24ರಂದು ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿತ್ತು. ಸಾಮೂಹಿಕ ಅತ್ಯಾಚಾರಕ್ಕೆ ಮೂವರು ಆರೋಪಿಗಳನ್ನು ಬಂಧಿಸಲಾಗಿತ್ತು. ಯುವತಿಗೆ ಮಾದಕ ವಸ್ತು ನೀಡಿ ಸಾಮೂಹಿಕ ಅತ್ಯಾಚಾರ ಎಸಿಗಿದ್ದರು ಎಂಬ ಆರೋಪ ಕೇಳಿ ಬಂದಿತ್ತು. ಹಿನ್ನೆಲೆಯಲ್ಲಿ ಇವತ್ತಿಯೂ ಕಾರ್ಕಳ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಳು. ದೂರಿನ ಆಧಾರದ ಮೇಲೆ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದರು. ಇದೀಗ ಪ್ರಮುಖ ಆರೋಪಿ ಅಲ್ತಾಫ್ ಗೆ ಉಡುಪಿ ಜಿಲ್ಲಾ ಕೋರ್ಟ್ ಜಾಮೀನು…
ಚಿಕ್ಕಮಗಳೂರು : ದಲಿತ ಯುವಕನೊಬ್ಬ ದೇಗುಳಕ್ಕೆ ಪ್ರವೇಶಿಸಿದ್ದಾನೆ ಎಂದು ದೇಗುಲದ ಅರ್ಚಕ ದೇವಸ್ಥಾನಕ್ಕೆ ಬೀಗ ಹಾಕಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ನರಸೀಪುರ ಗ್ರಾಮದಲ್ಲಿ ಈ ಒಂದು ಘಟನೆ ನಡೆದಿದೆ. ದಲಿತ ಯುವಕ ಪ್ರವೇಶಿಸಿದ್ದಕ್ಕೆ ದೇವಾಲಯಕ್ಕೆ ಅರ್ಚಕ ಬೀಗ ಹಾಕಿದ್ದಾರೆ. ಎರಡು ಸಮುದಾಯದ ನಡುವೆ ಅಸಮಾಧಾನವಾಗದಂತೆ ದೇಗುಲಕ್ಕೆ ಅರ್ಚಕ ಬೀಗ ಜಡೆದಿದ್ದಾರೆ. ತಿರುಮಲ್ಲೇಶ್ವರ ಸ್ವಾಮಿ ದೇವಾಲಯ ಪ್ರವೇಶ ಮಾಡಿದ್ದ ದಲಿತ ಯುವಕ ದೇಗುಲಕ್ಕೆ ಬೀಗ ಹಾಕಿ ಕಂದಾಯ ಅಧಿಕಾರಿಗಳಿಗೆ ಅರ್ಚಕ ಬೀಈಗ ನೀಡಿದ್ದಾರೆ. ನರಸೀಪುರದಲ್ಲಿ ಕುರುಬ ಸಮುದಾಯದವರೇ ಹೆಚ್ಚಿನ ಸಂಖ್ಯೆಯಲ್ಲಿ ಇದ್ದಾರೆ. ಹಾಗಾಗಿ ಚಿಕ್ಕಮಗಳೂರು ತಹಶೀಲ್ದಾರ ನೇತೃತ್ವದಲ್ಲಿ ಸಭೆ ನಡೆದಿದ್ದು, ದಲಿತರು ಕುರುಬ ಸಮುದಾಯದವರ ಸಭೆ ಎನ್ನು ನಡೆಸಿದ್ದಾರೆ. ಎಲ್ಲರಿಗೂ ಮುಕ್ತ ಪ್ರವೇಶ ನೀಡುವುದಾಗಿ ಗ್ರಾಮಸ್ಥರು ಹೇಳಿದ್ದಾರೆ.ಹಾಗಾಗಿ ಎಂದಿನಂತೆ ನರಸೀಪುರ ಗ್ರಾಮದ ದೇವಾಲಯದಲ್ಲಿ ಪೂಜೆ ಪುನಸ್ಕಾರ ನಡೆಯಿತು.
ಬೆಂಗಳೂರು : ಬೆಂಗಳೂರಿನಲ್ಲಿ ಸಿಸಿಬಿ ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಸಿಸಿಬಿಯಿಂದ 71 ಲಕ್ಷ ರೂ ಮೌಲ್ಯದ ಡ್ರಗ್ಸ್ ಜಪ್ತಿ ಮಾಡಿಕೊಳ್ಳಲಾಗಿದೆ. ಅಲ್ಲದೇ ಕೇರಳ ಮೂಲದ ಓರ್ವ ಆರೋಪಿ ಸೇರಿದಂತೆ ಇಬ್ಬರನ್ನು ಸಿಸಿಬಿ ಪೊಲೀಸ್ ಅರೆಸ್ಟ್ ಮಾಡಿದ್ದಾರೆ. ಖಚಿತ ಮಾಹಿತಿಯನ್ನು ಬೆಂಗಳೂರಿನ ಕುಮಾರಸ್ವಾಮಿ ಲೇಔಟ್ ನ ಚಂದ್ರನಗರದಲ್ಲಿ ಸಿಸಿಬಿ ಅಧಿಕಾರಿಗಳು ರೇಡ್ ಮಾಡಿದ್ದಾರೆ. ದಾಳಿಯ ವೇಳೆ15.15 ಗ್ರಾಂ ಎಂಡಿಎಂಎ ಕ್ರಿಸ್ಟಲ್, 550 ಹೈಡ್ರೋ ಗಾಂಜಾ, 2 ಕೆಜಿ 273 ಗ್ರಾಂ ಗಾಂಜಾ, ತೂಕದ ಯಂತ್ರ ಮತ್ತು ಮೊಬೈಲ್ ಅನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಕೇರಳದಿಂದ ಕಡಿಮೆ ಬೆಲೆಗೆ ಬಂಧಿತ ಆರೋಪಿಗಳು ತಂದಿದ್ದರು ಎನ್ನಲಾಗಿದೆ. ಜೈಲಿನಲ್ಲಿರುವ ಮತ್ತೊಬ್ಬ ಆರೋಪಿ ಕೂಡ ಈ ಒಂದು ದಂದಧೆಯಲ್ಲಿ ಭಾಗಿಯಾಗಿದ್ದಾನೆ ಎನ್ನಲಾಗಿದೆ. ಹಾಗಾಗಿ ಜೈಲಿನಲ್ಲಿರುವ ಆರೋಪಿ ಫೋನಿನಲ್ಲಿ ಸಹಚರನಿಗೆ ಮಾಹಿತಿ ನೀಡುತ್ತಿದ್ದ ಆತನ ಸೂಚನೆಯ ಮೇರೆಗೆ ಪೋರ್ಟರ್ ಮೂಲಕ ಗಾಂಜಾ ಪೂರೈಕೆ ಮಾಡಲಾಗುತ್ತಿತ್ತು. ಆರೋಪಿಗಳನ್ನು ಬಂಧಿಸಿ ಸಿಸಿಬಿ ಹೆಚ್ಚಿನ ವಿಚಾರಣೆಯನ್ನು ನಡೆಸುತ್ತಿದೆ.
ಬೆಂಗಳೂರು : ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಂದು ದರ್ಶನ್ ಅವರ ಜಾಮೀನು ಅರ್ಜಿ ವಿಚಾರಣೆ ನಡೆಯಲಿದೆ. ಈಗಾಗಲೇ ಕಳೆದ ಕೆಲವು ದಿನಗಳ ಹಿಂದೆ ಹೈಕೋರ್ಟ್ ನಲ್ಲಿ ನಟ ದರ್ಶನ್ ಪರ ವಕೀಲ ಸಿವಿ ನಾಗೇಶ್ ಅವರು ಸುಧೀರ್ಘವಾಗಿ ವಾದ ಮಂಡಿಸಿದ್ದಾರೆ. ಇಂದು ನ್ಯಾಯಮೂರ್ತಿ ಎಸ್ ವಿಶ್ವಜಿತ್ ಶೆಟ್ಟಿ ಅವರ ಸಮ್ಮುಖದಲ್ಲಿ ಮತ್ತೆ ವಿಚಾರಣೆ ನಡೆಯಲಿದೆ. ಅಲ್ಲದೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪವಿತ್ರಗೌಡ, ಮತ್ತು ಇನ್ನುಳಿದ ಆರೋಪಿಗಳ ಪರ ವಕೀಲರು ಕೂಡ ವಾದ ಮಂಡಿಸಿದ್ದಾರೆ.ಇನ್ನು ಸರ್ಕಾರದ ಪರವಾಗಿ ಎಸ್ ಪಿ ಪಿ ಪ್ರಸನ್ನ ಕುಮಾರ್ ಅವರು ವಾದ ಮಂಡಿಸಲಿದ್ದು, ಇಂದು ದರ್ಶನ್ ಅವರ ಬೇಲ್ ಭವಿಷ್ಯ ನಿರ್ಧಾರವಾಗಲಿದೆ. ಈಗಾಗಲೇ ದರ್ಶನ್ ಪವಿತ್ರ ಗೌಡ ಪರ ವಕೀಲರು ವಾದ ಅಂತ್ಯಗೊಳಿಸಿದ್ದಾರೆ.ಇನ್ನುಳಿದಂತೆ ನಾಗರಾಜು, ಲಕ್ಷ್ಮಣ್ ಪರ ವಾದ ಮಂಡಿಸಿದ್ದರೆ. ಇವರೆಲ್ಲರ ವಾದಕ್ಕೆ ಎಸ್ ಪಿ ಪಿ ಪ್ರಸನ್ ಕುಮಾರ್ ಪ್ರತಿವಾದ ಮಾಡಲಿದ್ದಾರೆ. ಅರ್ಹತೆ ಆಧಾರದಲ್ಲಿ ಬೇಲ್ ನೀಡದಂತೆ ಅವರು ಮನವಿ ಸಲ್ಲಿಸಲಿದ್ದಾರೆ. ಜಾಮೀನು…
ಬೆಳಗಾವಿ : ಇತ್ತೀಚೆಗೆ ಉತ್ತರ ಪ್ರದೇಶದಲ್ಲಿ ಗೂಗಲ್ ಮ್ಯಾಪ್ ನಂಬಿ ಹಲವರು ಪ್ರಾಣ ಕಳೆದುಕೊಂಡಿರುವ ಘಟನೆ ನಡೆದಿತ್ತು. ಇದೀಗ ಬೆಳಗಾವಿ ಜಿಲ್ಲೆಯಲ್ಲಿ ಅಂತದ್ದೇ ಘಟನೆ ನಡೆದಿದ್ದು, ಗೂಗಲ್ ಮ್ಯಾಪ್ ನಂಬಿ ಕುಟುಂಬವೊಂದು ರಾತ್ರಿಯಿಡಿ ಕಾಡಿನಲ್ಲಿಯೇ ಕಳೆದ ಘಟನೆ ಜಿಲ್ಲೆಯ ಖಾನಾಪುರ ಭೀಮಗಢ ಅರಣ್ಯ ಪ್ರದೇಶಲ್ಲಿ ನಡೆದಿದೆ. ಬಿಹಾರ ಮೂಲದ ರಣಜಿತದಾಸ್ ಕುಟುಂಬ ಗೋವಾಕ್ಕೆ ಪ್ರವಾಸಕ್ಕೆಂದು ತೆರಳಿದ್ದರು. ಶಿರೋಲಿ ಮತ್ತು ಹೆಮ್ಮಡಗಾ ಮಾರ್ಗ ಮಧ್ಯೆ ಸಮೀಪ ಗೂಗಲ್ ಮ್ಯಾಪ್ ದಾರಿ ತೋರಿಸಿದೆ. ಮ್ಯಾಪ್ ನಂಬಿ ಭೀಮಗಢ ಅರಣ್ಯದೊಳಗೆ 7-8 ಕಿ.ಮೀ ಬಂದಿದ್ದಾರೆ. ಆಂಧ್ರಪ್ರದೇಶದಿಂದ ಗೋವಾಕ್ಕೆ ಕಾರಿನಲ್ಲಿ ನಾಲ್ವರು ಹೊರಟಿದ್ದರು. ಗೂಗಲ್ ಮ್ಯಾಪ್ ಹಾಕಿಕೊಂಡು ಹೊರಟಿದ್ದಾಗ ದಾರಿ ತಪ್ಪಿ ಫಜೀತಿಗೆ ಒಳಗಾಗಿದ್ದರು. ಮಧ್ಯರಾತ್ರಿ ದಾರಿತಪ್ಪಿ ಕಾರು 10 ಕಿ.ಮೀ ಕಾಳಿನೊಳಗೆ ಹೋಗಿತ್ತು. ರಸ್ತೆ ಮುಗಿದು ಹಳ್ಳ ಬಂದಾಗ ನಾವು ದಾರಿ ತಪ್ಪಿದ್ದೇವೆ ಎಂದು ಅವರಿಗೆ ಅರಿವಾಗಿದೆ. ಅರಣ್ಯ ಪ್ರದೇಶದಲ್ಲಿ ಮೊಬೈಲ್ ನೆಟವರ್ಕ್ ಸಿಗದೇ ಪರದಾಡಿದ್ದಾರೆ. ನಾಲ್ಕು ಕಿಲೋ ಮೀಟರ್ ಹೊರ ಬಂದ ಬಳಿಕ ನೆಟವರ್ಕ್…












