Author: kannadanewsnow05

ಬೆಂಗಳೂರು : ಮಕ್ಕಳ ದಿನಾಚರಣೆಯ ದಿನದಂದೇ ಶಿಕ್ಷಣ ಸಚಿವ ಶಿಕ್ಷಕರ ಹುದ್ದೆಗಳ ಆಕಾಂಕ್ಷಿಗಳಿಗೆಸಿಹಿ ಸುದ್ದಿ ನೀಡಿದ್ದು, ಸರ್ಕಾರಿ ಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕ ಹುದ್ದೆಗಳಿಗೆ ಪ್ರತಿಯಾಗಿ ಸದ್ಯ ಮೊದಲ ಹಂತವಾಗಿ 10,000 ಶಿಕ್ಷಕರನ್ನು ನೇಮಕ ಮಾಡಿ ಕೊಳ್ಳಲು ತೀರ್ಮಾನಿಸಿದ್ದೇವೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ಮಾಜಿ ಪ್ರಧಾನಿ ಜವಾಹರ್‌ಲಾಲ್ ನೆಹರು ಅವರ 135ನೇ ಜಯಂತಿ ಹಾಗೂ ಮಕ್ಕಳ ದಿನಾಚರಣೆಯ ಅಂಗವಾಗಿ ವಿಧಾನಸೌಧದಲ್ಲಿ ಗುರುವಾರ ಆಯೋಜಿಸಿದ್ದ ಸರ್ಕಾರಿ ಶಾಲಾ ಮಕ್ಕಳೊಂದಿಗಿನ ಸಂವಾದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಯೊಬ್ಬರ ಪ್ರಶ್ನೆಗೆ ಸಚಿವರು ಈ ಉತ್ತರ ನೀಡಿದರು. ಜೋಗುಪಾಳ್ಯದ ಬಾಲಕರ ಪ್ರೌಢಶಾಲೆ 10ನೇ ತರಗತಿ ವಿದ್ಯಾರ್ಥಿ ರಿಚರ್ಡ್ ಕೇಳಿದ ಪ್ರಶ್ನೆಗೆ ಮೊದಲು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾ‌ರ್ ಅವರು ಉತ್ತರ ನೀಡಿದ ಬಳಿಕ,ಸಚಿವ ಮಧು ಬಂಗಾರಪ್ಪ ಕೂಡ ವಿವರಣೆ ನೀಡಿದರು.ರಾಜ್ಯದ ಸರ್ಕಾರ ಶಾಲೆಗಳಲ್ಲಿ ಸಾಕಷ್ಟು ಸಂಖ್ಯೆಯ ಶಿಕ್ಷಕರ ಅಭಾವವಿದ್ದು, ಈ ಸಂಬಂಧ 13 ಸಾವಿರ ಶಿಕ್ಷಕರನ್ನು ಈಗಾಗಲೇ ನೇಮಕ ಮಾಡಿಕೊಳ್ಳಲಾಗಿದೆ. ಇನ್ನೂ 10…

Read More

ಬೆಂಗಳೂರು : ರಾಜ್ಯ ಸರ್ಕಾರದಿಂದ ಬಿಜೆಪಿ ಸರ್ಕಾರದ ಅವಧಿಯಲ್ಲಿನ ಕೋವಿಡ್ ಸಂಬಂಧಿತ ಪ್ರಕರಣಗಳ ಸಂಪೂರ್ಣ ಆಯಾಮಗಳ ತನಿಖೆಗಾಗಿ ವಿಶೇಷ ಎಸ್‌ಐಟಿ ರಚಿಸಲು ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಿದೆ. ನಿನ್ನೆ ನಡೆದ ರಾಜ್ಯ ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ಕಾನೂನು ಸಚಿವ ಹೆಚ್.ಕೆ ಪಾಟೀಲ್ ಅವರು, ಇಂದು 25 ವಿಷಯಗಳನ್ನ ಪರಿಶೀಲಿಸಿದ್ದೇವೆ ಎಂದು ತಿಳಿಸಿದರು. ಕೋವಿಡ್ ಹಗಣರದ ಚರ್ಚೆ ವಿಚಾರವಾಗಿ ಮಾತನಾಡಿದಂತ ಅವರು, ಜಗತ್ತು ಕೊರೊನಾದಿಂದ ಅಲ್ಲೋಲ ಕಲ್ಲೋಲ ಆಗಿತ್ತು. ದೊಡ್ಡ ದುರಂತವನ್ನ ಜಗತ್ತು ಅನುಭವಿಸಿತ್ತು. ದೇಶ ನಮ್ಮ ರಾಜ್ಯವೂ ದುರಂತ ಅನುಭವಿಸ್ತು. ಆಗಿನ ಸರ್ಕಾರ ಅಮಾನವೀಯವಾಗಿ ನಡೆದುಕೊಂಡಿದೆ. ಭ್ರಷ್ಟಾಚಾರ, ಬೇಜವಾಬ್ದಾರಿ, ಮೋಸ ಮಾಡಿದೆ. ಮಾಹಿತಿಗಳನ್ನ‌ಅದುಮಿಟ್ಟುಕೊಳ್ಳುವುದು. ಕಾನೂನುಗಳನ್ನ ಸಿಗದಂತೆ ಮಾಡುವುದು. ಎಲ್ಲವನ್ನು ಆಸಂದರ್ಭದಲ್ಲಿ ಮಾಡಿದ್ದಾರೆ ಎಂದರು. ಎಲ್ಲಾ ಸಮಿತಿಗಳನ್ನ ನಿಷ್ಕ್ರಿಯಗೊಳಿಸಿತ್ತು. ಯಾರ ಗಮನಕ್ಕೂ ಬರದಂತೆ ಭ್ರಷ್ಟಾಚಾರ ಮಾಡಿತ್ತು. 200, 300 ಪಿಪಿಎ ಕಿಟ್ ಗೆ 2100 ಕೊಟ್ಟಿದೆ. ಲಕ್ಚಾಂತರ ಕಿಟ್ ಬೇರೆ ದೇಶದಿಂದ ತರಿಸಿದೆ. ಔಷಧಿಗಳನ್ನ ಎರಡು ಪಟ್ಟು ಹೆಚ್ಚು…

Read More

ಬೆಂಗಳೂರು : ಕಾಂಗ್ರೆಸ್ಸಿನ 50 ಶಾಸಕರಿಗೆ ಬಿಜೆಪಿ 50 ಕೋಟಿ ರೂಪಾಯಿ ಆಫರ್ ನೀಡಿದೆ ಎಂದು ಸಿಎಂ ಸಿದ್ದರಾಮಯ್ಯ ಬಿಜೆಪಿ ವಿರುದ್ಧ ಗಂಭೀರವಾದ ಆರೋಪ ಮಾಡಿದ್ದಾರೆ. ಈ ಒಂದು ಆರೋಪಕ್ಕೆ ಬಿಜೆಪಿ ಎಂಎಲ್ಸಿ ಸಿಟಿ ರವಿ ತಿರುಗೇಟು ನೀಡಿದ್ದು, ಶಾಸಕರನ್ನು ಖರೀದಿ ಮಾಡೋಕೆ ಅವರೇನು ಕುದುರೆಯೋ ಕತ್ತೆಯೋ ಅಥವಾ ದನಾನೋ ಎಂದು ಕಿಡಿಕರಿದ್ದಾರೆ. ಯಾರು ಯಾರನ್ನ ಯಾವಾಗ ಖರೀದಿಸಿದಲು ಯತ್ನಿಸಿದರು? ಸಾಕ್ಷಿಗಳು ಇದ್ದರೆ ದೂರು ಕೊಡಿ ಸಿಎಂ ಸ್ಥಾನದ ಜವಾಬ್ದಾರಿ ಮರೆತು ಸಿದ್ದರಾಮಯ್ಯ ಆರೋಪಿಸುತ್ತಿದ್ದಾರೆ. ಬಿಜೆಪಿ ಮೇಲೆ ತಪ್ಪ ಅಭಿಪ್ರಾಯ ಮೂಡಿಸಲು ಷಡ್ಯಂತರ ನಡೆಸುತ್ತಿದ್ದಾರೆ. ನಿಮ್ಮ ಇತ್ತೀಚಿನ ನಡವಳಿಕೆ ನೋಡಿದಾಗ ದಿನತ್ಯ ಸುಳ್ಳು ಹೇಳುವುದು ನಿಮ್ಮ ರಾಜಕೀಯ ಬದುಕಿನ ಭಾಗ ಆಗಿದೆ ಎಂದು ವಾಗ್ದಾಳಿ ನಡೆಸಿದ್ದಾರೆ. ಸುಳ್ಳು ಹೇಳದೇ ಇದ್ದರೆ ನಿಮಗೆ ತಿಂದ ಅನ್ನ ಜೀರ್ಣ ಆಗಲ್ಲ. ಸುಳಿನಿಂದಲೇ ನಿಮ್ಮ ರಾಜಕೀಯ ಬದುಕು ಪ್ರಾರಂಭವಾಗಿದೆ. ಸುಳಿನಿಂದಲೇ ನಿಮ್ಮ ದಿನಚರಿ ಮುಕ್ತಾಯ ಆಗುತ್ತದೆ ಅನಿಸುತ್ತದೆ. ನಮ್ಮ ಪಕ್ಷದ ಮೇಲೆ ಸುಳ್ಳು ಆರೋಪ ಮಾಡಿದ್ದೀರಿ.…

Read More

ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್​j ಆದೇಶ ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೈಕೋರ್ಟ್​ ವಿಭಾಗೀಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಿದ್ದಾರೆ. ತುರ್ತು ಅವಶ್ಯಕತೆ ಸೃಷ್ಟಿಯಾಗಿದೆ ನವೆಂಬರ್ 23ಕ್ಕೆ ವಿಚಾರಣೆ ನಡೆಸಬೇಕೆಂದು ಮುಖ್ಯಮಂತ್ರಿ ಪರ ವಕೀಲ ಅಭಿಷೇಕ್ ಸಿಂಘ್ವಿ ಮನವಿ ಮಾಡಿದ್ದಾರೆ. ಮನವಿ ಆಲಿಸಿ ವಿಚಾರಣೆಯನ್ನು ನವೆಂಬರ್ 23ಕ್ಕೆ ಹೈಕೋರ್ಟ್​ ವಿಭಾಗೀಯಪೀಠ ನಿಗದಿಪಡಿಸಿದೆ. ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಭ್ರಷ್ಟಾಚಾರ ತಡೆ ಕಾಯ್ದೆ 17A ಅಡಿಯಲ್ಲಿ ರಾಜ್ಯಪಾಲರು ಅನುಮತಿ ನೀಡಿದ್ದರು. ತನಿಖೆಗೆ ರಾಜ್ಯಪಾಲರ ಅನುಮತಿಯನ್ನು ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಹೈಕೋರ್ಟಿಗೆ ರಿಟ್ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಹೈಕೋರ್ಟ್ ಏಕ ಸದಸ್ಯ ಪೀಠವು ಸಿದ್ದರಾಮಯ್ಯ ಅವರು ಸಲ್ಲಿಸಿದ್ದ ರಿಟ್ ಅರ್ಜಿಯನ್ನು ವಜಾ ಗೊಳಿಸಿತ್ತು. ಇದೀಗ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಅವರು ಹೈಕೋರ್ಟ್ ಏಕ ಸದಸ್ಯ ವಿಭಾಗೀಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಿದ್ದಾರೆ. ಈ ವೇಳೆ ತುರ್ತು ವಿಚಾರಣೆ ಅಗತ್ಯವಿದೆ ಎಂದು ಸಿಜೆ ಪ್ರಶ್ನಿಸಿದ್ದಾರೆ ಇದಕ್ಕೆ ಸಿಎಂ ಸಿದ್ದರಾಮಯ್ಯ ಪರ ವಕೀಲರು ಹೌದು ತುರ್ತು…

Read More

ಮಂಗಳೂರು : ಕಾಲೇಜಿನಲ್ಲಿ ಕುಸಿದು ಬಿದ್ದು ತೀವ್ರ ಅಸ್ವಸ್ಥರಾಗಿದ್ದ ಉಪನ್ಯಾಸಕಿ ಯೋರ್ವರು ಬುಧವಾರ ಮೃತಪಟ್ಟಿದ್ದಾರೆ.ನಗರದ ಸಂತ ಅಲೋಶಿಯಸ್‌ ಕಾಲೇಜಿನ ಉಪನ್ಯಾಸಕಿ, ಬಜಪೆ ನಿವಾಸಿ ಗ್ಲೋರಿಯಾ ರೋಡ್ರಿಗಸ್‌(23) ಮೃತಪಟ್ಟ ಉಪನ್ಯಾಸಕಿ ಎಂದು ತಿಳಿದುಬಂದಿದೆ. ಬಜ್ಪೆ ಪಡು ಪೆರಾರ ನಿವಾಸಿ ಗ್ಲೋರಿಯಾ ಆಶಾ ರೋಡ್ರಿಗಸ್​ ಒಂದು ವರ್ಷದ ಹಿಂದಷ್ಟೇ ಅಲೋಶಿಯಸ್ ಕಾಲೇಜಿನಲ್ಲಿಯೇ ಸ್ನಾತಕೋತ್ತರ ಪದವಿ ಪಡೆದಿದ್ದರು. ಬಳಿಕ ಇದೇ ಕಾಲೇಜಿನಲ್ಲಿ ಬಿ.ಕಾಂ ಪದವಿಗೆ ಕಾಮರ್ಸ್ ವಿಷಯದಲ್ಲಿ ಉಪನ್ಯಾಸಕಿಯಾಗಿ ಸೇರ್ಪಡೆಗೊಂಡಿದ್ದರು. ನ.8ರಂದು ಕಾಲೇಜಿನಲ್ಲಿ ಮೆಟ್ಟಲು ಇಳಿಯುತ್ತಿದ್ದಾಗ ತಲೆಸುತ್ತು ಬಂದು ಬಿದ್ದ ಅವರ ತಲೆಗೆ ಗಂಭೀರ ಗಾಯವಾಗಿತ್ತು. ಅವರನ್ನು ಕೂಡಲೇ ಕಂಕನಾಡಿ ಫಾದರ್‌ ಮುಲ್ಲರ್‌ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಈ ನಡುವೆ ಅವರ ಮೆದುಳು ನಿಷ್ಕ್ರಿಯವಾಗಿರುವುದಾಗಿ ನುರಿತ ವೈದ್ಯರ ತಂಡ ತಿಳಿಸಿದ್ದರು. ಅಂಗಾಂಗ ದಾನ ಗ್ಲೋರಿಯಾ ರೋಡ್ರಿಗಸ್‌ ಅವರ ದೇಹದ ಅಂಗಾಂಗವನ್ನು ದಾನ ಮಾಡುವ ಮೂಲಕ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ. ಕಣ್ಣು, ಹೃದಯ, ಚರ್ಮ, ಯಕೃತ್‌, ಎರಡು ಕಿಡ್ನಿ, ಶ್ವಾಸಕೋಶವನ್ನು ದಾನ ಮಾಡಲಾಗಿದೆ. ಯಕೃತ್‌(ಲಿವರ್‌) ಮಂಗಳೂರಿನ ಎಜೆ ಆಸ್ಪತ್ರೆಗೆ…

Read More

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಿನ್ನೆ ಬಿಜೆಪಿ ಕಾಂಗ್ರೆಸ್ಸಿನ 50 ಎಮ್ಎಲ್ಎ ಗಳಿಗೆ 50 ಕೋಟಿ ಆಫರ್ ನೀಡಿದೆ ಎಂದು ಹೇಳಿಕೆ ನೀಡಿದ್ದರು. ಈ ಒಂದು ಹೇಳಿಕೆಯ ವಿಚಾರವಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಆಕ್ರೋಶಗೊಂಡಿದ್ದು, ಸಿಎಂ ಸಿದ್ದರಾಮಯ್ಯ ಹೇಳಿಕೆ ಬಗ್ಗೆ ಇ.ಡಿ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡು ಕೂಡಲೇ ತನಿಖೆ ನಡೆಸುವುದು ತುರ್ತು ಅಗತ್ಯವಿದೆ, ರಾಜ್ಯದ ಜನತೆಗೆ ಸತ್ಯ ತಿಳಿಯಬೇಕಿದೆ ಎಂದು ಅವರು ತನಿಖೆಗೆ ಆಗ್ರಹಿಸಿದ್ದಾರೆ. ಈ ವಿಚಾರವಾಗಿ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಮಾಹಿತಿ ಹಂಚಿಕೊಂಡಿರುವ ಬಿವೈ ವಿಜಯೇಂದ್ರ, ಮಾನ್ಯ ಸಿದ್ದರಾಮಯ್ಯ ನವರೇ, ಬಹುಶಃ ನಿಮ್ಮ ಶಾಸಕರ ಮೇಲೆ ನೀವು ವಿಶ್ವಾಸವನ್ನು ಕಳೆದುಕೊಂಡಂತೆ ಕಾಣುತ್ತಿದೆ ಅದಕ್ಕಾಗಿಯೇ ₹50 ಕೋಟಿಗೆ ಅವರು ಮಾರಾಟವಾಗುತ್ತಿದ್ದಾರೆ ಎಂಬ ಕಪೋಲಕಲ್ಪಿತ ಆರೋಪ ಮಾಡುತ್ತಿದ್ದೀರಿ. ಇದು ನೀವು ಪ್ರಜಾಪ್ರಭುತ್ವ ವ್ಯವಸ್ಥೆಗೆ ಹಾಗೂ ಶಾಸಕರನ್ನು ಮಾರಾಟದ ವಸ್ತುಗಳಂತೆ ವ್ಯಾಖ್ಯಾನಿಸಿ ಅವರಿಗೆ ಮಾಡುತ್ತಿರುವ ಅವಮಾನವಾಗಿದೆ. ನಿಮ್ಮ ಈ ಹೇಳಿಕೆ ಕಾಂಗ್ರೆಸ್ ಶಾಸಕರುಗಳನ್ನು ಅಂಕೆಯಲಿಟ್ಟುಕೊಳ್ಳಲು ಹಾಗೂ ನಿಮ್ಮನ್ನು…

Read More

ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಮೇಲ್ಮನವಿ ಸಲ್ಲಿಸಿದ್ದರು. ಮೇಲ್ಮನವಿ ಇದೀಗ ವಿಚಾರಣೆ ನಿಗದಿಪಡಿಸಲು ಸಿಎಂ ಸಿದ್ದರಾಮಯ್ಯ ವಕೀಲರು ಮನವಿ ಮಾಡಿದ್ದಾರೆ. ಹಾಗಾಗಿ ನ್ಯಾ.ಎನ್.ವಿ ಅಂಜಾರಿಯ ಹಾಗೂ ನ್ಯಾ.ಕೆ.ವಿ ಅರವಿಂದ್ ಅವರಿದ್ದ ಪೀಠದಲ್ಲಿ ಮನವಿ ಸಲ್ಲಿಕೆ ಮಾಡಲಾಗಿದೆ. ಅಭಿಷೇಕ್ ಸಿಂಘವಿ ಮನವಿ ಮೇರೆಗೆ ವಿಚಾರಣೆ ನವೆಂಬರ್ 23ಕ್ಕೆ ನಿಗದಿ ಮಾಡಲಾಗಿದೆ. ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಭ್ರಷ್ಟಾಚಾರ ತಡೆ ಕಾಯ್ದೆ 17A ಅಡಿಯಲ್ಲಿ ರಾಜ್ಯಪಾಲರು ಅನುಮತಿ ನೀಡಿದ್ದರು. ತನಿಖೆಗೆ ರಾಜ್ಯಪಾಲರ ಅನುಮತಿಯನ್ನು ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಹೈಕೋರ್ಟಿಗೆ ರಿಟ್ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಹೈಕೋರ್ಟ್ ಏಕ ಸದಸ್ಯ ಪೀಠವು ಸಿದ್ದರಾಮಯ್ಯ ಅವರು ಸಲ್ಲಿಸಿದ್ದ ರಿಟ್ ಅರ್ಜಿಯನ್ನು ವಜಾ ಗೊಳಿಸಿತ್ತು. ಸಿದ್ದರಾಮಯ್ಯ ಮೇಲ್ಮನವಿಯಲ್ಲೇನಿದೆ? ಜುಲೈ 26 ರಂದು ಟಿಜೆ ಅಬ್ರಹಾಂ ರಾಜ್ಯಪಾಲರಿಗೆ ದೂರು ನೀಡಿದ್ದರು. ದೂರು ನೀಡಿದ ದಿನವೇ ರಾಜ್ಯಪಾಲರು ಶೋಕಾಸ್ ನೋಟಿಸ್ ನೀಡಿದ್ದಾರೆ. ರಾಜ್ಯಪಾಲರ ಶೋಕಾಸ್ ನೋಟಿಸ್ ಹಿಂಪಡೆಯುವಂತೆ ಸಿಎಂ ರಹಿತವಾದ ಸಚಿವ ಸಂಪುಟ…

Read More

ಬೆಂಗಳೂರು : ನಿನ್ನೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೈಸೂರು ಜಿಲ್ಲೆಯ ಟಿ ನರಸೀಪುರ ತಾಲೂಕಿನಲ್ಲಿ, ಕಾರ್ಯಕ್ರಮ ಒಂದರಲ್ಲಿ ಮಾತನಾಡಿ ಕಾಂಗ್ರೆಸ್ ನ 50 ಶಾಸಕರಿಗೆ ತಲಾ ಒಂದೊಂದು ಕೋಟಿಯಂತೆ 50 ಕೋಟಿ ಆಫರ್ ನೀಡಿದೆ ಎಂದು ಹೇಳಿಕೆ ನೀಡಿದ್ದರು. ಇದಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ಹೌದು ಸರ್ಕಾರ ಕೆಡುವಲು ಪ್ರಯತ್ನಿಸುತ್ತಿದ್ದಾರೆ ಎಂದು ಸಿಎಂ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ. ಬೆಂಗಳೂರಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಹೌದು ಸರ್ಕಾರ ಕೆಡುವಲು ಪ್ರಯತ್ನ ಮಾಡುತ್ತಿದ್ದಾರೆ. ಈ ಕುರಿತು ಎಲ್ಲಾ ಶಾಸಕರ ಜೊತೆಗೆ ಸಿಎಂ ಸಿದ್ದರಾಮಯ್ಯ ಮಾತನಾಡಿದ್ದಾರೆ. ಶಾಸಕರು ಬಂದು ನಮಗೆ ಈ ಕುರಿತು ತಿಳಿಸಿದ್ದಾರೆ. ಉಳಿದ ವಿಚಾರಣೆ ಆಮೇಲೆ ಮಾತಾಡುತ್ತೇನೆ ಎಂದು ಬೆಂಗಳೂರಿನಲ್ಲಿ ಉಪಮುಖ್ಯಮಂತ್ರಿಯ ಡಿಕೆ ಶಿವಕುಮಾರ್ ತಿಳಿಸಿದರು.

Read More

ಬೆಂಗಳೂರು : ಬೆಂಗಳೂರಿನಲ್ಲಿ ಶಾಲೆಯೊಂದರಲ್ಲಿ ಪ್ರಾಂಶುಪಾಲೆ ವಿದ್ಯಾರ್ಥಿನಿ ಮೇಲೆ ದರ್ಪ ತೋರಿದ್ದು, ಬೆತ್ತದಲ್ಲಿ ಬಾಸುಂಡೆ ಮೂಡೋ ಹಾಗೆ ಹಿಗ್ಗಾ ಮುಗ್ಗಾ ಥಳಿಸಿರುವ ಘಟನೆ ಬೆಂಗಳೂರು ನಗರದ ಹೊರವಲಯದ ದೇವನಹಳ್ಳಿಯ ವಿಜಯಪುರ ಪಟ್ಟಣದಲ್ಲಿ ನಡೆದಿದೆ. ಶಾಲೆಯಲ್ಲಿ ಓದುತ್ತಿದ್ದ 5ನೇ ತರಗತಿಯ ವಿದ್ಯಾರ್ಥಿನಿಗೆ ಬೆತ್ತದ ಮೂಲಕ ಥಳಿಸಿರುವ ಆರೋಪ ಇದೀಗ ಪ್ರಾಂಶುಪಾಲೆಯ ಮೇಲೆ ಬಂದಿದೆ. ತನ್ನ ಮಗನ ಸೇವೆ ಮಾಡಿಲ್ಲವೆಂದು 5ನೇ ತರಗತಿ ವಿದ್ಯಾರ್ಥಿನಿಯ ಮೇಲೆ ಪ್ರಿನ್ಸಿಪಾಲ್ ಉಷಾ ಕಿರಣ್ ಹಲ್ಲೆ ಮಾಡಿದ ಆರೋಪ ಇದೀಗ ಕೇಳಿಬಂದಿದೆ. ಅಲ್ಲದೇ ಮಗನ ಸೇವೆ ಮಾಡಲಿಲ್ಲ ಎಂದು ವಿದ್ಯಾರ್ಥಿನಿಯ ಮೇಲೆ ಪ್ರಾಂಶುಪಾಲೆ ಹಲ್ಲೆ ಮಾಡಿದ್ದಾಳೆ. ದೇವನಹಳ್ಳಿಯ ವಿಜಯಪುರದಲ್ಲಿ ನಡೆದಿದೆ ಪ್ರಾಂಶುಪಾಲೆ ಉಷಾ ಕಿರಣ್ ವಿರುದ್ಧ ಇದೀಗ ಪೋಷಕರು ಆಕ್ರೋಶ ಹೊರ ಹಾಕಿದ್ದು ಘಟನ ಸ್ಥಳಕ್ಕೆ ವಿಜಯಪುರ ಠಾಣೆಯ ಪೊಲೀಸರು ಭೇಟಿ ನೀಡಿದ್ದಾರೆ. ನನ್ನ ಮಗ ಒಬ್ಬ ವಿಶೇಷ ಚೇತನ ಅವನಿಗೆ ತಿರುಗಾಡಲು ಆಗಲ್ಲ. ನನ್ನ ಮಗು ವಿಶೇಷ ಚೇತನ ಇದೆ. ಅವನಿಗೆ ಸಹಾಯ ಬೇಕಾಗುತ್ತದೆ. ನಾನು ಹೊಡೆಯಬಾರದಿತ್ತು…

Read More

ಬೆಂಗಳೂರು : ಬಗರ್ ಹುಕುಂ ಸಾಗುವಳಿದಾರರಿಗೆ ಇದೀಗ ರಾಜ್ಯ ಸರ್ಕಾರ ಸಿಹಿ ಸುದ್ದಿಯೊಂದನ್ನು ನೀಡಿದ್ದು, ಶೀಘ್ರದಲ್ಲೇ ಎಲ್ಲಾ ಬಗರ್ ಹುಕುಂ ಸಾಗುವಳಿದಾರರಿಗೆ ‘ಸಾಗುವಳಿ ಚೀಟಿ’ ವಿತರಿಸಲಾಗುತ್ತದೆ ಎಂದು ಕಂದಾಯ ಇಲಾಖೆಯ ಸಚಿವ ಕೃಷ್ಣಭೈರೇಗೌಡ ತಿಳಿಸಿದರು. ಈ ಕುರಿತು ‘ಬಗರ್ ಹುಕುಂ’ ಪ್ರಗತಿ ಪರಿಶೀಲನೆಗೆ ಸಂಬಂಧಿಸಿ ರಾಜ್ಯದ ಎಲ್ಲಾ ತಹಶೀಲ್ದಾರರುಗಳ ಜೊತೆ ವಿಕಾಸಸೌಧದಿಂದ ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಯಿತು.ಸಭೆಯಲ್ಲಿ ಶೀಘ್ರ ಬಗರ್ ಹುಕುಂ ಸಭೆ ನಡೆಸಿ ಅರ್ಹರಿಗೆ ಶೀಘ್ರ ಭೂ ಮಂಜೂರುಗೊಳಿಸಿ ಸಾಗುವಳಿ ಚೀಟಿ ನೀಡಲು ಸಚಿವ ಕೃಷ್ಣಭೈರೇಗೌಡ ಅವರು ತಹಶೀಲ್ದಾರರಿಗೆ ಸೂಚಿಸಿದರು. ಸಭೆಯ ಬಳಿಕ ಮಾತನಾಡಿದ ಸಚಿವ ಕೃಷ್ಣ ಬೈರೇಗೌಡ, “ಬಗರ್ ಹುಕುಂ” ಮಂಜೂರಾತಿ ಬಡವರ ಕೆಲಸ. ಬಡವರಿಗೆ ಅರ್ಹ ಫಲಾನುಭವಿಗಳಿಗೆ ಕಾನೂನು ಬದ್ಧವಾಗಿ ಭೂ ಮಂಜೂರುಗೊಳಿಸಲು ಕಾಂಗ್ರೆಸ್ ಸರ್ಕಾರ ಬದ್ಧವಾಗಿದೆ. ಇದೇ ಕಾರಣಕ್ಕೆ ನಾನು ಕಳೆದ ಒಂದು ವರ್ಷದಿಂದ ಎಲ್ಲಾ ಜಿಲ್ಲೆಗಳಿಗೂ ಪ್ರವಾಸ ಕೈಗೊಂಡು ಪ್ರಗತಿ ಪರಿಶೀಲನಾ ಸಭೆ ನಡೆಸುತ್ತಿದ್ದೇನೆ. ರಾಜ್ಯದ ಎಲ್ಲಾ ತಹಶೀಲ್ದಾರರ ಜೊತೆ ಪ್ರತಿ…

Read More