Author: kannadanewsnow05

ಕಲಬುರಗಿ : ಎರಡು ಕೋಮುಗಳ ನಡುವೆ ಕೋಮು ಭಾವನೆಗೆ ಧಕ್ಕೆ ಉಂಟು ಮಾಡಿರುವ ಆರೋಪದ ಹಿನ್ನೆಲೆಯಲ್ಲಿ ಇದೀಗ ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ವಿರುದ್ಧ ಕಲಬುರ್ಗಿಯ ಬ್ರಹ್ಮಪುರ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ. ಯಡ್ರಾಮಿಯಲ್ಲಿ ನಡೆದ ಬಾಲಕಿಯ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಕಲಬುರಗಿ ನಗರದ ಸುದ್ದಿಗೋಷ್ಠಿಯಲ್ಲಿ ಎರಡು ಕೋಮುಗಳ ನಡುವೆ ದ್ವೇಷ ಭಾವನೆ ಮೂಡಿಸುವಂತಹ ಪ್ರಚೋದನಕಾರಿ ಹೇಳಿಕೆ ನೀಡಿದ್ದರು ಎಂಬ ಕಾರಣಕ್ಕೆ ಮಣಿಕಂಠ ರಾಠೋಡ ವಿರುದ್ದ ಬ್ರಹ್ಮಪೂರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಸಮಾಜದಲ್ಲಿ ಕೋಮು ಸೌಹಾರ್ದತೆಗೆ ಧಕ್ಕೆ ಉಂಟು ಮಾಡಿರುವ ಮಣಿಕಂಠ ರಾಠೋಡನ ವಿರುದ್ದ ಕ್ರಮ ಕೈಗೊಳ್ಳುವಂತೆ ರಜಾ ಅಕಾಡೆಮಿಯ ಕಾರ್ಯದರ್ಶಿ ಮುಹಮ್ಮದ್ ಖಯಾಮ್ ಅಲಿ ಅವರು, ಬ್ರಹ್ಮಪೂರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

Read More

ಹಾಸನ : ರಾಜ್ಯದಲ್ಲಿ ಕಾಂಗ್ರೆಸ್ಸಿನ ಬಗ್ಗೆ ಮಾತನಾಡುವುದಕ್ಕೆ ಬಿಜೆಪಿ, ಜೆಡಿಎಸ್ ನವರಿಗೆ ಯಾವ ನೈತಿಕತೆಯೂ ಇಲ್ಲ.ಮುಖ್ಯಮಂತ್ರಿ ಸಿದ್ದರಾಮಯ್ಯನವರ ಮೇಲೆ ಕ್ಷುಲ್ಲಕ ವಿಷಯವನ್ನು ಮುಂದಿಟ್ಟುಕೊಂಡು ರಾಜಕಾರಣ ಮಾಡುತ್ತಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಖಾತೆ ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಲೇವಡಿ ಮಾಡಿದ್ದಾರೆ. ಹಾಸನದಲ್ಲಿ ಗುರುವಾರ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಹಾಗೂ ಸ್ವಾಭಿಮಾನಿ ಒಕ್ಕೂಟಗಳ ಜಂಟಿ ಆಶ್ರಯದಲ್ಲಿ ಆಯೋಜಿಸಿದ್ದ ಬೃಹತ್ ಜನಕಲ್ಯಾಣ ಸಮಾವೇಶದಲ್ಲಿ ಪಾಲ್ಗೊಂಡು, ಸಾರ್ವಜನಿಕರನ್ನು ಉದ್ದೇಶಿಸಿ ಸಚಿವರು ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯನವರು ಕಳೆದ ನಾಲ್ಕು ದಶಕಗಳಿಂದ ಕಳಂಕರಹಿತ ರಾಜಕಾರಣ ಮಾಡುತ್ತಿದ್ದಾರೆ. ಆದರೆ, ಇಂತಹ ಮುಖ್ಯಮಂತ್ರಿಯವರಿಗೆ ಮುಡಾ ಹಗರಣದ ಹೆಸರಿನಲ್ಲಿ ಕಳಂಕ ತರಲು ವಿರೋಧ ಪಕ್ಷದವರು ಯತ್ನಿಸುತ್ತಿದ್ದಾರೆ. ಇದರ ಒಳಸಂಚೇನು ಎನ್ನುವುದು ಎಲ್ಲರಿಗೂ ತಿಳಿದಿದೆ ಎಂದು ಕಿಡಿಕಾರಿದರು. ಮಹಿಳೆಯರಿಗೆ ಜೆಡಿಎಸ್ ಅಗೌರವ ಬಿಜಿಪಿ, ಜೆಡಿಎಸ್ ನವರಿಗೆ ಕಾಂಗ್ರೆಸ್ ಪಕ್ಷ ಮತ್ತು ಸರ್ಕಾರದ ಬಗ್ಗೆ ಮಾತಾಡುವುದಕ್ಕೆ ಯಾವುದೇ ನೈತಿಕತೆ ಇಲ್ಲ. ಮುಖ್ಯಮಂತ್ರಿ ಸ್ಥಾನ ಎರಡುವರೆ ಸಾವಿರ ಕೋಟಿಗಳಿಗೆ ಮಾರಾಟವಾಗಿತ್ತೆಂದು ಅವರ ಪಕ್ಷದ…

Read More

ಹಾಸನ : “ಈ ಡಿ.ಕೆ ಶಿವಕುಮಾರ್ ಸಿದ್ದರಾಮಯ್ಯ ಅವರ ಬೆನ್ನ ಹಿಂದೆ ಬಂಡೆಯಂತೆ ನಿಲ್ಲುವುದಾಗಿ ಮೈಸೂರಿನಲ್ಲಿ ಹೇಳಿದ್ದೇನೆ. ಈಗಲೂ ಇದ್ದೇನೆ, ನಾಳೆಯೂ ಇರುತ್ತೇನೆ. ಸಾಯುವವರೆಗೂ ಇರುತ್ತೇನೆ. ಇದು ಈ ಕನಕಪುರದ ಬಂಡೆಯ ಇತಿಹಾಸ. ನಾನು ಎಲ್ಲಿ ಕೆಲಸ ಮಾಡುತ್ತೇನೋ ಅಲ್ಲಿ ಪ್ರಾಮಾಣಿಕತೆಯಿಂದ ಕೆಲಸ ಮಾಡುವುದು ನನ್ನ ಕರ್ತವ್ಯ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಹಾಸನದಲ್ಲಿ ನಡೆದ ಜನಕಲ್ಯಾಣ ಸಮಾವೇಶದಲ್ಲಿ ಶಿವಕುಮಾರ್ ಅವರು ಮಾತನಾಡಿ “ಮೊದಲು ಹಾಸನಾಂಬೆ ತಾಯಿಯ ಪಾದಗಳಿಗೆ ಸಾಷ್ಟಾಂಗ ನಮನಗಳು. ಕಾಂಗ್ರೆಸ್ ಶಕ್ತಿ ದೇಶದ ಶಕ್ತಿ, ಕಾಂಗ್ರೆಸ್ ಇತಿಹಾಸ ದೇಶದ ಇತಿಹಾಸ, ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಎಲ್ಲಾ ವರ್ಗಗಳು ಅದಿಕಾರಕ್ಕೆ ಬಂದಂತೆ. 25 ವರ್ಷಗಳ ನಂತರ ಹಾಸನದ ಮಹಾಜನತೆ ಕಾಂಗ್ರೆಸಿಗನನ್ನು ಆರಿಸಿ ಸಂಸತ್ತಿಗೆ ಕಳಿಸಿದ್ದೀರಿ. ಈ ಭಾಗದ ಧ್ವನಿಯಾಗಲು, ನೊಂದ ತಾಯಂದಿರಿಗೆ ರಕ್ಷಣೆ ನೀಡಲು ಶ್ರೇಯಸ್ ಪಟೇಲ್ ಅವರನ್ನು ಆಯ್ಕೆ ಮಾಡಿರುವುದಕ್ಕೆ ನಿಮಗೆ ನಮನಗಳು. ಸರ್ಕಾರದ ಶಕ್ತಿ ನೂರೆಂಟು, ಐದು ಗ್ಯಾರಂಟಿಗಳು ಪರ್ಮನೆಂಟು, 2028ರಲ್ಲಿ ನಾವೇ ಅಧಿಕಾರಕ್ಕೆ ಬರುವುದು ಹಂಡ್ರೆಡ್…

Read More

ಶಿವಮೊಗ್ಗ : ಪ್ರಚೋದನಕಾರಿ ಭಾಷಣ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಇದೀಗ ಬಿಜೆಪಿಯ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಅವರ ವಿರುದ್ಧ ಶಿವಮೊಗ್ಗ ನಗರದ ಕೋಟೆ ಠಾಣೆಯಲ್ಲಿ ಪೊಲೀಸರು ಸ್ವಯಂ ಪ್ರೇರಿತ ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ. ಹೌದು ಬಾಂಗ್ಲಾದೇಶದಲ್ಲಿ ಸಂತ ಚಿನ್ಮಯ ಕೃಷ್ಣದಾಸ್‌ ಅವರ ಬಂಧನ ಖಂಡಿಸಿ ಶಿವಮೊಗ್ಗ ಮಥುರಾ ಪ್ಯಾರಡೈಸ್‌ ಮುಂಭಾಗದ ನಡೆದ ಪ್ರತಿಭಟನಾ ಸಭೆ ವೇಳೆ ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಅನ್ಯ ಧರ್ಮದ ವಿರುದ್ಧ ಕೋಮು ಭಾವನೆ ಕೆರಳಿಸುವ, ದ್ವೇಷ ಭಾವನೆ ಮೂಡುವಂತೆ ಭಾಷಣ ಮಾಡಿದ್ದಾರೆ ಎಂದು ಆರೋಪಿಸಿ ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ.

Read More

ನವದೆಹಲಿ : ಬೆಂಗಳೂರಿನಲ್ಲಿ ಕುಡಿಯುವ ನೀರಿನ ಸಮಸ್ಯೆ ತೀವ್ರವಾಗಿದ್ದು, ಟ್ಯಾಂಕರ್ ಮಾಫಿಯಾ ಜನರನ್ನು ಸುಲಿಗೆ ಮಾಡುತ್ತಿದೆ ಎಂದು ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೇಗೌಡರು ಕಳವಳ ವ್ಯಕ್ತಪಡಿಸಿದರು.ರಾಜ್ಯಸಭೆಯಲ್ಲಿ ಈ ಬಗ್ಗೆ ಮಾತನಾಡಿದ ಅವರು, ದೇಶದ ಪ್ರಮುಖ ನಗರಗಳಲ್ಲಿ ಒಂದಾಗಿರುವ, ಭಾರತದ ಮಾಹಿತಿ ತಂತ್ರಜ್ಞಾನ ರಾಜಧಾನಿ ಆಗಿರುವ ಬೆಂಗಳೂರು ಎದುರಿಸುತ್ತಿರುವ ಕುಡಿಯುವ ನೀರಿನ ಸಮಸ್ಯೆಯ ಬಗ್ಗೆ ಕೇಂದ್ರ ಸರ್ಕಾರದ ಗಮನ ಸೆಳೆದರು. ಬೆಂಗಳೂರಿನ ನೀರಿನ ಬವಣೆ ನೀಗಿಸಬೇಕಾದರೆ ಮೇಕೆದಾಟು ಯೋಜನೆಗೆ ಅನುಮತಿ ಸಿಗಬೇಕಿದೆ. ಎಲ್ಲಾ ರಾಜಕೀಯ ಬದಿಗಿಟ್ಟು ಈ ಯೋಜನೆಗೆ ಬೆಂಬಲ ಕೊಡಬೇಕಿದೆ ಎಂದು ಮನವಿ ಮಾಡಿದರು.ರಾಜ್ಯದಲ್ಲಿ ಆಡಳಿತ ನಡೆಸಿದ ಎಲ್ಲಾ ಸರ್ಕಾರಗಳು ಮೇಕೆದಾಟು ಯೋಜನೆಗಾಗಿ ಕೆಲಸ ಮಾಡಿವೆ. ಆದರೆ ಇಲ್ಲಿಯವರೆಗೂ ಯಶಸ್ಸು ಸಿಕ್ಕಿಲ್ಲ. ಯೋಜನೆಗೆ ಅನುಮತಿ ನೀಡುವಂತೆ ಕೇಂದ್ರಕ್ಕೆ ಕರ್ನಾಟಕ ಸರ್ಕಾರ ಪ್ರಸ್ತಾವನೆ ಸಲ್ಲಿಸಿದೆ. ಕೇಂದ್ರ ಸರ್ಕಾರ ಆದಷ್ಟು ಬೇಗ ಒಪ್ಪಿಗೆ ನೀಡಬೇಕು ಎಂದು ಅವರು ಕೋರಿದರು. ಟ್ಯಾಂಕರ್ ಮಾಫಿಯಾ ಬಗ್ಗೆ ಕಳವಳ ಬೆಂಗಳೂರು ನಗರ ಅಗಾಧವಾಗಿ ಬೆಳೆಯುತ್ತಿದೆ. ಉದ್ಯೋಗ ಅರಸಿ ದೇಶದ ಎಲ್ಲಾ…

Read More

ಮಂಡ್ಯ : ಮಂಡ್ಯ ಜಿಲ್ಲೆಯ ಅಪರ ಜಿಲ್ಲಾಧಿಕಾರಿ ಹೆಚ್.ಎಲ್.ನಾಗರಾಜ್ ಅವರ ಸ್ಥಾನಕ್ಕೆ ಬಿ.ಸಿ.ಶಿವಾನಂದಮೂರ್ತಿ ಅವರನ್ನು ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಪ್ರಸ್ತುತ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಜಂಟಿ ಆಯುಕ್ತರಾಗಿದ್ದ ಶಿವಾನಂದ ಮೂರ್ತಿಯವರನ್ನು ಆಡಳಿತಾತ್ಮಕ ಹಿತದೃಷ್ಟಿಯಿಂದ ತಕ್ಷಣದಿಂದ ಜಾರಿಗೆ ಬರುವಂತೆ ಡಾ. ಹೆಚ್ ಎಲ್ ನಾಗರಾಜ್ ಅವರ ಜಾಗಕ್ಕೆ ವರ್ಗಾಯಿಸಿ ಸರ್ಕಾರದ ಅಧೀನ ಕಾರ್ಯದರ್ಶಿ ಕೇಶವಪ್ರಸಾದ್ ಕೆ.ಹೆಚ್ ಆದೇಶ ಹೊರಡಿಸಿದ್ದಾರೆ. ಮಂಡ್ಯ ಜಿಲ್ಲೆಯ ಅಪರ ಜಿಲ್ಲಾಧಿಕಾರಿಯಾಗಿದ್ದ ಡಾ.ಹೆಚ್.ಎಲ್.ನಾಗರಾಜು ಅವರು ಸನ್ಯಾಸತ್ವ ಸ್ವೀಕಾರ ಮಾಡುವುದು ಖಚಿತವಾಗಿದ್ದು, ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ಮಂಡ್ಯ ಜಿಲ್ಲೆಯ ನೂತನ ಅಪರ ಜಿಲ್ಲಾಧಿಕಾರಿಯನ್ನಾಗಿ ಕೆ.ಎ.ಎಸ್ ಅಧಿಕಾರಿ ಬಿ.ಸಿ ಶಿವಾನಂದಮೂರ್ತಿ ಅವರನ್ನು ವರ್ಗಾಯಿಸಿ ಆದೇಶ ಹೊರಡಿಸಿದೆ.

Read More

ಬಳ್ಳಾರಿ : ಬಳ್ಳಾರಿಯ ಜಿಲ್ಲಾ ಆಸ್ಪತ್ರೆಯಲ್ಲಿ ಕಳೆದ ತಿಂಗಳು ಕೇವಲ 15 ದಿನಗಳಲ್ಲಿ ನಾಲ್ಕು ಜನ ಬಾಣಂತಿಯರು ಸಾವನ್ನಪ್ಪಿದ್ದರು. ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇನ್ನೂ ತನಿಖೆ ನಡೆಯುತ್ತಿದೆ. ಆದರೆ ಇದೀಗ ಬಿಮ್ಸ್ ನಲ್ಲಿ ನವಜಾತ ಶಿಶು ಒಂದು ಸಾವನ್ನಪ್ಪಿದ್ದು, ವೈದ್ಯರ ನಿರ್ಲಕ್ಷವೇ ಇದಕ್ಕೆ ಕಾರಣ ಎಂದು ಇದೀಗ ಕುಟುಂಬಸ್ಥರು ಆರೋಪಿಸುತ್ತಿದ್ದಾರೆ. ಹೌದು ಸಿರಿಗೇರಿ ಗ್ರಾಮದ ಬಾಣಂತಿ ಗಂಗೋತ್ರಿ ಎನ್ನುವವರು, ಬಳ್ಳಾರಿಯ ಬಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದರು. ಗಂಗೋತ್ರಿ ಮಗುವಿಗೆ ಜನ್ಮ ನೀಡಿದ್ದಳು. ನಾರ್ಮಲ್ ಹೆರಿಗೆಗೆ ದಾಖಲಾಗಿದ್ದ ಬಾಣಂತಿ ಗಂಗೋತ್ರಿ ಏಕಾಏಕಿ ಬಿಮ್ಸ್ ವೈದ್ಯರು ಸಿಸೆರಿನ ಮಾಡಿದ್ದರು. ಬಾಣಂತಿಯರ ಸರಣಿ ಸಾವಿನ ಬಳಿಕ ಮತ್ತೊಂದು ಆಘಾತವಾಗಿದೆ. ಬಾಣಂತಿಯರ ಸರಣಿ ಸಾವಿನ ಬಳಿಕ ಈಗ ಶಿಶುವಿನ ಮರಣವಾಗಿದೆ. ಬಾಣಂತಿಯರ ಸಾವಿನ ಪ್ರಕರಣ ಮಾಸುವ ಮುನ್ನವೇ ಇದೀಗ ಮಗುವಿನ ಸಾವನಪ್ಪಿದೆ. ವೈದ್ಯರ ನಿರ್ಲಕ್ಷಕ್ಕೆ ಇದೀಗ ಮಗು ಸಾವಾಗಿದೆ ಎಂದು ಪೋಷಕರು ಆರೋಪಿಸುತ್ತಿದ್ದಾರೆ.

Read More

ಹಾಸನ : ಮುಂದಿನ ವಿಧಾನಸಭಾ ಚುನಾವಣೆಯವರಿಗೂ ಅಂದರೆ 2028 ರವರೆಗೆ ರಾಜ್ಯದಲ್ಲಿ ಯಾವುದೇ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ. 2028ರಲ್ಲಿ ಮತ್ತೆ ನಾವೇ ಅಧಿಕಾರಕ್ಕೆ ಬರುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಇಂದು ಹಾಸನದಲ್ಲಿ ಜನ ಕಲ್ಯಾಣ ಮೃತ್ ಸಮಾವೇಶದಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದಲ್ಲಿ ಬಡ ಜನರಿಗೋಸ್ಕರ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದ್ದೇವೆ. ಆದರೆ ಯಾವುದೇ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಶಾಸಕ ಶಿವಲಿಂಗೇಗೌಡ ಒಬ್ಬರೇ ಗೆಲುವು ಸಾಧಿಸಿದ್ದರು. ಆದರೆ 2028 ರಲ್ಲಿ ವಿಧಾನಸಭಾ ಚುನಾವಣೆಯಲ್ಲಿ ಎಲ್ಲಾ ಸ್ಥಾನಗಳನ್ನು ಹಾಗೂ ಲೋಕಸಭೆಯ ಎಲ್ಲ ಸ್ಥಾನಗಳನ್ನು ಕೂಡ ಗೆಲ್ಲುತ್ತೇವೆ. ಕಾಂಗ್ರೆಸ್ ಪಕ್ಷ ಇಡೀ ದೇಶದಲ್ಲಿ ಬಲಿಷ್ಠವಾಗಿದೆ ಎಂದು ತಿಳಿಸಿದರು.

Read More

ಹಾಸನ : ಎಚ್ ಡಿ ದೇವೇಗೌಡರು ಯಾರನ್ನು ಬೆಳೆಸಲು ಇಷ್ಟಪಡುವುದಿಲ್ಲ. ಬೇರೆಯವರನ್ನು ಇರಲಿ ಒಕ್ಕಲಿಗರನ್ನೇ ಎಚ್ ಡಿ ದೇವೇಗೌಡರು ಬೆಳೆಸಲಿಲ್ಲ. 1994 ರಲ್ಲಿ ನಾನು ಜಾಲಪ್ಪ ಇಲ್ಲದಿದ್ದರೆ ನೀವು ಸಿಎಂ ಆಗುತ್ತಿರಲಿಲ್ಲ. ಎಚ್ ಡಿ ದೇವೇಗೌಡರು ಯಾರನ್ನು ಬೆಳೆಸುವುದಕ್ಕೆ ಇಷ್ಟಪಡಲ್ಲ. ನಾನು ಜಾಲಪ್ಪನವರು ದೇವೇಗೌಡರ ಅವರ ಜೊತೆ ನಿಲ್ಲದೆ ಹೋಗಿದ್ದರೆ. ಎಚ್ ಡಿ ದೇವೇಗೌಡರು ಮುಖ್ಯಮಂತ್ರಿ ಆಗುತ್ತಿರಲಿಲ್ಲ. ಹಾಸನದಲ್ಲಿ ದೇವೇಗೌಡರು ಕಣ್ಣೀರು ಆಗಬೇಕಿತ್ತು ಅಲ್ವಾ? ರೈತರಿಗಾಗಿ ಇವರು ಒಂದು ದಿನವೂ ಕಣ್ಣೀರು ಹಾಕಲಿಲ್ಲ ಎಂದು ಸಿಎಂ ಸಿದ್ದರಾಮಯ್ಯ HD ದೇವೇಗೌಡರ ವಿರುದ್ಧ ವಾಗ್ದಾಳಿ ನಡೆಸಿದರು. ಇಂದು ಹಾಸನ ಜಿಲ್ಲೆಯ ಎಸ ಎಂ ಕೃಷ್ಣ ನಗರದಲ್ಲಿ ಕಾಂಗ್ರೆಸ್ ಜನಕಲ್ಯಾಣ ಬೃಹತ್ ಸಮಾವೇಶ ಆಯೋಜನೆ ಮಾಡಿದ್ದು, ಈ ಒಂದು ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿಪಕ್ಷಗಳಾದ ಬಿಜೆಪಿ ಹಾಗೂ ಜೆಡಿಎಸ್ ವಿರುದ್ಧ ಗುಡುಗಿದರು. ಇದೆ ವೇಳೆ ಮೇಕೆದಾಟು ಯೋಜನೆಗೆ ಕೇಂದ್ರ ಸಚಿವರಾಗಿರುವಂತಹ ಹೆಚ್ ಡಿ ಕುಮಾರಸ್ವಾಮಿ ಅವರು ಅನುಮತಿ ಕೊಡಿಸಲಿ ಎಂದು ಸಿಎಂ ಸಿದ್ದರಾಮಯ್ಯ ಎಚ್…

Read More

ಹಾಸನ : ಕಾಂಗ್ರೆಸ್ ಪಕ್ಷವು ಇಂದು ಹಾಸನದಲ್ಲಿ ಜನಕಲ್ಯಾಣ ಬೃಹತ್ ಸಮಾವೇಶವನ್ನು ಹಮ್ಮಿಕೊಂಡಿದ್ದು, ಈ ಒಂದು ಸಮಾವೇಶದಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಮಾತನಾಡಿ, ಯಾವುದೇ ಕಾರಣಕ್ಕೂ ತಲೆ ಕೆಡಿಸಿಕೊಳ್ಳಬೇಡಿ ಈ ಬಂಡೆ ಯಾವಾಗಲೂ ಸಿಎಂ ಸಿದ್ದರಾಮಯ್ಯ ಅವರ ಜೊತೆಲೆ ಇರುತ್ತದೆ ಡಿಸಿಎಂ ಡಿಕೆ ಶಿವಕುಮಾರ್ ಅವರು ಜನರಿಗೆ ಭರವಸೆ ನೀಡಿದರು. ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಅವರು, ಕಾಂಗ್ರೆಸ್ ಶಕ್ತಿ ಈ ದೇಶದ ಶಕ್ತಿ. ಕಾಂಗ್ರೆಸ್ ಇತಿಹಾಸ ದೇಶದ ಇತಿಹಾಸ. ನೊಂದ ತಾಯಂದಿರಿಗೆ ಆಶ್ರಯ ಕೊಡಲು ಶ್ರೇಯಸ್ ಅವರನ್ನು ಆಯ್ಕೆ ಮಾಡಿದ್ದೀರಿ. 2028ಕ್ಕೆ ಮತ್ತೆ ನಾವೇ ಅಧಿಕಾರಕ್ಕೆ ಬರುವುದು ನಿಶ್ಚಿತ. ಕಮಲ ಕೆರೆಯಲ್ಲಿ ಇದ್ದರೆ ಚೆಂದ, ತೆನೆ ಹೊಲದಲ್ಲಿ ಇದ್ದರೆ ಚೆಂದ. ದಾನ ಧರ್ಮ ಮಾಡುವ ಕೈ ಅಧಿಕಾರದಲ್ಲಿ ಇದ್ದರೆ ಚೆಂದ ಎಂದರು. ರಾಮನಗರ ಜಿಲ್ಲೆಯಲ್ಲಿ 4 ಕ್ಷೇತ್ರಗಳ ಪೈಕಿ ನಾಲ್ಕರಲ್ಲೂ ನಾವು ಗೆದ್ದಿದ್ದೇವೆ. ಚಾಮರಾಜನಗರ, ಮೈಸೂರು, ಮಂಡ್ಯ, ಕೊಡಗು, ಚಿಕ್ಕಮಂಗಳೂರಲ್ಲಿ ಗೆದ್ದಿದ್ದೇವೆ. ಮುಂದೆ ಹಾಸನ ಜಿಲ್ಲೆಯಲ್ಲೂ ನಾವೇ ಗೆಲ್ಲುತ್ತೇವೆ. ಹಾಗಾಗಿ…

Read More