Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ರಾಜ್ಯದ ಮೂರು ಕ್ಷೇತ್ರಗಳಾದ ಚನ್ನಪಟ್ಟಣ, ಸಂಡೂರು ಮತ್ತು ಶಿಗ್ಗಾಂವಿ ವಿಧಾನಸಭೆ ಕ್ಷೇತ್ರಗಳ ಉಪ ಚುನಾವಣೆ ನಾಳೆ ನಡೆಯಲಿದೆ. ಬೆಳಗ್ಗೆ 7 ಗಂಟೆಗೆ ಮತದಾನ ಆರಂಭಗೊಳ್ಳಲಿದ್ದು, ಸಂಜೆ 6 ಗಂಟೆಯವರೆಗೂ ಮತದಾನಕ್ಕೆ ಅವಕಾಶವಿದೆ. ಹಾಗಾಗಿ ಇವಂದು ಮೂರು ಕ್ಷೇತ್ರಗಳ ವಿಧಾನಸಭಾ ಉಪಚುನಾವಣೆಯು, ರಾಜ್ಯ ನಾಯಕರಿಗೂ ಇದೊಂದು ಪ್ರತಿಷ್ಠೆಯ ಚುನಾವಣೆಯಾಗಿದ್ದು, ಮೂರು ಕ್ಷೇತ್ರಗಳ ಚುನಾವಣೆಯಲ್ಲಿ ಗೆಲ್ಲಲು ಮೂರು ರಾಜಕೀಯ ಪಕ್ಷಗಳು ಹರಸಾಹಸ ಪಡುತ್ತಿವೆ. ಈಗಾಗಲೇ ಎಲ್ಲಾ ಪಕ್ಷಗಳ ನಾಯಕರು ಮೂರೂ ಕ್ಷೇತ್ರಗಳಲ್ಲಿ ಭರ್ಜರಿ ಪ್ರಚಾರ ನಡೆಸಿದ್ದಾರೆ. ಮೂರೂ ಕ್ಷೇತ್ರಗಳ ಪೈಕಿ ಎರಡು ಕ್ಷೇತ್ರಗಳಲ್ಲಿ ಮಾಜಿ ಮುಖ್ಯಮಂತ್ರಿಗಳ ಮಕ್ಕಳು ಸ್ಪರ್ಧಿಸುತ್ತಿದ್ದಾರೆ. ಹೌದು ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನಲ್ಲಿ ಮಾಜಿ ಮುಖ್ಯಮಂತ್ರಿ ಹಾಗೂ ಹಾಲಿ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಮಗ ನಿಖಿಲ್ ಕುಮಾರಸ್ವಾಮಿ ಮತ್ತು ಹಾವೇರಿ ಜಿಲ್ಲೆಯ ಶಿಗ್ಗಾವಿ ಕ್ಷೇತ್ರದಲ್ಲಿ ಮಾಜಿ ಮುಖ್ಯಮಂತ್ರಿ ಹಾಗೂ ಹಾಲಿ ಸಂಸದ ಬಸವರಾಜ್ ಬೊಮ್ಮಾಯಿ ಪುತ್ರ ಭರತ್ ಬೊಮ್ಮಾಯಿ ಸ್ಪರ್ಧಿಸುತ್ತಿದ್ದಾರೆ. ಸಿಎಂ ಸಿದ್ದರಾಮಯ್ಯ ಡಿಕೆಶಿಗೆ ಪ್ರತಿಷ್ಠೆಯ…
ಬೆಂಗಳೂರು : ದ್ವಿಚಕ್ರ ವಾಹನಕ್ಕೆ ಸೈಡ್ ಬಿಡದಿದ್ದಕ್ಕೆ ಬಿಎಂಟಿಸಿ ಬಸ್ ಚಾಲಕನ ಮೇಲೆ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಕಾರ್ಪೊರೇಷನ್ ಬಳಿ ಈ ಒಂದು ಘಟನೆ ನಡೆದಿದೆ.ಟೂಲ್ಸ್ ನಿಂದ ಬಸ್ಸಿನ ಗಾಜು ಪುಡಿಪುಡಿ ಮಾಡಿ ಚಾಲಕನನ್ನು ಕೆಳಗಿಳಿಸಿ ಹಲ್ಲೆ ನಡೆಸಲಾಗಿದೆ. ಈ ಘಟನೆಗೆ ಸಂಬಂಧಿಸಿದಂತೆ ಇದೀಗ ಆರೋಪಿ ಮುಜಾಹಿದ್ ನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಹೌದು ಗ್ಯಾರೇಜ್ ನಲ್ಲಿ ಕೆಲಸ ಮಾಡುತ್ತಿದ್ದ ಯುವಕ ಮುಜಾಹಿದ್ ಬೈಕ್ನಲ್ಲಿ ಹೋಗುತ್ತಿದ್ದ. ಈ ವೇಳೆ ಬಿಎಂಟಿಸಿ ಬಸ್ ಹಾಗೂ ಡಿವೈಡರ್ ಮಧ್ಯೆ ಯುವಕ ದ್ವಿಚಕ್ರ ವಾಹನವನ್ನು ನುಗ್ಗಿಸಿದ್ದಾನೆ.ಬಳಿಕ ಸೈಡ್ ಕೊಡುವಂತೆ ಬಿಎಂಟಿಸಿ ಬಸ್ ಚಾಲಕ ರಾಜೇಶ್ ಗೆ ಯುವಕ ಆವಾಜ್ ಹಾಕಿದ್ದಾನೆ. ಕಾರ್ಪೊರೇಷನ್ ಸಿಗ್ನಲ್ ನಲ್ಲಿ ಬಿಎಂಟಿಸಿ ಬಸ್ ನಿಲ್ಲಿಸುತ್ತಿದ್ದಂತೆ ಹಲ್ಲೆ ನಡೆಸಿದ್ದಾನೆ. ಅವಾಚ್ಯ ಶಬ್ದಗಳಿಂದ ನಿಂದಿಸಿ ಬೈಕ್ ನಲ್ಲಿದ್ದ ಟೂಲ್ಸ್ ನಿಂದ ಚಾಲಕನ ಮೇಲೆ ಯುವಕ ಹಲ್ಲೆ ಮಾಡಿದ್ದಾನೆ.ಕೂಡಲೇ ಆರೋಪಿಯನ್ನು ಹಿಡಿದು ಸಾರ್ವಜನಿಕರು ಥಳಿಸಿದ್ದಾರೆ. ಹಲ್ಲೆ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.…
ಬಳ್ಳಾರಿ : ಮಧ್ಯಾಹ್ನದ ಬಿಸಿ ಊಟವನ್ನು ಸೇವಿಸಿದ ಬಳಿಕ ವಿದ್ಯಾರ್ಥಿಗಳಿಗೆ ವಾಂತಿಬೇದಿ ಉಂಟಾಗಿದೆ. ಊಟ ಸೇವಿಸಿದ ಬಳಿಕ ವಾಂತಿ ಭೇದಿಯಿಂದ ಸುಮಾರು 45ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥರಾಗಿರುವ ಘಟನೆ ಬಳ್ಳಾರಿ ಜಿಲ್ಲೆಯ ಕಂಪ್ಲಿ ತಾಲೂಕಿನ ಮೆಟ್ರಿ ಹೊನ್ನಳ್ಳಿಯಲ್ಲಿ ಈ ಘಟನೆ ನಡೆದಿದೆ. ಹೌದು ಗ್ರಾಮದ ಸಿದ್ದಪ್ಪ ಸರ್ಕಾರಿ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳು ಓದುತ್ತಿದ್ದಾರೆ. ಮಧ್ಯಾಹ್ನದ ಬಿಸಿ ಊಟ ಸೇವಿಸಿದ ಬಳಿಕ ಮಕ್ಕಳಿಗೆ ವಾಂತಿ ಬೇಧಿ ಆಗಿದೆ. ಇದರಿಂದ 45ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದಾರೆ. ಇಷ್ಟಕ್ಕೆಲ್ಲ ಅಡುಗೆ ಸಿಬ್ಬಂದಿಗಳ ನಿರ್ಲಕ್ಷದಿಂದ ಈ ಒಂದು ಘಟನೆಯಾಗಿದೆ ಎಂದು ಆರೋಪ ಕೇಳಿ ಬಂದಿದೆ. ಅಸ್ವಸ್ಥಗೊಂಡ ವಿದ್ಯಾರ್ಥಿಗಳನ್ನು ಕೂಡಲೇ ಕಂಪ್ಲಿಯ ಸರಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅಸ್ವಸ್ಥ ವಿದ್ಯಾರ್ಥಿಗಳ ಆರೋಗ್ಯವನ್ನು ತಹಶೀಲ್ದಾರ ಹಾಗೂ ತಾಲೂಕು ವೈದ್ಯಾಧಿಕಾರಿ ವಿಚಾರಿಸಿದ್ದಾರೆ. ನಿರ್ಲಕ್ಷವಹಿಸಿದ ಅಡುಗೆ ಸಿಬ್ಬಂದಿಗಳ ವಿರುದ್ಧ ಪೋಷಕರು ಆಕ್ರೋಶ ಹೊರಹಾಕಿದ್ದಾರೆ.
ಚಿಕ್ಕಮಗಳೂರು : ಚಿಕ್ಕಮಗಳೂರು ಜಿಲ್ಲೆಯಲ್ಲಿ ನಕ್ಸಲ್ ಚಟುವಟಿಕೆ ಹಿನ್ನೆಲೆಯಲ್ಲಿ ನಕ್ಸಲ್ ನಾಯಕಿ ಲತಾ, ಜಯಣ್ಣ ಸೇರಿದಂತೆ ಮೂವರ ವಿರುದ್ಧ ಇದೀಗ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಜಯಪುರ ಠಾಣೆಯಲ್ಲಿ ‘FIR’ ದಾಖಲಾಗಿದೆ. ಹೌದು ಚಿಕ್ಕಮಂಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ, ಜಯಪುರ ಪೊಲೀಸ್ ಠಾಣೆಯಲ್ಲಿ ಮೂವರ ವಿರುದ್ಧ ಪೊಲೀಸರು ಪ್ರಕರಣವನ್ನು ದಾಖಲಿಸಿದ್ದಾರೆ ಎಂದು ತಿಳಿದು ಬಂದಿದೆ. ಕಡೆಗುಂಡಿ ಯಡಗುಂದಕ್ಕೆ ಹಾಗೂ ಮುಂಡಗಾರು ಗ್ರಾಮಕ್ಕೆ ಲತಾ ತಂಡ ಭೇಟಿ ನೀಡಿತ್ತು ಎನ್ನಲಾಗಿದೆ. ಅಲ್ಲದೇ ಕಡೆಗುಂಡಿ ಗ್ರಾಮದ ಮನೆಯಲ್ಲಿ ಲತಾ ಮತ್ತು ತಂಡ ಊಟ ಮಾಡಿದ್ದರು ಎನ್ನಲಾಗಿದೆ. ನಕ್ಸಲರ ತಂಡ ಭೇಟಿ ವೇಳೆ 3 ಬಂದೂಕುಗಳು ಸಹ ಪತ್ತೆಯಾಗಿವೆ. ಇದೀಗ ಬಂದೂಕಿನ ಬಗ್ಗೆ ಸದ್ಯ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ ಚಿಕ್ಕಮಂಗಳೂರು ಎಸ್ ಬಿ ವಿಕ್ರಂ ಆಮ್ಟೆ NAF ಜಿತೇಂದ್ರ ತನಿಖೆಯನ್ನು ಮುಂದುವರೆಸಿದ್ದಾರೆ.
ಮೈಸೂರು : ನಮ್ಮ ತಂದೆ ನಮ್ಮ ಊರಿನ ಜನರ ಮಾತನ್ನು ಕೇಳಿ, ಕುರುಬರೆಲ್ಲರು ಕಾನೂನು ಓದೋಕೆ ಆಗಲ್ಲ ಅಂತ ಹೇಳಿದ್ದರು. ಆದರೆ ನಾನು ಮಾತ್ರ ಹಠ ಬಿಡದೆ ಛಲದಿಂದ ಓದಿ ಲಾಯರ್ ಆದೆ, ಬಳಿಕ ಎರಡು ಬಾರಿ ಮುಖ್ಯಮಂತ್ರಿಯು ಆದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು. ಮೈಸೂರು ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ವತಿಯಿಂದ ಆಯೋಜಿಸಿದ್ದ ಹೆಚ್.ಡಿ.ಕೋಟೆ ವಿಧಾನಸಭಾ ಕ್ಷೇತ್ರದಲ್ಲಿನ 443.64 ಕೋಟಿ ವೆಚ್ಚದ ಕಾಮಗಾರಿ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ವಿದ್ಯೆ ಯಾರೊಬ್ಬರ ಸ್ವತ್ತಲ್ಲ. ವಾಲ್ಮೀಕಿ, ವ್ಯಾಸ, ಕನಕದಾಸ ಎಲ್ಲರೂ ಶೂದ್ರ, ದಲಿತ ಸಮುದಾಯದವರು. ಮೇಲ್ವರ್ಗಕ್ಕೆ ಮಾತ್ರ ಶಿಕ್ಷಣ ಎನ್ನುವುದು ತಪ್ಪುಎಂದರು. ಮಹಾಭಾರತ ಬರೆದ ವ್ಯಾಸರು ಬೆಸ್ತರು, ರಾಮಾಯಣ ಬರೆದ ವಾಲ್ಮೀಕಿ ಬೇಡ ಸಮುದಾಯದವರು, ಶಾಕುಂತಲ ಬರೆದ ಕಾಳಿದಾಸರು ಕುರುಬ ಸಮುದಾಯದವರು. ವಿದ್ಯೆ ಯಾರೊಬ್ಬರ ಸ್ವತ್ತು ಅಲ್ಲ. ಅವಕಾಶಗಳು ಸಿಗಬೇಕು ಅಷ್ಟೇ. ನಮ್ಮ ಜೀವನವನ್ನು ರೂಪಿಸಿಕೊಳ್ಳುವ ಶಿಲ್ಪಿ ನಾವೇ. ಆದ್ದರಿಂದ ವಿದ್ಯೆ ಕಲಿಯಲೇಬೇಕು. ಶೂದ್ರ ಜಾತಿಯ ಕನಕದಾಸರು…
ಬೆಂಗಳೂರು : ದ್ವಿಚಕ್ರ ವಾಹನಕ್ಕೆ ಸೈಡ್ ಬಿಡದಿದ್ದಕ್ಕೆ ಬಿಎಂಟಿಸಿ ಬಸ್ ಚಾಲಕನ ಮೇಲೆ ಯುವಕನೊಬ್ಬ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಕಾರ್ಪೊರೇಷನ್ ಬಳಿ ಈ ಒಂದು ಘಟನೆ ನಡೆದಿದೆ.ಟೂಲ್ಸ್ ನಿಂದ ಬಸ್ಸಿನ ಗಾಜು ಪುಡಿಪುಡಿ ಮಾಡಿ ಚಾಲಕನನ್ನು ಕೆಳಗಿಳಿಸಿ ಹಲ್ಲೆ ನಡೆಸಲಾಗಿದೆ. ಹೌದು ಗ್ಯಾರೇಜ್ ನಲ್ಲಿ ಕೆಲಸ ಮಾಡುತ್ತಿದ್ದ ಯುವಕನೊಬ್ಬ ಬೈಕ್ನಲ್ಲಿ ಹೋಗುತ್ತಿದ್ದ. ಈ ವೇಳೆ ಬಿಎಂಟಿಸಿ ಬಸ್ ಹಾಗೂ ಡಿವೈಡರ್ ಮಧ್ಯೆ ಯುವಕ ದ್ವಿಚಕ್ರ ವಾಹನವನ್ನು ನುಗ್ಗಿಸಿದ್ದಾನೆ.ಬಳಿಕ ಸೈಡ್ ಕೊಡುವಂತೆ ಬಿಎಂಟಿಸಿ ಬಸ್ ಚಾಲಕನಿಗೆ ಯುವಕ ಆವಾಜ್ ಹಾಕಿದ್ದಾನೆ. ಕಾರ್ಪೊರೇಷನ್ ಸಿಗ್ನಲ್ ನಲ್ಲಿ ಬಿಎಂಟಿಸಿ ಬಸ್ ನಿಲ್ಲಿಸುತ್ತಿದ್ದಂತೆ ಹಲ್ಲೆ ನಡೆಸಿದ್ದಾನೆ. ಅವಾಚ್ಯ ಶಬ್ದಗಳಿಂದ ನಿಂದಿಸಿ ಬೈಕ್ ನಲ್ಲಿದ್ದ ಟೂಲ್ಸ್ ನಿಂದ ಚಾಲಕನ ಮೇಲೆ ಯುವಕ ಹಲ್ಲೆ ಮಾಡಿದ್ದಾನೆ.ಕೂಡಲೇ ಆರೋಪಿಯನ್ನು ಹಿಡಿದು ಸಾರ್ವಜನಿಕರು ಥಳಿಸಿದ್ದಾರೆ. ಹಲ್ಲೆ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಎಸ್ ಜೆ ಪಾರ್ಕ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಒಂದು ಪ್ರಕರಣ ನಡೆದಿದೆ. ಇಂದು ಬೆಳಿಗ್ಗೆ…
ರಾಮನಗರ : ನಾಳೆ ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ನಡೆಯಲಿದ್ದು, ಈಗಾಗಲೇ ಎಲ್ಲಾ ಪಕ್ಷಗಳ ನಾಯಕರು ಭರ್ಜರಿ ಪ್ರಚಾರ ಮಾಡಿದ್ದಾರೆ.ಇದೀಗ ಚನ್ನಪಟ್ಟಣ ಕ್ಷೇತ್ರದಲ್ಲಿ ಅಕ್ರಮವಾಗಿ ಸಂಗ್ರಹಿಸಿದ್ದ ಬರೋಬ್ಬರಿ 29 ಕೋಟಿ ಮೌಲ್ಯದ ಮದ್ಯವನ್ನು ಇದೀಗ ಅಬಕಾರಿ ಇಲಾಖೆ ಅಧಿಕಾರಿಗಳು ಜಪ್ತಿ ಮಾಡಿಕೊಂಡಿದ್ದಾರೆ. ಹೌದು ಬರೋಬ್ಬರಿ 29 ಕೋಟಿ ಮೌಲ್ಯದ ಮದ್ಯವನ್ನು ಜಪ್ತಿ ಮಾಡಿದ್ದಾರೆ. ಒಂದು ತಿಂಗಳಲ್ಲಿ ಒಟ್ಟು 29 ಕೋಟಿ ಮೌಲ್ಯದ ಮದ್ಯವನ್ನು ಜಪ್ತಿ ಮಾಡಿಕೊಳ್ಳಲಾಗಿದೆ. ಚನ್ನಪಟ್ಟಣ ಚುನಾವಣೆ ಘೋಷಣೆಯಾದ ಬಳಿಕ ಮದ್ಯವನ್ನು ಜಪ್ತಿ ಮಾಡಿಕೊಳ್ಳಲಾಗಿದೆ.ಇದುವರೆಗೆ 151 ಪ್ರಕರಣಗಳನ್ನು ಅಬಕಾರಿ ಇಲಾಖೆ ದಾಖಲಿಸಿಕೊಂಡಿದೆ. ಮದ್ಯದ ಜೊತೆಗೆ ಮೂರು ವಾಹನಗಳನ್ನು ಕೂಡ ಜಪ್ತಿ ಮಾಡಿಕೊಳ್ಳಲಾಗಿದೆ.ದಾಖಲೆ ಹಾಗೂ ಪರವಾನಿಗೆ ಇಲ್ಲದೆ ಮದ್ಯ ಸಂಗ್ರಹಿಸಿ ಇಡಲಾಗಿತ್ತು. ಯಾವುದೇ ದಾಖಲೆ ಹಾಗೂ ಪರವಾನಿಗೆಲ್ಲದೆ ಸಂಗ್ರಹಿಸಿಟ್ಟಿದ್ದ ಮಧ್ಯವನ್ನು ಜಪ್ತಿ ಮಾಡಿಕೊಂಡಿರುವ ಕುರಿತು ಅಬಕಾರಿ ಇಲಾಖೆ ಮಾಹಿತಿ ನೀಡಿದೆ.
ದಾವಣಗೆರೆ : ಸಿದ್ದರಾಮಯ್ಯನದ್ದು ಟಿಪ್ಪು ಸಂಸ್ಕೃತಿ, ಮುಸ್ಲಿಮರು ಏನೇ ಕೇಳಿದರು ಕೊಟ್ಟುಬಿಡುತ್ತಾಮೆ ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ವಿಪಕ್ಷ ನಾಯಕ ಆರ್ ಅಶೋಕ್ ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದಾರೆ. ದಾವಣಗೆರೆಯಲ್ಲಿ ಆರ್ ಅಶೋಕ್ ಮಾಧ್ಯಮಗಳೊಂದಿಗೆ ಮಾತನಾಡಿ, ಸಿಎಂ ಸಿದ್ದರಾಮಯ್ಯ ಮುಸ್ಲಿಂರು ನಾಲ್ಕು ಕೇಳಿದರೆ ಎಂಟು ಕೊಡುತ್ತಾನೆ. ಉತ್ತರ ಕರ್ನಾಟಕದ ಅವನ್ಯಾರು ಮಾಜಿ ಸಚಿವ ಹೇಳಿದ್ದಾನಲ್ಲ ಸಿದ್ದರಾಮಯ್ಯ ಸಿಎಂ ಆಗಿದ್ದಾಗಲೇ ಎಲ್ಲವನ್ನು ಬಾಚಿಕೊಳ್ಳಿ ಎಂದು ಹಾಗಾಗಿ ಸಿದ್ದರಾಮಯ್ಯ ಮುಸ್ಲಿಮರು ನಾಲ್ಕು ಕೇಳಿದರೆ ಎಂಟು ಕೊಡುತ್ತಾನೆ ಎಂದು ಏಕವಚನದಲ್ಲಿ ವಾಗ್ದಾಳಿ ಮಾಡಿದರು.
ಮೈಸೂರು : ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಂತಹ ಕೋಟ್ಯಾಂತರ ರೂಪಾಯಿ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಪಟ್ಟಂತೆ, ಶಾಸಕ ಬಿ ನಾಗೇಂದ್ರ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಇಡಿ ಅಧಿಕಾರಿಗಳು ಅವರನ್ನು ಬಂಧಿಸಿದ್ದರು. ಇತ್ತೀಚೆಗೆ ಪರಪ್ಪನ ಅಗ್ರಹಾರ ಜೈಲಿನಿಂದ ಅವರು ಬಿಡುಗಡೆಯಾಗಿದ್ದಾರೆ. ಇದೀಗ ಮೈಸೂರಿನಲ್ಲಿ ವಾಲ್ಮೀಕಿ ಜಯಂತಿ ಅಭಿವೃದ್ಧಿ ಕಾಮಗಾರಿ ಗಳಿಗೆ ಚಾಲನೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಶಾಸಕ ಬಿ ನಾಗೇಂದ್ರ ಅವರಿಗೆ ಮತ್ತೆ ಸಚಿವ ಸ್ಥಾನ ನೀಡುವುದಾಗಿ ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ. ಹೌದು ಮೈಸೂರು ಜಿಲ್ಲೆಯ ಎಚ್ ಡಿ ಕೋಟೆ ತಾಲೂಕಿನಲ್ಲಿ ನಡೆದ ಸಮಾವೇಶ ಒಂದರಲ್ಲಿ ಮಾತನಾಡಿದ ಅವರು, ಶಾಸಕ ಚಿಕ್ಕಮಾದು ಅಭಿಮಾನಿಗಳು ಅವರಿಗೆ ಸಚಿವ ಸ್ಥಾನ ನೀಡಿ ಎಂದು ಮನವಿ ಮಾಡಿದರು.ಇದಕ್ಕೆ ಸಿಎಂ ಸಿದ್ದರಾಮಯ್ಯ ಸಚಿವ ಸ್ಥಾನ ಎಲ್ಲಿ ಖಾಲಿ ಇದೆ? ಹಾಗಾಗಿ ಚಿಕ್ಕ ಮಾದುಗೆ ಸಚಿವ ಸ್ಥಾನ ನೀಡಲು ಸದ್ಯಕ್ಕೆ ಆಗಲ್ಲ. ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಹಣ ದುರುಪಯೋಗವಾಗಿದೆ. ಆ ಪ್ರಕರಣದ ತನಿಖೆ…
ಬೆಂಗಳೂರು : ಕೊರೋನ ಹಗರಣದ ಮತ್ತೊಂದು ಸ್ಪೋಟಕ ವರದಿ ಬಹಿರಂಗವಾಗಿದ್ದು, ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಮಾಜಿ ಆರೋಗ್ಯ ಸಚಿವ ಶ್ರೀರಾಮುಲು ವಿರುದ್ಧ ನ್ಯಾ.ಕುನ್ಹ ಸಲ್ಲಿಸಿರುವ ಮಧ್ಯಂತರ ವರದಿಯಲ್ಲಿ ಇಬ್ಬರ ವಿರುದ್ಧ ಸ್ಪೋಟಕ ಮಾಹಿತಿ ಬಹಿರಂಗವಾಗಿದೆ. ಹೌದು ಬಿಎಸ್ ಯಡಿಯೂರಪ್ಪ ಹಾಗೂ ಶ್ರೀರಾಮುಲು ಕಾರ್ಯವೈಖರಿಗೆ ಸಮಿತಿ ಆಕ್ಷೇಪ ವ್ಯಕ್ತಪಡಿಸಿದೆ. ಕೊರೊನ ವೇಳೆ ಖಾಸಗಿ ಲ್ಯಾಬ್ ಗಳಿಗೆ 6.93 ಕೋಟಿ ಹಣ ಸಂದಾಯವಾಗಿದೆ. ಆದರೆ ಖಾಸಗಿ ಲ್ಯಾಬ್ ಗಳು ICMR ನಿಂದ ಮಾನ್ಯತೆ ಪಡೆದಿಲ್ಲ. ಅಧಿಕೃತ ICMR ಲ್ಯಾಬ್ ಗಳು ಅಲ್ಲ ಎಂದು ವರದಿಯಲ್ಲಿ ಉಲ್ಲೇಖವಾಗಿದೆ. RTPCR ಟೆಸ್ಟಿಗೆ ಲ್ಯಾಬ್ ಗಳ ಸಾಮರ್ಥ್ಯ ಕ್ಷಮತೆ ಗುರುತಿಸಿಲ್ಲ. ಸಾಮರ್ಥ್ಯ ಹಾಗೂ ಕ್ಷಮತೆ ಪರಿಶೀಲಿಸದೆ ಖಾಸಗಿ ಲ್ಯಾಬ್ ಗೆ ಅನುಮತಿ ನೀಡಲಾಗಿದೆ. 6 ಲ್ಯಾಬ್ ಗಳಿಗೆ ಒಪ್ಪಂದವಿಲ್ಲದೆ ಹಣ ಸಂದಾಯ ಮಾಡಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಅನಧಿಕೃತವಾಗಿ ಲ್ಯಾಬ್ ಗಳಿಗೆ ಹಣ ಸಂದಾಯದ ಬಗ್ಗೆ ವರದಿಯಲ್ಲಿ ಉಲ್ಲೇಖಿಸಲಾಗಿದೆ. 8 ಲ್ಯಾಬ್ ಗಳಿಗೆ ಅನುಮತಿ ಪಡೆಯದೆ 4.28…












