Author: kannadanewsnow05

ನಾಗ್ಪುರ : ಜನನ ಪ್ರಮಾಣ 2.1 ಕ್ಕಿಂತ ಕಡಿಮೆಯಾದರೆ ಸಮಾಜದ ಅಳಿವು ಸಂಭವಿಸಬಹುದು. ಹಾಗಾಗಿ ಪ್ರತಿಯೊಬ್ಬ ದಂಪತಿಗಳು ಮೂರು ಮಕ್ಕಳನ್ನು ಹೆರಬೇಕು ಎಂದು RSS ಮುಖ್ಯಸ್ಥ ಮೋಹನ್ ಭಾಗವತ್ ಹೇಳಿಕೆ ನೀಡಿದ್ದು ಇದೀಗ ಭಾರಿ ವೈರಲ್ ಆಗಿದೆ. ನಾಗ್ಪುರದಲ್ಲಿ ನಡೆದ ‘ಕಥಲೆ ಕುಲ್ ಸಮ್ಮೇಳನ’ದಲ್ಲಿ ಮಾತನಾಡಿದ ಅವರು, ಸಮಾಜದ ಜನಸಂಖ್ಯೆಯು 2.1 ಕ್ಕಿಂತ ಕಡಿಮೆಯಾದರೆ, ಆ ಸಮಾಜವು ಭೂಮಿಯಿಂದ ಕಣ್ಮರೆಯಾಗುತ್ತದೆ ಎಂದು ಆಧುನಿಕ ಜನಸಂಖ್ಯಾ ವಿಜ್ಞಾನವೇ ಹೇಳುತ್ತದೆ. ಈಗಾಗಲೇ ಈ ರೀತಿಯಲ್ಲಿ ಅನೇಕ ಭಾಷೆಗಳು ಮತ್ತು ಸಮಾಜಗಳು ಅಸ್ತಿತ್ವವನ್ನು ಕಳೆದುಕೊಂಡಿವೆ. ಹಾಗಾಗಿ ಜನಸಂಖ್ಯೆಯು 2.1 ಕ್ಕಿಂತ ಕಡಿಮೆ ಇರಬಾರದು ಎಂದು ಹೇಳಿದ್ದಾರೆ. ಅನೇಕ ಬಿಜೆಪಿ ನಾಯಕರು ಜನಸಂಖ್ಯಾ ನಿಯಂತ್ರಣದ ಬಗ್ಗೆ ಧ್ವನಿ ಎತ್ತಿರುವ ಸಮಯದಲ್ಲೇ ಮೋಹನ್ ಭಾಗವತ್ ಅವರು ಈ ಹೇಳಿಕೆ ನೀಡಿದ್ದು, ಸದ್ಯ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ.ಕೆಲವು ತಿಂಗಳ ಹಿಂದೆ ರಾಜಸ್ಥಾನದ ಬಿಜೆಪಿ ಶಾಸಕ ಬಾಲ್ಮುಕುಂಡಾಚಾರ್ಯ ಜನಸಂಖ್ಯಾ ನಿಯಂತ್ರಣ ಮಸೂದೆ ತರುವ ಬಗ್ಗೆ ಪ್ರಸ್ತಾಪಿಸಿದ್ದರು. ಆದರೆ ಇದೀಗ ಮೋಹನ್ ಭಾಗವತ್​…

Read More

ಬೆಂಗಳೂರು : ತಮಿಳುನಾಡಿನ ಕರಾವಳಿ ತೀರದಲ್ಲಿ ಫೆಂಗಲ್ ಚಂಡಮಾರುತ ಉಂಟಾಗಿದೆ. ಈ ಪರಿಣಾಮ ಕರ್ನಾಟಕದಲ್ಲೂ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಅಲ್ಲದೇ ರಾಜ್ಯದ 7 ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಕಾರಣ ಆರೆಂಜ್, ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ. ಈ ಸಂಬಂಧ ಹವಾಮಾನ ಕೇಂದ್ರದ ಪ್ರಾದೇಶಿಕ ನಿರ್ದೇಶಕ ಸಿ.ಎಸ್ ಪಾಟೀಲ್ ಅವರು ಮಾಹಿತಿ ಹಂಚಿಕೊಂಡಿದ್ದು, ಇಂದು ದಕ್ಷಿಣ ಒಳನಾಡಿನ ಜಿಲ್ಲೆಗಳಾದಂತ ಹಾಸನ, ಮಂಡ್ಯ, ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು, ಚಾಮರಾಜನಗರ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ. ಮುಂಜಾಗ್ರತಾ ಕ್ರಮವಾಗಿ ಆರೆಂಜ್ ಅಲರ್ಟ್ ನೀಡಲಾಗಿದೆ ಎಂದು ತಿಳಿಸಿದ್ದಾರೆ. ಇನ್ನೂ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಕೋಲಾರ ಹಾಗೂ ಕರಾವಳಿ ಜಿಲ್ಲೆಗಳಾದಂತ ಉಡುಪಿ, ದಕ್ಷಿಣ ಕನ್ನಡದಲ್ಲಿಯೂ ಭಾರೀ ಮಳೆಯಾಗಲಿದೆ. ಸಾರ್ವಜನಿಕರು ಎಚ್ಚರಿಕೆಯವಹಿಸುವಂತೆ ತಿಳಿಸಿ, ಯೆಲ್ಲೋ ಅಲರ್ಟ್ ನೀಡಿದ್ದಾರೆ. ಇಂದು ಕೊಡಗು, ಚಾಮರಾಜನಗರ, ಮೈಸೂರು, ಚಿಕ್ಕಮಗಳೂರು, ಶಿವಮೊಗ್ಗ, ಮಂಡ್ಯ ಮತ್ತು ಹಾಸನ ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ರಾಮನಗರ,…

Read More

ಹಾವೇರಿ : ಹಾವೇರಿಯಲ್ಲಿ ಬೆಚ್ಚಿ ಬೀಳಿಸುವ ಘಟನೆ ನಡೆದಿದ್ದು, ಮನೆ ಮುಂದೆ ಆಟವಾಡುತ್ತಿದ್ದ 12 ವರ್ಷದ ಬಾಲಕನನ್ನು ದುಷ್ಕರ್ಮಿಗಳು ಅಪಹರಣಕ್ಕೆ ಯತ್ನಿಸಿದ್ದು, ಅದೃಷ್ಟವಶಾತ್ ಬಾಲಕ ತನ್ನ ಸಮಯ ಪ್ರಜ್ಞೆಯಿಂದ ಕಿಡ್ನಾಪರಿಂದ ಬಚಾವ್ ಆಗಿರುವ ಘಟನೆ ಹಾವೇರಿ ನಗರದ ಪುರದ ಓಣಿಯಲ್ಲಿ ನಡೆದಿದೆ. ಅಪಹರಣಕ್ಕೊಳಗಾಗಿದ್ದ ಬಾಲಕನನ್ನು ಮೊಹ್ಮದ್ ಅಯಾನ್(12) ಎಂದು ತಿಳಿದುಬಂದಿದೆ. ಹಾವೇರಿ ನಗರದ ಪುರದ ಓಣಿ ನಿವಾಸಿ ಮೊಹಮ್ಮದ್ ಅಯಾನ್ ನಿನ್ನೆ ಸಂಜೆ ಸುಮಾರು 7 ಗಂಟೆಗೆ ಎಂದಿನಂತೆ ಹೊರಗಡೆ ಬಂದಿದ್ದ. ಈ ವೇಳೆ ಮಾರುತಿ ಇಕೋ ವ್ಯಾನ್ ನಲ್ಲಿ ಮಾಸ್ಕ್ ಧರಿಸಿದ್ದ ಅಪಹರಿಸಲು ಬಂದ ನಾಲ್ವರು ಆಗುಂತಕರು. ಬಾಲಕನ್ನು ಹಿಡಿದು ವ್ಯಾನ್‌ಗೆ ತಳ್ಳಿದ್ದಾರೆ. ಓಣಿಯಿಂದ ಕಿಡ್ನಾಪ್ ಮಾಡಿದ ಬಳಿಕ ಅಲ್ಲಿಂದ ಅಕ್ಕಿಪೇಟೆಗೆ ಕರೆತಂದಿರುವ ದುರುಳರು. ಈ ವೇಳೆ ಅಲ್ಲಿಂದ ಬಿಡಿಸಿಕೊಳ್ಳಲು ಯತ್ನಿಸಿದ ಬಾಲಕನ ಮುಖದ ಭಾಗ, ಗಲ್ಲ ಹಾಗೂ ಬೆನ್ನಿಗೆ ಹಲ್ಲೆ ಮಾಡಿದ್ದಾರೆ. ಅಷ್ಟರಲ್ಲಿ ಅಪಹರಣಕಾರರಿಗೆ ತುರ್ತು ವಿಸರ್ಜನೆ ಹಿನ್ನೆಲೆ ಮಧ್ಯೆ ವ್ಯಾನ್ ನಿಲ್ಲಿಸಿ ಕೆಳಗಿಳಿದಿದ್ದಾರೆ. ಗಾಡಿ ನಿಲ್ಲಿಸಿ ಡೂರ್…

Read More

ಬೆಂಗಳೂರು : ಜಿಲ್ಲಾ ಮತ್ತು ತಾಲ್ಲೂಕು ಪಂಚಾಯಿತಿ ಚುನಾವಣೆ ದೃಷ್ಟಿಯಿಂದ ಇದನ್ನು ಮಾಡುತ್ತಿದ್ದೀರಾ ಎಂದು ಕೇಳಿದಾಗ, “ನಾವು ಯಾವುದೋ ಒಂದು ಉದ್ದೇಶ ಇಟ್ಟುಕೊಂಡು ವೇದಿಕೆ ಸಿದ್ಧ ಮಾಡಬೇಕಲ್ಲವೇ. ಶೀಘ್ರದಲ್ಲಿ ಚುನಾವಣೆ ನಡೆಯಲಿರುವುದಂತೂ ನಿಜ. ಅದನ್ನು ನಿಲ್ಲಿಸಲು ಆಗುವುದಿಲ್ಲ.ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ಚರ್ಚೆಯಾಗಿದ್ದು, ಫೆಬ್ರವರಿ ವೇಳೆಗೆ ಮಾಡಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ” ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ತಿಳಿಸಿದರು. ಈ ಸಮಾವೇಶ ಹಾಸನಕ್ಕೆ ಸೀಮಿತವೇ ಅಥವಾ ರಾಜ್ಯಾದ್ಯಂತ ಮಾಡುತ್ತೀರಾ ಎಂದು ಕೇಳಿದಾಗ, “ನಾವು ರಾಜ್ಯಾದ್ಯಂತ ತಲುಪಬೇಕು. ಹಾಸನ ಕಾರ್ಯಕ್ರಮ ನಂತರ ಬೆಳಗಾವಿಯಲ್ಲಿ ದೊಡ್ಡ ಕಾರ್ಯಕ್ರಮ ನಡೆಯಲಿದೆ. ಈ ಬಗ್ಗೆ ನಾಳೆ ಸಭೆ ಮಾಡಿ ನಂತರ ಹೆಚ್ಚಿನ ಮಾಹಿತಿ ನೀಡುತ್ತೇವೆ” ಎಂದು ತಿಳಿಸಿದರು. ಯಾವುದೇ ಸ್ಥಾನ ಖಾಲಿ ಇಲ್ಲ: ಫೆಬ್ರವರಿಯಲ್ಲಿ ಸಂಪುಟ ವಿಸ್ತರಣೆ ಆಗುವುದೇ ಎಂದು ಕೇಳಿದಾಗ, “ನಾನು ಕೆಪಿಸಿಸಿ ಅಧ್ಯಕ್ಷ ಹಾಗೂ ಡಿಸಿಎಂ ಹೊರತು, ಮುಖ್ಯಮಂತ್ರಿಯಲ್ಲ. ಸಧ್ಯಕ್ಕೆ ಈ ಬಗ್ಗೆ ಚರ್ಚೆ ಇಲ್ಲ. ಅದರ ಅವಶ್ಯಕತೆಯೂ ಇಲ್ಲ. ಸಧ್ಯದಲ್ಲೇ ಅಧಿವೇಶನವಿದೆ. ಒಂದು…

Read More

ಕೋಲಾರ : ಜಿಲ್ಲೆಯಲ್ಲಿ ಇಂದು ಫೆಂಗಲ್ ಚಂಡಮಾರುತದ ಕಾರಣ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಹಿನ್ನಲೆಯಲ್ಲಿ ಇಂದು ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆಯನ್ನು ಘೋಷಿಸಿ ಡಿಸಿ ಆದೇಶಿಸಿದ್ದಾರೆ. ಈ ಬಗ್ಗೆ ಕೋಲಾರ ಜಿಲ್ಲಾಧಿಕಾರಿ ಅಕ್ರಂ ಪಾಷಾ ಅವರು ಆದೇಶಿಸಿದ್ದು ಇಂದು ಜಿಲ್ಲೆಯಲ್ಲಿ ಭಾರಿ ಮಳೆಯ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.ಈ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಇಂದು ಕೋಲಾರ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ನೀಡಿರುವುದಾಗಿ ತಿಳಿಸಿದ್ದಾರೆ. ಹಾಗಾಗಿ ಇಂದು ಶಾಲಾ-ಕಾಲೇಜುಗಳಿಗೆ ರಜೆ ನೀಡಲಾಗಿದೆ. ನಾಳಿನ ರಜೆಯನ್ನು ಮತ್ತೊಂದು ರಜಾ ದಿನಗಳಲ್ಲಿ ತರಗತಿ ನಡೆಸಿ ಸರಿದೂಗಿಸುವಂತೆ ಕೋಲಾರ ಜಿಲ್ಲಾಧಿಕಾರಿ ಅಕ್ರಂ ಪಾಷಾ ಆದೇಶದಲ್ಲಿ ತಿಳಿಸಿದ್ದಾರೆ. ಚಿಕ್ಕಬಳ್ಳಾಪುರದಲ್ಲೂ ರಜೆ ಘೋಷಣೆ ಅದೇ ರೀತಿಯಾಗಿ ಫೆಂಗನ್ ಚಂಡಮಾರುತದ ಕಾರಣದಿಂದ ತುಂತುರು ಮಳೆಯ ಜೊತೆಗೆ ಚಳಿಗಾಳಿ ಬೀಸುವ ಕಾರಣದಿಂದಾಗಿ ಚಿಕ್ಕಬಳ್ಳಾಪುರ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ಇಂದು ರಜೆಯನ್ನು ಘೋಷಿಸಲಾಗಿದೆ. ಈ ಸಂಬಂಧ ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ರವೀಂದ್ರ ಅವರು ಆದೇಶ ಹೊರಡಿಸಿದ್ದು, ಅದರಲ್ಲಿ ಇಂದು ಫೆಂಗಲ್ ಚಂಡಮಾರುತದ…

Read More

ಬೆಳಗಾವಿ : ವಕ್ಫ್ ವಿಚಾರಕ್ಕೆ ಬಿಜೆಪಿಯ ಒಂದು ತಂಡ ಇದೀಗ ರಾಜ್ಯ ಸರ್ಕಾರದ ವಿರುದ್ಧ ಹೋರಾಟ ನಡೆಸುತ್ತಿದೆ. ಇದರ ಮಧ್ಯ ಶಾಸಕ ಯತ್ನಾಳ್ ಹಾಗೂ ಬಿವೈ ವಿಜಯೇಂದ್ರ ಎರಡೂ ಬಣಗಳ ಬಡಿದಾಟ ತೀವ್ರ ತಾರಕಕ್ಕೆ ಏರಿದೆ. ಇದೀಗ ಈ ವಿಚಾರವಾಗಿ ಮಾಜಿ ಸಂಸದ ಪ್ರತಾಪ್ ಸಿಂಹ ವಕ್ಫ್ ವಿರುದ್ಧ ಹೋರಾಟ ತೀವ್ರಗೊಳಿಸಬೇಕಾದರೆ ಮೊದಲು ಹಿಂದುಗಳಾಗಬೇಕು. ಒಕ್ಕಲಿಗ, ಲಿಂಗಾಯತ ಅಂತ ಹೋದ್ರೆ 30% ಇರೋ ಮುಸ್ಲಿಂರು ನಿಮ್ಮನ್ನು ಹೊಡೆದು ಹಾಕ್ತಾರೆ ಎಂದು ತಿಳಿಸಿದರು. ಒಂದುವರೆ ವರ್ಷದಿಂದ ಸರ್ಕಾರ ತಾಲಿಮಾನ ರೀತಿ ನಡೆದುಕೊಳ್ಳುತ್ತಿದೆ. ಹಿಂದೂಗಳ ಮಾರಣ ಹೋಮ ಜೊತೆಗೆ ಭೂಮಿಕ ಕಬಳಿಗೆ ಆಗುತ್ತಿದೆ. ಜಮೀರ್ ಅಹ್ಮದ್ ಖಾನ್ ನಾಲ್ಕುವರೆ ಅಡಿ ಇದ್ದಾನೆ.ಅಲ್ಲಾನ ಆಸ್ತಿ ಅಂತ ಸಚಿವ ಜಮೀರ್ ಅಹ್ಮದ್ ಖಾನ್ ಹೇಳುತ್ತಾನೆ. ಜಮೀರ್ ನಿಮ್ಮ ಅಲ್ಲಾಗೂ ನಮ್ಮ ಭಾರತಕ್ಕೂ ಏನು ಸಂಬಂಧವಿದೆ? ಅರಬ್ನಳ್ಳಿ ಹುಟ್ಟಿರುವ ಅಲ್ಲಗೆ ಭಾರತದ ಜೊತೆಗೆ ಏನು ಸಂಬಂಧ? ಜಮೀರ್ ಅಹ್ಮದ್ ನಿಮ್ಮ ಧರ್ಮಕ್ಕೂ ಭಾರತಕ್ಕೂ ಏನು ಸಂಬಂಧ? ಎಂದು ಪ್ರಶ್ನಿಸಿದರು.…

Read More

ಉಡುಪಿ : ಡ್ಯಾಮ್ ನಲ್ಲಿ ಈಜಲು ಹೋಗಿದ್ದ ಇಬ್ಬರು ಬಾಲಕರು ನೀರು ಪಾಲಾಗಿ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಬೆಳ್ವೆಯ ಗುಮ್ಮಲ ಡ್ಯಾಂನಲ್ಲಿ ನಡೆದಿದೆ. ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಬೆಳ್ವೆಯ ಗ್ರಾಮದಲ್ಲಿ ಈಜುಲು ಹೋದ ಇಬ್ಬರು ಬಾಲಕರು ನೀರು ಪಾಲಾಗಿ ಮುಳುಗಿ ಸಾವನ್ನಪ್ಪಿದ್ದರೆ. ಮೃತರನ್ನು ಶ್ರೀಶ (13) ಹಾಗೂ ಜಯಂತ್ (19) ಎಂದು ತಿಳಿದು ಬಂದಿದೆ.ರಜೆ ಹಿನ್ನೆಲೆಯಲ್ಲಿ ಗೆಳೆಯರ ಜೊತೆಗೆ ಇಬ್ಬರು ಈಜಲು ಹೋಗಿದ್ದರು. ಶಂಕರನಾರಾಯಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪ್ರಕರಣ ದಾಖಲಾಗಿದೆ.

Read More

ಬೆಂಗಳೂರು : ಹಳೆಯ ನಂಬರ್‌ ಪ್ಲೇಟ್‌ಗಳಿಗೆ ಹೈ ಸೆಕ್ಯುರಿಟಿ ರಿಜಿಸ್ಟ್ರೇಷನ್‌ ಪ್ಲೇಟ್‌ ಅಳವಡಿಸಲು ಕರ್ನಾಟಕ ಸರ್ಕಾರ ಮತ್ತೆ ಗಡುವು ವಿಸ್ತರಣೆ ಮಾಡಿದೆ. ಹೆಚ್‌ಎಸ್‌ಆರ್​​ಪಿ ನಂಬರ್ ಪ್ಲೇಟ್ ಅಳವಡಿಸಲು ಈಗಾಗಲೇ ರಾಜ್ಯ ‌ಸರ್ಕಾರ ನಾಲ್ಕು ಬಾರಿ ಬಾರಿ ಗಡುವು ವಿಸ್ತರಣೆ ಮಾಡಿತ್ತು. ಇದೀಗ ಮತ್ತೆ ಡಿಸೆಂಬರ್ 31ರ ವರೆಗೆ HSRP ನಂಬರ್ ಪ್ಲೇಟ್ ಅಳವಡಿಸಲು ಗಡುವು ವಿಸ್ತರಿಸಿದೆ. ಹೌದು ಹೆಚ್‌ಎಸ್‌ಆರ್​​ಪಿ ನಂಬರ್ ಪ್ಲೇಟ್ ಅಳವಡಿಸಲು ಡಿಸೆಂಬರ್ 31ರವರೆಗೆ ಗಡುವು ವಿಸ್ತರಿಸಿ ರಾಜ್ಯ ಸರ್ಕಾರ ಆದೇಶಸಿದೆ. HSRP ನಂಬರ್ ಪ್ಲೇಟ್ ಅಳವಡಿಸಲು ನವೆಂಬರ್ 30ರಂದು ಕೊನೆಯ ದಿನವಾಗಿತ್ತು. ಇದೀಗ ಸಾರಿಗೆ ಇಲಾಖೆಯಿಂದ ವರ್ಷಾಂತ್ಯದ ವರೆಗೆ ಗಡಗು ವಿಸ್ತರಿಸಲಾಗಿದೆ. ರಾಜ್ಯದಲ್ಲಿ ಸುಮಾರು 2 ಕೋಟಿ ಅಷ್ಟು ಹಳೆಯ ವಾಹನಗಳು ಇವೆ HSRP ನಂಬರ್ ಪ್ಲೇಟ್ ಅಳವಡಿಸಿಕೊಳ್ಳಬೇಕಾಗಿತ್ತು. ಆದರೆ 55 ಲಕ್ಷ ವಾಹನಗಳು ಮಾತ್ರ HSRP ನಂಬರ್ ಪ್ಲೇಟ್ ಅಳವಡಿಸಿವೆ. ದ್ವಿಚಕ್ರ ವಾಹನಗಳು, ಆಟೋ ಮತ್ತು ನಾಲ್ಕು ಚಕ್ರಗಳ ವಾಹನಗಳು ಸೇರಿದಂತೆ ರಾಜ್ಯದ ಎಲ್ಲಾ ವಾಹನಗಳಿಗೂ ಎಚ್‌ಎಸ್‌ಆರ್‌ಪಿ…

Read More

ಬಳ್ಳಾರಿ : ಭಾರತದಲ್ಲಿ ಮುಸ್ಲಿಮರಿಗೆ ಮತದಾನದ ಹಕ್ಕು ನೀಡಬಾರದು ಎಂದು ವಿಶ್ವ ವಕ್ಕಲಿಗರ ಮಠದ ಚಂದ್ರಶೇಖರನಾಥ ಸ್ವಾಮೀಜಿ ಹೇಳಿಕೆ ನೀಡಿದ್ದರಿಂದ ಅವರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಈ ವಿಚಾರವಾಗಿ ಆರ್ ಅಶೋಕ್ ವಾಗ್ದಾಳಿ ನಡೆಸಿದ್ದು, ಈ ಹಿಂದೆ ಓವೈಸಿ ನಾವು ಮುಸ್ಲಿಮರು ಏನೆಂದು ತೋರಿಸುತ್ತೇವೆ ಅಂತ ಹೇಳಿದಾಗ ಕೇಸ್ ಹಾಕಲಿಲ್ಲ. ಸ್ವಾಮಿಜಿ ವಿರುದ್ಧ ಕೇಸ್ ಹಾಕುತ್ತೀರಾ? ಓವೈಸಿ ಅಂತವರೆಲ್ಲ ನಿಮ್ಮ ಬ್ರದರ್ಸ್ ಸ್ವಾಮೀಜಿ ನಿಮ್ಮ ವಿರೋಧಿಗಳು ಎಂದು ವಾಗ್ದಾಳಿ ನಡೆಸಿದರು. ಆಟೋದಲ್ಲಿ ಕುಕ್ಕರ್ ಬಾಂಬ್ ಇಟ್ಟವನಿಗೆ ನಾನು ಬ್ರದರ್ ಅಂದಿಲ್ಲ. ಕುಮಾರಸ್ವಾಮಿಗೆ ಕರಿಯ ಅಂದ್ರು. ಅದಕ್ಕೆ ಯಾಕೆ ಕೇಸ್ ಹಾಕಿಲ್ಲ ಸಚಿವ ಜಮೀರ್ ಅಹ್ಮದ್ ವಿರುದ್ಧ ಯಾಕೆ ಕೇಸ್ ಹಾಕಲಿಲ್ಲ? ವಿಧಾನಸೌಧದಲ್ಲಿ ಪಾಕಿಸ್ತಾನದಿಂದ ಘೋಷಣೆ ಕೂಗಿದರು. ಪಾಕಿಸ್ತಾನ ಜಿಂದಾಬಾದ್ ಕೂಗಿದವರ ಮೇಲು ಸರ್ಕಾರ ಕೇಸ್ ಹಾಕಿಲ್ಲ. ಸ್ವಾಮೀಜಿಗೆ ಕ್ಯಾನ್ಸರ್ ಇದೆ ಕೇಸ್ ಹಾಕಿ ಚಿತ್ರಹಿಂಸೆ ಕೊಡುತ್ತಿದ್ದೀರಾ? ಚುನಾವಣೆ ಬಂದಾಗ ಕಾಂಗ್ರೆಸ್ನವರು ಸ್ವಾಮೀಜಿಯ ಕಾಲು ಹಿಡಿದಿಲ್ವಾ? ಈ ಹಿಂದೆ ಅಕ್ಬರೋದ್ದೀನ್ ಓವೈಸಿ ಪ್ರಚೋದನಾಕಾರಿ…

Read More

ಬೆಂಗಳೂರು : ಇತ್ತೀಚಿನ ದಿನಗಳಲ್ಲಿ ಆನ್ಲೈನ್ ಪ್ರೀತಿ, ಮದುವೆ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದೆ. ಈ ಒಂದು ಹೆಸರಿನಲ್ಲಿ ಯುವಕ ಮತ್ತು ಯುವತಿರು ಇಬ್ಬರು ಕೂಡ ಮೋಸ ಹೋಗುತ್ತಿದ್ದಾರೆ ಇದೀಗ ಬೆಂಗಳೂರಿನಲ್ಲಿ ಇನ್ಸ್ಟಾಗ್ರಾಮ್ ನಲ್ಲಿ ಪರಿಚಯವಾಗಿದ್ದ ಯುವತಿಯ ಜೊತೆಗೆ ಪ್ರೀತಿಸುವ ನಾಟಕವಾಡಿದ್ದು, ಅಲ್ಲದೇ ಮದುವೆಯಾಗುವುದಾಗಿ ನಂಬಿಸಿ ಲಾಡ್ಜ್ ಗೆ ಕರೆದುಕೊಂಡು ಹೋಗಿ ನಿರಂತರವಾಗಿ ಒಂದುವರೆ ವರ್ಷ ಅತ್ಯಾಚಾರ ಎಸಗಿರುವ ಘಟನೆ ನಡೆದಿದ್ದು ಘಟನೆಗೆ ಸಂಬಂಧಿಸಿದಂತೆ ಇದೀಗ ಯುವಕನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಹೌದು ಅತ್ಯಾಚಾರ ಎಸಗಿರುವ ಆರೋಪಿಯನ್ನು ಬೆಂಗಳೂರಿನ ತಾವರೆಕೆರೆ ಬಳಿಯ ಹೊಸಪಾಳ್ಯದ ಯುವಕ ಶ್ರೀಕಾಂತ ಎಂದು ಗುರುತಿಸಲಾಗಿದ್ದು, ಆಕೆ, ನೆಲಮಂಗಲದ ಬಳಿಯ ಮಧ್ಯಮ ಕುಟುಂಬದ ಯುವತಿ. ಇನ್‌ಸ್ಟಾಗ್ರಾಮ್‌ ಮೂಲಕ ಯುವತಿಯನ್ನು ಪರಿಚಯ ಮಾಡಿಕೊಂಡು ಸ್ನೇಹ ಸಂಪಾದಿಸಿದ್ದಾನೆ. ಚಾಟಿಂಗ್ ಮಾಡುತ್ತಾ ಬಣ್ಣದ ಮಾತನಾಡಿ ಪ್ರೀತಿಯ ಬುಟ್ಟಿಗೆ ಬೀಳಿಸಿಕೊಂಡಿದ್ದಾನೆ. ನಂತರ ಬೆಂಗಳೂರಿನಲ್ಲಿ ಪಾರ್ಕ್, ಸಿನಿಮಾ ಎಂದೆಲ್ಲಾ ಸುತ್ತಾಡಿದ ನಂತರ ಯುವತಿಗೆ ಮದುವೆ ಮಾಡಿಕೊಳ್ಳುವ ಭರವಸೆ ನೀಡಿದ್ದಾನೆ. ಬಳಿಕ ಯುವತಿಗೆ ಅದು ಇದು ಹೇಳಿ ನೆಲಮಂಗಲದ…

Read More