Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ಇತ್ತೀಚೆಗೆ ಬೆಂಗಳೂರಿನಲ್ಲಿ ಚಿರತೆಯ ಹಾವಳಿ ಹೆಚ್ಚಾಗಿದ್ದು, ಕಳೆದ ಕೆಲವು ದಿನಗಳ ಹಿಂದೆ ಅರಣ್ಯ ಇಲಾಖೆ ಅಧಿಕಾರಿಗಳು 3 ಚಿರತೆಗಳನ್ನು ಸೆರೆ ಹಿಡಿದು ಅರಣ್ಯಕ್ಕೆ ಬಿಟ್ಟಿದ್ದಾರೆ. ಇದೀಗ ಸೋಲದೇವನಹಳ್ಳಿ ಗ್ರಾಮದಲ್ಲಿ ನರಭಕ್ಷಕ ಚಿರತೆ ಒಂದು ಮನೆಗೆ ನುಗ್ಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕು ಸೋಲದೇವನಹಳ್ಳಿಯಲ್ಲಿ ಈ ಒಂದು ಘಟನೆ ನಡೆದಿದೆ. ಗ್ರಾಮದ ರಾಜಣ್ಣ ಎಂಬುವವರ ನಾಯಿಯ ಮೇಲೆ ದಾಳಿ ಮಾಡಿದ್ದು ಅದೃಷ್ಟವಶಾತ್ ನಾಯಿ ಚಿರತೆಯ ಬಾಯಿಯಿಂದ ಬಚಾವ್ ಆಗಿದೆ. ನಟ ವಿನೋದ್ ರಾಜ್ ತೋಟ ಸಮೀಪದ ಮನೆಯ ಬಳಿ ಈ ಒಂದು ಘಟನೆ ನಡೆದಿದೆ ಚಿರತೆಯ ಉಪಟಳ ಮಿತಿಮೀರಿದ ಹಿನ್ನೆಲೆಯಲ್ಲಿ ಇದೀಗ ಚಿರತೆ ಸೆರೆ ಹಿಡಿಯುವಂತೆ ಅರಣ್ಯ ಅಧಿಕಾರಿಗಳಿಗೆ ಸೋಲದೇವನಹಳ್ಳಿಯ ಗ್ರಾಮಸ್ಥರು ಮನವಿ ಮಾಡಿದ್ದಾರೆ.
ಕಲಬುರ್ಗಿ : ಕಲಬುರ್ಗಿ ಜೈಲು ಅಧೀಕ್ಷಕಿ ಅನಿತಾ ಅವರ ಕಾರು ಸ್ಪೋಟಿಸುವುದಾಗಿ ಇತ್ತೀಚಿಗೆ ಹಲವರು ಕರೆ ಮಾಡಿ ಬೆದರಿಕೆ ಹಾಕಿದ್ದರು ಈ ಒಂದು ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಇಬ್ಬರು ಮಹಿಳೆಯರು ಸೇರಿದಂತೆ ಒಟ್ಟು ಒಂಬತ್ತು ಜನರ ವಿರುದ್ಧ FIR ದಾಖಲಾಗಿದೆ. ಮುಸ್ತಫಾ,ನಸೀರ್, ಬಚ್ಚನ್,ಅಲ್ತಾಫ್, ದೇವರಾಜ್, ನಾಗರಾಜ್, ಶ್ರೀಕಾಂತ್ ಸೇರಿ 9 ಕೈದಿಗಳ ವಿರುದ್ಧ ಅಧೀಕ್ಷಕಿ ಅನಿತಾ ಎಫ್‌ಐಆರ್ ದಾಖಲಿಸಿದ್ದಾರೆ. ಜೈಲಿನಲ್ಲಿ ಮಾದಕ ವಸ್ತುಗಳಾದಂತಹ ಸಿಗರೇಟ್ ಬಿಡಿ ಗುಟ್ಕಾ ವಸ್ತುಗಳನ್ನು ಬಂದು ಮಾಡಿದ್ದಕ್ಕಾಗಿ ಕೈದಿಗಳು ಪ್ರತಿಭಟನೆ ಮಾಡಿದ್ದರು. ಬಳಿಕ ದುಷ್ಕರ್ಮಿ ಒಬ್ಬ ಆಡಿಯೋ ಮೂಲಕ ಜೈಲು ಅಧ್ಯಕ್ಷಕಿ ಅನಿತಾ ಅವರ ಕಾರು ಸ್ಪೋಟಿಸುವುದಾಗಿ ಬೆದರಿಕೆ ಹಾಕಿದ್ದ. ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡ ಪೊಲೀಸರು, ಅಲರ್ಟ್ ಆಗಿ, ಇದನ್ನ ಜೈಲಿನಲ್ಲಿರುವ ಕೈದಿಗಳೇ ಕಳುಹಿಸಿದ್ದಾರೆ ಎಂಬ ಅನುಮಾನ ವ್ಯಕ್ತವಾಗಿತ್ತು. ಇದೀಗ ಈ ಪ್ರಕರಣದ ಹಿಂದೆ 9 ಜನ ಕೈದಿಗಳ ಕೈವಾಡ ಇರುವುದಾಗಿ ಎಫ್‌ಐಆರ್‌ನಲ್ಲಿ ಉಲ್ಲೇಖಿಸಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಕಳೆದ ಒಂದೂವರೆ ತಿಂಗಳ ಹಿಂದೆಯಷ್ಟೆ ಕಲಬುರಗಿ…
ಬೆಂಗಳೂರು : ರಾಷ್ಟ್ರಪ್ರಶಸ್ತಿ ವಿಜೇತ ಹಾಗೂ ಸಿನೆಮಾ ನಿರ್ಮಾಪಕ ಅರುಣ್ ರೈ ವಿರುದ್ಧ ವಂಚನೆ ಆರೋಪ ಕೇಳಿ ಬಂದಿದ್ದು, ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಯಶವಂತಪುರ ಬಳಿಯ ಆರ್‌ಎಂಸಿ ಯಾರ್ಡ್ ಅರುಣ್ ರೈ ವಿರುದ್ಧ FIR ದಾಖಲಾಗಿದೆ. ಹೌದು ಬಂಟ್ವಾಳ ಮೂಲದ ಉದ್ಯಮಿ ನೀಡಿದ ದೂರಿನ ಅನ್ವಯ ಇದೀಗ ಎಫ್ಐಆರ್ ದಾಖಲಾಗಿದೆ. ಬೆಂಗಳೂರಿನ ಯಶವಂತಪುರ ಬಳಿಯ ಆರ್‌ಎಂಸಿ ಯಾರ್ಡ್ ಪೊಲೀಸ್ ಠಾಣೆಯಲ್ಲಿ ವಂಚನೆ ಪ್ರಕರಣ ದಾಖಲಾಗಿದೆ.ತಾಜ್ ಹೋಟೆಲ್ ನಲ್ಲಿ ನಿರ್ಮಾಪಕರು ಉದ್ಯಮಿ ಅವರನ್ನು ಪರಿಚಯಿಸಿಕೊಂಡಿದ್ದರು. ಬೆಂಗಳೂರಿನ ಯಶವಂತಪುರದಲ್ಲಿರುವ ತಾಜ್ ಹೋಟೆಲ್ ನಲ್ಲಿ ಪರಸ್ಪರ ಪರಿಚಯವಾಗಿದೆ. ತುಳು ಸಿನಿಮಾ ಜಿಟಿಗೆ ವೀರಕಂಬಳ ಸಿನಿಮಾ ಬಿಡುಗಡೆಗೆ ಸಿದ್ಧವಾಗಿದೆ. ಸಿನಿಮಾದ ಲಾಭಾಂಶದಲ್ಲಿ 60 ಲಕ್ಷ ಕೊಡುವುದಾಗಿ ನಿರ್ಮಾಪಕ ಅರುಣ್ ರೈ ಉದ್ಯಮಿಗೆ ನಂಬಿಸಿದ್ದರು. ಕೋವಿಡ್ ವೇಳೆ ಬಂಟ್ವಾಳ ಮೂಲದ ಉದ್ಯಮಿಗೆ 25 ಕೋಟಿ ನಷ್ಟವಾಗಿತ್ತು. ಗೇರು ಬೀಜ ಸಂಸ್ಕರಣ ಘಟಕದಲ್ಲಿ 25 ಕೋಟಿ ರೂಪಾಯಿ ಹಣ ನಷ್ಟವಾಗಿತ್ತು. ಉದ್ಯಮಯ ನಷ್ಟದ ಕಥೆ ಪ್ಲಸ್ ಪಾಯಿಂಟ್ ಅನ್ನು ಅರುಣ್…
SHOCKING : ದೇಶದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ : ಹಸುವಿನ ಮೇಲೆ ‘ಲೈಂಗಿಕ ದೌರ್ಜನ್ಯ’ ಎಸಗಿದ ಕಾಮುಕ | Video Viral
ನವದೆಹಲಿ : ಇತ್ತೀಚಿಗೆ ದೇಶದಲ್ಲಿ ಹೆಣ್ಣು ಮಕ್ಕಳ ಮೇಲೆ ಅತ್ಯಾಚಾರ ಲೈಂಗಿಕ ದೌರ್ಜನ್ಯ ಹಾಗೂ ಲೈಂಗಿಕ ಕಿರುಕುಳ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿವೆ. ಆದರೆ ಕಾಮುಕರು ಹೆಣ್ಣು ಮಕ್ಕಳನ್ನು ಅಷ್ಟೇ ಅಲ್ಲದೆ ಇದೀಗ ಪಶುಗಳ ಮೇಲು ದೌರ್ಜನ್ಯ ಎಸಿಗುತ್ತಿದ್ದಾರೆ. ಅಂತ ವಿಡಿಯೋ ಇದೀಗ ವೈರಲ್ ಆಗಿದೆ. ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಯತ್ನಾಳ್ ಹಿಂದೂ ಸೇನೆ ಎಂಬ ಪೇಜ್ ನಲ್ಲಿ ಈ ವಿಡಿಯೋ ವೈರಲ್ ಆಗಿದ್ದು, ಮುಸ್ಲಿಂ ಸಮುದಾಯದ ವ್ಯಕ್ತಿ ಒಬ್ಬ ಹಸುವಿನ ಜೊತೆಗೆ ಅನುಚಿತವಾಗಿ ವರ್ತಿಸಿರುವ ವಿಡಿಯೋ ವೈರಲ್ ಆಗಿದೆ. ಈ ಘಟನೆ ಯಾವ ರಾಜ್ಯದಲ್ಲಿ ನಡೆದಿದೆ ಎಂಬುವುದು ತಿಳಿದುಬಂದಿಲ್ಲ. ಆದರೆ ವಿಡಿಯೋವನ್ನು ಯತ್ನಾಳ್ ಹಿಂದೂ ಸೇನೆ ಎಂಬ ಪೇಜ್ನೊಂದಿಗೆ ಹಂಚಿಕೊಳ್ಳಲಾಗಿದೆ. ಈ ಒಂದು ವಿಡಿಯೋಗೆ ಹಲವಾರು ರೀತಿಯಲ್ಲಿ ಕಮೆಂಟ್ ಮಾಡಿದ್ದು ಒಬ್ಬರು ಮುಸ್ಲಿಮರು ಮಾತ್ರವಲ್ಲ, ಬ್ರಾಹ್ಮಣ ಸಮುದಾಯಕ್ಕೆ ಸೇರಿದ ಹಿಂದೂಗಳು ಕೂಡ ಇದೇ ರೀತಿ ಮಾಡಿದ್ದಾರೆ, ಯಾರದೋ ತಪ್ಪನ್ನು ತಮ್ಮ ಸಮುದಾಯಕ್ಕೆ ಲಿಂಕ್ ಮಾಡಬೇಡಿ ಅಂದಿದ್ದು ಇನ್ನೂ ಕೆಲವರು ಇವರಿಗೆ…
ಬಾಗಲಕೋಟೆ : ಸಾಮಾಜಿಕ ಜಾಲತಾಣಗಳಲ್ಲಿ ಕೂಡಲಸಂಗಮದ ಬಸವಜಯ ಮೃತ್ಯುಂಜಯ ಸ್ವಾಮೀಜಿಗಳ ಕುರಿತು ಭಕ್ತರು ಪೋಸ್ಟ್ ಒಂದನ್ನು ಹರಿಬಿಟ್ಟಿದ್ದು, ಸದ್ಯ ಭಾರಿ ವೈರಲಾಗುತ್ತಿದೆ. ಪಂಚಮಸಾಲಿ ಶ್ರೀಗಳು ಸಿಎಂ ಆಗಲಿ ಎಂದು ಪೋಸ್ಟ್ ಹರಿಬಿಟ್ಟಿದ್ದು, ಈ ಕುರಿತಾಗಿ ಬಸವಜಯ ಮೃತ್ಯುಂಜಯ ಸ್ವಾಮೀಜಿ ಪ್ರತಿಕ್ರಿಯೆ ನೀಡಿದ್ದು ನಾನು ರಾಜಕೀಯಕ್ಕೆ ಬರುವುದಿಲ್ಲ. ನಾನು ಕಿಂಗ್ ಆಗಲ್ಲ ಆದರೆ ಕಿಂಗ್ ಮೇಕರ್ ಆಗುತ್ತೇನೆ ಎಂದು ತಿಳಿಸಿದರು. ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನಲ್ಲಿ ಮಾತನಾಡಿದ ಅವರು, ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಪೋಸ್ಟ್ ಕುರಿತಾಗಿ ನಾನು ಯಾವುದೇ ಕಾರಣಕ್ಕೂ ರಾಜಕೀಯಕ್ಕೆ ಬರಲ್ಲ. ರಾಜಕೀಯ ಮಾಡೋದಕ್ಕೆ ಬಸವನಗೌಡ ಪಾಟೀಲ್ ಯತ್ನಾಳ್ ಹಾಗೂ ನಮ್ಮ ಸಮಾಜದ ನಾಯಕರಿದ್ದಾರೆ.ನಮ್ಮ ಮೇಲೆ ಅಭಿಮಾನದಿಂದ ಅಭಿಮಾನಿಗಳು ಭಕ್ತರು ಈ ರೀತಿ ಪೋಸ್ಟ್ ಹಾಕಿದ್ದಾರೆ. ನಾನು ಕಿಂಗ್ ಆಗಲ್ಲ ಕಿಂಗ್ ಮೇಕರ್ ಆಗುತ್ತೇನೆ ಎಂದು ತಿಳಿಸಿದರು. ಇನ್ನು 2A ಮೀಸಲಾತಿ ಹೋರಾಟದ ಕುರಿತು ಮಾತನಾಡಿದ ಅವರು, ಸಮಾಜದ ಜನರ ಭಾವನೆ ಜೊತೆಗೆ ಆಟ ಆಡುವುದನ್ನು ಬಿಡಬೇಕು. ಬಿಜೆಪಿ ಸರ್ಕಾರದಲ್ಲಿ…
ಚಿಕ್ಕಮಗಳೂರು : ಮಲೆನಾಡು ಭಾಗಗಳಲ್ಲಿ ಕಾಡಾನೆಗಳ ಹಾವಳಿ ಇಷ್ಟು ದಿನ ತಣ್ಣಗಾಗಿತ್ತು. ಇದೀಗ ಕಾಡಾನೆ ದಾಳಿಯಿಂದ ರೈತನೊಬ್ಬ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಚಿಕ್ಕಮಂಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಸೀತೂರು ಗ್ರಾಮ ಪಂಚಾಯಿತಿ ಬಳಿ ನಡೆದಿದೆ. ಹೌದು ಚಿಕ್ಕಮಂಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಸೀತೂರು ಗ್ರಾಮ ಪಂಚಾಯತಿಯ ಕಚೇರಿ ಬಳಿ ಈ ಒಂದು ಘಟನೆ ನಡೆದಿದ್ದು ಗ್ರಾಮ ಪಂಚಾಯಿತಿ ಬಳಿ ಕಾಡಾನೆ ದಾಳಿಯಿಂದ ರೈತ ಸಾವನ್ನಪ್ಪಿದ್ದಾನೆ. ಕೆರೆಗದ್ದೆ ಗ್ರಾಮದ ನಿವಾಸಿ ಉಮೇಶ್ (55) ಸಾವನ್ನಪ್ಪಿದ್ದಾರೆ. ಗ್ರಾಮ ಪಂಚಾಯಿತಿ ಹಿಂಭಾಗ ನಿಂತಿದ್ದಾಗ ಏಕಾಏಕಿ ಕಾಡಾನೆಗಳ ಹಿಂಡು ದಾಳಿ ಮಾಡಿದೆ. ಕಾಡಾನೆ ದಾಳಿ ಮಾಡಿದರಿಂದ ಸಾವನ್ನಪ್ಪಿದ್ದಾರೆ. ಘಟನೆ ಕುರಿತಂತೆ ಕೊಪ್ಪ ತಾಲೂಕು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ವೇಳೆ ಅರಣ್ಯ ಇಲಾಖೆ ವಿರುದ್ಧ ಗ್ರಾಮಸ್ಥರು ಆಕ್ರೋಶ ಹೊರ ಹಾಕಿದ್ದು ಧಿಕ್ಕಾರ ಕೂಗಿ ಪ್ರತಿಭಟನೆ ಮಾಡಿದರು.
ಬೆಂಗಳೂರು : ಶಿಕ್ಷಕಿಯೊಬ್ಬರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪದ ಹಿನ್ನೆಲೆಯಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಕಾರ್ಯದರ್ಶಿ ಸ್ಥಾನದಿಂದ ಗುರಪ್ಪನಾಯ್ಡು ಅವರನ್ನು 6 ವರ್ಷಗಳ ಕಾಲ ಉಚ್ಛಾಟನೆ ಮಾಡಿ ಕೆಪಿಸಿಸಿ ಶಿಸ್ತು ಸಮಿತಿ ಅಧ್ಯಕ್ಷ ರೆಹಮಾನ್ ಖಾನ್ ಆದೇಶ ಹೊರಡಿಸಿದ್ದಾರೆ. ಬೆಂಗಳೂರಿನ ಬಿಜಿಎಸ್ ಬ್ಲೂಮ್‌ಫೀಲ್ಡ್ ಶಾಲೆಯ ಶಿಕ್ಷಕಿಯೊಬ್ಬರ ಮೇಲೆ 2021ರ ಮಾರ್ಚ್ 1ರಿಂದ 2023ರ ಆಗಸ್ಟ್ 15ರವರೆಗೆ ನಾಯ್ಡು ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಮಹಿಳೆ ದೂರಿನಲ್ಲಿ ಆರೋಪಿಸಿದ್ದರು.ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ವಿರುದ್ಧ ಚೆನ್ನಮ್ಮನ ಕೆರೆ ಅಚ್ಚುಕಟ್ಟು ಪೊಲೀಸ್ ಠಾಣೆಯಲ್ಲಿ ಮಹಿಳೆ ದೂರು ದಾಖಲಿಸಿದ್ದರು, ಇದೀಗ ಮಹಿಳೆ ನೀಡಿದ ದೂರಿನ ಆದಾರದ ಮೇಲೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಹಾವೇರಿ : ಜಮೀನು ಒಂದರ ನಕಾಶೆ ನೀಡಲು ವ್ಯಕ್ತಿ ಒಬ್ಬರ ಬಳಿ 15,000 ಲಂಚ ಸ್ವೀಕರಿಸುತ್ತಿದ್ದ ವೇಳೆ ಲ್ಯಾಂಡ್ ಸರ್ವೆಯರ್ ಒಬ್ಬ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ರೆಡ್ ಹ್ಯಾಂಡ್ ಆಗಿ ಸಿಗಿ ಬಿದ್ದಿರುವ ಘಟನೆ ಹಾವೇರಿಯಲ್ಲಿ ನಡೆದಿದೆ. ರೈತ ಮಂಜುನಾಥ ಕಡ್ಲಿ ಅವರು ಹಾವೇರಿ ತಾಲ್ಲೂಕಿನ ಕಳ್ಳಿಹಾಳ ಗ್ರಾಮದಲ್ಲಿ ತಮ್ಮ ಜಮೀನು ವಾಟ್ನಿ ಮಾಡಿಸಲು ಅರ್ಜಿ ಸಲ್ಲಿಸಿದ್ದರು. ವಾಟ್ನಿ ಮಾಡಿಸುವುದಕ್ಕೆ ಜಮೀನು ನಕಾಶೆ ಅಗತ್ಯವಿತ್ತು ಹಾಗಾಗಿ ಹಾವೇರಿ ತಾಲ್ಲೂಕು ಭೂ ದಾಖಲೆಗಳ ಸಹಾಯಕ ಕಚೇರಿಯ ಭೂಮಾಪಕ ಅಶೋಕ ಎಚ್.ಜಿ ಎನ್ನುವವರ ಬಳಿ ಮಂಜುನಾಥ್ ಅರ್ಜಿ ಸಲ್ಲಿಸಿದ್ದರು. ನಕಾಶೆ ನೀಡಲು ಅಶೋಕ 30 ಸಾವಿರ ರೂ.ಕೇಳಿದ್ದ. ಅಷ್ಟು ಹಣವಿಲ್ಲವೆಂದು ರೈತ ಹೇಳಿದ್ದರು. ನಂತರ, 25 ಸಾವಿರಕ್ಕೆ ಮಾತುಕತೆ ಆಗಿತ್ತು. ಈ ಬಗ್ಗೆ ಮಂಜುನಾಥ ಅವರು ಕಚೇರಿಗೆ ದೂರು ಸಲ್ಲಿಸಿದ್ದರು. ಶನಿವಾರ ಮುಂಗಡವಾಗಿ 15 ಸಾವಿರ ಲಂಚ ಪಡೆಯುವ ಸಂದರ್ಭದಲ್ಲಿ ದಾಳಿ ಮಾಡಿ ಅಶೋಕ ಅವರನ್ನು ಪುರಾವೆ ಸಮೇತ ಸೆರೆ ಹಿಡಿಯಲಾಗಿದೆ ಎಂದು ತಿಳಿದುಬಂದಿದೆ.
ಬೆಂಗಳೂರು : ಬಳ್ಳಾರಿಯಲಿ ನಿರಂತರವಾಗಿ ಬಾಣಂತಿಯರ ಸಾವು ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಂದು ಸಂಜೆ 4:30 ಗಂಟೆಗೆ ಬೆಂಗಳೂರಿನ ಗೃಹಕಚೇರಿ ಕೃಷ್ಣಾದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಮಹತ್ವದ ಸಭೆ ನಡೆಯಲಿದೆ. ಹೌದು ಬಳ್ಳಾರಿಯ ಜಿಲ್ಲಾ ಆಸ್ಪತ್ರೆಯಲ್ಲಿ ಕಳೆದ 15 ದಿನಗಳಲ್ಲಿ ನಾಲ್ವರು ಬಾಣಂತಿಯರು ಸಾವನ್ನಪ್ಪಿದ್ದಾರೆ. ಈ ಒಂದು ಪ್ರಕರಣಕ್ಕೆ ಸಂಬಂಧಪಟ್ಟಂತೆ ರಾಜ್ಯ ಸರ್ಕಾರ ತನಿಖಾ ತಂಡ ರಚನೆ ಮಾಡಿ ವರದಿ ತರಿಸಿಕೊಂಡಿತು. ತನಿಖೆಯಲ್ಲಿ ಬಾಣಂತಿಯರಿಗೆ ಐವಿ ಗ್ಲುಕೋಸ್ ನೀಡಿದ ಪರಿಣಾಮ ಅವರು ಸಾವನಪ್ಪಿದ್ದಾರೆ ಎಂದು ತನಿಖಾ ವರದಿಯು ತಿಳಿಸಿದೆ. ಹೀಗಾಗಿ ಇಂದು ಸಂಜೆ 4:30 ಗಂಟೆಗೆ ಬೆಂಗಳೂರಿನ ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಸಿದ್ದರಾಮಯ್ಯ ಸಭೆ ನಡೆಸಲಿದ್ದು ಈ ಒಂದು ಸಭೆಯಲ್ಲಿ ಆರೋಗ್ಯ ಇಲಾಖೆಯ ಸಚಿವ ದಿನೇಶ್ ಗುಂಡುರಾವ್ ಹಾಗೂ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹ್ಮದ್ ಖಾನ್ ಸೇರಿದಂತೆ ಆರೋಗ್ಯ ಇಲಾಖೆಯ ಅಧಿಕಾರಿಗಳು ಭಾಗವಹಿಸಲಿದ್ದಾರೆ ಎಂದು ತಿಳಿದುಬಂದಿದೆ.
ಬೆಳಗಾವಿ : ಬಳ್ಳಾರಿಯಲ್ಲಿ ಬಾಣಂತಿಯರ ಸಾವಿಗೆ ರಾಜ್ಯ ಸರ್ಕಾರ ತನಿಖಾ ತಂಡ ರಚನೆ ಮಾಡಿತ್ತು. ಐ ವಿ ಗ್ಲುಕೋಸ್ ನಿಂದ ಬಾಣಂತಿಯರ ಸಾವು ಆಗಿದೆ ಎಂದು ತನಿಖಾ ವರದಿಯಲ್ಲಿ ಬಹಿರಂಗವಾಗಿತ್ತು. ಇದರ ಬೆನ್ನಲ್ಲೇ ಬೆಳಗಾವಿಯ ಜಿಲ್ಲಾ ಔಷಧ ಉಗ್ರಾಣದ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದು, ಇದೀಗ ಆರ್‌ಎಲ್‌ಎಸ್ ಐವಿ ಗ್ಲುಕೋಸ್ ಬಾಕ್ಸ್ ಕಂಡು ಲೋಕಾಯುಕ್ತ ಅಧಿಕಾರಿಗಳೇ ಶಾಕ್ ಆಗಿದ್ದಾರೆ. ಹೌದು ಬೆಳಗಾವಿ ಜಿಲ್ಲಾ ಔಷಧ ಉಗ್ರಾಣದಲ್ಲಿ ಐವಿ ಗ್ಲುಕೋಸ್ ಪತ್ತೆಯಾಗಿದೆ.ಖಚಿತ ಮಾಹಿತಿಯನ್ನು ಆಧರಿಸಿ ಉಗ್ರಾಣದ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ದಾಳಿಯ ವೇಳೆ ಡೇಟ್ ಬಾರ್ ಆಗಿರುವಂತ ‘RLS IV ಗ್ಲುಕೋಸ್’ ಇದ್ದಂತಹ ಹತ್ತಾರು ಬಾಕ್ಸ್ ಗಳು ಪತ್ತೆಯಾಗಿವೆ.ಕಳೆದ ಏಪ್ರಿಲ್ ತಿಂಗಳಿನಿಂದಲೇ RLS IV ಗ್ಲುಕೋಸ್ ಪೂರೈಕೆ ಆಗಿದೆ. ಕಳೆದೊಂದು ಗಂಟೆಯಿಂದ ಲೋಕಾಯುಕ್ತ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ಲೋಕಾಯುಕ್ತ ಎಸ್ಪಿ ಹನುಮಂತರಾಯ್ ನೇತೃತ್ವದಲ್ಲಿ 8 ಅಧಿಕಾರಿಗಳಿಂದ ದಾಳಿ ಮಾಡಿದ್ದು, ಉಗ್ರಾಣದಲ್ಲಿ ಪರಿಶೀಲನೆ ಮುಂದುವರೆದಿದೆ. ಪಿಬಿಪಿ ಸಂಸ್ಥೆ ಸರಬರಾಜು ಮಾಡಿರುವ…













