Author: kannadanewsnow05

ಶಿವಮೊಗ್ಗ : ದೊಡ್ಮನೆ ರಾಜಕುಮಾರ್ ಕುಟುಂಬದ ನಟ ಯುವರಾಜ್ ಕುಮಾರ್ ಅವರ ದಾಂಪತ್ಯದಲ್ಲಿ ಬಿರುಕು ಮೂಡಿದ್ದು ಈಗಾಗಲೇ ಅವರು ಸಲ್ಲಿಸುತ್ತಾರೆ ಈ ವಿಚಾರವಾಗಿ ಶಿವಮೊಗ್ಗದಲ್ಲಿ ನಟ ಶಿವರಾಜ್ ಕುಮಾರ್ ಪ್ರತಿಕ್ರಿಯೆ ನೀಡಿದ್ದು ನನಗೆ ಈ ವಿಚಾರವಾಗಿ ಯಾವುದೇ ವಿಷಯ ಗೊತ್ತಿಲ್ಲ. ಗೊತ್ತಿಲದೇ ನಾನು ಯಾವುದೇ ವಿಷಯವನ್ನು ಮಾತನಾಡುವುದಿಲ್ಲ ಎಂದು ತಿಳಿಸಿದರು. ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ವಿಚಾರವಾಗಿ ಗೊತ್ತಿದ್ರೆ ಮಾತ್ರ ಮಾತಾಡಬೇಕು. ಗೊತ್ತಿಲ್ಲದೆ ನಾನು ಯಾವುದೇ ರೀತಿಯ ಪ್ರತಿಕ್ರಿಯೆ ನೀಡಲ್ಲ ಅದು ಅವರವರ ವೈಯಕ್ತಿಕ ವಿಚಾರ. ನಾನು ಮಾತಾಡೋದು ಸರಿಯಲ್ಲ. ಬೆಂಗಳೂರಿಗೆ ನಾನು ಹೋಗುತ್ತಿದ್ದೇನೆ ಏನಾಗುತ್ತದೆ ನೋಡೋಣ ಎಂದು ಶಿವಮೊಗ್ಗದಲ್ಲಿ ನಟ ಶಿವರಾಜ್ ಕುಮಾರ್ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. ಇನ್ನು ಇದೇ ವಿಚಾರವಾಗಿ ಗೀತಾ ಶಿವರಾಜಕುಮಾರ್ ಅವರು ಕೂಡ ಪ್ರತಿಕ್ರಿಯೆ ನೀಡಿದ್ದು, ಇದು ನಮ್ಮ ಮನೆಯ ಒಂದು ವಿಚಾರ ವೈಯಕ್ತಿಕ ವಿಚಾರವಾಗಿರುವುದರಿಂದ ಈ ವಿಚಾರವಾಗಿ ನಾನು ಯಾವುದೇ ಹೇಳಿಕೆಗಳನ್ನು ನೀಡಲು ಇಷ್ಟಪಡುವುದಿಲ್ಲ ಎಂದು ಗೀದಾ ಶಿವರಾಜಕುಮಾರ್ ಅವರು ಪ್ರತಿಕ್ರಿಯೆ ನೀಡಿದರು.

Read More

ಬೆಂಗಳೂರು : ಲೋಕಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ನಿರೀಕ್ಷಿತ ಸ್ಥಾನಗಳು ಬಂದಿಲ್ಲವಾದ್ದರಿಂದ ಈಗಾಗಲೇ ಕಾಂಗ್ರೆಸ್ಸಿನ ಹಲವು ಶಾಸಕರು ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವ ಕುರಿತಂತೆ ಹೇಳಿಕೆಗಳನ್ನು ನೀಡಿದ್ದು, ಇದೀಗ ಮಾರಿ ಶಾಸಕ ಎಚ್ಎಮ್ ರೇವಣ್ಣ ಅವರು ಯೋಜನೆಗಳಲ್ಲಿ ಸಣ್ಣಪುಟ್ಟ ವ್ಯತ್ಯಾಸಗಳಿದ್ದರೆ ಸರಿಪಡಿಸುತ್ತೇವೆ ಆದರೆ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ ಎಂದು ಸ್ಪಷ್ಟಪಡಿಸಿದರು. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ. ಯೋಜನೆಗಳಲ್ಲಿ ಮಾರ್ಪಾಡು ಅಥವಾ ಸಣ್ಣಪುಟ್ಟ ವ್ಯತ್ಯಾಸಗಳಿದ್ದರೆ ಅದನ್ನು ಸರಿಪಡಿಸುತ್ತೇವೆ ಅದು ಬಿಟ್ಟು ಯಾವುದೇ ಗ್ಯಾರೆಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ ಎಂದು ಸ್ಪಷ್ಟಪಡಿಸಿದರು. ಎಲ್ಲಾ ಹಿರಿಯರು ಕೂತು ಪರಾಮರ್ಶೆ ಮಾಡುತ್ತೇವೆ. ಸಿಎಂ ಡಿಸಿಎಂ ಕೂಡ ಯೋಜನೆಗಳನ್ನು ನಿಲ್ಲಿಸಲ್ಲ ಅಂತ ಹೇಳಿದ್ದಾರೆ. ಸಿಎಂ ಮಾತಿಗೆ ಬೆಲೆ ಕೊಡಬೇಕಾ? ಶಾಸಕನ ಮಾತಿಗೆ ಬೆಲೆ ಕೊಡಬೇಕಾ? ದೇಶದ ಜನರು ಬಿಜೆಪಿ ತಿರಸ್ಕರಿಸಿದ್ದಾರೆ. ಸ್ಪಷ್ಟ ಬಹುಮತ ಬಂದಿಲ್ಲ. ಮೈತ್ರಿ ಮಾಡಿಕೊಂಡು ಮೋದಿ ಪ್ರಧಾನಿಯಾಗಿದ್ದಾರೆ ಎಂದು ಬೆಂಗಳೂರಿನಲ್ಲಿ ಮಾಜಿ ಸಚಿವ ಎಚ್ ಎಂ ರೇವಣ್ಣ ಹೇಳಿಕೆ ನೀಡಿದರು.

Read More

ಬೆಂಗಳೂರು : ಬೆಂಗಳೂರು ಘನತ್ಯಾಜ್ಯ ನಿರ್ವಹಣಾ ಕಂಪನಿಯು ಈಗಾಗಲೇ ದೇಶದ ಇತರೆ ರಾಜ್ಯಗಳ ಘನತ್ಯಾಜ್ಯ ಶುಲ್ಕದ ಬಗ್ಗೆ ಸರ್ಕಾರಕ್ಕೆ ವರದಿ ಸಲ್ಲಿಸಿದೆ. ಹಾಗೂ ಕಡಿಮೆ ಹಣ ವಸೂಲಿಗೆ ಬಿಬಿಎಂಪಿ ಪ್ರಸ್ತಾವನೆ ಸಲ್ಲಿಸಿದೆ. ಸರ್ಕಾರ ಇದಕ್ಕೆ ಒಪ್ಪಿದರೆ ಆದಷ್ಟು ಬೇಗ ಬೆಂಗಳೂರಿನಲ್ಲಿ ಪ್ರತಿಯೊಂದು ಮನೆಯಿಂದ 100ರೂ ಘನತ್ಯಾಜ್ಯ ಶುಲ್ಕ ಸಂಗ್ರಹಿಸಲಾಗುತ್ತೆ. ರಾಜ್ಯ ಸರ್ಕಾರದ ಈ ಗ್ರಾಮವನ್ನು ಖಂಡಿಸಿ ವಿಪಕ್ಷ ನಾಯಕ ಆರ್ ಅಶೋಕ್ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದು, ಕಳೆದ ಒಂದು ವರ್ಷದಿಂದ ಕಾಂಗ್ರೆಸ್ ರಾಜ್ಯದಲ್ಲಿ ಯಾವುದೇ ಅಭಿವೃದ್ಧಿಯನ್ನು ಮಾಡಿಲ್ಲ. ಹೀಗಾಗಿ ಸಚಿವರು ಕೈ ಶಾಸಕರ ಕ್ಷೇತ್ರಗಳಲ್ಲಿ ಬಿಜೆಪಿಗೆ ಲೀಡ್ ಕೊಟ್ಟಿದ್ದಾರೆ ಎಂದು ಬೆಂಗಳೂರಿನಲ್ಲಿ ವಿಪಕ್ಷ ನಾಯಕ ಆರ್ ಅಶೋಕ್ ಹೇಳಿಕೆ ನೀಡಿದರು. ಈಗಾಗಲೇ ಹಾಲು, ಲಿಕ್ಕರ್, ವಿದ್ಯುತ್, ಮನೆ ತೆರಿಗೆ ಹೆಚ್ಚಳವಾಗಿದೆ. ಈಗ ಘನ ತ್ಯಾಜ್ಯಕ್ಕೆ ತೆರಿಗೆ ಹಾಕಲು ಸರ್ಕಾರ ಮುಂದಾಗಿದೆ. ಕಸದ ಮೇಲೆ ತೆರಿಗೆ ವಿಧಿಸುವುದನ್ನು ಬಿಜೆಪಿ ವಿರೋಧಿಸುತ್ತದೆ.ಸರ್ಕಾರ ಕಸಕ್ಕೆ ತೆರಿಗೆ ವಿಧಿಸಿದರೆ ಬಿಜೆಪಿ ಹೋರಾಟ ಮಾಡುತ್ತದೆ.ಕಸದ ಮೇಲು ತೆರಿಗೆ…

Read More

ಬೆಂಗಳೂರು : ದೊಡ್ಮನೆ ರಾಜಕುಮಾರ್‌ ಕುಟುಂಬದ ನಟ ಯುವರಾಜ್‌ ಕುಮಾರ್‌ ಅವರ ದಾಂಪತ್ಯದಲ್ಲಿ ಬಿರುಕು ಮೂಡಿದ್ದು, ವಿಚ್ಛೇದನಕ್ಕೆ ಕೋರ್ಟ್‌ ಗೆ ಅರ್ಜಿ ಸಲ್ಲಿಸಿದ್ದಾರೆ. ಅರ್ಜಿಯಲ್ಲಿ ನನಗೆ ಮಾನಸಿಕವಾಗಿ ಹಿಂಸೆ ನೀಡಲಾಗುತ್ತಿದೆ ಎಂದು ಆರೋಪಿಸಿ ಕೋರ್ಟ್ ಮೂಲಕ ನಟ ಯುವರಾಜ್‌ ಕುಮಾರ್‌ ಪತ್ನಿ ಶ್ರೀದೇವಿಗೆ ನೋಟಿಸ್ ಕೂಡ ನೀಡಿದ್ದಾರೆ ಎಂದು ತಿಳಿದು ಬಂದಿದೆ. ಕಳೆದ ಆರು ತಿಂಗಳಿನಿಂದ ಪತ್ನಿ ಶ್ರೀದೇವಿಯಿಂದ ದೂರವಿರುವ ನಟ ಯುವರಾಜ್‌ ಕುಮಾರ್‌ ಅವರು ವಿಚ್ಚೇದನಕ್ಕೆ ಫ್ಯಾಮೀಲಿ ಕೋರ್ಟ್‌ ಗೆ ಅರ್ಜಿ ಸಲ್ಲಿಸಿದ್ದಾರೆ. ರಾಜ್​ಕುಮಾರ್ ಅಲಿಯಾಸ್‌ ಯುವ ರಾಜ್​ಕುಮಾರ್ ಅವರು ಫ್ಯಾಮಿಲಿ ಕೋರ್ಟ್​​ನಲ್ಲಿ ಡಿವೋರ್ಸ್‌ಗಾಗಿ ಅರ್ಜಿ ಸಲ್ಲಿಸಿದ್ದಾರೆ ಎನ್ನಲಾಗಿದ್ದು, ಸದ್ಯ ಪ್ರಕರಣ ಸಂಬಂಧ ಹೆಚ್ಚಿನ ಮಾಹಿತಿಗಾಗಿ ಕಾಯಲಾಗುತ್ತಿದೆ. ಯುವ ರಾಜ್‌ಕುಮಾರ್ 2019 ಮೇ 26ರಂದು ಬೆಂಗಳೂರಿನ ಪ್ಯಾಲೆಸ್ ಗ್ರೌಂಡ್‌ನಲ್ಲಿ ಶ್ರೀದೇವಿ ಭೈರಪ್ಪ ಎಂಬುವವರನ್ನು ಮದುವೆಯಾದರು. ಶ್ರೀದೇವಿ ಮೂಲತಃ ಸಾಂಸ್ಕೃತಿಕ ನಗರಿ ಮೈಸೂರಿನವರು. ಇವರಿಬ್ಬರು ಏಳು ವರ್ಷಗಳಿಂದ ಪರಸ್ಪರ ಸ್ನೇಹಿತರಾಗಿದ್ದರು. ಈ ಸ್ನೇಹ ಪ್ರೀತಿಗೆ ತಿರುಗಿ ಮದುವೆಯಾದರು. ಡಿವೋರ್ಸ್ ವಿಚಾರಕ್ಕೆ ಈಗಾಗಲೇ…

Read More

ನವದೆಹಲಿ : ಕರ್ನಾಟಕ ರಾಜ್ಯದ ಹಾಗೂ ಕೇಂದ್ರದಲ್ಲಿ ವಿತ್ತ ಸಚಿವೆಯಾಗಿ ಕಾರ್ಯನಿರ್ವಹಿಸುತ್ತಿರುವ ನಿರ್ಮಲ ಸೀತಾರಾಮನ್ ಅವರು, ಇಂದು ಕೇಂದ್ರ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಈ ವೇಳೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪ್ರತಿಜ್ಞಾವಿಧಿಯನ್ನು ಬೋಧಿಸಿದರು. ಇದಕ್ಕೂ ಮೊದಲು ಇಂದು ನರೇಂದ್ರ ಮೋದಿ ಅವರು ಸತತ ಮೂರನೇ ಬಾರಿಗೆ ಭಾರತದ ಪ್ರಧಾನಿಯಾಗಿ ಪ್ರಮಾಣ ವಚನ ( PM Modi Oath Ceremony ) ಸ್ವೀಕರಿಸಿದರು. ಸತತ ಮೂರನೇ ಬಾರಿಗೆ ಪ್ರಧಾನಿಯಾದ ಹೆಗ್ಗಳಿಕೆಗೆ ನೆಹರು ನಂತ್ರ, ನರೇಂದ್ರ ಮೋದಿ ( Narendra Modi ) ಗಳಿದ್ದಾರೆ. ಇದು 1962 ರಲ್ಲಿ ಜವಾಹರಲಾಲ್ ನೆಹರು ಮಾತ್ರ ಸಾಧಿಸಿದ ಸಾಧನೆಯಾಗಿದೆ. ಇದಕ್ಕೂ ಮೊದಲು ಜೆಪಿ ನಡ್ದಾ, ಅಮಿತ್ ಶಾ, ರಾಜನಾಥ ಸಿಂಗ್, ಅವರಿಗೆ ರಾಷ್ಟ್ರಪತಿ ಅವರು ಪ್ರತಿಜ್ಞಾವಿಧಿ ಬೋಧಿಸಿದರು. ನಂತರ ರಾಜ್ಯದ ನೂತನ ಸಂಸದರಾಗಿರುವ ಎಚ್ ಡಿ ಕುಮಾರಸ್ವಾಮಿ, ಪ್ರಹ್ಲಾದ್ ಜೋಶಿ, ಪ್ರಭಾಕರಂದರಾಜೆ ಅವರಿಗೂ ಕೂಡ ರಾಷ್ಟ್ರಪತಿಯವರು ಪ್ರತಿಜ್ಞಾವಿಧಿ ಬೋಧಿಸಿದರು.

Read More

ನವದೆಹಲಿ : ಈ ಬಾರಿ ಚಿಕ್ಕಮಂಗಳೂರು ಉಡುಪಿ ಕ್ಷೇತ್ರದಲ್ಲಿ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಬೆಂಗಳೂರು ಉತ್ತರ ಕ್ಷೇತ್ರದಿಂದ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಿ ಗೆಲುವು ಸಾಧಿಸಿದ ಬಿಜೆಪಿಯ ಶೋಭಾ ಕರಂದ್ಲಾಜೆ ಅವರು ಇಂದು ಕೇಂದ್ರ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಈ ವೇಳೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪ್ರತಿಜ್ಞಾವಿಧಿಯನ್ನು ಬೋಧಿಸಿದರು. ಶೋಭಾ ಕರಂದ್ಲಾಜೆ ಅವರು 2004ರಲ್ಲಿ ಬಿಜೆಪಿ ಎಂಎಲ್ಸಿಯಾಗಿ ಆಯ್ಕೆಯಾಗಿದ್ದಾರೆ. 2014ರಲ್ಲಿ ಉಡುಪಿ ಚಿಕ್ಕಮಂಗಳೂರು ಕ್ಷೇತ್ರದಲ್ಲಿ ಸ್ಪರ್ಧಿಸಿ ಗೆಲುವು ಸಾಧಿಸಿದ್ದಾರೆ. 2019 ರಲ್ಲಿ ಲೋಕಸಭಾ ಕ್ಷೇತ್ರದಿಂದ ಎರಡನೇ ಬಾರಿಗೆ ಆಯ್ಕೆಯಾಗಿದ್ದು, ಶಾಸಕಿ,ಎಂಎಲ್ಸಿ ಹಾಗೂ ಸಂಸದರಾಗಿ ಆಯ್ಕೆಯಾಗಿದ್ದಾರೆ. 2018 ರಲ್ಲಿ ಬೆಂಗಳೂರಿನ ಯಶವಂತಪುರದ ಶಾಸಕಿಯಾಗಿದ್ದಾರೆ. ಇದಕ್ಕೂ ಮೊದಲು ಇಂದು ನರೇಂದ್ರ ಮೋದಿ ಅವರು ಸತತ ಮೂರನೇ ಬಾರಿಗೆ ಭಾರತದ ಪ್ರಧಾನಿಯಾಗಿ ಪ್ರಮಾಣ ವಚನ ( PM Modi Oath Ceremony ) ಸ್ವೀಕರಿಸಿದರು. ಸತತ ಮೂರನೇ ಬಾರಿಗೆ ಪ್ರಧಾನಿಯಾದ ಹೆಗ್ಗಳಿಕೆಗೆ ನೆಹರು ನಂತ್ರ, ನರೇಂದ್ರ ಮೋದಿ ( Narendra Modi ) ಗಳಿದ್ದಾರೆ.…

Read More

ಜಮ್ಮುಕಾಶ್ಮೀರ : ಇಂದು ಜಮ್ಮು ಮತ್ತು ಕಾಶ್ಮೀರದ ರಿಯಾಸಿ ಜಿಲ್ಲೆಯ ದೇಗುಲದಿಂದ ಯಾತ್ರಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಬಸ್ ಮೇಲೆ ಶಂಕಿತ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದ್ದಾರೆ. ದಾಳಿಯ ವೇಳೆ 10 ಯಾತ್ರಾರ್ಥಿಗಳು ಸಾವನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಬಸ್ ಶಿವಖೋಡಾ ದೇವಸ್ಥಾನದಿಂದ ಕತ್ರಾಕ್ಕೆ ಹಿಂತಿರುಗುತ್ತಿದ್ದಾಗ ಭಯೋತ್ಪಾದಕರು ದಾಳಿ ನಡೆಸಿದ್ದಾರೆ. ಮೂಲಗಳ ಪ್ರಕಾರ, ರಜೌರಿ, ಪೂಂಚ್ ಮತ್ತು ರಿಯಾಸಿಯ ಮೇಲ್ಭಾಗದಲ್ಲಿ ಅಡಗಿರುವ ಭಯೋತ್ಪಾದಕರ ಗುಂಪೆ ದಾಳಿ ನಡೆಸಿದೆ ಎಂದು ತಿಳಿದು ಬಂದಿದೆ. ಈ ವೇಳೆ ತಕ್ಷಣ ತಳಕ್ಕೆ ಪೊಲೀಸರು ಆಗಮಿಸಿದ್ದು, ರಕ್ಷಣಾ ಕಾರ್ಯಾಚರಣೆಯನ್ನು ಆರಂಭಿಸಿದರು. ಈ ವೇಳೆ ಪೊಲೀಸ್, ಸೇನೆ ಮತ್ತು ಅರೆಸೇನಾ ಪಡೆಗಳ ಬಲವರ್ಧನೆಯು ಸ್ಥಳಕ್ಕೆ ಧಾವಿಸಿತು. ದಾಳಿ ನಡೆಸಿದ್ದರಿಂದ ಈ ಪ್ರದೇಶವು ಇದೀಗ ಉದ್ವಿಗ್ನವಾಗಿದೆ, ಸಾವುನೋವುಗಳ ಬಗ್ಗೆ ಅಧಿಕಾರಿಗಳು ಇನ್ನಷ್ಟೇ ಮಾಹಿತಿ ನೀಡಲಿದ್ದಾರೆ.

Read More

ನವದೆಹಲಿ : ಧಾರವಾಡ ಲೋಕಸಭಾ ಕ್ಷೇತ್ರದಿಂದ ಸತತವಾಗಿ ಐದು ಬಾರಿ ಸಂಸದರಾಗಿ ಸಂಸತ್ ಪ್ರವೇಶಿಸಿರುವ ಪ್ರಹ್ಲಾದ ಜೋಶಿ ಅವರು ಇಂದು ಕೇಂದ್ರ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು.ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪ್ರತಿಜ್ಞಾವಿಧಿಯನ್ನು ಬೋಧಿಸಿದರು. ಪ್ರಹ್ಲಾದ್ ಜೋಶಿ ಅವರು ಸತತವಾಗಿ 5 ಬಾರಿ ಸಂಸದರಾಗಿ ಸಂಸತ್ತು ಪ್ರವೇಶಿಸಿದ್ದಾರೆ. 2004ರಲ್ಲಿ ಧಾರವಾಡ ಕ್ಷೇತ್ರದಿಂದ ಮೊದಲ ಬಾರಿಗೆ ಸಂಸದರಾಗಿದ್ದು, 2009 ರಂದು ಮತ್ತೆ ಎರಡನೇ ಬಾರಿಗೆ ಸಂಸದರಾಗಿದ್ದಾರೆ. 2014 ರಂದು ಧಾರವಾಡ ಕ್ಷೇತ್ರದಿಂದ ಮೂರನೇ ಬಾರಿಗೆ ಸಂಸದರಾಗಿದ್ದು, 2019 ರಂದು ಧಾರವಾಡ ಕ್ಷೇತ್ರದಿಂದ ನಾಲ್ಕನೇ ಬಾರಿ ಸಂಸದರಾಗಿದ್ದಾರೆ. 2019 ರಲ್ಲಿ ಕೇಂದ್ರ ಸರ್ಕಾರದ ವ್ಯವಹಾರ ಸಚಿವರಾಗಿ ಕೂಡ ಸೇವೆ ಸಲ್ಲಿಸಿದ್ದಾರೆ. ಇದಕ್ಕೂ ಮೊದಲು ಇಂದು ನರೇಂದ್ರ ಮೋದಿ ಅವರು ಸತತ ಮೂರನೇ ಬಾರಿಗೆ ಭಾರತದ ಪ್ರಧಾನಿಯಾಗಿ ಪ್ರಮಾಣ ವಚನ ( PM Modi Oath Ceremony ) ಸ್ವೀಕರಿಸಿದರು. ಸತತ ಮೂರನೇ ಬಾರಿಗೆ ಪ್ರಧಾನಿಯಾದ ಹೆಗ್ಗಳಿಕೆಗೆ ನೆಹರು ನಂತ್ರ, ನರೇಂದ್ರ ಮೋದಿ ( Narendra Modi ) ಗಳಿದ್ದಾರೆ.…

Read More

ನವದೆಹಲಿ : ಕೇಂದ್ರ ಸಚಿವರಾಗಿ ಕರ್ನಾಟಕ ರಾಜ್ಯದ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಪ್ರಮಾಣವಚನ ಸ್ವೀಕರಿಸಿದರು. ಈ ಮೂಲಕ ಮೋದಿ ಸಚಿವ ಸಂಪುಟದಲ್ಲಿ ಮೊದಲಿಗರಾಗಿ ಕರ್ನಾಟಕ ರಾಜ್ಯದ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಇದಕ್ಕೂ ಮೊದಲು ಇಂದು ನರೇಂದ್ರ ಮೋದಿ ಅವರು ಸತತ ಮೂರನೇ ಬಾರಿಗೆ ಭಾರತದ ಪ್ರಧಾನಿಯಾಗಿ ಪ್ರಮಾಣ ವಚನ ( PM Modi Oath Ceremony ) ಸ್ವೀಕರಿಸಿದರು. ಸತತ ಮೂರನೇ ಬಾರಿಗೆ ಪ್ರಧಾನಿಯಾದ ಹೆಗ್ಗಳಿಕೆಗೆ ನೆಹರು ನಂತ್ರ, ನರೇಂದ್ರ ಮೋದಿ ( Narendra Modi ) ಗಳಿದ್ದಾರೆ. ಇದು 1962 ರಲ್ಲಿ ಜವಾಹರಲಾಲ್ ನೆಹರು ಮಾತ್ರ ಸಾಧಿಸಿದ ಸಾಧನೆಯಾಗಿದೆ. ಇದಕ್ಕೂ ಮೊದಲು ಕೇಂದ್ರ ಸಚಿವರಾಗಿ ಜೆಪಿ ನಡ್ದ, ನಿತಿನ್ ದಡ್ಕರಿ ಅಂಬ್ಚ್ ಷಾ ರಾಜನಾಥ್ ಸಿಂಗ್, ಅವರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪ್ರತಿಜ್ಞಾವಿಧಿಯನ್ನು ಬೋಧಿಸಿದರು.

Read More

ನವದೆಹಲಿ: ಇಂದು ನರೇಂದ್ರ ಮೋದಿ ಅವರು ಮೂರನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸುತ್ತಿದ್ದು, ಒಂದೆಡೆಯಾದರೆ, ಇನ್ನೊಂದೆಡೆ ಮಿತ್ರಪಕ್ಷ ಎನ್‌ಸಿಪಿ ಸಚಿವ ಸ್ಥಾನದ ವಿಷಯದಲ್ಲಿ ಅಸಮಾಧಾನ ಹೊರಹಾಕಿದೆ. ಹೌದು ಈ ಕುರಿತಂತೆ ಉಪಮುಖ್ಯಮಂತ್ರಿ ಅಜಿತ್‌ ಪವಾ‌ರ್ ಪ್ರತಿಕ್ರಿಯೆ ನೀಡಿದ್ದು, ನಮ್ಮ ಪಕ್ಷದ ಪ್ರಫುಲ್ ಪಟೇಲ್‌ ಅವರು ಕ್ಯಾಬಿನೆಟ್‌ ದರ್ಜೆ ಸಚಿವರಾಗಿ ಕೆಲಸ ಮಾಡಿದ್ದಾರೆ. ಈಗ ಸ್ವತಂತ್ರ ಖಾತೆ ರಾಜ್ಯ ಸಚಿವ ಸ್ಥಾನ ನೀಡುವುದಾಗಿ ಹೇಳುತ್ತಿದ್ದಾರೆ. ಇದುಸೂಕ್ತವಲ್ಲ. ಹಾಗಾಗಿ, ಕೆಲ ದಿನಗಳ ಕಾಲ ನಾವು ಕಾಯಲು ಸಿದ್ಧವಿದ್ದೇವೆ. ನಮಗೆ ಸಂಪುಟ ದರ್ಜೆಯೇ ಬೇಕು ಎಂದು ಎನ್‌ಸಿಪಿ ಅಧ್ಯಕ್ಷ ಮತ್ತು ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್‌ ಪವಾ‌ರ್ ಹೇಳಿದ್ದಾರೆ. ಇದೇವೇಳೆ, ಇಂದಿನ ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮದಲ್ಲಿ ಭಾಗವಹಿಸುವುದಾಗಿ ಹೇಳಿದ ಅವರು, ಸದ್ಯ ನಾವು ಒಂದು ಲೋಕಸಭಾ ಮತ್ತು ಒಂದು ರಾಜ್ಯಸಭಾ ಸ್ಥಾನ ಹೊಂದಿದ್ದೇವೆ. ಮುಂದಿನ 2-3 ತಿಂಗಳಲ್ಲಿ ರಾಜ್ಯಸಭೆಯಲ್ಲಿ ನಮ್ಮ ಸಂಖ್ಯೆ 3ಕ್ಕೆ ಏರಲಿದೆ. ಒಟ್ಟಾರೆ ನಮ್ಮ ಪಕ್ಷದ ಸಂಸತ್ ಸದಸ್ಯರ ಸಂಖ್ಯೆ 4ಕ್ಕೆ ಏರಲಿದೆ. ಹಾಗಾಗಿ,…

Read More