Author: kannadanewsnow05

ಹಾಸನ : ಹಾಸನದಲ್ಲಿ ಭೀಕರವಾದ ಅಪಘಾತ ಸಂಭವಿಸಿದ್ದು 2 ಕಾರುಗಳ ಮಧ್ಯ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಇವರಿಗೆ ಗಂಭೀರವಾದ ಗಾಯಗಳಾಗಿರುವ ಘಟನೆ ಹಾಸನ ಜಿಲ್ಲೆಯ ಆಲೂರು ತಾಲೂಕಿನ ಪಾಳ್ಯ ಬಳಿ ನಡೆದಿದೆ. 2 ಕಾರುಗಳ ಮಧ್ಯೆ ಡಿಕ್ಕಿ ಆಗಿ ಐವರಿಗೆ ಗಂಭೀರವಾಗಿ ಗಾಯಗಳಾಗಿವೆ. ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಈ ಒಂದು ಭೀಕರ ಅಪಘಾತ ಸಂಭವಿಸಿದೆ. ಡಿಕ್ಕಿ ರಭಸಕ್ಕೆ ರಸ್ತೆ ಬದಿಗೆ ಎರಡು ಕಾರುಗಳು ಉರುಳಿ ಬಿದ್ದಿವೆ. ಗಾಯಾಳುಗಳಿಗೆ ಹಾಸನದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.ಆಲೂರು ಪೊಲೀಸ್ ಠಾಣೆಯಲ್ಲಿ ಅಪಘಾತದ ಕುರಿತು ಪ್ರಕರಣ ದಾಖಲಾಗಿದೆ.

Read More

ಕಲಬುರ್ಗಿ : ಕಲ್ಬುರ್ಗಿಯಲ್ಲಿ ಘೋರವಾದಂತಹ ದುರಂತ ಸಂಭವಿಸಿದ್ದು, ಆಟವಾಡುತ್ತಿದ್ದಾಗ ಸಂಪ್‌ಗೆ ಬಿದ್ದು ಇಬ್ಬರು ಮಕ್ಕಳು ಸಾವನಪ್ಪಿರುವ ಘಟನೆ ಕಲಬುರ್ಗಿ ಜಿಲ್ಲೆಯ ಜೇವರ್ಗಿ ತಾಲ್ಲೂಕಿನ ಕೋಳಕೂರ ಗ್ರಾಮದಲ್ಲಿ ಇಂದು ಬೆಳಿಗ್ಗೆ ನಡೆದಿದೆ. ಮೃತ ಮಕ್ಕಳನ್ನು ಗಿರೀಶ್ ತಿಪ್ಪಣ್ಣ (3) ಹಾಗೂ ತಿಪ್ಪಣ್ಣ ಅವರ ಸಹೋದರಿಯ ಮಗಳು ಶ್ರೇಷ್ಠಾ ಮಹೇಶ್ (2) ಎಂದು ತಿಳಿದುಬಂದಿದೆ. ಆಟವಾಡುತ್ತಿದ್ದಾಗ ಇಬ್ಬರು ಮಕ್ಕಳು ಕಣ್ಮರೆ ಆಗಿದ್ದರು. ಪೋಷಕರು ಎಷ್ಟೇ ಹುಡುಕಾಡಿದರು ಮಕ್ಕಳು ಸಿಕ್ಕಿರಲಿಲ್ಲ. ಮಕ್ಕಳು ಕಾಣದೆ ಇದ್ದಾಗ ಗಾಬರಿಯಾದ ಪೋಷಕರು ಗ್ರಾಮದ ಸಿದ್ದಬಸವೇಶ್ವರ ದೇವಸ್ಥಾನದ ಮೈಕ್ ಮೂಲಕ ಮಕ್ಕಳು ಕಾಣೆಯಾಗಿರುವ ಬಗ್ಗೆ ಗ್ರಾಮಸ್ಥರಿಗೆ ವಿಷಯ ಮುಟ್ಟಿಸಿದರು. ಕೊನೆಗೆ ಪೊಲೀಸರು ಸಂಪ್ ತೆರೆದು ನೋಡಿದಾಗ ಮಕ್ಕಳು ಬಿದ್ದಿರುವುದು ಗೊತ್ತಾಗಿದೆ. ಜೇವರ್ಗಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಕೊಪ್ಪಳ : ಕೊಪ್ಪಳದಲ್ಲಿ ಇಂದು ಭೀಕರವಾದ ರಸ್ತೆ ಅಪಘಾತ ಸಂಭವಿಸಿದ್ದು, ಮರಳು ತುಂಬಿದ ಟಿಪ್ಪರ್ ಹರಿದು ಬೈಕ್ ಸವಾರರಿಬ್ಬರು ಸಾವನಪ್ಪಿರುವ ಘಟನೆ ಕೊಪ್ಪಳ ಜಿಲ್ಲೆಯ ಕನಕಗಿರಿ ತಾಲೂಕಿನ ನವಲಿ ಬಳಿ ಈ ಒಂದು ಅಪಘಾತ ನಡೆದಿದೆ. ಮೃತಪಟ್ಟವರನ್ನು ರಮೇಶ್ (27) ಸಿದ್ದಪ್ಪ (34) ಎಂದು ತಿಳಿದುಬಂದಿದೆ. ಯುವಕರು ಕನಕಗಿರಿ ತಾಲೂಕಿನ ಗುಡೂರಿನ ನಿವಾಸಿಗಳು ಎಂದು ಹೇಳಲಾಗುತ್ತಿದೆ. ಅಕ್ರಮ ಮರಳು ದಂಧೆಗೆ ಯುವಕರಿಬ್ಬರು ಬಲಿ ಆಗಿರುವ ಆರೋಪ ಕೇಳಿ. ಬರುತ್ತಿದೆ. ಅಕ್ರಮ ಮರಳು ದಂಧೆಗೆ ಬ್ರೇಕ್ ಹಾಕಲು ಜನರು ಆಗ್ರಹಿಸುತ್ತಿದ್ದಾರೆ. ಅಪಘಾತದ ಕುರಿತು ಕನಕಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬೆಳಗಾವಿ : ಕಳೆದ ವರ್ಷ ಬೆಳಗಾವಿ ತಾಲೂಕಿನ ವಂಟಮೂರಿ ಎಂಬ ಗ್ರಾಮದಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ ನಡು ರಸ್ತೆಯಲ್ಲೆ ಕಂಬಕ್ಕೆ ಕಟ್ಟಿ ಹಲ್ಲೆ ಮಾಡಿದ್ದ ಘಟನೆ ಇಡೀ ದೇಶದಾದ್ಯಂತ ಭಾರಿ ಆಕ್ರೋಶಕ್ಕೆ ಕಾರಣವಾಗಿತ್ತು. ಇದೀಗ ಅಂತದ್ದೇ ಘಟನೆ ನಡೆದಿದ್ದು, ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಹರ್ಲಾಪುರ ಗ್ರಾಮದಲ್ಲಿ ಜಮೀನು ವಿಚಾರಕ್ಕೆ ಗಲಾಟೆ ನಡೆದು ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ನಡೆಸಿದ್ದಾರೆ ಎನ್ನುವ ಆರೋಪ ಕೇಳಿಬಂದಿದೆ. ಹೌದು 4 ಎಕರೆ 19 ಗುಂಟೆ ಜಮೀನು ವಿಚಾರಕ್ಕೆ ಸಂಬಂಧ ಪಟ್ಟಂತೆ ನಡೆದ ಗಲಾಟೆಯಲ್ಲಿ ಮಹಿಳೆಯೊಬ್ಬರನ್ನು‌ ವಿವಸ್ತ್ರಗೊಳಿಸಿ ಹಲ್ಲೆ ಮಾಡಿದ ಆರೋಪ ಕೇಳಿಬಂದಿದೆ. 15ಕ್ಕೂ ಹೆಚ್ಚು ಜನ ರೈತ ಸಂಘದವರ ಮುಂದಾಳತ್ವದಲ್ಲಿ ಬಂದು ಹಲ್ಲೆ ನಡೆಸಿದರು. ನಾನು ತಕ್ಷಣವೇ ಪೊಲೀಸರಿಗೆ ಕರೆ ಮಾಡಿದೆ. ಆದರೆ, ಅವರು ಸ್ಥಳಕ್ಕೆ ತಲುಪಿದ ಬಳಿಕವೂ ನನ್ನ ಬಟ್ಟೆ ಹರಿದು ಹಲ್ಲೆ ನಡೆಸಿದ್ದಾರೆ. ಅರಬೆತ್ತಲೆಯಾಗಿಯೇ ನಾನು ಸವದತ್ತಿ ಪೊಲೀಸ್ ಠಾಣೆಗೆ ಹೋದೆ. ಆದರೆ, ಪೊಲೀಸರು ದೂರು ದಾಖಲಿಸಲಿಲ್ಲ ಎಂದು ಸಂತ್ರಸ್ತ ಮಹಿಳೆ ಆರೋಪಿಸಿದ್ದಾರೆ. ಘಟನೆ…

Read More

ಬೆಂಗಳೂರು : ಗೋಲ್ಡ್ ಸ್ಮಗ್ಲಿಂಗ್ ಪ್ರಕರಣದಲ್ಲಿ ಸದ್ಯ ನಟಿ ರನ್ಯಾ ರಾವ್ ಅವರು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲು ಸೇರಿದ್ದಾರೆ ಇನ್ನು ಈ ಒಂದು ಪ್ರಕರಣದ ಕುರಿತು ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ನಟಿ ರನ್ಯಾ ರಾವ್ ಕುರಿತು ಅವಾಚ್ಯ ಪದ ಬಳಸಿದ್ದು ಅವರ ತೇಜೋವಧೆ ಮಾಡಿದ್ದಾರೆ ಎಂದು ಬೆಂಗಳೂರಿನ ಹೈ ಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ. ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಬೆಂಗಳೂರಿನ ಹೈ ಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ. ನಟಿ ರನ್ಯಾ ಪರವಾಗಿ ಅಕೂಲ ಅನುರಾಧ ಎನ್ನುವವರು ದೂರು ನೀಡಿದ್ದಾರೆ. ರನ್ಯಾ ವಿರುದ್ಧ ಅವಾಚ್ಯ ಪದಗಳನ್ನು ಬಳಸಿ ತೇಜೋವಧೆ ಮಾಡಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ. ಈ ಹಿನ್ನೆಲೆಯಲ್ಲಿ ಅನುರಾಧ ಅವರು ಬೆಂಗಳೂರಿನ ಹೈ ಗ್ರೌಂಡ್ಸ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. BNS ಸೆಕ್ಷನ್ 79ರ ಅಡಿ ದೂರು ದಾಖಲಾಗಿದೆ. ಅನುರಾಧ ಅವರ ದೂರಿನ ಅನ್ವಯ ಹೈ…

Read More

ತುಮಕೂರು : ಪರೀಕ್ಷೆ ಮುಗಿದ ಬಳಿಕ ವಿದ್ಯಾರ್ಥಿಯೊಬ್ಬ ಕೆರೆಯಲ್ಲಿ ಈಜಲು ತೆರಳಿದ್ದ ವೇಳೆ ಕೆರೆಯಲ್ಲಿ ಸಾವನ್ನಪ್ಪಿರುವ ಘಟನೆ ಘಟನೆ ತುಮಕೂರು ತಾಲೂಕಿನ ಕೊಡಿಗೇನಹಳ್ಳಿ ಬಳಿ ನಡೆದಿದೆ. ರಂಗನಹಳ್ಳಿ ಗ್ರಾಮದ ಹರ್ಷವರ್ಧನ (14) ಮೃತ ದುರ್ದೈವಿ ಎಂದು ತಿಳಿದುಬಂದಿದೆ. ಹರ್ಷವರ್ಧನ ಕೊಡಿಗೇನಹಳ್ಳಿ ಸರ್ವೋದಯ ಪ್ರೌಢಶಾಲೆಯಲ್ಲಿ 8ನೇ ತರಗತಿ ಓದುತ್ತಿದ್ದ ಎನ್ನಲಾಗಿದೆ. ಇಂದು ಮಧ್ಯಾಹ್ನ ಶಾಲೆಯಲ್ಲಿ ಚಿತ್ರಕಲೆ ಪರೀಕ್ಷೆ ಬರೆದಿದ್ದ. ಮಧ್ಯಾಹ್ನ 1.30ಕ್ಕೆ ಶಾಲೆ ಬಿಟ್ಟ ನಂತರ ಸ್ನೇಹಿತರ ಜೊತೆಗೂಡಿ ಜಯಮಂಗಲಿ ಸಮೀಪದಲ್ಲಿರುವ ಸುಮಾರು 15ರಿಂದ 20 ಅಡಿ ಆಳದ ಗುಂಡಿಯಲ್ಲಿ ಮುಳುಗಿ ಮೃತಪಟ್ಟಿದ್ದಾನೆ. ಸಾವಿನ ಬಗ್ಗೆ ಸೂಕ್ತ ತನಿಖೆ ನಡೆಸಿ, ನ್ಯಾಯ ಒದಗಿಸಬೇಕು ಎಂದು ಹರ್ಷವರ್ಧನನ ಪೋಷಕರು ಪೊಲೀಸರನ್ನು ಒತ್ತಾಯಿಸಿದರು.

Read More

ಬೆಂಗಳೂರು : ಬೆಂಗಳೂರಿನಲ್ಲಿ ಭೀಕರವಾದ ಮರ್ಡರ್ ಆಗಿದ್ದು ಪತ್ನಿಗೆ ಅನೈತಿಕ ಸಂಬಂಧ ಇದೆ ಎಂದು ಅನುಮಾನ ಗೊಂಡ ಪತಿ ಪತ್ನಿಯನ್ನು ಭೀಕರವಾಗಿ ಕೊಲೆ ಮಾಡಿರುವ ಘಟನೆ ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ರಾಚಾಮಾನ ಹಳ್ಳಿ ಗ್ರಾಮದಲ್ಲಿ ನಡೆದಿದೆ. ಹತ್ಯೆಯಾದ ಮಹಿಳೆಯನ್ನು ರಾಜಮಾನ ಹಳ್ಳಿ ಗ್ರಾಮದ ಅನಿತಾ ಮೃತ ಗೃಹಿಣಿಯಾಗಿದ್ದು, ಬಾಬು ಕೊಲೆ ಮಾಡಿರುವ ಆರೋಪಿಯಾಗಿದ್ದಾನೆ.ಬಾಬು ಮೈಸೂರಿನ ಚಿಕ್ಕ ಮಾರ್ಕೆಟ್ ಏರಿಯಾದವರಾದ ಅನಿತಾಳನ್ನು 7 ವರ್ಷಗಳ ಹಿಂದೆ ಮದುವೆಯಾಗಿದ್ದನು. ಅನಿತ ಬಾಬು ಗೆ ಒಂದು ಗಂಡು ಹಾಗೂ ಒಂದು ಹೆಣ್ಣು ಮಗುವಿದೆ. ಈ ಹಿಂದೆ ಅನಿತಾ ಗಂಡನ ಜೊತೆ ಜಗಳ ಮಾಡಿಕೊಂಡು ಒಂದು ತಿಂಗಳು ಮನೆ ಬಿಟ್ಟು ಹೋಗಿದ್ದಳು.ಕಳೆದ ವಾರ ಬಾಬು ಕುಟುಂಬಸ್ಥರು ವಾಪಾಸ್ ಕರೆದುಕೊಂಡು ಬಂದಿದ್ದರು. ಇದೆ ವಿಚಾರ ವಾಗಿ ಪದೇ ಪದೇ ಜಗಳವಾಡುತ್ತಿದ್ದರು. ನಿನ್ನೆ ಜಗಳವಾದಾಗ ಹೆಂಡತಿ ಹೊಡೆದಿದ್ದನು. ರಾತ್ರಿ ಮಲಗಿ ಬೆಳಗ್ಗೆ ಏಳುವಷ್ಟರಲ್ಲಿ ಅನಿತಾ ಸಾವನ್ನಪ್ಪಿದ್ದಾಳೆ. ಅತ್ತಿಬೆಲೆ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.

Read More

ದಕ್ಷಿಣಕನ್ನಡ : ದಕ್ಷಿಣ ಕನ್ನಡದಲ್ಲಿ ಭೀಕರವಾದ ಅಪಘಾತ ಸಂಭವಿಸಿದ್ದು ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ವೇಗವಾಗಿ ಬಂದಂತಹ ಬೈಕ್ ಒಂದು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಮೇಲೆ ಸಂಚರಿಸುತ್ತಿದ್ದ ಇಬ್ಬರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ದಕ್ಷಿಣಕನ್ನಡ ಜಿಲ್ಲೆಯ ಮುಲ್ಕಿ ತಾಲೂಕಿನ ಕಿನ್ನಿಗೋಳಿ ಎಂಬ ಗ್ರಾಮದಲ್ಲಿ ನಡೆದಿದೆ. ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ದುರ್ಮರಣ ಹೊಂದಿರುವ ಘಟನೆ ಕಿನ್ನಿಗೋಳಿ ಬಳಿಯ ಭಟ್ಟಕೋಡಿಯಲ್ಲಿ ಒಂದು ಭೀಕರ ಅಪಘಾತ ಸಂಭವಿಸಿದೆ. ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಆತ್ಮಾನಂದ (27) ನವೀನ್ ಹೂಗಾರ (26) ಮೃತ ಬೈಕ್ ಸವಾರರು ಎಂದು ತಿಳಿದುಬಂದಿದೆ. ಮೃತರು ಧಾರವಾಡ ಜಿಲ್ಲೆಯ ಕಲ್ಲೂರಿನ ನಿವಾಸಿಗಳು ಎಂದು ಹೇಳಲಾಗುತ್ತಿದೆ. ಮಂಗಳೂರು ಉತ್ತರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಅಪಘಾತದ ಕುರಿತು ಪ್ರಕರಣ ದಾಖಲಾಗಿದೆ.

Read More

ಬೆಂಗಳೂರು : ಲೋಕಸಭಾ ಚುನಾವಣೆಯಲ್ಲಿ ಮೋದಿ ಕಿ ಗ್ಯಾರಂಟಿ ಎಂದು ಘೋಷಣೆ ಮಾಡಿದ್ದೀರಿ. ಗ್ಯಾರಂಟಿಗಳನ್ನು ನಿರಂತರವಾಗಿ ವಿರೋಧಿಸಿದವರೆ ಈ ಕೆಲಸ ಮಾಡಿದ್ದೀರಿ. ಅನೇಕ ರಾಜ್ಯಗಳಲ್ಲಿ ಇದನ್ನು ನಕಲು ಮಾಡಿದ್ದೀರಿ.ಗ್ಯಾರಂಟಿ ಯೋಜನೆಗಳನ್ನು ನೀವು ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ ನಕಲು ಮಾಡಿದ್ದೀರಿ. ವಿರೋಧ ಮಾಡುವುದಾದರೆ ನಕಲು ಏಕೆ ಮಾಡಬೇಕಿತ್ತು? ಎಂದು ಸಿಎಂ ಸಿದ್ದರಾಮಯ್ಯ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು. ಇಂದು ವಿಧಾನಸಭಾ ಅಧಿವೇಶನದಲ್ಲಿ ರಾಜ್ಯಪಾಲರ ಭಾಷಣದ ಮೇಲಿನ‌ ಚರ್ಚೆಗೆ ಉತ್ತರಿಸಿದ ಅವರು, ನಮ್ಮ ಕಾರ್ಯಕ್ರಮಗಳನ್ನು ವಿಶೇಷವಾಗಿ ಗ್ಯಾರಂಟಿ ಯೋಜನೆಗಳನ್ನು ಮಾಧ್ಯಮಗಳು, ಜನರು, ವಿಶ್ವವಿದ್ಯಾನಿಲಯಗಳು, ವಿದ್ವಾಂಸರು ಶ್ಲಾಘಿಸಿದ್ದಾರೆ. ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ ಅಧ್ಯಕ್ಷ ಫಿಲೆಮನ್ ಯಾಂಗ್ ಗ್ಯಾರಂಟಿಗಳನ್ನು ಒಪ್ಪಿಕೊಂಡಿದ್ದಾರೆ, ಮೆಚ್ಚಿಕೊಂಡಿದ್ದಾರೆ. ಕನ್ನಡ ಮತ್ತು ಇಂಗ್ಲೀಷ್ ಪತ್ರಿಕೆಗಳು ಗ್ಯಾರಂಟಿಗಳನ್ನು ಶ್ಲಾಘಿಸಿ ಬರೆದಿರುವುದು ಸದನದ ಗಮನದಲ್ಲಿದ್ದರೂ ಬಿಜೆಪಿಯವರು ಸುಳ್ಳು ಹೇಳಿದ್ದಾರೆ. 2020ರಲ್ಲಿ ನಾವು ಗ್ಯಾರಂಟಿಗಳನ್ನು ಘೋಷಿಸಿದಾಗಲೂ ಪತ್ರಿಕೆಗಳು ಶ್ಲಾಘಿಸಿ ಬರೆದಿವೆ.ರಾಜ್ಯ ಸರ್ಕಾರ ಗ್ಯಾರಂಟಿ ಜಾರಿ ಮಾಡಿದರೆ ಆರ್ಥಿಕವಾಗಿ ದಿವಾಳಿಯಾಗುತ್ತದೆ. ಅಭಿವೃದ್ಧಿಗೆ ಹಣವಿರುವುದಿಲ್ಲ ಎಂದು ರಾಜ್ಯ ಬಿಜೆಪಿ ನಾಯಕರು ಮಾತ್ರವಲ್ಲ,…

Read More

ಬೆಂಗಳೂರು : ದುಬೈನಿಂದ ಅಕ್ರಮವಾಗಿ ಚಿನ್ನ ಸಾಗಣೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಟಿ ರನ್ಯಾರಾವ್ ಸ್ನೇಹಿತ ತರುಣ್ ರಾಜ್ ಬೆಂಗಳೂರಿನ ಆರ್ಥಿಕ ಅಪರಾಧಗಳ ವಿಶೇಷ ನ್ಯಾಯಾಲಯಕ್ಕೆ ಜಾಮೀನು ಕೋರಿ ಅರ್ಜಿ ಸಲ್ಲಿಸಿದರು. ಇಂದು ಆರ್ಥಿಕ ಅಪರಾಧಗಳ ವಿಶೇಷ ನ್ಯಾಯಾಲಯದಲ್ಲಿ ಈ ಕುರಿತು ವಿಚಾರಣೆ ನಡೆಸಿದ ನ್ಯಾಯಾಧೀಶರು, ಜಾಮೀನು ಅರ್ಜಿ ತೀರ್ಪು ಆದೇಶವನ್ನು ನಾಳೆಗೆ ಕಾಯ್ದಿರಿಸಿ ಅದೇಶಿಸಿದರು. ವಿಚಾರಣೆ ಆರಂಭವಾದ ವೇಳೆ ಡಿ ಆರ್ ಐ ಪರವಾಗಿ ವಕೀಲ ಮಧು ರಾವ್ ಅವರು ವಾದ ಆರಂಭಿಸಿದರು. ತರುಣ್ ರಾಜ್ ವಿರುದ್ಧ ಲುಕ್ ಔಟ್ ಸರ್ಕ್ಯುಲರ್ ಹೊರಡಿಸಲಾಗಿತ್ತು. ಮಾರ್ಚ್ 8ರಂದು ಭಾರತದಿಂದ ಪರಾರಿ ಆಗಲು ತರುಣ್ ರಾಜ್ ಯತ್ನಿಸಿದ್ದ. ಬೇರೆ ವಿಧಿ ಇಲ್ಲದೆ ತರುಣ್ ರಾಜು ಹೈದರಾಬಾದ್ ನಿಂದ ಬೆಂಗಳೂರಿಗೆ ಬಂದಿದ್ದಾನೆ. ನಾವು ಲುಕ್ ಔಟ್ ಸರ್ಕ್ಯುಲರ್ ಹೊರಡಿಸುವುದರಿಂದ ಬೆಂಗಳೂರಿಗೆ ಬಂದಿದ್ದಾನೇ. ಬಂಧಿಸಲು ಕಾರಣ ಬಂಧನ ಪ್ರಕ್ರಿಯೆ ಕಾನೂನು ಪ್ರಕಾರ ಮಾಡಲಾಗಿದೆ. ತರುಣ್ ರಾಜ್ ಬಂಧನ ವಿಚಾರದಲ್ಲಿ ಯಾವುದೇ ರೀತಿ ನಿಯಮ ಉಲ್ಲಂಘಿಸಿಲ್ಲ. ತರುಣ್ ರಾಜ್…

Read More