Subscribe to Updates
Get the latest creative news from FooBar about art, design and business.
Author: ಸುರೇಶ್
"ಕನ್ನಡ ನ್ಯೂಸ್ ನೌ ಜಾಲತಾಣದ ಮುಖ್ಯ ಸಂಪಾದಕರಾದ ಸುರೇಶ್ ಅವರು ಕಳೆದ 4 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದಾರೆ. ಸರ್ಕಾರದ ಯೋಜನೆಗಳು, ಶಿಕ್ಷಣ ಮತ್ತು ಪ್ರಚಲಿತ ವಿದ್ಯಮಾನಗಳನ್ನು ಸಾಮಾನ್ಯ ಜನರಿಗೂ ಅರ್ಥವಾಗುವಂತೆ ವಿವರಿಸುವುದು ಇವರ ವಿಶೇಷತೆ. ಈ ಮೊದಲು ವಿವಿಧ ವೆಬ್‌ಸೈಟ್‌ಗಳಲ್ಲಿ ನಾಗರಿಕ ಸಮಸ್ಯೆಗಳ ಬಗ್ಗೆ ವರದಿಗಾರರಾಗಿ ಕೆಲಸ ಮಾಡಿರುವ ಇವರು, ಸಮಯೋಚಿತ ಹಾಗೂ ವಿಶ್ವಾಸಾರ್ಹ ಮಾಹಿತಿ ನೀಡುವ ಮೂಲಕ ಓದುಗರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಡಿಜಿಟಲ್ ಸಾಕ್ಷರತೆ ಇವರ ನೆಚ್ಚಿನ ವಿಷಯಗಳಲ್ಲೊಂದು
ಬೆಂಗಳೂರು : ಬೆಂಗಳೂರಿನಲ್ಲಿ ಪೊಲೀಸರು ಭರ್ಜರಿ ಕಾರ್ಯಚರಣೆ ನಡೆಸಿದ್ದು ಒಂದೇ ವಾರದಲ್ಲಿ 50 ಕೋಟಿ ಮೌಲ್ಯದ ಡ್ರಗ್ಸ್ ಸಿಜ್ ಮಾಡಿದ್ದಾರೆ ಬೆಂಗಳೂರಿನ ಬಾಗಲೂರು ಪೊಲೀಸರು 16 ಕೋಟಿ ಮೌಲ್ಯದ ಎಲ್‌ಎಸ್‌ಡಿ ಪಕ್ಷಕ್ಕೆ ಪಡೆದಿದ್ದಾರೆ. ಸಿಸಿಬಿ ಪೊಲೀಸರಿಂದ 17.5 ಕೋಟಿ ಮೌಲ್ಯದ ಎಂ ಡಿ ಎಂ ಎ ವಶಕ್ಕೆ ಪಡೆಯಲಾಗಿದೆ. ಯಶವಂತಪುರ ಜಾಲಹಳ್ಳಿಯಲ್ಲಿ 6.47 ಕೋಟಿ ಮಾಡಿದ ಡ್ರಗ್ಸ್ ವಶಕ್ಕೆ ಪಡೆದಿದ್ದಾರೆ ಹಾಡುಗೋಡಿ ಪೊಲೀಸ್ರಿಂದ 1.5 ಕೋಟಿ ಮೌಲ್ಯದ ಗ್ರೌಂಡ್ ಶುಗರ್ ಜಪ್ತಿ ಮಾಡಲಾಗಿದ್ದು ಚಿಕ್ಕಜಾಲ ಪೋಲಿಸರಿಂದ 1.6 ಕೋಟಿ ಮಾಡಿದ ವರ್ಷಕ್ಕೆ ಪಡೆದಿದ್ದಾರೆ ಎಂದು ತಿಳಿದು ಬಂದಿದೆ.ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೊಲೀಸರು ಇಬ್ಬರು ವಿದೇಶಿ ಪ್ರಜೆಗಳನ್ನು ಅರೆಸ್ಟ್ ಮಾಡಿದ್ದಾರೆ ಚಟಬೇರಿ ಅಂಬ್ರೋಸ್ ಮತ್ತು ನವೆಬಿಲಿ ವ್ಯಾಲೆಂಟೈನ್ ಬಂದಿದ್ದ ಆರೋಪಿಗಳು ಎಂದು ತಿಳಿದು ಬಂದಿದೆ. ವಿದೇಶಿ ಪೋಸ್ಟ್ ಆಫೀಸ್ ಹೆಸರಿನಲ್ಲಿ ಮಾದಕ ವಸ್ತುಗಳು ಬಂದಿದ್ದವು ಭಾರತದವರು ಯಾರೆಂದು ಇದುವರೆಗೂ ಪತ್ತೆಯಾಗಿಲ್ಲ. ಯಾವ ದೇಶದಿಂದ ಡ್ರಗ್ಸ್ ಪಾರ್ಸಲ್ ಬಂದಿದೆ ಎಂದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. 2016ರಲ್ಲಿ…
ಬೆಳಗಾವಿ : ಪೊಲೀಸರ ಕಿರುಕುಳದಿಂದ ವಿದ್ಯಾರ್ಥಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಮೂರು ಪೊಲೀಸರನ್ನು ಸಸ್ಪೆಂಡ್ ಮಾಡಲಾಗಿದೆ ಹೆಡ್ ಕಾನ್ಸ್ಟೇಬಲ್ ಚಂದ್ರು ನಡುವಿನಮನಿ ಕಿರಣ ಡೊಕ್ಕಣ್ಣನವರ್ ಹಾಗೂ ಸಯ್ಯದ್ ತಹಶೀಲ್ದಾರ್ ಸಸ್ಪೆಂಡ್ ಆಗಿದ್ದಾರೆ. ಧಾರವಾಡದ ವಿದ್ಯಾಗಿರಿ ಪೊಲೀಸ್ ಠಾಣೆಯ ಪೇದೆಗಳು ಅಮಾನತು ಆಗಿದ್ದಾರೆ. ಪೊಲೀಸರ ಕಿರುಕುಳದಿಂದ ವಿದ್ಯಾರ್ಥಿ ಆದಿತ್ಯ ಆತ್ಮಹತ್ಯೆಗೆ ಶರಣಾಗಿದ್ದ. ಶನಿವಾರ ಆದಿತ್ಯ ಮತ್ತು ಕೆಲವು ವಿದ್ಯಾರ್ಥಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ಗಾಂಜಾ ಸೇವನೆ ಆರೋಪದಲ್ಲಿ ವಶಕ್ಕೆ ಪಡೆದಿರುತ್ತಾರೆ. ಆಮೇಲೆ ಆದಿತ್ಯನನ್ನು ಪರಿಶೀಲನೆ ಮಾಡಿದಾಗ ವರದಿ ನೆಗೆಟಿವ್ ಬಂದಿತ್ತು. ಪಾಸಿಟಿವ್ ಬಂದಂತಹ ವಿದ್ಯಾರ್ಥಿಗಳ ಬಳಿ ಹಣ ವಸೂಲಿ ಮಾಡಿದ ಆರೋಪ ಕೇಳಿ ಬಂದಿದ್ದು ನೆಗೆಟಿವ್ ಬಂದಿದ್ದ ಆದಿತ್ಯನ ಬಳಿ ಕೂಡ ಇವರು 2 ಸಾವಿರ ಹಣ ಕೇಳಿದ್ದರು. ಹಣಕೊಡಲು ಆದಿತ್ಯನ ತಾಯಿ ನಿರಾಕರಿಸಿದ್ದಾರೆ. ಈ ಹಿನೆಲೆಯಲ್ಲಿ ಆದಿತ್ಯ ಆತ್ಮಹತ್ಯೆಗೆ ಶರಣಾಗಿದ್ದಾನೆ. ಇದೀಗ ಮೂವರನ್ನು ಸಸ್ಪೆಂಡ್ ಮಾಡಿ ಪೊಲೀಸ್ ಕುಮಾರ್ ಎನ್ ಶಶಿಕುಮಾರ್ ಆದೇಶ ಹೊರಡಿಸಿದ್ದಾರೆ.
ಬೆಂಗಳೂರು : ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಟ ದರ್ಶನ್ ಅವರು ಜಾಮೀನು ಕೋರಿ ಇದೀಗ ಸುಪ್ರೀಂ ಕೋರ್ಟಿಗೆ ಅರ್ಜಿ ಸಲ್ಲಿಸಿದ್ದಾರೆ ಸಾಕ್ಷಿ ವಿಚಾರಣೆ ವಿಳಂಬ ಆಗುತ್ತಿರುವುದರಿಂದ ನಟ ದರ್ಶನ್ ಜಾಮೀನು ಕೋರಿ ಮನವಿ ಸಲ್ಲಿಸಿದ್ದಾರೆ ಏಪ್ರಿಲ್ 14 ರಂದು ನಟ ದರ್ಶನ್ ಸುಪ್ರೀಂ ಕೋರ್ಟಿಗೆ ಜಾಮೀನು ಅರ್ಜಿ ಸಲ್ಲಿಸಿದ್ದಾರೆ. ಅರ್ಜಿಯ ಪ್ರಮುಖ ಅಂಶಗಳು ವಿಳಂಬದ ಆಧಾರ: ಸಾಕ್ಷಿಗಳ ವಿಚಾರಣೆ ಪ್ರಕ್ರಿಯೆ ವಿಳಂಬವಾಗುತ್ತಿದೆ ಎಂಬ ಕಾರಣವನ್ನು ಮುಂದಿಟ್ಟುಕೊಂಡು ಈ ಬಾರಿ ಸುಪ್ರೀಂ ಕೋರ್ಟ್‌ನಲ್ಲಿ ಜಾಮೀನು ಕೋರಲಾಗಿದೆ. ಅರ್ಜಿ ಸಲ್ಲಿಕೆ: ಏಪ್ರಿಲ್ 14 ರಂದು ಸುಪ್ರೀಂ ಕೋರ್ಟ್‌ನಲ್ಲಿ ಈ ವಿಶೇಷ ಮೇಲ್ಮನವಿ ಅರ್ಜಿ (Special Leave Petition) ಸಲ್ಲಿಕೆಯಾಗಿದೆ. ಹಿಂದಿನ ಹಿನ್ನೆಲೆ: ಈ ಹಿಂದೆ ಕರ್ನಾಟಕ ಹೈಕೋರ್ಟ್‌ನಲ್ಲಿ ಜಾಮೀನು ಅರ್ಜಿ ತಿರಸ್ಕೃತಗೊಂಡಿದ್ದರಿಂದ, ಇದೀಗ ದೇಶದ ಅತ್ಯುನ್ನತ ನ್ಯಾಯಾಲಯದ ಮೊರೆ ಹೋಗಿದ್ದಾರೆ. ಮುಂದಿನ ಹಂತವೇನು? ಸಾಮಾನ್ಯವಾಗಿ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಕೆಯಾದ ನಂತರ, ಅದು ವಿಚಾರಣೆಗೆ ಪಟ್ಟಿಯಾಗಲು (Listing) ಕೆಲವು ದಿನಗಳ…
ಚಾಮರಾಜನಗರ : ಮದುವೆ ಮನೆಯಲ್ಲಿ ಚಿನ್ನದ ವಿಚಾರವಾಗಿ ಚಾಕುವಿನಿಂದ ಇರಿದು ಹಲ್ಲೆ ಮಾಡಿರುವ ಘಟನೆ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲದ ಆರ್‌ಎಸ್ ಫಂಕ್ಷನ್ ಹಾಲ್ ನಲ್ಲಿ ಘಟನೆ ನಡೆದಿದೆ ಇಂದು ಮುದಾಸಿರ ಜೊತೆಗೆ ಗುಲ್ರಾಜ್ ಭಾನು ವಿವಾಹ ನಿಶ್ಚಯ ಆಗಿತ್ತು. ಆದರೆ ನಿನ್ನೆ ಚಿನ್ನಾಭರಣಕ್ಕೆ ಸಂಬಂಧಿಸಿದಂತೆ ಗಲಾಟೆ ಶುರುವಾಗಿದೆ ಮಾತಿಗೆ ಮಾತು ಬೆಳೆದು ಚಾಕುವಿನಿಂದ ವಧುವಿನ ಸಂಬಂಧಿಕರು ಇರಿದಿದ್ದಾರೆ. ಮಾತುಕತೆಯಂತೆ ವರನಿಗೆ ಚಿನ್ನಾಭರಣ ವನ್ನು ವಧುವಿನ ಕುಟುಂಬಸ್ಥರು ನೀಡಿದ್ದರು. ಆದರೆ ವಧುವಿಗೆ ನೀಡಬೇಕಿದೆ ಚಿನ್ನಾಭರಣ ವರನ ಕಡೆಯವರು ನೀಡಿಲ್ಲ ಹಾಗಾಗಿ ವಧು ಮತ್ತು ವರನ ಕುಟುಂಬಸ್ಥರ ನಡುವೆ ಗಲಾಟೆ ಶುರುವಾಗಿದೆ. ವರನ ಸಂಬಂಧಿಗಳಾದ ಸಮೀರ್ ಅಯಾಜ್, ಶೋಯಬ್ ಮೇಲೆ ಹಲ್ಲೆ ನಡೆಸಲಾಗಿದೆ. ರೊಚ್ಚಿಗೆದ್ದ ವರನ ಸಂಬಂಧಿಗಳಿಂದ ಮಧುವಿನ ಸಂಬಂಧಿ ಮೇಲು ಹಲ್ಲೆ ನಡೆದಿದೆ. ಫೈರೋಜ್ ಖಾನ್, ಅಬ್ದುಲ್ ವಾಹಿದ್, ಅಬ್ದುಲ್ ಆರಿಫ್ ಮೇಲೆ ಹಲ್ಲೆ ನಡೆದಿದೆ. ಸದ್ಯ ಗಾಯಾಳುಗಳಿಗೆ ಕೊಳ್ಳೇಗಾಲ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಖಾಸಗಿ ಆಸ್ಪತ್ರೆಗೆ…
ಬೆಂಗಳೂರು : ಪೆಟ್ರೋಲ್ ಬಾಂಬ್ ಮಾದರಿ ಸ್ಫೋಟಿಸಿ ಬಿಗ್ ಬಾಸ್ ಮಾಜಿ ಸ್ಪರ್ಧಿ ರಜತ್ ಕಿಶನ್ ರಿಲ್ಸ್ ಮಾಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಆತನ ವಿರುದ್ಧ fir ದಾಖಲಿಸಲು ಪೊಲೀಸರ ಸಿದ್ಧತೆ ಮಾಡಿಕೊಂಡಿದ್ದಾರೆ. ಬೆಂಗಳೂರು ದಕ್ಷಿಣ ತಾಲೂಕಿನ ಕಗ್ಗಲಿಪುರ ಪೊಲೀಸ್ ಠಾಣೆ ಪೊಲೀಸರು ಕಾನೂನು ತಜ್ಞರ ಸಲಹೆಯನ್ನು ಪಡೆಯುತ್ತಿದ್ದು, FIR ದಾಖಲಿಸಿ ಬಳಿಕ ನೋಟಿಸ್ ನೀಡಿ ವಿಚಾರಣೆ ನಡೆಸಲು ಪೊಲೀಸರು ಸಿದ್ಧತೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಹೌದು, ಬಿಗ್ ಬಾಸ್ ಕನ್ನಡದ ಮಾಜಿ ಸ್ಪರ್ಧಿ ರಜತ್ ಕಿಶನ್ (ಬುಜ್ಜಿ) ಅವರು ಸಾರ್ವಜನಿಕ ರಸ್ತೆಯಲ್ಲಿ ‘ಪೆಟ್ರೋಲ್ ಬಾಂಬ್’ ಮಾದರಿಯ ಸ್ಫೋಟದ ವಿಡಿಯೋ (ರೀಲ್ಸ್) ಮಾಡುವ ಮೂಲಕ ಮತ್ತೆ ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ಕುರಿತಾದ ಪ್ರಮುಖ ಮಾಹಿತಿ ಇಲ್ಲಿದೆ: ಏನಿದು ಪ್ರಕರಣ? ಅಪಾಯಕಾರಿ ಸ್ಟಂಟ್: ರಜತ್ ಅವರು ಪ್ಲಾಸ್ಟಿಕ್ ಕವರ್‌ವೊಂದರಲ್ಲಿ ಪೆಟ್ರೋಲ್ ತುಂಬಿಸಿ, ಸಾರ್ವಜನಿಕರು ಓಡಾಡುವ ರಸ್ತೆಯಲ್ಲೇ ಬೆಂಕಿ ಹಚ್ಚಿ ಸ್ಫೋಟಿಸುವಂತೆ ದೃಶ್ಯವನ್ನು ಚಿತ್ರೀಕರಿಸಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದೆ.…
ಬೆಂಗಳೂರು : ನಟ ಯಶ್ ನಟಿಸಿರುವ ಬಹುನಿರೀಕ್ಷಿತ ಚಿತ್ರ ಟಾಕ್ಸಿಕ್ ಚಿತ್ರ ಬಿಡುಗಡೆ ಇದೀಗ ಮತ್ತೆ ಮುಂದೂಡಲಾಗಿದೆ. ಜೂನ್ 4ರಂದು ಬಿಡುಗಡೆಯಾಗಬೇಕಿದ್ದ ಯಶ್ ನಟನೆಯ ಟಾಕ್ಸಿಕ್ ಚಿತ್ರ ಮತ್ತೆ ಮುಂದೂಡಲಾಗಿದೆ ಹಾಗಾಗಿ ಶೀಘ್ರದಲ್ಲಿಯೇ ಸಿನಿಮಾ ಬಿಡುಗಡೆ ದಿನಾಂಕವನ್ನು ಚಿತ್ರತಂಡ ಪ್ರಕಟಿಸಲಿದೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ನಟ ಯಶ್ ಪೋಸ್ಟ್ ಮಾಡಿದ್ದಾರೆ. ಹೌದು, ‘ಟಾಕ್ಸಿಕ್’ (Toxic) ಚಿತ್ರದ ಬಿಡುಗಡೆ ದಿನಾಂಕ ಮುಂದೂಡಲ್ಪಟ್ಟಿರುವ ಸುದ್ದಿ ಯಶ್ ಅಭಿಮಾನಿಗಳಲ್ಲಿ ಸ್ವಲ್ಪ ನಿರಾಸೆ ಮೂಡಿಸಿರುವುದು ನಿಜ. ಆದರೆ, ಗುಣಮಟ್ಟದ ವಿಷಯದಲ್ಲಿ ಯಾವುದೇ ರಾಜಿ ಮಾಡಿಕೊಳ್ಳಬಾರದು ಎಂಬ ಉದ್ದೇಶದಿಂದ ಚಿತ್ರತಂಡ ಈ ನಿರ್ಧಾರ ತೆಗೆದುಕೊಂಡಿದೆ ಎನ್ನಲಾಗುತ್ತಿದೆ. ಬಿಡುಗಡೆ ವಿಳಂಬಕ್ಕೆ ಕಾರಣಗಳೇನು? ಬೃಹತ್ ಸೆಟ್‌ಗಳು ಮತ್ತು ನಿರ್ಮಾಣ: ಗೀತು ಮೋಹನ್ ದಾಸ್ ನಿರ್ದೇಶನದ ಈ ಚಿತ್ರವು ಅಂತರಾಷ್ಟ್ರೀಯ ಮಟ್ಟದ ಮೇಕಿಂಗ್ ಹೊಂದಿದ್ದು, ಚಿತ್ರೀಕರಣಕ್ಕೆ ಹೆಚ್ಚಿನ ಸಮಯ ಬೇಕಾಗಿದೆ. ತಾರಾಗಣದ ಆಯ್ಕೆ: ಚಿತ್ರದಲ್ಲಿ ಕೇವಲ ಯಶ್ ಮಾತ್ರವಲ್ಲದೆ, ಬಾಲಿವುಡ್ ಮತ್ತು ಮಲಯಾಳಂ ಚಿತ್ರರಂಗದ ಖ್ಯಾತ ನಟ-ನಟಿಯರು ನಟಿಸುತ್ತಿರುವುದರಿಂದ ಎಲ್ಲರ ಡೇಟ್ಸ್…
ಗದಗ : ಗದಗದಲ್ಲಿ ಭೀಕರವಾದ ಅಪಘಾತ ಸಂಭವಿಸಿದ್ದು ಕಾರು ಚಾಲಕನೊಬ್ಬ ನಿದ್ದೆ ಮಂಪರಿನಲ್ಲಿ ಪಾದ ಚಾರಿಗಳಿಗೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿ ಇಬ್ಬರು ಪಾದಚಾರಿಗಳು ಸಾವನ್ನಪ್ಪಿರುವ ಘಟನೆ ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದಲ್ಲಿ ಈ ಒಂದು ಅಪಘಾತ ಸಂಭವಿಸಿದೆ. ಲಕ್ಷ್ಮೇಶ್ವರ ಪಟ್ಟಣದ ಚನ್ನಮ್ಮ ಕಾಲೇಜ್ ಬಳಿ ಕಾರು ಚಾಲಕನೋರ್ವ ನಿದ್ದೆ ಮಂಪರಿನಲ್ಲಿ ಪಾದಚಾರಿಗಳಿಗೆ ಡಿಕ್ಕಿ ಹೊಡೆದ ಪರಿಣಾಮ ಈ ದುರಂತ ಸಂಭವಿಸಿದೆ. ಮೃತರನ್ನು 48 ವರ್ಷದ ಶಿವಾನಂದ ಹುಲಕೋಟಿ ಹಾಗೂ 40 ವರ್ಷದ ಅಶೋಕ್ ಸರ್ವಿ ಎಂದು ಗುರುತಿಸಲಾಗಿದೆ. ಈ ಕಾರು ಮಹಾರಾಷ್ಟ್ರದಿಂದ ಲಕ್ಷೇಶ್ವರಕ್ಕೆ ಬರುತ್ತಿತ್ತು. ಚನ್ನಮ್ಮ ಸರ್ಕಲ್‌ಗೆ ಬರುತ್ತಿದ್ದಂತೆ ಕಾರು ಚಾಲಕನಿಗೆ ನಿದ್ದೆ ಮಂಪರು ಆಗಿದ್ದು, ಪರಿಣಾಮ ಕಾರು ನಿಯಂತ್ರಣ ತಪ್ಪಿ ರಸ್ತೆ ಬದಿ ನಡೆದು ಹೋಗುತ್ತಿದ್ದ ಪಾದಚಾರಿಗಳ ಮೇಲೆ ಹತ್ತಿದೆ. ಅಪಘಾತದಲ್ಲಿ ಮೃತರಾದ ಅಶೋಕ್ ಹಾಗೂ ಶಿವಾನಂದ ಬೆಳಗಿನ ಜಾವ ಅಂಬೇಡ್ಕರ್ ಬಡಾವಣೆಯಿಂದ ವಾಕ್ ಬಂದಿದ್ದರು. ಅವರು ನಡೆದು ಬರುತ್ತಿದ್ದಾಗಲೇ ಏಕಾಏಕಿ ಎದುರಿಗೆ ಬಂದ ಹುಂಡೈ ಕಾರು ಅವರಿಗೆ…
ಬೆಂಗಳೂರು : ಜನಗಣತಿ ಎಂಬುದು ರಾಷ್ಟ್ರೀಯ ಕರ್ತವ್ಯವಾಗಿದ್ದು, ಅದಕ್ಕಾಗಿ ಬದ್ಧರಾಗಿರಬೇಕು ಎಂದು ತಿಳಿಸಿರುವ ಹೈಕೋರ್ಟ್, ರಜೆಯಲ್ಲಿರುವ ಶಿಕ್ಷಕರನ್ನು ತಕ್ಷಣ ಕರ್ತ್ಯವಕ್ಕೆ ಹಿಂದಿರುಗಿ, ಗಣತಿ ಕಾರ್ಯದಲ್ಲಿ ಭಾಗಿಯಾಗುವಂತೆ ಬೆಂಗಳೂರು ನಗರದ ಖಾಸಗಿ ಶಾಲೆಯ ಪ್ರಾಂಶುಪಾಲರೊಬ್ಬರಿಗೆ ನಿರ್ದೇಶನ ನೀಡಿದೆ. ಅಲ್ಲದೆ, ಮುಂದಿನ ಒಂದು ವಾರದಲ್ಲಿ ಎಲ್ಲ ಶಿಕ್ಷಕರನ್ನು ಹಿಂದಿರುಗುವಂತೆ ಸೂಚನೆ ನೀಡಿ, ಜನಗಣತಿ ಆಯುಕ್ತರ ಮುಂದೆ ವರದಿ ಮಾಡಿಕೊಳ್ಳುವುದನ್ನು ಖಾತರಿ ಪಡಿಸಬೇಕು ಎಂಬ ಷರತ್ತಿನೊಂದಿಗೆ ಶಾಲೆಯ ಪ್ರಾಂಶುಪಾಲರ ವಿರುದ್ಧ ಜನಗಣತಿ ಕಾಯ್ದೆಯ ಸೆಕ್ಷನ್ 11ರ ಅಡಿಯಲ್ಲಿ ಎಫ್ಐಆರ್ ದಾಖಲಿಸುವಂತಹ ಕ್ರಮಕ್ಕೆ ಮುಂದಾಗಬಾರದು ಎಂದು ತಿಳಿಸಿದೆ. ಶಾಲೆಯ ಶಿಕ್ಷಕರನ್ನು ಜನಗಣತಿಗೆ ನಿಯೋಜನೆ ಮಾಡದ ಶಾಲೆಯ ಮೇಲೆ ಕಾನೂನು ಕ್ರಮ ಕೈಗೊಳ್ಳುವುದಾಗಿ ಬೆಂಗಳೂರು ದಕ್ಷಿಣ ನಗರ ಪಾಲಿಕೆ ಪ್ರಧಾನ ಜನಗಣತಿ ಅಧಿಕಾರಿ ಹೊರಡಿಸಿದ್ದ ಆದೇಶ ಪ್ರಶ್ನಿಸಿ ಜೆ.ಪಿ. ನಗರದ 7ನೇ ಹಂತದಲ್ಲಿರುವ ದಿ ಬ್ರಿಗೇಡ್ ಶಾಲೆ ಪ್ರಾಂಶುಪಾಲ ಶುಭಾರ್ ಜೈನ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸಚ್ಚಿನ್ ಶಂಕರ್ ಮಗದಂ ಅವರಿದ್ದ ನ್ಯಾಯಪೀಠ ಈ ಸೂಚನೆ…
ಮೈಸೂರು : ಕೆಲಸದ ಸಮಯದಲ್ಲಿಯೇ ಮದ್ಯ ಸೇವಿಸಿ ವೈದ್ಯನೊಬ್ಬ ರಂಪಾಟ ಮಾಡಿದ್ದಾನೆ. ಆಸ್ಪತ್ರೆ ಆವರಣದಲ್ಲಿ ನಿಂತು ಸಿಗರೇಟ್ ಸೇದಿದ್ದಾನೆ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವೈದ್ಯನೋಬ್ಬ ಈ ರೀತಿ ರಂಪಾಟ ಮಾಡಿದ್ದಾನೆ. ಮೈಸೂರು ತಾಲೂಕಿನ ನೆಲಹಳ್ಳಿ ಗ್ರಾಮದ ಆಸ್ಪತ್ರೆಯಲ್ಲಿ ಈ ಒಂದು ಘಟನೆ ನಡೆದಿದ್ದು ಕುಡುಕ ವೈದ್ಯ ಡಾ. ಅನಿಲ್ ಕುಮಾರ್ ಮೇಲೆ ಹಲ್ಲೆ ನಡೆದಿದೆ. ಮಹಿಳಾ ಸಿಬ್ಬಂದಿಗಳಿಗೂ ಕೂಡ ಅಶ್ಲೀಲವಾಗಿ ಮೆಸೇಜ್ ಮಾಡಿ ಕಿರುಕುಳ ಕೊಡುತ್ತಿದ್ದನಂತೆ. ಕುಡುಕ ವೈದ್ಯನ ರಂಪಾಟಕ್ಕೆ ಸಾರ್ವಜನಿಕರು ಸಹ ಬೇಸತ್ತು ಹೋಗಿದ್ದಾರೆ. ಹಾಗಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿಗಳಿಗೆ ದೂರು ಸಹ ನೀಡಲಾಗಿದೆ.
ಬೆಂಗಳೂರು : ಬೆಂಗಳೂರಿನಲ್ಲಿ ಇಬ್ಬರು ವಿದ್ಯಾರ್ಥಿಯನ್ನು ನಾಪತ್ತೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕಳೆದ ಮೂರು ತಿಂಗಳು ಕಳೆದರೂ ಕೂಡ ವಿದ್ಯಾರ್ಥಿನಿಯರಾದ ತನಿಷ್ಕಾ ಮತ್ತು ತೇಜಸ್ವಿನಿ ಪತ್ತೆಯಾಗಿಲ್ಲ ಈ ಹಿನ್ನೆಲೆಯಲ್ಲಿ ಇದೀಗ ಈ ಒಂದು ಪ್ರಕರಣವನ್ನು ಸಿಐಡಿ ಗೆ ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ. ಕೇಸ್ ಸಂಬಂಧ ಹೈ ಕೋರ್ಟ್ ನಲ್ಲಿ ಹೇಬಿಎಸ್ ಕಾರ್ಪಸ್ ಪೋಷಕರು ಹಾಕಿದ್ದರು. ವಿದ್ಯಾರಣ್ಯಪುರ ಠಾಣಾ ವ್ಯಾಪ್ತಿಯಲ್ಲಿ ತೇಜಸ್ವಿನಿ ಹಾಗೂ ತನಿಷ್ಕ ಜನವರಿ 31ರಂದು ನಾಪತ್ತೆಯಾಗಿದ್ದರು. ಅವರ ಓಡಾಟದ ಸಿಸಿಟಿವಿ ದೃಶ್ಯ ಕೂಡ ಲಭ್ಯವಾಗಿತ್ತು. ಆಧಾರ್ ಕಾರ್ಡ್ ನೊಂದಿಗೆ ಇಬ್ಬರು ವಿದ್ಯಾರ್ಥಿನಿಯರು ಮನೆ ಬಿಟ್ಟು ಹೋಗಿದ್ದಾರೆ. ಆದರೆ ಇಬ್ಬರು ಎಲ್ಲಿ ಹೋಗಿದ್ದಾರೆ ಎನ್ನುವುದು ಸಣ್ಣ ಸುಳಿವು ಕೂಡ ಪೊಲೀಸರಿಗೆ ಇದುವರೆಗೂ ಸಿಕ್ಕಿಲ್ಲ. ಪ್ರಕರಣವನ್ನು ಸಿಬಿಐ ಗೆ ವಹಿಸುವಂತೆ ಪೋಷಕರು ಮನವಿ ಮಾಡಿದ್ದರು. ಹಾಗಾಗಿ ಪ್ರಕರಣವನ್ನು ಸಿಐಡಿ ಗೆ ವರ್ಗಾವಣೆ ಮಾಡಿ ಆದೇಶ ಕೊಡಲಾಗಿದೆ. ಸಿಐಡಿ ಗೆ ಪ್ರಕರಣದ ಸಂಪೂರ್ಣ ರಿಪೋರ್ಟನ್ನು ವಿದ್ಯಾರಣ್ಯಪುರ ಠಾಣಾ ಪೊಲೀಸರು ಹಸ್ತಾಂತರ ಮಾಡಿದ್ದಾರೆ.














