Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ರಾಜ್ಯದಲ್ಲಿ ನಿರೀಕ್ಷಿತ ಸ್ಥಾನಗಳನ್ನು ಗಳಿಸದೆ ಹೋಗಿದ್ದರಿಂದ ಇದೀಗ ಕಾಂಗ್ರೆಸ್ ನಾಯಕರೇ ಗ್ಯಾರಂಟಿ ಯೋಜನೆಗಳನ್ನು ಮುಂದುವರಿಸುವ ವಿಚಾರದ ಕುರಿತು ಅಭಿಪ್ರಾಯಗಳನ್ನು ವ್ಯಕ್ತಪಡಿಸುತ್ತಿದ್ದಾರೆ.ಇನ್ನೂ ಈ ವಿಚಾರದ ಕುರಿತಾಗಿ ಬೆಂಗಳೂರಿನಲ್ಲಿ ಸುದ್ಧಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಡಾ. ಜಿ.ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದು, ಕರ್ನಾಟಕ ಸರ್ಕಾರ ಜಾರಿ ಮಾಡಿರುವ ಐದು ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ ಎಂದು ಸ್ಪಷ್ಟನೆ ನೀಡಿದರು. ಕರ್ನಾಟಕ ಸರ್ಕಾರ 5 ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ. ಗ್ಯಾರಂಟಿ ಯೋಜನೆಗಳನ್ನು ಮುಂದುವರಿಸುವ ಬಗ್ಗೆ ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ರಾಜಕೀಯ ದೃಷ್ಟಿಕೋನದಿಂದ ಗ್ಯಾರಂಟಿ ಯೋಜನೆ ಜಾರಿ ಮಾಡಿಲ್ಲ ಗ್ಯಾರಂಟಿ ಯೋಜನೆ ಜಾರಿಯಿಂದ ಪಕ್ಷಕ್ಕೆ ಲಾಭವಾಗಬಹುದು ಎಂದು ತಿಳಿಸಿದರು. ಬಡವರು ಕಾರ್ಮಿಕರು ಕೃಷಿ, ಕೆಲಸ ಮತ್ತು ಕೂಲಿ, ಕೆಲಸ ಮಾಡುವವರು ಗ್ರಾಮಾಂತರ ಭಾಗದ ಜನರ ಹಿತದೃಷ್ಟಿಯಿಂದ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದ್ದೇವೆ.ಬಡತನ ರೇಖೆಗಿಂತ ಕೆಳಗಿರುವವರನ್ನು ಮೇಲೆಂತಲೂ ಗ್ಯಾರಂಟಿ ಜಾರಿ ಮಾಡಲಾಗಿದೆ.ಈ ಹಿಂದೆಯೂ ಇಂದಿರಾಗಾಂಧಿ ಬಡತನ ನಿರ್ಮೂಲನೆ ಮಾಡಿದ್ರು. ಈ ಉದ್ದೇಶದಿಂದ ನಾವು ಗ್ಯಾರಂಟಿ…
ಹಾಸನ : ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಈಗಾಗಲೇ ಎಸ್ಐಟಿ ಕೋಶದಲ್ಲಿದ್ದು ಹಿಂದೂ ಅಧಿಕಾರಿಗಳು ಅವರನ್ನು ಸ್ಥಳ ಮಹಾಜರಿಗಾಗಿ ಹಾಸನ ಜಿಲ್ಲೆಗೆ ಕರೆದುಕೊಂಡು ಹೋಗಿದ್ದರು. ಈ ವೇಳೆ ಹಾಸನದ ಸಂಸದರ ನಿವಾಸದಲ್ಲಿ ಸತತ ನಾಲ್ಕು ಗಂಟೆಗಳ ಕಾಲ SIT ಅಧಿಕಾರಿಗಳು ಸ್ಥಳ ಮಹಜರು ನಡೆಸಿದರು. ಹೌದು ಪ್ರಜ್ವಲ ರೇವಣ್ಣ ಅವರನ್ನು SIT ಅಧಿಕಾರಿಗಳು ಹಾಸನ, ಹೊಳೆನರಸೀಪುರಕ್ಕೆ ಇಂಡಬಕರೆದು ತಂದು ಸತತ ನಾಲ್ಕು ಗಂಟೆಗಳ ಕಾಲ ಸ್ಥಳ ಮಹಜರು ನಡೆಸಿದರು. ಸ್ಥಳ ಮಹಜರು ಪ್ರಕ್ರಿಯೆ ಮುಗಿಸಿ 4 ವಾಹನಗಳಲ್ಲಿ ತೆರಳಿದ ಎಸ್ಐಟಿ. ಈ ವೇಳೆ ಪ್ರಜ್ವಲ್ ರೇವಣ್ಣನನ್ನು ಕರೆದೊಯ್ಯುವಾಗ ಬೆಂಬಲಿಗರು ಘೋಷಣೆ ಕೂಗಿದ ಘಟನೆ ಜರುಗಿತು. ಪ್ರಜ್ವಲ್ ಮತ್ತು ಎಚ್ ಡಿ ರೇವಣ್ಣಗೆ ಜೈ ಎಂದು ಬೆಂಬಲಿಗರು ಘೋಷಣೆ ಕೂಗಿದರು.ಪ್ರಜ್ವಲ್ ರೇವಣ್ಣ ಕುಳಿತಿದ್ದ ಎಸ್ಐಟಿ ವಾಹನ ಹಿಂಬಾಲಿಸಿ ಘೋಷಣೆ ಕೂಗಿದರು.
ಬೆಂಗಳೂರು : ಸಹೋದರಿಯ ಪರ ನ್ಯಾಯ ಕೇಳಲು ತೆರಳಿದ್ದವ ಬಾಮೈದನನ್ನು ಚಾಕುವಿನಿಂದ ಭೀಕರವಾಗಿ ಇರಿದು ಕೊಂದ ಭಾವ, ಹತ್ಯೆಗೈದ ನಂತರ ಅಲ್ಲಿಂದ ಪರಾರಿಯಾಗಿರುವ ಘಟನೆ ಬೆಂಗಳೂರಿನ ಕುವೆಂಪು ನಗರದ ಐ ಬ್ಲಾಕ್‌ನಲ್ಲಿ ಇಂದು ನಡೆದಿದೆ. ಬಾಮೈದ ಅಭಿಷೇಕ್ ಮೇಲೆ ಬಾವ ರವಿಕುಮಾರ್ ಚಾಕುವಿನಿಂದ ಹಲ್ಲೆ ಮಾಡಿದ್ದಾನೆ. ಗಂಭೀರವಾಗಿ ಗಾಯಗೊಂಡಿದ್ದ ಅಭಿಷೇಕ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ. ಕುವೆಂಪು ನಗರ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಘಟನಾ ಸ್ಥಳಕ್ಕೆ ಪೋಲಿಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಕುವೆಂಪು ನಗರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಯುವಕನ ಕೊಂದು ಶವ ಬೀಸಾಡಿದ ದುಷ್ಕರ್ಮಿಗಳು ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕಿನ ಗುಳಬಾಳ ಗ್ರಾಮದಲ್ಲಿ ದುಷ್ಕರ್ಮಿಗಳು ಯುವಕನನ್ನು ಕೊಂದು ಶವ ಬೀಸಾಡಿದ್ದಾರೆ. ಜಮೀನಿನಲ್ಲಿ ಮಹಾಂತೇಶ ಬಿರಾದಾರ್ (25) ಮೃತದೇಹ ಪತ್ತೆಯಾಗಿದೆ. ಮಹಾಂತೇಶ್ ನನ್ನು ಕೊಂದಿದ್ದಾರೆಂದು ಸಹೋದರ ಮಂಜುನಾಥ್ ಆರೋಪಿಸಿದ್ದಾರೆ. ಸ್ಥಳಕ್ಕೆ ಬಸವನ ಬಾಗೇವಾಡಿ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಬೆಂಗಳೂರು : ಚಿಟ್ ಫಂಡ್ ಹಣದ ವಿಚಾರವಾಗಿ ಹಾಗೂ ಪತ್ನಿಯ ಜೊತೆ ಅಕ್ರಮ ಸಂಬಂಧ ಹೊಂದಿದ್ದ ಎಂದು ಸ್ನೇಹಿತನನ್ನೇ ಭೀಕರವಾಗಿ ಹತ್ಯೆ ಮಾಡಿ ಆತನ ದೇಹವನ್ನು ತುಂಡು ತುಂಡಾಗಿ ಕತ್ತರಿಸಿ ಮೋರಿಯಲ್ಲಿ ಬಿಸಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಇದೀಗ ಆರೋಪಿ ಮಾಧವ ರಾವ್ ನಾನು ಪೊಲೀಸರು 10 ದಿನ ಕಸ್ಟಡಿಗೆ ತೆಗೆದುಕೊಂಡಿದ್ದಾರೆ. ಹೌದು ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಪೊಲೀಸರು ಆರೋಪಿಯನ್ನು ಇಂದು ಕೋರ್ಟಿಗೆ ಹಾಜರುಪಡಿಸಿದರು.ವಿಚಾರಣೆ ನಡೆಸಿದ ಬಳಿಕ ಕೋರ್ಟ್ , ರಾಮಮೂರ್ತಿ ನಗರ ಠಾಣೆ ಪೊಲೀಸರ ವಶಕ್ಕೆ ನೀಡಿ ಆದೇಶ ಹೊರಡಿಸಿದೆ. ಘಟನೆ ಹಿನ್ನೆಲೆ? ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಡೀ ರಾಜ್ಯವೇ ಬೆಚ್ಚಿ ಬೀಳಿಸುವಂತಹ ಘಟನೆ ನಡೆದಿದ್ದು, ಚಿಟ್ ಫಂಡ್ಸ್ ಹಣದ ವಿಚಾರವಾಗಿ ಭೀಕರ ಕೊಲೆಯಾಗಿದ್ದು, ಮನೆಯಲ್ಲಿಯೇ ವ್ಯಕ್ತಿಯನ್ನು ಕೊಲೆಗೈದು ದೇಹವನ್ನು ಕತ್ತರಿಸಿ ಮೃತ ದೇಹವನ್ನು ಪೀಸ್ ಪೀಸ್ ಮಾಡಿ ಎರಡು ಚೀಲಗಳಲ್ಲಿ ತುಂಬಿ ಮೋರಿಗೆ ಎಸೆದಿರುವ ಘಟನೆ ಬೆಂಗಳೂರಿನ ಸಂಪಿಗೆ ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಥಣಿಸಂದ್ರದಲ್ಲಿ ನಡೆದಿದೆ. ಮಾರ್ಗದರ್ಶಿ ಚಿಟ್…
ಬೆಂಗಳೂರು : ಬೆಂಗಳೂರು ಮೈಸೂರು ದಶಪಥ ಹೆದ್ದಾರಿಯಲ್ಲಿ ಇಂದು ಬೆಳಿಗ್ಗೆ 11 ಗಂಟೆಗೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಸಿನಿಮಾ ಸ್ಟೈಲ್ ಮಾದರಿಯಲ್ಲಿ ರಸ್ತೆ ಮೇಲೆ ವೇಗವಾಗಿ ಬಂದಂತಹ ಕಾರು ಡಿವೈಡರ್ಗೆ ಬುದ್ಧಿ ಪಕ್ಕದಲ್ಲಿರುವ ಕೆರೆಗೆ ಬಿದ್ದಿದೆ. ಘಟನೆಯಲ್ಲಿ ನಾಲ್ವರಿಗೆ ಗಂಭೀರವಾದ ಗಾಯಗಳಾಗಿವೆ. ಹೌದು ಬೆಂಗಳೂರು ಮೈಸೂರು ದಶಪಥ ರಸ್ತೆಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ರಸ್ತೆ ಬದಿಯ ಡಿವೈಡರ್ ಗೆ ಗುದ್ದಿ ಕಾರು ಕೆರೆಗೆ ಬಿದ್ದಿದೆ. ಸಿನಿಮಾ ಸ್ಟೈಲ್ ಮಾದರಿಯಲ್ಲಿ ಕೆರೆಗೆ ಬಿದ್ದ ಕಾರು. ಘಟನೆಯಲ್ಲಿ ನಾಲ್ವರಿಗೆ ಗಂಭೀರವಾದಂತಹ ಗಾಯಗಳಾಗಿದೆ. ತಕ್ಷಣ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಯಿತು. ಘಟನೆಯು ರಾಮನಗರದ ಸಂಕಲಗೆರೆ ಗೇಟ್ ಬಳಿ ಈ ಒಂದು ಅಪಘಾತ ಸಂಭವಿಸಿದೆ. ಹೆದ್ದಾರಿಯಿಂದ ಸರ್ವಿಸ್ ರಸ್ತೆ ಹೇಗೆ ಬರುವ ವೇಳೆ ವೇಗವಾಗಿ ಬಂದಂತಹ ಕಾರು ನಿಯಂತ್ರಣ ಕಳೆದುಕೊಂಡು ಕೆರೆಗೆ ಬಿದ್ದಿದೆ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು ಪರಿಶೀಲನೆ ನಡೆಸುತ್ತಿದ್ದಾರೆ.
ಹುಬ್ಬಳ್ಳಿ : ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಕೋಟ್ಯಾಂತರ ರೂಪಾಯಿ ಅಕ್ರಮ ಹಣ ವರ್ಗಾವಣೆ ಆಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಹುಬ್ಬಳ್ಳಿಯಲ್ಲಿ ಬಿಜೆಪಿಯ ಶಾಸಕ ಮಹೇಶ್ ಟೆಂಗಿನಕಾಯಿ ಅವರು ಸರ್ಕಾರದಲ್ಲಿ 40 ಪರ್ಸೆಂಟ್ ಕಮಿಷನ್ ಅಲ್ಲ 60% ಕಮಿಷನ್ ದಂಧೆ ನಡೆದಿದೆ. ರಾಜೀನಾಮೆ ಕೊಡೋದು ಅಷ್ಟೇ ಅಲ್ಲ ಇವರೆಲ್ಲ ಜೈಲಿಗೆ ಹೋಗುತ್ತಾರೆ ಎಂದು ಕಿಡಿ ಕಾರಿದರು. ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದವರು ವಾಲ್ಮೀಕಿ ಹಗರಣದಿಂದಲೇ ಕಾಂಗ್ರೆಸ್ ಸರ್ಕಾರ ಬಿದ್ದರೂ ಅಚ್ಚರಿಪಡಬೇಕಿಲ್ಲ. ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ ರಾಜ್ಯ ಸರ್ಕಾರಕ್ಕೆ ಉರುಳಾಗುತ್ತದೆ.ಕಾಂಗ್ರೆಸ್ ಸರ್ಕಾರದಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ ನಡೆದಿದೆ. ಹಾಗಾಗಿ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಕೊಡಬೇಕು ಎಂದು ಆಗ್ರಹಿಸಿದರು. ಏಕೆಂದರೆ ಮುಖ್ಯಮಂತ್ರಿ ಅವರ ಮೂಗಿನ ನೇರದಲ್ಲಿಯೇ ಈ ಒಂದು ಹಗರಣ ನಡೆದಿದೆ. ಹಣಕಾಸು ಖಾತೆ ಅವರ ಬಳಿಯೇ ಇರುವುದರಿಂದ ನೇರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಕ್ಷಣ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಮುಖ್ಯಮಂತ್ರಿಗಳ ಗಮನಕ್ಕೆ ಇರಲಾರದೆ ಇಷ್ಟೆಲ್ಲ ಹಗರಣ ನಡೆಯುತ್ತಾ? ಈಗಾಗಲೇ ಬಿ ನಾಗೇಂದ್ರ ಅವರನ್ನು…
ಮಂಗಳೂರು : ಲೋಕಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ ನಿರೀಕ್ಷಿತ ಮಟ್ಟದಲ್ಲಿ ಕಾಂಗ್ರೆಸ್ ಸ್ಥಾನ ಪಡೆಯುವಲ್ಲಿ ವಿಫಲವಾಗಿದೆ. ಹೀಗಾಗಿ ಕೆಲ ಕಾಂಗ್ರೆಸ್ ನಾಯಕರು ಇದೇ ಸಂದರ್ಭದಲ್ಲಿ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದೇ ಸೂಕ್ತ ಎಂದು ಹೇಳುತ್ತಿದ್ದರೆ, ಇನ್ನೊಂದು ಕಡೆ ಮಂಗಳೂರಿನಲ್ಲಿ ಎಂ ಎಲ್ ಸಿ ಐವನ್ ಡಿಸೋಜ ಅವರು ಯಾವುದೇ ಕಾರಣಕ್ಕು ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ. ಶೀಘ್ರದಲ್ಲಿ ಗ್ಯಾರಂಟಿ ಆಫೀಸ್ ಗಳನ್ನು ತೆರೆಯಲಾಗುತ್ತದೆ ಎಂದು ತಿಳಿಸಿದರು. ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲಿಸುವ ಪ್ರಶ್ನೆಯೇ ಇಲ್ಲ ಮಂಗಳೂರಿನಲ್ಲಿ ಕಾಂಗ್ರೆಸ್ ಎಂಎಲ್ಸಿ ಐವನ್ ಡಿಸೋಜಾ ಹೇಳಿದರು.ಗ್ಯಾರಂಟಿ ನಿಲ್ಲಿಸುವ ಪ್ರಶ್ನೆಯೇ ಇಲ್ಲ ಗ್ಯಾರಂಟಿ ಯೋಜನೆ ವಿಧಾನಸಭೆ ಚುನಾವಣೆಯಲ್ಲಿ ಜನರಿಗೆ ಕೊಟ್ಟಂತಹ ವಾಗ್ದಾನವಾಗಿದೆ ಎಂದರು. ಯಾರಿಗೆ ಸಿಕ್ಕಿಲ್ಲವೋ ಅವರಿಗೆ ಹುಡುಕಿಕೊಡಲು ಗ್ಯಾರಂಟಿ ಸಮಿತಿ ರಚನೆ ಮಾಡಿದೆ. ಮುಂದೆ ಗ್ಯಾರಂಟಿ ಆಫೀ ಸಹ ಓಪನ್ ಆಗುತ್ತದೆ. ಅರ್ಹರು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತಿ ಕಚೇರಿ ಗ್ಯಾರಂಟಿ ಆಫೀಸ್ಗೆ ಬರಬಹುದು ಮನವಿ ಸಲ್ಲಿಸಿದರೆ ತಕ್ಷಣ ಸಮಸ್ಯೆ ಪರಿಹಾರ…
ಹುಬ್ಬಳ್ಳಿ : ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಕೋಟ್ಯಾಂತರ ರೂಪಾಯಿ ಅಕ್ರಮ ಹಣ ವರ್ಗಾವಣೆ ಆಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಹುಬ್ಬಳ್ಳಿಯಲ್ಲಿ ಬಿಜೆಪಿಯ ಶಾಸಕ ಮಹೇಶ್ ಟೆಂಗಿನಕಾಯಿ ಅವರು ವಾಲ್ಮೀಕಿ ಹಗರಣದಿಂದಲೇ ರಾಜ್ಯ ಕಾಂಗ್ರೆಸ್ ಸರ್ಕಾರ ಬಿದ್ದರೂ ಅಚ್ಚರಿ ಇಲ್ಲ ಎಂದು ಸ್ಫೋಟಕವಾದಂತ ಹೇಳಿಕೆ ನೀಡಿದ್ದಾರೆ. ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದವರು ವಾಲ್ಮೀಕಿ ಹಗರಣದಿಂದಲೇ ಕಾಂಗ್ರೆಸ್ ಸರ್ಕಾರ ಬಿದ್ದರೂ ಅಚ್ಚರಿಪಡಬೇಕಿಲ್ಲ. ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ ರಾಜ್ಯ ಸರ್ಕಾರಕ್ಕೆ ಉರುಳಾಗುತ್ತದೆ.ಕಾಂಗ್ರೆಸ್ ಸರ್ಕಾರದಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ ನಡೆದಿದೆ. ಹಾಗಾಗಿ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಕೊಡಬೇಕು ಎಂದು ಆಗ್ರಹಿಸಿದರು. ಏಕೆಂದರೆ ಮುಖ್ಯಮಂತ್ರಿ ಅವರ ಮೂಗಿನ ನೇರದಲ್ಲಿಯೇ ಈ ಒಂದು ಹಗರಣ ನಡೆದಿದೆ. ಹಣಕಾಸು ಖಾತೆ ಅವರ ಬಳಿಯೇ ಇರುವುದರಿಂದ ನೇರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಕ್ಷಣ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಈಗಾಗಲೇ ಬಿ ನಾಗೇಂದ್ರ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈಗ ನೈತಿಕ ಹೊಣೆ ಮತ್ತು ಸೇವಿಸಿದರಾಮಯ್ಯ ಕೂಡ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿದರು.
ರಾಮನಗರ : ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರು ಗ್ರಾಮಾಂತರ ಅತ್ಯಂತ ಪ್ರಮುಖ ಕ್ಷೇತ್ರವಾಗಿತ್ತು. ಏಕೆಂದರೆ ಹ್ಯಾಟ್ರಿಕ್ ಗೆಲುವು ಸಾಧಿಸಿದ್ದ ಡಿಕೆ ಸುರೇಶ್ ಅವರ ವಿರುದ್ಧ ಬಿಜೆಪಿಯ ಅಭ್ಯರ್ಥಿ ಡಾ. ಸಿಎನ್ ಮಂಜುನಾಥ್ ಭರ್ಜರಿ ಗೆಲುವು ದಾಖಲಿಸಿದ್ದಾರೆ. ಚುನಾವಣೆಗೂ ಮುನ್ನ ಕಾಂಗ್ರೆಸ್ ಬೆಂಬಲಿಸದಿದ್ದರೆ ಗ್ಯಾರಂಟಿ ಯೋಜನೆ ಸ್ಥಗಿತಗೊಳಿಸಲಾಗುತ್ತದೆ ಎಂದು ಶಾಸಕ HCಬಾಲಕೃಷ್ಣ ಹೇಳಿಕೆ ನೀಡಿದ್ದರು. ಇದೀಗ ಅಂತಹದ್ದೇ ಶಾಕಿಂಗ್ ಹೇಳಿಕೆಯನ್ನು ಮತ್ತೆ ಪುನರುಚ್ಚಿಸಿದ್ದು, ನಿಮ್ಮ ಗ್ಯಾರಂಟಿಗಳ ಅಗತ್ಯವಿಲ್ಲ ಎಂದು ಜನ ತೀರ್ಮಾನ ಮಾಡಿದ್ದಾರೆ ಎಂದು ಅವರು ಹೇಳಿರುವುದು ಅನುಮಾನ ಸೃಷ್ಟಿಸಿದೆ.ಹೌದು ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸದಿದ್ದರೆ ಗ್ಯಾರಂಟಿ ಯೋಜನೆಗಳನ್ನು ಸ್ಥಗಿತಗೊಳಿಸುವುದಾಗಿ ಈ ಹಿಂದೆ ಮಾಗಡಿ ಕಾಂಗ್ರೆಸ್ ಶಾಸಕ ಹೆಚ್ಸಿ ಬಾಲಕೃಷ್ಣ ಹೇಳಿದ್ದು ಭಾರಿ ಚರ್ಚೆಗೆ ಗ್ರಾಸವಾಗಿತ್ತು. ಇದೀಗ ಬಾಲಕೃಷ್ಣ ಮತ್ತೆ ಶಾಕಿಂಗ್ ಹೇಳಿಕೆ ನೀಡಿದ್ದಾರೆ. ನಿಮ್ಮ ಗ್ಯಾರಂಟಿಗಳ ಅಗತ್ಯವಿಲ್ಲ ಎಂದು ಜನ ತೀರ್ಮಾನ ಮಾಡಿದ್ದಾರೆ.ಹೃದಯವಂತ, ಹೊಸ ಮುಖ ಅಂತ ಜನ ಬಿಜೆಪಿಗೆ ಓಟ್ ನೀಡಿದ್ದಾರೆ. ರಾಜಕೀಯದಲ್ಲಿ ಇಂಥ ಸೋಲಿನ ಸಾಕಷ್ಟು…
ತುಮಕೂರು : ಡಿಕೆ ಸುರೇಶ್ ಸೋಲಿಗೆ ಸಿದ್ದರಾಮಯ್ಯ ಅಂಡ್ ಟೀಮ್ ಕಾರಣ ಸಿದ್ದರಾಮಯ್ಯನವರೇ ಸಿಎಂ ಆಗಿ ಮುಂದುವರಿಯಬೇಕು ಅಂತ ಒಂದು ಅಹಿಂದ ಟೀಮ್ ಯಾವಾಗಲೂ ಸಹ ಕೆಲಸ ಮಾಡುತ್ತದೆ. ಅಹಿಂದ ಟೀಮ್ ಸಿದ್ದರಾಮಯ್ಯ ಸೇರಿ ಡಿ ಕೆ ಸುರೇಶ್ ಸೋಲಿಸಿದ್ದಾರೆ ಎಂದು ತುಮಕೂರಲ್ಲಿ ಬಿಜೆಪಿ ಶಾಸಕ ಸುರೇಶ್ ಗೌಡ ಗಂಭೀರ ಆರೋಪ ಮಾಡಿದರು. ಜಾರಕಿಹೊಳಿ, ಪರಮೇಶ್ವರ್, ರಾಜಣ್ಣ, ಸಿದ್ದರಾಮಯ್ಯ ಅಂತ ಹೇಳಿದ್ದೆ. ಇವರೆಲ್ಲರೂ ಡಿಕೆ ಸುರೇಶರನ್ನು ಸೋಲಿಸುತ್ತಾರೆಂದು ಮೊದಲೇ ಹೇಳಿದ್ದೆ. ಒಂದು ತಿಂಗಳ ಹಿಂದೆ ಹೇಳಿದ್ದೆ. ಈಗ ಅದು ರಿಪೀಟ್ ಆಗಿದೆ 2 ಲಕ್ಷ ಮತಗಳ ಅಂತರದಿಂದ ಸುರೇಶರನ್ನು ಸೋಲಿಸುತ್ತಾರೆಂದು ಹೇಳಿದ್ದೆ. ಅದಕ್ಕಿಂತ ಹೆಚ್ಚಿನ ಮತಗಳ ಅಂತರದಿಂದ ಡಿಕೆ ಸುರೇಶ್ ಅವರನ್ನು ಸೋಲಿಸಿದ್ದಾರೆ ಇದು ಸಂಚಿನ ಒಂದು ಭಾಗ ಎಂದು ಬಿಜೆಪಿ ಶಾಸಕ ಸುರೇಶ್ ಗೌಡ ಸ್ಪೋಟಕ ಹೇಳಿಕೆ ನೀಡಿದರು. ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಆಗಬಾರದೆಂದು ಸಂಚುರೂಪಿಸಿದ್ದಾರೆ.ಡಿಕೆ ಶಿವಕುಮಾರ್ ಅವರ ನೈತಿಕತೆ ಕುಸಿಯಬೇಕು ಅಂತ ಡಿಕೆ ಸುರೇಶ್ ಅವರನ್ನು ಸಂಚುರೂಪಿಸಿ ಸೋಲಿಸಿದ್ದಾರೆ.…











