Author: kannadanewsnow05

ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಅಕ್ರಮ ನಡೆದಿದೆ ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಈಗಾಗಲೇ ಸ್ನೇಹಮಯಿ ಕೃಷ್ಣ ಅವರು ಹಲವು ಗಂಭೀರ ಆರೋಪ ಮಾಡಿದ್ದು ಅಲ್ಲದೆ, ಹೈಕೋರ್ಟ್ ನಲ್ಲಿ ಒಂದು ಪ್ರಕರಣದ ವಿಚಾರಣೆ ನಡೆಯುತ್ತಿದೆ. ಇದರ ಮಧ್ಯ ಇದೀಗ ಈ ಒಂದು ಪ್ರಕರಣಕ್ಕೆ ಬಿಗ್ ಟ್ರಸ್ಟ್ ಸಿಕ್ಕಿದ್ದು ಬಿಜೆಪಿ ಮುಖಂಡನಿಂದಲೇ ನನಗೆ ಈ ಒಂದು ದೂರು ತೆಗೆದುಕೊಳ್ಳಲು ಆಮಿಷ ಒಡ್ಡಿದ್ದರು ಎಂದು ಸ್ನೇಹಮಯಿ ಕೃಷ್ಣ ಆರೋಪ ಮಾಡಿದ್ದಾರೆ. ಹೌದು ಮುಡಾ ಅಕ್ರಮ ಕುರಿತು ಸಿಬಿಐ ತನಿಖೆ ನಡೆಸಬೇಕೆಂದು ದೂರುದಾರ ಸ್ನೇಹಮಯಿ ಕೃಷ್ಣ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಈ ಅರ್ಜಿಯನ್ನು ವಾಪಸ್ ಪಡೆಯುವಂತೆ ಪಾರ್ವತಿ ಅವರ ಆಪ್ತ ಎನ್ನಲಾದ ಹರ್ಷ ಪತ್ರಕರ್ತರೊಬ್ಬರ ಜೊತೆ ಬಂದು ಹಣದ ಆಮಿಷ ಒಡ್ಡಿದ್ದಾರೆ ಎಂದು ಸ್ನೇಹಮಯಿ ಕೃಷ್ಣ ಆರೋಪ ಮಾಡಿದ್ದಾರೆ. ಲೋಕಾಯುಕ್ತದಿಂದ ನಮಗೆ ಸಮಸ್ಯೆ ಇಲ್ಲ. ಕೇಸ್ ಸಿಬಿಐಗೆ ಹೋದರೆ ಸಮಸ್ಯೆಯಾಗುತ್ತದೆ. ಹಾಗಾಗಿ ನಿಮಗೆ ಎಷ್ಟು ಹಣ ಬೇಕು ಕೇಳಿ ನಾವು ಕೊಡುತ್ತೇವೆಂದು ಹರ್ಷ ಕಾಲು…

Read More

ಮಂಡ್ಯ : ನಾಳೆಯಿಂದ ಮೂರು ದಿನಗಳ ಕಾಲ ಮಂಡ್ಯ ಜಿಲ್ಲೆಯಲ್ಲಿ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಮಾಂಸಹಾರ ನಿಷೇಧಿಸಿ ರುವುದನ್ನು ವಿರೋಧಿಸಿ ಮನೆಗೊಂದು ಕೋಳಿ ಊರಿಗೊಂದು ಕುರಿ ಸಂಗ್ರಹ ಅಭಯಾನಕ್ಕೆ ತಾಲೂಕಿನ ಹಳೆ ಬೂದನೂರು ಗ್ರಾಮದಲ್ಲಿ ಚಾಲನೆ ನೀಡಲಾಯಿತು. ಸಮ್ಮೇಳನದಲ್ಲಿ ಕನ್ನಡ ಸಾಹಿತ್ಯ ಪರಿಷತ್ ಮಾಂಸಹಾರಕ್ಕೆ ನಿರ್ಬಂಧ ಹಾಕಿದ ದಿನದಿಂದ ಬಾಡೂಟಕ್ಕೆ ಆಗ್ರಹಿಸುತ್ತಿದ್ದ ಬಾಡೂಟ ಬಳಗದ ಬೇಡಿಕೆಗೆ ಮನ್ನಣೆ ಸಿಗದ ಹಿನ್ನೆಲೆಯಲ್ಲಿ ಅಂದು ವಿಚಾರ ಕ್ರಾಂತಿ, ಇಂದು ಆಹಾರ ಕ್ರಾಂತಿ’ ಘೋಷಣೆಯಡಿ ಭಾಗವಹಿಸುವವರೆಗೆ ಮಾಂಸಹಾರ ನೀಡಲು ಮುಂದಾಗಿದ್ದು ಇದಕ್ಕಾಗಿ ಕೋಳಿ ಕುರಿ ಸಂಗ್ರಹಕ್ಕೆ ಮುಂದಾಗಿದೆ.

Read More

ಬೆಳಗಾವಿ : “ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಹೆಸರು ಹೇಳುವ ಬದಲು ದೇವರ ನಾಮ ಜಪ ಮಾಡಿದ್ದರೆ ಮುಕ್ತಿ ದೊರೆಯುತ್ತಿತ್ತು ಎನ್ನುವ ಕೇಂದ್ರ ಗೃಹ ಸಚಿವ ಅಮಿತ್ ಷಾ ಹೇಳಿಕೆ ಪ್ರಜಾಪ್ರಭುತ್ವಕ್ಕೆ ಮಾಡಿರುವ ಅಪಮಾನ” ಎಂದು ಡಿಸಿಎಂ ಡಿ. ಕೆ. ಶಿವಕುಮಾರ್ ಅವರು ಆಕ್ರೋಶ ವ್ಯಕ್ತಪಡಿಸಿದರು. ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರ ಅಂಬೇಡ್ಕರ್ ವಿರೋಧಿ ಹೇಳಿಕೆ ಕುರಿತು ಬೆಳಗಾವಿ ಸುವರ್ಣ ವಿಧಾನಸೌಧದ ಬಳಿ ಮಾಧ್ಯಮಗಳ ಪ್ರಶ್ನೆಗೆ ಗುರುವಾರ ಉತ್ತರಿಸಿದರು. “ಅಂಬೇಡ್ಕರ್ ಅವರು ಹಾಗೂ ಸಂವಿಧಾನವನ್ನು ನಾವುಗಳು ಪ್ರತಿಪಾದನೆ ಮಾಡದೆ ಮತ್ತಿನ್ಯಾರು ಮಾಡಲು ಸಾಧ್ಯ. ಅಂಬೇಡ್ಕರ್ ಅವರು ನಮಗೆ ಸಂವಿಧಾನ ಕೊಟ್ಟವರು ಅವರಿಗೆ ನಾವೆಲ್ಲ ಗೌರವ ಕೊಡುವುದು ನಮ್ಮ ಕರ್ತವ್ಯ. ಬಸವಣ್ಣ ಅವರ ಕಾಯಕವೇ ಕೈಲಾಸ ತತ್ವದಲ್ಲಿ ನಾವೆಲ್ಲರೂ ನಂಬಿಕೆ ಇಟ್ಟಿರುವವರು” ಎಂದರು. “ಸಂವಿಧಾನಕ್ಕೆ ಮತ್ತು ಅಂಬೇಡ್ಕರ್ ಅವರಿಗೆ ಮಾಡಿರುವ ಅಪಮಾನದ ಕುರಿತು ಹೆಚ್ಚಿನ ಚರ್ಚೆಯನ್ನು ನಾವೆಲ್ಲರೂ ಮಾಡಬೇಕಿದೆ” ಎಂದು ಹೇಳಿದರು.

Read More

ಬೆಳಗಾವಿ, ಡಿ.19: ಬೀದರಿನ ಕಾರಂಜಾ ಜಲಾಶಯ ಯೋಜನೆಯ ಸಂತ್ರಸ್ತರಿಗೆ ಹೆಚ್ಚಿನ ಪರಿಹಾರ ನೀಡುವ ಕುರಿತಾದ ಬೇಡಿಕೆ ಪರಿಶೀಲನೆಗೆ ತಾಂತ್ರಿಕ ಸಮಿತಿ ರಚಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.ಅವರು ಗುರುವಾರ ಸುವರ್ಣ ಸೌಧದಲ್ಲಿ ಕಾರಂಜಾ ಯೋಜನೆ ಸಂತ್ರಸ್ರರ ಹೋರಾಟಗಾರರು, ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಸಭೆ ನಡೆಸಿ, ಸಂತ್ರಸ್ತರ ಬೇಡಿಕೆ ಅನುಷ್ಠಾನದ ಸಾಧ್ಯತೆಗಳ ಬಗ್ಗೆ ಚರ್ಚೆ ನಡೆಸಿದರು. ತಮ್ಮನ್ನು ಭೇಟಿ ಮಾಡಿದ ನಿಯೋಗ ಮತ್ತು ಮುಖಂಡರುಗಳೊಂದಿಗೆ ಸಭೆ ನಡೆಸಿದ ಮುಖ್ಯಮಂತ್ರಿಗಳು ಸಂತ್ರಸ್ತರಿಗೆ ಪರಿಹಾರ ನೀಡುವ ಸಂಬಂಧ ತಾಂತ್ರಿಕ ಸಮಿತಿಯೊಂದನ್ನು ರಚಿಸಿ, ಸಮಿತಿ ನೀಡುವ ವರದಿಯಾಧರಿಸಿ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದರು. ಕಾರಂಜಾ ಜಲಾಶಯ ನಿರ್ಮಾಣಕ್ಕೆ 1972-73ರಲ್ಲಿ ಭೂಸ್ವಾಧೀನ ವಾಗಿತ್ತು. ಜಮೀನು ಕಳೆದುಕೊಂಡ ಸಂತ್ರಸ್ತರಿಗೆ ಎಕರೆಗೆ ರೂ 3000 ದಂತೆ 1981-86ರಲ್ಲಿ ಆಗಿನ ಮಾರುಕಟ್ಟೆ ಬೆಲೆ ಆಧರಿಸಿ ಪರಿಹಾರ ನೀಡಲಾಗಿತ್ತು. ಆದರೆ ಪರಿಹಾರ ಧನದ ಬಗ್ಗೆ ತಕರಾರು ಎತ್ತಿ ನ್ಯಾಯಾಲಯದ ಮೊರೆ ಹೋದ ಸಂತ್ರಸ್ತರು ಹೆಚ್ಚು ಪರಿಹಾರ ಧನ ಪಡೆದಿದ್ದರು. ನ್ಯಾಯಾಲಯದ ಮೊರೆ ಹೋಗದ…

Read More

ಬೆಳಗಾವಿ : ವಿಧಾನಸಭೆ ಮತ್ತು ಪರಿಷತ್‌ ಕಲಾಪದಲ್ಲೂ ಕಾಂಗ್ರೆಸ್‌ ಶಾಸಕರು ಅಂಬೇಡ್ಕರ್‌ ಭಾವಚಿತ್ರ ಪ್ರದರ್ಶಿಸಿ ಕೇಂದ್ರ ಗೃಹ ಸಚಿವ ಅಮಿತ್‌ ಶಾ ವಿರುದ್ಧ ಧಿಕ್ಕಾರ ಕೂಗಿದ್ದಾರೆ.ಇಂದು ವಿಧಾನಸಭೆಯ ಕಲಾಪ ಆರಂಭವಾಗುತ್ತಿದ್ದಂತೆ ಅಮಿತ್‌ ಶಾ ಹೇಳಿಕೆಗೆ ಖಂಡನೆ ವ್ಯಕ್ತಪಡಿಸಿ ಚರ್ಚೆಗೆ ಆಗ್ರಹಿಸಿದರು. ಸದನದಲ್ಲಿ ನಿರ್ಣಯ ಕೈಗೊಳಲು ಒತ್ತಾಯಿಸಿದರು. ಅಂಬೇಡ್ಕರ್ ಬಗ್ಗೆ ಅಮಿತ್ ಶಾ ಹೇಳಿಕೆ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿದೆ. ಈ ಹಿನ್ನೆಲೆಯಲ್ಲಿ ವಿಧಾನಸಭೆಯಲ್ಲಿ ಅಂಬೇಡ್ಕರ್ ಫೋಟೋ ಹಿಡಿದು ಕಾಂಗ್ರೆಸ್ ಸದಸ್ಯರು ಧರಣಿ ನಡೆಸಿದರು. ಆಸನದ ಮುಂದೆ ಅಂಬೇಡ್ಕರ್ ಫೋಟೋ ಹಿಡಿದು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರು ಕುಳಿತಿದ್ದಾರೆ. ಸದನದ ಬಾವಿಗೆ ಇಳಿದು ಕಾಂಗ್ರೆಸ್ ಸದಸ್ಯರು ಜಮಾಯಿಸಿದ್ದಾರೆ. ವಿಪಕ್ಷ ಬಿಜೆಪಿ ಶಾಸಕರಿಂದಲೂ ಕಾಂಗ್ರೆಸ್ ವಿರುದ್ಧ ಧಿಕ್ಕಾರ ಘೋಷಣೆ ಕೂಗಿದರು. ಸದನದಲ್ಲಿ ಕಾಂಗ್ರೆಸ್ ಬಿಜೆಪಿ ಸದಸ್ಯರಿಂದ ತೀವ್ರ ಗದ್ದಲ ಮತ್ತು ಕೋಲಾಹಲ ಉಂಟಾಯಿತು. ವಿಧಾನಸಭೆಯಲ್ಲಿ ತೀವ್ರ ಗದ್ದಲ ಹಿನ್ನೆಲೆಯಲ್ಲಿ ಕೆಲಕಾಲ ಕಲಾಪ ಮುಂದೂಡಲಾಯಿತು. ಸಂವಿಧಾನ ಶಿಲ್ಪಿ ಡಾ.ಬಾಬಾಸಾಹೇಬ್ ಅಂಬೇಡ್ಕರ್ ಅವರನ್ನು…

Read More

ಬೆಂಗಳೂರು : ಅನಾರೋಗ್ಯದ ಹಿನ್ನೆಲೆ ಚಿಕಿತ್ಸೆ ಪಡೆಯಲು ಇಂದು ಅಮೆರಿಕಕ್ಕೆ ಹ್ಯಾಟ್ರಿಕ್ ಹೀರೊ ನಟ ಶಿವರಾಜ್ ಕುಮಾರ್ ಪ್ರಯಾಣ ಬೆಳೆಸಿದ್ದಾರೆ. ಈಗಾಗಲೇ ಬೆಂಗಳೂರಿನ ನಾಗವಾರದ ತಮ್ಮ ನಿವಾಸದಿಂದ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತೆರಳಿದ್ದಾರೆ. ನಿವಾಸದಿಂದ ಕೆಂಪೇಗೌಡ ಏರ್ಪೋರ್ಟ್ ನತ್ತ ನಟ ಶಿವರಾಜ್ ಕುಮಾರ್ ಇದೀಗ ತೆರಳಿದ್ದಾರೆ. ಈ ವೇಳೆ ಅಮೇರಿಕಾಕೆ ಚಿಕಿತ್ಸೆಗೆ ತೆರಳುವ ಮುನ್ನ ನಟ ಶಿವಣ್ಣ ಮಾಧ್ಯಮ ಪ್ರತಿನಿಧಿಗಳಿಗೆ ಪ್ರತಿಕ್ರಿಯೆ ನೀಡಿದ್ದು, ಈ ವೇಳೆ ಮಾತನಾಡುವಾಗ ಸ್ವಲ್ಪ ದುಃಖ ಆಯ್ತು ಅಷ್ಟೇ. 35 ದಿನ ಮನೆಯಿಂದ ಆಚೆ ಇರಬೇಕಲ್ವಾ ಅದಕ್ಕೆ ಸ್ವಲ್ಪ ದುಃಖವಾಗುತ್ತಿದೆ. ಜನವರಿ 26 ಕ್ಕೆ ನಾನು ಬೆಂಗಳೂರಿಗೆ ವಾಪಸ್ ಆಗುತ್ತೇನೆ. ಎಲ್ಲರನ್ನೂ ಮಿಸ್ ಮಾಡಿಕೊಳ್ಳುತ್ತಿದ್ದೇನೆ. ಎಲ್ಲರಿಗೂ ಹೊಸ ವರ್ಷದ ಶುಭಾಶಯ ಎಂದು ಇದೆ ವೇಳೆ ನಟ ಶಿವರಾಜ್ ಕುಮಾರ್ ಶುಭ ಕೋರಿದರು. ಪತ್ನಿ ಗೀತಾ ಶಿವರಾಜ್ ಕುಮಾರ್ , ಪುತ್ರಿ ನಿವೇದಿತಾ ಹಾಗೂ ಆಪ್ತರ ಜೊತೆ ಅಮೆರಿಕಕ್ಕೆ ನಟ ಶಿವರಾಜ್ ಕುಮಾರ್ ಪ್ರಯಾಣ ಬೆಳೆಸಲಿದ್ದಾರೆ.ಡಿ.24 ರಂದು…

Read More

ಕಲಬುರ್ಗಿ : ಕಲಬುರ್ಗಿಯಲ್ಲಿ ಇಂದು ಭೀಕರವಾದಂತಹ ರಸ್ತೆ ಅಪಘಾತ ಸಂಭವಿಸಿದ್ದು, ಕ್ರಷರ್ ಹಾಗೂ ಬೈಕ್ ಮುಖಾಂತರ ಡಿಕ್ಕಿ ಹೊಡೆದ ಪರಿಣಾಮ, ಬೈಕ್ ಸವಾರ ಸ್ಥಳದಲ್ಲಿ ಸಾವನಪ್ಪಿದ್ದರೆ ಕ್ರಷರ್ ನಲ್ಲಿದ್ದ 10ಕ್ಕೂ ಹೆಚ್ಚು ಜನರಿಗೆ ಗಂಭೀರವಾದಂತಹ ಗಾಯಗಳಾಗಿರುವ ಘಟನೆ ಕಲಬುರ್ಗಿ ನಗರದ ಹೊರವಲಯದ ಅಪಘಾತ ಸಂಭವಿಸಿದೆ. ಮೃತ ಬೈಕ್ ಸವಾರನನ್ನು ಕೆರೂರ್ ಗ್ರಾಮದ ನಿವಾಸಿ ಉಮೇಶ್ ಹರಿರಾಮ್ ಚೌಹಾಣ್ (39) ಎಂದು ಗುರುತಿಸಲಾಗಿದೆ. ಕ್ರಷರ್ ನಲ್ಲಿದ್ದ 10ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ. ಇನ್ನೂ ಅದೇ ಗ್ರಾಮದ ಕ್ರಷರ್ ಚಾಲಕ ಕೃಷ್ಣ ನಾಗೇಶ್ ಬೋರೆ, ಅಲಗುಡ್ ಕ್ರಾಸ್ ನಿಂದ ಕಾರ್ಖನೆಯೊಂದರ ಕೂಲಿ ಕಾರ್ಮಿಕರಿಗೆ ಕೂರಿಸಿಕೊಂಡು ಹೇರೂರು ಗ್ರಾಮದ ಕಡೆ ತೆರಳುತ್ತಿದ್ದ. ಚಾಲಕ ಕೃಷ್ಣ ಅತಿವೇಗದಿಂದ ಕ್ರಷರ್ ಚಲಾಯಿಸುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Read More

ಬೆಂಗಳೂರು : ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧದ ಪೋಕ್ಸೋ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪ್ರಕರಣ ರದ್ದು ಕೋರಿ ಬಿಎಸ್ ಯಡಿಯೂರಪ್ಪ ಅವರು ಸಲ್ಲಿಸಿದ ಅರ್ಜಿಯ ವಿಚಾರಣೆ ಇಂದು ಹೈಕೋರ್ಟ್ ಏಕ ಸದಸ್ಯ ಪೀಠದಲ್ಲಿ ನಡೆಯಿತು. ವಿಚಾರಣೆ ಬಳಿಕ ಹೈಕೋರ್ಟ್ ನ್ಯಾಯಮೂರ್ತಿಗಳು, ವಿಚಾರಣೆಯನ್ನು ನಾಳೆ ಸಂಜೆ 5 ಗಂಟೆಗೆ ಮುಂದೂಡಿ ಆದೇಶ ಹೊರಡಿಸಿದರು.  ವಿಚಾರಣೆ ಆರಂಭದಲ್ಲಿ ಬಿಎಸ್ ಯಡಿಯೂರಪ್ಪ ಪರ ಹಿರಿಯ ವಕೀಲ ಸಿವಿ ನಾಗೇಶ್ ಅವರು ವಾದ ಆರಂಭಿಸಿದರು. ಸಂತ್ರಸ್ತ ಬಾಲಕಿಯ ದೂರುದಾರ ತಾಯಿಯ ನಡವಳಿಕೆಯನ್ನು ಗಮನಿಸಬೇಕು. ಅಧಿಕಾರಿಗಳು, ಸಂಬಂಧಿಗಳು, ರಾಜಕಾರಣಿಗಳ ಮೇಲೆ ಮಹಿಳೆ 56 ದೂರನ್ನು  ನೀಡಿದ್ದಾರೆ. ಘಟನೆ ನಡೆದ ಒಂದುವರೆ ತಿಂಗಳ ನಂತರ ಮಾರ್ಚ್ 14ಕ್ಕೆ ಕೇಸ್ ದಾಖಲಾಗಿದೆ ಎಂದು ವಾದಿಸಿದರು. ಅನುಚಿತವಾಗಿ ಸ್ಪರ್ಶಿಸಿದ್ದಾರೆ ಎಂದು ಬಾಲಕಿಯ ಹೇಳಿಕೆ ಇದೆ. ಹಲವು ಜನರ ಸಮ್ಮುಖದಲ್ಲಿ ಈ ಘಟನೆ ನಡೆಯಲು ಸಾಧ್ಯವೇ? ಬಾಲಕಿಯ ಹೇಳಿಕೆಯನ್ನು ಆಧರಿಸಿ ಚಾರ್ಜ್ ಶೀಟ್ ದಾಖಲಿಸಲಾಗಿದೆ. ಎಂದು ಬಿಎಸ್ ಯಡಿಯೂರಪ್ಪ ಪರ ಹಿರಿಯ ವಕೀಲ ಸಿವಿ ನಾಗೇಶ್ ವಾದ…

Read More

ಕೋಲಾರ : ಬೊಲೆರೋ ವಾಹನ ಡಿಕ್ಕಿಯಾಗಿ ಸ್ಥಳದಲ್ಲೇ ಐವರು ಬೈಕ್ ಸವಾರರು ಸಾವನ್ನಪ್ಪಿರುವ ಘಟನೆ, ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ಎನ್ ವಡ್ಡಹಳ್ಳಿ-ಗುಡಿಪಲ್ಲಿಗೆ ಹೋಗುವ ಮುಖ್ಯ ರಸ್ತೆಯಲ್ಲಿ ಈ ಒಂದು ಭೀಕರ ರಸ್ತೆ ಅಪಘಾತ ನಡೆದಿದೆ.ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ಎನ್ ವಡ್ಡಹಳ್ಳಿಯಲ್ಲಿ ಈ ಒಂದು ಭೀಕರ ಅಪಘಾತ ಸಂಭವಿಸಿದೆ. ಮೃತರನ್ನು ಕೋನಗುಂಟೆ ಗ್ರಾಮದ ರಾಧಪ್ಪ (45) ವೆಂಕಟರಾಮಪ್ಪ (45) ವೆಂಕಟರಾಮಪ್ಪನ ಪತ್ನಿ ಅಲುವೇಲಮ್ಮ (30) ಹಾಗೂ ಅವರ ಜೊತೆಗೆ ಇಬ್ಬರು ಅಪರಿಚಿತರು ಕೂಡ ಸಾವನ್ನಪ್ಪಿದ್ದರೆ.. ಇನ್ನೋರ್ವ ವ್ಯಕ್ತಿಗೆ ಗಂಭೀರವಾದ ಗಾಯವಾಗಿದ್ದು, ಕೂಡಲೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಕೂಲಿ ಕೆಲಸ ಮುಗಿಸಿ ಮನೆಗೆ ಹೋಗುತ್ತಿದ್ದಾಗ ಈ ಒಂದು ಅಪಘಾತ ಸಂಭವಿಸಿದೆ ಎನ್ನಲಾಗಿದೆ. ನಂಗಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ರಾಮನಗರ : ರಾಮನಗರದಲ್ಲಿ ಇಂದು ಭೀಕರವಾದಂತಹ ಸರಣಿ ಅಪಘಾತ ನಡೆದಿದ್ದು, ನಿಯಂತ್ರಣ ತಪ್ಪಿ ಕಾರೊಂದು ಮಹಿಳೆಗೆ ಡಿಕ್ಕಿ ಹೊಡೆದು ಬಳಿಕ ಹಲವು ಕಾರುಗಳಿಗೆ ಗುದ್ದಿದ ಘಟನೆ ರಾಮನಗರದ ರಾಯರದೊಡ್ಡಿ ಬಳಿ ಈ ಒಂದು ಸರಣಿ ಅಪಘಾತ ನಡೆದಿದೆ. ಹೌದು ರಾಮನಗರದ ರಾಯರ ದೊಡ್ಡಿ ಬಳಿ ಸಂಭವಿಸಿದ ಸರಣಿ ಅಪಘಾತ ಮಹಿಳೆಗೆ ಡಿಕ್ಕಿಯಾಗಿ ಬಳಿಕ ಹಲವು ವಾಹನಗಳಿಗೆ ಕಾರು ಗುದ್ದಿದೆ. ಈ ವೇಳೆ ಪರಾರಿಯಾಗಲು ಯತ್ನಿಸಿದ ಕಾರಿನ ಚಾಲಕನನ್ನು ಚೇಸ್ ಮಾಡಿ ಪೊಲೀಸರು ಬಂಧಿಸಿದ್ದಾರೆ. ಕಾರು ಚಾಲಕನನ್ನು ವಶಕ್ಕೆ ಪಡೆದು ಪೊಲೀಸರು ಸದ್ಯ ವಿಚಾರಣೆ ನಡೆಸುತ್ತಿದ್ದಾರೆ. ಘಟನಾ ಸ್ಥಳಕ್ಕೆ ರಾಮನಗರ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Read More