Author: kannadanewsnow05

ಬೆಂಗಳೂರು : ಚಾಲಕನ ನಿಯಂತ್ರಣ ತಪ್ಪಿಖಾಸಗಿ ಬಸ್ ಪಲ್ಟಿ ಹೊಡೆದ ಪರಿಣಾಮ ಬಸ್ ನಲ್ಲಿದ್ದ ಇಬ್ಬರು ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಹಾಗಾಗಿ ಭಾರೀ ಅನಾಹುತ ಒಂದು ತಪ್ಪಿದೆ. ಈ ಒಂದು ಘಟನೆ ಬೆಂಗಳೂರಿನ ನೆಲಮಂಗಲದ ಬಳಿ ನಡೆದಿದೆ. ಇಂದು ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಯಾಗಿದದೆ. ಅಪಘಾತ ಬಳಿಕ ಖಾಸಗಿ ಬಸ್ ನಲ್ಲಿದ್ದ ಇಬ್ಬರೂ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ನೆಲಮಂಗಲದಿಂದ ಬಸ್ ತುಮಕೂರಿಗೆ ತೆರಳುತ್ತಿತ್ತು. ಈ ವೇಳೆ ಚಾಲಕರ ನಿಯಂತ್ರಣ ತಪ್ಪಿ ಬಸ್ ಪಲ್ಟಿಯಾಗಿದೆ. ಈ ವೇಳೆ ಹೆದ್ದಾರಿಯಲ್ಲಿ ಫುಲ್ ಟ್ರಾಫಿಕ್ ಜಾಮ್ ಉಂಟಾಗಿದೆ.

Read More

ಬೆಂಗಳೂರು : ರೇಣುಕಾ ಸ್ವಾಮಿ ಕೊಲೆ ಆರೋಪಿ ನಟ ದರ್ಶನ್ ಗೆ ಬೆನ್ನು ನೋವಿನ ಸಮಸ್ಯೆ ಹಿನ್ನೆಲೆಯಲ್ಲಿ ಅವರು ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಯಲ್ಲಿ ಕಳೆದ 6 ದಿನಗಳ ಹಿಂದೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಹಿಂದೆ ಅವರಿಗೆ ಫಿಸಿಯೋಥೆರಫಿ ಮಾಡಬೇಕು ಎಂದು ವೈದ್ಯರು ತಿಳಿಸಿದ್ದರು. ಇದೀಗ ಈ ಒಂದು ವಿಷಯದಲ್ಲಿ ಬದಲಾಗಿದ್ದು, ಅವರಿಗೆ ಫಿಜಿಯೋಥೆರಫಿ ಬದಲು ಸರ್ಜರಿಯೆ ಬಹುತೇಕ ಫಿಕ್ಸ್ ಆಗಿದೆ ಹೌದು ಈಗಾಗಲೇ ದರ್ಶನ್ ಗೆ ಹಲವು ರೀತಿಯ ತಪಾಸಣೆ ಮಾಡಲಾಗಿದೆ. ಎಂಆರ್‌ಐ ಸ್ಕ್ಯಾನಿಂಗ್, ಸಿಟಿ ಸ್ಕ್ಯಾನಿಂಗ್ ಬ್ಲಡ್ ಟೆಸ್ಟ್ ಸೇರಿದಂತೆ ಅನೇಕ ಪರೀಕ್ಷೆಗಳಿಗೆ ನಟ ದರ್ಶನ್ ಒಳಪಟ್ಟಿದ್ದಾರೆ. ಪರೀಕ್ಷೆಯ ವೇಳೆ ದರ್ಶನ್ ಗೆ ಭಾರಿ ಸಮಸ್ಯೆ ಪತ್ತೆಯಾಗಿತ್ತು. ಆರೋಗ್ಯದ ದೃಷ್ಟಿಯಿಂದ ಇದೀಗ ಸರ್ಜರಿ ಮಾಡಲು ನಿರ್ಧಾರ ಮಾಡಲಾಗಿದೆ. ನಟ ದರ್ಶನ್ ಗೆ ಸರ್ಜಿರಿ ಬಹುತೇಕ ಫಿಕ್ಸ್ ಆದಂತೆ ಆಗಿದೆ. ಆಸ್ಪತ್ರೆಯಲ್ಲಿ ದರ್ಶನ್ ಚಿಕಿತ್ಸೆ ಪ್ಲ್ಯಾನ್ ಚೇಂಜ್ ಆಗಿದೆ. ಫಿಜಿಯೋಥೆರಪಿ ಬದಲಿಗೆ ಸರ್ಜರಿಗೆ ದರ್ಶನ್ ಮನಸ್ಸು ಮಾಡಿದ್ದಾರೆ. ಎರಡು ದಿನದಲ್ಲಿ…

Read More

ರಾಮನಗರ : ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಇಂದು ಮೈಸೂರು ಲೋಕಾಯುಕ್ತ ಕಚೇರಿಯಲ್ಲಿ ಸಿಎಂ ಸಿದ್ದರಾಮಯ್ಯ 2 ಗಂಟೆ ವಿಚಾರಣೆ ಎದುರಿಸಿದ್ದರು.ಈ ವೇಳೆ ನಗುಮುಖದಿಂದಲೇ ಸಿಎಂ ಸಿದ್ದರಾಮಯ್ಯ ಕಚೇರಿಯಿಂದ ಹೊರ ಬಂದಿದ್ದಾರೆ. ಬೆಳಿಗ್ಗೆ 10 ಲೋಕಾಯುಕ್ತ ಕಚೇರಿಗೆ ಸಿಎಂ ಸಿದ್ದರಾಮಯ್ಯ ಆಗಮಿಸಿದ್ದಾರೆ. ಸತತ 2 ಗಂಟೆಗಳ ಕಾಲ ವಿಚಾರಣೆ ಎದುರಿಸಿ ಮಧ್ಯಾಹ್ನ 12 ಗಂಟೆಗೆ ಲೋಕಾಯುಕ್ತ ಕಚೇರಿಯಿಂದ ವಾಪಸ್ ತೆರಳಿದ್ದಾರೆ. ಲೋಕಾಯುಕ್ತ ವಿಚಾರಣೆ ಎದುರಿಸಿದ ಬಳಿಕ ಸಿಎಂ ಸಿದ್ದರಾಮಯ್ಯ ನೇರವಾಗಿ ಚನ್ನಪಟ್ಟಣ ಕ್ಷೇತ್ರಕ್ಕೆ ತೆರಳಿದ್ದಾರೆ, ಚನ್ನಪಟ್ಟಣದ ಬೇಗೂರಿಗೆ ಆಗಮಿಸಿದಮದ್ದು, ಸಿಪಿ ಯೋಗೇಶ್ವರ್ ಪರ ಮತಯಾಚಿಸಲಿರುವ ಸಿಎಂ ಸಿದ್ದರಾಮಯ್ಯ, ಚನ್ನಪಟ್ಟಣ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಸಿಪಿ ಯೋಗೇಶ್ವರ್ ಪರವಾಗಿ ಅವರು ಮತಯಾಚನೆ ಮಾಡಲಿದ್ದಾರೆ. ಲೋಕಾಯುಕ್ತ ಕಚೇರಿಯಲ್ಲಿ ಸತತವಾಗಿ 2 ಗಂಟೆಗಳ ಕಾಲ ಲೋಕಾಯುಕ್ತ ಅಧಿಕಾರಿಗಳು ಕೇಳಿದ ಪ್ರತಿಯೊಂದು ಪ್ರಶ್ನೆಗೂ ಸಿಎಂ ಸಿದ್ದರಾಮಯ್ಯ ಯಾವುದೇ ಭಯವಿಲ್ಲದೆ ಉತ್ತರಿಸಿದ್ದಾರೆ. ವಿಚಾರಣೆ ಅಂತ್ಯವಾದ ಬಳಿಕ ನಗುಮುಖದಿಂದಲೇ ಅವರು ಕಚೇರಿಯಿಂದ ಹೊರಗಡೆ ಆಗಮಿಸಿದ್ದಾರೆ. ನಂತರ ಅಲ್ಲಿಂದ ನೇರವಾಗಿ ರಾಮನಗರ ಜಿಲ್ಲೆಯ ಚನ್ನಪಟ್ಟಣಕ್ಕೆ…

Read More

ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಇಂದು ಮೈಸೂರು ಲೋಕಾಯುಕ್ತ ಕಚೇರಿಯಲ್ಲಿ ಸಿಎಂ ಸಿದ್ದರಾಮಯ್ಯ 2 ಗಂಟೆ ವಿಚಾರಣೆ ಎದುರಿಸಿದ್ದರು.ಈ ವೇಳೆ ನಗುಮುಖದಿಂದಲೇ ಸಿಎಂ ಸಿದ್ದರಾಮಯ್ಯ ಕಚೇರಿಯಿಂದ ಹೊರ ಬಂದಿದ್ದಾರೆ. ಬೆಳಿಗ್ಗೆ 10 ಲೋಕಾಯುಕ್ತ ಕಚೇರಿಗೆ ಸಿಎಂ ಸಿದ್ದರಾಮಯ್ಯ ಆಗಮಿಸಿದ್ದಾರೆ. ಸತತ 2 ಗಂಟೆಗಳ ಕಾಲ ವಿಚಾರಣೆ ಎದುರಿಸಿ ಮಧ್ಯಾಹ್ನ 12 ಗಂಟೆಗೆ ಲೋಕಾಯುಕ್ತ ಕಚೇರಿಯಿಂದ ವಾಪಸ್ ತೆರಳಿದ್ದಾರೆ. ವಿಚಾರಣೆ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಮತ್ತೆ ವಿಚಾರಣೆಗೆ ಬರಲು ಲೋಕಾಯುಕ್ತ ಅಧಿಕಾರಿಗಳು ಹೇಳಿಲ್ಲ.ಕಾನೂನು ಪ್ರಕಾರವೇ ನಿವೇಶನ ಪಡೆದಿದ್ದೇನೆ. ಬಿಜೆಪಿ, ಜೆಡಿಎಸ್​ ನನ್ನ ವಿರುದ್ಧ ಸುಳ್ಳು ಆರೋಪ ಮಾಡಿವೆ. ಲೋಕಾಯುಕ್ತ ಅಧಿಕಾರಿಗಳು ಕೇಳಿದ ಎಲ್ಲಾ ಪ್ರಶ್ನೆಗೆ ಉತ್ತರಿಸಿದ್ದೇನೆ ಎಂದು ಇದೆ ವೇಳೆ ತಿಳಿಸಿದರು. ಇನ್ನು, ಮುಡಾ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಲು ಬಿಜೆಪಿಯವರು ಆಗ್ರಹಿಸುತ್ತಿರುವ ವಿಚಾರವಾಗಿ ಮಾತನಾಡಿದ ಅವರು, ಬಿಜೆಪಿಯವರು ಯಾವುದಾದರೂ ಕೇಸ್​ ಸಿಬಿಐಗೆ ಕೊಟ್ಟಿದ್ದಾರಾ? ಲೋಕಾಯುಕ್ತ ಸ್ವತಂತ್ರವಾಗಿ ತನಿಖೆ ಮಾಡುತ್ತಿರುವ ಸಂಸ್ಥೆ. ಲೋಕಾಯುಕ್ತ ಅಧಿಕಾರಿಗಳು ಕೇಳಿದ ಎಲ್ಲ…

Read More

ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೈಸೂರಿನ ಲೋಕಾಯುಕ್ತ ಕಚೇರಿಗೆ ಹಾಜರಾಗಿ ಲೋಕಾಯುಕ್ತ ಅಧಿಕಾರಿಗಳ ವಿಚಾರಣೆ ಎದುರಿಸಿದ್ದರು. ಈ ವಿಚಾರವಾಗಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಮುಖ್ಯಮಂತ್ರಿಗಳು ಕಾನೂನಿಗೆ ಗೌರವ ನೀಡಿ ಲೋಕಾಯುಕ್ತ ವಿಚಾರಣೆ ಎದುರಿಸಿದ್ದಾರೆ ಎಂದು ತಿಳಿಸಿದರು. ಬೆಂಗಳೂರಿನಲ್ಲಿಮಾಧ್ಯಮಗಳೊಂದಿಗೆ ಈ ವಿಚಾರವಾಗಿ ಮಾತನಾಡಿದ ಅವರು, ಡಿಸಿಎಂ ಡಿಕೆ ಶಿವಕುಮಾರ್ ಸಿಎಂ ಸಿದ್ದರಾಮಯ್ಯ ಕಾನೂನಿಗೆ ಗೌರವ ಕೊಟ್ಟಿದ್ದಾರೆ.ಕಾನೂನಿಗೆ ಗೌರವ ಕೊಟ್ಟು ವಿಚಾರಣೆ ಎದುರಿಸಿದ್ದಾರೆ. ನಾವು ಒಂದು ವಾರ ವಿನಾಯಿತಿ ಕೇಳಬಹುದಿತ್ತು ಆದರೆ ಅಧಿಕಾರದಲ್ಲಿ ಇದ್ದುಕೊಂಡು ಕಾನೂನು ಗೌರವಿಸಿದ್ದಾರೆ ಎಂದು ತಿಳಿಸಿದರು. ಸಚಿವ ಆರ್ ಬಿ ತಿಮ್ಮಾಪುರ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಿದ ವಿಚಾರವಾಗಿ, ಅಧಿಕಾರದಲ್ಲಿ ಇದ್ದಾಗ ಏನು ಬೇಕಾದರೂ ದೂರು ಕೊಡಬಹುದು. ಈ ಹಿಂದೆ ಇದೇ ರೀತಿ ನೂರಾರು ದೂರುಗಳು ಬಂದಿತ್ತು. ಈಗ ಸ್ಪೆಷಲ್ ಆಗಿ ಹೊರಟಿದ್ದಾರೆ. ರಾಜಕೀಯದ ಬಣ್ಣ ಬಳಿಯುತ್ತಿದ್ದಾರೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಕಿಡಿ ಕಾರಿದರು.

Read More

ಬೆಂಗಳೂರು : ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಅವರ ವಿರುದ್ಧ ಡಿನೋಟಿಫಿಕೇಶನ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಂದು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಅವರ ವಿಚಾರಣೆಗೆ ಹಾಜರಾಗಬೇಕಿತ್ತು. ಚೆನ್ನಪಟ್ಟಣ ಉಪಚುನಾವಣೆ ಹಿನ್ನೆಲೆಯಲ್ಲಿ ಅವರು ಚುನಾವಣೆಯಲ್ಲಿ ಭಾಗಿಯಾಗಿದ್ದರಿಂದ ವಿಚಾರಣೆಗೆ ಗೈರಾಗಿದ್ದಾರೆ. ಇದರಿಂದಾಗಿ ಕೋರ್ಟ್ ಜಡ್ಜ್ ಹೆಚ್ ಡಿ ಕುಮಾರಸ್ವಾಮಿ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ. ಹೌದು ಇಂದು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಕೇಂದ್ರ ಸಚಿವ ಹೆಚ್‍ಡಿ ಕುಮಾರಸ್ವಾಮಿ ವಿರುದ್ಧದ ಡಿ ನೋಟಿಫಿಕೇಶನ್ ಪ್ರಕರಣದ ಕುರಿತು ವಿಚಾರಣೆ ನಡೆಯಿತು.ಈ ವೇಳೆ ಪದೇ ಪದೇ ನೀವು ಟೈಮ್ ಕೇಳುತ್ತಿದ್ದೀರಿ. ಮುಂದಿನ ವಿಚಾರಣೆ ವೇಳೆ ಬರುತ್ತಾರೆ ಎಂದು ಹೇಳುತ್ತೀರಿ ಎಂದು ಜಡ್ಜ್ ಅಸಮಾಧಾನ ಹೊರಹಾಕಿದ್ದಾರೆ. ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಇಂದು ವಿಚಾರಣೆ ನಡೆದಿತ್ತು. ಚುನಾವಣೆ ಹಿನ್ನೆಲೆಯಲ್ಲಿ ವಿಚಾರಣೆಗೆ ಗೈರಾಗಿದ್ದಾರೆ. ವಿನಾಯಿತಿ ನೀಡುವಂತೆ ಹೆಚ್ ಡಿ ಕುಮಾರಸ್ವಾಮಿ ಅವರ ಪರ ವಕೀಲರು ಕೋರ್ಟಿಗೆ ಮನವಿ ಮಾಡಿದ್ದಾರೆ. ಎಷ್ಟು ಸಲ ನಿಮಗೆ ಟೈಮ್ ಕೊಡುವುದು? ಪದೇಪದೇ ನೀವು ಟೈಮ್…

Read More

ಬೆಂಗಳೂರು : ವಕ್ಫ್ ವಿವಾದ ವಿಚಾರವಾಗಿ ಇದೀಗ ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ ನಡೆಸುತ್ತಿದ್ದು, ಇದರ ಮಧ್ಯ ಸಚಿವ ಜಮೀರ್ ಅಹ್ಮದ್ ಖಾನ್ ವಿರುದ್ಧ ಕಾಂಗ್ರೆಸ್ ಪಕ್ಷದ ಹಲವು ಶಾಸಕರು, ಪದಾಧಿಕಾರಿಗಳು ಆಕ್ರೋಶಗೊಂಡಿದ್ದು AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಈ ಕುರಿತು ದೂರು ನೀಡಿದ್ದಾರೆ.ಕಾಂಗ್ರೆಸ್ ಶಾಸಕರು ಬರೆದಿರವುದು ಎನ್ನಲಾದ ಪತ್ರ ಪ್ರತಿಯೊಂದು ಸದ್ಯ ವಾಟ್ಸ್​ಆ್ಯಪ್ ಗ್ರೂಪ್​ಗಳಲ್ಲಿ ಹರಿದಾಡುತ್ತಿದೆ. ಹೌದು ವಕ್ಫ್​​ ವಿಚಾರದಿಂದ ಚುನಾವಣೆ ಹೊಸ್ತಿಲಲ್ಲಿ ನಾವೇ ರಾಜಕೀಯ ಮಾಡಲು ಅವಕಾಶ ಮಾಡಿಕೊಟ್ಟಂತಾಗಿದೆ ಕಾಂಗ್ರೆಸ್ ಶಾಸಕರು ಬೇಸರ ವ್ಯಕ್ತಪಡಿಸಿದ್ದಾರೆ. ಅಲ್ಲದೆ, ಈಗಿನ ಬೆಳವಣಿಗೆಗಳಿಗೆಲ್ಲ ಜಮೀರ್ ಅಹ್ಮದ್ ಸೂಚನೆಯೇ ಕಾರಣ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಹಾಗಾಗಿ ಸಚಿವ ಜಮೀರ್ ಅಹ್ಮದ್ ಖಾನ್ ಅವರಿಗೆ ಅನಗತ್ಯ ಹೇಳಿಕೆ ನೀಡದಂತೆ ಪತ್ರ ಬರೆದಿದ್ದಾರೆ. ಪತ್ರದಲ್ಲೇನಿದೆ? ಜಮೀರ್ ಅಹ್ಮದ್ ಪದೇ ಪದೇ ಸರ್ಕಾರಕ್ಕೆ, ಪಕ್ಷಕ್ಕೆ ಮುಜುಗರ ಉಂಟು ಮಾಡುತ್ತಿದ್ದಾರೆ. ಅನಗತ್ಯ ಹೇಳಿಕೆಗಳನ್ನು ನೀಡಿ ಪಕ್ಷಕ್ಕೆ, ಸರ್ಕಾರದ ವರ್ಚಸ್ಸಿಗೆ ತೀವ್ರ ಹಾನಿ ಮಾಡುತ್ತಿದ್ದಾರೆ. ಶಿಗ್ಗಾವಿ ಉಪಚುನಾವಣೆ ಅಭ್ಯರ್ಥಿ ವಿಷಯವಾಗಿಯೂ ಅನಗತ್ಯ…

Read More

ಹಾವೇರಿ : ನನ್ನ 40 ವರ್ಷದ ರಾಜಕೀಯ ಜೀವನದಲ್ಲಿ ಇದುವರೆಗೂ ನನ್ನ ಮೇಲೆ ಯಾವುದೇ ಕಪ್ಪು ಚುಕ್ಕೆ ಇಲ್ಲ. ಇದುವರೆಗೂ ನಾನು 15 ಬಾರಿ ಬಜೆಟ್ ಮಂಡನೆ ಮಾಡಿದ್ದೇನೆ. ಮುಂದೆ ಎಷ್ಟು ಬಾರಿ ಬಜೆಟ್ ಮಂಡಿಸುತ್ತಾರೋ ಇಲ್ಲವೋ ಗೊತ್ತಿಲ್ಲ. ಎಂದು ಕುರುಬ ಸಮುದಾಯ ಮುಖಂಡರ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದರು. ಹಾವೇರಿ ಜಿಲ್ಲೆಯ ಶಿಗ್ಗಾವಿ ತಾಲೂಕಿನ ಗಂಗೀಬಾವಿ ಬಳಿ ಕುರುಬ ಸಮುದಾಯದ ಸಭೆ ನಡೆಯುತ್ತಿದ್ದು ನನ್ನ ಮೇಲೆ ಯಾವುದೇ ಕಪ್ಪು ಚುಕ್ಕೆ ಇಲ್ಲ ನಾನು ಅಪ್ರಾಮಾಣೀಕನಾಗಿದ್ದರೆ ಕೋಟಿಗಟ್ಟಲೆ ಸಂಪಾದಿಸಬಹುದಿತ್ತು. ಆದರೆ ನಾನು ಆ ಕೆಲಸ ಮಾಡಿಲ್ಲ. ಇವತ್ತಿನವರೆಗೂ ನನಗೆ ಮೈಸೂರಿನಲ್ಲಿ ಒಂದು ಸ್ವಂತ ಮನೆ ಇಲ್ಲ ಎಂದು ಅವರು ತಿಳಿಸಿದರು. ಅಧಿಕಾರದಿಂದ ಇಳಿಸಬೇಕು ಅವಮಾನ ಮಾಡಬೇಕು ಎಂದು ಹುನ್ನಾರ ನಡೆಸಿದ್ದಾರೆ. ಇದಕ್ಕೆ ಬಿಜೆಪಿ ಸಂಸದ ಬಸವರಾಜ್ ಬೊಮ್ಮಾಯಿ ಕೂಡ ಕೈಜೋಡಿಸಿದ್ದಾರೆ.ಬಿಜೆಪಿ ನಾಯಕರಿಗೆ ಎಚ್ ಡಿ ಕುಮಾರಸ್ವಾಮಿ, ಬಿಎಸ್ ಯಡಿಯೂರಪ್ಪ, ಎಚ್ ಡಿ ದೇವೇಗೌಡರ ಮಕ್ಕಳು ಹಾಗೂ ಆರ್ ಅಶೋಕ್ ಎಲ್ಲರೂ…

Read More

ಬೆಳಗಾವಿ : ಇಂದು ಬೆಳಗಾವಿಯ ತಹಶೀಲ್ದಾರ್ ಕಚೇರಿಯಲ್ಲಿ SDA ನೌಕರ ರುದ್ರಣ್ಣ ಯಡವಣ್ಣನವರ ಎನ್ನುವವರು ಮೇಲಾಧಿಕಾರಿಗಳ ಕಿರುಕುಳದಿಂದ ಬೇಸತ್ತು ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಅವರು ಆತ್ಮಹತ್ಯೆಗೆ ಮುನ್ನ ಬರೆದ ತೋಟದಲ್ಲಿ ಸಚಿವ ಲಕ್ಷ್ಮಿ ಹೆಬ್ಬಾಳ್ಕರ್ ಆಪ್ತನ ಹೆಸರು ಉಲ್ಲೇಖಿಸಿದ್ದಾರೆ. ಹೌದು, ಬೆಳಗಾವಿ ತಹಶಿಲ್ದಾರ್ ಕಚೇರಿಯಲ್ಲಿ ಎಫ್‌ಡಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಬೆಳಗಾವಿ ರಿಸಾಲ್ದಾರ್ ಗಲ್ಲಿಯಲ್ಲಿರುವ ತಹಶಿಲ್ದಾರ್ ಆಫೀಸ್‌ನಲ್ಲಿ ಘಟನೆ ನಡೆದಿದೆ. ತಹಶಿಲ್ದಾರ್ ಕಚೇರಿಯ ಪ್ರಥಮ ದರ್ಜೆ ಸಹಾಯಕ ರುದ್ರಣ್ಣ ಯಡವಣ್ಣನವರ ಆತ್ಮಹತ್ಯೆಗೆ ಶರಣಾದ ಸರ್ಕಾರಿ ನೌಕರನಾಗಿದ್ದಾರೆ. ತಹಶೀಲ್ದಾರ್ ಬಸವರಾಜ ನಾಗರಾಳ ಕಚೇರಿಯಲ್ಲಿಯೇ ನೇಣುಬಿಗಿದುಕೊಂಡಿದ್ದಾರೆ. ಖಡೇಬಜಾರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ. ಆತ್ಮಹತ್ಯೆಗೂ ಮುನ್ನ ವಾಟ್ಸಪ್ ಗ್ರೂಪ್‌ಲ್ಲಿ ಸಂದೇಶ ರವಾನಿಸಿದ್ದ ರುದ್ರಣ್ಣ. ಬೆಳಗಾವಿ ತಹಶಿಲ್ದಾರ್ ಕಚೇರಿ ಸಿಬ್ಬಂದಿಯ ವಾಟ್ಸಪ್ ಗ್ರೂಪಲ್ಲಿ ಸಂದೇಶ ರವಾನೆ. ನಾನು ಆತ್ಮಹತ್ಯೆಗೆ ಶರಣಾಗುವುದಾಗಿ ಗ್ರೂಪ್‌ನಲ್ಲಿ ಮೆಸೆಜ್ ಮಾಡಿದ್ದರು. ನನ್ನ ಸಾವಿಗೆ ತಹಶೀಲ್ದಾರ್ ಬಸವರಾಜ್ ನಾಗರಾಳ ಹಾಗೂ ಸಚಿವರ ಆಪ್ತ ಸಹಾಯಕ ಸೋಮು ಅವರೇ ಕಾರಣ. ಇನ್ನು…

Read More

ಬೆಂಗಳೂರು : ಇತ್ತೀಚಿಗೆ ಬೆಂಗಳೂರಿನ ನಮ್ಮ ಮೆಟ್ರೋ ಪ್ರಯಾಣಿಕರಿಗೆ BMRCL ಪ್ರಯಾಣದ ದರ ಹೆಚ್ಚಿಸುವ ಕುರಿತಂತೆ ಸಾರ್ವಜನಿಕರಿಂದ ಸಲಹೆ ಪಡೆಯಲು ಸಮಿತಿ ರಚಿಸಿತ್ತು. ಇದೀಗ ಬಿಎಂಆರ್‌ಸಿಎಲ್ ಮುಂದಿನ ವರ್ಷ ಜನವರಿ ತಿಂಗಳನಿಂದ ಮೆಟ್ರೋ ಪ್ರಯಾಣದ ಟಿಕೆಟ್ ದರದಲ್ಲಿ ಶೇ.20ರಷ್ಟು ಹೆಚ್ಚಳ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ. ಹೌದು ‘ದಿ ಫೇರ್‌ ಪಿಕ್ಸೇಷನ್‌ ಕಮಿಟಿ’ (ಎಫ್‌ಎಫ್‌ಸಿ) ಎಂಬ ಸಮಿತಿ ರಚಿಸಲಾಗಿತ್ತು. ಇದೊಂದು ಸ್ವತಂತ್ರ ಕಮಿಟಿಯಾಗಿದೆ. ಪ್ರಯಾಣಿಕರ ಸಲಹೆ ಪಡೆದು ಟಿಕೆಟ್ ದರ ಏರಿಕೆಗೆ ಕಮಿಟಿ ಮುಂದಾಗಿದೆ. ಅಕ್ಟೋಬರ್ 21ರೊಳಗೆ ಪ್ರಯಾಣಿಕರು ತಮ್ಮ ಅಭಿಪ್ರಾಯ ತಿಳಿಸಲು ಕಾಲಾವಕಾಶ ನೀಡಲಾಗಿತ್ತು. ಬೆಳಕಿನ ದೀಪಾವಳಿ ಹಬ್ಬ ಮುಗಿಯುತ್ತಿದ್ದಂತೆ ಮೆಟ್ರೋ ಪ್ರಯಾಣಿಕರಿಗೆ ದರ ಏರಿಕೆಯ ಬಿಸಿ ತಟ್ಟಲಿದೆ. ದರ ಪರಿಷ್ಕರಣೆ ಸಂಬಂಧ ಈಗಾಗಲೇ ಸಾರ್ವಜನಿಕರಿಂದ ಸಲಹೆ ಸ್ವೀಕಾರ ಮಾಡಲಾಗಿದೆ.ಈಗಾಗಲೇ ಹಲವು ಬಾರಿ‌ ಮೆಟ್ರೋ ದರ ಏರಿಕೆ ಬಗ್ಗೆ ಬಿಎಂಆರ್ಸಿಎಲ್ ಪ್ರಸ್ತಾಪ ಮಾಡಿತ್ತು. ಆದರೆ ಕಳೆದ ಹಲವು ವರ್ಷಗಳಿಂದ ದರ ಏರಿಕೆಯನ್ನು ಮಾಡಿರಲಿಲ್ಲ. ಸದ್ಯ 20% ಟಿಕೆಟ್ ದರ ಏರಿಕೆ…

Read More