Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ರಾಜ್ಯ ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಮಿತಿ ಮೀರಿದೆ. ಹೀಗಾಗಿ ಸ್ವಚ್ಚ ಅಬಕಾರಿ ಅಭಿಯಾನ ಘೋಷಣೆ ಅಡಿ ಹೋರಾಟ ಮಾಡಲು ಮದ್ಯದಂಗಡಿ ಮಾಲೀಕರ ಮುಷ್ಕರ ನಡೆಸಲು ಸಿದ್ದತೆ ನಡೆಸಿದ್ದು, ಇದೆ ನವೆಂಬರ್ 20 ರಂದು ರಾಜ್ಯವ್ಯಾಪ್ತಿ ಮದ್ಯ ಮಾರಾಟ ಸ್ಥಗಿತಗೊಳಿಸಿ ಮದ್ಯದಂಗಡಿ ಮಾಲೀಕರು ಪ್ರತಿಭಟನೆ ನಡೆಸಲಿದ್ದಾರೆ. ಹೌದು ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅಲ್ಲದೆ ರಾಜ್ಯ ಅಬಕಾರಿ ಇಲಾಖೆಯಲ್ಲಿ ವಿಪರೀತ ಭ್ರಷ್ಟಾಚಾರದಿಂದ ಮದ್ಯದ ಅಂಗಡಿ ಮಾಲೀಕರು ಬೇಸತ್ತು ಹೋಗಿದ್ದು, ಹಾಗಾಗಿ ರಾಜ್ಯದಲ್ಲಿ ನವೆಂಬರ್ 20 ರಂದು ಒಂದು ದಿನ ಮದ್ಯದಂಗಡಿ ಬಂದ್ ಆಗಲಿದೆ. ಇದರಿಂದ ಮದ್ಯಪ್ರಿಯರಿಗೆ ಅವತ್ತಿನ ಒಂದು ದಿನ ಮಧ್ಯ ಸಿಗುವುದು ಬಹುತೇಕ ಡೌಟ್ ಎಂದು ಹೇಳಲಾಗುತ್ತಿದೆ. ಅಬಕಾರಿ ಇಲಾಖೆಯಲ್ಲಿ ಲೈಸೆನ್ಸ್ ನವೀಕರಣ, ಸಿಎಲ್ 7 ಲೈಸೆನ್ಸ್ ಗೆ ಅನುಮತಿ ಹೆಸರಿನಲ್ಲಿ ಮದ್ಯದಂಗಡಿ ಮಾಲೀಕರಿಗೆ ಕಿರುಕುಳ ನೀಡುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಬೇಡಿಕೆಗಳ ಈಡೇರಿಕೆಗೆ ಅಬಕಾರಿ ಮಂತ್ರಿಗೆ ಮದ್ಯದಂಗಡಿ ಮಾಲೀಕರು ಮನವಿ ಮಾಡಿದ್ದರು. ಆದರೆ ಮದ್ಯದಂಗಡಿ ಮಾಲೀಕರ ಸಮಸ್ಯೆಗೆ…
ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ನಾಳೆ ಮೈಸೂರು ಲೋಕಾಯುಕ್ತ ಕಚೇರಿಗೆ ಸಿಎಂ ಸಿದ್ದರಾಮಯ್ಯ ವಿಚಾರಣೆಗೆ ಹಾಜರಾಗಲಿದ್ದಾರೆ. ಈ ವಿಚಾರವಾಗಿ ಮುಖ್ಯಮಂತ್ರಿಯಾಗಿ ಅವರು ವಿಚಾರಣೆಗೆ ಹಾಜರಾಗುತ್ತಾರೋ ಅಥವಾ ಆರೋಪಿಯಾಗಿ ವಿಚಾರಣೆಗೆ ಹಾಜರಾಗುತ್ತಾರೊ ನೋಡೋಣ ಅಲ್ಲದೆ ಖರ್ಗೆ ಡಿಸಿಎಂ ಅಡಿಕೆ ಶಿವಕುಮಾರ್ ಸಿಎಂ ರಾಜ ನಮಗೆ ಮುಹೂರ್ತ ಫಿಕ್ಸ್ ಮಾಡಿದ್ದಾರೆ ಎಂದು ಸ್ಪೋಟಕ ಹೇಳಿಕೆ ನೀಡಿದರು. ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಕಾಂಗ್ರೆಸ್ ಪಕ್ಷದ ವರಿಷ್ಠರೇ ಈ ಕುರಿತು ನಿರ್ಧಾರ ಮಾಡಿದ್ದು, ಮುಹೂರ್ತ ಸಮಯ ಎಲ್ಲವನ್ನು ನಿಗದಿ ಮಾಡಿದ್ದಾರೆ. ಹಾಗಾಗಿ ಸಿಎಂ ಸಿದ್ದರಾಮಯ್ಯ ಅವರು ಶೀಘ್ರದಲ್ಲಿ ರಾಜೀನಾಮೆ ನೀಡುವುದು ಶತಸಿದ್ಧ. ಬೇಜವಾಬ್ದಾರಿ ಮಂತ್ರಿ ಜಮೀರ್ ಅಹ್ಮದ್ ಇಟ್ಕೊಂಡು ಮಠ ಮಾನ್ಯ ರೈತರ ಜಮೀನು ಹೊಡೆಯುವ ಯತ್ನ ನಡೆಯುತ್ತಿದೆ. ಇದಕ್ಕೆ ಸಿಎಂ ಸಿದ್ದರಾಮಯ್ಯರ ಕುಮ್ಮಕ್ಕು ಸಹ ಇದೆ ಎಂದರು. ಸಿಎಂ ಸಿದ್ದರಾಮಯ್ಯ ಕುಟುಂಬವೇ ಎಂದು ಆರೋಪಿ ಸ್ಥಾನದಲ್ಲಿ ಇದೆ.ಸಿಎಂ ಸಿದ್ದರಾಮಯ್ಯ ಯಾವಾಗಲೋ ರಾಜೀನಾಮೆ ಕೊಡಬೇಕಿತ್ತು. ಸಿದ್ದರಾಮಯ್ಯ ರಾಜೀನಾಮೆ ಕೊಡುವುದು ಸಿದ್ಧ. 5 ವರ್ಷ ಸಿಎಂ…
ತುಮಕೂರು : ಜಮೀನು ಒತ್ತುವರಿ ತೆರವಿಗಾಗಿ ಆಗಮಿಸಿದ್ದ ವೇಳೆ ಪೊಲೀಸರು ಹಾಗೂ ವಕೀಲರ ನಡುವೆ ಗಲಾಟೆ ನಡೆದಿದ್ದು ಗಲಾಟೆ ವಿಕೋಪಕ್ಕೆ ತಿರುಗಿ ವಕೀಲರ ಮೇಲೆ ಪೊಲೀಸ್ ಅಧಿಕಾರಿ ಒಬ್ಬರು ಹಲ್ಲೆ ನಡೆಸಿರುವ ಘಟನೆ ತುಮಕೂರು ತಾಲೂಕಿನ ಹೊನ್ನೇನಹಳ್ಳಿ ಎಂಬ ಗ್ರಾಮದಲ್ಲಿ ನಡೆದಿದೆ. ಇದೀಗ ವಕೀಲರ ಮೇಲೆ ಹಲ್ಲಿ ಖಂಡಿಸಿ ತುಮಕೂರು ಜಿಲ್ಲೆಯಲ್ಲಿ ವಕೀಲರು ಪ್ರತಿಭಟನೆ ನಡೆಸುತ್ತಿದ್ದಾರೆ. ಹೌದು ತುಮಕೂರು ತಾಲೂಕಿನ ಹೊನ್ನೇನಹಳ್ಳಿ ಬಳಿ ಈ ಒಂದು ಗಲಾಟೆ ನಡೆದಿದೆ. ಒತ್ತುವರಿ ತೆರವಿಗೆ ಬಂದಿದ್ದ ರೈಲ್ವೆ ಇಲಾಖೆ ಸಿಬ್ಬಂದಿ, ವಕೀಲ ರವಿ ಅನ್ನುವವರ ಜಮೀನು ಒತ್ತುವರಿ ತೆರವಿಗೆ ಬಂದಿದ್ದರು. ನೋಟಿಸ್ ಹಾಗೂ ಪರಿಹಾರ ನೀಡದೆ ಒತ್ತುವರಿ ತೆರವಿಗೆ ಬಂದಿದ್ದರು. ಈ ವೇಳೆ ಜಮೀನು ಒತ್ತುವರಿ ತೆರವಿಗೆ ವಕೀಲ ರವಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈ ಸಂದರ್ಭದಲ್ಲಿ ತುಮಕೂರು ಸಿಪಿಐ ದಿನೇಶ್ ಹಾಗೂ ವಕೀಲ ರವಿ ನಡುವೆ ಮಾತಿನ ಚಕಮಕಿ ಹಾಗೂ ನೂಕಾಟ, ತಳ್ಳಾಟ ನಡೆದಿದೆ. ಈ ಗಲಾಟೆ ನಡುವೆ ವಕೀಲ ರವಿಯ ಮೇಲೆ ಸಿಪಿಐ…
ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಇಂದು ಸಿಬಿಐ ತನಿಖೆ ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾ.ಎಂ ನಾಗಪ್ರಸನ್ನ ಅವರಿದ್ದ ಏಕ ಸದಸ್ಯ ಪೀಠವು, ವಿಚಾರಣೆಯನ್ನು ನವೆಂಬರ್ 26ಕ್ಕೆ ಮುಂದೂಡಿ ಅದೇಶಿಸಿದರು. ಈ ವೇಳೆ ಸಿಎಂ ಸಿದ್ದರಾಮಯ್ಯ ಹಾಗೂ ಇತರೆ ಆರೋಪಗಳಿಗೆ ಆಕ್ಷೇಪಣೆಗಳು ಸಲ್ಲಿಸುದಿದ್ದರೆ ಸಲ್ಲಿಸಿ ಎಂದು ಹೈಕೋರ್ಟ್ ನೋಟಿಸ್ ನೀಡಿದೆ. ವಿಚಾರಣೆ ಬಳಿಕ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ,ಮಲ್ಲಿಕಾರ್ಜುನ ಸ್ವಾಮಿ ಹಾಗೂ ದೇವರಾಜುಗೂ ಕೂಡ ಆಕ್ಷೇಪಣೆ ಸಲ್ಲಿಸಲು ಹೈಕೋರ್ಟ್ ನೋಟಿಸ್ ನೀಡಿದೆ. ಆಕ್ಷೇಪಣೆ ಸಲ್ಲಿಸುವದಿದ್ದರೆ ಸಲ್ಲಿಸಿ 10 ದಿನಗಳ ನಂತರ ಅರ್ಜಿಯ ವಿಚಾರಣೆ ಸೂಚನೆ ನೀಡಿದೆ. ಮುಡಾ ಕೇಸ್ನಲ್ಲಿ ಸಿಬಿಐ ತನಿಖೆಗೆ ಕೋರಿದ ಅರ್ಜಿಯ ವಿಚಾರಣೆ ಇಂದು ಹೈ ಕೋರ್ಟ್ ನಲ್ಲಿ ನಡೆಯಿತು. ನವೆಂಬರ್ 26ಕ್ಕೆ ಹೈಕೋರ್ಟ್ ಅರ್ಜಿ ವಿಚಾರಣೆ ಮುಂದೂಡಿತು. ರಾಜ್ಯ ಅಭಿಯೋಜಕ ಬಿ ಎನ್ ಜಗದೀಶ್ ಅವರು 2 ವಾರ ಕಾಲಾವಕಾಶ ಕೋರಿದ್ದರಿಂದ ವಿಚಾರಣೆಯನ್ನು ನವೆಂಬರ್ 26 ಕ್ಕೆ ಹೈಕೋರ್ಟ್ ಮುಂದೂಡಿದೆ. ಅಲ್ಲಿಯವರೆಗೆ ನಡೆಸಿದ ತನಿಖೆಯ…
ಬೆಂಗಳೂರು : ಮುಡಾ ಕೇಸ್ ನಲ್ಲಿ ಸಿಎಂ ಸಿದ್ದರಾಮಯ್ಯಗೆ ಇದಿಗ ಸಿಬಿಐ ತನಿಖೆ ಭೀತಿ ಎದುರಾಗಿತ್ತು. ದೂರುದಾರ ಸ್ನೇಹಮಯಿ ಕೃಷ್ಣ ಅವರು ಈ ಒಂದು ಪ್ರಕರಣ ಸಿಬಿಐ ತನಿಖೆಗೆ ಕೋರಿ ರಿಟ್ ಅರ್ಜಿ ಸಲ್ಲಿಸಿದ್ದರು. ಇಂದು ವಿಚಾರಣೆ ಕೈಗೆತ್ತಿಕೊಂಡ ವೇಳೆಯಲ್ಲಿ ರಾಜ್ಯ ಅಭಿಯೋಜಕ ಜಗದೀಶ್ ಕಾಲಾವಕಾಶ ಕೋರಿದ ಹಿನ್ನಲೆಯಲ್ಲಿ ನವೆಂಬರ್.26ಕ್ಕೆ ವಿಚಾರಣೆಯನ್ನು ಹೈಕೋರ್ಟ್ ಮುಂದೂಡಿಕೆ ಮಾಡಿದೆ. ಇಂದು ಸ್ನೇಹಮಯಿ ಕೃಷ್ಣ ಅವರು ಲೋಕಾಯುಕ್ತ ತನಿಖೆಯಲ್ಲಿ ನಂಬಿಕೆಯಿಲ್ಲ. ಸಿಬಿಐ ತನಿಖೆಗೆ ಆದೇಶಿಸುವಂತೆ ಕೇರಿ ಸಲ್ಲಿಸಿದ್ದಂತ ರಿಟ್ ಅರ್ಜಿಯನ್ನು ಹೈ ಕೋರ್ಟ್ ನಲ್ಲಿ ನ್ಯಾ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠದಲ್ಲಿ ವಿಚಾರಣೆ ನಡೆಯಿತು. ಈ ವೇಳೆಯಲ್ಲಿ ಹೈಕೋರ್ಟ್ ಗೆ ಈ ಪ್ರಕರಣ ಸಂಬಂಧ ವಾದಿಸಲು ಕಾಲಾವಕಾಶ ನೀಡುವಂತೆ ಸಿಎಂ ಸಿದ್ಧರಾಮಯ್ಯ ಪರ ವಕೀಲರು ಕೋರಿದರು. ಈ ಹಿನ್ನಲೆಯಲ್ಲಿ ಹೈಕೋರ್ಟ್ ವಿಚಾರಣೆಯನ್ನು2 ವಾರಗಳ ಕಾಲ ಅಂದರೆ ನ.26ಕ್ಕೆ ಮುಂದೂಡಿದೆ. ಅಂದಹಾಗೇ ಕಳೆದ ಸಪ್ಟೆಂಬರ್ 27ರಂದು ಸ್ನೇಹಮಯಿ ಕೃಷ್ಣ ಅವರು ಲೋಕಾಯುಕ್ತ ತನಿಖೆಯ ಮೇಲೆ ನಂಬಿಕೆ ಇಲ್ಲ…
ಕಾಸರಗೋಡು : ಎಡನೀರು ಸಂಸ್ಥಾನದ ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿಯವರ ಕಾರಿನ ಮೇಲೆ ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ. ಸ್ವಾಮೀಜಿಯವರ ಮೇಲಿನ ಹಲ್ಲೆಯನ್ನು ಖಂಡಿಸಿ, ಇದೀಗ ಹಿಂದೂ ಪರ ಸಂಘಟನೆಗಳು ಆಕ್ರೋಶ ಹೊರ ಹಾಕಿವೆ. ಸ್ವಾಮೀಜಿಗಳು ಕಾರ್ಯಕ್ರಮ ಮುಗಿಸಿ ಮನೆಗೆ ತೆರಳುತ್ತಿದ್ದಾಗ ದುಷ್ಕರ್ಮಿಗಳು ಅವರ ಕಾರಿನ ಮೇಲೆ ಅಟ್ಯಾಕ್ ಮಾಡಿದ್ದಾರೆ. ಸ್ವಾಮೀಜಿಗಳ ಮೇಲೆ ಹಲ್ಲೆಯನ್ನು ಹಿಂದೂಪರ ಸಂಘಟನೆಗಳು ಘಟನೆಯನ್ನು ಖಂಡಿಸಿದ್ದಾರೆ. ಬೋವಿಕಾನದಲ್ಲಿ ಪ್ರತಿಭಟನೆಗೆ ಹಿಂದೂ ಐಕ್ಯ ವೇದಿಕೆ ಕರೆ ನೀಡಿದೆ.ದಾಳಿಯ ಕುರಿತು ಸೂಕ್ತ ತನಿಖೆ ನಡೆಸುವಂತೆ ಒತ್ತಾಯಿಸಲಾಗಿದೆ ಸಚ್ಚಿದಾನಂದ ಭಾರತಿ ಶ್ರೀಗಳಿಗೆ ಹೆಚ್ಚಿನ ಭದ್ರತೆ ಒದಗಿಸುವಂತೆ ಮನವಿ ಮಾಡಲಾಗಿದೆ. ಸ್ವಾಮೀಜಿ ಮೇಲಿನ ದಾಳಿಗೆ ವ್ಯಾಪಕ ಖಂಡನೆ ವ್ಯಕ್ತವಾಗಿದ್ದು ದುಷ್ಕರ್ಮಿಗಳ ಮೇಲೆ ಕಠಿಣ ಕ್ರಮಕ್ಕೆ ಕೇರಳ ಸರ್ಕಾರವನ್ನು ಆಗ್ರಹಿಸಲಾಗಿದೆ. ಎಡನೀರು ಮಠದ ಶ್ರೀ ಸಚ್ಚಿದಾನಂದ ಭಾರತೀ ತೀರ್ಥ ಶ್ರೀಪಾದರ ವಾಹನಕ್ಕೆ ಕಾಸರಗೋಡು ಬೊವಿಕ್ಕಾನದಲ್ಲಿ ಸಮಾಜಘಾತುಕ ಶಕ್ತಿಗಳು ಅಡ್ಡಿಪಡಿಸಿ ಹಾನಿ ಮಾಡಿರುವುದನ್ನು ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಡಾ ಭರತ್ ಶೆಟ್ಟಿ ತೀವ್ರವಾಗಿ ಖಂಡಿಸಿದ್ದಾರೆ.
ಯಾದಗಿರಿ : ರಾಜ್ಯ ಶಿಕ್ಷಣ ಇಲಾಖೆ ಇದೀಗ ಮತ್ತೊಂದು ಎಡವಟ್ಟು ಮಾಡಿಕೊಂಡಿದ್ದು, ಯಾದಗಿರಿ ಜಿಲ್ಲೆಯ ಶಹಪುರ ತಾಲೂಕಿನ ರಸ್ತಾಪುರದ ಸರ್ಕಾರಿ ಶಾಲೆಯಲ್ಲಿ ಅತಿಥಿ ಶಿಕ್ಷಕನಾಗಿ ರೌಡಿಶೀಟರ್ ನೇಮಕಗೊಂಡಿದ್ದಾನೆ.ಆದರೂ ಕೂಡ ಶಿಕ್ಷಣ ಇಲಾಖೆ ಕಣ್ಮುಚ್ಚಿ ಕುಳಿತಿರುವುದು ವಿಪರ್ಯಾಸವೇ ಸರಿ. ಹೌದು ರೌಡಿಶೀಟರ್ ಸರ್ಕಾರಿ ಅತಿಥಿ ಶಿಕ್ಷಕನಾಗಿ ನೇಮಕಗೊಂಡಿದ್ದಾನೆ. ರೌಡಿಶೀಟರ್ ಅತಿಥಿ ಶಿಕ್ಷಕನಾಗಿದ್ದರು ಕೂಡ ಶಿಕ್ಷಣ ಇಲಾಖೆ ಕಣ್ಮುಚ್ಚಿ ಕುಳಿತಿದೆ. ರೌಡಿಶೀಟರ್ ಭಾಗಪ್ಪ ಸರ್ಕಾರಿ ಶಾಲೆಯ ಅತಿಥಿ ಶಿಕ್ಷಕನಾಗಿ ನೇಮಕವಾಗಿದ್ದಾನೆ. ಯಾದಗಿರಿ ಜಿಲ್ಲೆಯ ಶಹಪುರ ತಾಲೂಕಿನ ರಸ್ತಾಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ರೌಡಿಶೀಟರ್ ಭಾಗಪ್ಪ ಅತಿಥಿ ಶಿಕ್ಷಕನಾಗಿ ನೇಮಕಗೊಂಡಿದ್ದು, ಶಿಕ್ಷಣ ಇಲಾಖೆಯ ಮತ್ತೊಂದು ಎಡವಟ್ಟಿಗೆ ಕಾರಣವಾಗಿದೆ. ಅತಿಥಿ ಶಿಕ್ಷಕನಾಗಿ ನೇಮಕಗೊಂಡಿರುವ ಭಾಗಪ್ಪ ಹಿಂದಿ ಭಾಷೆಯ ಶಿಕ್ಷಕ. ಕಳೆದ 5 ವರ್ಷಗಳಿಂದ ಭಾಗಪ್ಪ ಅತಿಥಿ ಶಿಕ್ಷಕನಾಗಿ ಸೇವೆ ಸಲ್ಲಿಸುತ್ತಿದ್ದಾನೆ. 2017ರಲ್ಲಿ ಭಾಗಪ್ಪನ ವಿರುದ್ಧ ರೌಡಿ ಶೀಟ್ ಓಪನ್ ಆಗಿದೆ. ಭಾಗಪ್ಪನ ವಿರುದ್ಧ ರೌಡಿ ಶೀಟ್ ಓಪನ್ ಆದರೂ ಕೂಡ ಅತಿಥಿ ಶಿಕ್ಷಕನಾಗಿ ನೇಮಕವಾಗಿದ್ದಾನೆ. ಭಾಗಪ್ಪನ ಉಪಟಳಕ್ಕೆ…
ಉತ್ತರಪ್ರದೇಶ : ಕಳೆದ ಕೆಲವು ದಿನಗಳ ಹಿಂದೆ ಕೊಲ್ಕತ್ತಾದ ಟ್ರೈನಿ ವೈದ್ಯೆಯ ಮೇಲೆ ಅತ್ಯಾಚಾರ ನಡೆಸಿದ್ದು, ಅಲ್ಲದೆ ಭೀಕರವಾಗಿ ಕೊಲೆ ಮಾಡಿರುವ ಪ್ರಕರಣ ಇಡೀ ದೇಶದಲ್ಲಿ ಭಾರಿ ಸಂಚಲನ ಸೃಷ್ಟಿಸಿತ್ತು. ಇದೀಗ ಉತ್ತರ ಪ್ರದೇಶದ ಕಾನ್ಪುರದಲ್ಲಿ ಖಾಸಗಿ ಆಸ್ಪತ್ರೆ ನಿರ್ದೇಶಕ ಒಬ್ಬ ನರ್ಸ್ ಮೇಲೆ ಅತ್ಯಾಚಾರ ಎಸಗಿರುವ ಘಟನೆ ಬೆಳಕಿಗೆ ಬಂದಿದೆ. ಹೌದು ಉತ್ತರಪ್ರದೇಶದ ಕಾನ್ಪುರದಲ್ಲಿ ಖಾಸಗಿ ಆಸ್ಪತ್ರೆಯೊಂದರ ನಿರ್ದೇಶಕ 22 ವರ್ಷದ ನರ್ಸ್ ಮೇಲೆ ಅತ್ಯಾಚಾರವೆಸಗಿರುವ ಘಟನೆ ನಡೆದಿದೆ.ಕಳೆದೆರಡು ತಿಂಗಳುಗಳಿಂದ ಯುವತಿ ಕಲ್ಯಾಣಪುರದ ಖಾಸಗಿ ಆಸ್ಪತ್ರೆಯಲ್ಲಿ ನರ್ಸ್ ಆಗಿ ಕೆಲಸ ಮಾಡುತ್ತಿದ್ದಾರೆ. ಭಾನುವಾರ ಸಂಜೆ, ಆಸ್ಪತ್ರೆಯಲ್ಲಿ ನಿರ್ದೇಶಕ ಆಯೋಜಿಸಿದ್ದ ಪಾರ್ಟಿಯಲ್ಲಿ ನರ್ಸ್ ಪಾಲ್ಗೊಂಡಿದ್ದಳು. ಕೆಲಸದ ನೆಪದಲ್ಲಿ ಆಕೆಯನ್ನು ರಾತ್ರಿ ಸಮಯದಲ್ಲಿ ಆಸ್ಪತ್ರೆಯಲ್ಲಿ ಇರುವಂತೆ ನಿರ್ದೇಶಕ ಹೇಳಿದ್ದು, ಮಧ್ಯರಾತ್ರಿ ಆಕೆಯನ್ನು ಕೋಣೆಗೆ ಕರೆದು ಬಲವಂತವಾಗಿ ಒಳಗೆ ಎಳೆದುಕೊಂಡು ಹೋಗಿ ಬಾಗಿಲು ಹಾಕಿ ಅತ್ಯಾಚಾರವೆಸಗುವ ಮುನ್ನ ನರ್ಸ್‌ಗೆ ಅಮಲು ಬೆರೆಸಿದ ತಂಪು ಪಾನೀಯವನ್ನು ನೀಡಿ ಕೃತ್ಯವೆಸಗಿದ್ದಾನೆ ಎಂದು ತಿಳಿಸಿದ್ದಾರೆ. ಅತ್ಯಾಚಾರದ ಬಳಿಕ ಆಸ್ಪತ್ರೆಯ…
ಬೆಳಗಾವಿ : ವರ್ಗಾವಣೆಯಾಗಿದ್ದಕ್ಕೆ ಎಸ್ ಡಿ ಎ ನೌಕರರೊಬ್ಬರು ಬೆಳಗಾವಿಯ ತಹಶೀಲ್ದಾರ್ ಕಚೇರಿ ಕೊಠಡಿಯಲ್ಲಿ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಎಸ್‌ಡಿಎ ನೌಕರರನ್ನು ರುದ್ರಣ್ಣ ಯಡವನ್ನವರ (32) ಎಂದು ತಿಳಿದುಬಂದಿದೆ. ಕಳೆದ 12 ವರ್ಷಗಳಿಂದ ಬೆಳಗಾವಿ ತಹಶೀಲ್ದಾರ್ ಕಚೇರಿಯಲ್ಲಿ ಎಸ್ ಡಿ ಎ ನೌಕರರಾಗಿ ರುದ್ರಣ್ಣ ಕಾರ್ಯನಿರ್ವಹಿಸುತ್ತಿದ್ದರು. ನಿನ್ನೆಷ್ಟೇ ಅವರಿಗೆ ಬೆಳಗಾವಿ ಜಿಲ್ಲೆಯ ಸೌದತ್ತಿ ತಾಲೂಕು ತಹಶೀಲಾರ್ ಕಚೇರಿಗೆ ವರ್ಗಾವಣೆಯಾಗಿತ್ತು. ಈ ಹಿನ್ನೆಲೆಯಲ್ಲಿ ಬೆಳಗಾವಿಯ ತಹಶೀಲ್ದಾರ್ ಕೊಠಡಿಯಲ್ಲಿ ಎಸ್‌ಡಿಎ ಸಿಬ್ಬಂದಿ ಆತ್ಮಹತ್ಯೆ ರುದ್ರಣ್ಣ ಯಡವನ್ನವರ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಹೇಳಲಾಗುತ್ತಿದೆ. ಬೆಳಗಾವಿಯ ತಹಶೀಲ್ದಾರ್ ಆಗಿರುವಂತಹ ಬಸವರಾಜ್ ನಾಗರಾಳ ಕೊಠಡಿಯಲ್ಲಿ ನೇಣಿಗೆ ಶರಣಾಗಿದ್ದಾನೆ. ನಿನಯಷ್ಟೇ ಸೌದತ್ತಿ ತಹಸಿಲ್ದಾರ್ ಕಚೇರಿಗೆ ವರ್ಗಾವಣೆಯಾಗಿತ್ತು. ನಿನ್ನೆ ವರ್ಗಾವಣೆಗೊಂಡಿದ್ದ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಸಂಕಿಸಲಾಗಿದೆ. ಆತ್ಮಹತ್ಯೆ ಕುಡಿದಂತೆ ರುದ್ರಣ್ಣ ಕುಟುಂಬಸ್ಥರಿಗೆ ಈಗಾಗಲೇ ತಿಳಿಸಲಾಗಿದ್ದು. ಕುಟುಂಬಸ್ಥರಿಂದ ರುದ್ರಣ್ಣ ಕುರಿತು ಪೊಲೀಸರು ಇನ್ನಷ್ಟು ಮಾಹಿತಿ ಕಲೆಹಾಕಲಿದ್ದಾರೆ.
ಹುಬ್ಬಳ್ಳಿ : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ-ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಲೋಕಾಯುಕ್ತ ಅಧಿಕಾರಿಗಳು ನೋಟಿಸ್ ಜಾರಿ ಮಾಡಿದ್ದಾರೆ. ವಿವಿಚಾರವಾಗಿ ಸಿಎಂ ಸಿದ್ದರಾಮಯ್ಯ ಅವರು ಹುಬ್ಬಳ್ಳಿಯಲ್ಲಿ ನಾಳೆ ಬೆಳಿಗ್ಗೆ 10 ಗಂಟೆಗೆ ಲೋಕಾಯುಕ್ತ ವಿಚಾರಣೆಗೆ ಹಾಜರಾಗುತ್ತೇನೆ ಎಂದು ತಿಳಿಸಿದರು. ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಎ1 ಆರೋಪಿಯಾಗಿರುವ ಸಿಎಂ ಸಿದ್ದರಾಮಯ್ಯ ಅವರಿಗೆ ಮೈಸೂರು ಲೋಕಾಯುಕ್ತ ಅಧಿಕಾರಿಗಳು ನೋಟಿಸ್ ಜಾರಿ ಮಾಡಿದ್ದು, ನವೆಂಬರ್ 6ರಂದು ಬೆಳಿಗ್ಗೆ 10 ಗಂಟೆಗೆ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದಾರೆ. ನ.6ರಂದು ಮೈಸೂರು ಲೋಕಾಯುಕ್ತ ಕಚೇರಿಗೆ ವಿಚಾರಣೆಗೆ ಹಾಜರಾಗುವಂತೆ ತಿಳಿಸಲಾಗಿದೆ. ಈ ಮೂಲಕ 40 ವರ್ಷಗಳ ಸಿದ್ದರಾಮಯ್ಯ ಅವರ ರಾಜಕೀಯ ಜೀವನದಲ್ಲಿ ಮೊದಲ ಬಾರಿಗೆ ವಿಚಾರಣೆಗೆ ನೋಟಿಸ್ ನೀಡಲಾಗಿದೆ. ಹಾಗಾಗಿ ನಾಳೆ ಬೆಳಿಗ್ಗೆ 10 ಗಂಟೆಗೆ ಮೈಸೂರು ಲೋಕಾಯುಕ್ತ ಕಚೇರಿಗೆ ವಿಚಾರಣೆಗೆ ಹಾಜರಾಗುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.













