Subscribe to Updates
Get the latest creative news from FooBar about art, design and business.
Author: kannadanewsnow07
ಚಿಕ್ಕಮಗಳೂರು: ಆಟ ಆಡೋ ಮಕ್ಕಳೆಲ್ಲ ಬಾರ್ಗೆ ಹೋಗ್ತಿದ್ದಾರೆ ಸರ್. ಬದುಕಿ-ಬಾಳಬೇಕಾದ ಮಕ್ಕಳೆಲ್ಲಾ ಕುಡಿದು ಸಾಯ್ತಿದ್ದಾರೆ. ದಯವಿಟ್ಟು ನಮ್ಮೂರಲ್ಲಿರೋ ಬಾರ್ ಬಂದ್ ಮಾಡ್ಸಿ ಅಂಥ ರಾಜ್ಯ ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್ ಅವರಿಗೆ ಮನವಿ ಮಾಡಿದ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. ಮೆಡಿಕಲ್ ಕಾಲೇಜಿಗೆ ಸಚಿವರು ಶನಿವಾರ ಭೇಟಿ ನೀಡಿ ಪರಿಶೀಲನೆ ನಡೆಸಿದ ವೇಳೆಯಲ್ಲಿ ಮಹಿಳೆಯೊಬ್ಬರು ಅವರ ಬಳಿ ಈ ಮನವಿ ಮಾಡಿದ್ದಾರೆ. ನಮ್ಮೂರಲ್ಲಿ ಕದ್ದು- ಮುಚ್ಚಿ ಎಣ್ಣೆ ಮಾರಾಟ ಮಾಡುತ್ತಿದ್ದಾರೆ. ಇದರಿಂದ ತುಂಬಾ ಕಷ್ಟವಾಗುತ್ತಿದೆ. ಚಿಕ್ಕ ವಯಸ್ಸಿನಲ್ಲೇ ಮಕ್ಕಳು ಕುಡಿದು ಸತ್ತು ಹೋಗ್ತಿದ್ದಾರೆ ಎಂದು ಮಹಿಳೆ ಕೈ ಮುಗಿದು ಸಚಿವರ ಬಳಿ ಹೇಳಿಕೊಂಡ ಘಟನೆ ನಡೆದಿದೆ. ನಮ್ಮ ಊರಿಗೆ ಬಾರ್ & ರೆಸ್ಟೋರೆಂಟ್ ಬೇಡ ಎಂದು ಡಿಸಿ ಕಚೇರಿ ಮುಂದೆ ಪ್ರತಿಭಟನೆ ಮಾಡಿ ಮನವಿ ಮಾಡಲಾಗಿದೆ. ಇಷ್ಟಾದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಸಚಿವರ ಮುಂದೆ ಗ್ರಾಮಸ್ಥರು ಹೇಳಿಕೊಂಡಿದ್ದಾರೆ.
ಹಾವೇರಿ: ರಾಜ್ಯಾದ್ಯಂತ ಡೆಂಗ್ಯೂ ಜ್ವರ ಬಿಟ್ಟು ಬಿಡದೇ ಜನರನ್ನು ಕಾಡುತ್ತಿದೆ. ಇದರ ನಡುವೆ ಹಾವೇರಿಯಲ್ಲಿ ಇಲಿ ಜ್ವರ ಪತ್ತೆಯಾಗಿರುವುದು ಈಗ ವಿವಾದಕ್ಕೆ ಕಾರಣವಾಗಿದೆ. ಅಂದ ಹಾಗೇ ಹಾವೇರಿ (Haveri) ತಾಲ್ಲೂಕಿನ 12 ವರ್ಷದ ಬಾಲಕನಿಗೆ ಇಲಿ ಜ್ವರ ಕಾಣಿಸಿಕೊಂಡಿದ್ದು, ಜನರಲ್ಲಿ ಆತಂಕಕ್ಕೆ ಕಾರಣವಾಗಿದೆ. ಬಾಲಕನಿಗೆ ಕಳೆದ ಒಂದು ವಾರದಿಂದ ನಿರಂತರವಾಗಿ ಜ್ವರ ಕಾಣಿಸಿಕೊಂಡ ಹಿನ್ನಲೆ ಹಾವೇರಿ ಜಿಲ್ಲಾಸ್ಪತ್ರಗೆ ದಾಖಲಿಸಲಾಗಿತ್ತು. ಈ ವೇಳೆ ಬಾಲಕನಿಗೆ ಜಾಂಡೀಸ್ ಕಾಣಿಸಿಕೊಂಡಿತ್ತು. ಬಳಿಕ ರೋಗ ಗುಣಮುಖಗೊಂಡ ಹಿನ್ನೆಲೆ ಚಿಕಿತ್ಸೆ ಪಡೆದು ಊರಿಗೆ ತೆರಳಿದ್ದ. ಮತ್ತೆ ಬಾಲಕನಿಗೆ ಜ್ವರ ಕಾಣಿಸಿಕೊಂಡ ಹಿನ್ನಲೆ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಈ ವೇಳೆ ಬಾಲಕನಿಗೆ ಇಲಿ ಜ್ವರ ಇರುವುದು ಪತ್ತೆಯಾಗಿದೆ ಎನ್ನಲಾಗಿದೆ.
ಬೆಂಗಳೂರು: ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದ ವತಿಯಿಂದ ಪ್ರಸಕ್ತ ಸಾಲಿಗೆ ವಿವಿಧ ಯೋಜನೆಗಳಡಿ ಸಾಲ ಸೌಲಭ್ಯಕ್ಕಾಗಿ ಅರ್ಹ ಆರ್ಯವೈಶ್ಯ ಸಮಾಜದವರಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ. ಸ್ವಯಂ ಉದ್ಯೋಗ ನೇರ ಸಾಲ, ಆರ್ಯವೈಶ್ಯ ಆಹಾರ ವಾಹಿನಿ ಹಾಗೂ ವಾಸವಿ ಜಲಶಕ್ತಿ ಯೋಜನೆಗಳಿಗೆ ಸಾಲ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು ಆಗಸ್ಟ್ 31 ಕೊನೆಯ ದಿನಾಂಕವಾಗಿದೆ. ಆನ್ಲೈನ್ ವೆಬ್ಸೈಟ್ www.kacdc.karnataka.gov.in ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು. *ಸ್ವಯಂ –ಉದ್ಯೋಗ ನೇರಸಾಲ ಯೋಜನೆ:* ಕರ್ನಾಟಕ ಆರ್ಯವೈಶ್ಯ ಸಮುದಾಯದ ಅಭಿವೃದ್ಧಿ ನಿಗಮದಿಂದ ವ್ಯಾಪಾರ ಚಟುವಟಿಕೆ ಕೈಗೊಳ್ಳಲು ಸ್ವಯಂ ಉದ್ಯೋಗ ನೇರಸಾಲ ಯೋಜನೆಯಡಿ ರೂ.1 ಲಕ್ಷಗಳ ಸಾಲ-ಸಹಾಯ ಧನ ನೀಡಲಾಗುತ್ತಿದ್ದು, ಇದರಲ್ಲಿ ರೂ.20 ಸಾವಿರ ಸಹಾಯಧನವಿರುತ್ತದೆ. ಬಾಕಿ ಮೊತ್ತವನ್ನು ಶೇ.4ರ ಬಡ್ಡಿ ದರದಲ್ಲಿ ನೀಡಲಾಗುವುದು.ವಯೋಮಿತಿಯು 45 ವರ್ಷಗಳಿಂದ 55 ವರ್ಷಗಳಿಗೆ ಹೆಚ್ಚಿಸಲಾಗಿದ್ದು, 2019-20 ಮತ್ತು 2020-21 ಸಾಲಿನ…
ಬಳ್ಳಾರಿ: ಸಾರ್ವಜನಿಕರ ಸುಸ್ಥಿರ ಆರೋಗ್ಯ ಕಾಪಾಡುವ ನಿಟ್ಟಿನಲ್ಲಿ ಗ್ರಾಮೀಣ ಪ್ರದೇಶಗಳಲ್ಲಿನ ಕುಡಿಯುವ ನೀರಿನ ಶುದ್ಧೀಕರಣಗಳ ಘಟಕಗಳನ್ನು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಪರಿಶೀಲಿಸಬೇಕು ಎಂದು ಜಿಲ್ಲಾ ಪಂಚಾಯತ್ನ ಉಪ ಕಾರ್ಯದರ್ಶಿ ಗಿರಿಜಾ ಶಂಕರ್ ಅವರು ಸೂಚಿಸಿದರು. ಜಿಲ್ಲಾ ಪಂಚಾಯತ್, ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಇವರ ಸಹಯೋಗದಲ್ಲಿ ನಗರದ ಜಿಲ್ಲಾ ಪಂಚಾಯತ್ನ ನಜೀರ್ಸಾಬ್ ಸಭಾಂಗಣದಲ್ಲಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಗೆ ಕ್ಷೇತ್ರ ಪರೀಕ್ಷಾ ಕಿಟ್(ಎಫ್ಟಿಕೆ) ಮತ್ತು ಹೆಚ್2ಎಸ್ ವಿಐಎಎಲ್ಎಸ್ ಸಾಧನಗಳನ್ನು ಉಪಯೋಗಿಸಿ ನೀರಿನ ಪರೀಕ್ಷೆ ಕೈಗೊಳ್ಳುವ ವಿಷಯವಾಗಿ ಗ್ರಾಪಂನ ಪಿಡಿಓಗಳಿಗೆ ಶುಕ್ರವಾರ ಏರ್ಪಡಿಸಿದ್ದ ತರಬೇತಿ ಕಾರ್ಯಗಾರದಲ್ಲಿ ಅವರು ಮಾತನಾಡಿದರು. ಗ್ರಾಮೀಣ ಭಾಗದಲ್ಲಿ ಕಲುಷಿತ ನೀರು ಸೇವನೆಯಿಂದ ಜನ ಸಾಮಾನ್ಯರು ಅನಾರೋಗ್ಯಕ್ಕೆ ತುತ್ತಾಗುತ್ತಿದ್ದು, ನೀರಿನ ಮೂಲಗಳನ್ನು ಪರಿಶೀಲನೆ ಕೈಗೊಂಡು ಪರೀಕ್ಷೆಗೆ ಒಳಪಡಿಸಬೇಕು ಎಂದು ತಿಳಿಸಿದರು. ಮಳೆಗಾಲ ಆರಂಭವಾಗಿದ್ದು, ಕಲುಷಿತ ನೀರು ಸೇವನೆಯಿಂದ ಆರೋಗ್ಯದ ಮೇಲೆ ಗಂಭೀರ ಸ್ವರೂಪದ ಪರಿಣಾಮಗಳು ಬೀರುವ ಸಾಧ್ಯತೆಗಳಿರುವುದರಿಂದ, ಗ್ರಾಮ ಪಂಚಾಯಿತಿ…
ಬೆಂಗಳೂರು ಛ ಪ್ರತೀ SP-DCP-IG ಗಳು ಪೊಲೀಸ್ ಮ್ಯಾನ್ಯುಯಲ್ ತಮ್ಮ ವ್ಯಾಪ್ತಿಯ ಪ್ರಕಾರ ಪ್ರತಿ ಠಾಣೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸುವುದು ಕಡ್ಡಾಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಪಷ್ಟ ಸೂಚನೆ ನೀಡಿದರು. ರಾಜ್ಯ ಪೊಲೀಸ್ ಮಹಾ ನಿರ್ದೇಶಕರ ಕಚೇರಿಯಲ್ಲಿ 2024ರ ಹಿರಿಯ ಪೊಲೀಸ್ ಅಧಿಕಾರಿಗಳ ಸಮಾವೇಷವನ್ನು ಉದ್ಘಾಟಿಸಿ, ನೂತನ ತಂತ್ರಾಂಶಗಳನ್ನು ಬಿಡುಗಡೆಗೊಳಿಸಿ ಮಾತನಾಡಿದರು. ನಿಮ್ಮ ವ್ಯಾಪ್ತಿಯಲ್ಲಿ ಕ್ಲಬ್ ಗಳು, ಇಸ್ಪೀಟ್, ಬೆಟ್ಟಿಂಗ್, ಡ್ರಗ್ಸ್ ಗಳನ್ನು ನಿಲ್ಲಿಸದಿದ್ದರೆ SP ಮತ್ತು IG ಮಟ್ಟದ ಅಧಿಕಾರಿಗಳನ್ನೂ ನೇರ ಹೊಣೆ ಮಾಡಿ ಕ್ರಮ ತೆಗೆದುಕೊಳ್ಳಲಾಗುವುದು. SP-IG ಗಳು ಪ್ರತಿ ಠಾಣೆಗಳಿಗೆ ಹೋಗಿ ಪರಿಶೀಲನೆ ನಡೆಸಿದರೆ ಇವನ್ನೆಲ್ಲಾ ತಪ್ಪಿಸಬಹುದು ಎಂದು ಎಚ್ಚರಿಸಿದರು. ನಾಳೆಯಿಂದಲೇ SP, IG ಗಳು ಠಾಣೆಗಳಿಗೆ ಭೇಟಿ ನೀಡಬೇಕು. ಭೇಟಿ ನೀಡಿ ಅರ್ಧಗಂಟೆಯಲ್ಲಿ ಶಾಸ್ತ್ರ ಮುಗಿಸಬಾರದು. ಕೂಲಂಕುಶ ಪರಿಶೀಲನೆ ನಡೆಸಬೇಕು ಎಂದು ಎಚ್ಚರಿಸಿದರು. ಫೇಕ್ ನ್ಯೂಸ್ ಪ್ರಸಾರ ತಡೆಗಟ್ಟಿ: ಇಲ್ಲಾಂದ್ರೆ ಕ್ರಮ ಎದುರಿಸಿ: ಫೇಕ್ ನ್ಯೂಸ್ ಗಳು ಸಮಾಜದ ನೆಮ್ಮದಿಗೆ ಕಂಟಕವಾಗಿವೆ. ಇವು…
ಚಾಮರಾಜನಗರ: ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಮರಾಜಪೇಟೆಯ ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಭೇಟಿ ನೀಡಿ ಮಕ್ಕಳ ಜೊತೆಗೆ ಸಿಎಂ ಸಿದ್ದರಾಮಯ್ಯ ಅವರು ಕೆಲ ಹೊತ್ತು ಸಮಯ ಕಳೆದ ಎಲ್ಲರ ಗಮನ ಸೆಳೆದಿದ್ದಾರೆ. ಈ ಬಗ್ಗೆ ವಿಡಿಯೋ ಟ್ವಿಟ್ ಮಾಡಿರುವ ಅವರು ಥಮಿಕ ಶಾಲೆಯಲ್ಲಿ ನಾನು ಕಲಿತ ಕನ್ನಡ ವ್ಯಾಕರಣ ಪಾಠಗಳು ಉಸಿರಿರುವವ ವರೆಗೆ ಹಸಿರಾಗಿರಲಿದೆ. ಕನ್ನಡ ಭಾಷೆಯ ಸೌಂದರ್ಯವನ್ನು ಬಣ್ಣಿಸುವ, ವ್ಯಾಕರಣದ ಬಗ್ಗೆ ವಿವರಿಸುವ ಅವಕಾಶ ಸಿಕ್ಕಾಗಲೆಲ್ಲ ಸಂಧಿಗಳು, ಸಮಾಸಗಳು, ಸ್ವರ, ವ್ಯಂಜನಗಳು ಥಟ್ಟನೆ ನೆನಪಾಗುತ್ತವೆ. ಅದು ಶಾಲಾ ಕೊಠಡಿಯೇ ಇರಲಿ, ವಿಧಾನಸಭೆಯೇ ಆಗಿರಲಿ. ಮುತ್ತು ಪೋಣಿಸಿದಂತೆ ಬಿಡಿ ಬಿಡಿಯಾಗಿ ಕಣ್ಣಮುಂದೆ ಬರುತ್ತದೆ. ಯಾವುದೇ ಭಾಷೆಯಾಗಿರಲಿ ಅದು ಹೃದಯಕ್ಕೆ ಹತ್ತಿರವಾದಾಗ ಮಾತ್ರ ಜೀವಂತಿಕೆಯನ್ನು ಉಳಿಸಿಕೊಳ್ಳುತ್ತದೆ. ಹಾಗಾಗಿಯೇ ಕನ್ನಡ ನನಗೆ ಆಡು ಭಾಷೆಯೂ ಹೌದು, ನಾಡಭಾಷೆಯೂ ಹೌದು,\ ನನ್ನ ಹೆತ್ತ ತಾಯಿಭಾಷೆಯೂ ಹೌದು. ಅಂಥ ತಿಳಿಸಿದ್ದಾರೆ. SC/ST ಜನಸಂಖ್ಯೆಗೆ ಅನುಗುಣವಾಗಿ ಹಣ ಖರ್ಚು ಮಾಡುತ್ತಿರುವುದು ನಮ್ಮ ಸರ್ಕಾರ ಮಾತ್ರ ಇಡೀ ದೇಶದಲ್ಲಿ ಪರಿಶಿಷ್ಟ ಜಾತಿ…
ಲುಧಿಯಾನ: ಪಂಜಾಬ್ ಶಿವಸೇನೆ ಮುಖಂಡ ಸಂದೀಪ್ ಥಾಪರ್ ಅವರ ಮೇಲೆ ಲುಧಿಯಾನ ಸಿವಿಲ್ ಆಸ್ಪತ್ರೆಯ ಹೊರಗೆ ನಿಹಾಂಗ್ ಗಳ ಗುಂಪೊಂದು ಶುಕ್ರವಾರ ಮಧ್ಯಾಹ್ನ ಕತ್ತಿಗಳಿಂದ ಹಲ್ಲೆ ನಡೆಸಿದೆ ಎಂದು ಆರೋಪಿಸಲಾಗಿದೆ. ಘಟನೆಯಲ್ಲಿ ಥಾಪರ್ ಅವರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಘಟನೆಯ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದೆ, ಅಲ್ಲಿ ನಿಹಾಂಗ್ ರಸ್ತೆಯ ಮಧ್ಯದಲ್ಲಿ ಸಹಾಯಕ್ಕಾಗಿ ಕೂಗುತ್ತಿದ್ದಾಗ ಕತ್ತಿಯಿಂದ ಹಲ್ಲೆ ಮಾಡುತ್ತಿರುವುದನ್ನು ಕಾಣಬಹುದು. ಇನ್ನೊಬ್ಬ ನಿಹಾಂಗ್ ದ್ವಿಚಕ್ರ ವಾಹನದಲ್ಲಿ ಕಾಯುತ್ತಿದ್ದನು ಮತ್ತು ನಾಯಕನ ಮೇಲೆ ಹಲ್ಲೆ ನಡೆಸಿದ ನಂತರ ಇಬ್ಬರೂ ಪರಾರಿಯಾಗಿದ್ದಾರೆ. ಇನ್ನೂ ಆಘಾತಕಾರಿ ಸಂಗತಿಯೆಂದರೆ, ಇಡೀ ಘಟನೆಯು ಹಗಲಿನ ಬೆಳಕಿನಲ್ಲಿ, ಸಂಪೂರ್ಣ ಸಾರ್ವಜನಿಕ ದೃಷ್ಟಿಯಲ್ಲಿ ಅನಾವರಣಗೊಂಡಿತು ಆದರೆ ಯಾರೂ ಅವನನ್ನು ಉಳಿಸಲು ಮುಂದೆ ಬರಲಿಲ್ಲ ಎನ್ನಲಾಗಿದೆ. https://twitter.com/RealBababanaras/status/1809151239588073563
ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ವಿಶೇಷಚೇತನರಿಗೆ ಸರ್ಕಾರದಿಂದ ಹಲವಾರು ಯೋಜನೆಗಳನ್ನು ಜಾರಿಗೊಳಿಸಿದ್ದು ಈ ಯೋಜನೆಯ ಪ್ರಯೋಜನವನ್ನು ಜಿಲ್ಲೆಯ ವಿಶೇಷಚೇತನರು ಪಡೆದುಕೊಳ್ಳಲು ಕೇಂದ್ರ ಸರ್ಕಾರವು ಜಾರಿಗೊಳಿಸಿರುವ ಯುಡಿಐಡಿ ಕಾರ್ಡ್ ಕಡ್ಡಾಯವಾಗಿದೆ. ಯುಡಿಐಡಿ ಕಾರ್ಡ್ ಪಡೆಯಲು ಯುಡಿಐಡಿ ಪೋರ್ಟಲ್ ಮೂಲಕ ಆನ್ಲೈನ್ನಲ್ಲಿ ನೋಂದಾಯಿಸಿ ಯುಡಿಐಡಿ ಕಾರ್ಡ್ಗಳನ್ನು ಪಡೆದುಕೊಳ್ಳಬೇಕಿದೆ. ಯುಡಿಐಡಿ ಕಾರ್ಡ್ (ಗುರುತಿನ ಚೀಟಿ) ಹೊಂದಿರುವ ವಿಶೇಷಚೇತನರು ಮಾತ್ರ ಸರ್ಕಾರದ ಸೌಲಭ್ಯ ಪಡೆಯಲು ಅರ್ಹರಾಗಿರುತ್ತಾರೆ. ಯುಡಿಐಡಿ ಕಾರ್ಡ್ ಪಡೆಯದೇ ಇರುವ ವಿಶೇಷಚೇತನರು ಸರ್ಕಾರದ ಯೋಜನೆಗಳನ್ನು ಪಡೆಯಲು ಅರ್ಹರಲ್ಲ. ಆದ್ದರಿಂದ ಜಿಲ್ಲೆಯ ವಿಶೇಷಚೇತನರು ಕಡ್ಡಾಯವಾಗಿ ಯುಡಿಐಡಿ ಕಾರ್ಡ್ಗಳನ್ನು ಪಡೆದುಕೊಂಡು ವಿಶೇಷಚೇತನರಿಗೆ ಸರ್ಕಾರ ರೂಪಿಸಿರುವ ಸೌಲಭ್ಯಗಳನ್ನು ಪಡೆದುಕೊಳ್ಳುವಂತೆ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗೆ ಜಿಲ್ಲೆಯ ಗ್ರಾಮ ಪಂಚಾಯತ್ಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ವಿಆರ್ಡಬ್ಲ್ಯು ಹಾಗೂ ತಾಲ್ಲೂಕು ಪಂಚಾಯತ್ಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಎಂಆರ್ಡಬ್ಲ್ಯುಗಳಾದ ಸೋಮವಾರಪೇಟೆ ಹಾಗೂ ಕುಶಾಲನಗರ ತಾಲ್ಲೂಕಿನವರು ಹರೀಶ್ ಟಿ.ಆರ್ ಮೊ.ಸಂ.8861428931, ವಿರಾಜಪೇಟೆ ಮತ್ತು ಪೊನ್ನಂಪೇಟೆ ತಾಲೂಕಿನವರು ಪ್ರಥನ್ ಕುಮಾರ್ ಸಿ.ಬಿ. ಮೊ.ಸಂ. 9900883654…
ಶಿವಮೊಗ್ಗ: ಭಾರತೀಯ ವಾಯುಪಡೆಯಿಂದ ಅಗ್ನಿಪಥ್ ಯೋಜನೆಯಡಿಯಲ್ಲಿ ಅಗ್ನಿವೀರ್ ವಾಯು ಸೇವೆಗೆ ಆಯ್ಕೆ ಪರೀಕ್ಷೆಗಾಗಿ ಎಸ್.ಎಸ್.ಎಲ್.ಸಿ, ದ್ವಿತೀಯ ಪಿಯುಸಿ/ತತ್ಸಮಾನ, ಡಿಪ್ಲೋಮಾ, ವೃತ್ತಿಪರ ಕೋರ್ಸ್ ವಿದ್ಯಾರ್ಹತೆ ಹೊಂದಿರುವ, 03, ಜುಲೈ-2004 ರಿಂದ 03, ಜನವರಿ 2008ರ ನಡುವೆ ಜನಿಸಿರುವ ಅವಿವಾಹಿತ ಪುರುಷ ಮತ್ತು ಮಹಿಳೆಯರಿಂದ ಆನ್ಲೈನ್ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅರ್ಜಿಯನ್ನು ಆನ್ಲೈನ್ https://agnipathvayu.cdac.in ರಲ್ಲಿ ನೊಂದಾಯಿಸಿಕೊಂಡು, ಜಿಲ್ಲಾ ಉದ್ಯೋಗ ವಿನಿಯಮ ಕಚೇರಿ, ಗುತ್ಯಪ್ಪ ಕಾಲೋನಿ, ಪಂಪಾನಗರ 2ನೇ ಕ್ರಾಸ್, ಸಾಗರ ರಸ್ತೆ, ಶಿವಮೊಗ್ಗ ಇಲ್ಲಿಗೆ ಸಂಪರ್ಕಿಸುವಂತೆ ಉದ್ಯೋಗಾಧಿಕಾರಿ ಖಲಂದರ್ ಖಾನ್ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯನ್ನು ಖುದ್ದಾಗಿ ಅಥವಾ ದೂ.ಸಂ.: 08182-255293/ 9108235132 ಗಳನ್ನು ಸಂಪರ್ಕಿಸುವುದು.
ಬೆಂಗಳೂರು: ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವತಿಯಿಂದ ಬೆಂಗಳೂರು ನಗರ ಕೇಂದ್ರೀಯ ವಿಭಾಗದಿಂದ 2023-24 ನೇ ಸಾಲಿಗೆ ಮತೀಯ ಅಲ್ಪಸಂಖ್ಯಾತರಾದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ ಹಾಗೂ ಫಾರ್ಸಿ ಜನಾಂಗದವರಿಗೆ ಅರಿವು ವಿದ್ಯಾಭ್ಯಾಸ ಸಾಲ ಯೋಜನೆಯಡಿಯಲ್ಲಿ ನಿಗಮದ ಸಾಲ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನಿಸಿದೆ. ಅರಿವು ವಿಧ್ಯಾಭ್ಯಾಸ ಯೋಜನೆಯಡಿಯಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಕೆಇ, ವಿಐಎ, ಸಿಇಟಿ/ ನೀಟ್ ಮುಖಾಂತರ ಎಂಬಿಬಿಎಸ್, ಬಿಡಿಎಸ್, ಆಯುಷ್, ಬ್ಯಾಚುಲರ್ ಆಫ್ ಆರ್ಚ್, ಇಂಜಿನಿಯರಿಂಗ್, ಬ್ಯಾಚುಲರ್ ಆಫ್ ಟೆಕ್ನಾಲಜಿ ಕೋರ್ಸ್ ಫಾರ್ಮಸಿ, ಅಕ್ರಿಕಲ್ಚರ್ ಸೈನ್ಸ್, ವೆಟರಿನರಿ, ಫಾರ್ಮಾ ಸೈನ್ಸ್, ಎಲ್ಎಲ್ಬಿ ವ್ಯಾಸಂಗಗಳಿಗೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ “ಅರಿವು” ಯೋಜನೆಯಡಿಯಲ್ಲಿ ಶೈಕ್ಷಣಿಕ ಸಾಲವನ್ನು ಪಡೆಯಲು ಆನ್ಲೈನ್ನಲ್ಲಿ ನಿಗಮದ ಜಾಲತಾಣ http://kmdconline.karnataka.gov.in/ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಜುಲೈ 7 ಕೊನೆಯ ದಿನವಾಗಿದೆ. ವಿದ್ಯಾರ್ಥಿಗಳು ಆನ್ಲೈನ್ ಮೂಲಕ ಅರ್ಜಿಯನ್ನು ಕಂಪ್ಯೂಟರ್ನಲ್ಲಿ ಭರ್ತಿ ಮಾಡಿದ ಕೂಡಲೇ ಅರ್ಜಿ ಪ್ರಿಂಟ್ ಔಟ್ ಪಡೆದು ಕ್ಯೂಆರ್ ಕೋಡ್ ಹೊಂದಿದ ಅರ್ಜಿಯೊಂದಿಗೆ ಜಾತಿ ಮತ್ತು…