Author: kannadanewsnow07

ಮಹಾ ಗಣಪತಿ ಜ್ಯೋತಿಷ್ಯ ಕೇಂದ್ರ, ಕಟೀಲು ದುರ್ಗಾ ದೇವಿಯ ಆರಾಧಕರು ಮತ್ತು ಮಹಾ ಪಂಡಿತರು ಆಗಿರುವ ಗಣಪತಿ ಭಟ್ ಅವರಿಂದ ಸರ್ವ ರೀತಿಯ ಸಮಸ್ಯೆಗಳಿಗೂ ಫೋನ್ ನಲ್ಲಿಯೇ ನೇರ ಪರಿಹಾರ ದೊರೆಯಲಿದೆ. ನಿಮಗೆ ಉದ್ಯೋಗ ಸಮಸ್ಯೆಗಳು ಇದ್ರೆ ಅಥವ ಮನೆಯಲ್ಲಿ ಕಿರಿ ಕಿರಿ ಆಗುತ್ತಾ ಇದ್ರೆ ಅಥವ ಗಂಡ ಹೆಂಡತಿ ಸಂಭಂಧ ಸೂಕ್ತ ರೀತಿಯಲ್ಲಿ ಇಲ್ಲವಾದಲ್ಲಿ ಅಥವ ಕೋರ್ಟು ಕೇಸಿನ ವ್ಯಾಜ್ಯದಲ್ಲಿ ನಿಮಗೆ ತೊಂದ್ರೆ ಆಗಿದ್ರೆ ಅಥ್ವಾ ನಿಮ್ಮ ಹಿತ ಶತ್ರುಗಳುನಿಮ್ಮನು ಕಾಡುತ್ತಾ ಇದ್ರ ಇನ್ನು ಹಲವು ರೀತಿಯ ಸಮಸ್ಯೆಗಳು ಏನೇ ಇರಲಿ ಎಲ್ಲವನ್ನು ಸಹ ಯಾರಿಗೂ ತಿಳಿಯದ ಹಾಗೆಯೇ ಗುಪ್ತ ರೀತಿಯಲ್ಲಿ ಇಟ್ಟು ಅದಕ್ಕೆ ಶಾಶ್ವತ ಪರಿಹಾರ ಫೋನ್ ನಲ್ಲಿಯೇ ಮೂರೂ ದಿನದಲ್ಲಿ ದೊರೆಯಲಿದೆ. ಈ ಕೂಡಲೇ ಫೋಟೋ ಮೇಲೆ ನೀಡಿರೋ ಸಂಖ್ಯೆಗೆ ಒಂದೇ ಒಂದು ಸಣ್ಣ ಕರೆ ಮಾಡಿರಿ ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559…

Read More

ಬೆಂಗಳೂರು: ಸ್ಯಾಂಡಲ್‍ವುಡ್ ನಟ ದರ್ಶನ್ & ಗ್ಯಾಂಗ್‍ ವಿರುದ್ದ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಆರೋಪ ಕೇಳಿ ಬಂದಿದೆ. ಈ ನಡುವೆ ಕೊಲೆ ಕೇಸ್ ಸಂಬಂಧ ತನಿಖೆಯನ್ನ ಪೊಲೀಸರು ಮತ್ತಷ್ಟು ಚುರುಕುಗೊಳಿಸಿದ್ದು, ಹಲವು ಮಹತ್ವವಾದ ಮಾಹಿತಿಯನ್ನು ಕಲೆ ಹಾಕುತ್ತಿದ್ದಾರೆ. ಇವೆಲ್ಲದರ ನಡುವೆ ಜೂನ್ 8 ರಂದು ರೇಣುಕಾಸ್ವಾಮಿಯನ್ನ `ಡಿ’ ಗ್ಯಾಂಗ್‍ನವರು ಪಟ್ಟಣಗೆರೆ ಶೆಡ್‍ಗೆ ಕರೆತಂದು ಹಿಗ್ಗಾಮುಗ್ಗ ಥಳಿಸಿ ಹಲ್ಲೆ ಮಾಡಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ. ಈ ನಡುವೆ ಮಧ್ಯಾಹ್ನ 12.30ರ ಸುಮಾರಿಗೆ ಬಂದಿದ್ದ ರೇಣುಕಾಸ್ವಾಮಿ ಹಲ್ಲೆ ಮಾಡಿದ್ದ ಗ್ಯಾಂಗ್ ದರ್ಶನ್ ಎಂಟ್ರಿಯಾಗೋದಕ್ಕೂ ಮುಂಚೆ ಊಟ ಮಾಡಿಸಿದ್ದರು ಎನ್ನಲಾಗಿದೆ. ಹೊಟ್ಟೆ ಒಳಗಿನ ಊಟದ ಜೀರ್ಣ ಕ್ರಿಯೆ ಬಗ್ಗೆ ಸ್ಪಷ್ಟನೆ ತೆಗೆದುಕೊಳ್ಳಲು ಪೊಲೀಸರು ತೀರ್ಮಾನ ಮಾಡಿದ್ದಾರೆ. ಫಾರೆನ್ಸಿಕ್ ತಜ್ಞರು ನೀಡಿರೋ ಮರಣೋತ್ತರ ಪರೀಕ್ಷೆಯ ವರದಿಯಲ್ಲಿ ಸ್ವಲ್ಪ ಆಹಾರ ಇರುವುದನ್ನು ಕಂಡುಕೊಂಡಿದ್ದಾರೆ ಎನ್ನಲಾಗಿದೆ. ಈ ಹಿನ್ನಲೆಯಲ್ಲಿ ಪೊಲೀಸರು ಇನ್ನೊಂದು ಹಂತದ ತನಿಖೆಯನ್ನು ನಡೆಸಲು ಮುಂದಾಗಿದ್ದಾರೆ.

Read More

ನವದೆಹಲಿ: ಆಧಾರ್ ಕಾರ್ಡ್ ನೀಡುವುದು ಪೌರತ್ವಕ್ಕೆ ಸಂಬಂಧಿಸಿಲ್ಲ ಮತ್ತು ಕಾನೂನುಬದ್ಧವಾಗಿ ದೇಶಕ್ಕೆ ಪ್ರವೇಶಿಸುವ ನಾಗರಿಕರಲ್ಲದವರು ಸಹ ಆಧಾರ್ ಕಾರ್ಡ್ ಪಡೆಯಬಹುದು ಎಂದು ವಿಶಿಷ್ಟ ಗುರುತಿನ ಪ್ರಾಧಿಕಾರ (ಯುಐಡಿಎಐ) ಕೋಲ್ಕತ್ತಾ ಹೈಕೋರ್ಟ್ಗೆ ತಿಳಿಸಿದೆ. ಎನ್ಆರ್ಸಿ ವಿರುದ್ಧ ಜಂಟಿ ವೇದಿಕೆ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಟಿ.ಎಸ್.ಶಿವಜ್ಞಾನಂ ಮತ್ತು ನ್ಯಾಯಮೂರ್ತಿ ಹಿರಣ್ಮಯ್ ಭಟ್ಟಾಚಾರ್ಯ ಅವರ ವಿಭಾಗೀಯ ಪೀಠದ ಮುಂದೆ ಈ ವಾದವನ್ನು ಮಂಡಿಸಲಾಯಿತು. ಈ ಅರ್ಜಿಯು ಪಶ್ಚಿಮ ಬಂಗಾಳದಲ್ಲಿ ಅನೇಕ ಆಧಾರ್ ಕಾರ್ಡ್ಗಳನ್ನು ಹಠಾತ್ ನಿಷ್ಕ್ರಿಯಗೊಳಿಸುವುದನ್ನು ಮತ್ತು ಮರು ಸಕ್ರಿಯಗೊಳಿಸುವುದನ್ನು ಪ್ರಶ್ನಿಸುತ್ತದೆ. ಆಧಾರ್ ನಿಯಮಗಳ ನಿಯಮ 28 ಎ ಮತ್ತು 29 ರ ಸಾಂವಿಧಾನಿಕ ಸಿಂಧುತ್ವವನ್ನು ಅರ್ಜಿದಾರರು ಪ್ರಶ್ನಿಸಿದ್ದರು, ಇದು ಯಾರು ವಿದೇಶಿಯರು ಎಂದು ನಿರ್ಧರಿಸಲು ಕಾಯ್ದೆಯಡಿ ಪ್ರಾಧಿಕಾರಕ್ಕೆ ಅನಿಯಮಿತ ಅಧಿಕಾರವನ್ನು ನೀಡುತ್ತದೆ ಮತ್ತು ಅವನ ಅಥವಾ ಅವಳ ಆಧಾರ್ ಕಾರ್ಡ್ ಅನ್ನು ನಿಷ್ಕ್ರಿಯಗೊಳಿಸಬಹುದು ಅಂತ ತಿಳಿಸಿದೆ.

Read More

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559 ಪ್ರತಿಯೊಬ್ಬ ವ್ಯಕ್ತಿಯ ಜೀವನದಲ್ಲೂ ಕೂಡ ಒಂದಲ್ಲ ಒಂದು ರೀತಿಯಲ್ಲಿ ಹಣಕಾಸಿನ ಸಮಸ್ಯೆ ಆಗಿರಬಹುದು ಅಥವಾ ಬೇರೆ ಬೇರೆ ರೀತಿಯ ಸಮಸ್ಯೆಗಳು ನಮ್ಮನ್ನ ಭಾದಿಸುತ್ತದೆ. ಆರ್ಥಿಕವಾಗಿ ಕಷ್ಟಗಳು ಸಮಸ್ಯೆಗಳು ನಮ್ಮನ್ನ ಹೆಚ್ಚಾಗಿ ಕಾಡುತ್ತವೆ. ಯಾವುದೇ ಕೆಲಸಗಳನ್ನು ನಾವು ಮಾಡಿದರು ಕೂಡ ಅದರಲ್ಲಿ ನಾವು ಪ್ರಗತಿಯನ್ನು ಕಾಣಲು ಸಾಧ್ಯವಾಗುವುದಿಲ್ಲ, ಅನೇಕ ರೀತಿಯ ಸಮಸ್ಯೆಗಳನ್ನ ನಾವು ಎದುರಿಸುತ್ತೇವೆ. ಹಣಕಾಸಿನ ಸಮಸ್ಯೆಗಳು ನಮ್ಮಿಂದ ಸಂಪೂರ್ಣವಾಗಿ ದೂರ ಆಗಬೇಕು ಅಂದುಕೊಂಡಿದ್ದರೆ ಈ ಪರಿಹಾರ ಕ್ರಮವನ್ನ ಅನುಸರಿಸುವುದು ತುಂಬಾ ಮುಖ್ಯ ಆದರೆ ಈ ಪರಿಹಾರವನ್ನ ಮಾಡಿ ನಿಮ್ಮ ಜೀವನದಲ್ಲಿರುವ ಹಣಕಾಸಿನ ಸಮಸ್ಯೆ ಆಗಿರಬಹುದು ಸಾಲಭಾಧೆ ಸಮಸ್ಯೆಗಳನ್ನ ದೂರ ಮಾಡಬಹುದಾಗಿದೆ. ವಿಘ್ನ ವಿನಾಶಕ ನನ್ನ ಸರಿಯಾದ ರೀತಿಯಲ್ಲಿ ಪೂಜೆ ಪುನಸ್ಕಾರವನ್ನ ಮಾಡುವುದರಿಂದ ಖಂಡಿತವಾಗಿ ನಿಮ್ಮ ಜೀವನದಲ್ಲಿರುವ ಹಣಕಾಸಿನ ಸಮಸ್ಯೆ ದೂರವಾಗುತ್ತದೆ. ಗಣಪತಿಯನ್ನ ಪ್ರತಿದಿನ ಪೂಜೆ ಮಾಡುತ್ತೇವೆ ಆದರೆ ನೀತಿ ನಿಯಮಗಳ ರೂಪದಲ್ಲಿ…

Read More

ಬೆಂಗಳೂರು: ಕರ್ನಾಟಕ ವಿಧಾನಸಭೆಯ ಸದಸ್ಯರಿಂದ ವಿಧಾನಪರಿಷತ್ತಿನ ಒಬ್ಬ ಸದಸ್ಯರನ್ನು ಆಯ್ಕೆ ಮಾಡಲು ಉಪ ಚುನಾವಣೆಯನ್ನು ಜುಲೈ 12 ರಂದು ನಿಗದಿಪಡಿಸಲಾಗಿತ್ತು, ಜುಲೈ 5 ನಾಮಪತ್ರ ಹಿಂತೆಗೆದುಕೊಳ್ಳಲು ಅಂತಿಮ ದಿನವಾಗಿದ್ದು, ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಬಸನಗೌಡ ಬಾದರ್ಲಿ ಅವರು ಮಾತ್ರ ಅಂತಿಮವಾಗಿ ಚುನಾವಣಾ ಕಣದಲ್ಲಿ ಉಳಿದಿದ್ದು, ಸದರಿ ಅಭ್ಯರ್ಥಿಯು ಅವಿರೋಧವಾಗಿ ಆಯ್ಕೆಯಾಗಿರುತ್ತಾರೆಂದು ಚುನಾವಣಾಧಿಕಾರಿ, ಕರ್ನಾಟಕ ವಿಧಾನಪರಿಷತ್ ಉಪ ಚುನಾವಣೆ-2024 ಹಾಗೂ ಕಾರ್ಯದರ್ಶಿಗಳು ಕರ್ನಾಟಕ ವಿಧಾನ ಸಭೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಬೆಂಗಳೂರು: ಲಿಂಗತ್ವ ಅಲ್ಪ ಸಂಖ್ಯಾತ ಸಮುದಾಯದವರು ಅಥವಾ ಲಿಂಗತ್ವ ಅಲ್ಪಸಂಖ್ಯಾತ ವ್ಯಕ್ತಿಗಳು ಗೃಹಲಕ್ಷ್ಮಿ ಯೋಜನೆಯಡಿ ಪ್ರಯೋಜನ ಪಡೆಯಲು ಅನುವಾಗುವಂತೆ ಗೃಹಲಕ್ಷ್ಮಿ ಯೋಜನೆಯ ತಂತ್ರಾಂಶದಲ್ಲಿ ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ National Portal for Transgender Persons ವತಿಯಿಂದ ಪಡೆದಿರುವ ಲಿಂಗತ್ವ ಅಲ್ಪಸಂಖ್ಯಾತರ ಗುರುತಿನ ಚೀಟಿಯನ್ನು ಪರಿಗಣಿಸಲು ಸರ್ಕಾರವು ಅನುಮೋದನೆ ನೀಡಿ ತಂತ್ರಾಂಶದಲ್ಲಿ ಮಾರ್ಪಾಡು ಮಾಡಲಾಗಿದೆ. ಜುಲೈ 8 ರಿಂದ ಲಿಂಗತ್ವ ಅಲ್ಪಸಂಖ್ಯಾತರು ಪ್ರಸ್ತುತ ವಾಸವಾಗಿರುವವರು ಮಹಿಳಾ ಮತ್ತು ಮಕ್ಕಳ ಅಭಿವರದ್ಧಿ ಇಲಾಖೆಯ ಉಪನಿರ್ದೇಶಕರ ಜಿಲ್ಲಾ ಕಚೇರಿಗೆ ತೆರಳಿ ಗೃಹಲಕ್ಷ್ಮಿ ಯೋಜನೆಯ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಟ್ರಾನ್ಸ್-ಜೆಂಡರ್ ಗುರುತಿನ ಚೀಟಿ, ಪಾಸ್‍ಪೋರ್ಟ್ ಅಳತೆಯ ಪೋಟೋ ಮತ್ತು ಆಧಾರ್ ಕಾರ್ಡ್‍ನ್ನು ಕಡ್ಡಾಯವಾಗಿ ನೀಡಬೇಕಾಗಿರುತ್ತದೆ ಎಂದು ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಬೆಂಗಳೂರು: ಐಎಎಸ್, ಐಆರ್‍ಎಸ್ ಸೇರಿ ಮತ್ತಿತರೆ ಸ್ಪರ್ಧಾತ್ಮಕ ಪರೀಕ್ಷೆ ಸಿದ್ದತೆಗಳಿಗಾಗಿ ದೆಹಲಿಯಲ್ಲಿ ಎಸ್‍ಸಿ/ಎಸ್‍ಟಿ ಮಕ್ಕಳಿಗೆ ಉತ್ತಮ ಹಾಸ್ಟೆಲ್ ಕಟ್ಟಿಸುವ ಜೊತೆಗೆ ತಿಂಗಳಿಗೆ 15 ಸಾವಿರ ರೂಪಾಯಿ ಕೊಡಲಾಗುವುದು (ಸದ್ಯ 10 ಸಾವಿರ ಕೊಡಲಾಗುತ್ತಿದ್ದು 5 ಸಾವಿರ ಹೆಚ್ಚಿಸಲಾಗುವುದು. ಈ ಸಂಬಂಧ ತಕ್ಷಣ ಆದೇಶ ಹೊರಡಿಸಲಾಗುವುದು) ದೆಹಲಿ ಹಾಸ್ಟೆಲ್ ನಲ್ಲಿ ಹೈಟೆಕ್ ಲೈಬ್ರೆರಿ ಮಾಡಲಾಗುವುದು. ಅಲ್ಲಿ ಎಲ್ಲಾ ರೀತಿಯ ಪುಸ್ತಕಗಳು ಸಿಗುವ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಇಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಹಮ್ಮಿಕೊಳ್ಳಲಾಗಿದ್ದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ರಾಜ್ಯ ಅಭಿವೃದ್ಧಿ ಪರಿಷತ್ ಸಭೆಯಲ್ಲಿ ಮಾತನಾಡಿದ ಅವರು, ಇಡೀ ದೇಶದಲ್ಲಿ ಎಸ್‍ಸಿಎಸ್‍ಪಿ / ಟಿಎಸ್‍ಪಿ ಕಾಯ್ದೆ ಮಾಡಿರುವುದು ನಾವು ಮಾತ್ರ. ಜನಸಂಖ್ಯೆಗೆ ಅನುಗುಣವಾಗಿ ಎಸ್‍ಸಿ / ಎಸ್‍ಟಿ ಸಮುದಾಯಕ್ಕೆ ಹಣ ಖರ್ಚು ಕೊಡುತ್ತಿರುವುದು ನಮ್ಮ ಸರ್ಕಾರ ಮಾತ್ರ ಎಂದು ಅವರು ತಿಳಿಸಿದರು. 2024-25 ನೇ ಸಾಲಿನಲ್ಲಿ ಎಸ್‍ಸಿಪಿ/ಟಿಎಸ್‍ಪಿ ಯೋಜನೆಯಲ್ಲಿ ಲಭ್ಯವಿರುವ ಹಣವನ್ನು ಖರ್ಚು ಮಾಡಲು ಕ್ರಿಯಾಯೋಜನೆಗೆ…

Read More

ಮೈಸೂರು: ಮೈಸೂರು: ಸಿಎಂ ಕುರ್ಚಿ ಮೇಲೆ ಕಣ್ಣಿಟ್ಟವರಿಂದ ಮುಡಾ ಹಗರಣ ಹೊರ ಬಂದಿದೆ ಅಂಥ ಕೇಂದ್ರ ಸಚಿವ ಹೆಚ್‌.ಡಿ ಕುಮಾರಸ್ವಾಮಿಯವರು ಹೊಸ ಬಾಂಬ್‌ ಸಿಡಿಸಿದ್ದಾರೆ. ಅವರು ಇಂದು ಸಚಿವರಾದ ಬಳಿಕ ಮೊದಲ ಬಾರಿಗೆ ಮೈಸೂರಿನ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿದ ಬಳಿಕ ಮಾಧ್ಯಮಗಳ ಜೊತೆಗೆ ಮಾತನಾಡಿದರು. ಇದೇ ವೇಳೆ ಅವರು ಮಾತನಾಡಿ, ಇಷ್ಟು ದಿನ ಹೊರಗೆ ಬಾರದ ಹಗರಣ ಈಗ ಬಂದಿದ್ದು ಹೇಗೆ? ಇದರ ಹಿಂದೆ ಸಿಎಂ ಖುರ್ಚಿ ಮೇಲೆ ಟವಲ್ ಹಾಕಿರುವವರ ಪಾತ್ರ ಇದೆ. ಸಿಡಿ ಫ್ಯಾಕ್ಟರಿ ಬಂದ್ ಆಯ್ತು ಮುಡಾ ಫ್ಯಾಕ್ಟರಿ ಶುರುವಾಯಿತು ಎಂದು ಹೇಳಿದರು.

Read More

ಬೆಂಗಳೂರು: ನಾಗೇಂದ್ರರ ರೀತಿ ನಿಮ್ಮ ರಾಜೀನಾಮೆ ಯಾವಾಗ ಸಿದ್ದರಾಮಯ್ಯನವರೇ ಅಂತ ರಾಜ್ಯ ಬಿಜೆಪಿ ಘಟನ ಟ್ವಿಟ್‌ ಮಾಡಿ ವ್ಯಂಗ್ಯ ಮಾಡಿದೆ. ಇದೇ ವೇಳೆ ಟ್ವಿಟ್‌ನಲ್ಲಿ ಆರ್ ಅಶೋಕ್‌ ಕರ್ನಾಟಕದ ಇತಿಹಾಸದಲ್ಲೇ ಅತ್ಯಂತ ದೊಡ್ಡ ಹಗರಣವಾದ ₹4,000 ಕೋಟಿ ಮೌಲ್ಯದ ಮುಡಾ ಹಗರಣದಲ್ಲಿ ದಿನಕ್ಕೊಂದು ಕರ್ಮಕಾಂಡ ಬಯಲಾಗುತ್ತಿದೆ. ಮುಖ್ಯಮಂತ್ರಿ ಅವರ ಪತ್ನಿಗೆ ಮಂಜೂರಾಗಿರುವ 35 ಕೋಟಿ ರೂಪಾಯಿ ಮೌಲ್ಯದ 14 ನಿವೇಶನಗಳಿಗೆ ಸಂಬಂಧಪಟ್ಟ ಕಡತಗಳನ್ನ ತಿರುಚುವ ಉದ್ದೇಶದಿಂದ ನಗರಾಭಿವೃದ್ಧಿ ಸಚಿವ ಅವರು ಕಡತಗಳನ್ನು ಬೆಂಗಳೂರಿಗೆ ತಂದಿರುವ ಗುಮಾನಿ ಇದೆ. ಸರ್ಕಾರ ಈ ಕೂಡಲೇ ಸಂಬಂಧಪಟ್ಟ ಕಡತಗಳನ್ನ ಬಹಿರಂಗ ಮಾಡಿ ಸಾರ್ವಜನಿಕರ ಮುಂದಿಡಬೇಕು ಎಂದು ಸಿಎಂ ಅವರನ್ನ ಒತ್ತಾಯಿಸುತ್ತೇನೆ ಅಂತ ಹೇಳಿದ್ದಾರೆ. https://twitter.com/BJP4Karnataka/status/1809068226443145687

Read More

ಬೆಂಗಳೂರು: ರಾಜ್ಯದ ಎಲ್ಲಾ ಇಲಾಖೆಗಳ ಸರ್ಕಾರಿ ಕಛೇರಿ ಕಛೇರಿಗಳಲ್ಲಿ ಬಯೋಮೆಟ್ರಿಕ್ ಯಂತ್ರದ ದಾಖಲಿಸುತ್ತಿರುವ ಕುರಿತು ಮಾಹಿತಿ ಒದಗಿಸುವ ಬಗ್ಗೆ ಮಾಹಿತಿಯನ್ನು ನೀಡುವಂತೆ ಅಧೀನ ಅಧಿಕಾರಿಗಳಿಂದ ಮಾಹಿತಿಯನ್ನು ಕೇಳಿದೆ. ಅದರಂತೆ. ರಾಜ್ಯ ಜ್ಯ ಸರ್ಕಾರವು ಹಲವು ಸುತ್ತೋಲೆಗಳ ಮೂಲಕ ರಾಜ್ಯ ಸರ್ಕಾರದ ಕಛೇರಿಗಳು ಸೇರಿದಂತೆ ಅಧೀನಕ್ಕೊಳಪಡುವ ಎಲ್ಲಾ ನಿಗಮ / ಮಂಡಳಿ / ಸ್ಥಳೀಯ ಸಂಸ್ಥೆಗಳಲ್ಲಿ ಅಧಿಕಾರಿ / ನೌಕರರ ದೈನಂದಿನ ಹಾಜರಾತಿಯನ್ನು ಬಯೋಮೆಟ್ರಿಕ್ ಯಂತ್ರದ ಮೂಲಕ ದಾಖಲಿಸಲು ಬಯೋಮೆಟ್ರಿಕ್ ಹಾಜರಾತಿಯನ್ನು ಕಡ್ಡಾಯವಾಗಿ ಜಾರಿಗೊಳಿಸಲು ನಿರ್ದೇಶನಗಳನ್ನು ನೀಡಿರುತ್ತದೆ. ಅದಾಗ್ಯೂ ಹಲವಾರು ಕಛೇರಿಯನ್ನೊಳಗೊಂಡಂತೆ ಅಧೀನ ಸಂಸ್ಥೆಗಳಲ್ಲಿ ಪ್ರಸ್ತುತದವರೆಗೂ ಬಯೋಮೆಟ್ರಿಕ್‌ ಹಾಜರಾತಿ ವ್ಯವಸ್ಥೆಯನ್ನು ಜಾರಿಗೊಳಿಸದ ಬಗ್ಗೆ ಸಾರ್ವಜನಿಕರಿಂದ ದೂರುಗಳು ಸ್ವೀಕೃತವಾಗುತ್ತಿವೆ. ಈ ನಿಟ್ಟಿನಲ್ಲಿ ತಮ್ಮ ಇಲಾಖೆಯ ಅಧೀನಕ್ಕೊಳಪಡುವ ಸರ್ಕಾರಿ ಕಛೇರಿಗಳು ಸೇರಿದಂತೆ ಅಧೀನ ಸಂಸ್ಥೆ/ನಿಗಮ/ಮಂಡಳಿಗಳಲ್ಲಿ ಬಯೋಮೆಟ್ರಿಕ್ ಹಾಜರಾತಿಯನ್ನು ಅಳವಡಿಸಿರುವ ಬಗ್ಗೆ ದಿನಾಂಕ: 06/07/2024ರೊಳಗಾಗಿ ಈ ಕಛೇರಿಗೆ ವರದಿ ಕಳುಹಿಸುವಂತೆ ತಿಳಿಸಿದೆ.

Read More