Author: kannadanewsnow07

ನವದೆಹಲಿ: ತಮ್ಮ ಮೂರನೇ ಅವಧಿಯ ಮೊದಲ ಸಂಸತ್ ಅಧಿವೇಶನವನ್ನು ಮುಂಚೂಣಿಯಲ್ಲಿ ಪ್ರಾರಂಭಿಸಿದ ಪ್ರಧಾನಿ, ಇಂದು ಬೆಳಿಗ್ಗೆ ಲೋಕಸಭೆ ಸಭೆ ಸೇರುವ ಮೊದಲು ಪ್ರಮುಖ ಪ್ರತಿಪಕ್ಷ ಕಾಂಗ್ರೆಸ್ ವಿರುದ್ಧ ‘ತುರ್ತು ಪರಿಸ್ಥಿತಿ’ ಬಗ್ಗೆ ಉಲ್ಲೇಖ ಮಾಡಿ ಅವರ ವಿರುದ್ದ ವಾಗ್ದಾಳಿ ನಡೆಸಿದರು. ಸದನ ಸೇರುವ ಮೊದಲು ಮಾಧ್ಯಮಗಳನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ, ಈ ಜೂನ್ 25 – ನಾಳೆ – ತುರ್ತು ಪರಿಸ್ಥಿತಿಯ 50 ನೇ ವಾರ್ಷಿಕೋತ್ಸವವನ್ನು ಗುರುತಿಸುತ್ತದೆ ಮತ್ತು ಇದು ದೇಶದ ಪ್ರಜಾಪ್ರಭುತ್ವಕ್ಕೆ “ಕಪ್ಪು ಚುಕ್ಕೆ” ಎಂದು ಕರೆದರು. ಸರ್ಕಾರವು ತನ್ನ ಮೂರನೇ ಅವಧಿಯಲ್ಲಿ ಮೂರು ಪಟ್ಟು ಹೆಚ್ಚು ಶ್ರಮಿಸುತ್ತದೆ ಮತ್ತು ಮೂರು ಪಟ್ಟು ಫಲಿತಾಂಶಗಳನ್ನು ನೀಡುತ್ತದೆ ಎಂದು ಪ್ರಧಾನಿ ಜನರಿಗೆ ಭರವಸೆ ನೀಡಿದರು. ಈ ಚುನಾವಣೆ ಮಹತ್ವದ್ದಾಗಿದೆ ಏಕೆಂದರೆ ಸ್ವಾತಂತ್ರ್ಯದ ನಂತರ ಸತತ ಮೂರನೇ ಅವಧಿಗೆ ಮುಂದುವರಿಯಲು ಆಯ್ಕೆಯಾದ ಎರಡನೇ ಸರ್ಕಾರ ಇದಾಗಿದೆ ಎಂದು ಅವರು ಹೇಳಿದರು. “60 ವರ್ಷಗಳ ನಂತರ ಈ ಅವಕಾಶ ಬಂದಿದೆ. ಜನರು ಮೂರನೇ ಅವಧಿಗೆ ಸರ್ಕಾರವನ್ನು…

Read More

ನವದೆಹಲಿ: ಕೇಂದ್ರ ಸಚಿವರಾಗಿ ನೇಮಕಗೊಂಡಿರುವ ರಾಜ್ಯದ ಸಂಸದರಾದ ಹೆಚ್.ಡಿ ಕುಮಾರಸ್ವಾಮಿ, ಪ್ರಹ್ಲಾದ್ ಜೋಶಿ (Pralhad Joshi), ವಿ.ಸೋಮಣ್ಣ (V Somanna) ಹಾಗೂ ಶೋಭಾ ಕರಂದ್ಲಾಜೆಯವರು (Shobha Karandlaje) ಕನ್ನಡದಲ್ಲಿಯೇ ಪ್ರಮಾಣವಚನ ಮಾಡಿ ಎಲ್ಲರ ಗಮನ ಸೆಳೆದರು. ಈ ವೇಳೆ ಮೂವರು ನೂತನ ಸಂಸದರು ದೇವರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಮೊದಲ ಬಾರಿಗೆ ಸಂಸತ್ ಪ್ರವೇಶಿಸುತ್ತಿರುವ ಸೋಮಣ್ಣ ಅವರು, ಪ್ರಮಾಣವಚನ ಸ್ವೀಕಾರಕ್ಕೂ ಮುನ್ನ ಮೆಟ್ಟಿಲುಗಳಿಗೆ ನಮಸ್ಕರಿಸಿ ಸಂಸತ್ ಭವನ್ನು ಪ್ರವೇಶ ಮಾಡಿದರು. ಅಂದ ಹಾಗೇ ಹೆಚ್.ಡಿ ಕುಮಾರಸ್ವಾಮಿಯವರಿಗೆ (ಮಂಡ್ಯ) ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕೆ, ಪ್ರಹ್ಲಾದ್ ಜೋಶಿಯವರಿಗೆ (ಧಾರವಾಡ) ಕಲ್ಲಿದ್ದಲು ಮತ್ತು ಗಣಿ ಹಾಗೂ ರೈಲ್ವೇ ಇಲಾಖೆಯನ್ನು ವಿ.ಸೋಮಣ್ಣ (ತುಮಕೂರು) ಅವರಿಗೆ ನೀಡಲಾಗಿದೆ. ಶೋಭಾ ಕರಂದ್ಲಾಜೆಯವರು (ಬೆಂಗಳೂರು ಉತ್ತರ) ಕಾರ್ಮಿಕ ಮತ್ತು ಉದ್ಯೋಗ ಖಾತೆ ರಾಜ್ಯ ಸಚಿವರಾಗಿದ್ದಾರೆ.

Read More

ಬೆಂಗಳೂರು: ಕರ್ನಾಟಕ ಕೌಶಲ್ಯಾಭಿವೃದ್ದಿ ನಿಗಮವು ರಾಜ್ಯದ ಯುವಕರಿಗೆ ಹೊರ ದೇಶಗಳಲ್ಲಿ ಉದ್ಯೋಗ ಒದಗಿಸುವ ಮಹತ್ವದ ಯೋಜನೆಯನ್ನು ಅನುಷ್ಠಾನಗೊಳಿಸಿದೆ. ಇದರ ಭಾಗವಾಗಿ ಸ್ಲೊವೆನಿಯಾ ರಾಷ್ಟ್ರದಲ್ಲಿ ಬಿಇ, ಡಿಪ್ಲೊಮೊ, ಐಟಿಐ ಮತ್ತಿತರ ವೃತ್ತಿಪರ ಕೋರ್ಸ್‍ಗಳನ್ನು ಮುಗಿಸಿದ 94 ಯುವಕರಿಗೆ ಉದ್ಯೋಗ ನೀಡುವಲ್ಲಿ ಕೌಶಲ್ಯಾಭಿವೃದ್ಧಿ ನಿಗಮವು ಯಶಸ್ವಿಯಾಗಿದೆ. ಉದ್ಯೋಗವಿಲ್ಲದೆ ಕೆಲಸ ಹುಡುಕುತ್ತಿದ್ದ ಯುವಕರು ಇದೀಗ ವಿದೇಶದಲ್ಲಿ ಕೈ ತುಂಬಾ ಸಂಬಳ ಪಡೆಯುತ್ತಿದ್ದು, ತಮ್ಮ ಭವಿಷ್ಯವನ್ನು ರೂಪಿಸಿಕೊಂಡಿದ್ದಾರೆ. ಯುವಕರ ಕೌಶಲ್ಯಾ ಅರ್ಹತೆಗೆ ತಕ್ಕಂತೆ ಉದ್ಯೋಗಗಳನ್ನುನೀಡಲಾಗುತ್ತಿದೆ. ಅವರಿಗೆ ಇಲ್ಲಿಯೇ ತರಬೇತಿ, ವೀಸಾ ವ್ಯವಸ್ಥೆ, ಗೃಹ ಇಲಾಖೆಯಲ್ಲಿ ದಾಖಲಾತಿಗಳ ಪ್ರಮಾಣಪತ್ರ ಪರಿಶೀಲನೆ ಮಾತ್ರವಲ್ಲದೆ ಹೊರರಾಷ್ಟ್ರಗಳಿಗೆ ತೆರಳುವವರಿಗೆ ಊಟ, ವಸತಿ ವ್ಯವಸ್ಥೆ, ಸಂಬಂಧಪಟ್ಟವರ ಭೇಟಿಗೆ ಬೇಕಾದ ಇನ್ನಿತರ ಸೌಲಭ್ಯಗಳನ್ನು ಸಹ ಇಲಾಖೆಯ ಅಧಿಕಾರಿಗಳೇ ನಿಗಾವಹಿಸುತ್ತಾರೆ. ಐಟಿಬಿಟಿ, ವಿಜ್ಞಾನ, ಕೈಗಾರಿಕೆ, ಆರೋಗ್ಯ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಕರ್ನಾಟಕ ಇತರೆ ರಾಜ್ಯಗಳಿಗೆ ಹೋಲಿಸಿದರೆ ಸಾಕಷ್ಟು ಮುಂಚೂಣಿಯಲ್ಲಿದೆ. ಇದನ್ನು ಮನಗಂಡ ಸ್ಲೊವೆನಿಯಾ ರಾಷ್ಟ್ರವು ಎರಡೂವರೆ ಸಾವಿರ ಅಸೆಂಬ್ಲಿ ಲೈನ್ ಆಪರೇಟರ್‌ಗಳನ್ನು ನೇಮಕ ಮಾಡಿಕೊಳ್ಳಲು ಮುಂದೆ ಬಂದಿತ್ತು.…

Read More

ಬೆಂಗಳೂರು: ಶೀಘ್ರದಲ್ಲಿ ಹೊಸದಾಗಿ ಒಂದು ಸಾವಿರ ಗ್ರಾಮ ಲೆಕ್ಕಾಧಿಕಾರಿಗಳ ನೇಮಕಕ್ಕೆ ಕ್ರಮ ಕೈಗೊಳ್ಳಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ. ಅವರು ಕಲಬುರಗಿ ನಗರದಲ್ಲಿವಿಭಾಗ ಮಟ್ಟದ ಕಂದಾಯ ಇಲಾಖೆ ಅಧಿಕಾರಿಗಳ ಸಭೆಗೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡುತ್ತ ಈ ಬಗ್ಗೆ ಮಾಹಿತಿ ನೀಡಿದರು. ಇದೇ ವೇಳೆ ಅವರು ಮಾತನಾಡುತ್ತ, ಸರ್ವೆ ಕೆಲಸಗಳು ವಿಳಂಬವಾಗುವುದನ್ನು ತಪ್ಪಿಸಲು ಸರ್ವೆಯರ್‌ಗಳ ಹುದ್ದೆಗಳನ್ನೂ ಕೂಡ ಭರ್ತಿ ಮಾಡಲಾಗುವುದು ಅಂತ ತಿಳಿಸಿದರು. ಇನ್ನೂ ‘ಈ ಬಾರಿ ವಾಡಿಕೆಗಿಂತ ಹೆಚ್ಚಿನ ಮಳೆ ಆಗುವ ಹಿನ್ನಲೆಯಲ್ಲಿ ಮುಂಜಾಗ್ರತ ಕ್ರಮವಾಗಿ ಅಧಿಕಾರಿಗಳಿಗೆ ಎಲ್ಲಾ ರೀತಿಯ ಸಿದ್ದತೆಗಳನ್ನು ಮಾಡಿಕೊಳ್ಳುವಂತೆ ಸೂಚನೆ ನೀಡಲಾಗಿದೆ ಅಂತ ತಿಳಿಸಿದರು.

Read More

ನವದೆಹಲಿ: ಇಂದು ಲೋಕಸಭೆಯಲ್ಲಿ ನೂತನ ಸಂಸದರಿಗೆ ಹಂಗಾಮಿ ಸ್ಪೀಕರ್‌ ಪ್ರಮಾಣ ವಚನ ಭೋದನೆ ಮಾಡುತ್ತಿದ್ದಾರೆ. ಈ ನಡುವೆ ಕೇಂದ್ರ ಸಚಿವ, ಹಾಗೂ ಮಂಡ್ಯ ಸಂಸದ, ಮಾಜಿ ಸಿಎಂ ಹೆಚ್‌.ಡಿ ಕುಮಾರಸ್ವಾಮಿಯವರು ಕನ್ನಡದಲ್ಲೇ ತಮ್ಮ ಸಂಸದ ಸ್ಥಾನದ ಪ್ರಮಾಣ ವಚನ ಸ್ವೀಕರಿಸಿ ಎಲ್ಲರ ಗಮನ ಸೆಳೆದರು. ಮಂಡ್ಯದಲ್ಲಿ ತಮ್ಮ ಸಮೀಪದ ಪ್ರತಿಸ್ಪರ್ಧಿ ಕಾಂಗ್ರೆಸ್ ನ ವೆಂಕಟರಮಣೇಗೌಡ (ಅಲಿಯಾಸ್ ‘ಸ್ಟಾರ್’ ಚಂದ್ರು) ವಿರುದ್ಧ 2,84,620 ಮತಗಳ ಅಂತರದಿಂದ ಅವರು ಗೆಲುವಕಂಡಿದ್ದು, ಸದ್ಯ ಅವರು ಎನ್‌ಡಿಎ ಸರ್ಕಾರದಲ್ಲಿ ಕೇಂದ್ರ ಸಚಿವರಾಗಿ ಅಧಿಕಾರ ಸ್ವೀಕಾರಿದ್ದಾರೆ ಕೂಡ. https://twitter.com/ani_digital/status/1805119713875259523

Read More

ಬೆಂಗಳೂರು: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರು ಪಶ್ಚಿಮ ಸಂಚಾರ ಪೊಲೀಸರು ಬೆಂಗಳೂರಿನ ಪ್ರಮುಖ ರಸ್ತೆಗಳಲ್ಲಿ ರಾಂಗ್ ಸೈಡ್ ಡ್ರೈವಿಂಗ್ ವಿರುದ್ಧ ವಿಶೇಷ ಕಾರ್ಯಾಚರಣೆ ನಡೆಸಿದರು. ಅನೇಕ ಪ್ರಯಾಣಿಕರು, ವಿಶೇಷವಾಗಿ ಬೈಕ್ ಸವಾರರು ರಾಂಗ್ ರೂಟ್ ನಲ್ಲಿ ಚಾಲನೆ ಮಾಡುತ್ತಿರುವುದು ಕಂಡುಬಂದಿದೆ ಮತ್ತು ಬೆಂಗಳೂರು ಪಶ್ಚಿಮದ ಎಲ್ಲಾ ಸಂಚಾರ ಮಿತಿಗಳಲ್ಲಿ ಪೊಲೀಸರು ಅಪರಾಧಿಗಳ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.  ಸಿಗ್ನಲ್ ಜಂಪ್ ಮಾಡುವುದು, ಹೆಲ್ಮೆಟ್ ಇಲ್ಲದೆ ಸವಾರಿ ಮಾಡುವುದು, ಟ್ರಿಪಲ್ ರೈಡಿಂಗ್ ಮತ್ತು ಚಾಲನೆ ಮಾಡುವಾಗ ಮೊಬೈಲ್ ಫೋನ್ ಬಳಸುವುದು ಮುಂತಾದ ವೇಗದ ಮಿತಿಯ ಉಲ್ಲಂಘನೆಗಳನ್ನು ಎಐ ವ್ಯವಸ್ಥೆಯು ಪತ್ತೆ ಮಾಡುತ್ತದೆ. ಸಂಚಾರ ದಟ್ಟಣೆಯನ್ನು ಪತ್ತೆಹಚ್ಚಲು ಮತ್ತು ವಾಹನಗಳ ಸುಗಮ ಚಲನೆಗಾಗಿ ಡ್ರೋನ್ ಗಳನ್ನು ಬಳಸುತ್ತಿದ್ದಾರೆ. ಮೋಟಾರು ವಾಹನ ಕಾಯ್ದೆಯ ಸೆಕ್ಷನ್ 129 (ಎ) ಪ್ರಕಾರ ನಾಲ್ಕು ವರ್ಷಕ್ಕಿಂತ ಮೇಲ್ಪಟ್ಟ ಮಕ್ಕಳು ಸೇರಿದಂತೆ ಎಲ್ಲರಿಗೂ ಹೆಲ್ಮೆಟ್ ಕಡ್ಡಾಯವಾಗಿದ್ದರೂ, ಹೆಲ್ಮೆಟ್ ಪ್ರಾಮುಖ್ಯತೆಯ ಬಗ್ಗೆ ಈಗಾಗಲೇ ಸಾಕಷ್ಟು ಜಾಗೃತಿ ಮೂಡಿಸಿರುವುದರಿಂದ ಉಲ್ಲಂಘನೆಗೆ…

Read More

ಕೊಡಗು: ಕೊಡಗಿನ ಕುಶಾಲನಗರದಲ್ಲಿ ಗುಂಡಿನ ಸುದ್ದಿ ತಡರಾತ್ರಿ ಕೇಳಿ ಬಂದಿದ್ದು, ಸ್ಥಳೀಯ ಉದ್ಯಮ ಶಶಿಧರ್ ಎನ್ನುವವರ ಮೇಲೆ ಅನುದೀಪ್‌ ಎನ್ನುವವರು ಎಂಟು ಸುತ್ತಿನ ಗುಂಡಿನ ದಾಳಿ ನಡೆದಿದೆ ಎನ್ನಲಾಗಿದೆ. ಸದ್ಯ ಶಶಿಧರ್‌ ಕಾಲಿಗೆ ಗುಂಡಿನ ದಾಳಿಯಲ್ಲಿ ಗಾಯಗೊಂಡಿದ್ದು, ಸದ್ಯ ಅವರನ್ನು ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ ಅಂಥ ತಿಳಿದು ಬಂದಿದೆ. ನಿನ್ನೆ ತಡರಾತ್ರಿ ತನ ಇಬ್ಬರು ಪಾರ್ಟಿ ನಡೆಸಿದ್ದಾರೆ ಎನ್ನಲಾಗಿದೆ. ಇಬ್ಬರು ಕೂಡ ಪಾರ್ಟನರ್‌ ಆಗಿದ್ದಾರೆ ಎನ್ನಲಾಗಿದೆ. ಪಾರ್ಟಿಯಲ್ಲಿ ಜಗಳವಾದ ಬಳಿಕ ಇಬ್ಬರು ಕೂಡ ಮನೆಗೆ ವಾಪಸ್ಸು ಹೋಗಿದ್ದಾರೆ, ಆದರೆ ಕೆಲವೇ ಗಂಟೆಯಲ್ಲಿ ಶಶಿಧರ್‌ ಅವರು ಅನುದೀಪ್ ಅವರ ಮನೆ ಬಳಿ ಬಂದು ಗಲಾಟೆ ಮಾಡಿದ್ದಾರೆ ಎನ್ನಲಾಗಿದೆ. ಈ ವೇಳೆ ಅನುದೀಪ್‌ ಗುಂಡಿನ ದಾಳಿ ನಡೆಸಿದ್ದು, ಅಲ್ಲೇ ಇದ್ದ ಫಾರ್ಚೈನರ್ ಕಾರಿನ ಮೇಲೆ ಗುಂಡಿನ ದಾಳಿಯ ಕೂರುಹುಗಳು ಕಂಡು ಬಂದಿದೆ.

Read More

ಬೆಂಗಳೂರು: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಇಂದು ಸಾವಿರಾರು ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ . ಸೋಮನಹಳ್ಳಿ ಗೇಟ್‌ನಿಂದ ರೈತರು ಪಾದಯಾತ್ರೆ ನಡೆಸಲು ಮುಂದಾಗಿದ್ದು, ಇದೇ ವೇಳೆ ಡಿಸಿ ಕಚೇರಿಗೆ ಮುತ್ತಿಗೆ ಹಾಕಲು ಮುಂದಾಗಿದೆ ಮುಂದಾಗಿದ್ದಾರೆ ಎನ್ನಲಾಗಿದೆ. ಇದಲ್ಲದೇ ತಮ್ಮ ಹೊಲದ ಮೇಲೆ ಸಂಪೂರ್ಣ ಹಕ್ಕನ್ನು ನೀಡುವುದು ಸೇರಿದಂತೆ ಸ್ಥಗಿತಗೊಂಡಿರುವ ಹಾಲು ಪ್ರೋತ್ಸಾಹದನ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿದ್ದಾರೆ. ಇದೇ ವೇಳೆ ಸ್ಥಳಕ್ಕೆ ಆಗಮಿಸಿದ ಪೊಲೀಸರು ಪ್ರತಿಭಟನಕಾರ ಮನವೊಲಿಸಲುವುದಕ್ಕೆ ಮುಂದಾಗಿದ್ದು, ಸ್ಥಳದಲ್ಲಿ ಬಿಗುವಿನ ವಾತವಾರವಣ ನಿರ್ಮಾಣವಾಗಿದೆ.

Read More

ನವದೆಹಲಿ: ವಯನಾಡ್ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ರಾಜೀನಾಮೆಯನ್ನು ಹಂಗಾಮಿ ಸ್ಪೀಕರ್ ಭರ್ತೃಹರಿ ಮಹತಾಬ್ ಅಂಗೀಕರಿಸಿದ್ದಾರೆ. ರಾಹುಲ್ ಗಾಂಧಿ ರಾಯ್ಬರೇಲಿ ಲೋಕಸಭಾ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ.  18 ನೇ ಲೋಕಸಭೆಯ ಮೊದಲ ಅಧಿವೇಶನವು ಹೊಸ ಸಂಸತ್ ಕಟ್ಟಡದಲ್ಲಿ ಪ್ರಾರಂಭವಾಗುತ್ತದೆ. ಹೊಸದಾಗಿ ಆಯ್ಕೆಯಾದ ಸಂಸದರ ಪ್ರಮಾಣ ವಚನ ಸ್ವೀಕಾರ ಸಮಾರಂಭ ಶೀಘ್ರದಲ್ಲೇ ನಡೆಯಲಿದೆ. https://twitter.com/ANI/status/1805113166902567251

Read More

ನವದೆಹಲಿ: ಲೋಕಸಭಾ ಸದ್ಯಸರಾಗಿ ಪ್ರಧಾನಿ ನರೇಂದ್ರ ಮೋದಿಯವರು ಇಂದು ಪ್ರಮಾಣವಚನ ಸ್ವೀಕಾರ ಮಾಡಿದರು. 18 ನೇ ಲೋಕಸಭೆ ಜೂನ್ 24 ರಂದು ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹೊಸದಾಗಿ ಆಯ್ಕೆಯಾದ ಸಂಸದರ ಪ್ರಮಾಣ ವಚನ ಸ್ವೀಕಾರ ಸಮಾರಂಭದೊಂದಿಗೆ ಪ್ರಾರಂಭವಾಗಿದೆ. ಈ ನಡುವೆರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಲೋಕಸಭೆಯ ಹಂಗಾಮಿ ಸ್ಪೀಕರ್ ಆಗಿ ಬಿ.ಮಹತಾಬ್ ಅವರಿಗೆ ಪ್ರಮಾಣ ವಚನ ಬೋಧಿಸಿದರು https://twitter.com/ANI/status/1805113365993574764

Read More