Subscribe to Updates
Get the latest creative news from FooBar about art, design and business.
Author: kannadanewsnow07
ಜೆರುಸಲೇಂ: ಗಾಝಾದ ರಫಾ ಮತ್ತು ಇತರ ಪ್ರದೇಶಗಳ ಮೇಲೆ ಇಸ್ರೇಲ್ ಶುಕ್ರವಾರ ನಡೆಸಿದ ಬಾಂಬ್ ದಾಳಿಯಲ್ಲಿ 45 ಫೆಲೆಸ್ತೀನೀಯರು ಸಾವನ್ನಪ್ಪಿದ್ದಾರೆ. ಇಸ್ರೇಲಿ ಸೇನೆಯು ಅನೇಕ ಸ್ಥಳಗಳಲ್ಲಿ ಪ್ಯಾಲೆಸ್ತೀನ್ ಉಗ್ರರೊಂದಿಗೆ ಹೋರಾಡುತ್ತಿದೆ ಎಂದು ಹೇಳಿದೆ. ಈಜಿಪ್ಟ್ ಗಡಿಯ ಸಮೀಪವಿರುವ ರಫಾ ಪಟ್ಟಣದಲ್ಲಿ ಇಸ್ರೇಲಿ ಪಡೆಗಳು ಸುಮಾರು ಒಂದೂವರೆ ತಿಂಗಳಿನಿಂದ ಹೋರಾಡುತ್ತಿವೆ ಆದರೆ ಅದನ್ನು ಸಂಪೂರ್ಣವಾಗಿ ವಶಪಡಿಸಿಕೊಳ್ಳುವಲ್ಲಿ ವಿಫಲವಾಗಿವೆ ಎನ್ನಲಾಗಿದೆ. ಗಾಜಾದ ಇತರ ನಗರಗಳಿಂದ 100,000 ಕ್ಕೂ ಹೆಚ್ಚು ನಿರಾಶ್ರಿತ ಫೆಲೆಸ್ತೀನೀಯರು ಇನ್ನೂ ರಫಾದಲ್ಲಿ ಆಶ್ರಯ ಪಡೆದಿದ್ದಾರೆ, ಇದು ಮೇ ಆರಂಭದಲ್ಲಿ 1.4 ಮಿಲಿಯನ್ ಆಗಿತ್ತು. ಇಸ್ರೇಲಿ ದಾಳಿಯಿಂದ ತಪ್ಪಿಸಿಕೊಳ್ಳಲು ಸುಮಾರು 1.3 ಮಿಲಿಯನ್ ಜನರು ಗಾಜಾದ ಇತರ ಭಾಗಗಳಿಗೆ ಪಲಾಯನ ಮಾಡಿದ್ದಾರೆ. ಶೆಲ್ ದಾಳಿ: 12 ಫೆಲೆಸ್ತೀನ್ ನಿರಾಶ್ರಿತರ ಸಾವು: ರಫಾ ನಿವಾಸಿಗಳ ಪ್ರಕಾರ, ನಗರದ ಪಶ್ಚಿಮ ಮತ್ತು ಉತ್ತರ ಗಡಿಗಳಿಂದ ಇಸ್ರೇಲಿ ಟ್ಯಾಂಕ್ ಗಳು ಶೆಲ್ ದಾಳಿ ನಡೆಸುತ್ತಿವೆ. ಸಮುದ್ರದಲ್ಲಿ ಲಂಗರು ಹಾಕಿರುವ ಫೈಟರ್ ಜೆಟ್ ಗಳು ಮತ್ತು ಯುದ್ಧನೌಕೆಗಳು ರಾಕೆಟ್…
ವಿಜಯನಗರ, ಜೂನ್ 21: ವಿಜಯನಗರ ಜಿಲ್ಲಾ ಅಭಿವೃದ್ಧಿ ಕಾರ್ಯಕ್ರಮಗಳ ಪ್ರಗತಿ ಪರಿಶೀಲನೆಯ ಸಭೆಯಲ್ಲಿ ಅಧಿಕಾರಿಗಳಿಗೆ ಸರ್ಕಾರದ ನಿಲುವನ್ನು ಸ್ಪಷ್ಟಪಡಿಸಲಾಗಿದೆ. 80 ದಿನಗಳ ನೀತಿ ಸಂಹಿತೆಯಿಂದಾಗಿ ಅಧಿಕಾರಿಗಳಲ್ಲಿ ಜಡತ್ವ ಬೆಳೆದಿದ್ದು ಅದನ್ನು ಬಿಡಿಸುವ ಕೆಲಸಾವಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಜಿಲ್ಲಾ ಮಟ್ಟದ ಅಭಿವೃದ್ಧಿ ಕಾರ್ಯಕ್ರಮಗಳ ಪ್ರಗತಿ ಪರಿಶೀಲನೆಯ ನಂತರ ಅವರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ಡಿಡಿಪಿಐ ಅಮಾನತು ಎಸ್.ಎಸ್ ಎಲ್ ಸಿ ಪರೀಕ್ಷೆಯಲ್ಲಿ ರಾಜ್ಯದಲ್ಲಿ 10 ನೇ ಸ್ಥಾನದಲ್ಲಿದ್ದ ಜಿಲ್ಲೆ 27 ನೇ ಸ್ಥಾನಕ್ಕೆ ಕುಸಿದಿದೆ. ಪ್ರಾಥಮಿಕ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿಗಳೊಂದಿಗೆ ಮಾತನಾಡಿದ್ದು ಪರೀಕ್ಷಾ ಅಕ್ರಮವಾಗಿರುವುದರಿಂದ ಇಷ್ಟೊಂದು ವ್ಯಾತ್ಯಾಸವಾಗಲು ಕಾರಣ ಎಂದು ಹೇಳಿದರು. ಈ ಕಾರಣಕ್ಕಾಗಿ ಡಿಡಿಪಿಐ ಅವರನ್ನು ಅಮಾನತು ಗೊಳಿಸಲು ಹಾಗೂ ಬಿಇಒ ಗಳಿಗೆ ನೋಟೀಸು ಜಾರಿಮಾಡಲು ಸೂಚಿಸಲಾಗಿದೆ ಎಂದರು. ಶಿಕ್ಷಕರೂ ಕೂಡ ಇದಕ್ಕೆ ಕಾರಣಕರ್ತರು. ಜಿಲ್ಲಾ ಪಂಚಾಯತಿ ಸಿಇಒ ಕೂಡ ಇದಕ್ಕೆ ಜವಾಬ್ದಾರರಾಗಿರುವುದರಿಂದ ಅವರಿಗೂ ನೋಟೀಸು ಕೊಡುವಂತೆ ಸೂಚಿಸಲಾಗಿದೆ ಎಂದರು. ಇನ್ ಪುಟ್ ಸಬಸಿಡಿಯಲ್ಲಿ ಶೇ 100 ರಷ್ಟು…
ಬೆಂಗಳೂರು: ‘ಗಂಡನ ಪ್ರಿಯತಮೆ ಸಂಬಂಧಿ ಅಥವಾ ಕುಟುಂಬದ ಸದಸ್ಯೆಯಲ್ಲ ಅಂಥ ಹೇಳಿರುವ ಹೈಕೋರ್ಟ್ ಮಹಿಳೆಯ ಕ್ರಿಮಿನಲ್ ಕೇಸ್ ರದ್ದುಗೊಳಿಸಿ ಆದೇಶ ಹೊರಡಿಸಿದೆ. : ಭಾರತೀಯ ದಂಡ ಸಂಹಿತೆಯ ಸೆಕ್ಷನ್ 498-ಎ ಅಡಿಯಲ್ಲಿ ಮಹಿಳೆಯೊಬ್ಬಳು ತನ್ನ ಗಂಡನ ಪ್ರಿಯಕರನ ವಿರುದ್ಧ ದಾಖಲಿಸಿದ್ದ ಕ್ರಿಮಿನಲ್ ಪ್ರಕರಣವನ್ನು ಕರ್ನಾಟಕ ಹೈಕೋರ್ಟ್ ಇತ್ತೀಚೆಗೆ ರದ್ದುಗೊಳಿಸಿದೆ. ಭಾರತೀಯ ದಂಡ ಸಂಹಿತೆಯ (ಐಪಿಸಿ) ವಿವಿಧ ವಿಭಾಗಗಳು ಮತ್ತು ವರದಕ್ಷಿಣೆ ನಿಷೇಧ ಕಾಯ್ದೆ, 1961 ರ ಸೆಕ್ಷನ್ 3 ಮತ್ತು 4 ರ ಅಡಿಯಲ್ಲಿ ದಾಖಲಾದ ಪ್ರಕರಣದಲ್ಲಿ ಆರೋಪಿಗಳೆಂದು ಹೆಸರಿಸಲಾಗಿರುವ ಮಹಿಳೆ ಮತ್ತು ಆಕೆಯ ತಾಯಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ಏಕಸದಸ್ಯ ನ್ಯಾಯಪೀಠ ವಿಚಾರಣೆ ನಡೆಸಿತು.
ಬೆಂಗಳೂರು: ನೀಟ್ ಪರೀಕ್ಷೆಗೆ ಸರ್ಕಾರದಿಂದ ಉಚಿತ ತರಬೇತಿಗೆ ಚಿಂತನೆ ನಡೆಸಲಾಗಿದೆ ಅಂಥ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು. ಅವರು ಸುದ್ದಿಗಾರರ ಜೊತೆಗೆ ಮಾತನಾಡುತ್ತ ಈ ಬಗ್ಗೆ ತಿಳಿಸಿದರು. ಇದೇ ವೇಳೆ ಅವರು ಮಾತನಾಡಿ. ಕೇಂದ್ರ ಮರು ಪರೀಕ್ಷೆ ನಿಗದಿ ಮಾಡಿರುವುದರಿಂದ ರಾಜ್ಯ ಸರ್ಕಾರವೇ ನುರಿತ ಉಪನ್ಯಾಸಕರಿಂದ ಉಚಿತವಾಗಿ ತರಬೇತಿ ನೀಡಲು ಮುಂದಾಗಿದೆ ಅಂತ ತಿಳಿಸಿದರು. ಇನ್ನೂ ಇದರಿಂದ ಬಡ ವಿದ್ಯಾರ್ಥಿಗಳಿಗೆ ಪ್ರಯೋಜನವಾಗಲಿದೆ ಎಂದು ಅವರು ಇದೇ ವೇಳೆ ತಿಳಿಸಿದರು. ನೀಟ್ ಪರೀಕ್ಷೆಯಲ್ಲಿ ಪ್ರಶ್ನೆಪತ್ರಿಕೆ ಸೋರಿಕೆಯಿಂದ ವಾಮಮಾರ್ಗದಲ್ಲಿ ಸೀಟ್ ಪಡೆಯುವುದರಿಂದ ಪ್ರತಿಭಾವಂತರಿಗೆ ಅನ್ಯಾಯವಾಗುತ್ತದೆ ಅಂತ ಹೇಳಿದ ಅವರು ನೀಟ್ ಪರೀಕ್ಷೆಯಲ್ಲಿ ಆಗಿರುವ ಅದ್ವಾನದಿಂದ ವಿದ್ಯಾರ್ಥಿಗಳು ಕಂಗಾಲಾಗಿದ್ದಾರೆ. ಈ ರೀತಿಯ ಗೊಂದಲಗಳಿಗೆ ತೆರೆ ಬೀಳಬೇಕಾಗಿದೆ ಅಂತ ತಿಳಿಸಿದರು. ರಾಜ್ಯದಲ್ಲಿ ಸುಮಾರು 1,900 ಅನಧಿಕೃತ ಶಾಲೆಗಳನ್ನು ಸರ್ಕಾರ ಗುರುತಿಸಿದೆ. ಕಾನೂನು ಉಲ್ಲಂಸಿದವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಅನುದಾನಿತ ಶಾಲೆಗಳಿಗೆ ನೇಮಕಾತಿಗೆ ಸಂಬಂಧಿಸಿದಂತೆ ಈಗಿರುವ ನಿರ್ಬಂಧವನ್ನು ಸಡಿಲಿಸಲು ಚರ್ಚೆ ನಡೆಸಲಾಗಿದೆ ಅಂಥ ತಿಳಿಸಿದರು.
ಬೆಂಗಳೂರು: ಜೂನ್, 26 ರಿಂದ ಜುಲೈ, 05 ರವರೆಗೆ ನಡೆಯುವ ದ್ವಿತೀಯ ಪಿ.ಯು.ಸಿ ಪರೀಕ್ಷೆ-3 ಗಳನ್ನು ಯಾವುದೇ ಅವ್ಯವಹಾರಗಳಿಲ್ಲದಂತೆ ಸುಗಮವಾಗಿ ನಡೆಸುವ ಸಲುವಾಗಿ ದಂಡ ಪ್ರಕ್ರಿಯಾ ಸಂಹಿತೆ 1973ರ ಕಲಂ 144 ರಡಿ ದತ್ತವಾದ ಅಧಿಕಾರದಂತೆ ಪರೀಕ್ಷಾ ಕೇಂದ್ರ-ಕಾಲೇಜುಗಳ ಸುತ್ತಲಿನ 200 ಮೀಟರ್ ವ್ಯಾಪ್ತಿಯಲ್ಲಿನ ಪ್ರದೇಶವನ್ನು ನಿರ್ಬಂಧಿತ ಪ್ರದೇಶ ಎಂದು ಘೋಷಿಸಲಾಗಿದೆ. ನಿಷೇಧಿತ ವಲಯದಲ್ಲಿ ಯಾವುದೇ ರೀತಿಯಲ್ಲಿ ಪರೀಕ್ಷೆಯಲ್ಲಿ ನಕಲು ಹೊಡೆಯಲು ಸಹಾಯ ಮಾಡುವುದು, ಚೀಟಿ ಅಥವಾ ಇನ್ನಿತರ ರೀತಿಯಲ್ಲಿ ಉತ್ತರಗಳನ್ನು ಬರೆದು ಹಂಚುವುದು, ಇನ್ನಾವುದೇ ವಸ್ತುಗಳನ್ನು ಹಂಚುವುದು/ ರವಾನಿಸುವುದು ಮತ್ತಿತರ ಚಟುವಟಿಕೆ ಸಂಪೂರ್ಣ ನಿಷೇಧಿಸಿದೆ. ಪರೀಕ್ಷಾ ಕೇಂದ್ರದೊಳಗೆ ಮುಖ್ಯ ಅಧೀಕ್ಷಕರು ಕ್ಯಾಮರಾ ಹೊಂದಿರದ ಸಾಮಾನ್ಯ ಮೊಬೈಲ್ ಮಾತ್ರ ಇರಿಸಿಕೊಳ್ಳಬಹುದು. ಉಳಿದಂತೆ ಎಲ್ಲಾ ಪರೀಕ್ಷಾ ಸಿಬ್ಬಂದಿಗಳು ಮತ್ತು ವಿದ್ಯಾರ್ಥಿಗಳು ಮೊಬೈಲ್, ಸ್ಮಾಟ್ ವಾಚ್ ಮುಂತಾದ ಎಲೆಕ್ಟ್ರಾನಿಕ್ ಸಾಮಾಗ್ರಿಗಳನ್ನು ಒಯ್ಯುವುದು ಮತ್ತು ಬಳಸುವುದನ್ನು ನಿಷೇಧಿಸಿದೆ. ಪರೀಕ್ಷಾ ಕೇಂದ್ರದೊಳಗೆ ಅನಧಿಕೃತ ವ್ಯಕ್ತಿಗಳ ಪ್ರವೇಶ, ಚಿತ್ರೀಕರಣ ಮುಂತಾದವುಗಳನ್ನು ಸಂಪೂರ್ಣವಾಗಿ ನಿಷೇಧಿಸಿದೆ. ನಿಷೇಧಿತ ವಲಯದಲ್ಲಿ ಯಾವುದೇ ರೀತಿಯ…
ಬೆಂಗಳೂರು: ಹಾಲನ್ನು ಬಿಳಿಯಾಗಿ ಮತ್ತು ನೊರೆಯಂತೆ ಕಾಣುವಂತೆ ಮಾಡಲು ಡಿಟರ್ಜೆಂಟ್ ಅನ್ನು ಹೇಗೆ ಬಳಸಲಾಗುತ್ತಿತ್ತು ಎಂಬುದರ ಕುರಿತು ಎಕ್ಸ್ ಬಳಕೆದಾರರ ಪೋಸ್ಟ್ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಲಿಕ್ವಿಡ್ ಡಿಟರ್ಜೆಂಟ್ ತಯಾರಿಕೆಯಲ್ಲಿ ತೊಡಗಿದ್ದ ಉದ್ಯಮಿ ರಾಮ್ (@ramprasad_c) 2005 ರಲ್ಲಿ ತಮ್ಮ ಮಾರಾಟ ಕಾರ್ಯನಿರ್ವಾಹಕರೊಬ್ಬರು ಹೇಳಿದ್ದನ್ನು ನೆನಪಿಸಿಕೊಂಡಾಗ ಇದರ ಚರ್ಚೆ ಹುಟ್ಟುಹಾಕಿಕೊಂಡಿದೆ. “ಭಾರತದಲ್ಲಿ ಆಹಾರ ಸುರಕ್ಷತೆಯ ಬಗ್ಗೆ, ನನಗೆ ಆಘಾತವನ್ನುಂಟು ಮಾಡಿದ ಒಂದು ಕಥೆ ಇಲ್ಲಿದೆ. ಅನೇಕ ವರ್ಷಗಳ ಹಿಂದೆ, ನಾನು ದೊಡ್ಡ ಕಂಪನಿಯಲ್ಲಿ ಕೆಲಸ ಮಾಡುವಾಗ ಹೊಸ ಲಿಕ್ವಿಡ್ ಡಿಟರ್ಜೆಂಟ್ ಅನ್ನು ಪ್ರಾರಂಭಿಸಿದೆ. ಮಾರಾಟಗಾರರಲ್ಲಿ ಒಬ್ಬರು ನನ್ನ ಬಳಿಗೆ ಬಂದು, ಡಿಟರ್ಜೆಂಟ್ ನಲ್ಲಿ ಪರಿಮಳ ಸ್ವಲ್ಪ ಕಡಿಮೆ ಮಾಡಿದರೆ ಮಾರಾಟ ಹೆಚ್ಚುತ್ತದೆ ಎಂದರು. ಈ ಬಗ್ಗೆ ಗ್ರಾಹಕರಿಂದ ಯಾವುದೇ ದೂರುಗಳಿವೆಯೇ ಎಂದು ನಾನು ಕೇಳಿದೆ. ಹಲವರು ಡಿಟರ್ಜೆಂಟ್ ಗಳನ್ನು ಖರೀದಿಸಿ ಹಾಲಿನಲ್ಲಿ ಮಿಶ್ರಣ ಮಾಡುತ್ತಾರೆ ಅಂತ ಹೇಳಿದ್ದರು ಅಂಥ ಹೇಳಿದ್ದಾರೆ. ಸುಗಂಧದ ಬಗ್ಗೆ ಯಾವುದೇ ಗ್ರಾಹಕರು ಯಾವುದೇ ಪ್ರತಿಕ್ರಿಯೆ ನೀಡಿದ್ದಾರೆಯೇ…
ಜೂ.27 ರಿಂದ ಮಡಿಕೇರಿಯಲ್ಲಿ ಅಗ್ನಿವೀರ್ ಸೇನಾ ನೇಮಕಾತಿ ರ್ಯಾಲಿ ಅಗತ್ಯ ಸಿದ್ಧತೆಗೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಸೂಚನೆ
ಮಡಿಕೇರಿ : ಇದೇ ಜೂನ್, 27 ರಿಂದ ಜುಲೈ, 02 ರವರೆಗೆ ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯುವ ಅಗ್ನಿವೀರ್ ಸೇನಾ ನೇಮಕಾತಿ ರ್ಯಾಲಿಗೆ ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಸೈನಿಕ ಕಲ್ಯಾಣ ಇಲಾಖೆಗೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಸೂಚಿಸಿದ್ದಾರೆ. ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಅಗ್ನಿವೀರ್ ಸೇನಾ ನೇಮಕಾತಿ ರ್ಯಾಲಿಯು ಒಂದು ವಿಶಿಷ್ಟ ಕಾರ್ಯಕ್ರಮವಾಗಿದ್ದು, ಯಾರಿಗೂ ಯಾವುದೇ ರೀತಿಯ ತೊಂದರೆಯಾಗದಂತೆ ಗಮನಹರಿಸಬೇಕು. ವಸತಿ ಊಟೋಪಚಾರ ಸೇರಿದಂತೆ ಹಲವು ಮೂಲ ಸೌಕರ್ಯಗಳನ್ನು ವ್ಯವಸ್ಥಿತವಾಗಿ ನಿರ್ವಹಿಸುವಂತೆ ಸ್ಪಷ್ಟ ನಿರ್ದೇಶನ ನೀಡಿದರು. ಸೈನಿಕ ಭರ್ತಿ ಕಾರ್ಯಾಲಯದ ನಿರ್ದೇಶಕರಾದ ಕರ್ನಲ್ ಗೌರವ್ ತಾಪ ಅವರು ಮಾತನಾಡಿ ಪೊಲೀಸ್ ಇಲಾಖೆಯಿಂದ ಸೂಕ್ತ ಬಂದೋಬಸ್ತ್ ಕಲ್ಪಿಸಬೇಕಿದೆ. ಲೋಕೋಪಯೋಗಿ, ಸೆಸ್ಕ್, ಪದವಿ ಪೂರ್ವ ಶಿಕ್ಷಣ, ಅಗ್ನಿಶಾಮಕ ದಳ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ವೈದ್ಯಕೀಯ ಶಿಕ್ಷಣ, ಸೆಸ್ಕ್, ಬಿಎಸ್ಎನ್ಎಲ್ ಹೀಗೆ ವಿವಿಧ ಇಲಾಖೆಗಳ ಅಧಿಕಾರಿಗಳು ತಮ್ಮ ವ್ಯಾಪ್ತಿಯಲ್ಲಿ ಅಗತ್ಯ ಸಹಕಾರ ನೀಡುವಂತೆ…
ಮಡಿಕೇರಿ: ಕರ್ನಾಟಕ ಅರೆಭಾಷೆ ಸಂಸ್ಕøತಿ ಮತ್ತು ಸಾಹಿತ್ಯ ಅಕಾಡೆಮಿ ವತಿಯಿಂದ ಪ್ರಕಟವಾಗುವ ತ್ರೈಮಾಸಿಕ ‘ಹಿಂಗಾರ’ ಪುಸ್ತಕ 6 ಸಂಚಿಕೆಗಳ ಒಟ್ಟು ‘ಸಂಯುಕ್ತ ಸಂಚಿಕೆ’ಯನ್ನು ಹೊರತರಲು ಉದ್ದೇಶಿಸಲಾಗಿದೆ. ಈ ಸಂಬಂಧ ಅರೆಭಾಷೆಯಲ್ಲಿ ಕಥೆ, ಕವನ, ಲೇಖನ, ಹನಿಗವನ, ಜನಪದ, ಸಂಸ್ಕøತಿ, ಕಲೆ, ಸಾಹಿತ್ಯ, ವ್ಯಕ್ತಿಚಿತ್ರ ಮತ್ತಿತರ ವಿಚಾರಗಳ ಕುರಿತು ಬರಹಗಳನ್ನು ಆಹ್ವಾನಿಸಲಾಗಿದೆ. ಆಸಕ್ತರು “ಅರೆಭಾಷೆ ಬರಹ’ ಗಳನ್ನು ಕರ್ನಾಟಕ ಅರೆಭಾಷೆ ಸಂಸ್ಕøತಿ ಮತ್ತು ಸಾಹಿತ್ಯ ಅಕಾಡೆಮಿ ಕಚೇರಿ, ಕಾಫಿ ಕೃಪಾ ಕಟ್ಟಡ, 1ನೇ ಮಹಡಿ, ರಾಜಾಸೀಟು ರಸ್ತೆ, ಮಡಿಕೇÀರಿ 571 201 ಇಲ್ಲಿಗೆ ಅಂಚೆ ಅಥವಾ ಇ-ಮೇಲ್ (arebaseacademy@gmail.com) ಮೂಲಕ ತುರ್ತಾಗಿ ಕಳುಹಿಸಲು ಕೋರಿದೆ. ಹೆಚ್ಚಿನ ಮಾಹಿತಿಗೆ ರಿಜಿಸ್ಟ್ರಾರ್ ಕರ್ನಾಟಕ ಅರೆಭಾಷೆ ಸಂಸ್ಕøತಿ ಮತ್ತು ಸಾಹಿತ್ಯ ಅಕಾಡೆಮಿ, ಕಾಫಿ ಕೃಪಾ ಕಟ್ಟಡ, ಮಡಿಕೇರಿ, ಕೊಡಗು ಜಿಲ್ಲೆ, ಮೊ ನಂ 6362588677 ಇಲ್ಲಿಂದ ಪಡೆಯಬಹುದಾಗಿದೆ ಎಂದು ಅಕಾಡೆಮಿಯ ರಿಜಿಸ್ಟ್ರಾರ್ ಅವರು ತಿಳಿಸಿದ್ದಾರೆ.
ಮಡಿಕೇರಿ: ಪ್ರಸಕ್ತ (2024-25) ಸಾಲಿನ ಮುಂಗಾರು ಹಂಗಾಮಿನಲ್ಲಿ ಕೊಡಗು ಜಿಲ್ಲೆಯಲ್ಲಿ ಈವರೆಗೆ 490.6 ಮಿ.ಮಿ. ಮಳೆಯಾಗಿದ್ದು, ವಾಡಿಕೆಗಿಂತ ಶೇ.-11.5 ರಷ್ಟು ಕಡಿಮೆ ಮಳೆಯಾಗಿದೆ. ರೈತರು ಮುಂಗಾರು ಹಂಗಾಮಿನ ಪೂರ್ವ ಸಿದ್ಧ್ದತೆಯಲ್ಲಿದ್ದು, ಜಿಲ್ಲೆಯಲ್ಲಿ ಭತ್ತದ ಸಸಿಮಡಿ ಕಾರ್ಯವು ಪ್ರಾರಂಭಗೊಂಡಿದೆ. ಜುಲೈ ಮತ್ತು ಆಗಸ್ಟ್ ಮಾಹೆಗಳಲ್ಲಿ ನಾಟಿ ಕಾರ್ಯಕೈಗೊಳ್ಳಲಾಗುತ್ತದೆ. ಮುಸುಕಿನ ಜೋಳದ ಬಿತ್ತನೆ ಕಾರ್ಯವನ್ನು ಪ್ರಾರಂಭಗೊಂಡಿದ್ದು, ರೈತರಿಗೆ ಅನುಕೂಲವಾಗುವಂತೆ ಅಗತ್ಯವಿರುವ ಬಿತ್ತನೆ ಬೀಜ, ರಸಗೊಬ್ಬರ ಮತ್ತು ಇತರೆ ಕೃಷಿ ಪರಿಕರಗಳನ್ನು ಇಲಾಖೆಯ ರೈತ ಸಂಪರ್ಕ ಕೇಂದ್ರಗಳು, ಸಹಕಾರ ಸಂಘಗಳು ಮತ್ತು ಖಾಸಗಿ ಮಾರಾಟಗಾರರಲ್ಲಿ ದಾಸ್ತಾನೀಕರಿಸಲಾಗಿದೆ. ಜಿಲ್ಲೆಯಲ್ಲಿ ಮುಂಗಾರು ಹಂಗಾಮಿಗೆ ಒಟ್ಟು 2171 ಕ್ವಿಂಟಾಲ್ ಭತ್ತ ಮತ್ತು 41 ಕ್ವಿಂಟಾಲ್ ಮುಸುಕಿನ ಜೋಳದ ಬಿತ್ತನೆ ಬೀಜಗಳನ್ನು ಸರಬರಾಜು ಮಾಡುವ ಗುರಿ ಹೊಂದಲಾಗಿದ್ದು, ರೈತ ಸಂಪರ್ಕ ಕೇಂದ್ರಗಳಲ್ಲಿ ಪ್ರಸ್ತುತ ದಿನಾಂಕದವರೆಗೆ ಒಟ್ಟು 1198.3 ಕ್ವಿಂಟಾಲ್ ಭತ್ತ ಹಾಗೂ 2.4 ಕ್ವಿಂಟಾಲ್ ಮುಸುಕಿನ ಜೋಳದ ವಿವಿಧ ತಳಿಯ ಬಿತ್ತನೆ ಬೀಜಗಳು ಸರಬರಾಜಾಗಿದ್ದು,ಇಲ್ಲಿಯವರೆಗೆ 636.14 ಕ್ವಿಂಟಾಲ್ ಭತ್ತದ ಬಿತ್ತನೆ ಬೀಜ…
ಮಡಿಕೇರಿ: ಕೇಂದ್ರ ಸರ್ಕಾರದ ಆಲಿಮ್ಕೋ ಸಂಸ್ಥೆಯಿಂದ ಅಡಿಪ್ ಯೋಜನೆಯಡಿ ವಿಕಲಚೇತನರಿಗೆ ಹಾಗೂ ರಾಷ್ಟ್ರೀಯ ವಯೋಶ್ರೀ ಯೋಜನೆಯಡಿ ಹಿರಿಯ ನಾಗರಿಕರಿಗೆ ವಿವಿಧ ಸಾಧನ ಸಲಕರಣೆಗಳನ್ನು ವಿತರಿಸಲು ಅರ್ಜಿ ಆಹ್ವಾನಿಸಲಾಗಿದೆ. ಜಿಲ್ಲೆಯ ವಿಶೇಷಚೇತನರು ಹಾಗೂ ಹಿರಿಯ ನಾಗರಿಕರು ಮೌಲ್ಯಮಾಪನ ತಪಾಸಣಾ ಶಿಬಿರಕ್ಕೆ ಹಾಜರಾಗಲು ತಾಲ್ಲೂಕುವಾರು ದಿನಾಂಕಗಳನ್ನು ನಿಗದಿಪಡಿಸಲಾಗಿದೆ. ಜುಲೈ, 26 ರಂದು ಕುಶಾಲನಗರ ತಾಲ್ಲೂಕು ಕಲಾಮಂದಿರ ಅಥವಾ ಗಾಯತ್ರಿ ಕಲ್ಯಾಣ ಮಂಟಪ, ಜುಲೈ, 27 ರಂದು ಸೋಮವಾರಪೇಟೆ ಚನ್ನಬಸಪ್ಪ ಸಭಾಂಗಣ, ಜುಲೈ, 28 ರಂದು ವಿರಾಜಪೇಟೆ ಮತ್ತು ಪೊನ್ನಂಪೇಟೆ ತಾಲ್ಲೂಕಿಗೆ ಗೋಣಿಕೊಪ್ಪಲು ಕೃಷಿ ವಿಜ್ಞಾನ ಕೇಂದ್ರ ಹಾಗೂ ಜುಲೈ, 29 ಮತ್ತು 30 ರಂದು ಮಡಿಕೇರಿ ತಾಲ್ಲೂಕಿನ ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ಸಭಾಂಗಣ. ಈ ದಿನಾಂಕಗಳಂದು ಶಿಬಿರಗಳಲ್ಲಿ ಭಾಗವಹಿಸುವ ವಿಶೇಷಚೇತನರು ಯುಡಿಐಡಿ ಕಾರ್ಡ್, ಆಧಾರ್ ಕಾರ್ಡ್, ಜಾತಿ ಮತ್ತು ಆದಾಯ ಪ್ರಮಾಣಪತ್ರ ಅಥವಾ ಬಿಪಿಎಲ್ ಕಾರ್ಡ್, ಪಾಸ್ ಪೋರ್ಟ್ ಅಳತೆಯ ಭಾವಚಿತ್ರ ಹಾಗೂ ಹಿರಿಯ ನಾಗರಿಕರು ಆಧಾರ್ ಕಾರ್ಡ್, ಹಿರಿಯ ನಾಗರಿಕರ ಗುರುತಿನ…