Author: kannadanewsnow07

ಬೆಂಗಳೂರು: ಕೊಳೆಗೇರಿ ಪ್ರದೇಶದಲ್ಲಿ ವಾಸವಾಗಿರುವ ಎಲ್ಲಾ ಫಲಾನುಭವಿಗಳಿಗೆ 2024ನೇ ಡಿಸೆಂಬರ್ ಅಂತ್ಯದೊಳಗಾಗಿ ಮನೆಗಳನ್ನು ಹಸ್ತಾಂತರಿಸಲು ಕ್ರಮ ವಹಿಸಲು ಎಲ್ಲಾ ಅಧಿಕಾರಿಗಳಿಗೆ ಹುಬ್ಬಳ್ಳಿ-ಧಾರವಾಡ (ಪೂರ್ವ)ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿಯ ಅಧ್ಯಕ್ಷರಾದ ಪ್ರಸಾದ ಅಬ್ಬಯ್ಯ ಅವರು ಸೂಚಿಸಿದ್ದಾರೆ. ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿಯು ಅನುμÁ್ಠನಗೊಳಿಸುತ್ತಿರುವ ಕಾರ್ಯಕ್ರಮಗಳ ಕುರಿತು ಇದೇ ಜೂನ್ 18 ರಂದು ಪ್ರಗತಿ ಪರಿಶೀಲನಾ ಸಭೆಯನ್ನು ನಡೆಸಿದ ಅವರು, ಸರ್ಕಾರದ ಆದೇಶದನ್ವಯ ರಾಜ್ಯಾದ್ಯಂತ ಸರ್ಕಾರಿ ಮತ್ತು ಸ್ಥಳೀಯ ಸಂಸ್ಥೆಗಳು ಮಾಲೀಕತ್ವದಲ್ಲಿರುವ 1821 ಘೋಷಿತ ಕೊಳಗೇರಿ ಪ್ರದೇಶಗಳಲ್ಲಿ ವಾಸವಾಗಿರುವ 3.36 ಲಕ್ಷ ಕುಟುಂಬಗಳಿಗೆ ಹಕ್ಕುಪತ್ರಗಳನ್ನು ವಿತರಿಸುವ ಬಗ್ಗೆ ಪರಿಶೀಲಿಸಿದರು. ಮಂಡಳಿಯಿಂದ ಕೊಳಗೇರಿ ನಿವಾಸಿಗಳ ಸಮೀಕ್ಷೆ ಕಾರ್ಯಕೈಗೊಂಡು ಈವರೆವಿಗೂ 68,415 ಕುಟುಂಬಗಳಿಗೆ ಹಕ್ಕುಪತ್ರಗಳನ್ನು ವಿತರಿಸಲಾಗಿದೆ. ಹಕ್ಕುಪತ್ರಗಳ ವಿತರಣೆ ಪ್ರಕ್ರಿಯೆಯು ಮಂದಗತಿಯಲ್ಲಿರುವುದನ್ನು ಗಂಭೀರವಾಗಿ ಪರಿಗಣಿಸಿ ಹಾಜರಿದ್ದ ಸಂಬಂಧಪಟ್ಟ ಎಲ್ಲಾ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡು ಸರ್ಕಾರವು ನಿಗಧಿಪಡಿಸಿರುವ ಕಾಲಾಮಿತಿಯೊಳಗೆ ಎಲ್ಲಾ ಕುಟುಂಬಗಳಿಗೆ ಹಕ್ಕುಪತ್ರಗಳನ್ನು ವಿತರಿಸಲು ಕೂಡಲೇ ಕ್ರಮವಹಿಸಲು ಸೂಚಿಸಿದರು. ವಿಳಂಬವಾದಲ್ಲಿ ಸಂಬಂಧಪಟ್ಟ ಅಧಿಕಾರಿಗಳ ಮೇಲೆ ನಿಯಮಗಳನ್ವಯ ಶಿಸ್ತಿನ ಕ್ರಮ…

Read More

ಬೆಂಗಳೂರು: ರಾಜ್ಯದಲ್ಲಿ 2023-24ರ ಕೃಷಿ ಹಂಗಾಮಿನ ಹಿಂಗಾರಿನಲ್ಲಿ ಬೆಳೆದ 3,133 ಟನ್ ಕುಸುಬೆ ಬೆಳೆಯನ್ನು ಬೆಂಬಲ ಬೆಲೆ ಯೋಜನೆಯಡಿ ಖರೀದಿಸಲು ಕೇಂದ್ರ ಸರ್ಕಾರ ಅನುಮತಿ ನೀಡಿದೆ. ಮುಖ್ಯವಾಗಿ ರಾಜ್ಯದ ಮಧ್ಯ ಹಾಗೂ ಉತ್ತರ ಕರ್ನಾಟಕದ ವಿವಿಧ ಜಿಲ್ಲೆಗಳ ಸುಮಾರು 21,000 ಹೆಕ್ಟೇರ್ ಪ್ರದೇಶದಲ್ಲಿ ಕುಸುಬೆ ಬೆಳೆ ಕೃಷಿ ನಡೆಯುತ್ತಿದ್ದು, ರೈತರು ಸರಿಯಾದ ಬೆಲೆ ಇಲ್ಲದೆ ತೊಂದರೆ ಎದುರಿಸುತ್ತಿದ್ದರು. ಇದನ್ನು ಪರಿಗಣಿಸಿ, ರಾಜ್ಯ ಸರ್ಕಾರದ ಸಹಕಾರ ಇಲಾಖೆಯ ಅಪರ ಕಾರ್ಯದರ್ಶಿಯವರು ಕೇಂದ್ರ ಸಹಕಾರ ಇಲಾಖೆ ಕಾರ್ಯದರ್ಶಿಯವರಿಗೆ ಕುಸುಬೆ ಬೆಳೆಯನ್ನು ಬೆಂಬಲ ಬೆಲೆ ವ್ಯಾಪ್ತಿಗೆ ತರಲು ಕೋರಿದ್ದರು. ನಂತರ, ನವದೆಹಲಿಯಲ್ಲಿ ಕರ್ನಾಟಕ ಸರ್ಕಾರದ ವಿಶೇಷ ಪ್ರತಿನಿಧಿಯಾಗಿರುವ ಟಿಬಿ ಜಯಚಂದ್ರ ಅವರು ಈ ಬಗ್ಗೆ ಮುತುವರ್ಜಿ ವಹಿಸಿ ಸಂಬಂಧಿಸಿದ ಇಲಾಖೆಗಳೊಡನೆ ಪತ್ರ ವ್ಯವಹಾರ ಹಾಗೂ ಸಮಾಲೋಚನೆಗಳನ್ನು ನಡೆಸಿದ್ದರು. ರಾಜ್ಯ ಸರ್ಕಾರವು ಸಂಬಂಧಿಸಿದ ನೋಡಲ್ ಏಜೆನ್ಸಿಗಳ ಸಮನ್ವಯತೆಯೊಂದಿಗೆ ಮುಂಬರುವ ದಿನಗಳಲ್ಲಿ ಬೆಂಬಲ ಬೆಲೆಯಲ್ಲಿ ಕುಸುಬೆ ಬೆಳೆ ಖರೀದಿಗೆ ಕ್ರಮ ವಹಿಸಲಿದೆ ಎಂದು ಜಯಚಂದ್ರ ವಿವರಿಸಿದ್ದಾರೆ.

Read More

ಬೆಂಗಳೂರು: ಪೋಲಿಸ್‌ ಕಸ್ಟಡಿ ಇಂದಿಗೆ ಅಂತ್ಯವಾದ ಹಿನ್ನಲೆಯಲ್ಲಿಕೊಲೆ ಪ್ರಕರಣದ ಆರೋಪಿ  ನಟ ದರ್ಶನ್‌ ಮತ್ತು ಆತನ ಸಹಚರರನ್ನು ಇಂದು ಮಧ್ಯಾಹ್ನ 3:50 ಗಂಟೆ ಸುಮಾರಿಗೆ ಬೆಂಗಳೂರಿನ ಮ್ಯಾಜಿಸ್ಟ್ರೇಟ್‌ ನ್ಯಾಯಾಧೀಶರ ಮುಂದೆ ಪೊಲೀಸರು ಹಾಜರು ಪಡಿಸಿದರು. ಇದೇ ವೇಳೆ ನ್ಯಾಯಾಧೀಶರು ನಟ ದರ್ಶನ್‌ ಅವರನ್ನು ಎರಡು ದಿನ ಪೋಲಿಸ್‌ ಕಸ್ಟಡಿಗೆ ಒಪ್ಪಿಸಿ ಆದೇಶ ನೀಡಿತು. ಬಹುತೇಕ ಪ್ರಕ್ರಿಯೆಗಳು ಮುಕ್ತಾಯವಾದರೂ ದರ್ಶನ್‌ ಅವರನ್ನು ಹೆಚ್ಚಿನ ವಿಚಾರಣೆಗೆ ಒಳಪಡಿಸಬೇಕೆಂದು ಎಸ್‌ಪಿಪಿ ವಾದ ಮಂಡಿಸಿದರು. ಈ ವಾದವನ್ನು ಪುರಸ್ಕರಿಸಿದ ಕೋರ್ಟ್‌ ಮತ್ತೆ ದರ್ಶನ್‌ ಮತ್ತು ಉಳಿದ ಆರೋಪಿಗಳನ್ನು ಪೊಲೀಸ್‌ ಕಸ್ಟಡಿಗೆ ಒಪ್ಪಿಸಿತು. ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿಂದು (Renukaswamy Case) ಮತ್ತೆ ನ್ಯಾಯಾಲಯದ ಮುಂದೆ ನಟ ದರ್ಶನ್‌ ಸೇರಿ ಬಂಧಿತ 17 ಆರೋಪಿಗಳನ್ನು ಪೊಲೀಸರು ಹಾಜರು ಪಡಿಸಿದರು. ಇದೇ ವೇಳೆ A 1 ಪವಿತ್ರಗೌಡ,  A 3 ಪವನ್‌, A 4 ರಾಘವೇಂದ್ರ,  A 5  ನಂದೀಶ, A 6 ಜಗದೀಶ್‌, A 7 ಅನುಕುಮಾರ್‌ A…

Read More

ಬೆಂಗಳೂರು: ಕೊಲೆ ಆರೋಪದ ಪ್ರಮುಖ ಆರೋಪಿಯಾಗಿರುವ ನಟ ದರ್ಶನ್ ಗೆಳತಿ ‘ಪವಿತ್ರಗೌಡ’ ಸೇರಿದಂತೆ 8 ಮಂದಿಯನ್ನು ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್‌ ಮಾಡಲಾಗುತ್ತಿದೆ. ಇಂದು ರೇಣುಕಸ್ವಾಮಿ ಕೊಲೆ ಪ್ರಕರಣದ ಆರೋಪಿಗಳ ಪೊಲೀಸ್‌ ಕಸ್ಟಡಿ ಅವಧಿ ಮುಗಿದಿತ್ತು, ಹೀಗಾಗಿ ಆರೋಪಿಗಳನ್ನು ನ್ಯಾಯಾಧೀಶರ ಮುಂದೆ ಹಾಜರು ಪಡಿಸಲಾಗಿತ್ತು. ಇದೇ ವೇಳೆ A 1 ಪವಿತ್ರಗೌಡ,  A 3 ಪವನ್‌, A 4 ರಾಘವೇಂದ್ರ,  A 5  ನಂದೀಶ, A 6 ಜಗದೀಶ್‌, A 7 ಅನುಕುಮಾರ್‌ A 8 ರವಿ ಶಂಕರ್‌  ಇವರಿಗೆ ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ.

Read More

ಮಡಿಕೇರಿ: ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ಮುಖಾಂತರ ಸರ್ಕಾರದ ಮಹತ್ತರ ಯೋಜನೆಯಾದ ಯುವಜನತೆಯ ಉಜ್ವಲ ಭವಿಷ್ಯಕ್ಕಾಗಿ ಸರ್ಕಾರದ ಗ್ಯಾರಂಟಿ ಯೋಜನೆಗೆ ಚಾಲನೆ ನೀಡಲಾಗಿದೆ. ಯುವನಿಧಿ ಯೋಜನೆಯಡಿ ಸೇವಾಸಿಂಧು ಪೋರ್ಟಲ್‍ನಲ್ಲಿ ನೋಂದಾಯಿಸಿರುವ ಕೊಡಗು ಜಿಲ್ಲೆಗೆ ಸಂಬಂಧಿಸಿದ ಅರ್ಹ ಫಲಾನುಭವಿಗಳು ತಮ್ಮ ವಿದ್ಯಾರ್ಹತೆಗೆ ಸಂಬಂಧಿಸಿದ ಮೂಲ ಅಂಕಪತ್ರಗಳು, ಆಧಾರ್ ಕಾರ್ಡ್ ಹಾಗೂ ಇತರ ದಾಖಲಾತಿಗಳೊಂದಿಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಗೆ, (ರೂಂ ನಂ-22, ಎರಡನೇ ಮಹಡಿ, ಜಿಲ್ಲಾಡಳಿತ ಭವನ ಕಟ್ಟಡ ಕೊಡಗು ಜಿಲ್ಲೆ, ಮಡಿಕೇರಿ) ಇಲ್ಲಿಗೆ ಪರಿಶೀಲನೆಗೆ ಹಾಜರಾಗಬೇಕು. ಹಾಗೆಯೇ ಯುವನಿಧಿ ಯೋಜನೆಗೆ ಅರ್ಹರಾದ ಎಲ್ಲಾ ಫಲಾನುಭವಿಗಳು ಪ್ರತಿ ಮಾಹೆಯ 25 ನೇ ತಾರೀಖಿನ ಒಳಗಾಗಿ ‘ಉನ್ನತ ವ್ಯಾಸಂಗ ಮುಂದುವರೆಸದಿರುವ ಕುರಿತು ಹಾಗೂ ಯಾವುದೇ ಉದ್ಯೋಗ ಹೊಂದಿಲ್ಲದಿರುವ ಕುರಿತು ಸ್ವಯಂ ಘೋಷಣೆ ನೀಡಬೇಕಾಗಿರುತ್ತದೆ ಎಂದು ಜಿಲ್ಲಾ ಉದ್ಯೋಗಾಧಿಕಾರಿ ರೇಖಾ ಗಣಪತಿ ತಿಳಿಸಿದ್ದಾರೆ.ಹೆಚ್ಚಿನ ಮಾಹಿತಿಗೆ ಸಹಾಯವಾಣಿ ಸಂಖ್ಯೆ 1800 599 9918 ಗೆ ಕರೆ ಮಾಡುವ ಮೂಲಕ ಅಥವಾ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ…

Read More

ಬೆಂಗಳೂರು: ರೇಣುಕಸ್ವಾಮಿ ಕೊಲೆ ಪ್ರಕರಣದ ಆರೋಪಿ ಪವಿತ್ರ ದರ್ಶನ್‌ ಗೌಡ ಅವರು ಜೈಲು ಪಾಲಾಗಿದ್ದರೆ. ಪೋಲಿಸ್‌ ಕಸ್ಟಡಿ ಇಂದಿಗೆ ಅಂತ್ಯವಾದ ಹಿನ್ನಲೆಯಲ್ಲಿಕೊಲೆ ಪ್ರಕರಣದ ಆರೋಪಿ  ನಟ ದರ್ಶನ್‌ ಮತ್ತು ಆತನ ಸಹಚರರನ್ನು ಇಂದು ಮಧ್ಯಾಹ್ನ 3:50 ಗಂಟೆ ಸುಮಾರಿಗೆ ಬೆಂಗಳೂರಿನ ಮ್ಯಾಜಿಸ್ಟ್ರೇಟ್‌ ನ್ಯಾಯಾಧೀಶರ ಮುಂದೆ ಪೊಲೀಸರು ಹಾಜರು ಪಡಿಸಿದರು. ಇದೇ ವೇಳೆ ನ್ಯಾಯಾಧೀಶರು ಆರು ಜನ ಹೊರತು ಪಡಿಸಿ ಉಳಿದ ಮಂದಿಯನ್ನು ನ್ಯಾಯಾಂಗ ಬಂಧನಕ್ಕೆ ಆದೇಶ ನೀಡಲಾಗಿದೆ.  ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿಂದು (Renukaswamy Case) ಮತ್ತೆ ನ್ಯಾಯಾಲಯದ ಮುಂದೆ ನಟ ದರ್ಶನ್‌ ಸೇರಿ ಬಂಧಿತ 17 ಆರೋಪಿಗಳನ್ನು ಪೊಲೀಸರು ಹಾಜರುಪಡಿಸಿದ್ದರು. ಪವಿತ್ರಾಗೌಡಗೆ ರೇಣುಕಾಸ್ವಾಮಿ ಅಶ್ಲೀಲ ಮೆಸೇಜ್ ಕಳುಹಿಸಿದ್ದಕ್ಕೆ ಕೆರಳಿದ್ದ ದರ್ಶನ್ ಅಂಡ್ ಗ್ಯಾಂಗ್ ಹಲ್ಲೆ ಮಾಡಿ ಹತ್ಯೆ ಮಾಡಿರುವ ಆರೋಪವಿದ್ದು ಅವರನ್ನು ಕಳೆದ ಜೂನ್ 11ರಂದು ಅರೆಸ್ಟ್ ಮಾಡಲಾಗಿತ್ತು. A 1 ಪವಿತ್ರಗೌಡ,  A 3 ಪವನ್‌, A 4 ರಾಘವೇಂದ್ರ,  A 5  ನಂದೀಶ, A 6 ಜಗದೀಶ್‌,…

Read More

ಬೆಂಗಳೂರು : ರೇಣುಕಸ್ವಾಮಿ ಪ್ರಕರಣದ ಬಗ್ಗೆ ಯಾರೂ ಕೂಡ ಮಾತನಾಡಬಾರದು ಕಾನೂನು ಅದರ ಕೆಲಸ ಮಾಡುತ್ತದೆ, ಯಾರು ಆದ್ರೂ ಪ್ರಕರಣ ಸಂಬಂಧ ಒಂದೇ ಒಂದು ಹೇಳಿದ್ದರು ಕೂಡ ಅದರ ಪರಿಣಾಮ ಸರಿಯಾಗಿ ಇರೋದಿಲ್ಲ ಅಂಥ ಸಿಎಂ ಸಿದ್ದರಾಮಯ್ಯ ಅವರು ಹೇಳಿದ್ದಾರೆ ಎನ್ನಲಾಗಿದೆ. ಅವರು ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ತಮ್ಮ ಸಚಿವ ಸಂಪುಟ ಸಹೋದ್ಯೋಗಿಗಳಿಗೆ ಸೂಚನೆ ನೀಡಿದ್ದರು ಎನ್ನಲಾಗಿದೆ. ಇನ್ನೂ ಘಟನೆ ಬಗ್ಗೆ ಇಂಥಹ ಕೃತ್ಯದ ಬಗ್ಗೆ ನಾನು ಎಂದೂ ಕೂಡ ನೋಡಿರಲಿಲ್ಲ ಅಂತ ಬೇಸರವನ್ನು ಸಿಎಂ ಸಿದ್ದರಾಮಯ್ಯ ಅವರು ವ್ಯಕ್ತಪಡಿಸಿದರು ಎನ್ನಲಾಗಿದೆ. ಸಭೆಯ ಆರಂಭದಲ್ಲೇ ಸಿಎಂ ಸಿದ್ದರಾಮಯ್ಯ ಅವರು ಈ ಬಗ್ಗೆ ಸಚಿವರಿಗೆ ಕಿವಿ ಮಾತು ಹೇಳಿದ್ದು, ಇದೇ ವೇಳೆ ಅವರು ಯಾರು ಕೂಡ ಪ್ರಕರಣದ ಬಗ್ಗೆ ಪರವಿರೋಧವಾಗಿ ಮಾತನಾಡಿ ಅಂತ ತಿಳಿಸಿದ್ದಾರೆ ಎನ್ನಲಾಗಿದೆ.

Read More

ಬೆಂಗಳೂರು:  ಕನ್ನಡ ಭಾಷೆ, ನೆಲ, ಜಲವನ್ನು ಸಂರಕ್ಷಣೆ ಮಾಡಿಕೊಂಡು ಹೋಗುವ ಕೆಲಸ ಪ್ರತಿಯೊಬ್ಬ ಕನ್ನಡಿಗನ ಜವಾಬ್ದಾರಿ. ಕರ್ನಾಟಕದಲ್ಲಿ ಕನ್ನಡ ವಾತಾವರಣವನ್ನು ನಿರ್ಮಾಣ ಮಾಡುವುದು ಅತ್ಯಂತ ಅವಶ್ಯಕ ಎಂದು ಮುಖ್ಯಮಂತ್ರಿ ಸಿದ್ದಾಮಯ್ಯ ಕರೆ ನೀಡಿದರು. ಅವರು ಇಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಕರ್ನಾಟಕ ನಾಮಕರಣ ಸುವರ್ಣ ಮಹೋತ್ಸವ ಅಂಗವಾಗಿ ವಿಧಾನಸೌಧದ ಪಶ್ಚಿಮದ್ವಾರದ ಬಳಿ ನಾಡದೇವಿ ಭುವನೇಶ್ವರಿ ದೇವಿಯ ಕಂಚಿನ ಪ್ರತಿಮೆ ನಿರ್ಮಿಸಲು ಭೂಮಿ ಪೂಜೆ ನೆರವೇರಿಸಿದ ನಂತರ ಕಾರ್ಯಕ್ರಮ ವನ್ನು ಉದ್ದೇಶಿಸಿ ಮಾತನಾಡಿದರು. ಮಾತೃಭಾಷೆಯಲ್ಲಿ ಮಾತನಾಡುವುದು ಹೆಮ್ಮೆಯ ಸಂಗತಿಯಾಗಬೇಕು: ಪ್ರತಿಯೊಬ್ಬರೂ ಕೂಡ ಕರ್ನಾಟಕದಲ್ಲಿ ಬಾಳಿ ಬದುಕುವವರೊಂದಿಗೆ ಕನ್ನಡದಲ್ಲಿಯೇ ಮಾತನಾಡುತ್ತೇನೆ. ಕನ್ನಡ ಬಿಟ್ಟು ಬೇರೆ ಭಾಷೆ ಮಾತನಾಡುವುದಿಲ್ಲ ಎಂದು ತೀರ್ಮಾನ ಮಾಡಬೇಕು. ಕನ್ನಡಿಗರು ಉದಾರಿಗಳು. ಹಾಗಾಗಿಯೇ ಬೇರೆ ಭಾಷೆ ಮಾತನಾಡುವವರೂ ಕೂಡ ಕನ್ನಡ ಕಲಿಯದೆ ಬದುಕುವ ವಾತಾವರಣ ಕರ್ಣಾಟಕದಲ್ಲಿದೆ. ತಮಿಳುನಾಡು , ಆಂಧ್ರ, ಕೇರಳಕ್ಕೆ ಹೋದರೆ ಅವರ ಮಾತೃಭಾಷೆಯಲ್ಲಿಯೇ ಮಾತನಾಡುತ್ತಾರೆ. ನಾವೂ ಕೂಡ ನಮ್ಮ ಮಾತೃಭಾಷೆಯಲ್ಲಿಯೇ ವ್ಯವಹರಿಸಬೇಕು. ಅದು ನಮಗೆ ಹೆಮ್ಮೆಯ…

Read More

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ವೇತನ ಪರಿಷ್ಕರಣೆಗೆ 7 ವೇತನ ಆಯೋಗದ ವರದಿಯನ್ನು ಜಾರಿ ಮಾಡಲು ಮಾಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಅಧಿಕಾರ ನೀಡಲಾಗಿದೆ. ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಎಲ್ಲಾ ಸಚಿವರು ಏಳನೇ ವೇತನ ಆಯೋಗದ ವರದಿಯಲ್ಲಿ ಶಿಫಾರಸ್ಸುಗಳನ್ನು ಜಾರಿ ಮಾಡುವುದಕ್ಕೆ ಒಪ್ಪಿಗೆ ನೀಡಿದ್ದು, ಇದನ್ನು ಅಂತಿಮವಾಗಿ ಸಿಎಂ ತೀರ್ಮಾಣ ತೆಗೆದುಕೊಳ್ಳುವುದಕ್ಕೆ ಸಚಿವರು ಒಪ್ಪಿಗೆ ಸೂಚನೆ ನೀಡಿದ್ದಾರೆ ಎನ್ನಲಾಗಿದೆ. ಆಯೋಗದ ಶಿಫಾರಸ್ಸಿನಂತೆ ಕೆಲವು ಸಚಿವರು ಶೇಕಡ ವೇತನ ಹೆಚ್ಚಕ್ಕೆ ಒಪ್ಪಿಗೆ ನೀಡಿದ್ದಾರೆ ಎನ್ನಲಾಗಿದೆ. ಈ ನಡುವೆ ವೇತನ ಹೆಚ್ಚಳದ ಬಗ್ಗೆ ಶೀಘ್ರದಲ್ಲಿ ಅಧಿಸೂಚನೆ ಹೊರಡಿಸಲಾಗಿದೆ ಅಂತ ತಿಳಿದು ಬಂಧಿದೆ.

Read More

*ರಂಜಿತ ಮೆಣಸು ಬೆಂಗಳೂರು : ರಾಜ್ಯದ ವಿವಿಧ ಮಹಾನಗರ ಪಾಲಿಕೆಯಲ್ಲಿ ಖಾಲಿ ಇರುವ 592 ಒಳಚರಂಡಿ ಕಾರ್ಮಿಕರ ಹುದ್ದೆಗಳ ಭರ್ತಿಗೆ ರಾಜ್ಯ ಸರ್ಕಾರ ಅನುಮತಿ ನೀಡಿದೆ. ಆದೇಶದಲ್ಲಿ ಆಡಳಿತ ಇಲಾಖೆಯ ಪ್ರಸ್ತಾವನೆಯನ್ನು ಪರಿಶೀಲಿಸಿದ ನಂತರ ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳಿಗೆ (ಬಿ.ಬಿ.ಎಂ.ಪಿ ಹೊರತುಪಡಿಸಿ) ಆರ್ಥಿಕ ಇಲಾಖೆಯು ಈಗಾಗಲೇ ಅನುಮತಿ ನೀಡಿ ಭರ್ತಿಯಾಗದೇ ಖಾಲಿ ಇರುವ ಪೌರ ಕಾರ್ಮಿಕರ ಹುದ್ದೆಗಳಿಗೆದುರಾಗಿ 592- UGD ಹೆಲ್ಪರ್ಸ್ಗಳನ್ನು ನೇರನೇಮಕಾತಿ ಅಡಿ ಭರ್ತಿ ಮಾಡಿಕೊಳ್ಳಲು ಆರ್ಥಿಕ ಇಲಾಖೆಯು ಸಹಮತಿಸಿದೆ. ಮೇಲ್ಕಂಡ ಆರ್ಥಿಕ ಇಲಾಖೆಯ ಅಭಿಪ್ರಾಯದ ಹಿನ್ನೆಲೆಯಲ್ಲಿ ಉಲ್ಲೇಖಿತ ತಮ್ಮ ಪ್ರಸ್ತಾವನೆಯನ್ನು ಪರಿಶೀಲಿಸಿ ಅಗತ್ಯ ಕ್ರಮ ಕೈಗೊಳ್ಳಲು ಸರ್ಕಾರದ ವಿವಿಧ ಅಧಿಸೂಚನೆಗಳಲ್ಲಿ (2017, 2022 ಮತ್ತು 2023) ಪೌರಕಾರ್ಮಿಕರ ವಿಶೇಷ ನೇಮಕಾತಿಗೆ ಅನುಮತಿ ನೀಡಲಾಗಿದ್ದು, ಸದರಿ ಆದೇಶಗಳನ್ವಯ ನೇಮಕಾತಿ ಮಾಡಿಕೊಂಡ ನಂತರದಲ್ಲಿ ರಾಜ್ಯದ ಮಹಾನಗರ ಪಾಲಿಕೆಗಳಲ್ಲಿ ಭರ್ತಿ ಆಗದೇ ಖಾಲಿ ಇರುವ ಪೌರಕಾರ್ಮಿಕರ ಪಾಲಿಕೆವಾರು ಹುದ್ದೆಗಳ ಸಂಖ್ಯೆಯನ್ನು ಕೂಡಲೇ ಸರ್ಕಾರಕ್ಕೆ ಸಲ್ಲಿಸುವಂತೆ ತಮ್ಮನ್ನು ಕೋರಲು ನಿರ್ದೇಶಿಸಲ್ಪಟ್ಟಿದ್ದೇನೆ ಎಂದು ನಗರಾಭಿವೃದ್ದಿ…

Read More