Subscribe to Updates
Get the latest creative news from FooBar about art, design and business.
Author: kannadanewsnow07
ಬೆಂಗಳೂರು: ನಟ ದರ್ಶನ್ ಅವರನ್ನು ಸದ್ಯ ಕೊಲೆ ಪ್ರಕರಣದಲ್ಲಿ ಬಂಧಿಸಲಾಗಿದ್ದು, ಸದ್ಯ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಈ ನಡುವೆ ಕೊಲೆಯಾದ ರೇಣುಕ ಸ್ವಾಮಿ ಕೊಲೆಗೂ ಮುನ್ನ ದರ್ಶನ್ ಮುಂದೆ ನಮ್ಮ ಬಾಸ್ ದರ್ಶನ್ ನಮ್ಮ ಬಾಸ್ ಸಂಸಾರವನ್ನು ಹಾಳು ಮಾಡಿದಕ್ಕೆ ಪವಿತ್ರಗೌಡಳಿಗೆ ಮೇಸೆಜ್ ಮಾಡಿದ್ದ ಅಂಥ ಹೇಳಿದ್ದ ಎನ್ನಲಾಗಿದೆ. ಚಿತ್ರದುರ್ಗ ಮೂಲದ ವ್ಯಕ್ತಿಯೊಬ್ಬರನ್ನು ಕೊಲೆ ಮಾಡಿದ (Murder Case) ಆರೋಪದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ (Challenging Star Darshan) ಅವರನ್ನು ಕಾಮಾಕ್ಷಿಪಾಳ್ಯ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳನ್ನು ವಿಚಾರಣೆ ಒಳಪಡಿಸಿದಾಗ ಅವರು ದರ್ಶನ್ ಸೂಚನೆ ನೀಡಿದ ಹಿನ್ನೆಲೆಯಲ್ಲಿ ಆರ್ ಆರ್ ನಗರದಲ್ಲಿ ಕೊಲೆ ಮಾಡಿದ್ದೇವೆ ಎಂದು ತಪ್ಪೊಪ್ಪಿಕೊಂಡಿದ್ದಾರೆ ಎನ್ನಲಾಗಿದೆ. ಅಷ್ಟೇ ಅಲ್ಲದೇ ಕೊಲೆಗೆ ದರ್ಶನ್ ಸುಪಾರಿ ನೀಡಿದ್ದಾರೆ ಎಂಬ ಗಂಭೀರ ಆರೋಪ ಕೇಳಿ ಬಂದಿದೆ.
ಬೆಂಗಳೂರು : ದರ್ಶನ್ ಅವರನ್ನು ಬಂಧಿಸಿಲ್ಲ ಅವರನ್ನು ವಿಚಾರಣೆ ನಡೆಸುತ್ತಿದ್ದಾರೆ ಅಂಥ ಅವರ ಪರ ವಕೀಲರಾದ ನಾರಾಯಣಸ್ವಾಮಿಯವರು ಹೇಳಿದ್ದಾರೆ. ಇಂದು ನಗರದಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು ದರ್ಶನ್ ಅವರನ್ನು ಬಂಧಿಸಿಲ್ಲ, ಅವರನ್ನು ವಿಚಾರಣೆಗೆ ಕರೆ ತರಲಾಗಿದೆ. ಅವರು ಕೊಲೆ ಮಾಡಿದ್ದಾರೆ ಮಾಡಿದ್ದಾರೆ ಎನ್ನುವುದು ಸುಳ್ಳು, ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ ಅಂಥ ಅವರು ಇದೇ ವೇಳೆ ಹೇಳಿದರು. ಇನ್ನೂ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಟ ದರ್ಶನ್ ಅವರನ್ನು ಸೇರಿದಂತೆ ಒಟ್ಟು ಹತ್ತು ಮಂದಿಯನ್ನು ಬಂಧಿಸಲಾಗಿದೆ. ಹೆಚ್ಚಿನ ತನಿಖೆಯನ್ನು ಪೊಲೀಸರು ಬಂಧಿಸಿದ್ದಾರೆ.
ಬೆಂಗಳೂರು: ರೇಣುಕಾಸ್ವಾಮಿಯ ಮೂಗು, ಬಾಯಿ, ದವಡೆ ಕತ್ತರಿಸಿ ವಿಕೃತಿ ಮರೆದಿದ್ದಾರೆ ಎನ್ನಲಾಗಿದೆ. ಘಟನೆ ಸಂಬಂಧ ಈಗಾಗಲೇ ಪೋಲಿಸರು ನಟ ದರ್ಶನ್ ಸೇರಿದಂತೆ ಹತ್ತು ಮಂದಿಯನ್ನು ವಶಕ್ಕೆ ಪಡೆದುಕೊಂಡಿದ್ದು, ಸದ್ಯ ವಿಚಾರಣೆಯನ್ನು ನಡೆಸುತ್ತಿದ್ದಾರೆ. ಪ್ರಕರಣದಲ್ಲಿ ಎಲ್ಲಾ ರೀತಿಯನ್ನು ಅವಲೋಕನ ಮಾಡುತ್ತಿದ್ದು, ಸದ್ಯ ಕೊಲೆಯಾದ ರೇಣುಕಸ್ವಾಮಿಯ ಮೃತ ದೇಹವನ್ನು ಅವರ ಕುಟುಂಬಕ್ಕೆ ಹಸ್ತಾರ ಮಾಡುವ ಪ್ರಕ್ರಿಯೆ ಈಗಾಗಲೇ ನಡೆದಿದೆ ಎನ್ನಲಾಗಿದೆ. ಆರ್ ಆರ್ ನಗರದ ವಿನಯ್ ಶೆಡ್ನಲ್ಲಿ ರೇಣುಕಾ ಸ್ವಾಮಿ ಕೊಲೆ ಮಾಡಿದ್ದಾರೆ. ಕೊಲೆ ನಂತರ ಆಟೋ ಹಾಗೂ ಸ್ಕಾರ್ಪಿಯೋ ಕಾರಿನಲ್ಲಿ ಮೃತದೇಹವನ್ನು ಸಾಗಿಸಿ ಕಾಲುವೆಗೆ ಎಸೆದಿದ್ದಾರೆ. ಸದ್ಯ ಹಲ್ಲೆ ನಡೆಸುವ ಸಂದರ್ಭದಲ್ಲಿ ದರ್ಶನ್ ಮತ್ತು ಪವಿತ್ರಾ ಗೌಡ ಸ್ಥಳದಲ್ಲಿ ಇದ್ದರು. ದರ್ಶನ್ ಹೊಡೆದ ಬಳಿಕ ರೇಣುಕಾಸ್ವಾಮಿ ಸಾವನ್ನಪ್ಪಿದ್ದಾನೆ ಎಂದು ಉಳಿದ ಆರೋಪಿಗಳು ತಪ್ಪೊಪ್ಪಿಗೆ ನೀಡಲಾಗಿದೆ ಎನ್ನಲಾಗಿದೆ.
ಬೆಂಗಳೂರು: ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ನಟಿ ಪವಿತ್ರಾ ಗೌಡ ಅವರಿಗೆ ಅಶ್ಲೀಲ ಸಂದೇಶಗಳನ್ನು ಕಳುಹಿಸಿದ ಆರೋಪದ ಮೇಲೆ ರೇಣುಕಾ ಸ್ವಾಮಿ ಎಂಬ ವ್ಯಕ್ತಿಯನ್ನು ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಟನನ್ನು ಬಂಧಿಸಲಾಗಿದೆ. ಈವರೆಗೆ 10 ಕ್ಕೂ ಹೆಚ್ಚು ಜನರನ್ನು ಬಂಧಿಸಲಾಗಿದೆ. ಮೃತರನ್ನು ಚಿತ್ರದುರ್ಗ ಮೂಲದ ರೇಣುಕಾ ಸ್ವಾಮಿ ಮೆಡಿಕಲ್ ಶಾಪ್ ನಲ್ಲಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ. ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಬೆಂಗಳೂರು ನಗರ ಆಯುಕ್ತ ಬಿ.ದಯಾನಂದ, “ಜೂನ್ 9 ರಂದು ಶವ ಪತ್ತೆಯಾಗಿದೆ. ಈ ಪ್ರಕರಣದಲ್ಲಿ ಹತ್ತಕ್ಕೂ ಹೆಚ್ಚು ಜನರನ್ನು ಬಂಧಿಸಲಾಗಿದೆ. ಒಬ್ಬ ನಟನನ್ನು ವಶಕ್ಕೆ ತೆಗೆದುಕೊಳ್ಳಲಾಗುತ್ತದೆ. ತನಿಖೆಯ ನಂತರ ಕ್ರಮ ಕೈಗೊಳ್ಳಲಾಗುವುದು” ಎಂದು ಹೇಳಿದ್ದಾರೆ. ಮೃತ ರೇಣುಕಾಸ್ವಾಮಿಗೆ 33 ವರ್ಷ ವಯಸ್ಸಾಗಿತ್ತು. ಹೆಚ್ಚಿನ ತನಿಖೆಯ ನಂತರವೇ ಹೆಚ್ಚಿನ ಮಾಹಿತಿ ನೀಡಲು ಸಾಧ್ಯವಾಗುತ್ತದೆ” ಎಂದು ಬೆಂಗಳೂರು ನಗರ ಆಯುಕ್ತರು ತಿಳಿಸಿದ್ದಾರೆ.
ನವದೆಹಲಿ: ಈ ವರ್ಷ ದೇಶಾದ್ಯಂತ ವಿಶ್ವವಿದ್ಯಾಲಯಗಳು ಮತ್ತು ಪದವಿ ಕಾಲೇಜುಗಳಿಗೆ ದಾಖಲಾಗಲಿರುವ ವಿದ್ಯಾರ್ಥಿಗಳಿಗೆ ಪ್ರಮುಖ ಮಾಹಿತಿ ಇಲ್ಲಿದೆ. ಈ ವರ್ಷದ ಉನ್ನತ ಶಿಕ್ಷಣ ಸಂಸ್ಥೆಗಳ ಪ್ರವೇಶಕ್ಕೆ ಸಂಬಂಧಿಸಿದಂತೆ ವಿಶ್ವವಿದ್ಯಾಲಯ ಧನಸಹಾಯ ಆಯೋಗ (ಯುಜಿಸಿ) ಅಧ್ಯಕ್ಷ ಎಂ.ಜಗದೀಶ್ ಕುಮಾರ್ ಅವರು ಇಂದು ಅಂದರೆ ಜೂನ್ 11, 2024 ರ ಮಂಗಳವಾರದಂದು ಪ್ರಮುಖ ನವೀಕರಣವನ್ನು ಹಂಚಿಕೊಂಡಿದ್ದಾರೆ, ಇದರ ಪ್ರಕಾರ ವಿಶ್ವವಿದ್ಯಾಲಯಗಳಿಗೆ ವಿನಾಯಿತಿ ನೀಡಲಾಗುವುದು, ಇದರಿಂದ ಅವರು ವರ್ಷಕ್ಕೆ ಎರಡು ಬಾರಿ ಪ್ರವೇಶ ಪ್ರಕ್ರಿಯೆಯನ್ನು ನಡೆಸಬಹುದು ಎನ್ನಲಾಗಿದೆ. ಆಯೋಗವು ತೆಗೆದುಕೊಂಡ ಈ ನಿರ್ಧಾರವು ಪ್ರಸಕ್ತ ಅಧಿವೇಶನದಿಂದ ಅಂದರೆ 2024-25 ರಿಂದ ಮಾತ್ರ ಅನ್ವಯಿಸುತ್ತದೆ ಮತ್ತು ಉನ್ನತ ಶಿಕ್ಷಣ ಸಂಸ್ಥೆಗಳು ಜುಲೈ-ಆಗಸ್ಟ್ ನಂತರ ಜನವರಿ-ಫೆಬ್ರವರಿಯಲ್ಲಿ ಪ್ರವೇಶ ಪಡೆಯಲು ಸಾಧ್ಯವಾಗುತ್ತದೆ ಎನ್ನಲಾಗಿದೆ. ವರ್ಷಕ್ಕೆ ಎರಡು ಬಾರಿ ಪ್ರವೇಶ ಪ್ರಕ್ರಿಯೆಯನ್ನು ನಡೆಸುವ ಮೂಲಕ, ಭಾರತೀಯ ಉನ್ನತ ಶಿಕ್ಷಣ ಸಂಸ್ಥೆಗಳು ಜಾಗತಿಕವಾಗಿ ಚಾಲ್ತಿಯಲ್ಲಿರುವ ಶೈಕ್ಷಣಿಕ ಮಾನದಂಡಗಳಿಗೆ ಹೊಂದಿಕೆಯಾಗಲು ಸಾಧ್ಯವಾಗುತ್ತದೆ ಎಂದು ಯುಜಿಸಿ ಅಧ್ಯಕ್ಷರು ಹೇಳಿದ್ದಾರೆ.
ಬೆಂಗಳೂರು: ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಟ ದರ್ಶನ್ ಸೇರಿದಂತೆ ಒಟ್ಟು ಹತ್ತು ಮಂದಿಯನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಸದ್ಯ ಪೋಲಿಸರು ದರ್ಶನ್ ಅವರನ್ನು ಕಾಮಾಕ್ಷಿಪಾಳ್ಯ, ಪೊಲೀಸ್ ಠಾಣೆಯಲ್ಲಿ ವಿಚಾರಣೆಗೆ ಕರೆತರಲಾಗಿದೆ. ಸದ್ಯ ಪ್ರಕರಣ ಸಂಬಂಧ ಬಂಧಿತರ ಮೊಬೈಲ್ ಫೋನ್ ಅನ್ನು ವಶಕ್ಕೆ ಪಡೆದುಕೊಳ್ಳಲಾಗಿದ್ದು, ಎಲ್ಲಾ ಮಾಹಿತಿಗಳನ್ನು ಕಲೆಹಾಕಲಾಗುತ್ತಿದೆ ಎನ್ನಲಾಗಿದೆ. ಸದ್ಯ ಪೊಲೀಸರು ಕೊಲೆಯಾದ ಸ್ವಾಮಿ ಶವವನ್ನು ವಿಕ್ಟೋರಿಯ ಆಸ್ಪತ್ರೆಗೆ ಮರಣೋತ್ತರ ಪರೀಕ್ಸೆಯನ್ನು ನಡೆಸಿದ ಬಳಿಕ ಅವರ ಕುಟುಂಬಕ್ಕೆ ಹಸ್ತಾಂತರ ಮಾಡಲಾಗುವುದು ಎನ್ನಲಾಗಿದೆ.
ಬೆಂಗಳೂರು: ಕೊಲೆ ಪ್ರಕಣದಲ್ಲಿ ಸದ್ಯ ಪೊಲೀಸರ ವಶದಲ್ಲಿರುವ ನಟ ದರ್ಶನ್ ಅನೇಕ ಬಾರಿ ವಿವಾದಗಳಿಂದಲೇ ಅವರು ಸುದ್ದಿಯಲ್ಲಿ ಇರುವುದು ಇತ್ತೀಚಿಗೆ ನಾವು ಕಾಣಬಹುದಾಗಿದೆ. ವಿವಾದ ಮತ್ತು ದರ್ಶನ್ ಒಂದೇ ನಾಣ್ಯದ ಎರಡು ಮುಖಗಳಂತೆ ಕಾಣಿಸಿಕೊಳ್ಳುತ್ತಿದ್ದರು ಕೂಡ. ಅಂದ ಹಾಗೇ ಕೂಡ ನಟ ದರ್ಶನ್ ತಮ್ಮ ಪತ್ನಿಗೆ ಸಂಬಂಧಪಟ್ಟ ಕೇಸ್ನಲ್ಲಿ ಜೈಲಿಗೆ ಹೋಗಿ ಬಂದಿದ್ದರು. ಹೌದು, ಪತ್ನಿ ಮತ್ತು ಮಗನ ಮೇಲೆ ಹಲ್ಲೆ ಮಾಡಿ ಜೈಲಿಗೆ ತೆರಳಿದ್ದರು, ಈ ನಡುವೆ 2011 ರಲ್ಲಿ ನಟ ದರ್ಶನ್ ತಮ್ಮ ಪತ್ನಿ ವಿಜಯಲಕ್ಷ್ಮಿ ಮೇಲೆ ಹಲ್ಲೆ ಮಾಡಿ ಮೊದಲ ಬಾರಿ ಜೈಲು ಸೇರಿದ್ದರು. ಕೌಟುಂಬಿಕ ಕಲಹಕ್ಕೆ ಸಂಬಂಧಿಸಿದಂತೆ ವಿಜಯಲಕ್ಷ್ಮಿ ಅವರ ಮೇಲೆ ತೀವ್ರ ಹಲ್ಲೆಯನ್ನು ದರ್ಶನ್ ಮಾಡಿದ್ದರು. ವಿಜಯಲಕ್ಷ್ಮಿ ಅವರ ಮುಖಕ್ಕೆ, ಕೈಗೆ ಗಾಯ ಮಾಡಿದ್ದರು. ವಿಜಯಲಕ್ಷ್ಮಿ ಅವರೇ ದರ್ಶನ್ ವಿರುದ್ಧ ದೂರು ನೀಡಿದ್ದರು
ನವದೆಹಲಿ: ನೀಟ್ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಎನ್ಟಿಎಗೆ ನೋಟಿಸ್ ನೀಡಿದೆ. ಪರೀಕ್ಷೆಯ ಪಾವಿತ್ರ್ಯಕ್ಕೆ ಧಕ್ಕೆಯಾಗಿದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಪ್ರಸ್ತುತ ಕೌನ್ಸೆಲಿಂಗ್ ನಿಷೇಧಿಸಲು ನ್ಯಾಯಾಲಯ ನಿರಾಕರಿಸಿದೆ. ಪ್ರಕರಣದ ಮುಂದಿನ ವಿಚಾರಣೆ ಜುಲೈ 8 ರಂದು ನಡೆಯಲಿದೆ. ನ್ಯಾಯಾಲಯವು ಎನ್ಟಿಎಗೆ ನೋಟಿಸ್ ನೀಡಿ ಈಗಾಗಲೇ ಬಾಕಿ ಇರುವ ಅರ್ಜಿಯೊಂದಿಗೆ ಟ್ಯಾಗ್ ಮಾಡಿದೆ. https://twitter.com/ANI/status/1800405691133554884
ಬೆಂಗಳೂರು: ಕೊಲೆ ಪ್ರಕರಣದಕ್ಕೆ ಸಂಬಂಧಪಟ್ಟಂತೆ ದರ್ಶನ್ ಸ್ನೇಹಿತೆ ಪವಿತ್ರಗೌಡನನ್ನು ಬಂಧನ ಮಾಡಲಾಗಿದೆ ಎನ್ನಲಾಗಿದೆ. ಆರ್.ಆರ್ ನಗರ ಪೊಲೀಸ್ ಠಾಣಾ ಸಿಬ್ಬಂದಿಯವರು ಇಂದು ಬಂಧನ ಮಾಡಲಾಗಿದೆ. ಪವಿತ್ರಗೌಡ ಅವರಿಗೆ ಇನ್ಸ್ಟಾಗ್ರಾಮ್ನಲ್ಲಿ ಅಶ್ಲೀಲವಾಗಿ ಬೈಯುತ್ತಿದ್ದ ಎನ್ನಲಾಗಿದೆ. ಈ ನಡುವೆ ಇದಕ್ಕೆ ಸಂಬಂಧಪಟ್ಟಂತೆ ಹತ್ಯೆಯಾದ ರೇಣುಕಸ್ವಾಮಿಯನ್ನು ಕರೆ ತಂದು ಹಲ್ಲೆ ನಡೆಸಿದ ಬಳಿಕ ಆತ ಸಾವನ್ನಪ್ಪಿದ್ದಾನೆ ಎನ್ನಲಾಗಿದೆ. ಈ ನಡುವೆ ಆತ ಶವ ಮೋರಿ ಬಳಿ ಪತ್ತೆಯಾಗಿತ್ತು, ತನಿಖೆಗೆ ಇಳಿದ ಪೊಲೀಸರಿಗೆ ಶಾಕಿಂಗ್ ಮಾಹಿತಿಗಳು ಹೊರ ಸಿಕ್ಕಿವೆ. ಈಗಾಗಲೇ ಕೊಲೆ ಪ್ರಕರಣದಲ್ಲಿ ದರ್ಶನ್ ಸೇರಿದಂತೆ ಹತ್ತು ಮಂದಿಯನ್ನು ಬಂಧಿಸಲಾಗಿದೆ ಅಂಥ ತಿಳಿದು ಬಂದಿದೆ.
ಬೆಂಗಳೂರು: ಕೊಲೆ ಪ್ರಕರಣದಲ್ಲಿ ನಟ ದರ್ಶನ್ ನನ್ನು ಬಂಧನ ಮಾಡಲಾಗಿದ್ದು, ಘಟನೆ ಸಂಬಂಧ ಇಂದು ಬೆಂಗಳೂರು ನಗರ ಪೊಲೀಸ್ ಆಯುಕ್ತರು ಮಹತ್ವದ ಮಾಹಿತಿಯನ್ನು ನೀಡಿದರು. ಇದೇ ವೇಳೆ ಅವರು ಮಾತನಾಡಿದ ಅವರು ರೇಣುಕ ಕೊಲೆ ಪ್ರಕರಣ ಸಂಬಂಧ ದರ್ಶನ್ ಸೇರಿದಂತೆ ಒಟ್ಟು ಹತ್ತು ಮಂದಿಯನ್ನು ಬಂಧನ ಮಾಡಲಾಗಿದೆ. ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಸೋಶಿಯಲ್ ಮೀಡಿಯಾದಲ್ಲಿ ಪವಿತ್ರಗೌಡಗೆ ಅಶ್ಲೀಲವಾಗಿ ಪದೇಪದೇ ಮೆಸೇಜ್ ಮಾಡುತ್ತಿದ್ದ ಎನ್ನಲಾಗಿದ್ದು, ಇದರಿಂದ ಸಿಟ್ಟಿಗೆದ್ದ ನಟ ದರ್ಶನ್ ಸೇರಿದಂತೆ ಇತರ ಗೆಳೆಯರು ಚಿತ್ರದುರ್ಗದಿಂದ ರೇಣುಕಾಸ್ವಾಮಿಯನ್ನು ಕರೆಸಿಕೊಂಡಿದ್ದರು. ನಟ ದರ್ಶನ್ ಸೇರಿ ಹಲವರು ಹತ್ಯೆ ಮಾಡಿದ್ದಾರೆ. ಬಳಿಕ ಮೃತದೇಹವನ್ನು ಮೂರಿಯಲ್ಲಿ ಎಸೆಯಲಾಗಿದೆ ಎಂದು ಹೇಳಲಾಗಿದೆ. ಜೂನ್ 8 ರಂದು ಕೊಲೆ ಮಾಡಿ ಶವವನ್ನು ಮೂರಿಯಲ್ಲಿ ಎಸೆಯಲಾಗಿತ್ತು. ಜೂನ್ 9 ರಂದು ಶವವನ್ನು ನಾಯಿಗಳು ಎಳೆದಾಡುತ್ತಿದ್ದಾಗ ಶವ ಪತ್ತೆಯಾಗಿದೆ. ಸದ್ಯ ರೇಣುಕಸ್ವಾಮಿ ಸಹನ ಸದ್ಯ ಮೂರು ತಿಂಗಳ ಗರ್ಭಿಣಿಯಾಗಿದ್ದು, ರೇಣುಕಸ್ವಾಮಿ ಅಪಲೋ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ.









