Author: kannadanewsnow07

ಬೆಂಗಳೂರು: ಕೊಲೆ ಪ್ರಕರಣದಲ್ಲಿ ಸದ್ಯ ಪೋಲಿಸರ ವಶದಲ್ಲಿರುವ ನಟ ದರ್ಶನ್‌ ಮೈಸೂರಿನಿಂದ ಬೆಂಗಳೂರಿಗೆ ಕರೆ ತರಲಾಗುತ್ತಿದೆ. ಈ ನಡುವೆ ದರ್ಶನ್‌ ಗೆಳತಿ ಪವಿತ್ರಗೌಡರಿಗೂ ಕೂಡ ಬಂಧನದ ಭೀತಿ ಎದುರಾಗಿದ್ದು, ಕೊಲೆ ಪ್ರಕರಣದಲ್ಲಿ ಆಕೆಯದ್ದು ಕೂಡ ಪಾರತ್ರವಿದೆ ಎನ್ನಲಾಗಿದೆ. ಇನ್‌ಸ್ಟಾಗ್ರಾಮ್‌ನಲ್ಲಿ ಕೊಲೆಯಾದ ಚಿತ್ರದುರ್ಗದ ರೇಣುಕಾಸ್ವಾಮಿ ಪವಿತ್ರಗೌಡರಿಗೆ ಅಶ್ಲೀಲವಾದ ಕಾಮೆಂಟ್‌ ಮತ್ತು ಮೇಸೆಜ್‌ ಹಾಕುತ್ತಿದ್ದ ಎನ್ನಲಾಗಿದೆ. ಇದರಿಂದ ಸಿಟ್ಟಾಗಿದ್ದ ಪವಿತ್ರ ಗೌಡ ದರ್ಶನ್‌ ಗೆ ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ. ಇನ್ನೂ ಇದಕ್ಕೆ ಸಂಬಂಧಪಟ್ಟಂಥೆ ಆತನನ್ನು ಕರೆ ತಂದು ಹಲ್ಲೆ ಮಾಡಿದ ಬಳಿಕ, ಕೊಲೆ ಮಾಡಿ ಬೆಂಗಳೂರಿನ ಕಾಮಾಕ್ಸಿ ಪಾಳ್ಯದಲ್ಲಿ ಶವನ್ನು ಎಸೆದು ಪರಾರಿಯಾಗಿದ್ದಾರೆ ಎನ್ನಲಾಗಿದೆ. ಈ ನಡುವೆ ಹಲ್ಲೆ ಮಾಡಿದ ವೇಳೆಯಲ್ಲಿ ದರ್ಶನ್ ಮತ್ತು ಪವಿತ್ರಗೌಡ ಇದ್ದರು ಎನ್ನಲಾಗಿದೆ. ಸದ್ಯ ದರ್ಶನ್‌ ರನ್ನು ಅವರ ಫಾರ್ಮ್‌ ಹೌಸ್‌ನಲ್ಲಿ ವಶಕ್ಕೆ ಪಡೆದುಕೊಂಡಿರುವ ಪೊಲೀಸರು ಸದ್ಯ ಅವರನ್ನು ಬೆಂಗಳೂರಿಗೆ ಕರೆ ತಂದಿದ್ದಾರೆ. ಸದ್ಯ ಘಟನೆ ಸಂಬಂಧ ಹತ್ತು ಮಂದಿಯನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ ಎನ್ನಲಾಗಿದೆ. ಇದಲ್ಲದೇ ಪವಿತ್ರಗೌಡ ಕೂಡರನ್ನು…

Read More

ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ವಾಹನಗಳಲ್ಲಿ ಸಂಚರಿಸುವ ಪ್ರಯಾಣಿಕರು ಟಿಕೇಟನ್ನು ಪಡೆಯದೆ ಅನಧಿಕೃತವಾಗಿ ಪ್ರಯಾಣ ಮಾಡುವವರನ್ನು ಮತ್ತು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಸಾರಿಗೆ ಆದಾಯದ ಸೋರಿಕೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ, ನಗರದಾದ್ಯಂತ ಸಂಚರಿಸುವ ವಾಹನಗಳನ್ನು ನಮ್ಮ ಸಂಸ್ಥೆಯ ತನಿಖಾ ತಂಡಗಳು ಏಪ್ರಿಲ್-2024 ರ ಮಾಹೆಯಲ್ಲಿ ಒಟ್ಟು 19,146 ಟ್ರಿಪ್‍ಗಳನ್ನು ತಪಾಸಿಸಿ 3924 ಟಿಕೇಟ್ ರಹಿತ ಪ್ರಯಾಣಿಕರನ್ನು ಪತ್ತೆ ಹಚ್ಚಿ, ಅವರಿಂದ ಒಟ್ಟು ರೂ. 7,95,540/- ದಂಡ ವಸೂಲಿ ಮಾಡಿ ಸಂಸ್ಥೆಯ ನಿರ್ವಾಹಕರ ವಿರುದ್ಧ 1023 ಪ್ರಕರಣಗಳನ್ನು ದಾಖಲಿಸಿದೆ. ಮಹಿಳಾ ಪ್ರಯಾಣಿಕರಿಗೆಂದೇ ಮೀಸಲಾಗಿರುವ ಆಸನಗಳಲ್ಲಿ ಕುಳಿತು ಪ್ರಯಾಣಿಸಿರುವ 489 ಪುರುಷ ಪ್ರಯಾಣಿಕರಿಂದ ಒಟ್ಟು ರೂ. 48,900/- ಅನ್ನು ಮೋಟಾರು ವಾಹನ ಕಾಯ್ದೆ 1988ರ ಕಾಲಂ 177 ಮತ್ತು 94 ರ ಪ್ರಕಾರ ದಂಡ ವಿಧಿಸಲಾಗಿರುತ್ತದೆ. ಒಟ್ಟಾರೆಯಾಗಿ ಏಪ್ರಿಲ್-2024 ರ ಮಾಹೆಯಲ್ಲಿ 4,413 ಪ್ರಯಾಣಿಕರಿಂದ ಒಟ್ಟು ರೂ. 8,44,440/- ದಂಡವನ್ನು ವಸೂಲಿ ಮಾಡಲಾಗಿದೆ. ಪ್ರಯಾಣಿಕರು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ವಾಹನಗಳಲ್ಲಿ ಪ್ರಯಾಣಿಸುವಾಗ…

Read More

ಬೆಂಗಳೂರು: ಬೆಂಗಳೂಋಉ: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಜೂನ್ 14 ರಿಂದ 22 ರವರೆಗೆ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳ ಪರೀಕ್ಷೆ-2 ನಡೆಯಲಿದ್ದು, ಪರೀಕ್ಷೆಯು ಬೇರೆ ಬೇರೆ ಪರೀಕ್ಷಾ ಕೇಂದ್ರಗಳಲ್ಲಿ ಇರುವುದರಿಂದ ಸಂಸ್ಥೆಯು ವಿದ್ಯಾರ್ಥಿಗಳ ಹಿತವನ್ನು ಗಮನದಲ್ಲಿಟ್ಟುಕೊಂಡು ಪರೀಕ್ಷೆಗಳು ನಡೆಯುವ ದಿನಾಂಕಗಳಂದು ಪರೀಕ್ಷೆಗೆ ಹಾಜರಾಗಲು ವಾಸಸ್ಥಳದಿಂದ ನಿಯೋಜಿತ ಪರೀಕ್ಷಾ ಕೇಂದ್ರದವರೆಗೆ ಹೋಗುವಾಗ ಮತ್ತು ಹಿಂದಿರುಗುವಾಗ ಸಂಸ್ಥೆಯ ಸಾಮಾನ್ಯ ಸೇವೆಗಳಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷಾ ಪ್ರವೇಶ ಪತ್ರವನ್ನು ತೋರಿಸಿ, ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ. ಎಸ್.ಎಸ್.ಎಲ್.ಸಿ ಪರೀಕ್ಷೆ-02 ರ ದಿನಾಂಕಗಳಂದು ಪರೀಕ್ಷಾ ಕೇಂದ್ರಗಳ ಮಾರ್ಗಗಳಲ್ಲಿ ಕಡ್ಡಾಯವಾಗಿ ಎಲ್ಲಾ ಮಾರ್ಗಗಳನ್ನು, ಸುತ್ತುವಳಿಗಳನ್ನು ಕಾರ್ಯಾಚರಣೆಗೊಳಿಸಲಾಗುವುದು. ಹೆಚ್ಚುವರಿ ಸುತ್ತುವಳಿಗಳ ಕಾರ್ಯಾಚರಣೆಯ ಅಗತ್ಯತೆ ಕಂಡುಬಂದಲ್ಲಿ ಕಾರ್ಯಾಚರಣೆ ಮಾಡಲಾಗುವುದು. ಪರೀಕ್ಷಾ ಕೇಂದ್ರಗಳ ಬಳಿ ವಿದ್ಯಾರ್ಥಿಗಳು/ಪೆÇೀಷಕರು ಕೋರಿಕೆ ನಿಲುಗಡೆ ಕೋರಿದಲ್ಲಿ, ಕೋರಿಕೆ ನಿಲುಗಡೆ ನೀಡಲು ಕ್ರಮ ಕೈಗೊಳ್ಳಲಾಗಿದೆ ಎಂದು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಸಾರ್ವಜನಿಕ ಸಂಪರ್ಕಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಬೆಂಗಳೂರು: ಚಂದನ್ ಶೆಟ್ಟಿ, ನಿವೇದಿತಾ ಗೌಡ ಡಿವೋರ್ಸ್ ಸುದ್ದಿ ಕೇಳಿ ಬಂದ ಬಳಿಕ ಸ್ಯಾಂಡಲ್‌ವುಡ್‌ನಲ್ಲಿ ಮತ್ತೊಂದು ಜೋಡಿ ಡೈವೋರ್ಸ್‌ಗೆ ಮುಂದಾಗಿದ್ದು ಅದು ಸ್ಯಾಂಡಲ್‌ವುಡ್‌ ಸೂಪರ್‌ ಸ್ಟಾರ್‌, ಡಾ.ರಾಜ್‌ ಕುಮಾರ್‌ ಅವರ್ ಕುಟುಂಬದಲ್ಲೇ ಎನ್ನುವುದು ಈಗ ಆಘಾತ ಮೂಡಿಸಿದೆ . ಹೌದು, ದೊಡ್ಮನೆ ಮಗ ಗುರು ರಾಜ್​ಕುಮಾರ್ ಅಲಿಯಾಸ್‌ ಯುವ ರಾಜ್​ಕುಮಾರ್ ಅವರು ಫ್ಯಾಮಿಲಿ ಕೋರ್ಟ್​​ನಲ್ಲಿ ಡಿವೋರ್ಸ್‌ಗಾಗಿ ಅರ್ಜಿ ಸಲ್ಲಿಸಿದ್ದಾರೆ ಎನ್ನಲಾಗಿದ್ದು, ಸದ್ಯ ಪ್ರಕರಣ ಸಂಬಂಧ ಹೆಚ್ಚಿನ ಮಾಹಿತಿಗಾಗಿ ಕಾಯಲಾಗುತ್ತಿದೆ. ಯುವ ರಾಜ್‌ಕುಮಾರ್ 2019 ಮೇ 26ರಂದು ಬೆಂಗಳೂರಿನ ಪ್ಯಾಲೆಸ್ ಗ್ರೌಂಡ್‌ನಲ್ಲಿ ಶ್ರೀದೇವಿ ಭೈರಪ್ಪ ಎಂಬುವವರನ್ನು ಮದುವೆಯಾದರು. ಶ್ರೀದೇವಿ ಮೂಲತಃ ಸಾಂಸ್ಕೃತಿಕ ನಗರಿ ಮೈಸೂರಿನವರು. ಇವರಿಬ್ಬರು ಏಳು ವರ್ಷಗಳಿಂದ ಪರಸ್ಪರ ಸ್ನೇಹಿತರಾಗಿದ್ದರು. ಈ ಸ್ನೇಹ ಪ್ರೀತಿಗೆ ತಿರುಗಿ ಮದುವೆಯಾದರು. ಯುವ ರಾಜ್ ಕುಮಾರ್ ಕನ್ನಡ ಚಿತ್ರರಂಗದಲ್ಲಿ ಸಕ್ರಿಯವಾಗಿರುವ ಪ್ರಮುಖ ನಟ. ಯುವ ಅವರ ತಂದೆ ರಾಘವೇಂದ್ರ ರಾಜ್ ಕುಮಾರ್ ಕೂಡ ನಟ ಮತ್ತು ನಿರ್ಮಾಪಕರಾಗಿದ್ದಾರೆ ಮತ್ತು ಅವರ ಚಿಕ್ಕಪ್ಪರಾದ ಪುನೀತ್ ರಾಜ್ ಕುಮಾರ್…

Read More

ನವದೆಹಲಿ: ಪಶ್ಚಿಮ ಬಂಗಾಳದ ನಾಲ್ಕು ಕ್ಷೇತ್ರಗಳು ಸೇರಿದಂತೆ ಏಳು ರಾಜ್ಯಗಳ 13 ವಿಧಾನಸಭಾ ಕ್ಷೇತ್ರಗಳಿಗೆ ಜುಲೈ 10 ರಂದು ಉಪಚುನಾವಣೆಯನ್ನು ಚುನಾವಣಾ ಆಯೋಗ ಸೋಮವಾರ ಪ್ರಕಟಿಸಿದೆ. ಹಾಲಿ ಸದಸ್ಯರ ಮರಣ ಅಥವಾ ರಾಜೀನಾಮೆಯಿಂದ ಉಂಟಾಗುವ ಖಾಲಿ ಹುದ್ದೆಗಳಿಗೆ ಉಪಚುನಾವಣೆ ನಡೆಯಲಿದೆ. ರುಪೌಲಿ (ಬಿಹಾರ), ರಾಯ್ಗಂಜ್, ರಣಘಾಟ್ ದಕ್ಷಿಣ್, ಬಾಗ್ಡಾ ಮತ್ತು ಮಣಿಕ್ತಾಲಾ (ಎಲ್ಲರೂ ಪಶ್ಚಿಮ ಬಂಗಾಳ), ವಿಕ್ರಾವಂಡಿ (ತಮಿಳುನಾಡು), ಅಮರವಾರಾ (ಮಧ್ಯಪ್ರದೇಶ), ಬದರೀನಾಥ್ ಮತ್ತು ಮಂಗಳೌರ್ (ಉತ್ತರಾಖಂಡ್), ಜಲಂಧರ್ ಪಶ್ಚಿಮ (ಪಂಜಾಬ್) ಮತ್ತು ಡೆಹ್ರಾಡೂನ್, ಹಮೀರ್ಪುರ್ ಮತ್ತು ನಲಘರ್ (ಹಿಮಾಚಲ ಪ್ರದೇಶ) ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ನಡೆಯುತ್ತಿದೆ. ಜೂನ್ 14 ರಂದು ಚುನಾವಣಾ ಅಧಿಸೂಚನೆ ಹೊರಡಿಸಲಾಗುವುದು, ಜೂನ್ 21 ರಂದು ನಾಮಪತ್ರ ಸಲ್ಲಿಸಲು ಕೊನೆಯ ದಿನ, ಜೂನ್ 24 ರಂದು ಚುನಾವಣಾ ನಾಮಪತ್ರಗಳ ಪರಿಶೀಲನೆ ಮತ್ತು ಜೂನ್ 26 ರಂದು ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದೆ. ಜುಲೈ 10 ರಂದು ಉಪಚುನಾವಣೆ ನಡೆಯಲಿದ್ದು, ಜುಲೈ 13 ರಂದು ಮತ ಎಣಿಕೆ ನಡೆಯಲಿದೆ.…

Read More

ನವದೆಹಲಿ: ಮೂರನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಿದ ನಂತರ, ಪಿಎಂ ಕಿಸಾನ್ ನಿಧಿಯ 17 ನೇ ಕಂತಿನ ಬಿಡುಗಡೆಗೆ ಅಧಿಕಾರ ನೀಡುವ ಮೊದಲ ಕಡತಕ್ಕೆ ಪ್ರಧಾನಿ ನರೇಂದ್ರ ಮೋದಿ ಸಹಿ ಹಾಕಿದ್ದಾರೆ. ಇದು 9.3 ಕೋಟಿ ರೈತರಿಗೆ ಪ್ರಯೋಜನವನ್ನು ನೀಡುತ್ತದೆ ಮತ್ತು ಸುಮಾರು 20,000 ಕೋಟಿ ರೂ.ಗಳನ್ನು ವಿತರಿಸುತ್ತದೆ. ಕಡತಕ್ಕೆ ಸಹಿ ಹಾಕಿದ ನಂತರ ಮಾತನಾಡಿದ ಪ್ರಧಾನಿ ಮೋದಿ, “ನಮ್ಮದು ಕಿಸಾನ್ ಕಲ್ಯಾಣಕ್ಕೆ ಸಂಪೂರ್ಣವಾಗಿ ಬದ್ಧವಾಗಿರುವ ಸರ್ಕಾರ. ಆದ್ದರಿಂದ ಅಧಿಕಾರ ವಹಿಸಿಕೊಂಡ ನಂತರ ಸಹಿ ಮಾಡಿದ ಮೊದಲ ಕಡತವು ರೈತರ ಕಲ್ಯಾಣಕ್ಕೆ ಸಂಬಂಧಿಸಿದೆ ಎಂಬುದು ಸೂಕ್ತವಾಗಿದೆ. ಮುಂಬರುವ ದಿನಗಳಲ್ಲಿ ರೈತರು ಮತ್ತು ಕೃಷಿ ವಲಯಕ್ಕಾಗಿ ಇನ್ನೂ ಹೆಚ್ಚು ಕೆಲಸ ಮಾಡಲು ನಾವು ಬಯಸುತ್ತೇವೆ ಅಂಥ ಹೇಳಿದರು. https://twitter.com/ANI/status/1800047645626380671

Read More

ನವದೆಹಲಿ: ನರೇಂದ್ರ ಮೋದಿ ಅವರು ಸತತ ಮೂರನೇ ಬಾರಿಗೆ ಭಾರತದ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ಅವರು ಈ ಬಾರಿ ಅತಿದೊಡ್ಡ ತಂಡವನ್ನು ಆಯ್ಕೆ ಮಾಡಿದ್ದಾರೆ. ಇದರಲ್ಲಿ 30 ಕ್ಯಾಬಿನೆಟ್ ಮಂತ್ರಿಗಳು, 5 ಸ್ವತಂತ್ರ ಉಸ್ತುವಾರಿ ಸಚಿವರು ಮತ್ತು 36 ರಾಜ್ಯ ಸಚಿವರು ಸೇರಿದ್ದಾರೆ. ಕನಿಷ್ಠ ಮೂರು ಅವಧಿಗೆ ಸಂಸದರಾಗಿರುವ 43 ಸಚಿವರಿದ್ದಾರೆ. ಈ ಹಿಂದೆ ಮೋದಿ ಸರ್ಕಾರದಲ್ಲಿ 39 ಸಚಿವರು ಕೆಲಸ ಮಾಡಿದ್ದಾರೆ. 6 ಮಂತ್ರಿಗಳು ಮುಖ್ಯಮಂತ್ರಿಗಳಾಗಿದ್ದಾರೆ. ಶಿವರಾಜ್ ಚೌಹಾಣ್ ಅವರಂತಹ ಅನುಭವಿ ಅನುಭವಿಗಳು ಮತ್ತು ಚಿರಾಗ್ ಪಾಸ್ವಾನ್ ಅವರಂತಹ ಯುವಕರು ಈ ಬಾರಿ ಮೋದಿ ತಂಡದಲ್ಲಿದ್ದಾರೆ. ಅದೇ ಸಮಯದಲ್ಲಿ, ಮೋದಿ 3.0 ರಲ್ಲಿ, ಮಂತ್ರಿಗಳ ಇಲಾಖೆಗಳನ್ನು ಇಂದು ಅಲ್ಪಾವಧಿಯಲ್ಲಿ ವಿತರಿಸಬಹುದು ಎಂದು ನಾವು ನಿಮಗೆ ಹೇಳುತ್ತೇವೆ. ಪ್ರಧಾನಿ ನರೇಂದ್ರ ಮೋದಿ ಈಗಷ್ಟೇ ಸೌತ್ ಬ್ಲಾಕ್ ತಲುಪಿದ್ದಾರೆ. ಅವರು ಪ್ರಧಾನಿ ಕಚೇರಿಗೆ ಬಂದಿದ್ದಾರೆ. ಪ್ರಮಾಣ ವಚನ ಸ್ವೀಕಾರದ ನಂತರ, ಈಗ ಎಲ್ಲರ ಕಣ್ಣುಗಳು ಯಾವ ಸಚಿವರಿಗೆ ಯಾವ ಜವಾಬ್ದಾರಿಯನ್ನು ವಹಿಸಲಾಗುತ್ತದೆ…

Read More

ಬೆಂಗಳೂರು/ಬೆಳಗಾವಿ: ರಾಜ್ಯದಲ್ಲಿ ಮತ್ತೊಂದು ಮಕ್ಕಳ ಮಾರಾಟ ಜಾಲ ಪತ್ತೆಯಾಗಿದೆ. ಘಟನೆ ಸಂಬಂಧ ಐವರನ್ನು ಪೋಲಿಸರು ಬಂಧಿಸಿದ್ದಾರೆ.  ಮಾಳಮಾರುತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪ್ರಕರಣ ಸಂಬಂಧ ಕಿಂಗ್ ಪಿನ್ ಕಿತ್ತೂರಿ‌ನ ಡಾ.ಅಬ್ದುಲ್ ಗಫಾರ್ ಲಾಡಖಾನ್, ನೇಗಿನಹಾಳದ ಮಹಾದೇವಿ ಜೈನ್, ಚಂದನ ಸುಬೇದಾರ್, ಪವಿತ್ರಾ ಮತ್ತು ಪ್ರವೀಣ್​ನನ್ನು ಪೊಲೀಸರು ಬಂಧಿಸಿದ್ದಾರೆ. ಮದುವೆಗೂ ಮುಂಚೆ ಗರ್ಭಿಣಿಯಾಗಿ ಮಗುವನ್ನು ಸಾಕಲಾಗದೆ ನರಳಾಡುವ ಅಸಹಾಯಕ ಹೆಣ್ಮುಕ್ಕಳನ್ನು ಟಾರ್ಗೆಟ್ ಮಾಡುತ್ತಿದ್ದ ಈ ಗ್ಯಾಂಗ್‌ ಮಕ್ಕಳ ಮಾರಾಟ ಮಾಡುತ್ತಿದ್ದರು ಎನ್ನಲಾಗಿದೆ.

Read More

ದಾವಣಗೆರೆ: ಶ್ರೀರಾಮ ಹಾಗೂ ಪಾಂಡವರು ತಂದೆಗೆ ಹುಟ್ಟಿದವರಲ್ಲ ಅಂತ ಪ್ರೊ. ಭಗವಾನ್‌ ವಿವಾದತ್ಮಕ ಹೇಳಿಕೆ ನೀಡಿದ್ದಾರೆ. ಅವರು ನಗರದ ಹೊರವಲಯದ ಮೈತ್ರಿವನದಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಪ್ರೊ.ಬಿ.ಕೃಷ್ಣಪ್ಪ ಸ್ಥಾಪಿತ)ಯಿಂದ ಭಾನುವಾರ ಆಯೋಜಿಸಿದ್ದ ಡಾ.ಬಿ.ಆರ್.ಅಂಬೇಡ್ಕರ್‌ ಹಾಗೂ ಪ್ರೊ.ಬಿ.ಕೃಷ್ಣಪ್ಪ ಅವರ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಅವರು ರಾಮಾಯಣದ ಶ್ರೀರಾಮ ಹಾಗೂ ಮಹಾಭಾರತದ ಪಾಂಡವರು ತಮ್ಮ ತಂದೆಯಿಂದ ಹುಟ್ಟಿದವರಲ್ಲ. ಈ ಮಾತಿಗೆ ಪುರಾವೆಗಳಿವೆ ಅಂತ ಅವರು ತಿಳಿಸಿದರು. ಇನ್ನೂ ಇದೇ ವೇಳೆ ಅವರು ಮಾತನಾಡುತ್ತ ರಾಮ ದಶರಥ ಮಹಾರಾಜರಿಂದ ಹುಟ್ಟಿಲ್ಲ. ಬದಲಾಗಿ ಪುರೋಹಿತನೊಬ್ಬನಿಂದ ಹುಟ್ಟಿದವನು. ಅದೇ ರೀತಿ ಮಹಾಭಾರತದಲ್ಲಿ ಬರುವ ಶಾಪಗ್ರಸ್ಥ ರಾಜ ಪಾಂಡು ಐವರು ಪಾಂಡವರ ತಂದೆ ಎಂದು ಹೇಳಲಾಗುತ್ತಿದ್ದರೂ ಪಾಂಡವರು ಹುಟ್ಟಿದ್ದು ಮಾತ್ರ ದೇವತೆಗಳಿಂದ ಎಂದು ಮಹಾಭಾರತದಲ್ಲೇ ಇದೆ ಅಂಥ ಅವರು ತಿಳಿಸಿದರು.

Read More

ಆಶಾದಾಯಕ ಹನುಮಾನ್ ಮಂತ್ರನಾವು ಎಷ್ಟೇ ಫೇಲ್ ಆಗಿದ್ದರೂ ನಮ್ಮ ಹತ್ತಿರ ಯಾರಾದರೂ ಇದ್ದರೆ ಸಾಕು ನಮಗೆ ಆಶಾಕಿರಣ. ವೈಫಲ್ಯವನ್ನು ಜಯಿಸಿ ಮತ್ತು ಜೀವನದಲ್ಲಿ ಯಶಸ್ವಿಯಾಗಲು ಅವಕಾಶಗಳನ್ನು ಪಡೆಯಿರಿ. ರಾಮನ ಗೆಲುವಿನ ಹಿಂದೆ ಹನುಮಂತನ ಆತ್ಮಸ್ಥೈರ್ಯ ಇತ್ತು ಎಂದೂ ಹೇಳಬಹುದು. ರಾಮನಿಗೆ ಎಷ್ಟೇ ದೊಡ್ಡ ಸಮಸ್ಯೆ ಬಂದರೂ ಅದನ್ನು ಸರಿಪಡಿಸಲು ಹನುಮಂತ ಧಾವಿಸುತ್ತಾನೆ. ರಾಮನ ಪಕ್ಕದಲ್ಲಿ ನಿಂತು ಸೀತೆಯನ್ನು ರಕ್ಷಿಸಲು ಸಹಾಯ ಮಾಡಿದವನು ಹನುಮಂತ. ಹನುಮಂತನ ಸಂಕಲ್ಪ ಮತ್ತು ಶಕ್ತಿಗೆ ಯಾರೂ ಸರಿಸಾಟಿಯಾಗಲಾರರು. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ನಕ್ಷತ್ರಿ ತಂತ್ರಿ ನಂ:- 9686268564. ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ, ಸಂತಾನ…

Read More