Subscribe to Updates
Get the latest creative news from FooBar about art, design and business.
Author: kannadanewsnow07
ಬೆಂಗಳೂರು : ಮುಡಾ ಹಗರಣಕ್ಕೆ ಸಬಂಧಿಸಿದಂತೆ ಮಾಜಿ ಆಯುಕ್ತ ದಿನೇಶ್ ಕುಮಾರ್ ಮಧ್ಯಂತರ ಜಾಮೀನು ಅರ್ಜಿಯನ್ನು ಇದೀಗ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಜಾಗೊಳಿಸಿ ಆದೇಶ ಹೊರಡಿಸಿದೆ. ಮಾಜಿ ಆಯುಕ್ತ ದಿನೇಶ್ ಕುಮಾರ್ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಮಧ್ಯಂತರ ಜಾಮೀನು ನೀಡಬೇಕು ಎಂದು ಕೋರ್ಟಿಗೆ ಅರ್ಜಿ ಸಲ್ಲಿಸಿದ್ದರು. ದಿನೇಶ್ ಕುಮಾರ್ ಪರ ವಕೀಲರು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು.ಇದೀಗ ಕೋರ್ಟ್ ಜಾಮೀನು ಅರ್ಜಿ ವಜಾಗೊಳಿಸಿ ಆದೇಶ ಹೊರಡಿಸಿದೆ. ಅಲ್ಲದೇ ದಿನೇಶ್ ರನ್ನು 9 ದಿನಗಳ ಕಾಲ ED ಕಸ್ಟಡಿಗೆ ನೀಡಿ ಆದೇಶ ಹೋರಡಿಸಿತು.
ಬೆಂಗಳೂರು : ಸುಮಾರು 23 ವರ್ಷಗಳ ನಂತರ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆಗೆ ರಾಜ್ಯ ಚುನಾವಣಾ ಆಯೋಗ ನಿರ್ಧರಿಸಲಾಗಿದ್ದು, ರಾಜ್ಯದಲ್ಲೂ ಮುಂದಿನ ವರ್ಷ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (ಎಸ್ಐಆರ್) ನಡೆಯಲಿದೆ. ರಾಜ್ಯ ಮುಖ್ಯ ಚುನಾವಣಾ ಆಯೋಗ ಇದರ ಪೂರ್ವ ಸಿದ್ದತೆ ಆರಂಭಿಸಿದೆ. ಈ ಕುರಿತಂತೆ ರಾಜ್ಯ ಮುಖ್ಯ ಚುನಾವಣಾಧಿಕಾರಿ ವಿ.ಅನ್ಬುಕುಮಾರ್ ಮಾಹಿತಿ ನೀಡಿದರು. ರಾಜ್ಯದಲ್ಲಿ 2002ರಲ್ಲಿ ಎಸ್ಐಆರ್ ನಡೆಸಲಾಗಿತ್ತು. ಇದೀಗ 23 ವರ್ಷಗಳ ನಂತರ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆಗೆ ನಿರ್ಧರಿಸಲಾಗಿದೆ. ಬೂತ್ ಮಟ್ಟದ ಅಧಿಕಾರಿಗಳು (ಬಿಎಲ್ಒ) ಪ್ರತಿ ಮತದಾರರ ಮನೆಗೂ ಹೋಗಿ ಮತದಾರರ ಗುರುತಿನ ಚೀಟಿ ಪರಿಶೀಲಿಸಲಿದ್ದಾರೆ. 2002ರ ಮತದಾರರ ವಿಶೇಷ ಪರಿಷ್ಕರಣೆ ಪಟ್ಟಿ ಹಾಗೂ 2025ರ ಮತದಾರರ ಪಟ್ಟಿಯಲ್ಲಿನ ವ್ಯತ್ಯಾಸಗಳನ್ನು ಪರಿಶೀಲಿಸಲಾಗುವುದು. ಮನೆಯಲ್ಲಿ ಯಾರೂ ಲಭ್ಯವಿರದಿದ್ದರೆ ಬಿಎಲ್ಒಗಳು ಮೂರು ಬಾರಿ ಭೇಟಿ ನೀಡಲಿದ್ದು, ಪಕ್ಕದ ಮನೆಯವರ ಸಹಾಯದಿಂದ ಸಂಪರ್ಕ ಸಾಧಿಸಲಿದ್ದಾರೆ. ಮತದಾರರ ಗುರುತಿನ ಚೀಟಿಯಲ್ಲಿ ಭಾವಚಿತ್ರ ಸ್ಪಷ್ಟವಾಗಿ ಇರದಿದ್ದರೆ ಮತದಾರರು ಹೊಸ ಫೋಟೋ ನೀಡಬೇಕು. ಪ್ರತಿಯೊಬ್ಬ ಮತದಾರರು…
ಬೆಂಗಳೂರು : ಬಹುಭಾಷಾ ನಟಿ ಹಾಗೂ ಅಭಿನಯ ಸರಸ್ವತಿ ಎಂದೇ ಖ್ಯಾತಿ ಹೊಂದಿದ್ದ ಬಿ.ಸರೋಜಾದೇವಿ ಅವರ ಹೆಸರಿನಲ್ಲಿ `ಅಭಿನಯ ಸರಸ್ವತಿ’ ಪ್ರಶಸ್ತಿ ನೀಡುವುದಾಗಿ ರಾಜ್ಯ ಸರ್ಕಾರ ಘೋಷಿಸಿದೆ. ಇತ್ತೀಚಿಗೆ ಅಷ್ಟೇ ಡಾ. ವಿಷ್ಣುವರ್ಧನ್ ಹಾಗೂ ಬಿ ಸರೋಜಾದೇವಿಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದರು. ಇದರ ಬೆನ್ನಲ್ಲೇ ಇದೀಗ ಕನ್ನಡ ಚಲನಚಿತ್ರ ನಟಿ, ಪಂಚಭಾಷಾ ತಾರೆ, ಪದ್ಮಶ್ರೀ ಹಾಗೂ ಪದ್ಮಭೂಷಣ ವಿಜೇತೆ ದಿವಂಗತ ಬಿ.ಸರೋಜಾದೇವಿ ಅವರು ಪಂಚಭಾಷಾ ತಾರೆಯಾಗಿದ್ದು, ಭಾರತೀಯ ಹಾಗೂ ಕನ್ನಡ ಚಿತ್ರರಂಗಕ್ಕೆ ನೀಡಿರುವ ಕೊಡುಗೆ ಅಪಾರವಾಗಿದೆ. ಅದನ್ನು ಪರಿಗಣಿಸಿ ಅವರು ಪಡೆದಿದ್ದ “ಅಭಿನಯ ಸರಸ್ಕೃತಿ” ಬಿರುದಿನ ಹೆಸರಿನಲ್ಲಿ ಕನ್ನಡ ಚಿತ್ರರಂಗಕ್ಕೆ ಕನಿಷ್ಠ 25 ವರ್ಷಗಳ ಅವಿಸ್ಮರಣೀಯ ಸೇವೆ ಸಲ್ಲಿಸಿರುವ ಮಹಿಳೆಯರಿಗೆ ಜೀವಮಾನ ಸಾಧನೆ ಪ್ರಶಸ್ತಿಯನ್ನು ನೀಡಲಾಗುವುದು. ಪ್ರಸ್ತುತ ಜಾರಿಯಲ್ಲಿರುವ ಕನ್ನಡ ಚಲನಚಿತ್ರ ನೀತಿ-2011ರಲ್ಲಿನ ವಾರ್ಷಿಕ ರಾಜ್ಯ ಚಲನಚಿತ್ರ ಪ್ರಶಸ್ತಿಗಳ ಪಟ್ಟಿ ಅನುಬಂಧ-1ರಡಿ ಜಾರಿಗೆ ತರಲಾಗಿದೆ. ಈ ಪ್ರಶಸ್ತಿಯಡಿಯಲ್ಲಿ 1 ಲಕ್ಷ ರೂ. ನಗದು…
ಬೆಂಗಳೂರು : ದರ್ಶನ್ಗೆ ಹೆಚ್ಚುವರಿ ದಿಂಬು, ಹಾಸಿಗೆ ನೀಡದಿರುವ ಆರೋಪ ಸಂಬಂಧಿಸಿದಂತೆ ಕೋರ್ಟ್ ನಲ್ಲಿ ಇದೀಗ ದರ್ಶನ್ ಸಲ್ಲಿಸಿದ ಅರ್ಜಿಯ ವಿಚಾರಣೆ ನಡೆಯಿತು. ಕೋರ್ಟ್ ಆದೇಶವಿದ್ದರೂ ದರ್ಶನ್ಗೆ ಸೌಲಭ್ಯ ನೀಡಿಲ್ಲ ಎಂದು ಬೆಂಗಳೂರಿನ 57ನೇ CCH ಕೋರ್ಟ್ ನಲ್ಲಿ ದರ್ಶನ್ ಅರ್ಜಿ ವಿಚಾರಣೆ ನಡೆಯಿತು. ಈ ವೇಳೆ ಅರ್ಜಿಯ ಆದೇಶವನ್ನು ಸೆ.19ಕ್ಕೆ ಆದೇಶ ಕಾಯ್ದಿರಿಸಿ ಕೋರ್ಟ್ ಆದೇಶಿಸಿತು. ಸೆಪ್ಟೆಂಬರ್ 15ರಂದು ಕೋರ್ಟ್ಗೆ ದರ್ಶನ್ ಪರ ವಕೀಲ ಸುನಿಲ್ ಅರ್ಜಿ ಸಲ್ಲಿಸಿದ್ದರು. ಈ ವೇಳೆ ದರ್ಶನ್ ಪರ ವಕೀಲ ಸುನೀಲ್ ವಾದ ಆರಂಭಿಸಿದರು. ಕೋರ್ಟ್ ಆದೇಶವಿದ್ದರೂ ದರ್ಶನಿಗೆ ಕನಿಷ್ಠ ಸೌಲಭ್ಯ ನೀಡಿಲ್ಲ. ಬೆಳಿಗ್ಗೆ ಮತ್ತು ಸಂಜೆ ಅರ್ಧ ಗಂಟೆ ವಾಕಿಂಗ್ ಗೆ ಅವಕಾಶ ನೀಡಲಾಗಿದೆ. ಕೋರ್ಟ್ ಆದೇಶವನ್ನು ಉಲ್ಲಂಘನೆ ಮಾಡಿದ್ದಾರೆ. ಅಧಿಕಾರಿಗಳು ಇದನ್ನು ತುಂಬಾ ಕ್ಯಾಶುಯಲ್ ಆಗಿ ತೆಗೆದುಕೊಂಡಿದ್ದಾರೆ ಎಂದು ವಾದ ಮಂಡಿಸಿದರು. ವರದಿಯಲ್ಲಿ ಏನು ಬೇಕಾದರೂ ಬರೆದುಕೊಂಡು ಬರಬಹುದು ನಾವು ಜೈಲು ವಿಭಾಗದ ವಿರುದ್ಧ ಆರೋಪ ಮಾಡುತ್ತಿದ್ದೇವೆ. ಕೇವಲ 14 ದಿನ…
ದಕ್ಷಿಣಕನ್ನಡ : ಧರ್ಮಸ್ಥಳ ಪ್ರಕರಣ ದಿನವೊಂದಕ್ಕೆ ಟ್ವಿಸ್ಟ್ ಪಡೆದುಕೊಳ್ಳುತ್ತಿದ್ದು, ಇದೀಗ ಎಸ್ಐಟಿ ಅಧಿಕಾರಿಗಳು ಬಂಗ್ಲೆಗುಡ್ಡದಲ್ಲಿ ಶೋಧ ನಡೆಸಿದ್ದಾರೆ. ಧರ್ಮಸ್ಥಳ ಸಮೀಪದ ಬಂಗ್ಲೆಗುಡ್ಡೆ ಕಾಡಿನಲ್ಲಿ ಸಂಶಯಾಸ್ಪದ ಶವ ಪತ್ತೆ ಪ್ರಕರಣದ ತನಿಖೆ ತೀವ್ರಗೊಂಡಿದೆ. ಎಸ್ಐಟಿ ತಂಡವು ಪಿವಿಸಿ ಪೈಪ್ ಬಳಸಿ ಮಣ್ಣಿನ ಮಾದರಿಗಳನ್ನು ಸಂಗ್ರಹಿಸಿದ್ದು, ಈ ವೇಳೆ ಸಣ್ಣ ಮೂಳೆ ಮತ್ತು ಬಟ್ಟೆಯ ತುಂಡುಗಳು ಪತ್ತೆಯಾಗಿವೆ. ಈ ಮಾದರಿಗಳನ್ನು ಫಾರೆನ್ಸಿಕ್ ಲ್ಯಾಬ್ಗೆ ಕಳುಹಿಸಲಾಗಿದೆ. ಇದೀಗ ಧರ್ಮಸ್ಥಳದ ಬಂಗ್ಲೆ ಗುಡ್ಡದಲ್ಲಿ ಮತ್ತೆ 5 ಕಡೆಗಳಲ್ಲಿ ಮಾನವನ ಅಸ್ತಿಪಂಜರದ ಮೂಳೆಗಳು ಪತ್ತೆಯಾಗಿವೆ, ಎಸ್ಐಟಿ ಮಹಜರು ವೇಳೆ ಅಸ್ತಿಪಂಜರದ ಅವಶೇಷಗಳು ಪತ್ತೆಯಾಗಿವೆ. ಭೂಮಿಯ ಮೇಲ್ಭಾಗದಲ್ಲಿ ಅಸ್ತಿಪಂಜರದ ಅವಶೇಷಗಳು, ಮೂಳೆಗಳು ಸಿಕ್ಕಿದ್ದು, ಸುಕೋ ಟೀಮ್ ಸಿಕ್ಕ ಜಾಗದಲ್ಲಿ ಮಣ್ಣಿನ ಮಾದರಿ ಯನ್ನು ಸಂಗ್ರಹಿಸಲಾಗಿದೆ ಪೈಪ್ ಗಳಲ್ಲಿ ಮೂಳೆಗಳನ್ನು ಸಂಗ್ರಹಿಸಿದೆ. ತನಿಖಾಧಿಕಾರಿ ಜಿತೇಂದ್ರ ದಯಾಮಾ ನೇತೃತ್ವದ ತಂಡ ಕಳೆದ ಎರಡು ಗಂಟೆಗಳಿನಿಂದ ಸ್ಥಳದಲ್ಲೇ ಶೋಧ ಕಾರ್ಯ ಮುಂದುವರೆಸಿದ್ದು, ಈ ವೇಳೆ ಭೂಮಿಯ ಮೇಲ್ಭಾಗದಲ್ಲೇ ಕೆಲವು ಸಣ್ಣಪುಟ್ಟ ಮೂಳೆ ತುಂಡುಗಳು ಮತ್ತು…
ಉತ್ತರಕನ್ನಡ : ಭಟ್ಕಳದ ಅರಣ್ಯ ಪ್ರದೇಶದಲ್ಲಿ ರಾಶಿ ರಾಶಿ ಮೂಳೆ ಪತ್ತೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೊಲೀಸರಿಂದ ಇಬ್ಬರು ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ. ಚೌಥಣಿ ಕಾಲೋನಿಯ ಮಹಮ್ಮದ್ ರಾಯನ್ ಅಲಿಯಾಸ್ ರಿಜ್ವಾನ್ ಮತ್ತು ಭಟ್ಕಳದ ಮಗದುಮ್ ಕಾಲೋನಿಯ ಮೊಹಮ್ಮದ್ ಸಂವನ್ ಎನ್ನುವ ಆರೋಪಿಗಳನ್ನ ಅರೆಸ್ಟ್ ಮಾಡಲಾಗಿದೆ. ಇಬ್ಬರು ಆರೋಪಿಗಳು ಗೋವುಗಳನ್ನು ಕಳ್ಳತನ ಮಾಡಿಕೊಂಡು ಬರುತ್ತಿದ್ದರು ಮಾಂಸ ಬೇರ್ಪಡಿಸಿ ಮಗದುಮ್ ಕಾಲೋನಿಯ ಬಳಿಗಳನ್ನು ಸುರಿಯುತ್ತಿದ್ದರು ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ಬಳಿ ಮಗದುಮ್ ಅರಣ್ಯ ಪ್ರದೇಶದಲ್ಲಿ ಸುರಿಯುತ್ತಿದ್ದರು. ರಾಶಿ ರಾಶಿ ಮೂಳೆಗಳನ್ನು ಕಂಡು ಅರಣ್ಯ ಸಿಬ್ಬಂದಿ ದೂರು ನೀಡಿದ್ದಾರೆ. ರಾಶಿ ರಾಶಿ ಮೂಳೆ ಪತ್ತೆಯ ಬಗ್ಗೆ ಕೇಸ್ ದಾಖಲಿಸಿಕೊಂಡು ತನಿಖೆ ನಡೆಸಿದ್ದು, ಸಿಪಿಐ ದಿವಾಕರ್ ನೇತೃತ್ವದಲ್ಲಿ ತನಿಖೆ ನಡೆಸಿ ಇಬ್ಬರು ಆರೋಪಿಗಳನ್ನ ಬಂಧಿಸಲಾಗಿದೆ.
ಬೆಂಗಳೂರು : ದರ್ಶನ್ ಮತ್ತು ಗ್ಯಾಂಗ್ ಇಂದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಜೈಲಿನಲ್ಲಿ ನಟ ದರ್ಶನ್ ಗೆ ಕನಿಷ್ಠ ಅಗತ್ಯ ಸೌಲಭ್ಯ ಕಲ್ಪಿಸದ ಹಿನ್ನೆಲೆಯಲ್ಲಿ ದರ್ಶನ್ ಪರ ವಕೀಲರು ಹಾಸಿಗೆ, ದಿಂಬು ನೀಡಲು ನಿರ್ದೇಶನ ನೀಡುವಂತೆ ಕೋರ್ಟಿಗೆ ಅರ್ಜಿ ಸಲ್ಲಿಸಿದ್ದರು. ಇದೀಗ ಇಂದು ಬೆಂಗಳೂರಿನ ಸಿಸಿಎಚ್ 57ನೇ ಕೋರ್ಟ್ ನಲ್ಲಿ ದರ್ಶನ್ ಪರ ವಕೀಲರು ಸಲ್ಲಿಸಿದ ಅರ್ಜಿ ವಿಚಾರಣೆ ನಡೆಸಲಾಯಿತು. ಈ ವೇಳೆ CCH 57ನೆ ಕೋರ್ಟ್ ಜಡ್ಜ್ ವಿಚಾರಣೆಯನ್ನು ಸಂಜೆ 4 ಗಂಟೆಗೆ ಮುಂದೂಡಿದರು. ಸಂಜೆ 4 ಗಂಟೆಗೆ ದರ್ಶನಗೆ ಹಾಸಿಗೆ, ದಿಂಬು ನೀಡಲು ಕೋರ್ಟ್ ಆದೇಶಸುತ್ತಾ ಎಂದು ಕಾದು ನೋಡಬೇಕು.
ಬೆಂಗಳೂರು : ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಪ್ರಧಾನಿಯಾದ ಬಳಿಕ ಮಹತ್ವದ ತ್ರಿವಳಿ ತಲಾಖ್ ನಿಷೇಧಗೊಳಿಸಿದ್ದರು. ಆದರೆ ಈ ಒಂದು ತ್ರಿವಳಿ ತಲಾಖ್ ನಿಷೇಧವಿದ್ದರೂ ಇದೀಗ ಬೆಂಗಳೂರಿನಲ್ಲಿ ಪತಿಯೊಬ್ಬ ತನ್ನ ಪತ್ನಿಗೆ ತ್ರಿವಳಿ ತಲಾಕ್ ಹೇಳಿದ್ದಾನೆ. ಚಂದ್ರಲೇಔಟ್ನ ಗಂಗೊಂಡನಹಳ್ಳಿಯ ವ್ಯಕ್ತಿಯೊಬ್ಬ ತನ್ನ ಪತ್ನಿಗೆ ತ್ರಿವಳಿ ತಲಾಖ್ ನೀಡಿರುವ ಘಟನೆ ನಡೆದಿದೆ. ಶಾಬಜ್ ಅಲಿ ಎಂಟು ವರ್ಷದ ಹಿಂದೆ ಯುವತಿಯೊಬ್ಬಳ್ಳನ್ನು ಮದುವೆಯಾಗಿದ್ದ. ಹೆಂಡತಿ ಜೊತೆ ಅನ್ಯೋನ್ಯವಾಗಿ ಬದುಕು ಸಾಗಿಸುತ್ತಿದ್ದ. ಮಕ್ಕಳಾಗಿಲ್ಲ ಅಂತ ಆಗಾಗ ಹೆಂಡತಿಗೆ ಮಾನಸಿಕ ಕಿರುಕುಳ ನೀಡುತ್ತಿದ್ದ. ಐದು ಮಾಂಸದ ಅಂಗಡಿಗಳನ್ನು ಇಟ್ಟುಕೊಂಡು ಶಾಬಜ್ ವ್ಯಾಪಾರ ಮಾಡುತ್ತಿದ್ದ. ‘ಅಂಗಡಿಯನ್ನ ಸ್ವಚ್ಛವಾಗಿ ಇಟ್ಟುಕೊಳ್ಳಿ ಅಂತ ಹೇಳಿದ್ದಕ್ಕೆ ಕೋಪಗೊಂಡು ದ್ವೇಷ ಬೆಳೆಸಿದ್ದಾನೆ’ ಅಂತ ಮಾವ ಆರೋಪಿಸಿದ್ದಾರೆ. ತ್ರಿವಳಿ ತಲಾಖ್ ನಿಷೇಧ ಬಳಿಕವೂ ನನ್ನ ಮಗಳ ಜೀವನ ಹಾಳಾಯ್ತು. ಕಾನೂನು ಹೋರಾಟ ಮುಂದುವರಿಸ್ತೀವಿ ಅಂತ ಸಂತ್ರಸ್ತೆ ತಂದೆ ತಿಳಿಸಿದ್ದಾರೆ. ತ್ರಿವಳಿ ತಲಾಖ್ ನಿಷೇಧ ಬಳಿಕವೂ ವ್ಯಕ್ತಿ ತನ್ನ ಹೆಂಡತಿಗೆ ಫೋನ್ ಮಾಡಿ ಮೂರು ಬಾರಿ ತಲಾಖ್…
ದಕ್ಷಿಣಕನ್ನಡ : ಧರ್ಮಸ್ಥಳ ಪ್ರಕರಣ ದಿನವೊಂದಕ್ಕೆ ಟ್ವಿಸ್ಟ್ ಪಡೆದುಕೊಳ್ಳುತ್ತಿದ್ದು, ಇದೀಗ ಎಸ್ಐಟಿ ಅಧಿಕಾರಿಗಳು ಬಂಗ್ಲೆಗುಡ್ಡದಲ್ಲಿ ಶೋಧ ನಡೆಸಿದ್ದಾರೆ. ಧರ್ಮಸ್ಥಳ ಸಮೀಪದ ಬಂಗ್ಲೆಗುಡ್ಡೆ ಕಾಡಿನಲ್ಲಿ ಸಂಶಯಾಸ್ಪದ ಶವ ಪತ್ತೆ ಪ್ರಕರಣದ ತನಿಖೆ ತೀವ್ರಗೊಂಡಿದೆ. ಎಸ್ಐಟಿ ತಂಡವು ಪಿವಿಸಿ ಪೈಪ್ ಬಳಸಿ ಮಣ್ಣಿನ ಮಾದರಿಗಳನ್ನು ಸಂಗ್ರಹಿಸಿದ್ದು, ಈ ವೇಳೆ ಸಣ್ಣ ಮೂಳೆ ಮತ್ತು ಬಟ್ಟೆಯ ತುಂಡುಗಳು ಪತ್ತೆಯಾಗಿವೆ. ಈ ಮಾದರಿಗಳನ್ನು ಫಾರೆನ್ಸಿಕ್ ಲ್ಯಾಬ್ಗೆ ಕಳುಹಿಸಲಾಗಿದೆ. ಹೌದು ತನಿಖಾಧಿಕಾರಿ ಜಿತೇಂದ್ರ ದಯಾಮಾ ನೇತೃತ್ವದ ತಂಡ ಕಳೆದ ಎರಡು ಗಂಟೆಗಳಿನಿಂದ ಸ್ಥಳದಲ್ಲೇ ಶೋಧ ಕಾರ್ಯ ಮುಂದುವರೆಸಿದ್ದು, ಈ ವೇಳೆ ಭೂಮಿಯ ಮೇಲ್ಭಾಗದಲ್ಲೇ ಕೆಲವು ಸಣ್ಣಪುಟ್ಟ ಮೂಳೆ ತುಂಡುಗಳು ಮತ್ತು ಬಟ್ಟೆಯ ತುಂಡುಗಳು ಪತ್ತೆಯಾಗಿವೆ. ಈ ಭಾಗವೇ ವಿಠಲ ಗೌಡ ಬುರುಡೆ ತೋರಿಸಿದ್ದ ಅನುಮಾನಿತ ಸ್ಥಳವಾಗಿದ್ದು, ಅದರ ಸುತ್ತಮುತ್ತ ಶೋಧ ಕಾರ್ಯ ಕೇಂದ್ರೀಕೃತವಾಗಿದೆ. ಈ ವೇಳೆ ಎಸ್ಐಟಿ ಪಿವಿಸಿ ಪೈಪ್ ಬಳಸಿ ಕಾಡಿನ ವಿವಿಧ ಬಿಂದುಗಳಿಂದ ಮಣ್ಣಿನ ಕೋರ್ ಸ್ಯಾಂಪಲ್ಗಳನ್ನು ತೆಗೆದುಕೊಂಡಿದೆ. ಲೋಹದ ಪೈಪ್ಗಿಂತ ಪಿವಿಸಿ ಪೈಪ್ ಮಣ್ಣಿನಲ್ಲಿನ…
* ಅವಿನಾಶ್ ಆರ್ ಭೀಮಸಂದ್ರ ಜೊತೆಗೆ ವಸಂತ್ ಬಿ ಈಶ್ವರಗೆರೆ ಕಲಬುರಗಿ: ರಾಜ್ಯದಲ್ಲಿ ಬೆಳೆಹಾನಿಯಾಗಿರುವುದಕ್ಕೆ ಪರಿಹಾರ ನೀಡಲು ಅನುಕೂಲವಾಗುವಂತೆ ಕಂದಾಯ ಹಾಗೂ ಕೃಷಿ ಇಲಾಖೆ ಜಂಟಿ ಸಮೀಕ್ಷೆ ನಡೆಸಲು ಸೂಚನೆ ನೀಡಲಾಗಿದ್ದು, ವರದಿ ಬಂದ ನಂತರ ಬೆಳೆಪರಿಹಾರವನ್ನು ರೈತರಿಗೆ ವಿತರಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಕಲಬುರಗಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಇನ್ನೊಂದು ವಾರದಲ್ಲಿ ಸಮೀಕ್ಷಾ ವರದಿ ಸಲ್ಲಿಕೆಯಾಗುವ ನಿರೀಕ್ಷೆಯಿದ್ದು, ನಂತರ ಬೆಳೆಹಾನಿ ಪರಿಹಾರ ವಿತರಿಸಲಾಗುವುದು. ರಾಜ್ಯದಲ್ಲಿ ಒಟ್ಟಾರೆ ಈ ಬಾರಿ ಅದೃಷ್ಟವಶಾತ್ ವಾಡಿಕೆಗಿಂತ ಶೇ.4 ರಷ್ಟು ಮಳೆ ಜಾಸ್ತಿಯಾಗಿದೆ. ಬೀದರ್, ಕಲ್ಬುರ್ಗಿ, ಯಾದಗಿರಿ ಸೇರಿದಂತೆ ಉತ್ತರ ಕರ್ನಾಟಕದ ಹಲವು ಭಾಗಗಳಲ್ಲಿ ಬೆಳೆ ಹಾನಿ ಹೆಚ್ಚು ಸಂಭವಿಸಿದ್ದು, ಬೆಳೆ ಪರಿಹಾರ ವಿತರಿಸಲಾಗುವುದು. 2024-25 ನೇ ಸಾಲಿನಲ್ಲಿ 656 ಕೋಟಿ ರೂ. ಬೆಳೆವಿಮೆ ಪಾವತಿಯಾಗಿದೆ. ಬೆಳೆವಿಮೆ ಮಾಡಿಕೊಳ್ಳದ ರೈತರಿಗೆ ಪರಿಹಾರ ನೀಡುವ ಬಗ್ಗೆ ಪರಿಶೀಲಿಸಿ ತೀರ್ಮಾನಿಸಲಾಗುವುದು ಹಾಗೂ ರೈತರ ಬೇಡಿಕೆಯಂತೆ ಸಾಲಮನ್ನಾ ಮಾಡುವ ಬಗ್ಗೆ ಪರೀಶೀಲಿಸಲಾಗುವುದು ಎಂದರು. ಬ್ಯಾಂಕ್ ದರೋಡೆ-ಮುಂಜಾಗ್ರತಾ ಕ್ರಮಕ್ಕಾಗಿ…