Subscribe to Updates
Get the latest creative news from FooBar about art, design and business.
Author: kannadanewsnow07
ಮುಂಬೈ: ಚೆನ್ನೈನಿಂದ 172 ಪ್ರಯಾಣಿಕರು ಮತ್ತು ಸಿಬ್ಬಂದಿಯನ್ನು ಹೊತ್ತ ಇಂಡಿಗೊ ವಿಮಾನಕ್ಕೆ ಬಾಂಬ್ ಬೆದರಿಕೆ ಬಂದ ಹಿನ್ನೆಲೆಯಲ್ಲಿ ಶನಿವಾರ ಮುಂಬೈನಲ್ಲಿ ತುರ್ತು ಭೂಸ್ಪರ್ಶ ಮಾಡಲಾಗಿದೆ. ಒಂದು ವಾರದ ಅವಧಿಯಲ್ಲಿ ಇಂಡಿಗೊ ವಿಮಾನಕ್ಕೆ ಬಾಂಬ್ ಬೆದರಿಕೆ ಹಾಕಿದ ಎರಡನೇ ಪ್ರಕರಣ ಇದಾಗಿದೆ. ಮೇ 28ರಂದು ದೆಹಲಿಯಿಂದ ವಾರಣಾಸಿಗೆ ತೆರಳುತ್ತಿದ್ದ ವಿಮಾನದಲ್ಲಿ ಈ ಘಟನೆ ನಡೆದಿತ್ತು. 6ಇ-5314 ವಿಮಾನವು ಬೆಳಿಗ್ಗೆ 8.45ಕ್ಕೆ ಮುಂಬೈನಲ್ಲಿ ಸುರಕ್ಷಿತವಾಗಿ ಇಳಿಯಿತು ಎಂದು ಮೂಲಗಳು ತಿಳಿಸಿವೆ.
ಜಾಯಿಕಾಯಿ ಅಷ್ಟೈಶ್ವರ್ಯದ ಧನ ಸಂಪತ್ತು ಆಕರ್ಷಣೆಗೆ ಪರಿಹಾರವಾಗಿದೆ ಕಷ್ಟಪಟ್ಟು ದುಡಿಯುವುದು ಹಣ ಸಂಪಾದಿಸುವುದು. ನಾವು ಎಷ್ಟೇ ಹಣ ಸಂಪಾದಿಸಿದರೂ ಅದನ್ನು ಉಳಿಸಿಕೊಳ್ಳಲು ಸಾಧ್ಯವಾಗದಿದ್ದರೆ ನಮ್ಮ ಶ್ರಮ ವ್ಯರ್ಥವಾಗುತ್ತದೆ ಅಲ್ಲವೇ? ಹೆಚ್ಚು ಹಣ ಕೂಡಿಡಲು ಅಷ್ಟೈಶ್ವರ್ಯದ ಧನ ಸಂಪತ್ತು ಆಕರ್ಷಣ ಎನ್ನುತ್ತಾರೆ. ಈ ಸ್ವಯಂ-ಆಕರ್ಷಣೆಗೆ ಸಹಾಯ ಮಾಡುವ ಕೆಲವು ಪದಾರ್ಥಗಳಿವೆ. ಆ ಪದಾರ್ಥಗಳಲ್ಲಿ ಜಾಯಿಕಾಯಿ ಕೂಡ ಒಂದು. ಈ ಆಧ್ಯಾತ್ಮಿಕ ಪೋಸ್ಟ್‌ನಲ್ಲಿ, ನಾವು ಅಡಿಕೆಯೊಂದಿಗೆ ತಪಸ್ಸು ಮಾಡಿದರೆ, ನಮಗೆ ಆಕರ್ಷಣೆ ಮತ್ತು ಹಣವು ಹೆಚ್ಚಾಗುತ್ತದೆ ಎಂದು ನಾವು ನೋಡಲಿದ್ದೇವೆ . ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ,ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ನಕ್ಷತ್ರಿ ತಂತ್ರಿ,ನಂ:- 9686268564. ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ,…
ಬೆಂಗಳೂರು: ವಾಲ್ಮೀಕಿ ನಿಗಮ ಪ್ರಕರಣದಲ್ಲಿ ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ. ತನಿಖೆಯಲ್ಲಿ ತಪ್ಪಿತಸ್ಥರು ಎಂದು ಗೊತ್ತಾದರೆ ಎಲ್ಲರ ವಿರುದ್ದವೂ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಸ್ಪಷ್ಟಪಡಿಸಿದರು. ಸಿಟಿ ಸಿವಿಲ್ ಕೋರ್ಟ್ ಆವರಣದಲ್ಲಿ ಮಾಧ್ಯಮಗಳ ಪ್ರಶ್ನೆಗೆ ಈ ಪ್ರತಿಕ್ರಿಯೆ ನೀಡಿದರು. ವಾಲ್ಮೀಕಿ ನಿಗಮದ ಪ್ರಕರಣಕ್ಕೆ ಸಂಬಂಧಪಟ್ಟಂತೆ SIT ರಚಿಸಲಾಗಿದ್ದು ತನಿಖೆ ಚುರುಕಾಗಿ ನಡೆಯುತ್ತಿದೆ. ತಪ್ಪಿತಸ್ಥರನ್ನು ರಕ್ಷಿಸುವ ಪ್ರಶ್ನೆಯೇ ಇಲ್ಲ ಎಂದರು. ನಾವು ಕಾನೂನು ಪಾಲಕರು: ಬಿಜೆಪಿ ಯವರು ದಾಖಲಿಸಿದ್ದ ಖಾಸಗಿ ದೂರಿನ ಸಂಬಂಧ ನ್ಯಾಯಾಲಯಕ್ಕೆ ಹಾಜರಾಗಿದ್ದ ಮುಖ್ಯಮಂತ್ರಿಗಳು ಈ ಬಗ್ಗೆ ಪ್ರತಿಕ್ರಿಯಿಸಿ ಸಿವಿಲ್ ಸ್ವರೂಪದ ಪ್ರಕರಣ ಇದಾಗಿದೆ. ಕಾನೂನು ರಕ್ಷಕರಾಗಿ, ಪಾಲಕರಾಗಿ ನ್ಯಾಯಾಲಯದ ಸೂಚನೆ ಮೇರೆಗೆ ಇಂದು ನಾನು ನ್ಯಾಯಾಧೀಶರ ಮುಂದೆ ಹಾಜರಾಗಿದ್ದೇನೆ. ಜಾಮೀನು ಪಡೆದಿದ್ದೇನೆ ಎಂದರು. ನನ್ನನ್ನು, ಕೆಪಿಸಿಸಿ ಅಧ್ಯಕ್ಷರು ಹಾಗೂ ರಾಹುಲ್ ಗಾಂಧಿ ಅವರ ವಿರುದ್ಧವೂ ಖಾಸಗಿ ದೂರು ದಾಖಲಾಗಿತ್ತು. ರಾಹುಲ್ ಗಾಂಧಿಯವರೂ ನ್ಯಾಯಾಲಯಕ್ಕೆ ಹಾಜರಾಗುತ್ತಾರೆ ಎಂದರು. ಡಿಸಿಎಂ ಡಿ.ಕೆ.ಶಿವಕುಮಾರ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಉಪಸ್ಥಿತರಿದ್ದರು.
ಬೆಂಗಳೂರು: ಜೂನ್ ಮೊದಲ ವಾರದಲ್ಲಿ ಕರ್ನಾಟಕದಲ್ಲಿ ವಿಧಾನ ಪರಿಷತ್ತು ಚುನಾವಣೆ ಹಾಗೂ ಲೋಕಸಭಾ ಚುನಾವಣೆ ಫಲಿತಾಂಶ ಹಿನ್ನೆಲೆ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಈ ನಡುವೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಬರೋಬ್ಬರಿ 5 ದಿನ ಮದ್ಯ ಮಾರಾಟ ಸಂಪೂರ್ಣ ನಿಷೇಧವಿರಲಿದೆ. ಜೂನ್ 1 ರಿಂದ 6 ನಡುವೆ ಜೂನ್ 5 ರಂದು ಮಾತ್ರ ಎಂದಿನಂತೆ ಮದ್ಯ ಮಾರಾಟ ನಡೆಯಲಿದೆ. ಜೂನ್ 3 ರಂದು ರಾಜ್ಯದಲ್ಲಿ ಶಿಕ್ಷಕರು ಹಾಗೂ ಪದವೀಧರ ಕ್ಷೇತ್ರಗಳ ವಿಧಾನಪರಿಷತ್ತು ಚುನಾವಣೆ ನಡೆಯುತ್ತಿದೆ. ಈ ಹಿನ್ನೆಲೆ ಆಯಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ 48 ಗಂಟೆಗಳ ಮುನ್ನ ಮದ್ಯ ಮಾರಾಟವನ್ನು ನಿಷೇಧಿಸಲಾಗಿದೆ. ಹೀಗಾಗಿ, ಜೂನ್ 1 ರಂದು ಸಂಜೆ 4 ಗಂಟೆಯಿಂದ ಮದ್ಯ ಮಾರಾಟ ಬಂದ್ ಆಗಲಿದೆ. ಲೋಕಸಭಾ ಚುನಾವಣೆ 2024 ಮತ ಎಣಿಕೆ ಜೂನ್ 4 ರಂದು ನಡೆಯಲಿದೆ. ಈ ನಿಷೇಧ ಮುಗಿಯುತ್ತಿದ್ದಂತೆ ಜೂನ್ 3 ಮಧ್ಯ ರಾತ್ರಿ 12 ಗಂಟೆಯಿಂದ ನಿಷೇಧಾಜ್ಞೆ ಜಾರಿಯಾಗಿ ಜೂನ್ 4 ರಾತ್ರಿ 12 ಗಂಟೆಯವರೆಗೂ ಮದ್ಯ…
ಬೆಂಗಳೂರು: ವಿಧಾನಸಭೆ ಚುನಾವಣೆಯ ವೇಳೆ ಬಿಜೆಪಿ ವಿರುದ್ಧದ ಆರೋಪ ಮಾಡಿದ್ದ ಬಗ್ಗೆ ದಾಖಲಾದ ಪ್ರಕರಣ ಸಂಬಂಧ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ ಶಿವಕುಮಾರ್ ಅವರು ನ್ಯಾಯಾಲಯದಲ್ಲಿ ಹಾಜರಾದರು. ಈ ವೇಳೇ ನ್ಯಾಯಾಲಯವು ಇಬ್ಬರಿಗೂ ಕೂಡ ಜಾಮೀನು ನೀಡಿದೆ. ಬಾಂಡ್‌ಗೆ ಸಹಿ ಮಾಡಿದ ಬಳಿಕ ಇಬ್ಬರೂ ಕೂಡ ನ್ಯಾಯಾಲಯದಿಂದ ವಾಪಸ್ಸಾಗಿದ್ದಾರೆ. ಬಿಜೆಪಿ ಹೂಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸಮನ್ಸ್ ಜಾರಿ ಮಾಡಿತ್ತು. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳು ನ್ಯಾಯಾಲಯಕ್ಕೆ ಹಾಜರಾದರು.
ಬೆಂಗಳೂರು: ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಹಳೆ ವಿದ್ಯಾರ್ಥಿಗಳ ಸಂಘ ಸ್ಥಾಪಿಸುವ ಹಾಗೂ ವಾಟ್ಸಾಪ್ ಗ್ರೂಪ್ ರಚಿಸುವ ಬಗ್ಗೆ ಆದೇಶವನ್ನು ಹೊರಡಿಸಲಾಗಿದೆ. ಆದೇಶದಲ್ಲಿ ಉಲ್ಲೇಖ ಮಾಡಿರುವಂತೆ ಸದರಿ ಕಛೇರಿಯ ಆದೇಶ ಸಂಖ್ಯೆ ಪಿ.ಆರ್.ಓ/ನ.ಶಾ.ನ.ಕೋ/ಸ್ಥಾ.ಬ/01/2021-22 :20/01/2024ಮೇಲಿನ ವಿಷಯ ಹಾಗೂ ಉಲ್ಲೇಖಕ್ಕನುಗುಣವಾಗಿ ಸರ್ಕಾರದ ಎಲ್ಲಾ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಹಳೆ ವಿದ್ಯಾರ್ಥಿಗಳ ಸಂಘ ಸ್ಥಾಪಿಸಲು ಹಾಗೂ ಅದಕ್ಕೆ ಸಂಬಂಧಿಸಿದಂತೆ ವಾಟ್ಸ್ ಆಪ್ ಗ್ರೂಪ್ ಮಾಡಿ ಹಳೆಯ ವಿದ್ಯಾರ್ಥಿಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಸದಸ್ಯರನ್ನಾಗಿ ಮಾಡಿಕೊಳ್ಳಲು ತಿಳಿಸಲಾಗಿತ್ತು. ಈಗಾಗಲೇ 25007 ಶಾಲೆಗಳು ವಿದ್ಯಾರ್ಥಿಗಳ ಸಂಘ ಸ್ಥಾಪಿಸಿಕೊಂಡಿದ್ದು, ಅವುಗಳಲ್ಲಿ 15,170 ಶಾಲೆಗಳು ವಾಟ್ಸ್ ಆಪ್ ಗ್ರೂಪನ್ನು ರಚಿಸಿಕೊಂಡಿರುತ್ತವೆ. ಜಿಲ್ಲಾವಾರು ಮಾಹಿತಿಯನ್ನು ಲಗತ್ತಿಸಿದೆ. ಈಗಾಗಲೇ ಹಳೆ ವಿದ್ಯಾರ್ಥಿಗಳ ಸಂಘ ಸ್ಥಾಪಿಸಿರುವ ಎಲ್ಲಾ ಶಾಲೆಗಳು ಕೂಡಲೇ ವಾಟ್ಸ್ ಆಪ್ ಗ್ರೂಪ್ ರಚಿಸಿಕೊಂಡು ಸದಸ್ಯರ ಸಂಖ್ಯೆ ಹೆಚ್ಚಿಸುವುದು ಹಾಗೂ ಇಲ್ಲಿಯವರೆಗೆ ಸಂಘ ರಚಿಸಿಕೊಳ್ಳದೇ ಇರುವ ಪ್ರಾಥಮಿಕ ಮತ್ತು ಪ್ರೌಢಶಾಲೆಗಳು 30/05/2024 ರಿಂದ ಒಂದುವಾರದೊಳಗೆ ಕಡ್ಡಾಯವಾಗಿ ಹಳೆ ವಿದ್ಯಾರ್ಥಿ ಸಂಘ ಸ್ಥಾಪಿಸಿ ವಾಟ್ಸ್ ಆಪ್ ಗ್ರೂಪ್…
ಬೆಂಗಳೂರು: ಬೆಂಗಳೂರು: ಎಸ್ಐಟಿ ಬಂಧಿಸಲ್ಪಟ್ಟಿದ್ದಂತ ಪ್ರಜ್ವಲ್ ರೇವಣ್ಣಗೆ ಕೋರ್ಟ್ ಎಸ್ಐಟಿ ವಶಕ್ಕೆ ನೀಡಿ ಆದೇಶಿಸಿತ್ತು. ಪುತ್ರನ ಬೆನ್ನಲ್ಲೇ ಅಣ್ಣನಿಗೂ ಕೋರ್ಟ್ ಶಾಕ್ ನೀಡಿದೆ. ಅದೇ ಮಹಿಳೆ ಅಪಹರಣ ಕೇಸಲ್ಲಿ ಭವಾನಿ ರೇವಣ್ಣ ಸಲ್ಲಿಸಿದ್ದಂತ ನಿರೀಕ್ಷಣಾ ಜಾಮೀನು ಅರ್ಜಿಯನ್ನು ವಜಾಗೊಳಿಸಿದೆ. ಹೀಗಾಗಿ ಭವಾನಿ ರೇವಣ್ಣ ಅವರನ್ನು ಬಂಧನ ಸಾಧ್ಯತೆ ಇದೆ. ನ್ಯಾಯಾಲಯವು ಅಂಥ ಹೇಳಿದೆ. ನಿರೀಕ್ಷಣಾ ಜಾಮೀನು ಕೋರಿದ್ದ ಭವಾನಿ ರೇವಣ್ಣ (Bhavani Revanna ) ಅರ್ಜಿಯ ಆದೇಶವನ್ನು ಕೋರ್ಟ್ ಕಾಯ್ದಿರಿಸಿದ್ದು ತೀರ್ಪನ್ನು ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯ (Court) ಮೆ 31 ಕ್ಕೆ ಅಂದರೆ ಇಂದು ಮುಂದೂಡಿತು. ಕೆ.ಆರ್. ನಗರ ಸಂತ್ರಸ್ತ ಮಹಿಳೆ ಅಪಹರಣ ಪ್ರಕರಣದಲ್ಲಿ ಭವಾನಿ ರೇವಣ್ಣ (Bhavani Revanna) ಅವರಿಗೆ ವಿಚಾರಣೆಗೆ ಹಾಜರಾಗುವಂತೆ ಎಸ್‌ಐಟಿ ಮತ್ತೊಂದು ನೋಟಿಸ್ ನೀಡಿತ್ತು. ‘ಶಾಸಕರು– ಸಂಸದರ ವಿರುದ್ಧದ ಕ್ರಿಮಿನಲ್ (Criminal) ಪ್ರಕರಣಗಳ ವಿಚಾರಣೆ’ಯ ವಿಶೇಷ ನ್ಯಾಯಾಲಯದ (Court) (ಸಿಸಿಎಚ್–82) ನ್ಯಾಯಾಧೀಶ ಸಂತೋಷ ಗಜಾನನ ಭಟ್ ಅವರು ಈ ಆದೇಶವನ್ನು ನೀಡಿದ್ದಾರೆ. ಭವಾನಿ ರೇವಣ್ಣ ಪರ…
*ಅವಿನಾಶ್ ಆರ್ ಭೀಮಸಂದ್ರ ಬೆಂಗಳೂರು: ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಎದುರಿಸುತ್ತಿರುವ ಜೆಡಿಎಸ್ ಮುಖಂಡ, ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ಅವರನ್ನು ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಕೂಡಲೇ ಬಂಧಿಸಲಾಗಿದೆ (arrested). ಹಾಸನದ 33 ವರ್ಷದ ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ಅವರನ್ನು ಅವರ ವಿರುದ್ಧದ ಆರೋಪಗಳ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್ಐಟಿ) ವಿಮಾನ ನಿಲ್ದಾಣದಿಂದ ವಶಕ್ಕೆ ತೆಗೆದುಕೊಂಡಿದೆ. ದೇಶವನ್ನು ತೊರೆದ ಸುಮಾರು ಒಂದು ತಿಂಗಳ ನಂತರ ಅವರು ಗುರುವಾರ ಮಧ್ಯರಾತ್ರಿ ಜರ್ಮನಿಯಿಂದ ಭಾರತಕ್ಕೆ ಮರಳಿದರು. ಕೋರ್ಟ್‌ನಲ್ಲಿ ವಾದ-ಪ್ರತಿ ವಿವಾದ ಆಗಿದ್ದೇನು? ಈ ನಡುವೆ ಪ್ರಜ್ವಲ್ ರೇವಣ್ಣ (Prajwal Revanna) ಅವರನ್ನು ಕೆಲ ನಿಮಿಷಗಳ ಹಿಂದೆ, ಬೆಂಗಳೂರಿನ 42 ನೇ ಎಸಿಸಿಎಂಎಂ ನ್ಯಾಯಾಲಯದ ನ್ಯಾಯಾಧೀಶರಾದ ಕೆ.ಎನ್ ಶಿವಕುಮಾರ್ ಅವರ ಮುಂದೆ ಹಾಜರು ಪಡಿಸಿದರು, ಈ ವೇಳೆ ಎಸ್‌ಐಟಿ (SIT) ಪರ ಎಸ್‌ಪಿಪಿ ಅಶೋಕ್ ನಾಯಕ್ ಅವರು ವಾದ ಮಂಡನೆ ಮಾಡಿದರು. …
ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಕರ್ನಾಟಕ ವಿಧಾನ ಪರಿಷತ್ತಿಗೆ ನೈರುತ್ಯ ಪದವೀಧರರ ಕ್ಷೇತ್ರ ಹಾಗೂ ನೈರುತ್ಯ ಶಿಕ್ಷಕರ ಕ್ಷೇತ್ರಗಳಿಂದ ನಡೆಯುವ ದ್ವೈವಾರ್ಷಿಕ ಚುನಾವಣೆ-2024ಕ್ಕೆ ಸಂಬಂಧಿಸಿದಂತೆ, ಜೂನ್, 03 ರಂದು ಬೆಳಗ್ಗೆ 8 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಮತದಾನ ನಡೆಯಲಿದೆ. ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಿರುವ ಮತದಾರರು ಕಡ್ಡಾಯವಾಗಿ ಮತದಾನ ಮಾಡುವಂತೆ ಕೋರಿದೆ. ಮತಕ್ಷೇತ್ರಗಳಲ್ಲಿನ ಸರ್ಕಾರಿ ಹಾಗೂ ಖಾಸಗಿ ಶಾಲಾ ಕಾಲೇಜುಗಳು, ಅನುದಾನಿತ ಹಾಗೂ ಅನುದಾನ ರಹಿತ ವಿದ್ಯಾ ಸಂಸ್ಥೆಗಳು, ಎಲ್ಲಾ ಶೈಕ್ಷಣಿಕ ಸಂಸ್ಥೆಗಳು, ರಾಜ್ಯ ಹಾಗೂ ಕೇಂದ್ರ ಸರ್ಕಾರದ ಕಚೇರಿಗಳು, ರಾಷ್ಟ್ರೀಕೃತ ಹಾಗೂ ಇತರ ಬ್ಯಾಂಕುಗಳು, ಕೇಂದ್ರ ಹಾಗೂ ರಾಜ್ಯ ಸರ್ಕಾರದ ಕಾರ್ಖಾನೆಗಳು, ಉಳಿದ ಕೈಗಾರಿಕೆ ಸಂಸ್ಥೆಗಳು ಹಾಗೂ ಸಹಕಾರ ರಂಗದ ಸಂಘ ಸಂಸ್ಥೆಗಳಲ್ಲಿ ಎಲ್ಲಾ ವ್ಯವಹಾರಿಕ ಸಂಸ್ಥೆಗಳಲ್ಲಿ ಔದ್ಯಮಿಕ ಸಂಸ್ಥೆಗಳಲ್ಲಿ ಮತ್ತು ಇತರ ಎಸ್ಟಾಬ್ಲಿಸ್‍ಮೆಂಟ್ ಗಳಲ್ಲಿ ಖಾಯಂ ಆಗಿ ಅಥವಾ ದಿನಗೂಲಿ ಮೇಲೆ ಕೆಲಸ ನಿರ್ವಹಿಸುವ ಪದವೀಧರರು ಹಾಗೂ ಶಿಕ್ಷಕರು ಮತದಾನ ಮಾಡಲು ಅನುಕೂಲವಾಗುವಂತೆ ಅಂತಹ ಅರ್ಹ ಮತದಾರರಿಗೆ…
ಕರ್ನಾಟಕ ರಾಜ್ಯ ಸರ್ಕಾರದಿಂದ ಮಾನ್ಯತೆ ಪಡೆದಿರುವ ಶ್ರೀ ಶಿವಕುಮಾರ ರಂಗಪ್ರಯೋಗ ಶಾಲೆಯು 2024-25ನೇ ಸಾಲಿನ ರಂಗ ಶಿಕ್ಷಣಕ್ಕೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಪ್ರವೇಶಕ್ಕೆ ಕನಿಷ್ಠ ವಿದ್ಯಾರ್ಹತೆ ಎಸ್‍ಎಸ್‍ಎಲ್‍ಸಿ ಉತ್ತೀರ್ಣರಾಗಿರಬೇಕು. ಪದವೀಧರರಿಗೆ ಆದ್ಯತೆ ಇದೆ. ರಂಗಭೂಮಿಯಲ್ಲಿ ಆಸಕ್ತಿ ಇದ್ದು, ಸ್ವಲ್ಪಮಟ್ಟಿನ ಅನುಭವ ಇರಬೇಕಾದ್ದು ಅಗತ್ಯ. ವಿದ್ಯಾರ್ಥಿ ವಿದ್ಯಾರ್ಥಿನಿಯರಿಗೆ ಊಟ-ವಸತಿ ವ್ಯವಸ್ಥೆ ದೊರೆಯುತ್ತದೆ. ಕರ್ನಾಟಕ ಹಾಗೂ ಭಾರತದ ರಂಗ ತಜ್ಞರಿಂದ ಮತ್ತು ಅತಿಥಿ ಉಪನ್ಯಾಸಕರಿಂದ ತರಗತಿಗಳು ನಡೆಯುತ್ತವೆ. ಗ್ರಂಥಭಂಡಾರ ಹಾಗೂ ದೃಶ್ಯ ಶ್ರವ್ಯ ಪರಿಕರಗಳ ಅನುಕೂಲತೆ ಇದೆ. ರಂಗಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಭಾರತೀಯ ರಂಗಭೂಮಿ, ಕನ್ನಡ ಮತ್ತು ನಾಟಕ ಸಾಹಿತ್ಯ ಪರಂಪರೆ, ಪಾಶ್ಚಾತ್ಯ ರಂಗಭೂಮಿ, ಅಭಿನಯ, ಆಹಾರ್ಯ, ಶಿಕ್ಷಣದಲ್ಲಿ ರಂಗಭೂಮಿ, ಕುರಿತಾದ ಸೈದ್ಧಾಂತಿಕ ಮತ್ತು ಪ್ರಾಯೋಗಿಕ ತರಗತಿಗಳು ನಡೆಯುತ್ತದೆ. ಪ್ರಾಚಾರ್ಯರು, ಶ್ರೀ ಶಿವಕುಮಾರ ರಂಗಪ್ರಯೋಗ ಶಾಲೆ, ಸಾಣೇಹಳ್ಳಿ-577-515, ಹೊಸದುರ್ಗ ತಾಲ್ಲೂಕು, ಚಿತ್ರದುರ್ಗ ಜಿಲ್ಲೆ ಈ ವಿಳಾಸಕ್ಕೆ ಬರೆದು ಪ್ರವೇಶ ಅರ್ಜಿ ತರಿಸಿಕೊಳ್ಳಬಹುದು ಅಥವಾ ರಂಗ ಶಾಲೆಯ ವೆಬ್‍ಸೈಟ್ www.theatreschoolsanehalli.org ನಲ್ಲಿ ಪ್ರವೇಶ ಅರ್ಜಿ ಡೌನ್‍ಲೋಡ್ ಮಾಡಿ…











