Author: kannadanewsnow07

ಬೆಂಗಳೂರು: ನಿನಗೋಸ್ಕರ ಸಿನಿಮಾ ಡಬ್‌ ಮಾಡಲು ನಟ ದರ್ಶನ್ ಹಿಂದೇಟು ಹಾಕಿದ್ದ ಈ ಬಗ್ಗೆ ಅಂಬರೀಶ್‌ ಅವರಿಗೆ ದೂರು ನೀಡಿದ ಬಳಿಕ ಅವರು ಕರದು ಬುದ್ದಿ ಹೇಳಿದ್ದರು, ಅದರು ಅವರ ಹಲವು ದಿನಗಳ ನಂತರದ ಭೇಟಿಯಾಗಿತ್ತು ಆದಾದ ಬಳಿಕ ಎಲ್ಲವೂ ಸರಿ ಆಯ್ತು ಅಂಥ ನಿರ್ಮಾಪಕ ಬಾ.ಮಾ ಹರೀಶ್‌ ಅವರು ಹೇಳಿದ್ದಾರೆ. ಅವರು ಮಾಧ್ಯಮಗಳ ಜೊತೆಗೆ ಮಾತನಾಡುತ್ತ ಈ ಬಗ್ಗೆ ತಿಳಿಸಿದ್ದು, ಇದೇ ವೇಳೆ ಅವರು ಮಾತನಾಡಿ ಕರಿಯ ಸಿನಿಮಾದ ವೇಳೇ ರೀಲ್ಸ್‌ ವೇಳೇ ನಟ ದರ್ಶನ್ ಕಿರಿಕ್‌ ಮಾಡಿಕೊಂಡಿದ್ರು

Read More

ನವದೆಹಲಿ: ಆಹಾರ ಭದ್ರತೆಯ ವಿಷಯದಲ್ಲಿ ಭಾರತವು ವಿಶ್ವದ 8 ನೇ ಕೆಟ್ಟ ದೇಶವಾಗಿದೆ. ಅಫ್ಘಾನಿಸ್ತಾನದ ನಂತರ, ದಕ್ಷಿಣ ಏಷ್ಯಾದ ಅತ್ಯಂತ ಕೆಟ್ಟ ಪರಿಸ್ಥಿತಿ ಭಾರತದಲ್ಲಿದೆ. ಯುನಿಸೆಫ್ ನ ಇತ್ತೀಚಿನ ವರದಿಯಲ್ಲಿ ಇದು ಬಹಿರಂಗವಾಗಿದೆ. ಯುನಿಸೆಫ್ 2024 ರ ಮಕ್ಕಳ ಪೌಷ್ಠಿಕಾಂಶ ವರದಿ, ‘ಮಕ್ಕಳ ಆಹಾರ ಬಡತನ: ಆರಂಭಿಕ ಬಾಲ್ಯದಲ್ಲಿ ಪೌಷ್ಠಿಕಾಂಶದ ಕೊರತೆ’ ವರದಿಯು 2018-2022 ರ ವೇಳೆಗೆ 65% ಮಕ್ಕಳು ಅಗತ್ಯವಾದ ಪೌಷ್ಠಿಕಾಂಶದ ಆಹಾರವನ್ನು ಪಡೆಯದ 20 ದೇಶಗಳಲ್ಲಿ ಭಾರತವೂ ಒಂದಾಗಿದೆ ಎಂದು ತೋರಿಸಿದೆ. ವಿಶ್ವದ ಪ್ರತಿ ನಾಲ್ಕನೇ ಮಗು ಹಸಿವಿನಿಂದ ಅಳುತ್ತಿದೆ. ಯುನಿಸೆಫ್ ವರದಿ ಏನು ಹೇಳುತ್ತದೆ ಮತ್ತು ಭಾರತದಲ್ಲಿ ಮಕ್ಕಳ ಪರಿಸ್ಥಿತಿ ಎಷ್ಟು ಗಂಭೀರವಾಗಿದೆ ಎನ್ನುವುದನ್ನು ನೋಡುವುದಾದ್ರೆ ಆದರ ವಿವರ ಈ ಕೆಳಕಂಡತಿದೆ. ಯುನಿಸೆಫ್ ಅಂಕಿಅಂಶಗಳ ಪ್ರಕಾರ, ಭಾರತದಲ್ಲಿ ಮಕ್ಕಳ ಬಡತನವು ಸಾರ್ವಕಾಲಿಕ ಗರಿಷ್ಠ ಶೇಕಡಾ 40 ರಷ್ಟಿದೆ. ಸೊಮಾಲಿಯಾ (63%), ಗಿನಿಯಾ (54%), ಗಿನಿಯಾ-ಬಿಸ್ಸಾವ್ (53%), ಅಫ್ಘಾನಿಸ್ತಾನ (49%), ಸಿಯೆರಾ ಲಿಯೋನ್ (47%), ಇಥಿಯೋಪಿಯಾ (46%) ಮತ್ತು…

Read More

ಬೆಂಗಳೂರು: ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ಕೊನೆಗೂ ಪತ್ತೆಯಾಗಿದ್ದ ಎನ್ನಲಾಗಿದೆ. ಸದ್ಯ ಆತ ಗೋವಾದಲ್ಲಿ ತಲೆ ಮರೆಸಿಕೊಂಡಿದ್ದಾನೆ ಎನ್ನಲಾಗಿದೆ. ಬೆಂಗಳೂರು: 2018ರಲ್ಲಿ ಹಣದ ವಂಚನೆ ಪ್ರಕಣದಲ್ಲಿ ದರ್ಶನ್‌ ಬಳಿಕ ಕೆಲಸದ ಮಾಡುತ್ತಿದ್ದ ಮಲ್ಲಿಕಾರ್ಜುನ್‌ 7 ವರ್ಷಗಳಿಂದ ನಾಪತ್ತೆಯಾಗಿದ್ದು, ಈಗ ಆತ ಜೀವಂತವಾಗಿ ಇರುವ ಬಗ್ಗೆಯೇ ಅನುಮಾನ ಮೂಡಿಸಿತ್ತು. ಪ್ರೇಮ ಬರಹ ಸಿನಿಮಾದ ವಿರತಣಾ ಜವಾಬ್ದಾರಿಯನ್ನು ತೂಗುದೀಪಾ ಪ್ರೊಡಕ್ಷನ್ಸ್​ಗೆ ನೀಡಲಾಗಿತ್ತು. ಅದರ ಸಂ ಪೂರ್ಣ ಜವಾಬ್ದಾರಿ ವಹಿಸಿಕೊಂಡಿದ್ದು ಮಲ್ಲಿಕಾರ್ಜುನ್​ ಅವರೇ. ಸಿನಿಮಾ ಹಕ್ಕು ವಿತರಿಸಿ, ಹಣ ಬಂದ ನಂತರ ಮಲ್ಲಿಕಾರ್ಜುನ್​ ಹಣ ತೆಗೆದುಕೊಂಡು ಪರಾರಿಯಾಗಿದ್ದ. ಸುಮಾರು 7 ವರ್ಷಗಳ ಹಿಂದಿನ ನಾಪತ್ತೆಯಾಗಿದ್ದ ಮಲ್ಲಿಕಾರ್ಜುನ್ ಇದೂವರೆಗೂ ದರ್ಶನ್ ಕೈಗೆ ಸಿಕ್ಕಿರಲಿಲ್ಲ. ಈ ನಡುವೆ ಮಲ್ಲಿಕಾರ್ಜುನ್‌ ಪತ್ತೆ ಮಾಧ್ಯಮಗಳ ಜೊತೆಗೆ ಮಾತನಾಡಿದ್ದು, ದರ್ಶನ್‌ ರಿಂದ ನಮಗೆ ಯಾವುದೇ ತೊಂದರೆಯಾಗಿಲ್ಲ, ನಮಗೆ ಅವರಿಂದ ಒಂದು ಹೊತ್ತಿನ ಊಟ ಸಿಕ್ಕಿದೆ. ದಯವಿಟ್ಟು ನಮ್ಮ ಮನೆ ಬಳಿಗೆ ಯಾರು ಬರಬೇಡಿ ಅಂತ ಹೇಳಿದ್ದಾರೆ.ಇನ್ನೂ ಪತ್ರವನ್ನು ಬರೆದಿಟ್ಟು ಮಲ್ಲಿಕಾರ್ಜುನ್ ನಾಪತ್ತೆಯಾಗಿದ್ದರು, ಅದರಲ್ಲಿ…

Read More

ಬೆಂಗಳೂರು: ಎಲ್ಲರಲ್ಲೂ ಮನುಷ್ಯತ್ವ ಬೆಳೆಯಲಿ. ಸಹಿಷ್ಣುತೆ, ಪ್ರೀತಿ ವಿಶ್ವಾಸ ಬೆಳೆಯಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು ಅವರು ಇಂದು ಬಕ್ರೀದ್ ಹಬ್ಬದ ಅಂಗವಾಗಿ ಚಾಮರಾಜಪೇಟೆಯಲ್ಲಿ ಇಂದು ನಡೆದ ಸಾಮೂಹಿಕ ಪ್ರಾರ್ಥನೆಯಲ್ಲಿ ಪಾಲ್ಗೊಂಡು ಮಾತನಾಡಿದರು. ಈ ಸಂದರ್ಭದಲ್ಲಿ ಎಲ್ಲಾ ಮುಸಲ್ಮಾನ ಬಾಂಧವರಿಗೆ ಬಕ್ರೀದ್ ಶುಭಾಶಯಗಳನ್ನು ತಿಳಿಸಿದ ಮುಖ್ಯಮಂತ್ರಿಗಳು, ಎಲ್ಲರೂ ಇಂದು ಭಕ್ತಿಯಿಂದ ಪ್ರಾರ್ಥನೆಯಲ್ಲಿ ಭಾಗವಹಿಸಿ ಮನುಕುಲಕ್ಕೆ ಒಳಿತಾಗಲಿ ಎಂದು ಪ್ರಾರ್ಥಿಸಿದ್ದೀರಿ. ಎಲ್ಲರೂ ಸಾಮೂಹಿಕ ಪ್ರಾರ್ಥನೆ ಮಾಡಿದ್ದು, ಸಮಾಜದಲ್ಲಿ ನಾವೆಲ್ಲರೂ ಅಣ್ಣತಮ್ಮಂದಿರ ಹಾಗೆ ಪರಸ್ಪರ ಪ್ರೀತಿ ವಿಶ್ವಾಸದಿಂದ ಬಾಳಬೇಕು ಎಂದರು. ಇನ್ನೊಂದು ಧರ್ಮವನ್ನು ಪ್ರೀತಿಸುವ ಮನೋಭಾವವನ್ನು ಬೆಳೆಸಿಕೊಳ್ಳಬೇಕು. ಭಾರತ ಬಹುತ್ವದ ದೇಶ. ಎಲ್ಲಾ ಧರ್ಮ, ಜಾತಿ, ಭಾಷೆ, ಪ್ರಾಂತ್ರ್ಯದವರು ಒಟ್ಟಾಗಿ ಬಾಳಬೇಕು. ಮನುಷ್ಯತ್ವ ಬಹಳ ದೊಡ್ಡದು. ಎಲ್ಲರೂ ಪರಸ್ಪರ ಪ್ರೀತಿಸಬೇಕು. ಪ್ರತಿಯೊಬ್ಬರೂ ಸಹಿಷ್ಣುತೆಯನ್ನು ಪಾಲಿಸಬೇಕು. , ಇನ್ನೊಂದು ಧರ್ಮವನ್ನು ಪ್ರೀತಿಸುವ ಮನೋಭಾವವನ್ನು ಬೆಳೆಸಿಕೊಳ್ಳಬೇಕು. ಹಾಗೆ ಬೆಳೆದಾಗ ಮಾತ್ರ ರಾಷ್ಟ್ರ ಸಮಾಜ ಹಾಗೂ ಎಲ್ಲಾ ಧರ್ಮಗಳೂ ಎಳಿಗೆಯಾಗುತ್ತದೆ ಎಂದರು. ಸರ್ವ ಧರ್ಮ ಸಮನ್ವಯ ದಲ್ಲಿ,…

Read More

ಬೆಂಗಳೂರು:ರಾಜ್ಯದ‌ ಕಾಂಗ್ರೆಸ್ ಸರ್ಕಾರ ಗ್ಯಾರೆಂಟಿ ಕೊಡುವ ನೆಪದಲ್ಲಿ ರಾಜ್ಯದ ಬಡವರ ಮೇಲೆ ತೆರಿಗೆ ಹಾಕಿ, ಬೇರೆ ರಾಜ್ಯಗಳಿಗೆ ಹೋಲಿಕೆ ಮಾಡುವ ಮೂಲಕ ರಾಜ್ಯದ ಸಾಮಾನ್ಯ ಜನತೆಗೆ ದ್ರೋಹ ಮಾಡುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ. ಈ ಕುರಿತು ಎಕ್ಸ್ ಮೂಲಕ ಸರಣಿ ಟ್ವೀಟ್ ಮಾಡಿರುವ ಅವರು, ಗ್ಯಾರೆಂಟಿ ಗಳ ಹೆಸರಿನಲ್ಲಿ ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆಯದೇ ರಾಜ್ಯದ ಪ್ರಗತಿ ಶೂನ್ಯವಾಗಿದೆ. ರಾಜ್ಯ ಆರ್ಥಿಕವಾಗಿ ದಿವಾಳಿಯಾಗಿದ್ದು ಇದನ್ನು ಸರಿಪಡಿಸಲು ಹಲವಾರು ವರ್ಷ ಬೇಕು. ಇದಕ್ಕೆ ರಾಜ್ಯ ಕಾಂಗ್ರೆಸ್ ಸರ್ಕಾರವೇ ನೇರ ಹೊಣೆಯಾಗಿದೆ ಎಂದು ಹೇಳಿದ್ದಾರೆ. ಸಾಮಾನ್ಯರ ಮೇಲೆ ಹೊರೆ ಹಾಕಿ ಬೇರೆ ರಾಜ್ಯಗಳಿಗೆ ವ್ಯಾಪಾರ ತೊಂದರೆಯಾಗುತ್ತದೆ ಎಂದು ಹೇಳಿ ಪಕ್ಕದ ರಾಜ್ಯಗಳ ಮಿತ್ರ ಪಕ್ಷಗಳ ಹಿತ ಕಾಯುವ ಮೂಲಕ ರಾಜ್ಯದ ಜನತೆಗೆ ದ್ರೋಹ ಮಾಡುತ್ತಿರುವುದು ರಾಜದ್ರೋಹ ಮಾಡಿದಂತೆ. ಬೇರೆ ರಾಜ್ಯಗಳಿಗೆ ಹೋಲಿಕೆ ಮಾಡಿದರೆ ರಾಜ್ಯದಲ್ಲಿ ಪೆಟ್ರೊಲ್, ಡಿಸೇಲ್ ದರ ಕಡಿಮೆ‌ ಇದೆ ಎಂದು ಬಡವರ ಮೇಲೆ…

Read More

ನವದೆಹಲಿ: ಗೂಡ್ಸ್ ರೈಲೊಂದು ಎಕ್ಸ್‌ಪ್ರೆಸ್ ರೈಲಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ 15 ಮಂದಿ ಸಾವನ್ನಪ್ಪಿ, 60ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿರುವ ಘಟನೆ ಪಶ್ಚಿಮ ಬಂಗಾಳದ ಡಾರ್ಜಿಲಿಂಗ್ ಜಿಲ್ಲೆಯಲ್ಲಿ ಸೋಮವಾರ ನಡೆದಿದೆ. ಪಶ್ಚಿಮ ಬಂಗಾಳದ ನ್ಯೂ ಜಲ್ಪೈಗುರಿಯಲ್ಲಿ ಸಂಭವಿಸಿದ ಭೀಕರ ರೈಲು ಅಪಘಾತದಲ್ಲಿ ಸುಮಾರು 60 ಜನರು ಗಾಯಗೊಂಡಿದ್ದಾರೆ. ನ್ಯೂ ಜಲ್ಪೈಗುರಿ ಬಳಿ ಸೋಮವಾರ ಬೆಳಿಗ್ಗೆ ಗೂಡ್ಸ್ ರೈಲು ಸೀಲ್ಡಾಗೆ ಹೋಗುವ ಕಾಂಚನ್ಜುಂಗಾ ಎಕ್ಸ್ಪ್ರೆಸ್ಗೆ ಡಿಕ್ಕಿ ಹೊಡೆದ ಪರಿಣಾಮ ಈ ಅಪಘಾತ ಸಂಭವಿಸಿದೆ. ಬೆಳಿಗ್ಗೆ 9 ಗಂಟೆ ಸುಮಾರಿಗೆ ಈ ಅಪಘಾತ ಸಂಭವಿಸಿದೆ ಎಂದು ಎನ್ಎಫ್ಆರ್ನ ಕಟಿಹಾರ್ ವಿಭಾಗದ ವಿಭಾಗೀಯ ರೈಲ್ವೆ ವ್ಯವಸ್ಥಾಪಕರು ತಿಳಿಸಿದ್ದಾರೆ. ಅಗರ್ತಲಾದಿಂದ ಬಂದ 13174 ಕಾಂಚನಜುಂಗಾ ಎಕ್ಸ್ಪ್ರೆಸ್ ನ್ಯೂ ಜಲ್ಪೈಗುರಿ ನಿಲ್ದಾಣದ ಬಳಿಯ ರಂಗಪಾಣಿ ಬಳಿ ಸರಕು ರೈಲಿಗೆ ಡಿಕ್ಕಿ ಹೊಡೆದಿದೆ ಎಂದು ಅವರು ಹೇಳಿದ್ದಾರೆ.

Read More

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ & ಗ್ಯಾಂಗ್ ಬಂಧನದ ಬಗ್ಗೆ ನಟ ಉಪೇಂದ್ರ ಪ್ರತಿಕ್ರಿಯೆ ನೀಡಿದ್ದು,  ತಮ್ಮ ಅಭಿಪ್ರಾಯವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಹಾಗಾದ್ರೇ  ಉಪೇಂದ್ರ ಹೇಳಿದ್ದೇನು..? ದರ್ಶನ್ – ರೇಣುಕಾ ಸ್ವಾಮಿ – ಪಾರದರ್ಶಕ ವಿಚಾರಣೆ ….. ಕಳೆದ ಕೆಲವು ದಿನಗಳಿಂದ ನಡೆಯುತ್ತಿರುವ ದರ್ಶನ್ ಬಂಧನ ರೇಣುಕಾ ಸ್ವಾಮಿ ಕೊಲೆ ಪ್ರಕರಣ ಮತ್ತು ಅದರ ವಿಚಾರಣೆ ಇಡೀ ಕರ್ನಾಟಕ ಮಾತ್ರವಲ್ಲ ಇಡೀ ಭಾರತವೇ ಭೆರಗಾಗಿ ನೋಡುತ್ತಿದೆ. ಈ ಹೈ ಪ್ರೊಫೈಲ್ ಕೇಸ್ ನ ವಿಚಾರಣೆಯಲ್ಲಿ ನಿಶ್ಪಕ್ಷಪಾತವಾದ ನಿರ್ಣಯ ಮತ್ತು ನ್ಯಾಯಕ್ಕಾಗಿ ಕಾಯುತ್ತಿದ್ದಾರೆ. ರೇಣುಕಾ ಸ್ವಾಮಿ ಕುಟುಂಬದಲ್ಲಿ, ಜನರಲ್ಲಿ, ಟೀವಿ ಮಾಧ್ಯಮಗಳಲ್ಲಿ ಮತ್ತು ದರ್ಶನ್ ಅಭಿಮಾನಿಗಳಲ್ಲಿ ಏನೇನೋ ಆತಂಕ, ಅನುಮಾನಗಳು ಕಾಡುತ್ತಿದೆ, ಊಹಾಪೋಹಗಳು ಹುಟ್ಟಿಕೊಳ್ಳುತ್ತಿದೆ. ಏಕೆಂದರೆ…… ಯಾವುದೇ ಕೇಸ್ ಆದರೂ ಆ ಕೇಸ್ ನ ವಿಚಾರಣೆಯ ವೀಡಿಯೋ ಧಾಖಲೆಗಳನ್ನು ಮತ್ತು ಸಾಕ್ಷಿಗಳ ಎಲ್ಲಾ ವಿವರಗಳನ್ನು ಆಗಾಗ ಪೋಲೀಸರು ಸಂಬಂದ ಪಟ್ಟ ವ್ಯಕ್ತಿಗಳ ಕುಟುಂಬದವರ ಜೊತೆ ಹಂಚಿಕೊಳ್ಳಬೇಕು ಮತ್ತು…

Read More

ಬೆಂಗಳೂರು: ನಟ ದರ್ಶನ್‌ ಕೊಲೆ ಪ್ರಕರಣದಲ್ಲಿ ಸದ್ಯ ಪೋಲೀಸರ ವಶದಲ್ಲಿದ್ದರು ಪೋಲಿಸರು ಅನೇಕ ಮಾಹಿತಿಗಳನ್ನು ಕಲೆ ಹಾಕಲು ಮುಂದಾಗಿದ್ದಾರೆ. ಈ ನಡುವೆ ಹಾಸ್ಯ ನಟ ಚಿಕ್ಕಣ್ಣನಿಗೆ ಪ್ರಕರಣ ಸಂಬಂಧ ನೋಟಿಸ್‌ ನೀಡಲು ಮುಂದಾಗಿದ್ದು,ಹೆಚ್ಚಿನ ಮಾಹಿತಿಯನ್ನು ಕಲೆ ಹಾಕಲು ಮುಂದಾಗಿದ್ದಾರೆ ಎನ್ನಲಾಗಿದೆ. ಕೊಲೆಗೂ ಮುನ್ನ ನಟ ಚಿಕ್ಕಣ್ಣ ದರ್ಶನ್‌ ಜೊತೆಗೆ ಬಾರ್‌ವೊಂದರಲ್ಲಿ ಪಾರ್ಟಿ ಮಾಡಿದ್ದರು ಎನ್ನಲಾಗದೆ. ಈ ನಡುವೆ ಪಾರ್ಟಿಯಲ್ಲಿ ನಿರ್ಮಾಪಕರೊಬ್ಬರು ಕೂಡ ಇದ್ರು ಎನ್ನಲಾಗಿದೆ. ಸದ್ಯ ಚಿಕ್ಕಣ್ಣ ಮತ್ತು ನಿರ್ಮಾಪಕರಿಗೆ ನೋಟಿಸ್‌ ನೀಡಲು ಪೊಲೀಸರು ಮುಂದಾಗಿದ್ದಾರೆ ಎನ್ನಲಾಗಿದೆ. ನಾಳೆ ವಿಚಾರಣೆಗೆ ಬರುವಂತೆ ಸೂಚನೆ ನೀಡಬಹುದು ಎನ್ನಲಾಗಿದೆ.

Read More

ನವದೆಹಲಿ: ಬಂಗಾಳದ ಸಿಲಿಗುರುದಲ್ಲಿ ಸೋಮವಾರ ಕಾಂಚನಜುಂಗಾ ಎಕ್ಸ್ಪ್ರೆಸ್ ರೈಲು ಅಪಘಾತಕ್ಕೀಡಾದ ಪರಿಣಾಮ ಐದು ಜನರು ಸಾವನ್ನಪ್ಪಿದ್ದಾರೆ ಮತ್ತು ಸುಮಾರು 25 ಜನರು ಗಾಯಗೊಂಡಿದ್ದಾರೆ. ರೈಲು ಕೋಲ್ಕತ್ತಾದ ಸೀಲ್ಡಾ ನಿಲ್ದಾಣಕ್ಕೆ ತೆರಳುತ್ತಿದ್ದಾಗ ಸಿಲಿಗುರಿಯ ರಂಗಪಾಣಿ ಪ್ರದೇಶದಲ್ಲಿ ಗೂಡ್ಸ್ ರೈಲು ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ.  ಕಾಂಚನಜುಂಗಾ ಎಕ್ಸ್ಪ್ರೆಸ್ ನ್ಯೂ ಜಲ್ಪೈಗುರಿ ನಿಲ್ದಾಣದಿಂದ ಸೀಲ್ಡಾಗೆ ಪ್ರಯಾಣವನ್ನು ಪ್ರಾರಂಭಿಸಿದ ಕೆಲವೇ ಕ್ಷಣಗಳಲ್ಲಿ ಈ ಅಪಘಾತ ಸಂಭವಿಸಿದೆ. ಘಟನೆಯ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಜಿಲ್ಲಾ ಮ್ಯಾಜಿಸ್ಟ್ರೇಟ್, ವೈದ್ಯರು ಮತ್ತು ಆಂಬ್ಯುಲೆನ್ಸ್ಗಳನ್ನು ಸ್ಥಳಕ್ಕೆ ರವಾನಿಸಲಾಗಿದೆ. https://twitter.com/ANI/status/1802569301666234725

Read More

ಬೆಂಗಳೂರು: ರೇಣುಕಸ್ವಾಮಿ ಕೊಲೆಗೆ ಬಳಸಿದ್ದ ಎಲೆಕ್ಟ್ರಿಕಲ್ ಮೆಗ್ಗಾರ್‌ ಯಂತ್ರ ಪತ್ತೆ ಹಚ್ಚುವಲ್ಲಿ ಪೊಲೀಸರು ಕೊನೆಗೂ ಯಶಸ್ವಿಯಾಗಿದ್ದಾರೆ ಎನ್ನಲಾಗಿದೆ. ರೇಣುಕಾಸ್ವಾಮಿ ಹತ್ಯೆ ಪ್ರಕರಣ ಸಂಬಂಧ ಪೊಲೀಸರು 9ನೇ ಆರೋಪಿ ರಾಜು ಅಲಿಯಾಸ್‌ ಧನರಾಜುನನ್ನು ಪೊಲೀಸರು ಬಂಧಿಸಿದ್ದಾರೆ. ಈ ನಡುವೆ ದರ್ಶನ್‌ ಮತ್ತು ಧನರಾಜುಗೆ ನೇರ ನೇರ ಸಂಪರ್ಕವೇ ಇಲ್ಲ ಎನ್ನಲಾಗಿದೆ. ಜೊತೆಗೆ ಕೆಲಸ ಮಾಡುತ್ತಿದ್ದವನ ಮಾತು ಕೇಳಿ ಎಲೆಕ್ಟ್ರಿಕ್ ಡಿವೈಸ್ ತಂದು ಸಹಾಯ ಮಾಡಿದ್ದ ಎನ್ನಲಾಗಿದೆ. ಜೂನ್‌ 8 ರಂದು ಮೆಗ್ಗಾರ್ ಸಾಧನದ ಜೊತೆ ರಾಜುನನ್ನು ಪಟ್ಟಣಗೆರೆ ಶೆಡ್‌ಗೆ ನಂದೀಶ್ ಕರೆಸಿಕೊಂಡಿದ್ದ. ಪ್ಲ್ಯಾನ್‌ನಂತೆ ರಾಜುವಿನಿಂದ ಎಲೆಕ್ಟ್ರಿಕಲ್ ಮೆಗ್ಗಾರ್‌ ಯಂತ್ರವನ್ನು ನಂದೀಶ್ ತರಿಸಿಕೊಂಡಿದ್ದರು. ಆ ಮೆಗ್ಗಾರ್‌ ಯಂತ್ರವನ್ನು ಬಳಸಿ ರೇಣುಕಾಸ್ವಾಮಿಗೆ ಆರೋಪಿಗಳು ಕರೆಂಟ್ ಶಾಕ್ ನೀಡಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ.ಸದ್ಯ ರಾಜುವನ್ನು ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಗೆ ಕರೆದುಕೊಂಡು ಬಂದಿದ್ದಾರೆ. ರಾಜು ಜೊತೆ ಎಲೆಕ್ಟ್ರಿಕಲ್ ಮೆಗ್ಗರ್ ಯಂತ್ರ ಕೂಡ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸದ್ಯ ಧನರಾಜ್‌ನನ್ನು ಪೊಲೀಸರು ಹೆಚ್ಚಿನ ಮಾಹಿತಿಗಾಗಿ ಈಗಾಗಲೇ ವರ್ಕ್‌…

Read More