Subscribe to Updates
Get the latest creative news from FooBar about art, design and business.
Author: kannadanewsnow07
ಬೆಂಗಳೂರು: ಹಾಸನ ಸಂಸದ ಪ್ರಜ್ಬಲ್ ರೇವಣ್ಣ ವಿರುದ್ದ ಎಸ್ಐಟಿ ತಂಡ ತನಿಖೆಯನ್ನು ಭರದಿಂದ ನಡೆಸ್ತಿದೆ. ಈ ನಡುವೆ ಸಂತ್ರಸ್ತ ಮಹಿಳೆಯ ಅಪಹರಣ ಪ್ರಕರಣದಲ್ಲಿ ಮಾಜಿ ಸಚಿವ ಶಾಸಕ ಹೆಚ್.ಡಿ.ರೇವಣ್ಣ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ನ್ಯಾಯಾಲಯ ಆದೇಶವನ್ನು ಇಂದು ನೀಡಿದೆ. ಅರ್ಜಿ ವಿಚಾರಣೆ ವೇಳೆ ರೇವಣ್ಣ ಪರ ಹಿರಿಯ ವಕೀಲ ಮೂರ್ತಿ ಡಿ ನಾಯ್ಕ್ ವಾದ ಮಂಡಿಸಿ, ಪೊಲೀಸರು ಬಂಧಿಸುವ ಸಾಧ್ಯತೆ ಇದ್ದು, ಅವರನ್ನು ಬಂಧಿಸಿದಂತೆ ಮನವಿ ಮಾಡಿ ತನಿಖೆಗೆ ರೇವಣ್ಣ ಸಹಕರಿಸುವುದಾಗಿ ತಿಳಿಸಿದ್ದರು. ಈ ನಡುವೆ ಎಸ್ ಪಿಸಿ ಜಗದೀಶ್ ಅವರು ಕೂಡ ನ್ಯಾಯಾಧೀಶರ ಮುಂದೆ ರೀಕ್ಷಣಾ ಜಾಮೀನು ನೀಡಬಾರದು ಇದು ಗಂಭೀರವಾದ ಪ್ರಕರಣ. ಬಂಧನ ಮಾಡಿ ತನಿಖೆ ಮಾಡುವ ಅವಶ್ಯಕತೆ ಇರುವುದನ್ನು ನ್ಯಾಯಾಧೀಶರ ಗಮನಕ್ಕೆತಂದಿದ್ದರು.ಈ ನಡುವೆ ದ ಪ್ರತಿ ವಾದ ಆಲಿಸಿ ನ್ಯಾಯಾಧೀಶ ತೀರ್ಪುನ್ನು ಕಾಯ್ದಿರಿಸಿದ್ದರು, ಅದರಂತೆ ಈಗ ನ್ಯಾಯಾಲಯವು ಆದೇಶವನ್ನು ನೀಡಿದ್ದು, ಅದರಂತೆ ರೇವಣ್ಣ ‘ನಿರೀಕ್ಷಣಾ ಜಾಮೀನು’ ಅರ್ಜಿ ವಜಾ…
ಬೆಂಗಳೂರು: ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಮೇ 8 ರಿಂದ 10ರವರೆಗೆ ಮಳೆಯಾಗಲಿದೆ ಅಂಥ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರಲ್ಲಿ ಮೇ 8 ರಿಂದ ಮೇ 10ರವರೆಗೆ ಬಿರುಸಾಗಿ ಮಳೆ ಬೀಳುವ ಸಾಧ್ಯತೆ ಇದೆ. ಇನ್ನು ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡದಲ್ಲಿ ಮೇ 9ರಿಂದ ಮುಂದಿನ ಎರಡು ದಿನ ಸಾಧಾರಣ ಪ್ರಮಾಣದಲ್ಲಿ ಮಳೆಯಾಗಲಿದೆಯಂತೆ.
ಬೆಂಗಳೂರು: 2024-25ನೇ ಸಾಲಿಗೆ ಶೈಕ್ಷಣಿಕ ಅವಧಿಗೆ ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನದಲ್ಲಿ 3 ವರ್ಷಗಳ ಡಿಪ್ಲೊಮಾ (ಡಿ.ಹೆಚ್.ಟಿ.ಟಿ) ಕೋರ್ಸ್ ಕಲಿಕೆಗಾಗಿ ಎಸ್.ಎಸ್.ಎಲ್.ಸಿ. ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಇಂಗ್ಲೀಷನ್ನು ಒಂದು ವಿಷಯವಾಗಿ ಅಭ್ಯಸಿಸಿ ಉತ್ತೀರ್ಣರಾಗಿರುವ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಗದಗ-ಬೆಟಗೇರಿ-22 ಅಭ್ಯರ್ಥಿಗಳು, ತಮಿಳುನಾಡಿನ ಸೇಲಂ-17 ಅಭ್ಯರ್ಥಿಗಳು, ಆಂದ್ರಪ್ರದೇಶದ ನಲ್ಲೂರು ಜಿಲ್ಲೆಯ ಎಸ್.ಪಿ.ಕೆ.ಎಂ.-03 ಅಭ್ಯರ್ಥಿಗಳು, ಹಾಗೂ ಕೇರಳದ ಕಣ್ಣೂರು -02 ಅಭ್ಯರ್ಥಿಗಳಿಗೆ ಅವಕಾಶವಿದ್ದು, ಮೆರಿಟ್ ಆಧಾರದ ಮೇಲೆ ಅರ್ಹ ಅಭ್ಯರ್ಥಿಗಳನ್ನು ಆಯಾ ಡಿಪ್ಲೊಮಾ ಸಂಸ್ಥೆಗಳಲ್ಲಿ ಕೋರ್ಸ್ ಪ್ರವೇಶ ಕುರಿತಂತೆ ಕೌನ್ಸಿಲಿಂಗ್‍ಗಾಗಿ ಕರೆಯಲಾಗುವುದು. ಆಯ್ಕೆಯಾದ ಪ್ರತಿ ವಿದ್ಯಾರ್ಥಿಗೆ ತಿಂಗಳಿಗೆ ರೂ. 2,500/- ರಂತೆ ಶಿಷ್ಯವೇತನ ಹಾಗೂ ಪುರುಷ ಅಭ್ಯರ್ಥಿಗಳಿಗೆ ವಸತಿನಿಲಯದ ವ್ಯವಸ್ಥೆಯನ್ನು ಹಣ ಪಾವತಿಸುವ ಆಧಾರದ ಮೇಲೆ ಕಲ್ಪಿಸಲಾಗುವುದು. ಆಸಕ್ತರು ನಿಗಧಿತ ನಮೂನೆ ಅರ್ಜಿ ಹಾಗೂ ಹೆಚ್ಚಿನ ಮಾಹಿತಿಗಾಗಿ ಪ್ರಾಂಶುಪಾಲರು, ಕರ್ನಾಟಕ ಕೈಮಗ್ಗ ತಂತ್ರಜ್ಞಾನ ಸಂಸ್ಥೆ, ನರಸಾಪುರ, ಗದಗ-ಬೆಟಗೇರಿ-08372-297221, ಮೊ.ಸಂ.: 9449162822 ಅಥವಾ ಆಯಾ ಜಿಲ್ಲೆಯ ಕೈಮಗ್ಗ ಮತ್ತು ಜವಳಿ ಇಲಾಖೆ, ಜಿಲ್ಲಾ ಪಂಚಾಯತ್, ಶಿವಮೊಗ್ಗ…
ಬಳ್ಳಾರಿ:ಜಿಲ್ಲೆಯಲ್ಲಿ ಮೇ 05 ರಂದು ಮಧ್ಯಾಹ್ನ 02 ರಿಂದ ಸಂಜೆ 05.20 ರವರೆಗೆ ನೀಟ್ ಪರೀಕ್ಷೆ ನಡೆಯಲಿದ್ದು, ಪರೀಕ್ಷಾ ಕೇಂದ್ರಗಳ ಸುತ್ತ-ಮುತ್ತ 200 ಮೀಟರ್ ವ್ಯಾಪ್ತಿಯಲ್ಲಿ ಸಿಆರ್‍ಪಿಸಿ ಕಲಂ 144 ರ ಅಡಿ ನಿರ್ಬಂಧಿತ ಪ್ರದೇಶವೆಂದು ಘೋಷಿಸಿ ಜಿಲ್ಲಾ ದಂಡಾಧಿಕಾರಿಯಾಗಿರುವ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಆದೇಶಿಸಿದ್ದಾರೆ. ನಗರದ ಒಟ್ಟು 05 ಕೇಂದ್ರಗಳಲ್ಲಿ ನೀಟ್ ಪರೀಕ್ಷೆ ನಡೆಯಲಿದ್ದು, ಪರೀಕ್ಷಾ ಕೇಂದ್ರಗಳ ಸುತ್ತ 200 ಮೀಟರ್ ಒಳಗಿನ ಆವರಣವನ್ನು ನಿರ್ಬಂಧಿತ ಪ್ರದೇಶವೆಂದು ಘೋಷಿಸಿದ್ದಾರೆ.ಅನಧೀಕೃತ ವ್ಯಕ್ತಿ ಮತ್ತು ವ್ಯಕ್ತಿಗಳ ಗುಂಪುಗಳಿಗೆ ಪ್ರವೇಶವನ್ನು ನಿಷೇಧಿಸಿದೆ ಹಾಗೂ ಆ ದಿನದಂದು ಮಧ್ಯಾಹ್ನ 01 ರಿಂದ ಸಂಜೆ 05.30 ರವರೆಗೆ ಪರೀಕ್ಷಾ ಕೇಂದ್ರಗಳ ಸುತ್ತ-ಮುತ್ತಲಿನ ಝೆರಾಕ್ಸ್ ಅಂಗಡಿಗಳನ್ನು ತಾತ್ಕಾಲಿಕವಾಗಿ ಮುಚ್ಚುವಂತೆ ಆದೇಶಿಸಲಾಗಿದೆ. ಈ ಆದೇಶವು ಪರೀಕ್ಷಾ ಕಾರ್ಯ ನಿರ್ವಹಿಸುವ ಸಿಬ್ಬಂದಿಗಳಿಗೆ ಅನ್ವಯಿಸುವುದಿಲ್ಲ ಎಂದು ಅವರು ಹೊರಡಿಸಿರುವ ಆದೇಶದಲ್ಲಿ ತಿಳಿಸಿದ್ದಾರೆ.
ಬಳ್ಳಾರಿ: ಕರ್ನಾಟಕ ಈಶಾನ್ಯ ಪದವೀಧರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯರ ಆಯ್ಕೆಯ ಚುನಾವಣೆಗೆ ವೇಳಾಪಟ್ಟಿ ಘೋಷಣೆಯಾಗಿದ್ದು, ಈ ಬಗ್ಗೆ ಮೇ 09 ರಂದು ಅಧಿಸೂಚನೆ ಪ್ರಕಟವಾಗಲಿದೆ ಎಂದು ಈಶಾನ್ಯ ಪದವೀಧರ ಕ್ಷೇತ್ರದ ಸಹಾಯಕ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ತಿಳಿಸಿದರು. ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಕೆಸ್ವಾನ್ ಸಭಾಂಗಣದಲ್ಲಿ ಶನಿವಾರ ಏರ್ಪಡಿಸಿದ್ದ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದರು. ಈಶಾನ್ಯ ಪದವೀಧರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯರ ಆಯ್ಕೆಯ ಚುನಾವಣೆ ಸಂಬಂಧ ಮೇ 9 ರಂದು ಅಧಿಸೂಚನೆ ಪ್ರಕಟವಾಗಲಿದ್ದು, ಅಂದಿನಿಂದಲೇ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ. ಮೇ 16 ನಾಮಪತ್ರ ಸಲ್ಲಿಕೆಗೆ ಕಡೆಯ ದಿನವಾಗಿದೆ. ಮೇ.17 ರಂದು ನಾಮ ಪತ್ರಗಳ ಪರಿಶೀಲನೆ ನಡೆಯಲಿದ್ದು, ಉಮೇದುವಾರಿಕೆ ಹಿಂಪಡೆಯಲು ಮೇ. 20 ಕೊನೆಯ ದಿನವಾಗಿದೆ. ಜೂನ್ 3 ರಂದು ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆವರೆಗೆ ಮತದಾನ ಜರುಗಲಿದೆ. ಜೂನ್ 6 ರಂದು ಮತಗಳ ಎಣಿಕೆ ಕಾರ್ಯ ನಡೆಯಲಿದೆ. ಜೂನ್ 12 ರಂದು…
ಮೈಸೂರು: ಪ್ರಜ್ವಲ್ ರೇವಣ್ಣ ಪೆನ್‌ಡ್ರೈವ್ (Prajwal Revanna Case) ಪ್ರಕರಣದಲ್ಲಿ ಅಪಹರಣಕ್ಕೀಡಾಗಿದ್ದ ಸಂತ್ರಸ್ತೆಯನ್ನು ಮೈಸೂರು ಪೊಲೀಸರು ಮೈಸೂರಿನಲ್ಲಿ ರಕ್ಷಣೆ ಮಾಡಿದ್ದಾರೆ ಎನ್ನಲಾಗಿದೆ. ಎಚ್.ಡಿ.ರೇವಣ್ಣ (HD Revanna) ಆಪ್ತ ಸಹಾಯಕ ರಾಜಶೇಖರ್ ತೋಟದ ಮನೆಯಲ್ಲಿದ್ದ ಸಂತ್ರಸ್ತೆಯನ್ನು ಪೊಲೀಸರು ರಕ್ಷಣೆ ಮಾಡಿದ್ದಾರೆ ಎನ್ನಲಾಗಿದ್ದು, ಸದ್ಯ ಎಸ್‌ಐಟಿಅಧಿಕಾರಿಗಳು ಆಕೆಯನ್ನು ತಮ್ಮ ವಶಕ್ಕೆ ಪಡೆದುಕೊಂಡು ಮುಂದಿನ ಕ್ರಮವನ್ನು ಕೈಗೊಂಡಿದ್ದಾರೆ. ಏಪ್ರಿಲ್ 29ರಂದು ಕೆ.ಆರ್.ನಗರದ ಮನೆಯಿಂದ ಮಹಿಳೆಯೊಬ್ಬರನ್ನು ಅಪಹರಣ ಮಾಡಿ ಅಕ್ರಮ ಬಂಧನದಲ್ಲಿಟ್ಟಿದ್ದ ಆರೋಪದ ಮೇಲೆ ಮೈಸೂರಿನ ಕೆ.ಆರ್. ನಗರ ಠಾಣೆಯಲ್ಲಿ ಎಚ್.ಡಿ.ರೇವಣ್ಣ ಸೇರಿ ಹಲವರ ವಿರುದ್ಧ ಪ್ರಕರಣ ದಾಖಲಾಗಿತ್ತು, ಇದೇ ವೇಳೆ ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ತನಿಖೆ ನಡೆಸುತ್ತಿದ್ದರು, ಈಗ ಸದ್ಯ ಮಗನ ದೂರಿನ ಅನ್ವಯ ಮಹಿಳೆಯನ್ನು ಕಾಪಾಡಲಾಗಿದ್ದು, ಮಹಿಳೆಯನ್ನು ರಾಜಶೇಖರ್ ಕೂಡಿ ಹಾಕಿದ್ದ ಎನ್ನಲಾಗಿದೆ. ಸದ್ಯ ಪೊಲೀಸರು ಮುಂದಿನ ಕ್ರಮಕೈಗೊಂಡಿದ್ದಾರೆ.
ನವದೆಹಲಿ: ವಿದೇಶೀಯ ದ್ವೇಷವು ದೇಶದ ಆರ್ಥಿಕ ಬೆಳವಣಿಗೆಯನ್ನು ಕುಂಠಿತಗೊಳಿಸುತ್ತಿದೆ ಎಂಬ ಅಮೆರಿಕ ಅಧ್ಯಕ್ಷ ಜೋ ಬೈಡನ್ ಅವರ ಹೇಳಿಕೆಯನ್ನು ವಿದೇಶಾಂಗ ವ್ಯವಹಾರಗಳ ಸಚಿವ ಸುಬ್ರಮಣ್ಯಂ ಜೈಶಂಕರ್ ತಿರಸ್ಕರಿಸಿದ್ದಾರೆ ಎಂದು ಎಕನಾಮಿಕ್ ಟೈಮ್ಸ್ ಶನಿವಾರ ವರದಿ ಮಾಡಿದೆ. ಶುಕ್ರವಾರ ಪತ್ರಿಕೆ ಆಯೋಜಿಸಿದ್ದ ದುಂಡು ಮೇಜಿನ ಸಭೆಯಲ್ಲಿ ಮಾತನಾಡಿದ ಜೈಶಂಕರ್, ಭಾರತದ ಆರ್ಥಿಕತೆಯು “ಕುಸಿಯುತ್ತಿಲ್ಲ” ಮತ್ತು ಇದು ಐತಿಹಾಸಿಕವಾಗಿ ಬಹಳ ಮುಕ್ತ ಸಮಾಜವಾಗಿದೆ ಎಂದು ಹೇಳಿದರು. “ಅದಕ್ಕಾಗಿಯೇ ನಾವು ಸಿಎಎ (ಪೌರತ್ವ ತಿದ್ದುಪಡಿ ಕಾಯ್ದೆ) ಹೊಂದಿದ್ದೇವೆ, ಇದು ತೊಂದರೆಯಲ್ಲಿರುವ ಜನರಿಗೆ ಬಾಗಿಲು ತೆರೆಯುತ್ತದೆ … ಭಾರತಕ್ಕೆ ಬರುವ ಅಗತ್ಯವನ್ನು ಹೊಂದಿರುವ, ಭಾರತಕ್ಕೆ ಬರಲು ಹಕ್ಕು ಹೊಂದಿರುವ ಜನರಿಗೆ ನಾವು ಮುಕ್ತವಾಗಿರಬೇಕು ಎಂದು ನಾನು ಭಾವಿಸುತ್ತೇನೆ” ಎಂದು ಜೈಶಂಕರ್ ನೆರೆಯ ದೇಶಗಳಿಂದ ಕಿರುಕುಳದಿಂದ ಪಲಾಯನ ಮಾಡಿದ ವಲಸಿಗರಿಗೆ ನಾಗರಿಕರಾಗಲು ಅವಕಾಶ ನೀಡುವ ಕಾನೂನನ್ನು ಉಲ್ಲೇಖಿಸಿ ಹೇಳಿದರು.
ಬೆಂಗಳೂರು: ಮಗ ಮತ್ತು ಮೊಮ್ಮಗ ಅವರ ಕೇಸ್‌ನಿಂದ ಚಿಂತೆಯಿಂದ ಮತ್ತು ವಯೋಸಹಜ ಅನಾರೋಗ್ಯದಿಂದ ಮಾಜಿ ಪ್ರಧಾನಿ ದೇವೇಗೌಡರ ಆರೋಗ್ಯದಲ್ಲಿ ಏರುಪೇರು ಉಂಟಾಗಿದೆ ಎನ್ನಲಾಗಿದೆ. ಸದ್ಯ ಅವರನ್ನು ಮನೆಯಲ್ಲೇ ಕುಟುಂಬದವರು ಹೆಚ್ಚಿನ ನಿಗ ವಹಿಸಿ ಆರೋಗ್ಯವನ್ನು ನೋಡಿಕೊಳ್ಳುತ್ತಿದ್ದಾರೆ ಎನ್ನಲಾಗಿದೆ. ಅವರ ಆರೋಗ್ಯದ ಬಗ್ಗೆ ಹೆಣ್ಣು ಮಕ್ಕಳು ಸಂಪೂರ್ಣ ಮೇಲ್ವಿಚಾರಣೆ ಹೊತ್ತಿದ್ದಾರೆ ಎನ್ನಲಾಗಿದ್ದು, ನಿನ್ನೆ ದೇವೇಗೌಡರ ಅಳಿಯ ಹಾಗೂ ಹೃದಯ ತಜ್ಞ ಡಾ. ಸಿ.ಎನ್ ಮಂಜುನಾಥ್ ಗೌಡರ ಮನೆಗೆ ಭೇಟಿ ಆರೋಗ್ಯದ ಬಗ್ಗೆ ಗಮನ ಹರಿಸುವಂತೆ ಮತ್ತು ಸೂಕ್ತ ರೀತಿಯಲ್ಲಿ ಮೇಲ್ವಿಚಾರಣೆ ಮಾಡುವಂತೆ ತಿಳಿಸಿದ್ದಾರೆ ಎನ್ನಲಾಗಿದೆ. ದೇವೇಗೌಡರಿಗೆ “ಟಿವಿ ನೋಡಬೇಡಿ.. ಸಂಪೂರ್ಣ ರೆಸ್ಟ್ ಮಾಡಿ” ಎಂದು ವೈದ್ಯರು ಹೇಳಿದ್ದು, ಸದ್ಯ ದೇವೇಗೌಡರು ವಿಶ್ರಾಂತಿಯಲ್ಲಿದ್ದು ಕುಟುಂಬದ ಆತ್ಮೀಯರು ಹೊರತು ಪಡಿಸಿ ಬೇರೆಯವರಿಗೆ ಅವರನ್ನು ಭೇಟಿ ಮಾಡುವುದಕ್ಕೆ ಅವಕಾಶ ನೀಡುವುದಿಲ್ಲ ಎನ್ನಲಾಗಿದೆ.
ನವದೆಹಲಿ: ಸಹಿಷ್ಣುತೆ ಮತ್ತು ಗೌರವವು ಉತ್ತಮ ವಿವಾಹದ ಅಡಿಪಾಯವಾಗಿದೆ ಮತ್ತು ಸಣ್ಣ ಜಗಳಗಳನ್ನು ಮಿತಿಮೀರಿ ಹೋಗಬಾರದು ಎಂದು ಸುಪ್ರೀಂ ಕೋರ್ಟ್ ಶುಕ್ರವಾರ ಹೇಳಿದೆ. ಮಹಿಳೆಯೊಬ್ಬಳು ತನ್ನ ಪತಿಯ ವಿರುದ್ಧ ದಾಖಲಿಸಿದ್ದ ವರದಕ್ಷಿಣೆ ಕಿರುಕುಳ ಪ್ರಕರಣವನ್ನು ರದ್ದುಗೊಳಿಸುವಾಗ ಸುಪ್ರೀಂ ಕೋರ್ಟ್ ಈ ಅಭಿಪ್ರಾಯ ವ್ಯಕ್ತಪಡಿಸಿದೆ. “ಉತ್ತಮ ವಿವಾಹದ ಅಡಿಪಾಯವೆಂದರೆ ಸಹಿಷ್ಣುತೆ, ಹೊಂದಾಣಿಕೆ ಮತ್ತು ಪರಸ್ಪರ ಗೌರವ. ಪರಸ್ಪರರ ತಪ್ಪುಗಳನ್ನು ಸ್ವಲ್ಪ ಮಟ್ಟಿಗೆ ಸಹಿಸಿಕೊಳ್ಳುವುದು ಪ್ರತಿ ಮದುವೆಯಲ್ಲಿ ಅಂತರ್ಗತವಾಗಿರಬೇಕು. ಸಣ್ಣ ವಾದಗಳು, ಸಣ್ಣ ವ್ಯತ್ಯಾಸಗಳು ಪ್ರಾಪಂಚಿಕ ವಿಷಯಗಳು ಮತ್ತು ಅವುಗಳನ್ನು ಉತ್ಪ್ರೇಕ್ಷೆ ಮಾಡಬಾರದು ಅಂತ ಹೇಳಿದೆ. ಮದುವೆಗಳು ಸ್ವರ್ಗದಲ್ಲಿ ಮಾಡಲ್ಪಟ್ಟಿವೆ ಮತ್ತು ಅದನ್ನು ಯಾವುದೇ ರೀತಿಯಲ್ಲಿ ನಾಶಪಡಿಸುವುದು ಸೂಕ್ತವಲ್ಲ. ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ನ ಸಂಬಂಧಿತ ಆದೇಶವನ್ನು ಬದಿಗಿಟ್ಟ ತೀರ್ಪಿನಲ್ಲಿ ಈ ಅಭಿಪ್ರಾಯ ಬಂದಿದೆ. ಪತ್ನಿ ಸಲ್ಲಿಸಿದ್ದ ಕ್ರಿಮಿನಲ್ ಅರ್ಜಿಯನ್ನು ರದ್ದುಗೊಳಿಸುವಂತೆ ಕೋರಿ ಪತಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿತ್ತು. ಈ ಆದೇಶವನ್ನು ಪತಿ ಸುಪ್ರೀಂ ಕೋರ್ಟ್ ನಲ್ಲಿ ಪ್ರಶ್ನಿಸಿದ್ದರು. ಅನೇಕ ಬಾರಿ, ವಿವಾಹಿತ…
ನವದೆಹಲಿ: 2024 ರ ಲೋಕಸಭಾ ಚುನಾವಣೆಯ ಮೂರನೇ ಹಂತದ ಮತದಾನ ಶೀಘ್ರದಲ್ಲೇ ನಡೆಯಲಿದೆ. ಮತದಾನಕ್ಕೂ ಮುನ್ನ ಕೇಂದ್ರದ ಬಿಜೆಪಿ ಸೇರಿದಂತೆ ಇತರ ಪಕ್ಷಗಳು ರ್ಯಾಲಿಗಳು ಮತ್ತು ಸಾರ್ವಜನಿಕ ಸಭೆಗಳನ್ನು ನಡೆಸುವಲ್ಲಿ ನಿರತವಾಗಿವೆ. ಪ್ರಧಾನಿ ನರೇಂದ್ರ ಮೋದಿ ಅವರು ಬಿಜೆಪಿ ಪರ ರ್ಯಾಲಿಗಳನ್ನು ನಡೆಸುತ್ತಿದ್ದಾರೆ, ಅದರಲ್ಲಿ ಅವರು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದಾರೆ. ಪಶ್ಚಿಮ ಬಂಗಾಳದ ಬರ್ಧಮಾನ್-ದುರ್ಗಾಪುರದಲ್ಲಿ ಚುನಾವಣಾ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, “ಕಾಂಗ್ರೆಸ್ ಸಂವಿಧಾನವನ್ನು ಬದಲಾಯಿಸಲು ಮತ್ತು ದಲಿತ ಮತ್ತು ಒಬಿಸಿ ಕೋಟಾಗಳನ್ನು ತೆಗೆದುಹಾಕಲು ಬಯಸಿದೆ ಅಂತ ಹೇಳಿದರು. ಗಂಭೀರ ಆರೋಪಗಳನ್ನು ಮಾಡಿದ ಪ್ರಧಾನಿ, “ಕಾಂಗ್ರೆಸ್ ‘ಜಿಹಾದಿ’ ಮತ ಬ್ಯಾಂಕ್ಗೆ ಮೀಸಲಾತಿ ನೀಡಲು ಬಯಸಿದೆ ಅಂತ ಹೇಳಿದರು. https://twitter.com/ANI/status/1786327510340235638












