Subscribe to Updates
Get the latest creative news from FooBar about art, design and business.
Author: kannadanewsnow07
ಕೆಎನ್ಎನ್ಡಿಜಿಟಲ್ಡೆಸ್ಕ್:ಇದುವರೆಗೂ ಭಿನ್ನ ಪಥದ ಮೂಲಕ ತಮ್ಮದೇ ಆದ ಛಾಪು ಮೂಡಿಸಿರುವವರು ಅಶೋಕ್ ಕಡಬ. ಇದೀಗ ಅವರು `ಸತ್ಯಂ’ ಚಿತ್ರದ ಮೂಲಕ ಮತ್ತೊಂದು ಜಾಡಿನತ್ತ ಹೊರಳಿಕೊಂಡಿರುವ ಸ್ಪಷ್ಟ ಸೂಚನೆಯೊಂದು ಸಿಕ್ಕಿಬಿಟ್ಟಿದೆ. ಈ ಹಿಂದೆ ಸತ್ಯಂ ಟೀಸರ್ ಬಿಕಡುಗಡೆಯಾದಾಗಲೇ ಅದು ಸ್ಪಷ್ಟವಾಗಿತ್ತು. ಆ ಟೀಸರ್ಗೆ ಮಿಲಿಯನ್ನುಗಟ್ಟಲೆ ವೀಕ್ಷಣೆಗಳು ಸಿಕ್ಕಿ, ಎಲ್ಲ ಕಡೆಗಳಿಂದಲೂ ಮೆಚ್ಚುಗೆಗಳೂ ಮೂಡಿಕೊಂಡಿದ್ದವು. ಇದೀಗ ಬಿಡುಗಡೆಯ ಹೊಸ್ತಿಲಿನಲ್ಲಿರುವ ಸತ್ಯಂ ಸೆನ್ಸಾರ್ ಸರ್ಟಿಫಿಕೇಟ್ ಪಡೆದುಕೊಂಡಿದೆ. ಈ ವಿಚಾರವನ್ನು ನಿರ್ಮಾಪಕರಾದ ಮಹಾಂತೇಶ್ ವಿ.ಕೆ ಹಂಚಿಕೊಂಡಿದ್ದಾರೆ. ಯು\ಎ ಸರ್ಟಿಫಿಕೇಟಿನೊಂದಿಗೆ, ಸೆನ್ಸಾರ್ ಅಧಿಕಾರಿಗಳ ತುಂಬು ಮೆಚ್ಚುಗೆಯೂ ಎದುರುಗೊಂಡಿರೋದರಿಂದ ಚಿತ್ರತಂಡ ಖುಷಿಗೊಂಡಿದೆ. ಇದು ಗಣಪ ನಂತರ ಸಂತೋಷ್ ಬಾಲರಾಜ್ ನಾಯಕನಾಗಿ ನಟಿಸಿರುವ ಚಿತ್ರ. ಕನ್ನಡತಿ ಖ್ಯಾತಿಯ ರಂಜಿನಿ ರಾಘವನ್ ನಾಯಕಿಯಾಗಿ ಜೊತೆಯಾಗಿದ್ದಾರೆ. ಈ ಹಿಂದೆ ರಂಗಿತರಂಗ, ಕಾಂತಾರ ಚಿತ್ರಗಳಲ್ಲಿ ತುಳುನಾಡಿನ ದೈವಾರಾಧನೆಯ ಕಥೆಯಿತ್ತು. ಆ ಎರ್ಡು ಸಿನಿಮಾಗಳ ದೊಡ್ಡ ಮಟ್ಟದ ಗೆಲುವಿನ ಶಕ್ತಿಯೂ ಅದೇ. ಅಂಥಾದ್ದೊಂದು ನೆಲದ ಘಮಲಿನ ಕಥೆಯನ್ನೊಳಗೊಂಡಿರುವ ಚಿತ್ರ `ಸತ್ಯಂ’. ಹಾಗೆಂದ ಮಾತ್ರಕ್ಕೆ ಇದು ಆ…
ದಾವಣಗೆರೆ: ದಾವಣಗೆರೆ ಲೋಕಸಭಾ ಕ್ಷೇತ್ರದಲ್ಲಿ ಪ್ರಭಾ ಮಲ್ಲಿಕಾರ್ಜುನ್ ಗೆದ್ದರೆ ನಾನೇ ಗೆದ್ದ ಹಾಗೆ ಎಂದು ಸಿ.ಎಂ.ಸಿದ್ದರಾಮಯ್ಯ ಘೋಷಿಸಿದರು. ದಾವಣಗೆರೆಯಲ್ಲಿ ನಡೆದ ಪ್ರಜಾಧ್ವನಿ ಜನಸಮಾವೇಶದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪ್ರಭಾ ಮಲ್ಲಿಕಾರ್ಜುನ್ ಅವರ ಗೆಲುವಿಗೆ ಕರೆ ನೀಡಿ ಮಾತನಾಡಿದರು. ಹತ್ತತ್ತು ವರ್ಷ ಪ್ರಧಾನಿಯಾಗಿ ಮೋದಿ ಮಾಡಿದ್ದೇನು ಎನ್ನುವುದನ್ನು ಭಾರತೀಯರಿಗೆ ತಿಳಿಸಿ ಮತ ಕೇಳುತ್ತಿಲ್ಲ. ಬದಲಿಗೆ ಹೊಸ ಹೊಸ ಸುಳ್ಳುಗಳನ್ನು ಹೊತ್ತುಕೊಂಡು ಬಂದಿದ್ದಾರೆ ಎಂದರು. ಇಂಥಾ ಬಿಜೆಪಿಗೆ ಅನುಕೂಲ ಮಾಡಿಕೊಡಲು ಪಕ್ಷೇತರ ಅಭ್ಯರ್ಥಿಯಾಗಿ ವಿನಯ್ ಸ್ಪರ್ಧಿಸುತ್ತಿದ್ದಾರೆ. ದಾವಣಗೆರೆ ಲೋಕಸಭಾ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿ ವಿನಯ್ ಗೆ ಓಟು ಹಾಕಿದರೆ,ಬಿಜೆಪಿಗೆ ಓಟು ಹಾಕಿದಂತೆ. ಪ್ರಭಾ ಮಲ್ಲಿಕಾರ್ಜುನ್ ಅವರಿಗೆ ನೀವುಗಳು ಹಾಕುವ ಪ್ರತೀ ಓಟು ನನಗೇ ಹಾಕಿದಂತೆ. ಇಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ನಾನೇ ಕಣದಲ್ಲಿ ಇದ್ದೇನೆ ಎಂದುಕೊಂಡು ಮತ ಹಾಕಿ ಭರ್ಜರಿ ಬಹುಮತದಿಂದ ಕಾಂಗ್ರೆಸ್ ಗೆಲ್ಲಿಸಿ ಎಂದು ಕರೆ ನೀಡಿದರು. 15 ಲಕ್ಷ ರೂಪಾಯಿ ಪ್ರತಿಯೊಬ್ಬ ಭಾರತೀಯರ ಖಾತೆಗೆ ಹಾಕ್ತೀನಿ ಎಂದು ನಂಬಿಸಿದ ಮೋದಿ ಈ ಹತ್ತು ವರ್ಷದಲ್ಲಿ…
*ಅವಿನಾಶ್ ಆರ್ ಭೀಮಸಂದ್ರ ಜೊತೆಗೆ ವಸಂತ್ ಈಶ್ವರ್ಗೆರೆ ಬೆಂಗಳೂರು: ಮಾಜಿ ಸಚಿವ ಹೆಚ್ ಡಿ ರೇವಣ್ಣನವರನ್ನು ಎಸ್ಐಟಿ ಅಧಿಕಾರಿಗಳು ತಮ್ಮ ವಶಕ್ಕೆ ಪಡೆದುಕೊಂಡಿದ್ದಾರೆ ಎನ್ನಲಾಗಿದೆ. ಅಪಹರಣ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಂದು ‘ನಿರೀಕ್ಷಣಾ ಜಾಮೀನು’ ಅರ್ಜಿ ವಜಾ ಮಾಡಲಾಗಿದೆ. ಇದರ ಬೆನ್ನಲೇ ಎಸ್ಐಟಿ ಅಧಿಕಾರಿಗಳು ರೇವಣ್ಣವರನ್ನು ಹುಡುಕಾಟ ಮಾಡುವುದಕ್ಕೆ ಮುಂದಾಗಿದ್ದರು. ಇದಲ್ಲದೇ ಮಾಜಿ ಪ್ರಧಾನಿ ದೇವೇಗೌಡರ ಮನೆಗೆ ಹೋಗಿದ್ದರು, ಇದಲ್ಲದೇ ಬಳಿಕ ಅವರನ್ನು ರೇವಣ್ಣನವರನ್ನು ಬಂಧನ ಮಾಡಲಾಗಿದೆ ಎನ್ನಲಾಗಿದೆ. ಇಂದು ಏನೆಲ್ಲ ಆಗಿತ್ತು? ಮಧ್ಯಂತರ ಜಾಮೀನು ಅರ್ಜಿಯ ವಿಚಾರಣೆಯ ವೇಳೆಯಲ್ಲಿ ರೇವಣ್ಣ ಪರವಾಗಿ ಹಿರಿಯ ವಕೀಲ ಮೂರ್ತಿ ಡಿ ನಾಯಕ್ 15 ನಿಮಿಷಗಳ ಕಾಲ ವಾದ ಮಂಡಿಸಿದ್ದರು. ಈ ವೇಳೆ ಮತ್ತೊಂದು ಎಫ್ಐಆರ್ ನಲ್ಲಿ ಮಹಿಳೆಯ ಹೆಸರು ಕಾಣಿಸುತ್ತಿಲ್ಲ. ಆದ್ದರಿಂದ ಈ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ನೀಡುವಂತೆ ನಿನ್ನೆ ನ್ಯಾಯಾಲಯಕ್ಕೆ ಮನವಿ ಮಾಡಿದ್ದರು. ಈ ವಾದ ಆಲಿಸಿದಂತ ನ್ಯಾಯಪೀಠವು, ಈ ಪ್ರಕರಣವೂ ಲೈಂಗಿಕ ದೌರ್ಜನ್ಯ ಆರೋಪಕ್ಕೆ ಹೊಂದಿಕೊಂಡ ಪ್ರಕರಣವೇ ಆಗಿರುವುದರಿಂದ ಇಂದಿಗೆ ಮುಖ್ಯ…
ಬೆಂಗಳೂರು: ಮಾಜಿ ಸಚಿವ ಹೆಚ್ ಡಿ ರೇವಣ್ಣನವರನ್ನು ಎಸ್ಐಟಿ ಅಧಿಕಾರಿಗಳು ತಮ್ಮ ವಶಕ್ಕೆ ಪಡೆದುಕೊಂಡಿದ್ದಾರೆ ಎನ್ನಲಾಗಿದೆ. ಅಪಹರಣ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಂದು ‘ನಿರೀಕ್ಷಣಾ ಜಾಮೀನು’ ಅರ್ಜಿ ವಜಾ ಮಾಡಲಾಗಿದೆ. ಇದರ ಬೆನ್ನಲೇ ಎಸ್ಐಟಿ ಅಧಿಕಾರಿಗಳು ರೇವಣ್ಣವರನ್ನು ಹುಡುಕಾಟ ಮಾಡುವುದಕ್ಕೆ ಮುಂದಾಗಿದ್ದರು. ಇದಲ್ಲದೇ ಮಾಜಿ ಪ್ರಧಾನಿ ದೇವೇಗೌಡರ ಮನೆಗೆ ಹೋಗಿದ್ದರು, ಇದಲ್ಲದೇ ಬಳಿಕ ಅವರನ್ನು ರೇವಣ್ಣನವರನ್ನು ಬಂಧನ ಮಾಡಲಾಗಿದೆ ಎನ್ನಲಾಗಿದೆ. ಇಂದು ಏನೆಲ್ಲ ಆಗಿತ್ತು? ಮಧ್ಯಂತರ ಜಾಮೀನು ಅರ್ಜಿಯ ವಿಚಾರಣೆಯ ವೇಳೆಯಲ್ಲಿ ರೇವಣ್ಣ ಪರವಾಗಿ ಹಿರಿಯ ವಕೀಲ ಮೂರ್ತಿ ಡಿ ನಾಯಕ್ 15 ನಿಮಿಷಗಳ ಕಾಲ ವಾದ ಮಂಡಿಸಿದ್ದರು. ಈ ವೇಳೆ ಮತ್ತೊಂದು ಎಫ್ಐಆರ್ ನಲ್ಲಿ ಮಹಿಳೆಯ ಹೆಸರು ಕಾಣಿಸುತ್ತಿಲ್ಲ. ಆದ್ದರಿಂದ ಈ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ನೀಡುವಂತೆ ನಿನ್ನೆ ನ್ಯಾಯಾಲಯಕ್ಕೆ ಮನವಿ ಮಾಡಿದ್ದರು. ಈ ವಾದ ಆಲಿಸಿದಂತ ನ್ಯಾಯಪೀಠವು, ಈ ಪ್ರಕರಣವೂ ಲೈಂಗಿಕ ದೌರ್ಜನ್ಯ ಆರೋಪಕ್ಕೆ ಹೊಂದಿಕೊಂಡ ಪ್ರಕರಣವೇ ಆಗಿರುವುದರಿಂದ ಇಂದಿಗೆ ಮುಖ್ಯ ಪ್ರಕರಣದ ಮೇಲೆಯೇ ಸಂಪೂರ್ಣ ವಾದ ಆಲಿಸಿ, ನಂತ್ರ…
ಬೆಂಗಳೂರು: ಜೆಡಿಎಸ್ ಮುಖಂಡ ಎಚ್.ಡಿ.ರೇವಣ್ಣ ಅವರ ಮಾಜಿ ಮನೆ ಸಹಾಯಕನ ತೋಟದ ಮನೆಯಲ್ಲಿ ಅಪಹರಣಕ್ಕೊಳಗಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್ ನಿರೀಕ್ಷಣಾ ಜಾಮೀನು ನಿರಾಕರಿಸಿದೆ. ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಹೊಳೆನರಸೀಪುರ ಕ್ಷೇತ್ರದ ಜೆಡಿಎಸ್ ಶಾಸಕ ಎಚ್.ಡಿ.ರೇವಣ್ಣ ಅವರಿಗೆ ನಿರೀಕ್ಷಣಾ ಜಾಮೀನು ನೀಡಲು ಜನಪ್ರತಿನಿಧಿ ನ್ಯಾಯಾಲಯ ನಿರಾಕರಿಸಿದೆ. ಪ್ರಜ್ವಲ್ ರೇವಣ್ಣ ಅವರ ಸೆಕ್ಸ್ ಟೇಪ್ನಲ್ಲಿ ಕಾಣಿಸಿಕೊಂಡಿರುವ ಅನೇಕ ಮಹಿಳೆಯರಲ್ಲಿ ಒಬ್ಬರಾದ ತಮ್ಮ ತಾಯಿಯನ್ನು ರೇವಣ್ಣ ಅವರ ಸಹಚರರು ಅಪಹರಿಸಿದ್ದಾರೆ ಎಂದು ಆರೋಪಿಸಿ 20 ವರ್ಷದ ಯುವಕನೊಬ್ಬ ಪೊಲೀಸರಿಗೆ ದೂರು ನೀಡಿದ ನಂತರ ಗುರುವಾರ ಅವರ ವಿರುದ್ಧ ಅಪಹರಣ ಪ್ರಕರಣ ದಾಖಲಾಗಿತ್ತು
ಬೆಂಗಳೂರು: ಹಾಸನ ಸಂಸದ ಪ್ರಜ್ಬಲ್ ರೇವಣ್ಣ ವಿರುದ್ದ ಎಸ್ಐಟಿ ತಂಡ ತನಿಖೆಯನ್ನು ಭರದಿಂದ ನಡೆಸ್ತಿದೆ. ಈ ನಡುವೆ ಸಂತ್ರಸ್ತ ಮಹಿಳೆಯ ಅಪಹರಣ ಪ್ರಕರಣದಲ್ಲಿ ಮಾಜಿ ಸಚಿವ ಶಾಸಕ ಹೆಚ್.ಡಿ.ರೇವಣ್ಣ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ನ್ಯಾಯಾಲಯ ಆದೇಶವನ್ನು ಇಂದು ನೀಡಿದೆ. ಇನ್ನೂ ಯಾವುದೇ ಯಾವುದೇ ಕ್ಷಣದಲ್ಲಿ ಅವರನ್ನು ಬಂಧಿಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಈಗ ರೇವಣ್ಣ ವಿಚಾರಣೆಗೆ ಹಾಜರಾಗದೇ ಇದ್ದರೇ ಎಸ್ಐಟಿ ಅಧಿಕಾರಿಗಳು ತಮ್ಮ ವಶಕ್ಕೆ ತೆಗೆದುಕೊಳ್ಳಬಹುದಾಗಿದೆ ಎನ್ನಲಾಗಿದೆ. ಅರ್ಜಿ ವಿಚಾರಣೆ ವೇಳೆ ರೇವಣ್ಣ ಪರ ಹಿರಿಯ ವಕೀಲ ಮೂರ್ತಿ ಡಿ ನಾಯ್ಕ್ ವಾದ ಮಂಡಿಸಿ, ಪೊಲೀಸರು ಬಂಧಿಸುವ ಸಾಧ್ಯತೆ ಇದ್ದು, ಅವರನ್ನು ಬಂಧಿಸಿದಂತೆ ಮನವಿ ಮಾಡಿ ತನಿಖೆಗೆ ರೇವಣ್ಣ ಸಹಕರಿಸುವುದಾಗಿ ತಿಳಿಸಿದ್ದರು. ಈ ನಡುವೆ ಎಸ್ ಪಿಸಿ ಜಗದೀಶ್ ಅವರು ಕೂಡ ನ್ಯಾಯಾಧೀಶರ ಮುಂದೆ ರೀಕ್ಷಣಾ ಜಾಮೀನು ನೀಡಬಾರದು ಇದು ಗಂಭೀರವಾದ ಪ್ರಕರಣ. ಬಂಧನ ಮಾಡಿ ತನಿಖೆ ಮಾಡುವ ಅವಶ್ಯಕತೆ ಇರುವುದನ್ನು…
ಬೆಂಗಳೂರು: ಹಾಸನ ಸಂಸದ ಪ್ರಜ್ಬಲ್ ರೇವಣ್ಣ ವಿರುದ್ದ ಎಸ್ಐಟಿ ತಂಡ ತನಿಖೆಯನ್ನು ಭರದಿಂದ ನಡೆಸ್ತಿದೆ. ಈ ನಡುವೆ ಸಂತ್ರಸ್ತ ಮಹಿಳೆಯ ಅಪಹರಣ ಪ್ರಕರಣದಲ್ಲಿ ಮಾಜಿ ಸಚಿವ ಶಾಸಕ ಹೆಚ್.ಡಿ.ರೇವಣ್ಣ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ನ್ಯಾಯಾಲಯ ಆದೇಶವನ್ನು ಇಂದು ನೀಡಿದೆ. ಅರ್ಜಿ ವಿಚಾರಣೆ ವೇಳೆ ರೇವಣ್ಣ ಪರ ಹಿರಿಯ ವಕೀಲ ಮೂರ್ತಿ ಡಿ ನಾಯ್ಕ್ ವಾದ ಮಂಡಿಸಿ, ಪೊಲೀಸರು ಬಂಧಿಸುವ ಸಾಧ್ಯತೆ ಇದ್ದು, ಅವರನ್ನು ಬಂಧಿಸಿದಂತೆ ಮನವಿ ಮಾಡಿ ತನಿಖೆಗೆ ರೇವಣ್ಣ ಸಹಕರಿಸುವುದಾಗಿ ತಿಳಿಸಿದ್ದರು. ಈ ನಡುವೆ ಎಸ್ ಪಿಸಿ ಜಗದೀಶ್ ಅವರು ಕೂಡ ನ್ಯಾಯಾಧೀಶರ ಮುಂದೆ ರೀಕ್ಷಣಾ ಜಾಮೀನು ನೀಡಬಾರದು ಇದು ಗಂಭೀರವಾದ ಪ್ರಕರಣ. ಬಂಧನ ಮಾಡಿ ತನಿಖೆ ಮಾಡುವ ಅವಶ್ಯಕತೆ ಇರುವುದನ್ನು ನ್ಯಾಯಾಧೀಶರ ಗಮನಕ್ಕೆತಂದಿದ್ದರು.ಈ ನಡುವೆ ದ ಪ್ರತಿ ವಾದ ಆಲಿಸಿ ನ್ಯಾಯಾಧೀಶ ತೀರ್ಪುನ್ನು ಕಾಯ್ದಿರಿಸಿದ್ದರು, ಅದರಂತೆ ಈಗ ನ್ಯಾಯಾಲಯವು ಆದೇಶವನ್ನು ನೀಡಿದ್ದು, ಅದರಂತೆ ರೇವಣ್ಣ ‘ನಿರೀಕ್ಷಣಾ ಜಾಮೀನು’ ಅರ್ಜಿ ವಜಾ…
ಬೆಂಗಳೂರು: ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಮೇ 8 ರಿಂದ 10ರವರೆಗೆ ಮಳೆಯಾಗಲಿದೆ ಅಂಥ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರಲ್ಲಿ ಮೇ 8 ರಿಂದ ಮೇ 10ರವರೆಗೆ ಬಿರುಸಾಗಿ ಮಳೆ ಬೀಳುವ ಸಾಧ್ಯತೆ ಇದೆ. ಇನ್ನು ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡದಲ್ಲಿ ಮೇ 9ರಿಂದ ಮುಂದಿನ ಎರಡು ದಿನ ಸಾಧಾರಣ ಪ್ರಮಾಣದಲ್ಲಿ ಮಳೆಯಾಗಲಿದೆಯಂತೆ.
ಬೆಂಗಳೂರು: 2024-25ನೇ ಸಾಲಿಗೆ ಶೈಕ್ಷಣಿಕ ಅವಧಿಗೆ ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನದಲ್ಲಿ 3 ವರ್ಷಗಳ ಡಿಪ್ಲೊಮಾ (ಡಿ.ಹೆಚ್.ಟಿ.ಟಿ) ಕೋರ್ಸ್ ಕಲಿಕೆಗಾಗಿ ಎಸ್.ಎಸ್.ಎಲ್.ಸಿ. ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಇಂಗ್ಲೀಷನ್ನು ಒಂದು ವಿಷಯವಾಗಿ ಅಭ್ಯಸಿಸಿ ಉತ್ತೀರ್ಣರಾಗಿರುವ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಗದಗ-ಬೆಟಗೇರಿ-22 ಅಭ್ಯರ್ಥಿಗಳು, ತಮಿಳುನಾಡಿನ ಸೇಲಂ-17 ಅಭ್ಯರ್ಥಿಗಳು, ಆಂದ್ರಪ್ರದೇಶದ ನಲ್ಲೂರು ಜಿಲ್ಲೆಯ ಎಸ್.ಪಿ.ಕೆ.ಎಂ.-03 ಅಭ್ಯರ್ಥಿಗಳು, ಹಾಗೂ ಕೇರಳದ ಕಣ್ಣೂರು -02 ಅಭ್ಯರ್ಥಿಗಳಿಗೆ ಅವಕಾಶವಿದ್ದು, ಮೆರಿಟ್ ಆಧಾರದ ಮೇಲೆ ಅರ್ಹ ಅಭ್ಯರ್ಥಿಗಳನ್ನು ಆಯಾ ಡಿಪ್ಲೊಮಾ ಸಂಸ್ಥೆಗಳಲ್ಲಿ ಕೋರ್ಸ್ ಪ್ರವೇಶ ಕುರಿತಂತೆ ಕೌನ್ಸಿಲಿಂಗ್ಗಾಗಿ ಕರೆಯಲಾಗುವುದು. ಆಯ್ಕೆಯಾದ ಪ್ರತಿ ವಿದ್ಯಾರ್ಥಿಗೆ ತಿಂಗಳಿಗೆ ರೂ. 2,500/- ರಂತೆ ಶಿಷ್ಯವೇತನ ಹಾಗೂ ಪುರುಷ ಅಭ್ಯರ್ಥಿಗಳಿಗೆ ವಸತಿನಿಲಯದ ವ್ಯವಸ್ಥೆಯನ್ನು ಹಣ ಪಾವತಿಸುವ ಆಧಾರದ ಮೇಲೆ ಕಲ್ಪಿಸಲಾಗುವುದು. ಆಸಕ್ತರು ನಿಗಧಿತ ನಮೂನೆ ಅರ್ಜಿ ಹಾಗೂ ಹೆಚ್ಚಿನ ಮಾಹಿತಿಗಾಗಿ ಪ್ರಾಂಶುಪಾಲರು, ಕರ್ನಾಟಕ ಕೈಮಗ್ಗ ತಂತ್ರಜ್ಞಾನ ಸಂಸ್ಥೆ, ನರಸಾಪುರ, ಗದಗ-ಬೆಟಗೇರಿ-08372-297221, ಮೊ.ಸಂ.: 9449162822 ಅಥವಾ ಆಯಾ ಜಿಲ್ಲೆಯ ಕೈಮಗ್ಗ ಮತ್ತು ಜವಳಿ ಇಲಾಖೆ, ಜಿಲ್ಲಾ ಪಂಚಾಯತ್, ಶಿವಮೊಗ್ಗ…
ಬಳ್ಳಾರಿ:ಜಿಲ್ಲೆಯಲ್ಲಿ ಮೇ 05 ರಂದು ಮಧ್ಯಾಹ್ನ 02 ರಿಂದ ಸಂಜೆ 05.20 ರವರೆಗೆ ನೀಟ್ ಪರೀಕ್ಷೆ ನಡೆಯಲಿದ್ದು, ಪರೀಕ್ಷಾ ಕೇಂದ್ರಗಳ ಸುತ್ತ-ಮುತ್ತ 200 ಮೀಟರ್ ವ್ಯಾಪ್ತಿಯಲ್ಲಿ ಸಿಆರ್ಪಿಸಿ ಕಲಂ 144 ರ ಅಡಿ ನಿರ್ಬಂಧಿತ ಪ್ರದೇಶವೆಂದು ಘೋಷಿಸಿ ಜಿಲ್ಲಾ ದಂಡಾಧಿಕಾರಿಯಾಗಿರುವ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಆದೇಶಿಸಿದ್ದಾರೆ. ನಗರದ ಒಟ್ಟು 05 ಕೇಂದ್ರಗಳಲ್ಲಿ ನೀಟ್ ಪರೀಕ್ಷೆ ನಡೆಯಲಿದ್ದು, ಪರೀಕ್ಷಾ ಕೇಂದ್ರಗಳ ಸುತ್ತ 200 ಮೀಟರ್ ಒಳಗಿನ ಆವರಣವನ್ನು ನಿರ್ಬಂಧಿತ ಪ್ರದೇಶವೆಂದು ಘೋಷಿಸಿದ್ದಾರೆ.ಅನಧೀಕೃತ ವ್ಯಕ್ತಿ ಮತ್ತು ವ್ಯಕ್ತಿಗಳ ಗುಂಪುಗಳಿಗೆ ಪ್ರವೇಶವನ್ನು ನಿಷೇಧಿಸಿದೆ ಹಾಗೂ ಆ ದಿನದಂದು ಮಧ್ಯಾಹ್ನ 01 ರಿಂದ ಸಂಜೆ 05.30 ರವರೆಗೆ ಪರೀಕ್ಷಾ ಕೇಂದ್ರಗಳ ಸುತ್ತ-ಮುತ್ತಲಿನ ಝೆರಾಕ್ಸ್ ಅಂಗಡಿಗಳನ್ನು ತಾತ್ಕಾಲಿಕವಾಗಿ ಮುಚ್ಚುವಂತೆ ಆದೇಶಿಸಲಾಗಿದೆ. ಈ ಆದೇಶವು ಪರೀಕ್ಷಾ ಕಾರ್ಯ ನಿರ್ವಹಿಸುವ ಸಿಬ್ಬಂದಿಗಳಿಗೆ ಅನ್ವಯಿಸುವುದಿಲ್ಲ ಎಂದು ಅವರು ಹೊರಡಿಸಿರುವ ಆದೇಶದಲ್ಲಿ ತಿಳಿಸಿದ್ದಾರೆ.







