Author: kannadanewsnow07

ಬೆಂಗಳೂರು: ಬರ ಪರಿಸ್ಥಿತಿಯಿಂದ ಶೇ.33% ಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ಉಂಟಾದ ಬೆಳೆ ಹಾನಿಗೆ ಗರಿಷ್ಠ 02 ಹೆಕ್ಟೇರ್ ಗಳಿಗೆ ಸೀಮಿತಗೊಳಿಸಿ ಮಳೆಯಾಶ್ರೀತ ಬೆಳೆಗೆ ಪ್ರತಿ ಹೆಕ್ಟೇರ್‌ಗೆ 8,500 ರೂ.ಗಳು, ನೀರಾವರಿ ಬೆಳೆಗೆ ಪ್ರತಿ ಹೆಕ್ಟೇರ್‌ಗೆ 17,000 ರೂ.ಗಳು ಮತ್ತು ಬಹುವಾರ್ಷಿಕ ಬೆಳೆಗೆ ಪ್ರತಿ ಹೆಕ್ಟೇರ್‌ಗೆ 22.500 ರೂ.ಗಳು ನಿಗಧಿಪಡಿಸಲಾಗಿರುತ್ತದೆ. 2023 ನೇ ಸಾಲಿನ ಮುಂಗಾರು ಹಂಗಾಮಿನ ಬರ ಪರಿಸ್ಥಿತಿ ಹಿನ್ನಲೆಯಲ್ಲಿ ರೈತರಿಗೆ ಬೆಳೆಹಾನಿ ಪರಿಹಾರದ ಮೊದಲನೇ ಕಂತಾಗಿ ಅಥವಾ ಎಸ್‌ಡಿಆರ್‌ಎಫ್/ಎನ್‌ಡಿಆರ್‌ಎಫ್ ಮಾರ್ಗಸೂಚಿಯಂತೆ ಬೆಳೆಹಾನಿ ಪರಿಹಾರವಾಗಿ ಅರ್ಹತೆಯ ಅನುಗುಣವಾಗಿ ಪ್ರತಿ ರೈತರಿಗೆ ಗರಿಷ್ಠ 2000 ರೂ.ಗಳ ವರೆಗೆ ರೈತರಿಗೆ ಪಾವತಿಸಲು ಸರ್ಕಾರವು ಅನುಮತಿಯನ್ನು ನೀಡಲಾಗಿರುತ್ತದೆ ಮತ್ತು ಮುಂದಿನ ದಿನಗಳಲ್ಲಿ ಕೇಂದ್ರ ಸರ್ಕಾರದಿಂದ ಎನ್‌ಡಿಆರ್‌ಎಫ್ ಅನುದಾನ ಬಿಡುಗಡೆಯಾದ ನಂತರ ಎಸ್‌ಡಿಆರ್‌ಎಫ್ ಮಾರ್ಗಸೂಚಿಗಳ ಪ್ರಕಾರ ಹೆಚ್ಚುವರಿ ಮೊತ್ತಕ್ಕೆ ಅರ್ಹತೆಯಿರುವ ರೈತರಿಗೆ ಹೆಚ್ಚುವರಿ ಬೆಳೆಹಾನಿ ಪರಿಹಾರ ಬಿಡುಗಡೆಗೊಳಿಸಲಾಗುವುದು. ರಾಮನಗರ ಜಿಲ್ಲೆಯಲ್ಲಿ 2023 ನೇ ಸಾಲಿನ ಮುಂಗಾರು ಹಂಗಾಮಿನ ಬರ ಪರಿಸ್ಥಿತಿ ಹಿನ್ನಲೆಯಲ್ಲಿ ರೈತರಿಗೆ ಡಿಜಿಟಲ್ ಬೆಳೆ ಸಮೀಕ್ಷೆ…

Read More

ಬೆಂಗಳೂರು: ಹಾಸನ ಸಂಸದ ಪ್ರಜ್ವಲ್ ಬಳಿಕ ತಂದೆ ಮಾಜಿ ಸಚಿವ ಹೆಚ್​ಡಿ ರೇವಣ್ಣಗೂ ವಿಶೇಷ ತನಿಖಾದಳ ಲುಕ್​ಔಟ್ ನೋಟಿಸ್ ನೀಡಿದೆ. ದೇಶ ತೊರೆಯುವ ಸಾಧ್ಯತೆ ಇರೋ ಹಿನ್ನೆಲೆ ಲುಕ್​ಔಟ್ ನೋಟಿಸ್ ಹೊರಡಿಸಲಾಗಿದೆ ಎನ್ನಲಾಗಿದೆ. ಮೈಸೂರಿನ ಕೆಆರ್ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾದ ಬಳಿಕ ಲುಕ್​ಔಟ್ ನೋಟಿಸ್​​ ನೀಡಲಾಗಿದೆ ಎನ್ನಲಾಗಿದೆ. ಲುಕ್ ಔಟ್ ನೋಟಿಸ್ ಎಂದರೇನು? ಕ್ರಿಮಿನಲ್ ಪ್ರಕರಣಗಳಲ್ಲಿ ವಿದೇಶಗಳಲ್ಲಿ ತಲೆಮರೆಸಿಕೊಂಡಿರುವ ಆರೋಪಿಗಳಿಗಾಗಿ ಜಾರಿಗೊಳಿಸಲಾಗುವ ವಿಶೇಷವಾದ ನೋಟಿಸ್ ಇದು. ಇದನ್ನು ಲುಕ್ ಔಟ್ ಸರ್ಕ್ಯೂಲರ್ (LOC) ಎಂದೂ ಕರೆಯಲಾಗುತ್ತದೆ. ಸಾಮಾನ್ಯವಾಗಿ ಇದನ್ನು ವಿದೇಶಾಂಗ ಇಲಾಖೆಯ ಅಡಿಯಲ್ಲಿ ಕಾರ್ಯನಿರ್ವಹಿಸುವ ಬ್ಯೂರೋ ಆಫ್ ಇಮಿಗ್ರೇಷನ್ (BoI) ಜಾರಿಗೊಳಿಸುತ್ತದೆ.

Read More

ಕೊಡಗು: ತಿಂಡಿ ಮಾಡಲ್ಲ ಎಂದಿದ್ದಕ್ಕೆ ಅತ್ತೆಯನ್ನು ಸೊಸೆ ಕೊಲೆ ಮಾಡಿರುವ ಘಟನೆ ಮಡಿಕೇರಿ ತಾಲೂಕಿನ ಮರಗೋಡಿನಲ್ಲಿ ನಡೆದಿದೆ. ಮರಗೋಡಿನ ನಿವಾಸಿ ಪೂವಮ್ಮ (73) ಮೃತ ದುರ್ದೈವಿ. ಬಿಂದು (26) ಕೊಲೆಗೈದ ಆರೋಪಿಯಾಗಿದ್ದಾರೆ. ಏಪ್ರಿಲ್ 15ರಂದು ಈ ಘಟನೆ ನಡೆದಿದ್ದು, ಘಟನೆ ತಡವಾಗಿ ಬಂದಿದೆ ಎನ್ನಲಾಗಿದೆ. ಅಂದ ಹಾಗೇ ಅತ್ತೆಯನ್ನು ಕೊಲೆಗೈದ ಬಳಿಕ ಸಹಜ ಸಾವು ಎಂದು ಬಿಂಬಿಸಿದ್ದಳು, ಪೊಲೀಸ್‌ ತನಿಖೆಯಲ್ಲಿ ಇದು ಕೊಲೆ ಅಂತ ತಿಳಿದು ಬಂದ ಹಿನ್ನಲೆಯಲ್ಲಿ ಸದ್ಯ ಸದ್ಯ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಅತ್ತೆಗೆ ಬೆಳಗ್ಗಿನ ಉಪಾಹಾರ ಮಾಡಲು ಬರುವಂತೆ ಬಿಂದು ಕರೆದಿದ್ದಾಳೆ. ಈ ಸಂದರ್ಭ ತಿಂಡಿ ಮಾಡಲು ನಿರಾಕರಿಸಿದ ಹಿನ್ನೆಲೆ ವಾಗ್ವಾದ ಉಂಟಾಗಿದೆ. ಈ ಸಂದರ್ಭ ಕೋಪಗೊಂಡ ಬಿಂದು ಕೈಯಲ್ಲಿದ್ದ ಮೊಬೈಲ್‌ನಿಂದ ತಲೆಯ ಹಿಂಭಾಗಕ್ಕೆ ಹಲ್ಲೆಗೈದಿದ್ದಾಳೆ ಎನ್ನಲಾಗಿದೆ. . ಈ ನಡುವೆ ಅಂತ್ಯಸಂಸ್ಕಾರ ಎಲ್ಲ ನಡೆದಿದೆ.ಘಟನೆ ನಡೆದ ಸ್ಥಳ, ದಿಂಬಿನ ಕವರ್, ಬಟ್ಟೆಯ ಮೇಲೆ ರಕ್ತದ ಕಲೆಗಳನ್ನು ಕಂಡ ಬಿಂದು ಪತಿ ಪ್ರಸನ್ನ ಅವರಿಗೆ ಸಂಶಯ ಮೂಡಿದ…

Read More

ನವದೆಹಲಿ: ನವದೆಹಲಿ: ರಾಜಕಾರಣಿಯ ಹೆಸರು ಹೊಂದಿರುವ ಮಾತ್ರಕ್ಕೆ ಯಾವುದೇ ವ್ಯಕ್ತಿಗೆ ಚುನಾವಣೆಯಲ್ಲಿ ಸ್ಪರ್ಧಿಸದಂತೆ ತಡೆಯಲು ಸಾಧ್ಯವಿಲ್ಲ ಎಂದು ಹೇಳಿದೆ. ಮತದಾರರನ್ನು ತಪ್ಪುದಾರಿಗೆಳೆಯಲು ಹೆಸರಾಂತ ಅಭ್ಯರ್ಥಿಗಳನ್ನು ಉನ್ನತ ಸ್ಥಾನಗಳಿಗೆ ತಳ್ಳಲಾಗುತ್ತಿದೆ ಎಂದು ಆರೋಪಿಸಿ ಅರ್ಜಿದಾರರಾದ ಸಾಬು ಸ್ಟೀಫನ್ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು. ಈ ಅಭ್ಯರ್ಥಿಗಳ ಉಪಸ್ಥಿತಿಯು ಹೆವಿವೇಯ್ಟ್ ಅಭ್ಯರ್ಥಿಗಳು ಕಡಿಮೆ ಅಂತರದಿಂದ ಸೋಲಲು ಕಾರಣವಾಗಿದೆ ಎಂದು ಅರ್ಜಿದಾರರು ಒತ್ತಿ ಹೇಳಿದರು. ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣಾ ಪ್ರಕ್ರಿಯೆಯ ಹಿತದೃಷ್ಟಿಯಿಂದ ಈ ಪ್ರವೃತ್ತಿಯನ್ನು ತಡೆಯಲು ತುರ್ತು ಕ್ರಮಗಳನ್ನು ತೆಗೆದುಕೊಳ್ಳುವಂತೆ ಭಾರತದ ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡುವಂತೆ ಅರ್ಜಿಯಲ್ಲಿ ಕೋರಲಾಗಿದೆ. ಈ ವಿಷಯವನ್ನು ಆಲಿಸಲು ನಿರಾಕರಿಸಿದ ನ್ಯಾಯಮೂರ್ತಿ ಬಿಆರ್ ಗವಾಯಿ, “ಪೋಷಕರು ಅಭ್ಯರ್ಥಿಗಳಿಗೆ ಒಂದೇ ರೀತಿಯ ಹೆಸರನ್ನು ನೀಡಿದರೆ, ಅವರು ಚುನಾವಣೆಯಲ್ಲಿ ಸ್ಪರ್ಧಿಸದಂತೆ ತಡೆಯುವುದು ಹೇಗೆ? ಎಂದು ಹೇಳಿದರು. ಅರ್ಜಿಯನ್ನು ಹಿಂಪಡೆಯಲು ಅರ್ಜಿದಾರರಿಗೆ ನ್ಯಾಯಾಲಯ ಅನುಮತಿ ನೀಡಿದೆ.

Read More

ನವದೆಹಲಿ: 20 ವರ್ಷಗಳಿಂದ ತಮ್ಮ ತಾಯಿ ಹೊಂದಿದ್ದ ಉತ್ತರ ಪ್ರದೇಶದ ರಾಯ್ಬರೇಲಿ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿರುವುದು ನನಗೆ ಭಾವನಾತ್ಮಕ ಕ್ಷಣ ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಶುಕ್ರವಾರ ಹೇಳಿದ್ದಾರೆ.  ರಾಯ್ ಬರೇಲಿಯಿಂದ ನಾಮಪತ್ರ ಸಲ್ಲಿಸಿದ ನಂತರ ಕಾಂಗ್ರೆಸ್ ಮುಖಂಡ ಮತ್ತು ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಸಾಮಾಜಿಕ ಮಾಧ್ಯಮ ಎಕ್ಸ್ ನಲ್ಲಿ ಭಾವನಾತ್ಮಕ ಪೋಸ್ಟ್ ಹಂಚಿಕೊಂಡಿದ್ದಾರೆ. “ರಾಯ್ ಬರೇಲಿಯಿಂದ ನಾಮನಿರ್ದೇಶನಗೊಂಡಿರುವುದು ನನಗೆ ಭಾವನಾತ್ಮಕ ಕ್ಷಣವಾಗಿತ್ತು. ನನ್ನ ತಾಯಿ ನನಗೆ ಬಹಳ ವಿಶ್ವಾಸದಿಂದ ವಹಿಸಿದ್ದಾರೆ ಮತ್ತು ಅದರ ಸೇವೆ ಮಾಡಲು ನನಗೆ ಅವಕಾಶ ನೀಡಿದ್ದಾರೆ. ಅಮೇಥಿ ಮತ್ತು ರಾಯ್ ಬರೇಲಿ ನನಗೆ ಭಿನ್ನವಾಗಿಲ್ಲ, ಎರಡೂ ನನ್ನ ಕುಟುಂಬ ಮತ್ತು 40 ವರ್ಷಗಳಿಂದ ಈ ಪ್ರದೇಶದಲ್ಲಿ ಸೇವೆ ಸಲ್ಲಿಸುತ್ತಿರುವ ಕಿಶೋರಿ ಲಾಲ್ ಜಿ ಅವರು ಅಮೇಥಿಯಿಂದ ಪಕ್ಷವನ್ನು ಪ್ರತಿನಿಧಿಸುತ್ತಾರೆ ಎಂದು ನನಗೆ ಸಂತೋಷವಾಗಿದೆ. ಅನ್ಯಾಯದ ವಿರುದ್ಧ ನ್ಯಾಯಕ್ಕಾಗಿ ನಡೆಯುತ್ತಿರುವ ಹೋರಾಟದಲ್ಲಿ, ನಾನು ನನ್ನ ಪ್ರೀತಿಪಾತ್ರರ ಪ್ರೀತಿ ಮತ್ತು ಆಶೀರ್ವಾದವನ್ನು ಕೋರುತ್ತೇನೆ. ಸಂವಿಧಾನ ಮತ್ತು…

Read More

ಬೆಂಗಳೂರು: ಬೇಸಿಗೆ ಕಾಲವಾಗಿರುವುದರಿಂದ, ಜಿಲ್ಲೆಯಲ್ಲಿರುವ ಎಲ್ಲಾ ಹಳ್ಳಿ, ಪಟ್ಟಣಗಳಲ್ಲಿ ಜಾತ್ರೆ, ರಥೋತ್ಸವ, ಮದುವೆ ಸಮಾರಂಭಗಳು, ದರ್ಗಾಗಳಲ್ಲಿ ಉರೂಸ್‍ಗಳು ಮತ್ತು ಊರು ಹಬ್ಬಗಳ ಆಚರಣೆಯಿರುತ್ತದೆ. ಇಂತಹ ಆಚರಣೆಯ ಸಂದರ್ಭದಲ್ಲಿ ಕಲುಷಿತ ನೀರು, ಕಲುಷಿತ ಆಹಾರ ಸೇವನೆಯಿಂದ ಕರುಳುಬೇನೆ, ಕಾಲಾರಾ, ವಿಷಮಶೀತ ಜ್ವರ, ಕಾಮಾಲೆ(ಜಾಂಡೀಸ್) ಮತ್ತಿತರ ಸಾಂಕ್ರಾಮಿಕ ರೋಗಗಳು ಹೆಚ್ಚಾಗುವ ಮತ್ತು ಹರಡುವ ಸಾಧ್ಯತೆಗಳು ಅಧಿಕವಾಗಿರುತ್ತದೆ. ಈ ಸಾಂಕ್ರಾಮಿಕ ರೋಗಗಳು ಉಲ್ಭಣಗೊಳ್ಳದಂತೆ ಅಗತ್ಯ ಕ್ರಮವಹಿಸಲು ಎಲ್ಲಾ ಇಲಾಖೆಗಳಿಗೆ ಸೂಚಿಸಿದೆ. ಮದುವೆ ಸಮಾರಂಭಗಳು, ಜಾತ್ರೆ, ಊರ ಹಬ್ಬ ಮತ್ತಿತರ ಸಾಮಾಜಿಕ ಉತ್ಸವಗಳ ಸಂದರ್ಭಗಳಲ್ಲಿ ಸಾಂಕ್ರಾಮಿಕ ರೋಗಗಳು ಹರಡದಂತೆ ವಿಶೇಷ ಎಚ್ಚರಿಕೆ ವಹಿಸುವುದು ಹಾಗೂ ಹೋಟಲ್‍ಗಳಲ್ಲಿ ಸಾರ್ವಜನಿಕರಿಗೆ ಶುದ್ದವಾದ ಬಿಸಿ ಆಹಾರ ಮತ್ತು ಕುಡಿಯಲು ಬಿಸಿ ನೀರನ್ನು ಉಪಯೋಗಿಸುವಂತೆ ಮತ್ತು ಹೋಟೆಲ್‍ಗಳಲ್ಲಿನ ಘನ ತ್ಯಾಜ್ಯ ಪದಾರ್ಥಗಳನ್ನು ಸೂಕ್ತ ರೀತಿಯಲ್ಲಿ ವಿಲೇವಾರಿ ಮಾಡಲು ಕ್ರಮ ಕೈಗೊಳ್ಳುವುದು. ಸಂಬಂಧಪಟ್ಟ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಕುಡಿಯುವ ನೀರಿನ ಮೂಲಗಳ ಮಾಹಿತಿ ಕಲೆ ಹಾಕಿ, ಎಲ್ಲಾ ಕುಡಿಯುವ ನೀರಿನ ಮಾದರಿಗಳನ್ನು ಸಂಗ್ರಹಿಸಿ ಪರೀಕ್ಷೆಗೆ…

Read More

ಕಾರವಾರ: ನರೇಂದ್ರ ಮೋದಿ ಒಬ್ಬ ಒಳ್ಳೆಯ ನಾಟಕಕಾರ. ಇವೆಂಟ್ ಮ್ಯಾನೇಜರ್ ಆಗಿದ್ದಾರೆ. ಉತ್ತರಕನ್ನಡ ಲೋಕಸಭಾ ಚುನಾವಣೆಯಲ್ಲಿ ಬದಲಾವಣೆಯ ಗಾಳಿ ಜೋರಾಗಿ ಬೀಸುತ್ತಿದೆ. ಹೊಸ ಬದಲಾವಣೆಗೆ ಉತ್ತಮ ಅವಕಾಶ ಒದಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ವ್ಯಕ್ತಪಡಿಸಿದರು. ಇಂದು ಕುಮುಟಾದಲ್ಲಿ ಆಯೋಜಿಸಲಾಗಿದ್ದ ಪ್ರಜಾಧ್ವನಿ -02 ಲೋಕಸಭಾ ಚುನಾವಣಾ ಪ್ರಚಾರ ಕಾರ್ಯಕ್ರಮದಲ್ಲಿ ಭಾಗವಹಿಸಿ ತಮ್ಮ ಪಕ್ಷದ ಅಭ್ಯರ್ಥಿ ಅಂಜಲಿ ನಿಂಬಾಳ್ಕರ್ ಅವರ ಪರವಾಗಿ ಮತದಾರರಲ್ಲಿ ಮತ ಯಾಚಿಸಿ ಮಾತನಾಡಿದರು. ಪ್ರಧಾನಿ ಕುರ್ಚಿಯಲ್ಲಿ ಉಳಿಯಲು ಯೋಗ್ಯತೆ ಇಲ್ಲ : ಬಿಜೆಪಿ ಮಹಿಳೆಯರಿಗೆ ರಕ್ಷಣೆ ಕೊಡುತ್ತದೆ ಎಂದು ಹೇಳುವ ಮೋದಿಯವರ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಏನು ಮಾಡಿದ್ದಾರೆ ಎಂದು ಜಗಜ್ಜಾಹೀರಾಗಿದೆ. ಇದು ತಿಳಿದಿದ್ದರೂ ಕೂಡ ಹೊಂದಾಣಿಕೆ ಮಾಡಿಕೊಂಡು ಅತ್ಯಾಚಾರ ಮಾಡಿರುವ ಪ್ರಜ್ವಲ್ ರೇವಣ್ಣ ಅವರಿಗೆ ಟಿಕೆಟ್ ಕೊಟ್ಟಿದ್ದೀರಲ್ಲಾ? ಇದೇನಾ ಹೆಣ್ಣು ಮಕ್ಕಳಿಗೆ ರಕ್ಷಣೆ ಕೊಡುವ ರೀತಿ ? ಅತ್ಯಾಚಾರಿಗಳಿಗೆ ರಕ್ಷಣೆ ಕೊಟ್ಟು, ಹೆಣ್ಣು ಮಕ್ಕಳಿಗೆ ಏನು ಸಂದೇಶ ನೀಡಿದ್ದೀರಿ ಎಂದು ಇಡೀ ರಾಜ್ಯದ ಜನ ಕೇಳುತ್ತಿದ್ದಾರೆ…

Read More

ನವದೆಹಲಿ: ರೋಹಿತ್ ವೇಮುಲಾ ಸಾವಿನ ಪ್ರಕರಣದ ಮುಕ್ತಾಯದ ವರದಿಯನ್ನು ತೆಲಂಗಾಣ ಪೊಲೀಸರು ಶುಕ್ರವಾರ ಸಲ್ಲಿಸಿದ್ದು, ಎಲ್ಲಾ ಆರೋಪಿಗಳಿಗೆ ಕ್ಲೀನ್ ಚಿಟ್ ನೀಡಿದ್ದಾರೆ. 2016 ರ ಜನವರಿಯಲ್ಲಿ ರೋಹಿತ್ ವೇಮುಲಾ ಆತ್ಮಹತ್ಯೆ ಮಾಡಿಕೊಂಡಿದ್ದರಿಂದ ವಿಶ್ವವಿದ್ಯಾಲಯಗಳಲ್ಲಿ ದಲಿತರ ವಿರುದ್ಧದ ತಾರತಮ್ಯದ ವಿರುದ್ಧ ರಾಷ್ಟ್ರವ್ಯಾಪಿ ಪ್ರತಿಭಟನೆಗಳು ನಡೆದವು. 2016 ರ ಜನವರಿಯಲ್ಲಿ ರೋಹಿತ್ ವೇಮುಲಾ ಆತ್ಮಹತ್ಯೆ ಮಾಡಿಕೊಂಡಿದ್ದರಿಂದ ವಿಶ್ವವಿದ್ಯಾಲಯಗಳಲ್ಲಿ ದಲಿತರ ವಿರುದ್ಧದ ತಾರತಮ್ಯದ ವಿರುದ್ಧ ರಾಷ್ಟ್ರವ್ಯಾಪಿ ಪ್ರತಿಭಟನೆಗಳು ನಡೆದವು. ತೆಲಂಗಾಣ ಹೈಕೋರ್ಟ್ಗೆ ಶುಕ್ರವಾರ ಸಲ್ಲಿಸಿದ ಮುಕ್ತಾಯ ವರದಿಯಲ್ಲಿ, ರಾಜ್ಯ ಪೊಲೀಸರು ರೋಹಿತ್ ದಲಿತನಲ್ಲ ಮತ್ತು ಅವರ “ನಿಜವಾದ ಜಾತಿ ಗುರುತು” ಪತ್ತೆಯಾಗುತ್ತದೆ ಎಂಬ ಭಯದಿಂದ ಅವರು ಸಾವನ್ನಪ್ಪಿದ್ದಾರೆ ಎಂದು ಹೇಳಿದ್ದಾರೆ. ಸಿಕಂದರಾಬಾದ್ ಸಂಸದ ಬಂಡಾರು ದತ್ತಾತ್ರೇಯ, ವಿಧಾನ ಪರಿಷತ್ ಸದಸ್ಯ ಎನ್.ರಾಮಚಂದರ್ ರಾವ್, ಹೈದರಾಬಾದ್ ವಿಶ್ವವಿದ್ಯಾಲಯದ ಉಪಕುಲಪತಿ ಅಪ್ಪಾರಾವ್, ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಸ್ಮೃತಿ ಇರಾನಿ ಮತ್ತು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ನಾಯಕರನ್ನು ಖುಲಾಸೆಗೊಳಿಸಲಾಗಿದೆ.

Read More

ನವದೆಹಲಿ: ಮದ್ಯ ನೀತಿ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಮಧ್ಯಂತರ ಜಾಮೀನು ನೀಡುವ ಬಗ್ಗೆ ಪರಿಗಣಿಸಬಹುದು ಎಂದು ಸುಪ್ರೀಂ ಕೋರ್ಟ್ ಶುಕ್ರವಾರ ಜಾರಿ ನಿರ್ದೇಶನಾಲಯಕ್ಕೆ (ಇಡಿ) ತಿಳಿಸಿದೆ.  ದೆಹಲಿ ಮದ್ಯ ನೀತಿ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯವು ತನ್ನನ್ನು ಬಂಧಿಸಿ ರಿಮಾಂಡ್ ಮಾಡಿರುವುದನ್ನು ಪ್ರಶ್ನಿಸಿ ಅರವಿಂದ್ ಕೇಜ್ರಿವಾಲ್ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಸಂಜೀವ್ ಖನ್ನಾ ಮತ್ತು ದೀಪಂಕರ್ ದತ್ತಾ ಅವರ ನ್ಯಾಯಪೀಠ ವಿಚಾರಣೆ ನಡೆಸಿತು. ಇಂದಿನ ವಿಚಾರಣೆಯ ಸಮಯದಲ್ಲಿ, ಕೇಜ್ರಿವಾಲ್ ಅವರ ಮಧ್ಯಂತರ ಜಾಮೀನು ಬಗ್ಗೆ ಇನ್ನೂ ನಿರ್ಧಾರ ತೆಗೆದುಕೊಂಡಿಲ್ಲ ಎಂದು ನ್ಯಾಯಪೀಠ ಹೇಳಿದೆ. ಮೇ 7.ರಂದು ಈ ವಿಷಯವನ್ನು ಮತ್ತೆ ಆಲಿಸುವುದಾಗಿ ಅದು ಹೇಳಿದೆ.

Read More

ಬೆಂಗಳೂರು: 2024-25ನೇ ಸಾಲಿಗೆ ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನದಲ್ಲಿ ಡಿಪ್ಲೋಮಾ ಕೋರ್ಸ್ ಕಲಿಕೆಗಾಗಿ 44 ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಕೈಮಗ್ಗ ಮತ್ತು ಜವಳಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಇಂಗ್ಲಿಷ್‍ನ್ನು ಒಂದು ವಿಷಯವಾಗಿ ಅಭ್ಯಸಿಸಿ ಉತ್ತೀರ್ಣರಾಗಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ವ್ಯಾಸಂಗದ ಸಮಯದಲ್ಲಿ ಮಾರ್ಗಸೂಚಿಯ ಪ್ರಕಾರ ಪ್ರತಿ ವಿದ್ಯಾರ್ಥಿಗೆ, ಪ್ರತಿ ತಿಂಗಳು ರೂ.2,500 ರಂತೆ ಶಿಷ್ಯವೇತನ ನೀಡಲಾಗುವುದು ಹಾಗೂ ಪುರುಷ ಅಭ್ಯರ್ಥಿಗಳಿಗೆ ವಸತಿ ನಿಲಯದ ಸೌಲಭ್ಯವನ್ನು ಹಣ ಪಾವತಿಸುವ ಆಧಾರದ ಮೇಲೆ ಕಲ್ಪಿಸಲಾಗುವುದು. ಸಾಮಾನ್ಯ ವರ್ಗದ ಅಭ್ಯರ್ಥಿಗಳು ಜು.01ಕ್ಕೆ ಅನ್ವಯಿಸುವಂತೆ 15 ರಿಂದ 23 ವರ್ಷ ವಯೋಮಿತಿಯಲ್ಲಿರಬೇಕು ಹಾಗೂ ಪರಿಶಿಷ್ಠ ಜಾತಿ ಮತ್ತು ಪರಿಶಿಷ್ಠ ಪಂಗಡದ ವರ್ಗದ ಅಭ್ಯರ್ಥಿಗಳು 15 ರಿಂದ 25ರ ವಯೋಮಿತಿಯಲ್ಲಿರಬೇಕು. ಅರ್ಹತಾ ಪರೀಕ್ಷೆಯಲ್ಲಿ ಗಳಿಸಿರುವ ಕ್ರೂಢೀಕೃತ ಅಂಕಗಳು ಮೆರಿಟ್ ಲೆಕ್ಕಾಚಾರಕ್ಕೆ ಆಧಾರವಾಗಿರುತ್ತದೆ. ಭರ್ತಿ ಮಾಡಿದ ಅರ್ಜಿಗಳನ್ನು ಅಗತ್ಯ ದಾಖಲಾತಿಗಳೊಂದಿಗೆ ಮೇ…

Read More