Subscribe to Updates
Get the latest creative news from FooBar about art, design and business.
Author: kannadanewsnow07
ನವದೆಹಲಿ: ಡಿಸೆಂಬರ್ 2023 ತಿಂಗಳಲ್ಲಿ, ಚಿಲ್ಲರೆ ಹಣದುಬ್ಬರ ದರದಲ್ಲಿ ಹೆಚ್ಚಳ ಕಂಡುಬಂದಿದೆ. ಚಿಲ್ಲರೆ ಹಣದುಬ್ಬರವು ಡಿಸೆಂಬರ್ನಲ್ಲಿ ಶೇಕಡಾ 5.69 ರಷ್ಟಿದ್ದು, ನವೆಂಬರ್ನಲ್ಲಿ ಶೇಕಡಾ 5.55 ರಷ್ಟಿತ್ತು. ಅಕ್ಟೋಬರ್ನಲ್ಲಿ ಚಿಲ್ಲರೆ ಹಣದುಬ್ಬರ ಶೇ.4.87ರಷ್ಟಿತ್ತು. ಸೊಪ್ಪುಗಳು ಮತ್ತು ತರಕಾರಿಗಳು ಸೇರಿದಂತೆ ಆಹಾರ ಪದಾರ್ಥಗಳ ಬೆಲೆ ಏರಿಕೆಯಿಂದಾಗಿ ಚಿಲ್ಲರೆ ಹಣದುಬ್ಬರ ಹೆಚ್ಚಾಗಿದೆ. ಅಂಕಿಅಂಶಗಳ ಸಚಿವಾಲಯವು ಚಿಲ್ಲರೆ ಹಣದುಬ್ಬರದ ದತ್ತಾಂಶವನ್ನು ಬಿಡುಗಡೆ ಮಾಡಿದೆ. ಡಿಸೆಂಬರ್ ನಲ್ಲಿ ಆಹಾರ ಹಣದುಬ್ಬರ ಹೆಚ್ಚಾಗಿದೆ. ಆಹಾರ ಹಣದುಬ್ಬರವು ನವೆಂಬರ್ನಲ್ಲಿ ಶೇಕಡಾ 8.70 ರಿಂದ ಶೇಕಡಾ 9.53 ಕ್ಕೆ ಇಳಿದಿದೆ. ಚಿಲ್ಲರೆ ಹಣದುಬ್ಬರವು ಶೇಕಡಾ 4 ರಷ್ಟಿದ್ದು, ಎರಡೂ ಕಡೆ ಶೇಕಡಾ 2 ರಷ್ಟು ಅಂತರದೊಂದಿಗೆ ಉಳಿಯುವುದನ್ನು ಖಚಿತಪಡಿಸಿಕೊಳ್ಳಲು ಸರ್ಕಾರವು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾಕ್ಕೆ ಕೆಲಸ ಮಾಡಿದೆ. ಕಳೆದ ವಾರ ಘೋಷಿಸಿದ ಹಣಕಾಸು ನೀತಿಯಲ್ಲಿ, ಆರ್ಬಿಐ 2023-24ರಲ್ಲಿ ಸಿಪಿಐ ಹಣದುಬ್ಬರವನ್ನು ಶೇಕಡಾ 5.4 ಕ್ಕೆ ಅಂದಾಜಿಸಿದೆ, ಮೂರನೇ ತ್ರೈಮಾಸಿಕದಲ್ಲಿ ಶೇಕಡಾ 5.6 ಮತ್ತು ಕೊನೆಯ ತ್ರೈಮಾಸಿಕದಲ್ಲಿ ಶೇಕಡಾ 5.2 ರಷ್ಟಿದೆ.
ಚಾಮರಾಜನಗರ: ಗುಂಡ್ಲುಪೇಟೆ ತಾಲ್ಲೋಕಿನ ಹಿಮವದ್ ಗೋಪಾಲಸ್ವಾಮಿ ಬೆಟ್ಟದಲ್ಲಿ ಅನುಮತಿ ಇಲ್ಲದೆ ದ್ರೋಣ್ ಕ್ಯಾಮರಾ ಬಳಕೆ ಮಾಡಿಕೊಂಡು ವಿಡಿಯೊ ಸೆರೆಹಿಡಿಯಲಾಗಿದ್ದು ಇದರ ಬಗ್ಗೆ ಸೂಕ್ತ ಕ್ರಮಕ್ಕಾಗಿ ಸ್ಥಳೀಯರೊಬ್ಬರು . ಅರಣ್ಯ ಸಚಿವರಿಗೆ ದೂರು ಸಲ್ಲಿಕೆ ಮಾಡಿದ್ದಾರೆ ವಿಶ್ವೇಶ್ವರ ಭಟ್ ಎಂಬ ಖಾಸಗಿ ವ್ಯಕ್ತಿಯೊಬ್ಬರು ಸುಮಾರು ಸಂಜೆ 6.00 ಗಂಟೆ ಸಮಯದಲ್ಲಿ ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಭೇಟಿ ನೀಡಿದ್ದು, ವಲಯ ಅರಣ್ಯ ಪ್ರದೇಶದಲ್ಲಿ ಡ್ರೋನ್ ಬಳಕೆ ನಿಷೇದವಿದ್ದರು, ಖಾಸಗಿ ವ್ಯಕ್ತಿಯೊಬ್ಬರು ನಿಯಮವನ್ನು ಮೀರಿ ಡೋನ್ ಕ್ಯಾಮರಾ ವನ್ನೂ ಹಾರಿಸಿ ಪ್ರತಿದಿನ ಬೆಟ್ಟಕ್ಕೆ ಬರುವ ಕಾಡನೆಯೊಂದನ್ನು ಬೆದರಿಸುವ ಘಟನೆಯೂ ನಡೆದಿರುತ್ತದೆ, ಸದರಿ ಡ್ರೋನ್ ಕ್ಯಾಮರಾದಲ್ಲಿ ಸೆರೆ ಹಿಡಿದಿರುವ ಚಿತ್ರೀಕರಣವನ್ನು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿ ಕೊಂಡಿದ್ದು ಸಾರ್ವಜನಿಕರು ಹಾಗೂ ವನ್ಯ ಜೀವಿ ಪ್ರಿಯರು ಸದರಿ ಚಿತ್ರೀಕರಣವನ್ನು ವಿರೋದಿಸಿ ಪೋಸ್ಟ್ ಗಳನ್ನಿ ಮಾಡಿರುತ್ತಾರೆ ಹಾಗೂ ಖಾಸಗಿ ವ್ಯಕ್ತಿಯ ಅನಧಿಕೃತ ಪ್ರವೇಶವನ್ನು ತಡೆಯದೆ ವಲಯ ಅರಣ್ಯಾಧಿಕಾರಿಗಳು ಕರ್ತವ್ಯ ಲೋಪ ಎಸಗಿರುತ್ತಾರೆ ಅತಿಕ್ರಮ ಪ್ರವೇಶ ಮಾಡಿರುವ ವಿಶ್ವೇಶ್ವರ ಭಟ್ ಹಾಗೂ…
ಬೆಂಗಳೂರು: ರಾಜ್ಯ ಸರ್ಕಾರದ ( Karnataka Government ) ಪಂಚ ಗ್ಯಾರಂಟಿಗಳಲ್ಲಿ ಒಂದಾದ ‘ಯುವನಿಧಿ’ ಯೋಜನೆಗೆ ಶಿವಮೊಗ್ಗದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ( Chief Minister Siddaramaiah ) ಚಾಲನೆ ನೀಡಿದರು. ಇಂದಿನಿಂದಲೇ ಅರ್ಹ ಅಭ್ಯರ್ಥಿಗಳ ಖಾತೆಗೆ ಯುವನಿಧಿ ಯೋಜನೆಯ ( Yuvanidhi Scheme ) ಹಣ ಬ್ಯಾಂಕ್ ಖಾತೆಗೆ ಜಮಾ ಆಗಲಿದೆ. ಕಳೆದ ಡಿಸೆಂಬರ್ 26ರಂದು ಸಿಎಂ ‘ಯುವನಿಧಿ’ ಯೋಜನೆಯ ನೋಂದಣಿ ಕಾರ್ಯಕ್ಕೆ ಚಾಲನೆ ನೀಡಿದ್ದರು. ಪದವಿ, ಡಿಪ್ಲೊಮಾ ಶಿಕ್ಷಣ ಪಡೆದು 6 ತಿಂಗಳಿನಿಂದ ಉದ್ಯೋಗ ದೊರೆಯದಿದ್ದರೆ, ಗರಿಷ್ಠ 2 ವರ್ಷದವರೆಗೆ ಪದವೀಧರರಿಗೆ 3 ಸಾವಿರ ರೂಪಾಯಿ ಹಾಗೂ ಡಿಪ್ಲೊಮಾ ಪಡೆದವರಿಗೆ 1,500 ರೂಪಾಯಿ ನಿರುದ್ಯೋಗ ಭತ್ಯೆ ಸಿಗಲಿದೆ. ಯುವಜನತೆಯ ಉಜ್ವಲ ಭವಿಷ್ಯಕ್ಕಾಗಿ ರಾಜ್ಯ ಸರ್ಕಾರದ 5 ನೇ ಗ್ಯಾರಂಟಿ ಯೋಜನೆಯಾದ ‘ಯುವನಿಧಿ’ ಯೋಜನೆಗೆ ನೋಂದಣಿ ಪ್ರಕ್ರಿಯೆ ಆರಂಭವಾಗಿದ್ದು 2022-23 ರಲ್ಲಿ ಪದವಿ, ಡಿಪ್ಲೊಮಾ ಉತ್ತೀರ್ಣರಾದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳು https://sevasindhugs.karnataka.gov.in ಗೆ ಭೇಟಿ ನೀಡಿ ಅಥವಾ ಕರ್ನಾಟಕ ಒನ್,…
Karnataka Government Jobs ಬೆಂಗಳೂರು: ರಾಜ್ಯ ಸರ್ಕಾರಿ ಸಂಸ್ಥೆಗಳಲ್ಲಿ ಖಾಲಿ ಇರುವ 5,158 ಹುದ್ದೆಗಳಿಗೆ ಶೀಘ್ರದಲ್ಲಿ ಅರ್ಜಿ ಆಹ್ವಾನ ಮಾಡಲಾಗುವುದು ಎನ್ನಲಾಗಿದೆ. ಈ ಬಗ್ಗೆ ಕೆಇಎ ಮಾಧ್ಯಮ ಪ್ರಕಟಣೆಯನ್ನು ಹೊರಡಿಸಿದೆ. ಅದರಲ್ಲಿ ಕರ್ನಾಟಕ ರಾಜ್ಯದಲ್ಲಿನ ಸರ್ಕಾರಿ ಸಂಸ್ಥೆಗಳಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ನೇರ ನೇಮಕಾತಿ (ಎ) ಕಲ್ಯಾಣ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, (ಬಿ) ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ. (ಸಿ)ರಾಜೀವ್ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾನಿಲಯ (ಡಿ) ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ, (ಇ) ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (ಎಫ್) ಕರ್ನಾಟಕ ಸೋಪ್ಸ್ ಅಂಡ್ ಡಿಟರ್ಜೆಂಟ್ಸ್ ಲಿಮಿಟೆಡ್ ಸಂಸ್ಥೆಗಳಲ್ಲಿ ಖಾಲಿ ಇರುವ ಮಿಕ್ಕುಳಿದ ವೃಂದ ಮತ್ತು ಕಲ್ಯಾಣ ಕರ್ನಾಟಕ ಪ್ರದೇಶ (ಸ್ಥಳೀಯ) ವೃಂದದ ವಿವಿಧ ಹುದ್ದೆಗಳಿಗೆ ನೇರ ನೇಮಕಾತಿ ಸಂಬಂಧ ವಿವರವಾದ ಅಧಿಸೂಚನೆಯನ್ನು ಶೀಘ್ರದಲ್ಲಿ ಪ್ರಕಟಿಸಲಾಗುತ್ತದೆ ಅಂತ ತಿಳಿಸಿದೆ. ಅದರ ವಿವರ ಈ ಕೆಳಕಂಡತಿದೆ. ಯಾವ ಇಲಾಖೆಯಲ್ಲಿ ಎಷ್ಟು ಹುದ್ದೆ:…
ಬೆಂಗಳೂರು: ಗುದ್ದೋಡು [ಹಿಟ್ ಅಂಡ್ ರನ್] ಪ್ರಕರಣದಲ್ಲಿ 10 ವರ್ಷ ಜೈಲು ಹಾಗೂ 7 ಲಕ್ಷ ರೂಪಾಯಿ ದಂಡ ವಿಧಿಸುವ ಕೇಂದ್ರ ಸರ್ಕಾರದ ರಸ್ತೆ ಸಂಚಾರಿ ಕಾನೂನು ತಿದ್ದುಪಡಿ ವಿರೋಧಿಸಿ ದಕ್ಷಿಣ ಭಾರತದ ಲಾರಿ ಮಾಲೀಕರ ಸಂಘ ಜನವರಿ 17 ರಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಿದೆ. ಲಾರಿ ಮುಷ್ಕರದಿಂದ ರಾಜ್ಯದಲ್ಲಿ ಅಗತ್ಯವಸ್ತುಗಳ ಸಾಗಾಟದ ಮೇಲೆ ಪರಿಣಾಮವಾಗುವ ಸಾಧ್ಯತೆ ಇದೆ. ಬೆಂಗಳೂರು ಲಾರಿ ಮಾಲೀಕರ ಸಂಘದ ಅಧ್ಯಕ್ಷ ನವೀನ್ ರೆಡ್ಡಿ, ತಮಿಳುನಾಡು ಲಾರಿ ಮಾಲೀಕರ ಸಂಘದ ಅಧ್ಯಕ್ಷ ಸೆಲ್ಲಾ ರಾಜಮಣಿ, ತಮಿಳುನಾಡು ಸಂಘದ ಡಿ. ಅಕ್ಬರ್, ಕೇರಳ ಸಂಘದ ಶಾಜು, ಆಂಧ್ರಪ್ರದೇಶದ ಬಾಷಾ ಬಾನ್ ಮತ್ತು ಮಹಾರಾಷ್ಟ್ರ ಸಂಘದ ಅಧ್ಯಕ್ಷ ಶಂಕರ ದಾದಾ ಸುದ್ದಿಗೋಷ್ಟಿಯಲ್ಲಿ ಮಾತನಾಡಿ, ಕೇಂದ್ರ ಸರ್ಕಾರ ಲಾರಿ ಮಾಲೀಕರ ವಿಚಾರದಲ್ಲಿ ಅಮಾನವೀಯವಾಗಿ ನಡೆದುಕೊಳ್ಳುತ್ತಿದ್ದು, ಹಿಟ್ ಅಂಡ್ ರನ್ ಪ್ರಕರಣವನ್ನು ತನಗೆ ಬೇಕಾದಂತೆ ತಿರುಚುತ್ತಿದೆ. ಅಪಘಾತ ಎಂಬ ಶಬ್ಧವನ್ನು ಬೇರೆ ಬೇರೆ ರೀತಿಯಲ್ಲಿ ವ್ಯಾಖ್ಯಾನಿಸಿ ದುರ್ಬಳಕೆ ಮಾಡಿಕೊಳ್ಳುತ್ತಿದೆ. ಯಾರೋ ನಿರ್ಲ್ಷಕ್ಯದಿಂದ…
ಬೆಂಗಳೂರು : ಪೊಲೀಸ್ ಸಬ್ ಇನ್ಸ್ ಪೆಕ್ಟರ್ (ಸಿವಿಲ್) ನೇಮಕಾತಿ ಮರು ಪರೀಕ್ಷೆಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ವೇಳಾಪಟ್ಟಿ ಪ್ರಕಟಿಸಿದ್ದು, ಜನವರಿ 23ರಂದು ಪರೀಕ್ಷೆ ನಡೆಯಲಿದೆ. ಪಿಎಸ್ಐ ಮರು ಪರೀಕ್ಷೆ ವೇಳಾಪಟ್ಟಿ ದಿನಾಂಕ ಸಮಯ ವಿಷಯ ಅಂಕಗಳು 23-01-2024 (ಮಂಗಳವಾರ) ಬೆಳಿಗ್ಗೆ 10-30 ರಿಂದ ಮಧ್ಯಾಹ್ನ 12-00 ರವರೆಗೆ ಪೇಪರ್-1 50 ಅಂಕಗಳು 23-01-2024 (ಮಂಗಳವಾರ) ಮಧ್ಯಾಹ್ನ 01-00 ರಿಂದ 02-30 ರವರೆಗೆ. ಪೇಪರ್-2 150 ಅಂಕಗಳು ಪರೀಕ್ಷೆ ಕೇಂದ್ರದಲ್ಲಿ ಅಭ್ಯರ್ಥಿಗಳು ಅನುಸರಿಸಬೇಕಾದ ನಿಯಮಗಳನ್ನ ಪ್ರಾಧಿಕಾರ ಹೊರಡಿಸಿದ್ದು, ಅವುಗಳ ಕಟ್ಟುನಿಟ್ಟು ಪಾಲನೆಗೆ ಸೂಚಿಸಿದೆ. ಅದ್ರಂತೆ, ಪರೀಕ್ಷೆ ಸಂಬಂಧಿಸಿದ ವೇಳಾಪಟ್ಟಿ ಮತ್ತು ಅಭ್ಯರ್ಥಿಗಳು ಅನುಸರಿಸಬೇಕಾದ ನಿಯಮಗಳು ಈ ಕೆಳಗಿನಂತಿವೆ. • ಪರೀಕ್ಷಾ ಕೇಂದ್ರದಲ್ಲಿ ಅಭ್ಯರ್ಥಿಗಳು ತಪಾಸಣೆಗೆ ಒಳಪಡುವ ಹಿನ್ನೆಲೆಯಲ್ಲಿ ಬೆಳಿಗ್ಗೆ 8.30 ಕ್ಕೆ ಸರಿಯಾಗಿ ನಿಗದಿತ ಪರೀಕ್ಷಾ ಕೇಂದ್ರದಲ್ಲಿ ಹಾಜರಿರಲು ಸೂಚಿಸಿದೆ. • ಅಭ್ಯರ್ಥಿಗಳು ಪ್ರವೇಶ ಪತ್ರದ ಜೊತೆಯಲ್ಲಿ ಕಡ್ಡಾಯವಾಗಿ ಗುರುತಿನ ಚೀಟಿಯನ್ನು ಅಂದರೆ, ಡ್ರೈವಿಂಗ್ ಲೈಸೆನ್ಸ್ / ಪಾಸ್ಪೋರ್ಟ್ /…
ಶಿವಮೊಗ್ಗ: ನಕಲಿ ಜಿ.ಎಸ್.ಟಿ ಬಿಲ್ ಸೃಷ್ಠಿಸಿ ಸರ್ಕಾರಕ್ಕೆ ಕೋಟ್ಯಾಂತರ ರೂ. ತೆರಿಗೆ ವಂಚಿಸಿದ್ದ ಜಾಲವನ್ನು ಭೇದಿಸಿರುವ ಮೈಸೂರಿನ ಕೇಂದ್ರೀಯ ತೆರಿಗೆ ಜಿ.ಎಸ್.ಟಿ ಕಚೇರಿಯ ಸಿಬ್ಬಂದಿ ಮೈಸೂರಿನ ರಬ್ ಟ್ರೇಡರ್ ನ ಮಾಲೀಕರನ್ನು ಬಂಧಿಸಿ ನ್ಯಾಯಾಂಗ ತನಿಖೆಗೆ ಒಪ್ಪಿಸಿರುತ್ತಾರೆ. ಹೊರ ರಾಜ್ಯಗಳಿಂದ ಮೈಸೂರಿಗೆ ತರಿಸುವ ಸರಕು ಹಾಗೂ ಮೈಸೂರಿನಿಂದ ಹೊರರಾಜ್ಯಗಳಿಗೆ ಕಳುಹಿಸುವ ಸರಕುಗಳ ಸಂಬಮಧ ನಕಲಿ ಬಿಲ್ಗಳನ್ನು ಸೃಷ್ಟಿಸಿ ಸರ್ಕಾರಕ್ಕೆ 14 ಕೋಟಿ ರೂ.ಗಳಿಗೂ ಹೆಚ್ಚು ತೆರಿಗೆ ವಂಚಿಸಿದ್ದು, ಯಾವುದೇ ಅಧಿಕೃತ ರಶೀದಿ ಇಲ್ಲದೇ ನಕಲಿ ಘಟಕಗಳಿಗೆ ಸರಕು ಸಾಗಾಣೆ ಮಾಡಿರುವಂತೆ ತೋರಿಸ ಕೋಟ್ಯಂತರ ರೂ.ಗಳ ವಹಿವಾಟು ಕೇವಲ ಕಾಗದ ಮೇಲೆ ನಡೆದಿದೆ ಎಂದು ಆರೋಪಿಸಲಾಗಿದೆ. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಮೈಸೂರಿನ ಕೇಂದ್ರೀಯ ಜಿಎಸ್ಟಿ ಆಯುಕ್ತಾಲಯದ ಅಧಿಕಾರಿಗಳು ವಂಚನೆಯ ಜಾಲವನ್ನು ಭೇದಿಸಿದೆ ಎಂದು ಉಪ ಆಯುಕ್ತರು, ಸೆಂಟ್ರಲ್ ಟ್ಯಾಕ್ಸ್ ಇವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಬೆಂಗಳೂರು : ರಾಜ್ಯ ಸರ್ಕಾರಿ ನೌಕರರಿಗೆ ಸಿಎಂ ಸಿದ್ದರಾಮಯ್ಯ ಅವರು ಸಿಹಿಸುದ್ದಿ ನೀಡಿದ್ದು,01-04-2006ಕ್ಕಿಂತ ಪೂರ್ವದಲ್ಲಿ ರಾಜ್ಯ ಸರ್ಕಾರದ ಅಧಿಸೂಚನೆಯನ್ವಯ ನೇಮಕಾತಿ ಹೊಂದಿರುವ ನೌಕರರು ಹಳೆ ಪಿಂಚಣಿ ಯೋಜನೆಗೆ ಪರಿಗಣಿಸಲು ಸಿಎಂ ಸಿದ್ದರಾಮಯ್ಯ ಅನುಮೋದನೆ ನೀಡಿದ್ದಾರೆ ಅಂತ ತಿಳಿದು ಬಂದಿದೆ. ಈ ಬಗ್ಗೆ ಮಾಹಿತಿ ನೀಡಿರುವ ರಾಜ್ಯ ಸರ್ಕಾರಿ ನೌಕರರ ಸಂಘವು ಮಾಧ್ಯಮ ಹೇಳಿಕೆ ನೀಡಿರುವ ಪ್ರಕಾರ ಸಂಘದ ನಿರಂತರ ಪ್ರಯತ್ನದ ಫಲವಾಗಿ ಹಾಗೂ ದಿನಾಂಕ:10-01-2024ರಂದು ಆರ್ಥಿಕ ಇಲಾಖೆಯ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳಾದ ಶ್ರೀ ಎಲ್.ಕೆ. ಅತೀಕ್, ಭಾ.ಆ.ಸೇ. ರವರನ್ನು ಭೇಟಿ ಮಾಡಿ 2006ರ ಪೂರ್ವದಲ್ಲಿ ನೇಮಕಾತಿ ಅಧಿಸೂಚನೆಗೆ ಒಳಪಟ್ಟ NPS ನೌಕರರನ್ನು OPS ವ್ಯಾಪ್ತಿಗೆ ಪರಿಗಣಿಸಲು ಕೋರಲಾಗಿ ಮಾನ್ಯರು ಸಕಾರಾತ್ಮಕವಾಗಿ ಸ್ಪಂದಿಸಿ, ಮಾನ್ಯ ಮುಖ್ಯಮಂತ್ರಿಗಳ ಅನುಮೋದನೆ ಪಡೆದು ಶೀಘ್ರದಲ್ಲೇ ಆದೇಶ ಹೊರಡಿಸುವುದಾಗಿ ತಿಳಿಸಿದ್ದರು. ಅದರಂತೆ ದಿ.11-1-2024 ರಂದು ರಾಜ್ಯದ ಸನ್ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಬಹುದಿನಗಳ ಬೇಡಿಕೆಯಾದ ದಿನಾಂಕ:31-03-2006 ಕ್ಕಿಂತ ಪೂರ್ವದಲ್ಲಿ ರಾಜ್ಯ ಸರ್ಕಾರದ ಅಧಿಸೂಚನೆಯನ್ವಯ ನೇಮಕಾತಿ ಹೊಂದಿ ದಿನಾಂಕ:01-04-2006ರ ನಂತರ…
ಬೆಂಗಳೂರು: ಯಾರೂ ರಾಮಚಂದ್ರನ ವಿರುದ್ಧವಾಗಿಲ್ಲ. ಬಿಜೆಪಿ ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಳ್ಳಲು ಹೊರಟಿದೆ. ಶ್ರೀರಾಮಚಂದ್ರನನ್ನು ದೊಡ್ಡ ರಾಜಕೀಯ ವಿಷಯವಾಗಿ ಮಾಡಿಕೊಂಡಿರುವುದನ್ನು ನಾವು ವಿರೋಧಿಸುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ವಿಧಾನಸೌಧದಲ್ಲಿ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಪುಣ್ಯತಿಥಿಯ ಅಂಗವಾಗಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಮಾತನಾಡಿದರು. ನಾವೆಲ್ಲರೂ ಶ್ರೀ ರಾಮಚಂದ್ರರಾಮನ ಭಕ್ತರೇ. ಬಿಜೆಪಿ ರಾಜಕೀಯವಾಗಿ ಮಾತನಾಡುತ್ತಿದ್ದು, ಅದಕ್ಕೆ ಔಷಧಿ ಇಲ್ಲ ಎಂದರು. ರಾಮಮಂದಿರ ಉದ್ಘಾಟನೆಯ ಬಗ್ಗೆ ಪಕ್ಷದ ನಿಲುವನ್ನು ಸ್ವಾಗತಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಪಕ್ಷದ ತೀರ್ಮಾನವೇ ನಮ್ಮ ತೀರ್ಮಾನ ಎಂದರು. ನಾವು ರಾಮಚಂದ್ರನನ್ನು ಪೂಜಿಸಿ, ಭಜಿಸಿ, ರಾಮಮಂದಿರವನ್ನು ಕಟ್ಟಿದ್ದೇವೆ. ದೇವರ ಹೆಸರಲ್ಲಿ ರಾಜಕೀಯಕ್ಕೆ ವಿರೋಧವಾಗಿದ್ದೇವೆ ಅಷ್ಟೇ ಎಂದರು. ದೇವಸ್ಥಾನಗಳಲ್ಲಿ ಪೂಜೆಗೆ ಸೂಚಿಸಿಲ್ಲ : ಸರ್ಕಾರ ವತಿಯಿಂದ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ಮಾಡಲು ನಾನು ಸೂಚಿಸಿಲ್ಲ. ಬಿಜೆಪಿ ಯವರು ಅಯೋಧ್ಯೆಗೆ ಏಕೆ ಹೋಗುತ್ತಾರೆ. ಶ್ರೀ ರಾಮಚಂದ್ರ ಇಲ್ಲಿ ಇಲ್ಲವೇ, ನಮ್ಮಲ್ಲಿರುವ ಶ್ರೀರಾಮನಿಗೆ ಬೆಲೆ ಇಲ್ಲವೇ ಎಂದು ಪ್ರಶ್ನಿಸಿದ…
ಶಿವಮೊಗ್ಗ: 6 ವರ್ಷ ಸೇವೆ ಸಲ್ಲಿಸಿ ವರ್ಗಾವಣೆಗೊಂಡ ಶಿಕ್ಷಕರೊಬ್ಬರಿಗೆ ಗ್ರಾಮಸ್ಥರು, ಹಿರಿಯ ವಿದ್ಯಾರ್ಥಿಗಳು ಪಲ್ಸರ್ ಬೈಕ್ ಉಡುಗೊರೆಯಾಗಿ ನೀಡಿ ತಮ್ಮ ನೆಚ್ಚಿನ ಶಿಕ್ಷಕ ಸೆಂಡ್ ಆಫ್ ಮಾಡಿರುವ ಘಟನೆ ಸಾಗರ ತಾಲೂಕಿನ ಕುಗ್ರಾಮ ವಳೂರಿನ ಸರ್ಕಾರಿ ಶಾಲೆಯಲ್ಲಿ ನಡೆದಿದೆ. ಶಿಕ್ಷಕರಿಗೆ ಆಶ್ಚರ್ಯವಾಗುವಂತೆ, ಎಲ್ಲಾ ಗ್ರಾಮಸ್ಥರು ಒಗ್ಗೂಡಿ ಬೈಕ್ ಅನ್ನು ಉಡುಗೊರೆಯಾಗಿ ಖರೀದಿಸಿದ್ದಾರೆ. ಭಾರತದಲ್ಲಿ ಈ ಬೈಕಿನ ಬೆಲೆಯು ಭಾರತದ ಎಕ್ಸ್ ಶೋರೂಂ ದರದಂತೆ ರೂ.1.10 ಲಕ್ಷಗಳಾಗಿದೆ ಎನ್ನಲಾಗಿದೆ ಸಾಗರ ತಾಲೂಕಿನ ಕುಗ್ರಾಮ ವಳೂರಿನ ಸರ್ಕಾರಿ ಶಾಲೆಯ ಶೀಕ್ಷಕರಾಗಿದ್ದ ಸಂತೋಷ್ ಕಾಂಚನ್ ಅವರು ಕುಂದಾಪುರದ ವಾರಾಹಿ ಸರ್ಕಾರಿ ಶಾಲೆಗೆ ವರ್ಗಾವಣೆಗೊಂಡಿದ್ದಾರೆ. ಈ ಹಿನ್ನಲೆಯಲ್ಲಿ ಶಾಲೆ ಆವರಣದಲ್ಲಿ ಅವರಿಗಾಗಿ ಹೃದಯಸ್ಪರ್ಶಿ ಬೀಳ್ಕೊಡುಗೆ ಸಮಾರಂಭ ಆಯೋಜಿಸಲಾಗಿತ್ತು.ಈ ವೇಳೇ ಅವರಿಗೆ , ಹಿರಿಯ ವಿದ್ಯಾರ್ಥಿಗಳು ಪಲ್ಸರ್ ಬೈಕ್ ನೀಡಿ ಎಲ್ಲರ ಗಮನ ಸೆಳೆದಿದ್ದಾರೆ. ಅಂದ ಹಾಗೇ ಶಿವಮೊಗ್ಗ ಜಿಲ್ಲೆ, ಹೊಸನಗರ ತಾಲೂಕು ವಳೂರು ಗ್ರಾಮ. ಬಹುತೇಕ ಕುಣಬಿ ಎಂಬ ಕಾನುವಾಸಿ ಸಮುದಾಯವಿರುವ ವಿರಳ ಮನೆಗಳ ಊರು ಆಗಿದ್ದು…