Subscribe to Updates
Get the latest creative news from FooBar about art, design and business.
Author: kannadanewsnow07
ಕೆಎನ್‌ಎನ್‌ಡಿಜಿಟಲ್‌ಡೆಸ್ಕ್: ರೂಪಾ ರಾವ್ ನಿರ್ಮಾಣ ಮತ್ತು ಸಹದೇವ್ ಕೆಲವಡಿ ನಿರ್ದೇಶನದಲ್ಲಿ ಮೂಡಿ ಬಂದಿರುವ ಚಿತ್ರ `ಕೆಂಡ’. ಆರಂಭದಿಂದ ಇಲ್ಲಿಯವರೆಗೂ ಒಂದಷ್ಟು ಕುತೂಹಲಕರ ವಿಚಾರಗಳೊಂದಿಗೇ ಈ ಸಿನಿಮಾ ಪ್ರೇಕ್ಷಕರನ್ನು ತಲುಪುತ್ತಾ ಬಂದಿದೆ. ಇದೀಗ ಸಂಪೂರ್ಣವಾಗಿ ಚಿತರ್ರೀಕರಣ ಮುಗಿಸಿಕೊಂಡು ಬಿಡುಗಡೆಗೆ ಸಜ್ಜುಗೊಂಡಿರುವ `ಕೆಂಡ’ದ ಕಡೆಯಿಂದೀಗ ಸಮ್ಮೋಹಕ ಹಾಡುಗಳ ಹಂಗಾಮಾ ಶುರುವಾಗಿದೆ. ಈಚೆಗಷ್ಟೇ ಚೆಂದದ್ದೊಂದು ಹಾಡು ಬಿಡುಗಡೆಗೊಂಡಿತ್ತು. ಇದೀಗ ಮತ್ತೊಂದು ಲಿರಿಕಲ್ ವೀಡಿಯೋ ಸಾಂಗ್ ಅನಾವರಣಗೊಂಡಿದೆ. ದಾರಿಯಲ್ಲಿ ಧೂಳು… ದೂರ ಎಲ್ಲೋ ಊರು… ಅಂತ ತೆರೆದುಕೊಳ್ಳೋ ಈ ಹಾಡು ನವಿರು ಸಾಹಿತ್ಯ, ಅದಕ್ಕೊಪ್ಪುವ ಸಂಗೀತ ಹಾಗೂ ಧ್ವನಿಯೊಂದಿಗೆ ಮೆಲ್ಲಗೆ ಮನಸಿಗಿಳಿಯುವಂತಿದೆ. ವಿಶೇಷವೆಂದರೆ, ರಿತ್ವಿಕಕ್ ಕಾಯ್ಕಿಣಿ ಸಂಗೀತ ಸಂಯೋಜನೆಯಲ್ಲಿ ಮೂಡಿ ಬಂದಿರುವ ಈ ಹಾಡನ್ನು, ಖ್ಯಾತ ಸಂಗೀತ ನಿರ್ದೇಶಕ ಚರಣ್ ರಾಜ್ ಹಾಡಿದ್ದಾರೆ. ಪ್ರತಿಯೊಂದರಲ್ಲಿಯೂ ಹೊಸತನ, ಪ್ರಯೋಗಾತ್ಮಕ ಗುಣಗಳೊಂದಿಗೆ ಮುಂದುವರೆಯುತ್ತಿರುವ ಚಿತ್ರತಂಡ, ಈ ವಿಚಾರದಲ್ಲಿಯೂ ಗಮನ ಸೆಳೆದಿದೆ. ಜಯಂತ್ ಕಾಯ್ಕಿಣಿ ಈ ಹಾಡಿಗೆ ಸಾಹಿತ್ಯ ಬರೆದಿದ್ದಾರೆ. ಅದಕ್ಕೆ ಅವರ ಪುತ್ರ ರಿತ್ವಿಕ್ ಮೆಲುವಾದ ಸಂಗೀತ ಸ್ಪರ್ಶ…
ಬೆಂಗಳೂರು: ಹಿರಿಯ ನಟ ದ್ವಾರಕೀಶ್ (81) ವಿಧೀವಶರಾಗಿದ್ದಾರೆ ಎನ್ನಲಾಗಿದೆ.ಅವರಿಗೆ ಹೃದಯಘಾತವಾಗಿತ್ತು ಅಂತ ಕುಟುಂಬಮೂಲಗಳು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾವೆ. ಕರ್ನಾಟಕದ ಅಗ್ರಗಣ್ಯ ನಿರ್ಮಾಣ ಸಂಸ್ಥೆಗಳಲ್ಲಿ ಒಂದಾದ ದ್ವಾರಕೀಶ್ ಚಿತ್ರಾ 1969 ರಲ್ಲಿ ಪ್ರಾರಂಭವಾದಾಗಿನಿಂದ ಐದು ದಶಕಗಳಿಂದ ಬ್ಲಾಕ್ಬಸ್ಟರ್ ಚಲನಚಿತ್ರಗಳನ್ನು ನಿರ್ಮಿಸುತ್ತಿದೆ. ಬಂಗಳೆ ಶಾಮರಾವ್ ದ್ವಾರಕನಾಥ್ (ಅಕಾ ದ್ವಾರಕೀಶ್) ಸ್ಥಾಪಿಸಿದ ಈ ಕಂಪನಿಯು 50 ಕ್ಕೂ ಹೆಚ್ಚು ಚಲನಚಿತ್ರಗಳನ್ನು ನಿರ್ಮಿಸಿದೆ, ಅವುಗಳಲ್ಲಿ ಅನೇಕವು ಕನ್ನಡ ಚಿತ್ರರಂಗದಲ್ಲಿ ಮೈಲಿಗಲ್ಲುಗಳಾಗಿವೆ. ದ್ವಾರಕೀಶ್ ಚಿತ್ರಾವನ್ನು ಪ್ರಸ್ತುತ ಅವರ ಮಗ ಯೋಗೀಶ್ ದ್ವಾರಕೀಶ್ ಬಂಗಳೆ ನಿರ್ವಹಿಸುತ್ತಿದ್ದಾರೆ. 1969 ರಲ್ಲಿ ಡಾ.ರಾಜ್ ಕುಮಾರ್ ಮತ್ತು ಭಾರತಿ ಅಭಿನಯದ ಹೆಗ್ಗುರುತು ಚಿತ್ರ ಮೇಯರ್ ಮುತ್ತಣ್ಣ ಮೂಲಕ ದ್ವಾರಕೀಶ್ ಚಿತ್ರ ಪ್ರಾರಂಭವಾಯಿತು. ಇದರ ನಂತರ ಕುಳ್ಳ ಏಜೆಂಟ್ 000 ಮತ್ತು ಕೌಬಾಯ್ ಕುಳ್ಳ, ಭಾಗ್ಯವಂತರು, ಕಿಟ್ಟು ಪುಟ್ಟು, ಸಿಂಗಾಪುರ್ನಳ್ಳಿ ರಾಜ ಕುಲ್ಲಾ, ಪ್ರೀತಿ ಮಾಡು ತಮಾಶೆ ನೋಡು, ಗುರು ಶಿಷ್ಯರು, ಪೆದ್ದ ಗೆದ್ದ, ಪ್ರಚಂಡ ಕುಳ್ಳ, ನ್ಯಾಯ ಎಲಿದೆ, ಭಾರತ ರಾಮಾಯಣ, ರಾವಣ ರಾಜ್ಯ,…
ನವದೆಹಲಿ: ಜಮ್ಮು ಮತ್ತು ಕಾಶ್ಮೀರ ಶ್ರೀನಗರದ ಝೀಲಂ ನದಿಯಲ್ಲಿ ದೋಣಿ ಮಗುಚಿ ಬಿದ್ದಿದೆ. ಈ ಅವಘಡದಲ್ಲಿ 10 ಶಾಲಾ ವಿದ್ಯಾರ್ಥಿಗಳು ಸೇರಿದಂತೆ ಅನೇಕ ಜನರು ಮುಳುಗಿ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಸದ್ಯ ಘಟನ ಸ್ಥಳದಲ್ಲಿ ಇಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಸ್ಥಳೀಐ ಮಾಧ್ಯಮ ವರದಿಗಳ ಪ್ರಕಾರ, ದೋಣಿಯಲ್ಲಿ ಒಂದು ಡಜನ್ಗೂ ಹೆಚ್ಚು ಮಕ್ಕಳು ಮತ್ತು ಇತರ ಕೆಲವು ಸ್ಥಳೀಯರು ಇದ್ದರು ಎನ್ನಲಾಗಿದೆ. ಎಸ್ಡಿಆರ್ಎಫ್ ರಕ್ಷಣಾ ಕಾರ್ಯಾಚರಣೆಯನ್ನು ಪ್ರಾರಂಭಿಸಿದೆ ಮತ್ತು ಕಾಣೆಯಾದ ಜನರನ್ನು ಹುಡುಕುವಲ್ಲಿ ತೊಡಗಿದೆ. ಸ್ಥಳೀಯರ ಪ್ರಕಾರ, ಘಟನೆ ನಡೆದ ಕೂಡಲೇ ಅವರು ಎಸ್ಡಿಆರ್ಎಫ್ ಮತ್ತು ಇತರ ಅಧಿಕಾರಿಗಳಿಗೆ ಮಾಹಿತಿ ನೀಡಿದರು ಎನ್ನಲಾಗಿದೆ. https://twitter.com/ANI/status/1780093861148160496
ನವದೆಹಲಿ : ಭಾರತೀಯ ಅಂಚೆ ಕಛೇರಿಯು ಖಾಲಿಯಿರುವ ಪೋಸ್ಟ್‌ಮೆನ್ ಹುದ್ದೆಗಳ ಬೃಹತ್ ಸಂಖ್ಯೆಯ ಭರ್ತಿಗಾಗಿ ಇತ್ತೀಚಿನ ನೇಮಕಾತಿ ಅಧಿಸೂಚನೆಯನ್ನ ಬಿಡುಗಡೆ ಮಾಡಿದೆ. ಈ ನೇಮಕಾತಿಗೆ ಸಂಬಂಧಿಸಿದ ಸಂಪೂರ್ಣ ವಿವರಗಳನ್ನ ತಿಳಿಯಲು ಈ ಲೇಖನವನ್ನ ಸಂಪೂರ್ಣವಾಗಿ ಓದಿ. ಅಧಿಸೂಚನೆ ಬಿಡುಗಡೆ: ಸರ್ಕಾರಿ ಸಂಸ್ಥೆಗಳಲ್ಲಿ ಒಂದಾಗಿರುವ ಭಾರತೀಯ ಅಂಚೆ ಇಲಾಖೆಯು ಈ ಬೃಹತ್ ನೇಮಕಾತಿ ಅಧಿಸೂಚನೆಯನ್ನ ಬಿಡುಗಡೆ ಮಾಡಿದೆ. ಈ ಸರ್ಕಾರಿ ಉದ್ಯೋಗಗಳಿಗೆ ಅರ್ಜಿ ಸಲ್ಲಿಸಲು ಬಯಸುವವರು ಎಸ್‌ಎಸ್‌ಎಲ್ಸಿ ವಿದ್ಯಾರ್ಹತೆಯನ್ನ ಹೊಂದಿರಬೇಕು. ವಯೋಮಿತಿ : ಈ ಸರ್ಕಾರಿ ಉದ್ಯೋಗಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಕನಿಷ್ಠ ವಯಸ್ಸು 18 ರಿಂದ ಗರಿಷ್ಠ 40 ವರ್ಷಗಳ ನಡುವೆ ಇರಬೇಕು. ಸರ್ಕಾರದ ನಿಯಮಗಳ ಪ್ರಕಾರ ಎಸ್‌ಸಿ, ಎಸ್‌ಟಿಗೆ 3 ವರ್ಷ ಮತ್ತು ಒಬಿಸಿಗೆ 5 ವರ್ಷ ವಯೋಮಿತಿ ಸಡಿಲಿಕೆ ಇದೆ. ಖಾಲಿ ಹುದ್ದೆಗಳ ಸಂಖ್ಯೆ: ಈ ಬೃಹತ್ ನೇಮಕಾತಿ ಅಧಿಸೂಚನೆಯ ಮೂಲಕ ಸುಮಾರು 32000 ಖಾಲಿ ಹುದ್ದೆಗಳನ್ನ ಭರ್ತಿ ಮಾಡಲಾಗುವುದು ಎಂದು ತೋರುತ್ತದೆ. ಸಂಬಳ : ಈ…
ಶ್ರೀನಗರ: ನಗರದ ಹೊರವಲಯದಲ್ಲಿರುವ ಝೀಲಂ ನದಿಯಲ್ಲಿ ಮಂಗಳವಾರ ದೋಣಿ ಮಗುಚಿ ಕೆಲವರು ಕಾಣೆಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕ್ಷಣಾ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಗಿದೆ ಮತ್ತು ರಾಜ್ಯ ವಿಪತ್ತು ಪ್ರತಿಕ್ರಿಯೆ ಪಡೆ ತಂಡವನ್ನು ನಿಯೋಜಿಸಲಾಗಿದೆ ಎಂದು ಅವರು ಹೇಳಿದರು. ಕಳೆದ ಎರಡು ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಝೀಲಂ ಸೇರಿದಂತೆ ಹಲವಾರು ಜಲಮೂಲಗಳ ನೀರಿನ ಮಟ್ಟ ಹೆಚ್ಚಾಗಿದೆ. https://twitter.com/ANI/status/1780088826813411490
ನವದೆಹಲಿ: ಕೇರಳದ ಆಡಳಿತಾರೂಢ ಎಡ ಪ್ರಜಾಸತ್ತಾತ್ಮಕ ರಂಗ (ಎಲ್ಡಿಎಫ್) ಮತ್ತು ಕಾಂಗ್ರೆಸ್ ನೇತೃತ್ವದ ಯುಡಿಎಫ್ ರಾಜ್ಯದ ಸ್ಥಿತಿಯನ್ನು ಹದಗೆಡಿಸುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಸೋಮವಾರ ಹೇಳಿದ್ದಾರೆ. ಕೇರಳ ಅಥವಾ ಪಶ್ಚಿಮ ಬಂಗಾಳದ ಎಲ್ಲಾ ಎಡ ಸರ್ಕಾರಗಳು “ಒಂದೇ ಗುಣಲಕ್ಷಣವನ್ನು ಹೊಂದಿವೆ: ‘ಏನೂ ಎಡವಿಲ್ಲ ಮತ್ತು ಬಲವಿಲ್ಲ’ಅಂತ ಹೇಳಿದರು. ಪಾಲಕ್ಕಾಡ್ನಲ್ಲಿ ಸಾರ್ವಜನಿಕ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ವಯನಾಡ್ನ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿದ ಪ್ರಧಾನಿ, ಪಕ್ಷದ ಯುವರಾಜ ಕೇರಳದ ಜನರಿಂದ ಮತಗಳನ್ನು ಕೇಳುತ್ತಾರೆ, ಆದರೆ ನಿಮ್ಮ ಸಮಸ್ಯೆಗಳು ಮತ್ತು ಹಿತಾಸಕ್ತಿಗಳ ಬಗ್ಗೆ ಒಂದೇ ಒಂದು ಮಾತನ್ನೂ ಆಡುವುದಿಲ್ಲ ಎಂದು ಹೇಳಿದರು. ಕೇರಳ ಮತ್ತು ಇಡೀ ಪ್ರದೇಶದ ಅಭಿವೃದ್ಧಿಗಾಗಿ ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟದ ಪ್ರಯತ್ನಗಳಿಗೆ ವಿರೋಧ ಪಕ್ಷಗಳು ಅಡ್ಡಿಪಡಿಸುತ್ತವೆ ಎಂದು ಅವರು ಹೇಳಿದರು.
ಚಿತ್ರದುರ್ಗ: ಲೋಕಸಭಾ ಚುನಾವಣಾ ಪ್ರಚಾರದ ವೇಳೆಯಲ್ಲಿ ಸಚಿವ ಜಮೀರ್ ಅಹ್ಮದ್ ಖಾನ್ ಅವರಿಗೆ ಎದೆನೋವು ಕಾಣಿಸಿಕೊಂಡಿದೆ. ಕೂಡಲೇ ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಬಿರು ಬಿಸಿಲ ನಡುವೆಯೂ ಲೋಕಸಭಾ ಚುನಾವಣೆಯ ಪ್ರಚಾರದ ಕಾವೇರಿದೆ. ಚಿತ್ರದುರ್ಗದಲ್ಲಿ ಚುನಾವಣಾ ಪ್ರಚಾರದಲ್ಲಿ ತೊಡಗಿದ್ದಂತ ಸಚಿವ ಜಮೀರ್ ಅಹ್ಮದ್ ಖಾನ್ ಅವರಿಗೆ ಎದೆನೋವು ಕಾಣಿಸಿಕೊಂಡಿದೆ. ಎದೆ ನೋವಿನಿಂದ ಬಳಲುತ್ತಿದ್ದಂತ ಅವರನ್ನು ಕೂಡಲೇ ಸ್ಥಳೀಯ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ಈ ಬಗ್ಗೆ ಮತ್ತಷ್ಟು ಮಾಹಿತಿ ನಿರೀಕ್ಷಿಸಲಾಗಿದೆ.
ನವದೆಹಲಿ: 2024ರ ಲೋಕಸಭಾ ಚುನಾವಣೆಗೂ ಮುನ್ನ ಚುನಾವಣಾ ಆಯೋಗ ಮಹತ್ವದ ಕ್ರಮ ಕೈಗೊಂಡಿದೆ. ಮಾರ್ಚ್ 1, 2024 ರಿಂದ ದೇಶಾದ್ಯಂತ ಪ್ರತಿದಿನ ಸುಮಾರು 100 ಕೋಟಿ ರೂ.ಗಳ (ನಗದು ಸೇರಿದಂತೆ) ಸರಕುಗಳನ್ನು ವಶಪಡಿಸಿಕೊಳ್ಳಲಾಗುತ್ತಿದೆ ಎಂದು ಚುನಾವಣಾ ಆಯೋಗ ಸೋಮವಾರ ತಿಳಿಸಿದೆ. ಚುನಾವಣಾ ಆಯೋಗದ ಪ್ರಕಾರ, ಇದುವರೆಗೆ ಸುಮಾರು 4650 ಕೋಟಿ ಮೌಲ್ಯದ ಸರಕುಗಳನ್ನು ವಶಪಡಿಸಿಕೊಳ್ಳಲಾಗಿದೆ. ನಗದು ಮತ್ತು ಇತರ ಮೌಲ್ಯದ ಮದ್ಯ, ಮಾದಕವಸ್ತುಗಳು ಮತ್ತು ಉಡುಗೊರೆ ವಸ್ತುಗಳನ್ನು ಒಟ್ಟು 395 ಕೋಟಿ ರೂ ಆಗಿದೆ. ಚುನಾವಣಾ ಆಯೋಗದ ಅಧಿಕಾರಿಗಳ ಪ್ರಕಾರ, ಈ ಬಾರಿ ನಗದು ಸೇರಿದಂತೆ 4650 ಕೋಟಿ ರೂ.ಗಳನ್ನು ವಶಪಡಿಸಿಕೊಳ್ಳಲಾಗಿದೆ, ಇದು 2019 ರ ಲೋಕಸಭಾ ಚುನಾವಣೆಯಲ್ಲಿ ವಶಪಡಿಸಿಕೊಂಡ ಒಟ್ಟು ವಶಪಡಿಸಿಕೊಳ್ಳುವಿಕೆಗಿಂತ ಹೆಚ್ಚಾಗಿದೆ. ಚುನಾವಣೆಯಲ್ಲಿ ಅಭ್ಯರ್ಥಿಗಳು ಹಣದ ಶಕ್ತಿಯನ್ನು ಬಳಸುವುದರ ಮೇಲಿನ ಈ ಕಟ್ಟುನಿಟ್ಟಿನ ಕ್ರಮ ಮುಂದುವರಿಯುತ್ತದೆ ಎಂದು ಚುನಾವಣಾ ಆಯೋಗದ ಅಧಿಕಾರಿಗಳು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ. ಎಲ್ಲಾ ರಾಜ್ಯಗಳಲ್ಲಿ ಪಾರದರ್ಶಕ ಚುನಾವಣೆ ನಡೆಸಲು ಮತ್ತು ಹಣದ ಶಕ್ತಿಯ ದುರುಪಯೋಗವನ್ನು ತಡೆಗಟ್ಟಲು…
ಬೆಂಗಳೂರು: ಬೆಂಗಳೂರಿನಲ್ಲಿ ದಾಖಲೆಯಿಲ್ಲದ 2.93 ಕೋಟಿ ಹಣವನ್ನು ಹೆಬ್ಬಗೋಡಿ ಪೊಲೀಸರು ವಶಕ್ಕೆ ತೆಗೆದುಕೊಳ್ಳಲಾಗಿದೆ ಅಂತ ತಿಳಿದು ಬಂದಿದೆ. ಸಿಎಂಎಸ್ ಎಜೆನ್ಸಿಯಲ್ಲಿ ಈ ಹಣವನ್ನು ತೆಗೆದುಕೊಂಡು ಹೋಗಲಾಗುತ್ತಿತು ಎನ್ನಲಾಗಿದೆ. ಖಾಸಗಿ ಹೋಟೆಲ್ ಮುಂದೆ ಈ ವಾಹನ ನಿಂತುಕೊಂಡಿದ್ದ ವೇಳೇಯಲ್ಲಿ ಪೊಲೀಸರಿಗೆ ಅನುಮಾನ ಬಂದ ವೇಳೆಯಲ್ಲಿ ಸರಿಯಾದ ಉತ್ತರ ನೀಡಲಿಲ್ಲ ಎನ್ನಲಾಗಿದೆ. ಸದ್ಯ ವಾಹನದಲ್ಲಿದ್ದವರನ್ನು ಪೊಲೀಸ್ ಠಾಣೆಗೆ ಕರೆದುಕೊಂಡು ಹೋಗಿ ವಿಚಾರಣೆ ನಡೆಸುತ್ತಿದ್ದಾರೆ ಅಂಥ ತಿಳಿದು ಬಂದಿದೆ.
ಶಿವಮೊಗ್ಗ: 11 ಕೆಜಿ ಚಿನ್ನ, ₹54 ಕೋಟಿ ಮನೆ, ₹1 ಕೋಟಿಯ ಕಾರು… ಇದು ಶಿವಮೊಗ್ಗದಿಂದ ಎರಡನೇ ಬಾರಿ ಲೋಕಸಭಾ ಚುನಾವಣೆಗೆ ಕಣದಲ್ಲಿರುವ ಮಾಜಿ ಸಿಎಂ ಬಂಗಾರಪ್ಪರವರ ಮಗಳು ಕನ್ನಡ ಸಿನಿಮಾ ರಂಗದಲ್ಲಿ ದೊಡ್ಡಮನೆ ಕರೆಸಿಕೊಳ್ಳುವ ಡಾ.ರಾಜ್‌ಕುಮಾರ್ ಸೊಸೆ, ಹ್ಯಾಟ್ರಿಕ್ ಹಿರೋ ಶಿವರಾಜ್‌ಕುಮಾರ್ ಅವರ ಹೆಂಡ್ತಿಯ ಆಸ್ತಿಯಾಗಿದೆ. ಇಂದು ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಜಿಲ್ಲಾಧಿಕಾರಿ ಕಚೇರಿಗೆ ಸಲ್ಲಿಸಿರುವ ಆಸ್ತಿ ಅಫಿಡವಿಟ್ ವಿವರವಾಗಿದೆ. 40.04 ಕೋಟಿ ರೂಪಾಯಿ ಆಸ್ತಿ ಘೋಷಿಸಿಕೊಂಡಿರುವ ಗೀತಾ, ಪತಿ ಶಿವರಾಜ್ ಕುಮಾರ್ ಬಳಿ ಇದೆ 49 ಕೋಟಿ ರೂ. ಆಸ್ತಿ ಅಂತ ತಿಳಿಸಿದ್ದಾರೆ.ಒಟ್ಟಾರೆ ಪತಿ-ಪತ್ನಿ ಬಳಿ 89.04 ಕೋಟಿ ರೂ. ಆಸ್ತಿ ಇರುವುದಾಗಿ ಅಫಿಡವಿಟ್‌ನಲ್ಲಿ ತಿಳಿಸಿದ್ದಾರೆ. ಗೀತಾಶಿವರಾಜ್‌ಕುಮಾರ್. ಇದಲ್ಲದೇ 2022-23ರಲ್ಲಿ ತಮ್ಮ ವಾರ್ಷಿಕ ಆದಾಯ 1.48 ಕೋಟಿ ರೂ. ಎಂದು ಗೀತಾ ಶಿವರಾಜ್ ಕುಮಾರ್ ಹೇಳಿದ್ದು, ಪತಿ ಆದಾಯ 2.97 ಕೋಟಿ ರೂ. ಎಂದು ತಿಳಿಸಿದ್ದಾರೆ. ಜೊತೆಗೆ ತಮ್ಮ ಮೇಲೆ ಯಾವುದೇ ಕ್ರಿಮಿನಲ್ ಪ್ರಕರಣವಿಲ್ಲ ಅಂತ ಉಲ್ಲೇಖ ಮಾಡಿದ್ದಾರೆ.…








