Subscribe to Updates
Get the latest creative news from FooBar about art, design and business.
Author: kannadanewsnow07
ಬೆಂಗಳೂರು: ಎಸ್.ಎಸ್.ಎಲ್.ಸಿ. ಪರೀಕ್ಷೆ ವಿದ್ಯಾರ್ಥಿ ಜೀವನದಲ್ಲಿ ನಿರ್ಣಾಯಕ ಹಂತದ ಪರೀಕ್ಷೆಯಾಗಿರುತ್ತದೆ. ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಅತಿ ಹೆಚ್ಚಿನ ಅಂಕಗಳನ್ನು ಮಕ್ಕಳು ಗಳಿಸಬೇಕೆಂದು ಪೆÇೀಷಕರ ಅಭಿಲಾμÉಯಾಗಿರುತ್ತದೆ. ವಿದ್ಯಾರ್ಥಿಗಳ ಸಾಮಥ್ರ್ಯ, ಬುದ್ಧಿಶಕ್ತಿ, ಆಸಕ್ತಿ, ಕ್ರಿಯಾಶೀಲತೆ, ಕಠಿಣ ಪರಿಶ್ರಮ ಇವುಗಳನ್ನು ಗಣನೆಗೆ ತೆಗೆದುಕೊಳ್ಳದೆ ಹೆಚ್ಚು ಅಂಕಗಳನ್ನು ಗಳಿಸಿ ಎಂದು ಅವರ ಮೇಲೆ ಒತ್ತಡವನ್ನು ಪೆÇೀಷಕರು / ಶಿಕ್ಷಕರು ಹಾಕುತ್ತಿರುವುದು ಇತ್ತೀಚಿನ ಸಮಸ್ಯೆಯಾಗಿದೆ. ಇದರಿಂದ ವಿದ್ಯಾರ್ಥಿಗಳು ಅಧ್ಯಯನದ ಕಡೆ ಗಮನಹರಿಸಲಾಗದಿರುವುದು, ಏಕಾಗ್ರತೆಯನ್ನು ಕಳೆದುಕೊಳ್ಳುತ್ತಿರುವುದು ಕಂಡು ಬಂದಿದ್ದು, ಈ ಸಮಸ್ಯೆ ನಿವಾರಣೆಯಾಗದೆ ವಿದ್ಯಾರ್ಥಿ ಪರೀಕ್ಷೆಯನ್ನು ಸಮರ್ಥವಾಗಿ ಬರೆಯಲು ಸಾಧ್ಯವಾಗುವುದಿಲ್ಲ. ಈ ಸಮಸ್ಯೆಗಳ ನಿವಾರಣೆ ಮಾಡಿ, ಪರೀಕ್ಷೆಯನ್ನು ಸಮರ್ಥವಾಗಿ ಬರೆಯಲು ಸ್ಫೂರ್ತಿ ನೀಡಬೇಕಾದ ಆವಶ್ಯಕತೆ ಇದೆ. ಈ ರೀತಿಯ ವಿದ್ಯಾರ್ಥಿಗಳ ಸಮಸ್ಯೆಗಳಿಗೆ ಸ್ಪಂದಿಸಿ ಪರಿಹಾರ ಕಂಡು ಹಿಡಿಯುವ ಹಾಗೂ ಭಯರಹಿತವಾಗಿ ಪರೀಕ್ಷೆ ಬರೆಯಲು ಅತ್ಮಸ್ಥೆರ್ಯ (confidence) ತುಂಬುವ ಸದುದ್ದೇಶದಿಂದ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿ ಹಿಂದಿನ ವರ್ಷಗಳಂತೆ ಈ ವರ್ಷವೂ ‘ಸಹಾಯವಾಣಿ’ (Helpline) ಕೌನ್ಸಿಲಿಂಗ್ (counseling) ಕಾರ್ಯಕ್ರಮವನ್ನು…
ಬೆಂಗಳೂರು: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 5ನೇ ತರಗತಿಯ ವಿದ್ಯಾರ್ಥಿಗಳಿಗೆ ಮಾಚ್ 13 ರಿಂದ 14 ರವರೆಗೆ ಹಾಗೂ 8 ಮತ್ತು 9ನೇ ತರಗತಿ ವಿದ್ಯಾರ್ಥಿಗಳಿಗೆ ಮಾಚ್ 13 ರಿಂದ 16 ರವರೆಗೆ ನಡೆಸಬೇಕಿರುವ ಮೌಲ್ಯಾಂಕನವನ್ನು ಮುಂದೂಡಿದೆ. ರಾಜ್ಯ ಪಠ್ಯಕ್ರಮ ಅನುಸರಿಸುತ್ತಿರುವ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ 5, 8 ಮತ್ತು 9ನೇ ತರಗತಿ ವಿದ್ಯಾರ್ಥಿಗಳಿಗೆ 2023-24ನೇ ಸಾಲಿನ ಸಂಕಲನಾತ್ಮಕ ಮೌಲ್ಯಮಾಪನ-2 ಮೌಲ್ಯಾಂಕನವನ್ನು ನಡೆಸುವ ಸಂಬಂಧ ಹೈಕೋರ್ಟ್ ಏಕಸದಸ್ಯ ಪೀಠವು ರದ್ದುಪಡಿಸಿ ನೀಡಿದ್ದ ತೀರ್ಪಿಗೆ ವಿಭಾಗೀಯ ಪೀಠವು ಮಧ್ಯಂತರ ತಡೆಯಾಜ್ಞೆ ನೀಡಿತ್ತು. ಸದರಿ ವಿಭಾಗೀಯ ಪೀಠವು ನೀಡಿದ್ದ ಮಧ್ಯಂತರ ತಡೆಯಾಜ್ಞೆಯನ್ನು ಸರ್ವೋಚ್ಛ ನ್ಯಾಯಾಲಯವು ರದ್ದುಪಡಿಸಿರುತ್ತದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿಯ ಅಧ್ಯಕ್ಷರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅವಿನಾಶ್ ಆರ್ ಭೀಮಸಂದ್ರ ನವದೆಹಲಿ: ಲೋಕಸಭಾ ಚುನಾವಣೆ 2024 ಗಾಗಿ ಭಾರತೀಯ ಜನತಾ ಪಕ್ಷ (ಬಿಜೆಪಿ) ತನ್ನ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ.ಹಲವು ಸಂಸದರಿಗೆ ಈ ಬಾರಿಯ ಪಟ್ಟಿಯಲ್ಲಿ ಟಿಕೆಟ್ ಮಿಸ್ ಆಗಿದೆ.ಹಾಗಾದ್ರೇ ಯಾರು ಎಲ್ಲಿಂದ ಎಲ್ಲಿಗೆಎನ್ನುವುದನ್ನು ನೋಡುವುದಾದ್ರೆ ತುಮಕೂರು ವಿ ಸೋಮಣ್ಣ ಮೈಸೂರು ಯಾದ್‌ವೀರ್ ದ. ಕನ್ನಡ ಬ್ರೀಜೇಶ್ ಚೌಟ ಬೆಂಗಳೂರು ಗ್ರಾಮಾಂತರ : ಸಿ.ಎನ್ ಮಂಜುನಾಥ್ ಬೆಂಗಳೂರು ಕೇಂದ್ರ -ಪಿ.ಸಿಮೋಹನ್ ಬೆಂಗಳೂರು ದ: ತೇಜಸ್ವಿ ಸೂರ್ಯ ಬೆಂಗಳೂರು ಉತ್ತರ; ಶೋಭಾ ದಾವಣಗೆರೆ: ಗಾಯತ್ರಿ ಸಿದ್ದೇಶ್ವರ ವಿಜಯಪುರ: ರಮೇಶ್ ಜಿಗಜಿಗಣಿ ಹಾವೇರಿ: ಮಾಜಿ ಸಿಎಂ ಬಸವರಾಜಬೊಮ್ಮಾಯಿ ಧಾರವಾಡ: ಪ್ರಹ್ಲಾದ್ ಜೋಶಿ ಚಿಕ್ಕೋಡಿ-ಅಣ್ಣ ಸಾಹೇಬ್ ಜೊಲ್ಲೆ ಬಾಗಲಕೋಟೆ-ಪಿ.ಸಿ ಗೌದ್ದಿಗೆಗದ್ದರ್ ಕಲಬುರಗಿ-ಉಮೇಶ್ ಜಾಧವ್ ಬೀದರ್ -ಭಗಂವಂಥ್ ಕೂಬ ಕೊಪ್ಪಳ-ಬಸವರಾಜ ಕ್ಯಾವತರ್ ಬಳ್ಳಾರಿ ಶ್ರೀರಾಮುಲು ಉಡುಪಿ-ಚಿಕ್ಕಮಗಳೂರು-ಕೋಟಾ ಶ್ರೀನಿವಾಸ ಚಾಮರಾಜನಗರ-ಎಸ್ ಬಾಲರಾಜ್
ನವದೆಹಲಿ: ಪೌರತ್ವ (ತಿದ್ದುಪಡಿ) ಕಾಯ್ದೆ, 2019 (ಸಿಎಎ -2019) ಅಡಿಯಲ್ಲಿ ಭಾರತೀಯ ಪೌರತ್ವಕ್ಕಾಗಿ ಅರ್ಜಿದಾರರಿಗೆ ಸಹಾಯ ಮಾಡಲು ಸಹಾಯವಾಣಿ ಸಂಖ್ಯೆಗಳನ್ನು ಶೀಘ್ರದಲ್ಲೇ ಪ್ರಾರಂಭಿಸಲಾಗುವುದು ಎಂದು ಗೃಹ ಸಚಿವಾಲಯ (ಎಂಎಚ್ಎ) ಬುಧವಾರ ತಿಳಿಸಿದೆ. ಎಂಎಚ್ಎ ಪ್ರಕಾರ, ಅರ್ಜಿದಾರರು ಉಚಿತವಾಗಿ ಕರೆ ಮಾಡುವ ಮೂಲಕ ಸಿಎಎ -2019 ಗೆ ಸಂಬಂಧಿಸಿದ ಮಾಹಿತಿಯನ್ನು ಪಡೆಯಲು ಸಾಧ್ಯವಾಗುತ್ತದೆ. “ಸಿಎಎ -2019 ರ ಅಡಿಯಲ್ಲಿ ಭಾರತೀಯ ಪೌರತ್ವಕ್ಕಾಗಿ ಅರ್ಜಿದಾರರಿಗೆ ಸಹಾಯ ಮಾಡಲು ಸಹಾಯವಾಣಿ ಸಂಖ್ಯೆಯನ್ನು ಶೀಘ್ರದಲ್ಲೇ ಪ್ರಾರಂಭಿಸಲಾಗುವುದು. ಅರ್ಜಿದಾರರು ಭಾರತದ ಯಾವುದೇ ಭಾಗದಿಂದ ಉಚಿತವಾಗಿ ಕರೆ ಮಾಡುವ ಮೂಲಕ ಸಿಎಎ -2019 ಗೆ ಸಂಬಂಧಿಸಿದ ಮಾಹಿತಿಯನ್ನು ಪಡೆಯಲು ಸಾಧ್ಯವಾಗುತ್ತದೆ. ಈ ಸೇವೆಯು ಬೆಳಿಗ್ಗೆ 8 ರಿಂದ ರಾತ್ರಿ 8 ರವರೆಗೆ ಲಭ್ಯವಿರುತ್ತದೆ” ಎಂದು ಎಂಎಚ್ಎ ಎಕ್ಸ್ನಲ್ಲಿ ಪೋಸ್ಟ್ ಮಾಡಿದೆ.ಅಂತಹ ವ್ಯಕ್ತಿಗಳಿಗೆ ಪುನರ್ವಸತಿ ಮತ್ತು ಪೌರತ್ವಕ್ಕೆ ಕಾನೂನು ಅಡೆತಡೆಗಳನ್ನು ತೆಗೆದುಹಾಕುವ ಸಿಎಎ ನಿಯಮಗಳು, 2024 ಅನ್ನು ಎಂಎಚ್ಎ ಸೋಮವಾರ ಅಧಿಸೂಚನೆ ಹೊರಡಿಸಿದೆ ಮತ್ತು ದಶಕಗಳಿಂದ ಬಳಲುತ್ತಿರುವ ನಿರಾಶ್ರಿತರಿಗೆ ಗೌರವಯುತ ಜೀವನವನ್ನು…
ಉಡುಪಿ: ಕರ್ನಾಟಕ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳನ್ನು ಕೇವಲ ಪ್ರಚಾರಕ್ಕಾಗಿ ಜಾರಿಗೆ ತಂದಿಲ್ಲ. ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳು ನಿಲ್ಲುವುದಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಆರ್ ಹೆಬ್ಬಾಳ್ಕರ್ ಹೇಳಿದ್ದಾರೆ. https://kannadanewsnow.com/kannada/commission-will-disclose-all-details-about-electoral-bonds-in-due-course-cec-rajeev-kumar/ https://kannadanewsnow.com/kannada/what-did-deve-gowda-say-and-do-cm-siddaramaiah-explains-in-deve-gowdas-words/ https://kannadanewsnow.com/kannada/big-news-silent-triple-increase-in-rural-revenue-additional-tax-collected-from-people/ ಅವರು ಉಡುಪಿಯ ಕುಂಜಿಬೆಟ್ಟುವಿನ ಲಕ್ಷ್ಮೀ ನಾರಾಯಣ ರಾವ್ ಕ್ರೀಡಾಂಗಣದಲ್ಲಿ ಬುಧವಾರ ನಡೆದ ಗ್ಯಾರಂಟಿ ಯೋಜನೆಗಳ ಸಮಾವೇಶ ಹಾಗೂ ಜಿಲ್ಲೆಯ ವಿವಿಧ ಕಾಮಗಾರಿಗಳ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದರು. ಇದೇ ವೇಳೆ ಅವರು ಮಾತನಾಡುತ್ತ, ಐದು ಗ್ಯಾರಂಟಿ ಯೋಜನೆಗಳು ರಾಜ್ಯದ ಜನತೆಯ ಸಂಜೀವಿನಿಯಾಗಿವೆ. ಚುನಾವಣೆ ಪ್ರಣಾಳಿಕೆಯಲ್ಲಿ ಘೋಷಿಸಿದಂತೆ, ಐದಕ್ಕೆ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿ, ನಮ್ಮ ಸರ್ಕಾರವು ನುಡಿದಂತೆ ನಡೆದಿದೆ ಎಂದು ಹೇಳಿದರು.
ಚಿಕ್ಕಬಳ್ಳಾಪುರ: ಕೇಂದ್ರದ ಆರ್ಥಿಕ ನೀತಿಯಿಂದ ವಿಪರೀತ ಬೆಲೆ ಏರಿಕೆ ಆಯ್ತು. ಇದರಿಂದ ಉಂಟಾದ ಜನರ ಸಂಕಷ್ಟ ಕಡಿಮೆ ಮಾಡಲು ನಾವು ಐದು ಗ್ಯಾರಂಟಿ ಯೋಜನೆ ಜಾರಿ ಮಾಡಿದೆವು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಚಾಲನೆ ನೀಡಿ, ಸರ್ಕಾರದ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶದಲ್ಲಿ ಅತ್ಯಂತ ಸಂತೋಷದಿಂದ ಭಾಗವಹಿಸಿದ್ದೇನೆ. ಜನರ ಜೇಬಿಗೆ, ಖಾತೆಗಳಿಗೆ ನೇರವಾಗಿ ಹಣ ಹಾಕಿ ನಮ್ಮ ನಾಡಿನ ಜನರ, ಅವರ ಕುಟುಂಬದ ಸಂಕಷ್ಟಕ್ಕೆ ಸ್ಪಂದಿಸಿದೆವು: ಸಿ.ಎಂ. ಸಿದ್ದರಾಮಯ್ಯ ವಿವರಿಸಿದರು. ರಾಜ್ಯದ ಜನರನ್ನು ಮೂರ್ಖರನ್ನಾಗಿಸಲು ಹೊರಟ ಬಿಜೆಪಿಯವರೇ ನಾಡಿನ ಜನರ ಎದುರು ಮೂರ್ಖರಾಗಿದ್ದಾರೆ. ಒಂದೂ ಗ್ಯಾರಂಟಿ ಯೋಜನೆ ಜಾರಿ ಆಗಲು ಸಾಧ್ಯವೇ ಇಲ್ಲ ಎಂದು ಜನರನ್ನು ಬಕ್ರಾ ಮಾಡಲು ಹೋದರು. ನಾವು ಐದೂ ಗ್ಯಾರಂಟಿಗಳನ್ನು ಕೇವಲ ಎಂಟು ತಿಂಗಳಲ್ಲಿ ಜಾರಿ ಮಾಡಿದೆವು. ಈಗ ನಾಡಿನ ಜನರ ಎದುರು ಬಿಜೆಪಿಯವರು ಪರಮ ಮೂರ್ಖರಾಗಿದ್ದಾರೆ ಎಂದರು. ಮೋದಿ ಅವರ ಸುಳ್ಳುಗಳಿಗೆ ಮಿತಿಯೇ ಇಲ್ಲ. ವಿದೇಶದಿಂದ ಕಪ್ಪು ಹಣ ತಂದು…
ವರದಿ: ರಾಮಸಮುದ್ರ ಎಸ್.ವೀರಭದ್ರಸ್ವಾಮಿ. ಚಾಮರಾಜನಗರ: ಕ್ಷೇತ್ರ ಶಿಕ್ಷಣಾದಿಕಾರಿ ಸೇರಿದಂತೆ ಇಬ್ಬರು ಲೋಕಾಯುಜ್ತರು ಬೀಸಿದ ಬಲೆಗೆ ಬಿದ್ದಿದ್ದಾರೆ.ಹನೂರು ಕ್ಷೇತ್ರ ಶಿಕ್ಷಣಾದಿಕಾರಿ ಶಿವರಾಜು ಹಾಗೂ ಸಿರ‍್ಪಿ ಮುನಿರಾಜು ಎಂಬುವವರೆ ಲೋಕಾಯುಕ್ತ ಖೆಡ್ಡಕ್ಕೆ ಬಿದ್ದವರಾಗಿದ್ದಾರೆ. ಪ್ರಸ್ತುತ ಮೈಸೂರಲ್ಲಿ ವಾಸವಿರುವ ನಿವೃತ್ತ ಶಿಕ್ಷಕ ವಿಜಯ್ ಕುಮಾರ್ ಎಂಬುವವರಿಂದ 139 ದಿನಗಳ ಗಳಿಕೆ ರಜಾ ನಗದೀಕರಣಕ್ಕಾಗಿ 15 ಸಾವಿರ ಬೇಡಿಕೆ ಇಟ್ಟಿಧ್ದರೆನ್ನಲಾಗಿದೆ. ಇಂದು ಹಣವನ್ನ ನೀಡುತ್ತಿದ್ದ ಸಂರ‍್ಭದಲ್ಲಿ ಹಣ ಸಮೇತ ಜಪ್ತಿ ಮಾಡಿ ತನಿಖೆ ಮುಂದುವರೆಸಿದ್ದಾರೆ.ದಾಳಿ ಕರ‍್ಯದಲ್ಲಿ ಲೋಕಾಯುಕ್ತ ಪೊಲೀಸ್ ಇನ್ಸ್ ಪೆಕ್ಟರ್ ಲೋಹಿತ್ ಕುಮಾರ್ ಹಾಗೂ ತಂಡವರು ಭಾಗವಹಿಸಿದ್ದರು.
ಶಿವಮೊಗ್ಗ: ಜನರನ್ನು ಕಚೇರಿಯಿಂದ ಕಚೇರಿಗೆ ಅಲೆಸದೇ ಒಂದೇ ಸೂರಿನಡಿ ಅವರ ಸಮಸ್ಯೆಗಳನ್ನು ಬಗೆಹರಿಸುವ ಉದ್ದೇಶದಿಂದ ಆಡಳಿತ ಸೌಧ ನಿರ್ಮಿಸಲಾಗಿದ್ದು, ಅಧಿಕಾರಿಗಳು ಉತ್ತಮವಾಗಿ ಸ್ಪಂದಿಸಬೇಕು ಎಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತೆ ಇಲಾಖೆ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಮಧು ಬಂಗಾರಪ್ಪ ನುಡಿದರು. ಕಂದಾಯ ಇಲಾಖೆ ಹಾಗೂ ಲೋಕೋಪಯೋಗಿ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಇಂದು ಸಾಗರ ತಾಲ್ಲೂಕಿನ ನೂತನ ಆಡಳಿತ ಸೌಧ ಕಟ್ಟಡವನ್ನು ಉದ್ಘಾಟಿಸಿ ಅವರು ಮಾತನಾಡಿದರು.ಸಾರ್ವಜನಿಕರು ತಮ್ಮ ಕೆಲಸ ಕಾರ್ಯಗಳಿಗಾಗಿ ಪದೇ ಪದೇ ಸರ್ಕಾರಿ ಕಚೇರಿ ಅಲೆಯುವುದನ್ನು ಅಧಿಕಾರಿಗಳು ತಪ್ಪಿಸಬೇಕು. ಜನರ ಸಮಸ್ಯೆಗಳನ್ನು ಅರ್ಥ ಮಾಡಿಕೊಂಡು ಪರಿಹಾರ ಒದಗಿಸಬೇಕು ಎಂದರು. ಸರ್ಕಾರ ರಚನೆ ಆಗುವ ಪೂರ್ವದಲ್ಲಿ ನೀಡಲಾಗಿದ್ದ ಗ್ಯಾರಂಟಿ ಯೋಜನೆಗಳನ್ನು ಸರ್ಕಾರ ಯಶಸ್ವಿಯಾಗಿ ಜಾರಿಗೆ ತಂದಿದೆ. ಸರ್ಕಾರ ನುಡಿದಂತೆ ನಡೆದು ತನ್ನ ಮಾತನ್ನು ಉಳಿಸಿಕೊಂಡಿದೆ. ಇನ್ನು ಮುಂದೆ ಅಭಿವೃದ್ದಿ ಕೆಲಸಗಳು ವೇಗ ಪಡೆದುಕೊಳ್ಳಲಿವೆ.ಸರ್ಕಾರ 57 ಸಾವಿರ ಕೋಟಿಯನ್ನು ಬಡವರ ಮಡಿಲಿಗೆ ಹಾಕಿದೆ. ಬಡವರಿಗೆ ಹಣ ನೀಡಿದರೆ ಅವರು ಖರ್ಚು ಮಾಡು ಪುನಃ…
ಉಡುಪಿ: ಬೆಲೆಏರಿಕೆಯಿಂದ ಕಷ್ಟದಲ್ಲಿರುವ ಜನರಿಗೆ ಆರ್ಥಿಕ ಬಲ ನೀಡಲು ಗ್ಯಾರಂಟಿಗಳನ್ನು ನೀಡುವ ಮೂಲಕ ಬಡವರ ಪರ ಕೆಲಸ ಮಾಡುವುದು ಕಾಂಗ್ರೆಸ್ ಸರ್ಕಾರದ ಗುರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಉಡುಪಿಯಲ್ಲಿ ಪಂಚ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶ ಹಾಗೂ ಅಭಿವೃದ್ಧಿ ಕಾಮಾಗಾರಿಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನೆ ನೆರವೇರಿಸಿ ಮಾತನಾಡಿದರು. 2023 ರ ಜೂನ್ 11 ಕ್ಕೆ ಶಕ್ತಿ ಯೋಜನೆಗೆ ಚಾಲನೆ ನೀಡಲಾಯಿತು. ಉಡುಪಿ ಜಿಲ್ಲೆಯಲ್ಲಿ 87 ಲಕ್ಷ ಮಹಿಳೆಯರು 33 ಕೋಟಿ ರೂ.ಗಳ ವೆಚ್ಚದಲ್ಲಿ ಉಚಿತ ಪ್ರಯಾಣ ಮಾಡಿದ್ದಾರೆ . ಗೃಹಜ್ಯೋತಿ ಯೋಜನೆಯಡಿ 311652 ಜನ ಲಾಭ ಪಡೆಯುತ್ತಿದ್ದು, ಇದಕ್ಕಾಗಿ 114 ಕೋಟಿ ರೂ. ವ್ಯಯಿಸಲಾಗುತ್ತಿದೆ. ಅನ್ನಭಾಗ್ಯ 766000 ಜನರಿಗೆ ಉಚಿತ ಅಕ್ಕಿ ನೀಡಲಾಗುತ್ತಿದೆ. ರಾಜ್ಯದ ಬಡವರಿಗೆ ಅಕ್ಕಿ ನೀಡಲು ನಿರಾಕರಿಸಿದ ಬಿಜೆಪಿಯ ಕೇಂದ್ರ ಸರ್ಕಾರ ಎಂದಿಗೂ ಸಮಾಜಿಕ ನ್ಯಾಯದ ಪರವಾಗಿ ಇಲ್ಲ. ಕಾಂಗ್ರೆಸ್ ಪಕ್ಷ ಮಾತ್ರ ಬಡವರ ಪರ ಕೆಲಸ ಮಾಡುತ್ತಿದೆ. ಗೃಹಲಕ್ಷ್ಮಿ ಯೋಜನೆಯಡಿ ಮಹಿಳೆಯರಿಗೆ ಆರ್ಥಿಕ…
ಬೆಂಗಳೂರು: ಕಂದಾಯ ಇಲಾಖೆ ಸಾರ್ವಜನಿಕರಿಂದ ಎಲ್ಲಾ ಹಂತದಲ್ಲೂ ಅತಿಹೆಚ್ಚು ಅವಲಂಭನೆ ಹೊಂದಿದ ಇಲಾಖೆಯಾಗಿದ್ದು, ನೌಕರರು ಜನರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ನೀಡುವ ಯೋಜನಾ ನೀಲಿನಕ್ಷೆ ಹೊಂದಿರಬೇಕು ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಕಿವಿಮಾತು ಹೇಳಿದರು. ಬುಧವಾರ ವಿಧಾನಸೌಧದ ಬ್ಯಾಂಕ್ವೆಂಟ್ ಹಾಲ್‌ನಲ್ಲಿ ಭೂಮಾಪನ, ಕಂದಾಯ ವ್ಯವಸ್ಥೆ ಮತ್ತು ಭೂದಾಖಲೆಗಳ ಇಲಾಖೆ ಹಾಗೂ ಕಂದಾಯ ಆಯುಕ್ತಾಲಯ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಹೊಸದಾಗಿ ಆಯ್ಕೆಯಾದ 1,000 ಪರವಾನಗಿ ಭೂಮಾಪಕರುಗಳಿಗೆ ಪರವಾನಗಿ ಪ್ರಮಾಣ ಪತ್ರ ಹಾಗೂ ಗ್ರಾಮ ಆಡಳಿತಾಧಿಕಾರಿಗಳಿಗೆ ಲ್ಯಾಪ್‌ಟಾಪ್ ವಿತರಿಸಿ ಅವರು ಮಾತನಾಡಿದರು. ರಾಜ್ಯದಲ್ಲಿ ಪ್ರತಿಯೊಂದು ಮನೆಗೂ ಸಂಪರ್ಕವಿರುವ ಏಕೈಕ ಇಲಾಖೆ ಕಂದಾಯ ಇಲಾಖೆ. ಜಾತಿ-ಆದಾಯ ಪ್ರಮಾಣ ಪತ್ರದಿಂದ ಜಮೀನು ದಾಖಲೆ, ಮಾರಾಟ- ಖರೀದಿವರೆಗೆ ನೇರ ಅಥವಾ ಪರೋಕ್ಷವಾಗಿ ಜನ ಸಾಮಾನ್ಯರು ಕಂದಾಯ ಇಲಾಖೆಯನ್ನು ಅವಲಂಭಿಸಿರುತ್ತಾರೆ. ಕಂದಾಯ ಇಲಾಖೆ ಎಲ್ಲಾ ಇಲಾಖೆಗಳ ಮಾತೃ ಇಲಾಖೆಯಾಗಿದ್ದು, ನೌಕರರೂ ಸಹ ಜನರಿಗೆ ಮಾತೃ ಹೃದಯದಿಂದಲೇ ಸ್ಪಂದಿಸಬೇಕು. ಎಷ್ಟೇ ಕೆಲಸದ ಒತ್ತಡ ಇದ್ದರೂ ಜನರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ನೀಡುವ…