Subscribe to Updates
Get the latest creative news from FooBar about art, design and business.
Author: kannadanewsnow07
ಮಡಿಕೇರಿ: ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ವಸತಿ ಶಾಲೆ/ ಕಾಲೇಜುಗಳಿಗೆ 2025-26 ನೇ ಶೈಕ್ಷಣಿಕ ಸಾಲಿಗೆ ಖಾಲಿ ಇರುವ ಹುದ್ದೆಗಳಿಗೆ ಎದುರಾಗಿ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ತಾತ್ಕಾಲಿಕವಾಗಿ ಅತಿಥಿ ಶಿಕ್ಷಕರು/ ಉಪನ್ಯಾಸಕರ ಹುದ್ದೆ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ. ಅದರಂತೆ ಅರ್ಹ ಅಭ್ಯರ್ಥಿಗಳು ಜೂನ್ 03 ರೊಳಗೆ ಸೂಕ್ತ ದಾಖಲೆಗಳೊಂದಿಗೆ ವಸತಿ ಶಾಲಾ-ಕಾಲೇಜುಗಳಲ್ಲಿ ಅರ್ಜಿ ಪಡೆಯಬಹುದಾಗಿದೆ. ಅತಿಥಿ ಶಿಕ್ಷಕರು/ ಉಪನ್ಯಾಸಕರನ್ನು ಆಯಾಯ ಹುದ್ದೆಗೆ ಸಂಘದ ವೃಂದ ಮತ್ತು ನೇಮಕಾತಿ ನಿಯಮಗಳಲ್ಲಿ ನಿಗದಿಪಡಿಸಿದ ವಿದ್ಯಾರ್ಹತೆ ಹಾಗೂ ಬೋಧನಾ ಕೌಶಲ್ಯ, ಸೇವಾ ಅನುಭವ, ಆಂಗ್ಲ ಭಾಷಾ ಸಂವಹನ ಕೌಶಲ್ಯತೆಯನ್ನು ಪರಿಗಣಿಸಿ ಮೆರಿಟ್ ಆಧಾರದಲ್ಲಿ ಆಯ್ಕೆ ಮಾಡಿಕೊಳ್ಳಲಾಗುವುದು. ಅತಿಥಿ ಶಿಕ್ಷಕರ ಹುದ್ದೆಗೆ ಆಯ್ಕೆ ಮಾಡಿಕೊಳ್ಳುವ ಅಭ್ಯರ್ಥಿಗಳು ಕಡ್ಡಾಯವಾಗಿ ಟಿಇಟಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುವವರಿಗೆ ಮೊದಲನೆ ಆದ್ಯತೆ. ಒಂದು ವೇಳೆ ಅಂತಹ ಅಭ್ಯರ್ಥಿಗಳು ಲಭ್ಯವಿಲ್ಲದಿದ್ದಲ್ಲಿ ಮೆರಿಟ್ ಆಧಾರದ ಮೇಲೆ ಪರಿಗಣಿಸಲಾಗುವುದು. ನೇರ ನೇಮಕಾತಿ ಮೂಲಕ ಖಾಯಂ ಶಿಕ್ಷಕ/ ಉಪನ್ಯಾಸಕರು ಅಥವಾ ವರ್ಗಾವಣೆ/ ನಿಯೋಜನೆ ಆದೇಶದ ಮೇರೆಗೆ ಕರ್ತವ್ಯಕ್ಕೆ ಹಾಜರಾದಲ್ಲಿ…
ನವದೆಹಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿಯ ಮೂಲಕ “ಭಾರತೀಯರನ್ನು ವಿಭಜಿಸಲು” ಬಯಸಿದ್ದ ಭಯೋತ್ಪಾದಕರಿಗೆ ಭಾರತ ಸೂಕ್ತ ಉತ್ತರ ನೀಡಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಗುರುವಾರ ಹೇಳಿದ್ದಾರೆ.
ಬೆಂಗಳೂರು: ಸೈನಿಕರು, ರೈತರು, ವೈದ್ಯರು, ಶಿಕ್ಷಕರು ನಮ್ಮ ತಂದೆ ತಾಯಿಯಷ್ಟೇ ಸ್ಮರಣೀಯರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು. ಇಂದು ಟೌನ್ ಹಾಲ್ನಲ್ಲಿ ಆಯೋಜಿಸಿದ್ದ ಬೃಹತ್ “ಜೈ ಹಿಂದ್ ಸಭಾ” ಕಾರ್ಯಕ್ರಮದಲ್ಲಿ ಭಾರತೀಯ ಯೋಧರ ಪರಂಪರೆಯನ್ನು ಶ್ಲಾಘಿಸಿ, ನಿವೃತ್ತ ಯೋಧ ಸಮೂಹವನ್ನು ಹಾಗೂ ಹುತಾತ್ಮ ಯೋಧರ ಕುಟುಂಬದ ಸದಸ್ಯರನ್ನು ಸನ್ಮಾನಿಸಿ ಪುರಸ್ಕರಿಸಿ ಮಾತನಾಡಿದ ಅವರು, ತ್ಯಾಗ ಮನೋಭಾವದಿಂದ ಯೋಧರು ದೇಶ ರಕ್ಷಣೆಯಲ್ಲಿ ತೊಡಗಿದ್ದಾರೆ. ದೇಶದ ರಕ್ಷಣೆ ಕೇವಲ ಯೋಧರ ಜವಾಬ್ದಾರಿಯಲ್ಲ 140 ಕೋಟಿ ಭಾರತೀಯರ ಜವಾಬ್ದಾರಿ ಎಂದರು. ಶಿಷ್ಟ ರಕ್ಷಣೆ-ದುಷ್ಟರ ಸಂಹಾರದ ವಿಚಾರದಲ್ಲಿ ಭಾರತ ತನ್ನ ಇತಿಹಾಸದಲ್ಲೇ ಯಾವತ್ತೂ ರಾಜಿ ಆಗಿಲ್ಲ. ಮುಂದೆಯೂ ಆಗುವುದಿಲ್ಲ. ಇದು ಪ್ರತಿಯೊಬ್ಬ ಭಾರತೀಯರ ಬದ್ಧತೆ ಎಂದು ಶ್ಲಾಘಿಸಿದರು. ಯೋಧರ ಕ್ಯಾಂಟೀನ್ಗೆ ಅಬಕಾರಿ ಸುಂಕ ಹಾಕುವುದಿಲ್ಲ ಎಂದು ಇದೇ ಸಂದರ್ಭದಲ್ಲಿ ಸಿಎಂ ಘೋಷಣೆ ಮಾಡಿದರು. ನಿವೃತ್ತ ಯೋಧರ ಕಲ್ಯಾಣಕ್ಕೆ ಅಗತ್ಯ ಕ್ರಮಗಳನ್ನೆಲ್ಲಾ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಬೆಂಗಳೂರು: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ವತಿಯಿಂದ 2025ನೇ ಮೇ 29 ರಂದು ಬೆಳಿಗ್ಗೆ 11.00 ಗಂಟೆಗೆ ಕರ್ನಾಟಕ ಪಬ್ಲಿಕ್ ಶಾಲೆ (ಕೆ.ಪಿ.ಎಸ್), ಪಟೇಲ್ ಮುನಿಚಿನ್ನಪ್ಪ ಪ್ರೌಢಶಾಲೆ, ಹೊಸೂರು ರಸ್ತೆ, ಅಯ್ಯಪ್ಪ ಗಾರ್ಡನ್, ಆಡುಗೋಡಿ, ದಕ್ಷಿಣ ವಲಯ-3, ಬೆಂಗಳೂರು ಇಲ್ಲಿ “ಶಾಲಾ ಪ್ರಾರಂಭೋತ್ಸವ-2025-2026 ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮದ ಉದ್ಘಾಟನೆಯನ್ನು ಸನ್ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ನೆರವೇರಿಸಲಿದ್ದು, ವಿಶೇಷ ಆಹ್ವಾನಿತರಾಗಿ ಮಾನ್ಯ ಕೇಂದ್ರ ಹಣಕಾಸು ಹಾಗೂ ಕಾರ್ಪೋರೇಟ್ ವ್ಯವಹಾರಗಳ ಸಚಿವರಾದ ಶ್ರೀಮತಿ ನಿರ್ಮಲಾ ಸೀತಾರಾಮನ್ ಹಾಗೂ ಮಾನ್ಯ ಕೇಂದ್ರ ಸೂಕ್ಷ್ಮ, ಅತಿ ಸೂಕ್ಷ್ಮ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಕಾರ್ಮಿಕ ಮತ್ತು ಉದ್ಯೋಗ ಇಲಾಖೆಯ ರಾಜ್ಯ ಸಚಿವರಾದ ಕು. ಶೋಭಾ ಕರಂದ್ಲಾಜೆ ಅವರು ಆಗಮಿಸಲಿದ್ದು, ಮಾನ್ಯ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಘನ ಉಪಸ್ಥಿತರಿರುವರು. ಕಾರ್ಯಕ್ರಮದಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವರಾದ ಮಧು ಬಂಗಾರಪ್ಪ ಅವರು ಪ್ರಾಸ್ತಾವಿಕವಾಗಿ ಮಾತನಾಡಲಿದ್ದು, ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಅಧ್ಯಕ್ಷತೆಯನ್ನು ವಹಿಸಲಿರುವರು. ಕಾರ್ಯಕ್ರಮದಲ್ಲಿ 2025ರ ಎಸ್.ಎಸ್.ಎಲ್.ಸಿ…
ನವದೆಹಲಿ: ಇರಾನ್ನಲ್ಲಿ ಮೂವರು ಭಾರತೀಯರು ನಾಪತ್ತೆಯಾಗಿದ್ದಾರೆ ಎನ್ನಲಾಗಿದ್ದು, ಈ ನಡುವೆ ಕೇಂದ್ರ ಸರ್ಕಾರ ಟೆಹ್ರಾನ್ನೊಂದಿಗೆ ಸಮಸ್ಯೆಯನ್ನು ತಿಳಿಸಿದ್ದು, ಇದಲ್ಲದೇ ನಾಪತ್ತೆಯಾಗಿರುವ ಕುಟುಂಬಗಳೊಂದಿಗೆ ಸಂಪರ್ಕದಲ್ಲಿದೆ ಅಂತ ತಿಳಿದು ಬಂದಿದೆ. ಭಾರತೀಯ ರಾಯಭಾರ ಕಚೇರಿ ಬಿಡುಗಡೆ ಮಾಡಿದ ಹೇಳಿಕೆಯ ಪ್ರಕಾರ, ಕಾಣೆಯಾದ ವ್ಯಕ್ತಿಗಳ ಕುಟುಂಬ ಸದಸ್ಯರು ತಮ್ಮ ಸಂಬಂಧಿಕರ ಹಠಾತ್ ಕಣ್ಮರೆ ಬಗ್ಗೆ ಕಳವಳ ವ್ಯಕ್ತಪಡಿಸಿ ರಾಯಭಾರ ಕಚೇರಿಯನ್ನು ಸಂಪರ್ಕಿಸಿದ್ದಾರೆ. “ಇರಾನ್ಗೆ ಪ್ರಯಾಣಿಸಿದ ನಂತರ 3 ಭಾರತೀಯ ನಾಗರಿಕರ ಕುಟುಂಬ ಸದಸ್ಯರು ತಮ್ಮ ಸಂಬಂಧಿಕರು ಕಾಣೆಯಾಗಿದ್ದಾರೆ ಎಂದು ಭಾರತೀಯ ರಾಯಭಾರ ಕಚೇರಿಗೆ ತಿಳಿಸಿದ್ದಾರೆ” ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ. ಇದಕ್ಕೆ ಪ್ರತಿಕ್ರಿಯೆಯಾಗಿ, ರಾಯಭಾರ ಕಚೇರಿಯು ಇರಾನಿನ ಸರ್ಕಾರದೊಂದಿಗೆ “ಈ ವಿಷಯವನ್ನು ಬಲವಾಗಿ ಕೈಗೆತ್ತಿಕೊಂಡಿದೆ” ಮತ್ತು ಅವರ ಇರುವಿಕೆಯ ಬಗ್ಗೆ ತಕ್ಷಣದ ಮತ್ತು ಸಂಪೂರ್ಣ ತನಿಖೆ ನಡೆಸಬೇಕೆಂದು ಒತ್ತಾಯಿಸಿದೆ.
ದೇಶದ ರೈತರಿಗೆ ಕೇಂದ್ರ ಸರ್ಕಾರದಿಂದ ಬಿಗ್ಗಿಫ್ಟ್: ಖಾರಿಫ್ ಬೆಳೆಗೆ 2.07 ಲಕ್ಷ ಕೋಟಿ ರೂ.ಗಳ ಕನಿಷ್ಠ ಬೆಂಬಲ ಬೆಲೆ..!
ನವದೆಹಲಿ: ರೈತರಿಗೆ ಪ್ರಮುಖ ಉತ್ತೇಜನ ನೀಡುವ ನಿಟ್ಟಿನಲ್ಲಿ, ಕೇಂದ್ರ ಸರ್ಕಾರವು 2025-26 ರ ಖಾರಿಫ್ ಋತುವಿಗೆ 2.07 ಲಕ್ಷ ಕೋಟಿ ರೂ.ಗಳ ಕನಿಷ್ಠ ಬೆಂಬಲ ಬೆಲೆ (MSP) ಪ್ಯಾಕೇಜ್ ಅನ್ನು ಅನುಮೋದಿಸಿದೆ. ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿ (CCEA) ಈ ನಿಟ್ಟಿನಲ್ಲಿ ನಿರ್ಧಾರ ತೆಗೆದುಕೊಂಡಿದೆ. ಹೊಸ MSP ಉತ್ಪಾದನಾ ವೆಚ್ಚಕ್ಕಿಂತ ಕನಿಷ್ಠ ಶೇ. 50 ರಷ್ಟು ಲಾಭವನ್ನು ಖಾತ್ರಿಪಡಿಸುತ್ತದೆ, ಇದು ಭತ್ತ, ಜೋಳ, ದ್ವಿದಳ ಧಾನ್ಯಗಳು, ಎಣ್ಣೆಬೀಜಗಳು ಮತ್ತು ಹತ್ತಿ ಸೇರಿದಂತೆ 14 ಪ್ರಮುಖ ಬೆಳೆಗಳ ಬೆಳೆಗಾರರಿಗೆ ಪ್ರಯೋಜನವನ್ನು ನೀಡುತ್ತದೆ. ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಬುಧವಾರ, 2025-26 ಖಾರಿಫ್ ಋತುವಿನಲ್ಲಿ ಭತ್ತದ MSP ಅನ್ನು ಕ್ವಿಂಟಲ್ಗೆ 69 ರೂ.ಗಳಿಂದ 2,369 ರೂ.ಗಳಿಗೆ ಹೆಚ್ಚಿಸಲು ಸಂಪುಟ ಅನುಮೋದನೆ ನೀಡಿದೆ ಎಂದು ಹೇಳಿದರು.
ಶಾಂಗೈ: ಚೀನಾದ ಪೂರ್ವ ಶಾಂಡೊಂಗ್ ಪ್ರಾಂತ್ಯದ ರಾಸಾಯನಿಕ ಸ್ಥಾವರದ ಕಾರ್ಯಾಗಾರದಲ್ಲಿ ಮಂಗಳವಾರ ಸಂಭವಿಸಿದ ಭಾರಿ ಸ್ಫೋಟದಲ್ಲಿ ಕನಿಷ್ಠ ಐವರು ಸಾವನ್ನಪ್ಪಿದ್ದು, 19 ಮಂದಿ ಗಾಯಗೊಂಡಿದ್ದಾರೆ ಎಂದು ಸುದ್ದಿ ಸಂಸ್ಥೆ ಎಪಿ ವರದಿ ಮಾಡಿದೆ. ಸ್ಫೋಟದ ನಂತರ ತುರ್ತು ತಂಡಗಳು ಗಾವೋಮಿ ನಗರದ ರಾಸಾಯನಿಕ ಕಾರ್ಖಾನೆಗೆ ಧಾವಿಸಿವೆ ಎಂದು ಸರ್ಕಾರಿ ಸ್ವಾಮ್ಯದ ಕ್ಸಿನ್ಹುವಾ ಸುದ್ದಿ ಸಂಸ್ಥೆ ವರದಿ ಮಾಡಿದೆ. ಸ್ಫೋಟದ ವರದಿಯನ್ನು ಸ್ವೀಕರಿಸಿದ ತಕ್ಷಣ, ತುರ್ತು ನಿರ್ವಹಣಾ ಸಚಿವಾಲಯವು ಸ್ಥಳೀಯ ರಕ್ಷಣಾ ಪ್ರಯತ್ನಗಳಿಗೆ ಸಹಾಯ ಮಾಡಲು ಅಗ್ನಿಶಾಮಕ ದಳದವರು, ವೈದ್ಯಕೀಯ ತಜ್ಞರು ಮತ್ತು ಕೆಲಸದ ಸುರಕ್ಷತಾ ತಜ್ಞರು ಸೇರಿದಂತೆ ವಿಶೇಷ ಸಿಬ್ಬಂದಿ ಮತ್ತು ಕಾರ್ಯ ತಂಡವನ್ನು ತಕ್ಷಣವೇ ರವಾನಿಸಿತು ಎಂದು ಅದು ತಿಳಿಸಿದೆ. ಒಟ್ಟು 232 ಸ್ಥಳೀಯ ಅಗ್ನಿಶಾಮಕ ದಳದವರನ್ನು ಘಟನಾ ಸ್ಥಳಕ್ಕೆ ಕಳುಹಿಸಲಾಗಿದೆ ಎನ್ನಲಾಗಿದೆ.
ನವದೆಹಲಿ : ಹೊಸ ತಿಂಗಳು ಜೂನ್ ಸಮೀಪಿಸುತ್ತಿರುವುದರಿಂದ, ಭಾರತೀಯ ರಿಸರ್ವ್ ಬ್ಯಾಂಕ್ (RBI) ಜೂನ್ 2025 ರ ಅಧಿಕೃತ ಬ್ಯಾಂಕ್ ರಜಾದಿನಗಳ ವೇಳಾಪಟ್ಟಿಯನ್ನು ನೋಡೋಣ. ಒಟ್ಟಾರೆಯಾಗಿ, ಈ ತಿಂಗಳು ಒಟ್ಟು 12 ಪಟ್ಟಿ ಮಾಡಲಾದ ರಜಾದಿನಗಳನ್ನು ಹೊಂದಿದೆ, ಅವುಗಳಲ್ಲಿ ಬಕ್ರಿ ಈದ್, ಇತರ ಪ್ರಾದೇಶಿಕ ಹಬ್ಬಗಳು ಮತ್ತು ಸಾಪ್ತಾಹಿಕ ರಜೆಗಳು ಸೇರಿವೆ. ಭಾರತದ ಎಲ್ಲಾ ಬ್ಯಾಂಕುಗಳು, ಸಾರ್ವಜನಿಕ ಮತ್ತು ಖಾಸಗಿ, ಎರಡನೇ ಮತ್ತು ನಾಲ್ಕನೇ ಶನಿವಾರಗಳನ್ನು ರಜಾದಿನವಾಗಿ ಹೊಂದಿವೆ ಮತ್ತು ತಿಂಗಳಿನ ಎಲ್ಲಾ ಭಾನುವಾರಗಳು ಸಾಪ್ತಾಹಿಕ ರಜೆಯಾಗಿರುತ್ತವೆ. ಪ್ರಾದೇಶಿಕ ಮತ್ತು ಸ್ಥಳೀಯ ಅವಶ್ಯಕತೆಗಳಿಂದಾಗಿ ಭಾರತದ ವಿವಿಧ ರಾಜ್ಯಗಳಲ್ಲಿ ರಜಾದಿನಗಳು ಭಿನ್ನವಾಗಿರಬಹುದು ಎಂಬುದನ್ನು ನೀವು ಗಮನಿಸಬೇಕು. ಆದ್ದರಿಂದ ತುರ್ತು ಪರಿಸ್ಥಿತಿಗಳು ಅಥವಾ ದೀರ್ಘ ವಾರಾಂತ್ಯಗಳ ಸಂದರ್ಭದಲ್ಲಿ ಸರಿಯಾಗಿ ಮಾಹಿತಿ ಪಡೆಯಲು ಮತ್ತು ಸಿದ್ಧತೆಗಳನ್ನು ಮಾಡಿಕೊಳ್ಳಲು ನಿಮ್ಮ ಸ್ಥಳೀಯ ಬ್ಯಾಂಕ್ ಶಾಖೆಯೊಂದಿಗೆ ಅವರ ರಜಾದಿನಗಳ ವೇಳಾಪಟ್ಟಿ ಅಥವಾ ಪಟ್ಟಿಯನ್ನು ಮುಂಚಿತವಾಗಿ ಪರಿಶೀಲಿಸುವುದು ಉತ್ತಮ. ಕೇರಳದ ಕೊಚ್ಚಿ ಮತ್ತು ತಿರುವನಂತಪುರಂನಲ್ಲಿ, ಜೂನ್ 6 ರಂದು, ಅಂದರೆ…
ಬೆಂಗಳೂರು: ಸ್ವತಂತ್ರ ಭಾರತದ ಮೊದಲನೇ ಪ್ರಧಾನಿ ಜವಾಹರ್ ಲಾಲ್ ನೆಹರು ಅವರು ಆಧುನಿಕ ಭಾರತದ ನಿರ್ಮಾತೃ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಇಂದು ವಿಧಾನಸೌಧದ ಪೂರ್ವ ದ್ವಾರದ ಬಳಿ ಇರುವ ಮಾಜಿ ಪ್ರಧಾನ ಮಂತ್ರಿ ದಿವಂಗತ ಪಂಡಿತ್ ಜವಾಹರಲಾಲ್ ನೆಹರು ರವರ ಪುಣ್ಯತಿಥಿಯ ಅಂಗವಾಗಿ ಅವರ ಪ್ರತಿಮೆ ಹಾಗೂ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ನೆಹರು ಅವರ ಪುಣ್ಯ ತಿಥಿಯನ್ನು ಸರ್ಕಾರ ಗೌರವ ಹಾಗೂ ಅಭಿಮಾನದಿಂದ ನೆರವೇರಿಸಿದೆ ಎಂದರು. ದೇಶದ ಬಡತನವನ್ನು ಹೋಗಲಾಡಿಸುವ ಪ್ರಾಮಾಣಿಕ ಪ್ರಯತ್ನವನ್ನು ಮಾಡಿದ ನೆಹರು ಅವರು, ಉದ್ಯೋಗ ಸೃಷ್ಟಿ, ಮಿಶ್ರ ಆರ್ಥಿಕತೆಯನ್ನು ದೇಶದಲ್ಲಿ ಪರಿಚಯಿಸಿದ್ದಲ್ಲದೆ ದೇಶದಲ್ಲಿ ಹಸಿರು ಕ್ರಾಂತಿಗೆ ಅಡಿಗಲ್ಲು ಹಾಕಿದರು. ಸಹಕಾರಿ ಚಳವಳಿ, ವಿಕೇಂದ್ರೀಕರಣಕ್ಕೆ ಬದ್ಧತೆಯಿಂದ ಕೆಲಸ ಮಾಡಿದರು. ಅವರು ಪ್ರಧಾನಿಗಳಾಗಿದ್ದ 17 ವರ್ಷಗಳ ಅವಧಿಯಲ್ಲಿ ಅನೇಕ ಅಣೆಕಟ್ಟು, ಸಾರ್ವಜನಿಕ ವಲಯದಲ್ಲಿ ಕೈಗಾರಿಕೆ, ಶಿಕ್ಷಣ ಸಂಸ್ಥೆಗಳನ್ನೂ ಸ್ಥಾಪಿಸಿದರು. ದೇಶ ಆರ್ಥಿಕವಾಗಿ ಸಬಲತೆಯನ್ನು ಕಂಡುಕೊಂಡಿದ್ದರೆ, ಆಹಾರದಲ್ಲಿ ಸ್ವಾವಲಂಬನೆಯನ್ನು ಕಂಡುಕೊಂಡಿದ್ದರೆ ನೆಹರೂ ಅವರು ಹಾಕಿದ…
ಬೆಂಗಳೂರು: ಸಾರ್ವಜನಿಕರ ಉಪಯೋಗಕ್ಕಾಗಿ ರಾಜ್ಯದಲ್ಲಿ ಜಿಲ್ಲೆಗೆ ಒಂದು ಉಪನೋಂದಣಾಧಿಕಾರಿಗಳ ಕಚೇರಿಯು 2 ಮತ್ತು 4ನೇ ಶನಿವಾರ ಹಾಗೂ ಎಲ್ಲಾ ಭಾನುವಾರಗಳಂದು ಕಾರ್ಯನಿರ್ವಹಿಸಲು ಸರ್ಕಾರ ಆದೇಶ ಹೊರಡಿಸಿದೆ. ಬಸವನಗುಡಿ ಉಪನೋಂದಣಾಧಿಕಾರಿಗಳ ಕಚೇರಿ, ಗಾಂಧಿನಗರ ಉಪನೋಂದಣಾಧಿಕಾರಿಗಳ ಕಚೇರಿ, ಜಯನಗರ ಉಪನೋಂದಣಾಧಿಕಾರಿಗಳ ಕಚೇರಿ, ರಾಜಾಜಿನಗರದ ಮಾದನಾಯಕನಹಳ್ಳಿ ಉಪನೋಂದಣಾಧಿಕಾರಿಗಳ ಕಚೇರಿ, ಶಿವಾಜಿನಗರ ಉಪನೋಂದಣಾಧಿಕಾರಿಗಳ ಕಚೇರಿ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಉಪನೋಂದಣಾಧಿಕಾರಿಗಳ ಕಚೇರಿ, ಚಿತ್ರದುರ್ಗ ಉಪನೋಂದಣಾಧಿಕಾರಿಗಳ ಕಚೇರಿ, ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ಉಪನೋಂದಣಾಧಿಕಾರಿಗಳ ಕಚೇರಿ, ದಾವಣಗೆರೆ ಉಪನೋಂದಣಾಧಿಕಾರಿಗಳ ಕಚೇರಿ, ರಾಮನಗರ ಉಪನೋಂದಣಾಧಿಕಾರಿಗಳ ಕಚೇರಿ, ಶಿವಮೊಗ್ಗ ಉಪನೋಂದಣಾಧಿಕಾರಿಗಳ ಕಚೇರಿ, ತುಮಕೂರು ಜಿಲ್ಲೆಯ ಕುಣಿಗಲ್ ಉಪನೋಂದಣಾಧಿಕಾರಿಗಳ ಕಚೇರಿ, ಕೋಲಾರ ಉಪನೋಂದಣಾಧಿಕಾರಿಗಳ ಕಚೇರಿ, ಬೆಳಗಾವಿ ಜಿಲ್ಲೆಯ ಮೂಡಲಗಿ ಉಪನೋಂದಣಾಧಿಕಾರಿಗಳ ಕಚೇರಿ, ಬಾಗಲಕೋಟೆ ಜಿಲ್ಲೆಯ ಇಳಕಲ್ ಉಪನೋಂದಣಾಧಿಕಾರಿಗಳ ಕಚೇರಿ, ಧಾರವಾಡ ಜಿಲ್ಲೆಯ ಹುಬ್ಬಳ್ಳಿ ಉತ್ತರ ಉಪನೋಂದಣಾಧಿಕಾರಿಗಳ ಕಚೇರಿ, ಗದಗ್ ಜಿಲ್ಲೆಯ ಗಜೇಂದ್ರಗಢ ಉಪನೋಂದಣಾಧಿಕಾರಿಗಳ ಕಚೇರಿ, ಕಾರವಾರ/ ಉತ್ತರಕನ್ನಡದ ಕುಮಟಾ ಉಪನೋಂದಣಾಧಿಕಾರಿಗಳ ಕಚೇರಿ, ಹಾವೇರಿ ಉಪನೋಂದಣಾಧಿಕಾರಿಗಳ ಕಚೇರಿ, ವಿಜಯಪುರ ಉಪನೋಂದಣಾಧಿಕಾರಿಗಳ ಕಚೇರಿ, ಚಾಮರಾಜನಗರ ಜಿಲ್ಲೆಯ…