Author: kannadanewsnow07

ರಾಮನಗರ : ನಗರಸಭೆ ವ್ಯಾಪ್ತಿಯಲ್ಲಿನ ಎಲ್ಲಾ ಉದ್ದಿಮೆದಾರರು ರಾಜ್ಯ ಸರ್ಕಾರವು ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ (ತಿದ್ದುಪಡಿ) ಅಧಿನಿಯಮ, 2024ರ ರೀತ್ಯಾ ಕರ್ನಾಟಕ ರಾಜ್ಯ ಪತ್ರದಲ್ಲಿ ಪ್ರಕಟಣೆಯಾದ ಅಧಿಸೂಚನೆಯಲ್ಲಿ ವಾಣಿಜ್ಯ/ಕೈಗಾರಿಕೆ ಹಾಗೂ ವ್ಯವಹಾರ ಉದ್ಯಮಗಳು, ಟ್ರಸ್ಟ್ಗಳು, ಆಸ್ಪತ್ರೆಗಳು, ಪ್ರಯೋಗಾಲಯಗಳು, ಮನೋರಂಜನಾ ಕೇಂದ್ರಗಳು, ಹೋಟೆಲ್ ಮುಂತಾದವುಗಳು ತಮ್ಮ ನಾಮಫಲಕಗಳಲ್ಲಿ ಕನ್ನಡ ಭಾಷೆಯನ್ನು ಶೇ. 60 ರಷ್ಟು ಮತ್ತು ನಾಮಫಲಕದ ಮೇಲ್ಬಾಗದಲ್ಲಿ ಪ್ರದರ್ಶಿಸಬೇಕಿರುತ್ತದೆ. ಹಾಗಾಗಿಈ ಪ್ರಕಟಣೆಯಾದ 7 ದಿನಗಳೊಳಗಾಗಿ, ತಮ್ಮ ನಾಮಫಲಕದಲ್ಲಿ ಶೇ. 60 ರಷ್ಟು ಕನ್ನಡ ಭಾಷೆಯನ್ನು ಪ್ರದರ್ಶಿಸಬೇಕು ಹಾಗೂ ನಾಮಫಲಕದ ಮೇಲ್ಬಾಗದಲ್ಲಿ ಪ್ರದರ್ಶಿಸಲು ಕ್ರಮ ವಹಿಸಬೇಕು ತಪ್ಪಿದ್ದಲ್ಲಿ ನಿಯಮಾನುಸಾರ ಕ್ರಮ ಕೈಗೊಳ್ಳಲಾಗುವುದು ಎಂದು ರಾಮನಗರ ನಗರಸಭೆಯ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಬೆಂಗಳೂರು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್‌ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್‌ಸೆಟ್ ಸಂಸ್ಥೆಯ ವತಿಯಿಂದ ಹಮ್ಮಿಕೊಂಡಿರುವ ಫ್ಯಾಶನ್ ಡಿಸೈನಿಂಗ್(ಟೈಲರಿAಗ್) ಕುರಿತ 30 ದಿನಗಳ ಉಚಿತ ತರಬೇತಿಯು ಏಪ್ರಿಲ್ 12 ರಿಂದ ಆರಂಭವಾಗಲಿದ್ದು, ಏಪ್ರಿಲ್ 12 ರಂದು ನಡೆಯಲಿರುವ ನೇರ ಸಂದರ್ಶನದಲ್ಲಿ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ರಾಮನಗರ ಹಾಗೂ ತುಮಕೂರು ಜಿಲ್ಲಾ ವ್ಯಾಪ್ತಿಯ ಗ್ರಾಮೀಣ ಆಸಕ್ತ ನಿರುದ್ಯೋಗಿ ಮಹಿಳೆಯರು ಭಾಗವಹಿಸಬಹುದಾಗಿದೆ. ಆಸಕ್ತರು 18 ರಿಂದ 45 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಅಭ್ಯರ್ಥಿಗಳು ಆಧಾರ್ ಕಾರ್ಡ್ನ್ನು ಹೊಂದಿರಬೇಕು ಹಾಗೂ ಬಿಪಿಎಲ್ ಕಾರ್ಡ್ ಅನ್ನು ಹೊಂದಿರುವ ಗ್ರಾಮೀಣ ಪ್ರದೇಶದ ಗ್ರಾಮೀಣ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು. ತರಬೇತಿಯು ಕಡ್ಡಾಯವಾಗಿ ವಸತಿಯುತವಾಗಿದ್ದು, ತರಬೇತಿಯ ಅವಧಿಯಲ್ಲಿ ಉಚಿತವಾಗಿ ಊಟ ಮತ್ತು ವಸತಿ ನೀಡಲಾಗುವುದು ಹಾಗೂ ತರಬೇತಿ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣಪತ್ರವನ್ನು ವಿತರಿಸಲಾಗುವುದು. ಆಸಕ್ತರು ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗಾಗಿ ರುಡ್‌ಸೆಟ್…

Read More

ಕೆಎನ್‌ಎನ್‌ಸಿನಿಮಾಡೆಸ್ಕ್‌: ಅಯೋಗ್ಯ ಚಿತ್ರದ ತರುವಾಯ ಒಂದು ಸುದೀರ್ಘಾವಧಿಯ ನಂತರ ನೀನಾಸಂ ಸತೀಶ್ ಮತ್ತು ರಚಿತಾ ರಾಮ್ ಜೋಡಿಯಾಗಿ ನಟಿಸುತ್ತಿರುವ ಚಿತ್ರ `ಮ್ಯಾಟ್ನಿ’. ೃ ಈ ನಡುವೆ ಸಿನಿಮಾದಲ್ಲಿ ಈ ಜೋಡಿ ವಿಭಿನ್ನ ಗೆಟಪ್ಪಿನಲ್ಲಿ ಕಾಣಿಸಿಕೊಂಡಿರುವ ಮ್ಯಾಟ್ನಿಯ ಬಿಡುಗಡೆ ದಿನಾಂಕದ ಬಗ್ಗೆ ಒಂದಷ್ಟು ವಿಚಾರಗಳು ಹರಿದಾಡುತ್ತಿವೆ.ಗಾಂಧಿ ನಗರದಲ್ಲಿ ಸದ್ಯಕ್ಕೆ ಗುಲ್ಲೆದ್ದಿರುವ ವಿಚಾರಗಳನ್ನಾಧರಿಸಿ ಹೇಳೋದಾದರೆ, ಏಪ್ರಿಲ್ ತಿಂಗಳ ಮೊದಲ ವಾರದಲ್ಲಿ ಮ್ಯಾಟ್ನಿ ಬರಲಿದೆ ಎನ್ನಲಾಗಿದೆ. ಇದಲ್ಲದೇ ಮನೋಹರ್ ಕಾಂಪಲ್ಲಿ ನಿರ್ದೇಶನದಲ್ಲಿ, f3 ಪ್ರೊಡಕ್ಷನ್ಸ್ ಬ್ಯಾನರಿನಡಿಯಲ್ಲಿ ಮೂಡಿ ಬಂದಿರುವ ಮ್ಯಾಟ್ನಿ ಆರಂಭದಿಂದ ಇಲ್ಲಿಯವರೆಗೂ ಪ್ರೇಕ್ಷಕರ ಆಸಕ್ತಿ ಸೆಳೆಯುತ್ತಾ ಸಾಗಿ ಬಂದಿದೆ. ಹಂತ ಹಂತವಾಗಿ ಒಂದಿಷ್ಟು ವಿಚಾರಗಳನ್ನು ತಲುಪಿಸುತ್ತಾ ಬಂದಿರುವ ಈ ಚಿತ್ರವೀಗ ಬಿಡುಗಡೆಯ ಅಂಚಿಗೆ ಬಂದು ನಿಂತಿದೆ. ಸದ್ದೇ ಇಲ್ಲದಂತೆ ಪೋಸ್ಟ್ ಪ್ರೊಡಕ್ಷನ್ ಕಾರ್ಯ ಮುಗಿಸಿಕೊಂಡಿರುವ ಮ್ಯಾಟ್ನಿಯ ಪ್ರಚಾರ ಕಾರ್ಯವೂಸದ್ಯದಲ್ಲೇ ಶುರುವಾಗಲಿದೆ. ಈ ನಡುವೆ ಇತ್ತೀಚಿನ ವರ್ಷಗಳಲ್ಲಿ ವಿಶೇಷವಾದ, ಒಂದಕ್ಕೊಂದು ಭಿನ್ನವಾದ ಪಾತ್ರಗಳನ್ನೇ ನೀನಾಸಂ ಸತೀಶ್ ಒಪ್ಪಿಕೊಳ್ಳುತ್ತಾ ಬರುತ್ತಿದ್ದಾರೆ. ಅದರ ಭಾಗವೆಂಬಂತೆ ಕಾಣಿಸುತ್ತಿರುವ ಮ್ಯಾಟ್ನಿ ಮನಮೋಹಕ…

Read More

ಬಳ್ಳಾರಿ: ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆಯು ರಾಜ್ಯಾದ್ಯಂತ ತಯಾರಿಸುವ ಮತ್ತು ಮಾರಾಟ ಮಾಡಲ್ಪಡುವ ಆಹಾರ ಪದಾರ್ಥಗಳ ಗುಣಮಟ್ಟದ ಮೇಲೆ ತೀವ್ರ ನಿಗಾ ಇಡುವ ಕೆಲಸ ಮಾಡುತ್ತಿದೆ. ಸಾರ್ವಜನಿಕರ ಆರೋಗ್ಯ ರಕ್ಷಣೆಯಲ್ಲಿ ಮಹತ್ತರವಾದ ಜವಾಬ್ದಾರಿಯನ್ನು ಹೊಂದಿದೆ. ಕೃತಕ ಬಣ್ಣ ಬಳಸಿ ಮಾರಾಟ ಮಾಡುತ್ತಿರುವ ಕಾಟನ್ ಕ್ಯಾಂಡಿಗಳನ್ನು ಉಪಯೋಗಿಸಬಾರದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್‍ಗುಂಡೂರಾವ್ ತಿಳಿಸಿದರು. ಇಂದು ವಿಕಾಸಸೌಧದ ಕೊಠಡಿ ಸಂಖ್ಯೆ 122 ರಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವರು, ಕಳೆದ ಮೂರು ತಿಂಗಳುಗಳಲ್ಲಿ ಇಲಾಖೆಯ ವತಿಯಿಂದ ಹಲವಾರು ಆಹಾರ ಪದಾರ್ಥಗಳ ವಿಶ್ಲೇಷಣೆಗೆ ರಾಜ್ಯಾದ್ಯಂತ ವಿಶೇಷ ಆಂದೋಲಗಳನ್ನು ಕೈಗೊಂಡಿದೆ. ರಾಜ್ಯಾದ್ಯಂತ ಕಳೆದ ಮೂರು ತಿಂಗಳುಗಳಲ್ಲಿ 652 ಪರಿಶಿಷ್ಟ ಜಾತಿ ಮತ್ತು ಪಂಗಡ, ಹಿಂದುಳಿದ ವರ್ಗಗಳ ಹಾಗೂ ವೈದ್ಯಕೀಯ ಕಾಲೇಜುಗಳ ಹಾಸ್ಟೆಲ್‍ಗಳನ್ನು ಪರಿಶೀಲಿಸಿ ಅಲ್ಲಿನ 504 ಆಹಾರ ಮಾದರಿಗಳನ್ನು ವಿಶ್ಲೇಷಣೆಗೊಳಪಡಿಸಿದ್ದು, ಅವುಗಳಲ್ಲಿ 9 ಮಾದರಿಗಳು ಅಸುರಕ್ಷಿತವಾಗಿದ್ದು, 3 ಮಾದರಿಗಳು ಕಳಪೆ ಗುಣಮಟ್ಟದ್ದಾಗಿರುತ್ತದೆ ಎಂದು ತಿಳಿಸಿದರು. ರಾಜ್ಯಾದ್ಯಂತ ಕಳೆದ ಮೂರು ತಿಂಗಳುಗಳಲ್ಲಿ 613…

Read More

ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಆಯೋಜಿಸಿದ್ದ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶದಲ್ಲಿ ಮುಖ್ಯಮಂತ್ರಿ Siddaramaiah ಅವರ ಮಾತುಗಳು.ಅನ್ನಭಾಗ್ಯ, ಕೃಷಿಭಾಗ್ಯ, ಕ್ಷೀರಧಾರೆ ಸೇರಿ ಹತ್ತಾರು ಭಾಗ್ಯಗಳು, ಐದು ಗ್ಯಾರಂಟಿಗಳನ್ನು ಜಾರಿ ಮಾಡಿ ಪ್ರತೀ ತಿಂಗಳು ಕೊಟ್ಟ ಮಾತಿನಂತೆ ನಿಮ್ಮ ಬ್ಯಾಂಕ್ ಖಾತೆಗೆ ಹಣ ಜಮೆ ಮಾಡುತ್ತಿರುವವರು ನಾವು. ಉಚಿತ ಬಸ್, ಉಚಿತ ವಿದ್ಯುತ್ ಕೊಡುತ್ತಿರುವವರು ನಾವು‌ . ತಿಂಗಳಿಗೆ 2 ಸಾವಿರ ಪ್ರತೀ ಮಹಿಳೆಯ ಖಾತೆಗೆ ಹಾಕುತ್ತಿರುವವರು ನಾವು, ನಾವು ಮಾಡಿದ ಕೆಲಸಕ್ಕೆ ಕೂಲಿ ಕೊಡಿ ಎಂದು ಈಗ ಕೇಳುತ್ತಿದ್ದೇವೆ. ಪ್ರಧಾನಿ Narendra Modi ಅವರು ವಿದೇಶದಿಂದ ಕಪ್ಪು ಹಣ ತಂದು ಪ್ರತಿಯೊಬ್ಬ ಭಾರತೀಯರ ಖಾತೆಗೆ 15 ಲಕ್ಷ ಹಣ ಹಾಕ್ತೀವಿ ಅಂದರು. ವಿದೇಶದಿಂದ ಕಪ್ಪು ಹಣ ತಂದ್ರಾ? ನಿಮ್ಮ ಖಾತೆಗೆ ಹಾಕಿದ್ರಾ?ಕೊಟ್ಟ ಮಾತಿನಂತೆ ನಡೆದುಕೊಂಡು ನಿಮ್ಮ ಮತಕ್ಕೆ ಗೌರವ ತಂದುಕೊಟ್ಟವರು ನಾವು. ಇದನ್ನು ಜನರು ತಮ್ಮ ಹೃದಯಕ್ಕೆ ಕೇಳಿಕೊಂಡು ತೀರ್ಮಾನಿಸಬೇಕು. ಅಚ್ಚೆದಿನ್ ಆಯೆಗಾ ಎಂದು ಡೈಲಾಗ್ ಹೊಡೆದು ಪೆಟ್ರೋಲ್, ಡೀಸೆಲ್ ಬೆಲೆ,…

Read More

ನವದೆಹಲಿ: ಪೌರತ್ವ ತಿದ್ದುಪಡಿ ಕಾಯ್ದೆಯ (ಸಿಎಎ) ನಿಯಮಗಳನ್ನು ಕೇಂದ್ರವು ಇಂದು ಅಧಿಸೂಚನೆ ಮಾಡುವ ಸಾಧ್ಯತೆಯಿದೆ ಎಂದು ಮೂಲಗಳು ಹೇಳಲಾಗುತ್ತಿದೆ. ಇಂದು ನಡುವೆ ಇಂದು ಸಂಜೆ 5:30 ರ ಸುಮಾರಿಗೆ ಪ್ರಧಾನಿ ನರೇಂದ್ರ ಮೋದಿ ದೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎನ್ನಲಾಗಿದೆ. ಕಳೆದ ತಿಂಗಳು, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು 2019 ರಲ್ಲಿ ಜಾರಿಗೆ ಬಂದ ಸಿಎಎಯನ್ನು ಈ ವರ್ಷ ಲೋಕಸಭಾ ಚುನಾವಣೆಗೆ ಮೊದಲು ಜಾರಿಗೆ ತರಲಾಗುವುದು ಎಂದು ಹೇಳಿದ್ದರು.ಡಿಸೆಂಬರ್ 11, 2019 ರಂದು ಸಂಸತ್ತು ಜಾರಿಗೆ ತಂದ ಸಿಎಎ ಭಾರತದಾದ್ಯಂತ ತೀವ್ರ ಚರ್ಚೆ ಮತ್ತು ವ್ಯಾಪಕ ಪ್ರತಿಭಟನೆಯ ವಿಷಯವಾಗಿದೆ. ಅಫ್ಘಾನಿಸ್ತಾನ, ಬಾಂಗ್ಲಾದೇಶ ಮತ್ತು ಪಾಕಿಸ್ತಾನದಿಂದ ಹಿಂದೂ, ಸಿಖ್, ಜೈನ, ಪಾರ್ಸಿ, ಬೌದ್ಧ ಮತ್ತು ಕ್ರಿಶ್ಚಿಯನ್ ಸಮುದಾಯಗಳಿಗೆ ಸೇರಿದ ಮತ್ತು ತಮ್ಮ ತಾಯ್ನಾಡಿನಲ್ಲಿ ಧಾರ್ಮಿಕ ಕಿರುಕುಳವನ್ನು ಎದುರಿಸುತ್ತಿರುವ ಕಾರಣ 2014 ರ ಡಿಸೆಂಬರ್ 31 ರಂದು ಅಥವಾ ಅದಕ್ಕೂ ಮೊದಲು ಭಾರತಕ್ಕೆ ಪ್ರವೇಶಿಸಿದ ವಲಸಿಗರಿಗೆ ಭಾರತೀಯ ಪೌರತ್ವಕ್ಕೆ ತ್ವರಿತ ಮಾರ್ಗವನ್ನು ಒದಗಿಸಲು…

Read More

ಕೆಎನ್‌ಎನ್‌ಡಿಜಿಟಲ್‌ಡೆಸ್ಕ್‌: ಸಂಸದ ಅನಂತಕುಮಾರ ಹೆಗಡೆ ಸಂವಿಧಾನಕ್ಕೆ ವಿರುದ್ದವಾಗಿ ಮಾತನಾಡಿರುವುದು ವೈಯಕ್ತಿಕ ಹೇಳಿಕೆ ಎಂದು ಭಾರತೀಯ ಜನತಾ ಪಕ್ಷ ತಳ್ಳಿಹಾಕಿರುವುದು ನಾಚಿಕೆಗೇಡಿನ ನಡೆಯ ಪ್ರತೀಕ ಮಾತ್ರವಲ್ಲ ನೆಲದ ಕಾನೂನಿನ ಬಗ್ಗೆ ಅವರಿಗಿರುವ ತಿರಸ್ಕಾರವೂ ಹೌದು.. ಈ ಹೇಳಿಕೆಯನ್ನು ಹೆಗಡೆ ತಮ್ಮ ಮನೆಯ ಅಡುಗೆಕೋಣೆಯಲ್ಲಿ ನೀಡಿದ್ದಲ್ಲ, ಸಾರ್ವಜನಿಕ ಸಮಾರಂಭದಲ್ಲಿ ಸಂಸದನಾಗಿ ಮಾತನಾಡಿರುವುದು. ಈ ವ್ಯತ್ಯಾಸ ತಿಳಿಯದಷ್ಟು ಬಿಜೆಪಿ ನಾಯಕರು ಮೂರ್ಖರಲ್ಲ, ಇವರಿಗೆ ಆರ್ ಎಸ್ ಎಸ್ ಬೆಂಬಲದ ಅನಂತಕುಮಾರ ಹೆಗಡೆ ವಿರುದ್ಧ ಕ್ರಮಕೈಗೊಳ್ಳುವ ದಮ್ಮು ತಾಖತ್ ಇಲ್ಲ ಅಷ್ಟೆ. ನರೇಂದ್ರ ಮೋದಿಯವರೂ ಸೇರಿದಂತೆ ಬಿಜೆಪಿ ನಾಯಕರ ಮುಂದೆ ಈಗ ಇರುವುದು ಎರಡೇ ಆಯ್ಕೆ. ಒಂದೋ ಹೆಗಡೆಯನ್ನು ತಕ್ಷಣ ಪಕ್ಷದಿಂದ ವಜಾಗೊಳಿಸಬೇಕು ಇಲ್ಲವೇ ಅವರ ಹೇಳಿಕೆಗೆ ತಮ್ಮ ಸಹಮತ ಇದೆ ಎಂದು ಘೋಷಿಸಬೇಕು. ನೋಡೋಣ ಇದೇ ವಿಷಯದ ಮೇಲೆ ಈ ಬಾರಿಯ ಲೋಕಸಭಾ ಚುನಾವಣೆ ನಡೆಯಲಿ. ಅನಂತಕುಮಾರ ಹೆಗಡೆ ನಿರಂತರವಾಗಿ ಸಂವಿಧಾನದ ವಿರುದ್ಧ ಮಾತ್ರ ಹೇಳಿಕೆ ನೀಡಿದ್ದಲ್ಲ ಮೀಸಲಾತಿಯನ್ನು ರದ್ದುಗೊಳಿಸಬೇಕೆಂದು ಹೇಳಿದ್ದಾರೆ, ದಲಿತರನ್ನು ನಾಯಿಗಳು ಎಂದು…

Read More

ಬೆಂಗಳೂರು: ನೆರೆಯ ತಮಿಳುನಾಡು ಮತ್ತು ಪುದುಚೇರಿಯಲ್ಲಿನಿಷೇಧಿಸಲಾಗಿರುವ ‘ಕಾಟನ್‌ ಕ್ಯಾಂಡಿ’ ಯನ್ನೂ ರಾಜ್ಯದಲ್ಲೂ ನಿಷೇಧಿಸುವ ಮಾಡುವ ಆದೇಶವನ್ನು ಹೊರಡಿಸಿದೆ. ಇಂದು ಈ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿದ ಆರೋಗ್ಯ ಸಚಿವ ದಿನೇಶ್‌ ಗುಂಡುರಾವ್‌ ಅವರು ಈ ಬಗ್ಗೆ ಮಾಹಿತಿ ನೀಡಿದರು. ಇದೇ ವೇಳೆ ಅವರು ಮಾತನಾಡಿ, ಕಾಟನ್‌ ಕ್ಯಾಂಡಿ ಮತ್ತು ಗೋಬಿ ಮಂಚೂರಿ ಮಾದರಿಯನ್ನು ಸಂಗ್ರಹಿಸಿದ್ದು, ಇವುಗಳಲ್ಲಿಬಳಸುವ ಕೃತಕ ಬಣ್ಣಗಳಲ್ಲಿಹಾನಿಕಾರಕ ರಾಸಾಯನಿಕ ಇರುವುದು ಪತ್ತೆಯಾಗಿದೆ ಅಂತ ತಿಳಿಸಿದರು. ಇನ್ನೂತಮಿಳುನಾಡಿನಲ್ಲಿ ಈಗಗಾಲೇ ಕಾಟನ್ ಕ್ಯಾಂಡಿ ಹಾಗೂ ಗೋಬಿ ಮಂಚೂರಿಯನ್ನು ನಿಷೇಧಿಸಲಾಗಿದೆ. ಇದಲ್ಲದೇ ಕರ್ನಾಟಕ ರಾಜ್ಯ ಆಹಾರ ಸುರಕ್ಷತೆ ಹಾಗೂ ಗುಣಮಟ್ಟ ವಿಭಾಗವು, ಕಾಟನ್‌ ಕ್ಯಾಂಡಿ ಮತ್ತು ಗೋಬಿ ಮಂಚೂರಿ ಮಾದರಿಯನ್ನು ಸಂಗ್ರಹಿಸಿ ಪರಿಶೀಲನೆ ನಡೆಸಿತ್ತು. ಗೋಬಿ ಮತ್ತು ಕಾಟನ್ ಕ್ಯಾಂಡಿಯಲ್ಲಿ ಹಾನಿಕಾರಕ ರಾಸಾಯನಿಕಗಳನ್ನು ಬಳಸುವುದು ತಿಳಿದುಬಂದಿದೆ ಎನ್ನಲಾಗಿದೆ. ಮಾದರಿಗಳನ್ನು ಬೇರೆ ಬೇರೆ ಕಡೆ ಸಂಗ್ರಹಿಸಲಾಗಿತ್ತು. 171 ಗೋಬಿ ಮಂಚೂರಿ ಮಾದರಿಯನ್ನು ಸಂಗ್ರಹಿಸಲಾಗಿದೆ. ಅದರಲ್ಲಿ ಕೃತಕ ಬಣ್ಣಗಳ ಅಸುರಕ್ಷಿತ ಮಾದರಿಯನ್ನು ಪತ್ತೆ ಹಚ್ಚಿರೋದು 107 ಇದೆ.…

Read More

ಬೆಂಗಳೂರು:ರಾಜ್ಯಾಧ್ಯಂತ  ಕಾಟನ್‌ ಕ್ಯಾಂಡಿ’ ನಿಷೇಧ ಮಾಡಲಾಗಿದೆ ಅಂತ ಆರೋಗ್ಯ ಸಚಿವ ದಿನೇಶ್‌ ಗುಂಡುರಾವ್‌ ಅವರು ಹೇಳಿದರು. ಅವರು ಇಂದು ನಗರದಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡುತ್ತ ಅವರು ಈ ಬಗ್ಗೆ ತಿಳಿಸಿದರು. ಇದೇ ವೇಳೆ ಅವರು ಮಾತನಾಡಿ, ವಿವಿಧ ಕಡೆಗಳಲ್ಲಿ ಎರಡು ಪದಾರ್ಥಗಳಲ್ಲಿ ನ ಸ್ಯಾಂಪಲ್‌ಗಳನ್ನು ಸಂಗ್ರಹಿಸ ಮಾಡಲಾಯಿತು. ಗೋಬಿ ಮಂಚೂರಿಯ 121 ಮಾದರಿಯನ್ನು ಸಂಗ್ರಹ ಮಾಡಲಾಯಿತು. ಇದಲ್ಲದೇ ಇದರಲ್ಲಿ ಎರಡು ವಿಶಕಾರಿ ಅಂಶಗಳು ಪತ್ತೆಯಾಗಿದ್ದು, ಇದರಿಂದ ಇದರ ಸೇವನೆ ಮಾಡುವುದು ಯೋಗ್ಯವಲ್ಲ ಅಂತ ಹೇಳಿದರು. ಇದನ್ನು ದಿನ ನಿತ್ಯ ಸೇವನೆ ಮಾಡುವುದರಿಂದ ಕ್ಯಾನ್ಸರ್ ಬರುವ ಸಂಭವಿದೆ ಅಂಥ ಹೇಳಿದರು. ಇದನ್ನು ಬಳಕೆ ಮಾಡುವುದು ಕಾನೂನು ಬಾಹಿರ ಅಂಥ ಹೇಳಿದರು. ಮಾದರಿಗಳನ್ನು ಬೇರೆ ಬೇರೆ ಕಡೆ ಸಂಗ್ರಹಿಸಲಾಗಿತ್ತು. 171 ಗೋಬಿ ಮಂಚೂರಿ ಮಾದರಿಯನ್ನು ಸಂಗ್ರಹಿಸಲಾಗಿದೆ. ಅದರಲ್ಲಿ ಕೃತಕ ಬಣ್ಣಗಳ ಅಸುರಕ್ಷಿತ ಮಾದರಿಯನ್ನು ಪತ್ತೆ ಹಚ್ಚಿರೋದು 107 ಇದೆ. ಸೋ ಗೋಬಿ ಮಂಚೂರಿನೂ ಮಾಡಿದ್ದೇವೆ, ಕ್ಯಾಂಡಿಯನ್ನೂ ಮಾಡಿದ್ದೇವೆ ಎಂದರು. ಒಂದು ರೋಡಮೈನ್ ಬೀ, ಇನ್ನೊಂದು…

Read More

ನವದೆಹಲಿ: ಬೀಡಿಗಳು ಸಿಗರೇಟುಗಳಿಗಿಂತ ಕಡಿಮೆ ತಂಬಾಕನ್ನು ಹೊಂದಿರುತ್ತವೆ ಎಂದು ಭಾವಿಸಲಾಗಿದೆ, ಆದದರೆ ಇದು ನಿಜವಾಗಿಯೂ ಎಂಟು ಪಟ್ಟು ಹೆಚ್ಚು ಅಪಾಯಕಾರಿಯಾಗಿದೆ ಎನ್ನಲಾಗಿದೆ. ಇದು ಮುಖ್ಯವಾಗಿ ಎಲೆಗಳ ವ್ಯತಿರಿಕ್ತ ಪರಿಣಾಮಗಳು ಮತ್ತು ಆಳವಾದ ಉಸಿರಾಟದಿಂದ ಉಂಟಾಗುತ್ತದೆ ಅಂಥ ಅಧ್ಯಯನದಿಂದ ತಿಳಿದು ಬಂದಿದೆ. ‘ನೋ ಸ್ಮೋಕಿಂಗ್ ಡೇ’ಗೆ ಕೆಲವು ದಿನಗಳ ಮೊದಲು ನಡೆದ ಕೆಜಿಎಂಯುನಲ್ಲಿ ಮುಂದುವರಿದ ವೈದ್ಯಕೀಯ ಶಿಕ್ಷಣ ಕಾರ್ಯಕ್ರಮವಾದ 18 ನೇ ಪಲ್ಮನರಿ ಪಿಜಿ ಅಪ್ಡೇಟ್ನಲ್ಲಿ ತಜ್ಞರು ಈ ಅಂಶವನ್ನು ಎತ್ತಿ ತೋರಿಸಿದ್ದಾರೆ. ಅವು ಕಡಿಮೆ ವೆಚ್ಚದಾಯಕವಾಗಿರುವುದರಿಂದ, ಬೀಡಿಗಳನ್ನು ಕಡಿಮೆ ಆದಾಯ ಹೊಂದಿರುವವರು ಇಷ್ಟಪಡುತ್ತಾರೆ. ದೆಹಲಿಯ ವಲ್ಲಭಭಾಯಿ ಪಟೇಲ್ ಎದೆ ಸಂಸ್ಥೆಯ (ವಿಪಿಸಿಐ) ಮಾಜಿ ನಿರ್ದೇಶಕ ಪ್ರೊಫೆಸರ್ ರಾಜೇಂದ್ರ ಪ್ರಸಾದ್ ಅವರು ಬೀಡಿಯನ್ನು ಸಿಗರೇಟುಗಳೊಂದಿಗೆ ಹೋಲಿಸುವ ಅಧ್ಯಯನದಿಂದ ಕಂಡುಹಿಡಿದಿದ್ದಾರೆ. ಇವೆರಡನ್ನೂ ಹಾನಿಕಾರಕವೆಂದು ಪರಿಗಣಿಸಲಾಗಿತ್ತು, ಆದರೆ ತಂಬಾಕಿನ ಸುತ್ತಲೂ ಎಲೆಗಳನ್ನು ಸುತ್ತುವ ಮೂಲಕ ರಚಿಸಲಾದ ಬೀಡಿಗಳು ಸುಟ್ಟಾಗ ಹೆಚ್ಚಿನ ಹೊಗೆಯನ್ನು ಉತ್ಪಾದಿಸುತ್ತವೆ. ಧೂಮಪಾನಿಗಳು ಬೀಡಿ ಸುಡುವುದನ್ನು ಕಾಪಾಡಿಕೊಳ್ಳುವ ಪ್ರಯತ್ನದಲ್ಲಿ ಅಜಾಗರೂಕತೆಯಿಂದ ಆಳವಾದ ಉಸಿರಾಟವನ್ನು ತೆಗೆದುಕೊಳ್ಳುತ್ತಾರೆ,…

Read More