Author: kannadanewsnow07

ಕೆಎನ್‌ಎನ್‌ಡಿಜಿಟಲ್‌ಡೆಸ್ಕ್‌: ನಕಾರಾತ್ಮಕ ಆಲೋಚನೆಗಳು ದೇಹದ ಮತ್ತು ಮನಸ್ಸಿನ ಆರೋಗ್ಯಕ್ಕೆ ಒಳ್ಳೆಯದಲ್ಲ. ನಾವು ಸದಾ ನಕಾರಾತ್ಮಕ ಯೋಚನೆ ಮಾಡಿದರೆ ನಮ್ಮ ಸುತ್ತಮುತ್ತಲೂ ಅದೇ ನೆಗೆಟಿವ್‌ ಎನರ್ಜಿ ನಿರ್ಮಾಣವಾಗುತ್ತವೆ. ನಾವು, ನಮ್ಮ ಮೂಡ್‌ ಹೇಗಿರುತ್ತದೆಯೋ ಹಾಗೆಯೆ ನಮ್ಮ ಸುತ್ತಲಿನ ವಾತಾವರಣ ಅವಲಂಬಿತವಾಗಿರುತ್ತದೆ. ಹಾಗಾಗಿ ನಾವು ಸದಾ ಸಕಾರಾತ್ಮಕವಾಗಿ ಅಂದರೆ ಒಳ್ಳೆಯ, ಉತ್ತಮ ಯೋಚನೆಗಳನ್ನು ಮಾಡಬೇಕು. ಇದರಿಂದ ನಮ್ಮ ಮನಸ್ಸು ಹಾಗು ಸುತ್ತಲಿನ ವಾತಾವರಣವೂ ಆರೋಗ್ಯವಾಗಿರುತ್ತದೆ. ಇನ್ನು ನಮ್ಮ ಮನೆಯ ತುಂಬೆಲ್ಲ ಹಾಗು ಮನೆಮಂದಿ ಸದಾ ಸಕಾರಾತ್ಮಕ ಭಾವನೆ, ಯೋಜನೆಯಿಂದಿರಲು ವಾಸ್ತು ಶಾಸ್ತ್ರ ಕೆಲ ಸಲಹೆ ಸೂಚನೆಗಳನ್ನು ನೀಡಿದೆ ಅವುಗಳ ಬಗ್ಗೆ ತಿಳಿದುಕೊಳ್ಳೋಣ ಬನ್ನಿ. ಆದಷ್ಟು ದೇವರ ಮನೆಯ ದೀಪ ಸದಾ ಉರಿಯುತ್ತಿರುವಂತೆ ನೋಡಿಕೊಳ್ಳಿ. ಒಂದು ವೇಳೆ ದೀಪ ಶಾಂತವಾದರೆ ಯಾವುದೇ ಆತಂಕ ಅಥವಾ ಗಾಬರಿ ಬೇಡ. ಇನ್ನು ಬೆಳಗ್ಗೆ ಹಾಗು ಸಂಜೆ ಎರಡೂ ಹೊತ್ತು ಪೂಜೆ ಮಾಡಿ ಊದುಬತ್ತಿ ಮನೆಯ ಬಾಗಿಲಿಗೆ ಹಚ್ಚಿ. ಇದರಿಂದ ಲಕ್ಷ್ಮೀ ಪ್ರಸನ್ನವಾಗುವಳು. ಹೆಚ್ಚು ರಾಸಾಯನಿಕಯುಕ್ತ ಅಗರಬತ್ತಿಗಳನ್ನು ಆದಷ್ಟು ಅವೈಡ್‌…

Read More

ಕೆಎನ್‌ಎನ್‌ಡಿಜಿಟಲ್‌ಡೆಸ್ಕ್‌: ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯಗಳನ್ನು ಎಳೆ ಎಳೆಯಾಗಿ ಬಿಡಿಸಿಟ್ಟ ಮುಖ್ಯಮಂತ್ರಿಗಳು 15ನೇ ಹಣಕಾಸು ಆಯೋಗ ಬಂದಾಗ ಕುಮಾರಸ್ವಾಮಿ ಮುಖ್ಯಮಂತ್ರಿ ಆಗಿದ್ದರು. ನಾನು 14 ನೇ ಹಣಕಾಸು ಆಯೋಗದಲ್ಲಿ ಮುಖ್ಯಮಂತ್ರಿ ಆಗಿದ್ದೆ. ನಮಗೆ ಇಷ್ಟೊಂದು ಅನ್ಯಾಯ ಆಗಲಿಲ್ಲ. ಪರಿಹಾರ ಜೂನ್‌ 2022 ಸ್ಥಗಿತಗೊಳಿಸಲಾಗಿದೆ. ಹಿಂದೆ ಹೆಚ್ಚುವರಿ ಅನುದಾನ ಕೊಟ್ಟಿದ್ದೇವೆಂದು ಈಬಾರಿ ಕಡಿತಗೊಳಿಸಿದ್ದಾರೆ. ಇಷ್ಟೆಲ್ಲ ಅನ್ಯಾಯವಾಗುತ್ತಿದೆ ಎಂದರೂ ಅವರು ಕೇಂದ್ರ ಸರ್ಕಾರವನ್ನು ಬೆಂಬಲಿಸುತ್ತಿದ್ದಾರಲ್ಲಾ? ನೀವು ಕನ್ನಡಿಗರಾ? ನಾಡ ದ್ರೋಹಿಗಳು ಎಂದು ಹೇಳಬೇಕಾಗುತ್ತದೆ. ಎಂದರು. ನಾವೂ ರಾಮನ ಭಕ್ತರೇ : ಮಾತೆತ್ತಿದರೆ ಜೈಶ್ರೀರಾಮ್‌ ಅನ್ನುತ್ತಾರೆ. ನಾವೇನು ರಾಮನ ಭಕ್ತರಲ್ಲವೆ. ನಮ್ಮ ಊರಿನಲ್ಲಿ ಎರಡು ರಾಮಮಂದಿರ ಕಟ್ಟಿಸಿದ್ದೇನೆ. ನಾನು ರಾಮನ ಭಕ್ತನಲ್ಲವೇ? ಇವರು ರಾಮ- ಸೀತೆಯರನ್ನು ಬೇರೆ ಮಾಡಿದ್ದಾರೆ. ಮಹಾತ್ಮಾ ಗಾಂಧೀಜಿ ಹೇಳಿದ ಸೀತಾರಾಮನಲ್ಲಿ ನಾವು ನಂಬಿಕೆ ಇಟ್ಟಿದ್ದೇವೆ. ನಾವು ರಾಷ್ಟ್ರಭಕ್ತರು. ಈ ದೇಶದ ಜನರನ್ನು ಪ್ರೀತಿಸುವವರು. ಎಲ್ಲ ಧರ್ಮದ ಜನರನ್ನು ಪ್ರೀತಿಸುವವರು ಕಾಂಗ್ರೆಸ್‌ ಪಕ್ಷದವರು. ಇವರ ತರ ಬುರ್ಖಾ ಹಾಕಿದವರು, ಟೋಪಿ ಹಾಕಿದವರು…

Read More

ಬೆಂಗಳೂರು: ನಾಡಿನ ಜನರಿಗೆ ಮಾಡಿರುವ ಅನ್ಯಾಯವನ್ನು ಸಮರ್ಥನೆ ಮಾಡುವ ಬಿಜೆಪಿ ನಾಯಕರಿಗೆ ಮೋದಿ ಮುಂದೆ ನಾಡಿನ ಹಕ್ಕನ್ನು, ನಾಡಿನ ಜನರ ಪಾಲನ್ನು ಕೇಳುವ ತಾಕತ್ತಿಲ್ಲ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು. ಬಜೆಟ್ ಮೇಲಿನ ಚರ್ಚೆಗೆ ಉತ್ತರ ನೀಡಿ ಮಾತನಾಡಿದ ಅವರು, ರಾಜ್ಯದ ಸ್ವಂತ ತೆರಿಗೆ ಶೇ 78% ಇದ್ದರೆ 22% ಕೇಂದ್ರ ಸರ್ಕಾರದಿಂದ ಬರುತ್ತದೆ. ಅದೇ ಗುಜರಾತಿಗೆ 75% ಸ್ವಂತ ತೆರಿಗೆ ಯಿಂದ ಬಂದರೆ 17% ಕೇಂದ್ರದಿಂದ ಹಾಗೂ ಸಹಾಯಧನ ಸೇರಿ 25% ಕೇಂದ್ರದಿಂದ ಹೋಗುತ್ತಿದೆ. ಉತ್ತರ ಪ್ರದೇಶಕ್ಕೆ 48% ಸ್ವಂತ ತೆರಿಗೆ ಇದ್ದರೆ 32% ಹಾಗೂ 20% ಸೇರಿ ಒಟ್ಟು 52% ಕೇಂದ್ರದಿಂದ ಹೋಗುತ್ತಿದೆ. ಆದರೆ ನಮಗೆ ಮಾತ್ರ ಕೇವಲ ಕೇವಲ ಕೇವಲ ಶೇ22% ಕೊಡುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ದೇಶದಲ್ಲಿ ಸ್ವಂತ ತೆರಿಗೆ ಹೆಚ್ಚಿರುವ ರಾಜ್ಯಗಳ ಪೈಕಿ ಕರ್ನಾಟಕ ಮೊದಲ ಸ್ಥಾನದಲ್ಲಿದೆ. ಕರ್ನಾಟಕದಲ್ಲಿ ಶಿಕ್ಷಣ, ಆರೋಗ್ಯ, ಸೇತುವೆ, ಸಾಮಾಜಿಕ ಭದ್ರತೆ, ಕಾನೂನು ಸುವ್ಯವಸ್ಥೆ ನಿರ್ವಹಣೆಗೆ ಕೇಂದ್ರದಿಂದ ಪಾಲು ಬರುತ್ತದೆ.…

Read More

ಬೆಂಗಳೂರು: ಅರಣ್ಯ ಪದವೀಧರ ವಿದ್ಯಾರ್ಥಿಗಳು ಫ್ರೀಡಂ ಪಾರ್ಕ್‍ನಲ್ಲಿ ಮುಷ್ಕರ ನಡೆಸುತ್ತಿರುವ ಸ್ಥಳಕ್ಕೆ ಭೇಟಿ ನೀಡಿ ಮನವಿ ಸ್ವೀಕರಿಸಿ ಮಾತನಾಡಿದ ಅರಣ್ಯ ಸಚಿವರಾದ ಈಶ್ವರ ಖಂಡ್ರೆ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಂಸದರಾದ ಡಿ.ಕೆ.ಸುರೇಶ್ ಅವರು ತಮ್ಮ ಬೇಡಿಕೆಗಳ ಬಗ್ಗೆ ದೂರವಾಣಿ ಮುಖಾಂತರ ಮಾತನಾಡಿದ್ದಾರೆ. ಪ್ರಕೃತಿ ಪರಿಸರ, ಅರಣ್ಯ ಸಂರಕ್ಷಣೆ ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ. ಅರಣ್ಯ ಸಂರಕ್ಷಣೆ, ವನ್ಯ ಜೀವಿ ಸಂರಕ್ಷಣೆ, ಎಲ್ಲಾ ಕಡೆ ಮಾಲಿನ್ಯ ಇದೆ. ನೀರಿನಲ್ಲಿ ಮಾಲಿನ್ಯ, ಗಾಳಿಯಲ್ಲೂ ಮಾಲಿನ್ಯ, ಹೀಗಾಗಿ ಜಾಗತಿಕ ತಾಪಮಾನ ಹೆಚ್ಚಾಗಿ ಅನೇಕ ರೋಗ ರುಜಿನಗಳು ಬರುತ್ತಿವೆ. ಇರುವಂತಹ ಒಂದೇ ಭೂಮಿಯಲ್ಲಿ ಪರಿಸರವನ್ನು ಸಂರಕ್ಷಣೆ ಮಾಡಿ ಆರೋಗ್ಯಕರವಾಗಿ ಮುಂದಿನ ಪೀಳಿಗೆಗೆ ಹಸ್ತಾಂತರಿಸಬೇಕಾಗಿದೆ. ಅಂತಹ ಒಂದು ಜವಾಬ್ದಾರಿ ನಿಮ್ಮ ಮೇಲಿದೆ. ನಿಮ್ಮ ಬೇಡಿಕೆಗಳಾದ ಉಪವಲಯ ಅರಣ್ಯಾಧಿಕಾರಿಗಳಲ್ಲಿ ಶೇ.50 ಪ್ರತಿಶತ ಅರಣ್ಯ ಪದವೀಧರರಿಗೆ ಮೀಸಲು ಇರಿಸಲಾಗಿತ್ತು. ಆಡಳಿತ ಸಮಿತಿಯ ವರದಿಯಲ್ಲಿ 100 % ಮುಂಬಡ್ತಿ ಮುಖಾಂತರ ತುಂಬಲು ಶಿಫಾರಸ್ಸು ಮಾಡಿರುತ್ತಾರೆ. ಅದೇ ರೀತಿ ಒಪ್ಪಿಕೊಂಡರೆ ಅರಣ್ಯ ಪದವೀಧರರಿಗೆ…

Read More

ಬೆಂಗಳೂರು: ವಿಧಾನಸೌಧದಲ್ಲಿ ಪಾಕಿಸ್ತಾನದ ಪರ ಘೋಷಣೆ ಕೂಗಿರುವವರನ್ನು ಪತ್ತೆ ಹಚ್ಚಿ ಕಾನೂನು ರೀತ್ಯಾ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವರಾದ ಡಾ.ಜಿ.ಪರಮೇಶ್ವರ್ ತಿಳಿಸಿದರು. ಅವರು ಇಂದು ವಿಧಾನಸಭಾ ಅಧಿವೇಶನದಲ್ಲಿ ಪ್ರತಿಪಕ್ಷದ ನಾಯಕರಾದ ಆರ್.ಅಶೋಕ್ ಹಾಗೂ ಪ್ರತಿಪಕ್ಷದ ಸದಸ್ಯರುಗಳು ರಾಜ್ಯಸಭಾ ಚುನಾವಣೆಯಲ್ಲಿ ವಿಜೇತರಾದ ಅಭ್ಯರ್ಥಿ ಡಾ.ಸೈಯದ್ ನಾಸೀರ್ ಹುಸೇನ್ ಬೆಂಗಲಿಗರು ಪಾಕಿಸ್ತಾನ ಪರ ಘೋಷಣೆ ಕೂಗಿರುವ ಬಗ್ಗೆ ಪ್ರಸ್ತಾಪಿಸಿದ ಸಂದರ್ಭದಲ್ಲಿ ಗೃಹ ಸಚಿವರು ಮಾತನಾಡಿ, ಈಗಾಲೇ ಈ ಪ್ರಕರಣದ ಬಗ್ಗೆ ತನಿಖೆ ನಡೆಸಲಾಗುತ್ತಿದೆ. ಈಗಾಗಲೇ ಈ ಪ್ರಕರಣದ ಬಗ್ಗೆ ಎಫ್‍ಐಆರ್ ದಾಖಲಿಸಿಕೊಂಡು, ತನಿಖೆಯನ್ನು ಚುರುಕುಗೊಳಿಸಿದೆ. ದೇಶದ ಹಿತದೃಷ್ಟಿಯಿಂದ ಹಾಗೂ ಸಮಾಜದ ಹಿತದೃಷ್ಟಿಯಿಂದ ಅಪರಾಧಿಗಳನ್ನು ಆದಷ್ಟು ಶೀಘ್ರದಲ್ಲಿ ಪತ್ತೆ ಹಚ್ಚಲಾಗುವುದು. ಪಾಕಿಸ್ತಾನದ ಪರ ಘೋಷಣೆ ಕೂಗಿರುವವರನ್ನು ರಕ್ಷಿಸುವ ಮಾತೇ ಇಲ್ಲ ಎಂದರು. ರಾಜ್ಯದಲ್ಲಿ ಪಾಕಿಸ್ತಾನದ ಪರ ಧ್ವನಿ ಎತ್ತಿ ಪಾಕಿಸ್ತಾನ ಜಿಂದಾಬಾದ್ ಎಂದು ಘೋಷಣೆಯನ್ನು ಯಾರೇ ಕೂಗಲಿ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

Read More

ಕೆಎನ್‌ಎನ್‌ಡಿಜಿಟಲ್‌ಡೆಸ್ಕ್‌: ತಲೆಯ ಚರ್ಮ ಅಂದರೆ ನೆತ್ತಿಯ ಚರ್ಮ ಕೂಡ ತುಂಬಾ ಸೂಕ್ಷ್ಮವಾಗಿರುತ್ತದೆ. ಇದು ಸೂಕ್ಷ್ಮ ಚರ್ಮ ಎಂದರೆ ತಪ್ಪಾಗಲಾರದು. ತಲೆಯ ಚರ್ಮದ ತುರಿಕೆಗೆ ಅನೇಕ ಕಾರಣಗಳಿವೆ. ಹೊರಗಡೆಯ ಟ್ರಾಫಿಕ್‌ ಧೂಳು, ಬೆವರು, ತಲೆಯ ಹೊಟ್ಟು, ಕಾರ್ಬನ್‌ ಮಿಶ್ರಿತ ಹೊಗೆ, ಹೀಗೆ ಅನೇಕ ಕಾರಣಗಳಿವೆ. ಈ ಎಲ್ಲಾ ಕಾರಣಗಳಿಂದ ನೆತ್ತಿಯ ಚರ್ಮಕ್ಕೆ ಶಿಲಿಂಧ್ರ ಸೊಂಕು ಉಂಟಾಗುತ್ತದೆ. ಈ ಶಿಲೀಂದ್ರ ಸೋಕು ನೆತ್ತಿ ಚರ್ಮಕ್ಕೆ ತುಂಬಾ ಹಾನಿಯುಂಟು ಮಾಡುತ್ತದೆ. ಈ ಸಮಸ್ಯೆಗೆ ನಾವಿಂದು ಪರಿಹಾರ ಕಂಡುಕೊಳ್ಳೋಣ ಬನ್ನಿ. ಬೇವು ಈ ತಲೆ ಚರ್ಮದ ಸೋಂಕಿಗೆ ರಾಮಬಾಣದಂತೆ ಕೆಲಸ ಮಾಡುತ್ತದೆ. ಅಷ್ಟೆ ಅಲ್ಲದೇ ಬೇವು ಇನ್ನುಳಿದ ಚರ್ಮದ ಸೋಂಕಿಗೂ ಮದ್ದಾಗಿದೆ. ಬೇವನ್ನು ಬಳಸಿ ನೆತ್ತಿಯ ಶಿಲೀಂದ್ರ ಸೋಂಕಿಗೆ ಹೇಗೆ ಚಿಕಿತ್ಸೆ ನೀಡಬೇಕೆಂದರೆ, ಬೇವಿ ಎಲೆಗಳನ್ನು ಕಿತ್ತು ಅವುಗಳನ್ನು ಶುಭ್ರವಾಗಿ ಸ್ವಚ್ಛವಾದ ನೀರಿನಲ್ಲಿ ತೊಳೆಯಬೇಕು. ಒಂದು ಮಿಕ್ಸಿ ಜಾರಿಗೆ ಬೇವಿನ ಎಲೆಗಳನ್ನು ಹಾಕಿ ಮಿಕ್ಸಿ ಮಾಡಿ ಪೇಸ್ಟ್‌ ರೂಪದಲ್ಲಿ ಮಾಡಿಕೊಳ್ಳಬೇಕು. ಈ ಬೇವಿನ ಪೇಸ್ಟ್‌ಗೆ ನಿಂಬೆ ರಸ…

Read More

ನವದೆಹಲಿ: 1993 ರ ಸರಣಿ ಬಾಂಬ್ ಸ್ಫೋಟ ಪ್ರಕರಣದ ಪ್ರಮುಖ ಆರೋಪಿ ಅಬ್ದುಲ್ ಕರೀಂ ತುಂಡಾ ಅವರನ್ನು ಟಾಡಾ (ಭಯೋತ್ಪಾದಕ ಮತ್ತು ವಿಧ್ವಂಸಕ ಚಟುವಟಿಕೆಗಳ ಕಾಯ್ದೆ) ನ್ಯಾಯಾಲಯ ಗುರುವಾರ ಖುಲಾಸೆಗೊಳಿಸಿದೆ.   https://kannadanewsnow.com/kannada/if-you-have-constipation-stop-consuming-these-foods-immediately-2/ ಮಹತ್ವದ ಬೆಳವಣಿಗೆಯೊಂದರಲ್ಲಿ, 1993 ರ ಸರಣಿ ಬಾಂಬ್ ಸ್ಫೋಟ ಪ್ರಕರಣದ ಪ್ರಮುಖ ಆರೋಪಿ ಅಬ್ದುಲ್ ಕರೀಂ ತುಂಡಾ ಅವರನ್ನು ಭಯೋತ್ಪಾದಕ ಮತ್ತು ವಿಧ್ವಂಸಕ ಚಟುವಟಿಕೆಗಳ ಕಾಯ್ದೆ (ಟಾಡಾ) ನ್ಯಾಯಾಲಯ ಖುಲಾಸೆಗೊಳಿಸಿದೆ. https://kannadanewsnow.com/kannada/bjp-moves-court-against-ban-on-chakravarthy-sulibele-from-entering-kalaburagi/ https://kannadanewsnow.com/kannada/dont-you-feel-ashamed-to-justify-the-injustice-done-to-7-crore-kannadigas-siddaramaiah/ 2013ರಲ್ಲಿ ಭಾರತ-ನೇಪಾಳ ಗಡಿಯ ಬನ್ಬಾಸಾದಲ್ಲಿ ಈತನನ್ನು ಬಂಧಿಸಲಾಗಿತ್ತು. ಹಲವಾರು ಬಾಂಬ್ ಸ್ಫೋಟಗಳ ಆರೋಪಗಳ ಹೊರತಾಗಿಯೂ, ಅವರ ವಿರುದ್ಧದ ನಾಲ್ಕು ಪ್ರಕರಣಗಳಲ್ಲಿ 2016 ರಲ್ಲಿ ದೆಹಲಿ ನ್ಯಾಯಾಲಯದಿಂದ ಕ್ಲೀನ್ ಚಿಟ್ ಪಡೆದಿದ್ದ. ಆರೋಪಗಳನ್ನು ರೂಪಿಸಲು ಅವರ ವಿರುದ್ಧ ಗಮನಾರ್ಹ ಪುರಾವೆಗಳನ್ನು ತರಲು ದೆಹಲಿ ಪೊಲೀಸರು ವಿಫಲರಾಗಿದ್ದಾರೆ ಎಂದು ನ್ಯಾಯಾಲಯವು ಹೇಳಿದೆ. ಆದಾಗ್ಯೂ, ಲಷ್ಕರ್-ಎ-ತೈಬಾ ಭಯೋತ್ಪಾದಕನ ವಿರುದ್ಧ ಹಲವಾರು ಪ್ರಕರಣಗಳು ಬಾಕಿ ಇರುವ ಕಾರಣ ಲಾಕಪ್ನಲ್ಲಿಯೇ ಉಳಿದಿದ್ದಾನೆ.

Read More

ಕೆಎನ್‌ಎನ್‌ಡಿಜಿಟಲ್‌ಡೆಸ್ಕ್‌: ಸರ್ವಕಾಲಕ್ಕೂ ಸುಲಭವಾಗಿ ಸಿಗುವ ಹಣ್ಣು ಎಂದರೆ ಅದು ಬಾಳೆಹಣ್ಣು. ಬಾಳೆಹಣ್ಣು ಸಾಮಾನ್ಯವಾಗಿ ಎಲ್ರೂ ನಿತ್ಯವೂ ಸೇವಿಸುತ್ತಾರೆ. ಆದರೆ ಇದೇ ಬಾಳೆಹಣ್ಣಿನ ಸಿಪ್ಪೆ ಎಸೆಯುವ ಮೊದಲು ಒಮ್ಮೆ ಈ ಲೇಖನ ಓದಿಕೊಳ್ಳಿ. ಬಾಳೆಹಣ್ಣಿನ ಸಿಪ್ಪೆಯಿಂದಲೂ ಅನೇಕ ಲಾಭಗಳಿವೆ, ಅವುಗಳೆಂದರೆ ಬಾಳೆಹಣ್ಣಿನ ಸಿಪ್ಪೆ ನೋವು ನಿವಾರಕವಾಗಿ ಕೆಲಸ ಮಾಡುತ್ತದೆ. ದೇಹದ ಯಾವುದೇ ಭಾಗದಲ್ಲಿ ಊರಿ ನೋವು ಕಾಣಸಿಕೊಂಡರೆ ಅಲ್ಲಿ ಚೆನ್ನಾಗಿ ಮಾಗಿದ ಬಾಳೆಹಣ್ಣಿನ ಸಿಪ್ಪೆಯನ್ನು ಇಟ್ಟು 20 ನಿಮಿಷಗಳ ಕಾಳ ಹಾಗೆಯೇ ಬಿಡಿ. ನಂತರ ಸಿಪ್ಪೆ ತೆಗೆಯಿರಿ. ನೋವು ಇಲ್ಲದಂತಾಗುತ್ತದೆ. ಕೆಲಸದ ಒತ್ತಡದಿಂದ ಅಥವಾ ಕಣ್ಣಿಗೆ ಹೆಚ್ಚು ಶ್ರಮಕೊಟ್ಟಾಗ, ಸರಿಯಾಗಿ ನಿದ್ರೆ ಆಗದೇ ಇದ್ದಾಗ ಕಣ್ಣುಗಳು ಊದಿಕೊಳ್ಳುತ್ತವೆ. ಹೀಗೆ ಆದಾಗ ಬಾಳೆಹಣ್ಣಿನ ಸಿಪ್ಪೆಯನ್ನು ಕಣ್ಣಿನ ಕೆಳಭಾಗದಲ್ಲಿ ಸ್ವಲ್ಪ ಹೊತ್ತು ಇಟ್ಟುಕೊಂಡರೆ ಊದಿಕೊಂಡ ಕಣ್ಣುಗಳು ಮತ್ತೆ ಸಹಜ ಸ್ಥಿತಿಗೆ ಬರುತ್ತದೆ. ಹೀಗೆ ಮಾಡಿದರೆ ಕಣ್ಣಿನ ಆರೋಗ್ಯಕ್ಕೆ ತಂಪು ಹಾಗು ಕಣ್ಣಿನ ಒತ್ತಡವನ್ನೂ ಕಡಿಮೆ ಮಾಡುತ್ತದೆ. ಶೂ ಪಾಲಿಶ್‌ ಮಾಡುತ್ತದೆ. ಹೌದು ಬಾಳೆಹಣ್ಣಿನ ಸಿಪ್ಪೆಯಿಂದ ಶೂ…

Read More

ಬೆಂಗಳೂರು: ಬ್ರಾಹ್ಮಣ ಹಾಗೂ ಆರ್ಯ ವೈಶ್ಯ ಸಮಾಜದ 4067 ವಿದ್ಯಾರ್ಥಿಗಳಿಗೆ ಸಚಿವ ಕೃಷ್ಣ ಬೈರೇಗೌಡ ಅವರು ಫೆಬ್ರವರಿ 27, ಮಂಗಳವಾರ 5.53 ಕೋಟಿ ರೂ. ವಿದ್ಯಾರ್ಥಿ ವೇತನವನ್ನು ನೇರ ನಗದು ವರ್ಗಾವಣೆ ಮೂಲಕ ವಿದ್ಯಾರ್ಥಿಗಳ ಖಾತೆಗೆ ನೇರ ವರ್ಗಾವಣೆಗೊಳಿಸಿದರು. ಹಣ ವರ್ಗಾವಣೆ ನಂತರ ವಿದ್ಯಾರ್ಥಿಗಳಿಗೆ ಶುಭ ಕೋರಿದ ಸಚಿವರು, “ಆರ್ಥಿಕವಾಗಿ ಹಿಂದುಳಿದಿರುವ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿ ಎಂಬ ಕಾರಣಕ್ಕೆ ಬ್ರಾಹ್ಮಣ ಮತ್ತು ಆರ್ಯ ವೈಶ್ಯ ಅಭಿವೃದ್ಧಿ ನಿಗಮದಿಂದ ವಿದ್ಯಾರ್ಥಿ ವೇತನ ನೀಡಲಾಗುತ್ತಿದೆ. ಪದವಿಪೂರ್ವ, ಪದವಿ, ಸ್ನಾತಕೋತ್ತರ ಪದವಿ ಹಾಗೂ ವೃತ್ತಿಪರ ಕೋರ್ಸ್ ಅಧ್ಯಯನ ನಡೆಸುತ್ತಿರುವ ಎರಡೂ ಸಮಾಜದ 4 ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಈಗಾಗಲೇ ನೇರ ನಗದು ವರ್ಗಾವಣೆ ಮೂಲಕ ಬ್ಯಾಂಕ್ ಖಾತೆಗೆ ಹಣ ಜಮಾ ಮಾಡಲಾಗಿದೆ. ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಂಡು ಉತ್ತಮ ಭವಿಷ್ಯ ರೂಪಿಸಿಕೊಂಡು, ಸಮಾಜಕ್ಕೆ ಬೆಳಕಾಗಬೇಕು ಎಂದು ಅವರು ಹಾರೈಸಿದರು. ಬ್ರಾಹ್ಮಣ ಅಭಿವೃದ್ಧಿ ಮಂಡಳಿ ವಿದ್ಯಾರ್ಥಿ ವೇತನದ ವಿವರ: 2023-24ನೇ ಸಾಲಿನಲ್ಲಿ ಕರ್ನಾಟಕ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯಿಂದ 2710…

Read More

ಕೆಎನ್‌ಎನ್‌ಡಿಜಿಟಲ್‌ಡೆಸ್ಕ್‌: ಈ ಹಿಂದೆ ಬಿಡುಗಡೆಯಾಗಿದ್ದ ಟ್ರಾನ್ಸ್ ಸಾಂಗ್ ಮೂಲಕ ವ್ಯಾಪಕ ಕ್ರೇಜ್ ಸೃಷ್ಟಿಸಿದ್ದ ಚಿತ್ರ `ಕೈಲಾಸ ಕಾಸಿದ್ರೆ ಸಿನಿಮಾದ ಟ್ರೈಲರ್‌ ಬಿಡುಗಡೆಯಾಗಿದೆ. ದೃಶ್ಯಗಳ ಮೂಲಕವೇ ಕಿಕ್ಕೇರಿಸೋ ಶೈಲಿಯ ಈ ಟ್ರಾನ್ಸ್ ವೀಡಿಯೋ ಸಾಂಗ್ ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡುತ್ತಿದೆ. ನೋಡುಗರ ಕಡೆಯಿಂದ ಮೆಚ್ಚುಗೆಯನ್ನೂ ಪಡೆದುಕೊಳ್ಳುತ್ತಿದೆ. ನಾಯಕ ರವಿ ಸೇರಿದಂತೆ ಒಂದಷ್ಟು ಪಾತ್ರಗಳ ಮಜಲುಗಳು ಈ ಮೂಲಕ ಪ್ರೇಕ್ಷಕರೆದುರು ತೆರೆದುಕೊಂಡಿವೆ. ದರಲ್ಲಿಯೂ ವಿಶೇಷವಾಗಿ ಕಾಮಿಡಿ ಕಿಲಾಡಿಗಳು ಖ್ಯಾತಿಯ ಸೂರಜ್ ಪಾತ್ರವಿಲ್ಲಿ ಪ್ರಧಾನವಾಗಿಯೇ ಸೆಳೆದಿದೆ. ಸೂರಜ್ ಒಂದಿಡೀ ಚಿತ್ರದ ತುಂಬಾ ಕ್ಯಾಟಿ ಆಗುವಂಥಾ ಹಾಸ್ಯ ಪಾತ್ರದಲ್ಲಿ ನಟಿಸಿದ್ದಾರೆ. ನಾಯಕನಿಗೆ ಸರಿ ಸಮನಾಗಿರುವ ಆ ಪಾತ್ರ ಕೂಡಾ ಈ ಟ್ರೈಲರ್ ನ ಹೈಲೈಟ್ ಗಳಲ್ಲೊಂದು ಆಗಿದೆ. ರವಿ ಗೆ ಜೋಡಿಯಾಗಿ ಸುಕನ್ಯಾ ನಟಿಸಿದ್ದಾರೆ. ಶಿವಾಜಿ ಸುರತ್ಕಲ್ ಚಿತ್ರದ ಸಣ್ಣ ಪಾತ್ರದಲ್ಲಿ ನಟಿಸಿದ್ದ ಸುಕನ್ಯಾ ಈ ಮೂಲಕ ನಾಯಕಿಯಾಗಿದ್ದಾರೆ. ವಾಸಿಕ್ ಅಲ್ಸಾದ್ ನಿರ್ಮಾಣ ಮಾಡಿರುವ ಕೈಲಾಸ ಚಿತ್ರಕ್ಕೆ ಆಶಿಕ್ ಅರುಣ್ ಸಂಗೀತ, ತ್ಯಾಗರಾಜನ್ ಸಂಕಲನ, ಲೇಖಕ್ ಎಂ…

Read More