Author: kannadanewsnow07

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2024-25ನೇ ಸಾಲಿನ ಕರ್ನಾಟಕ ಬಜೆಟ್ ಮಂಡನೆ ಮಾಡುತ್ತಿದ್ದಾರೆ. ನಡುವೆ ಆರಂಭದಲ್ಲಿ ಅವರು ಕೇಂಧ್ರ ಸ್ಕಾರ ವಿರುದ್ದ ಕಿಡಿಕಾರಿದ್ದಾರೆ. ಕಾಂಗ್ರೆಸ್ ಸರ್ಕಾರ ರೂಪಿಸಿರುವ ಗ್ಯಾರಂಟಿ ಯೋಜನೆಗಳು ಚುನಾವಣಾ ಗಿಮಿಕ್​ಗಳಲ್ಲ. ಬಡವರ ಏಳಿಗೆಗಾಗಿ ನಮ್ಮ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಕೈಗೊಂಡಿದೆ ಅಂತ ತಿಳಿಸಿದ್ದಾರೆ. ಇನ್ನೂ ಬಜೆಟ್​​ನ ಒಟ್ಟು ಗಾತ್ರ 3,71,383 ಕೋಟಿ ರೂ. ಎಂದು ತಿಳಿಸಿದರು. 14 ಬಾರಿ ಬಜೆಟ್ ಮಂಡಿಸಿ ದಾಖಲೆ ಮಾಡಿರುವ ಸಿಎಂ ಸಿದ್ದರಾಮಯ್ಯ ಇಂದು ತಮ್ಮ 15ನೇ ಆಯವ್ಯಯವನ್ನು ಮಂಡಿಸುತ್ತಿದ್ದಾರೆ. ಈ ಬಾರಿ ಬಜೆಟ್​ ಪ್ರತಿಗಳನ್ನು ಸರ್ಕಾರಿ ಸ್ವಾಮ್ಯದ ಲೀಡ್ಕರ್ ಸಂಸ್ಥೆಯ ಬ್ಯಾಗ್​ನಲ್ಲಿ ಸಿಎಂ ತೆಗೆದುಕೊಂಡು ಬಂದು, ಹೊಸ ಸಂಪ್ರದಾಯಕ್ಕೆ ನಾಂದಿ ಹಾಡಿದ್ದಾರೆ.

Read More

ಬೆಂಗಳೂರು: HSRP ನಂಬರ್ ಪ್ಲೇಟ್ ಅಳವಡಿಕೆಗೆ ಮತ್ತೊಂದು ಮಹತ್ವದ ಕ್ರಮವನ್ನು ಕೈಗೊಳ್ಳವುದಕ್ಕೆ ರಾಜ್ಯ ಸರ್ಕಾರ ಮುಂದಾಗಿದೆ. ವಿಧಾನಸೌಧದಲ್ಲಿ ಮಾತನಾಡಿದ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ HSRP ನಂಬರ್ ಪ್ಲೇಟ್ ಅಳವಡಿಕೆಗೆ ಜಿಲ್ಲೆಗಳಲ್ಲಿ ಹೆಚ್ಚಿನ‌ ಕಡೆ ನೋಂದಣಿ ಕೇಂದ್ರ ಸ್ಥಾಪಿಸಲು ಯೋಜಿಸಲಾಗುವುದು ಎಂದು ತಿಳಿಸಿದರು. ಇದೇ ವೇಳೆ ಅವರು ಮಾತನಾಡುತ್ತ, HSRP ನಂಬರ್ ಪ್ಲೇಟ್ ಆನ್​ಲೈನ್​ನಲ್ಲಿ ಅಳವಡಿಕೆ ಮಾಡುವ ದಿನಾಂಕವನ್ನು ಮುಂದೂಡಿಕೆ ಮಾಡಿದ್ದೇವೆ. ಮೂರು ತಿಂಗಳು ಕಾಲಾವಕಾಶ ನೀಡಲಾಗಿದೆ. ಎಲ್ಲರೂ ಒಂದೇ ಅವಧಿಗೆ ಅಪ್ಲೈ ಮಾಡುವಾಗ ಸರ್ವರ್ ಸಮಸ್ಯೆ ಆಗಲಿದೆ, ಈ ನಿಟ್ಟಿನಲ್ಲಿ ಸರ್ವರ್ ಸಮಸ್ಯೆಯನ್ನು ಸರಿಪಡಿಸುತ್ತೇವೆ ಅಂತ ಹೇಳಿದರು.

Read More

ಬೆಂಗಳೂರು : ಪಡಿತರ ಚೀಟಿಗಾಗಿ (Ration Card) ಸಲ್ಲಿಸಿರುವ ಅರ್ಜಿಗಳನ್ನು ಮಾರ್ಚ್ 31 ರೊಳಗೆ ಪರಿಶೀಲನೆ ನಡೆಸಿ ಏಪ್ರಿಲ್ 1 ರಿಂದ ವಿತರಣೆ ಮಾಡಲಾಗುವುದು ಅಂತ ಇಂದು ಸದನದಲ್ಲಿ ಆಹಾರ ಮತ್ತು ನಾಗರೀಕ ಪೂರೈಕೆ ಸಚಿವ ಕೆ.ಹೆಚ್‌ ಮುನಿಯಪ್ಪ ಅವರು ತಿಳಿಸಿದ್ದಾರೆ. ಅವರು ಇಂದು ವಿ ಧಾನಸಭೆಯ (Vidhan Sabha) ಪ್ರಶ್ನೋತ್ತರ ವೇಳೆ ಶಾಸಕಿ ನಯನಾ ಮೋಟಮ್ಮ (Nayana Motappa)  ಕೇಳಿದ ಪ್ರಶ್ನೆಗೆ ಉತ್ತರಿಸುತ್ತ ಈ ಬಗ್ಗೆ ಮಾಹಿತಿ ನೀಡಿದರು. ಇದೇ ವೇಳೆ ನಾವು ಇಲ್ಲಿಯವರೆಗೆ 57 ಸಾವಿರ ಹೊಸ ಕಾರ್ಡ್ ವಿತರಿಸಿದ್ದೇವೆ. ಆರೋಗ್ಯ ಚಿಕಿತ್ಸೆಗಾಗಿ ಅರ್ಜಿ ಸಲ್ಲಿಸಿದವರಿಗೆ ತಕ್ಷಣ ಕಾರ್ಡ್ ವಿತರಿಸಲು ಸೂಚಿಸಿದ್ದೇವೆ. ಆರೋಗ್ಯ ತುರ್ತು ಕಾರಣಕ್ಕೆ 744 ಜನರಿಗೆ ಬಿಪಿಎಲ್ ಕಾರ್ಡ್ ಕೊಟ್ಟಿದ್ದೇವೆ. ಮುಂದಿನ ಮಾರ್ಚ್ 31 ರೊಳಗೆ ಸಲ್ಲಿಕೆಯಾಗಿರುವ ಅರ್ಜಿಗಳನ್ನು ಪರಿಶೀಲಿಸಿ ಕಾರ್ಡ್​​​ಗಳನ್ನು ವಿತರಿಸುವ ತೀರ್ಮಾನ ಕೈಗೊಂಡಿದ್ದೇವೆ ಅಂಥ ತಿಳಿಸಿದರು. ಬಿಪಿಎಲ್ ಕಾರ್ಡ್​ ಅರ್ಜಿ ಸಲ್ಲಿಕೆ ವೇಳೆ ತಾಂತ್ರಿಕ ಸಮಸ್ಯೆಯಾಗುತ್ತಿದ್ದು, ಲವರ ಆಧಾರ್ ಸಂಖ್ಯೆ ಬ್ಯಾಂಕ್ ಖಾತೆ…

Read More

ಬೆಂಗಳೂರು: ರಾಜ್ಯ ಸರ್ಕಾರದಿಂದ ಮಾನ್ಯತೆ ಪಡೆದ ಎಲ್ಲಾ ಖಾಸಗಿ ಆಸ್ಪತ್ರೆಗಳಲ್ಲಿ ನಿಗಮದ ನೌಕರರು ಮತ್ತು ಅವರ ಅವಲಂಬಿತರು ಪಡೆದ ವೈದ್ಯಕೀಯ ಚಿಕಿತ್ಸಾ ವೆಚ್ಚವನ್ನು CGHS ದರಪಟ್ಟಿಯಲ್ಲಿ ಮರುಪಾವತಿ ಮಾಡಲಾಗುತ್ತಿದೆ. ಮುಂದುವರೆದು, ಸರ್ಕಾರವು ಮಾನ್ಯತೆ ನೀಡಿರುವ ಖಾಸಗಿ ಆಸ್ಪತ್ರೆ, ಡಯಗೋಸ್ಟಿಕ್ ಸೆಂಟ‌ ಹಾಗೂ ಆಯುರ್ವೇದ/ನ್ಯಾಚುರೋಪತಿ ಆಸ್ಪತ್ರೆಗಳ ಪಟ್ಟಿಯನ್ನು ಊಲ್ಲೇಖ ಪತ್ರ-2 ರಂತೆ ಈಗಾಗಲೇ ಕಳುಹಿಸಲಾಗಿತ್ತು. ಜಂಟಿ ನಿರ್ದೇಶಕರು (ವೈದ್ಯಕೀಯ) ಆರೋಗ್ಯ ಸೌಧ, ಬೆಂಗಳೂರು ರವರಿಂದ ಸರ್ಕಾರದಿಂದ ಮಾನ್ಯತೆ ಪಡೆದ ಖಾಸಗಿ ಆಸ್ಪತ್ರೆಗಳ ಇತ್ತೀಚಿನ ಪಟ್ಟಿಯನ್ನು ಪಡೆದಿದ್ದು, ಸದರಿ ಪಟ್ಟಿಯನ್ನು ಈ ಪತ್ರದೊಂದಿಗೆ ಲಗತ್ತಿಸಿದ್ದು, ಸದರಿ ಪಟ್ಟಿಯಲ್ಲಿರುವ ತಿದ್ದುಪಡಿ/ಮಾರ್ಪಾಡುಗಳನ್ನು ಅಳವಡಿಸಿಕೊಂಡು ವೈದ್ಯಕೀಯ ಮರುಪಾವತಿಗೆ ಕ್ರಮವಹಿಸುವಂತೆ ಕೋರಲಾಗಿದೆ ವಿವರ ಹೀಗಿದೆ.

Read More

ಬೆಂಗಳೂರು:ಬಿಜೆಪಿ ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಕುಪೇಂದ್ರ ರೆಡ್ಡಿ ಅವರನ್ನು ರಾಜ್ಯಸಭೆಯ ಕಣಕ್ಕೆ ಇಳಿಸಲು ತೀರ್ಮಾನಿಸಲಾಗಿದೆ ಅಂತ ಮಾಜಿ ಸಿಎಂ ಕುಮಾರಸ್ವಾಮಿ ತಿಳಿಸಿದ್ದಾರೆ. ಅವರು ಇಂದು ವಿಧಾನಸೌಧದಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡುತ್ತ ಈ ಬಗ್ಗೆ ತಿಳಿಸಿದರು. ಇದೇ ವೇಳೆ ಅವರು ಮಾತನಾಡಿ ಬಿಜೆಪಿಯ ರಾಷ್ಟ್ರೀಯ ನಾಯಕರು, ರಾಜ್ಯ ನಾಯಕರು ಸಲಹೆ ಕೊಟ್ಟಿದ್ದಾರೆ. ಮತಗಳ ಕೊರತೆ ಬಗ್ಗೆ ಚುನಾವಣೆ ವೇಳೆ ನಿರ್ಧಾರ ಆಗುತ್ತೆ. ಬಿಜೆಪಿ ಹಾಗೂ ಜೆಡಿಎಸ್​ಗೆ ಹೆಚ್ಚುವರಿ ಮತಗಳಿವೆ ಅಂತ ಹೇಳಿದರು. ಇನ್ನೂ ಮಂಗಳೂರಿನಲ್ಲಿ ಬಿಜೆಪಿ ನಾಯಕರ ವಿರುದ್ಧ ಪ್ರಕರಣ ದಾಖಲಾಗಿರುವ ಬಗ್ಗೆ ಪ್ರತಿಕ್ರಿಯಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, “ಜೈ ಶ್ರೀರಾಮ್ ಘೋಷಣೆ ಕೂಗುವುದು ಪ್ರಜಾಪ್ರಭುತ್ವ ವಿರೋಧಿಯೇ? ಸಿದ್ದರಾಮಯ್ಯ ಅವರ ನಾಯಕತ್ವದಲ್ಲಿ, ಭಗವಾನ್ ರಾಮನ ಮಾತನ್ನು ಕೇಳಿ ಅವರು ತೊಂದರೆಗೀಡಾಗುತ್ತಿದ್ದಾರೆ… ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಅವರು ಸಂಪೂರ್ಣವಾಗಿ ಭರವಸೆ ಕಳೆದುಕೊಳ್ಳುತ್ತಿದ್ದಾರೆ. ಅದಕ್ಕಾಗಿಯೇ ಅವರು ಬಿಜೆಪಿ ನಾಯಕರ ವಿರುದ್ಧ ಎಫ್ಐಆರ್ ದಾಖಲಿಸುವ ಮೂಲಕ ಬಹಳ ಆತುರದಿಂದ ವರ್ತಿಸುತ್ತಿದ್ದಾರೆ” ಎಂದು ಕಿಡಿಕಾರಿದ್ದಾರೆ. https://twitter.com/ANI/status/1757987638152188307

Read More

ನವದೆಹಲಿ: ರಷ್ಯಾದ ವಿಜ್ಞಾನಿಗಳು ಕ್ಯಾನ್ಸರ್ಗೆ ಲಸಿಕೆಗಳನ್ನು ರಚಿಸಲು ಹತ್ತಿರದಲ್ಲಿದ್ದಾರೆ ಎಂದು ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಬುಧವಾರ (ಸ್ಥಳೀಯ ಸಮಯ) ಹೇಳಿದ್ದಾರೆ. “ಹೊಸ ಪೀಳಿಗೆಗಾಗಿ ಕ್ಯಾನ್ಸರ್ ಲಸಿಕೆಗಳು ಮತ್ತು ಇಮ್ಯುನೊಮೋಡ್ಯುಲೇಟರಿ ಔಷಧಿಗಳ ಸೃಷ್ಟಿಗೆ ನಾವು ಬಹಳ ಹತ್ತಿರದಲ್ಲಿದ್ದೇವೆ” ಎಂದು ಪುಟಿನ್ ದೂರದರ್ಶನದಲ್ಲಿ ನೀಡಿರುವ ಹೇಳಿಕೆಯಲ್ಲಿ ತಿಳಿಸಿದ್ದಾರೆ. https://kannadanewsnow.com/kannada/public-urges-farmers-organisations-to-call-off-bandh-to-avoid-trouble/ https://kannadanewsnow.com/kannada/breaking-anonymous-electoral-bond-violates-right-to-information-act-supreme-court/ https://kannadanewsnow.com/kannada/bengaluru-america-surya/ “ಶೀಘ್ರದಲ್ಲೇ ಅವುಗಳನ್ನು ವೈಯಕ್ತಿಕ ಚಿಕಿತ್ಸೆಯ ವಿಧಾನಗಳಾಗಿ ಪರಿಣಾಮಕಾರಿಯಾಗಿ ಬಳಸಲಾಗುವುದು ಎಂದು ನಾನು ಭಾವಿಸುತ್ತೇನೆ” ಎಂದು ಅವರು ಭವಿಷ್ಯದ ತಂತ್ರಜ್ಞಾನಗಳ ಬಗ್ಗೆ ಮಾಸ್ಕೋ ವೇದಿಕೆಯಲ್ಲಿ ಮಾತನಾಡುತ್ತಾ ಹೇಳಿದರು. ಪ್ರಸ್ತಾವಿತ ಲಸಿಕೆಗಳು ಯಾವ ರೀತಿಯ ಕ್ಯಾನ್ಸರ್ ಅನ್ನು ಗುರಿಯಾಗಿಸುತ್ತವೆ ಅಥವಾ ಹೇಗೆ ಎಂದು ಪುಟಿನ್ ನಿರ್ದಿಷ್ಟಪಡಿಸಿಲ್ಲ. 2030 ರ ವೇಳೆಗೆ 10,000 ರೋಗಿಗಳನ್ನು ತಲುಪುವ ಗುರಿಯೊಂದಿಗೆ “ವೈಯಕ್ತಿಕಗೊಳಿಸಿದ ಕ್ಯಾನ್ಸರ್ ಚಿಕಿತ್ಸೆಗಳನ್ನು” ಒದಗಿಸುವ ಕ್ಲಿನಿಕಲ್ ಪ್ರಯೋಗಗಳನ್ನು ಪ್ರಾರಂಭಿಸಲು ಯುಕೆ ಸರ್ಕಾರ ಕಳೆದ ವರ್ಷ ಜರ್ಮನಿ ಮೂಲದ ಬಯೋಎನ್ಟೆಕ್ನೊಂದಿಗೆ ಒಪ್ಪಂದಕ್ಕೆ ಸಹಿ ಹಾಕಿತು. ಔಷಧೀಯ ಕಂಪನಿಗಳಾದ ಮಾಡರ್ನಾ ಮತ್ತು ಮರ್ಕ್ & ಕೋ ಪ್ರಾಯೋಗಿಕ ಕ್ಯಾನ್ಸರ್ ಲಸಿಕೆಯನ್ನು…

Read More

ನವದೆಹಲಿ: ರಾಜಕೀಯ ಪಕ್ಷಗಳಿಗೆ ಅನಾಮಧೇಯ ಧನಸಹಾಯಕ್ಕೆ ಅವಕಾಶ ನೀಡುವ ಕೇಂದ್ರ ಸರ್ಕಾರದ ಚುನಾವಣಾ ಬಾಂಡ್ ಯೋಜನೆಯ ಕಾನೂನು ಸಿಂಧುತ್ವವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ಬಗ್ಗೆ ಸರ್ವಾನುಮತದ ತೀರ್ಪನ್ನು ನೀಡಿದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಸುಪ್ರೀಂ ಕೋರ್ಟ್ನ ಸಾಂವಿಧಾನಿಕ ಪೀಠವು ಗುರುವಾರ ಚುನಾವಣಾ ಬಾಂಡ್ ಯೋಜನೆಯನ್ನು ರದ್ದುಗೊಳಿಸಿದ್ದು, ಇದನ್ನು “ಅಸಂವಿಧಾನಿಕ” ಎಂದು ಕರೆದಿದೆ.  ಇನ್ನೂ ಇದೇ ವೇಳೇ ಚುನಾವಣಾ ಬಾಂಡ್ ವಿತರಣೆಯನ್ನು ತಕ್ಷಣವೇ ನಿಲ್ಲಿಸಿ ಅಂತ ಸುಪ್ರಿಂಕೋರ್ಟ್‌ ಸೂಚನೆ ನೀಡಿದೆ. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಿಂದ (ಎಸ್ಬಿಐ) ಚುನಾವಣಾ ಬಾಂಡ್ಗಳನ್ನು ಖರೀದಿಸುವ ಮೂಲಕ ರಾಜಕೀಯ ಪಕ್ಷಗಳಿಗೆ ಅನಾಮಧೇಯ ದೇಣಿಗೆಗಳನ್ನು ಅನುಮತಿಸುವ ಚುನಾವಣಾ ಬಾಂಡ್ ಯೋಜನೆಯನ್ನು ಸುಪ್ರೀಂ ಕೋರ್ಟ್ ಗುರುವಾರ ರದ್ದುಗೊಳಿಸಿದೆ, ಅನಾಮಧೇಯ ಚುನಾವಣಾ ಬಾಂಡ್ಗಳು ನಾಗರಿಕರ ಮಾಹಿತಿ ಹಕ್ಕನ್ನು ಉಲ್ಲಂಘಿಸುತ್ತವೆ ಎಂದು ಹೇಳಿದೆ. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಿಂದ (ಎಸ್ಬಿಐ) ಚುನಾವಣಾ ಬಾಂಡ್ಗಳನ್ನು ಖರೀದಿಸುವ ಮೂಲಕ ರಾಜಕೀಯ ಪಕ್ಷಗಳಿಗೆ ಅನಾಮಧೇಯ ದೇಣಿಗೆಗಳನ್ನು ಅನುಮತಿಸುವ ಯೋಜನೆಯ ಬಗ್ಗೆ ಮಾತನಾಡಿದ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್,…

Read More

ನವದೆಹಲಿ: ಭಾರತದಲ್ಲಿ ರಾಜಕೀಯ ನಿಧಿಯ ಭವಿಷ್ಯವನ್ನು ರೂಪಿಸುವ ನಿರೀಕ್ಷೆಯಿರುವ ಮಹತ್ವದ ನಿರ್ಧಾರದಲ್ಲಿ, ಸುಪ್ರೀಂ ಕೋರ್ಟ್ನ ಐದು ನ್ಯಾಯಾಧೀಶರ ಸಂವಿಧಾನ ಪೀಠವು ಫೆಬ್ರವರಿ 15 ರಂದು ಕೇಂದ್ರ ಸರ್ಕಾರದ ಚುನಾವಣಾ ಬಾಂಡ್ ಯೋಜನೆಯ ಕಾನೂನು ಸಿಂಧುತ್ವವನ್ನು ಪ್ರಶ್ನಿಸಿ ಸರಣಿ ಅರ್ಜಿಗಳ ಬಗ್ಗೆ ತನ್ನ ತೀರ್ಪನ್ನು ಪ್ರಕಟಿಸಿದೆ. ರಾಜಕೀಯ ಪಕ್ಷಗಳಿಗೆ ಅನಾಮಧೇಯ ಧನಸಹಾಯಕ್ಕೆ ಅವಕಾಶ ನೀಡುವ ಕೇಂದ್ರ ಸರ್ಕಾರದ ಚುನಾವಣಾ ಬಾಂಡ್ ಯೋಜನೆಯ ಕಾನೂನು ಸಿಂಧುತ್ವವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ಬಗ್ಗೆ ಸರ್ವಾನುಮತದ ತೀರ್ಪನ್ನು ನೀಡಿದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ.   ಚುನಾವಣಾ ಪ್ರಕ್ರಿಯೆಯಲ್ಲಿ ರಾಜಕೀಯ ಪಕ್ಷಗಳು ಸಂಬಂಧಿತ ಘಟಕಗಳಾಗಿವೆ ಮತ್ತು ಚುನಾವಣಾ ಆಯ್ಕೆಗಳಿಗೆ ರಾಜಕೀಯ ಪಕ್ಷಗಳಿಗೆ ಧನಸಹಾಯದ ಬಗ್ಗೆ ಮಾಹಿತಿ ಅತ್ಯಗತ್ಯ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಸಿಜೆಐ ಡಿ.ವೈ.ಚಂದ್ರಚೂಡ್ ಅವರು ಎರಡು ಪ್ರತ್ಯೇಕ ತೀರ್ಪುಗಳಿವೆ – ಒಂದು ನಾನು ಮತ್ತು ಇನ್ನೊಂದು ನ್ಯಾಯಮೂರ್ತಿ ಸಂಜೀವ್ ಖನ್ನಾ ಅವರಿಂದ ಬರೆಯಲ್ಪಟ್ಟಿದೆ ಮತ್ತು ಎರಡೂ ತೀರ್ಪುಗಳು ಸರ್ವಾನುಮತದಿಂದ ಕೂಡಿವೆ ಅಂತ ಹೇಳಿದರು. ಅನಾಮಧೇಯ ಚುನಾವಣಾ…

Read More

ಬೆಂಗಳೂರು: ನವಜಾತ ಶಿಶುಗಳಿಗೆ ತುರ್ತು ಆರೋಗ್ಯ ಸೇವೆ ಮತ್ತು ಶಿಶುಗಳ ಮರಣ ಪ್ರಮಾಣವನ್ನು ಏಕ ಅಂಕಿಗೆ ಇಳಿಸುವ ಗುರಿಯನ್ನು ಸಾಧಿಸುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆಯಾಗಿ ಆರೋಗ್ಯ ಇಲಾಖೆ ನವಜಾತ ಶಿಶುಗಳ ಆಂಬ್ಯುಲೆನ್ಸ್ ಸೇವೆಯನ್ನು ಪ್ರಾರಂಭಿಸಿದೆ. ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಬುಧವಾರ ನೂತನ 4 ನವಜಾತ ಆಂಬ್ಯುಲೆನ್ಸ್‌ ಸೇವೆಗಳಿಗೆ ಚಾಲನೆ ನೀಡಿದರು. ಅವಧಿಪೂರ್ವವಾಗಿ ಜನಿಸಿದ ಮಗು ಮತ್ತು ಗಂಭೀರ ಆರೋಗ್ಯ ಸಮಸ್ಯೆಗೆ ತುತ್ತಾಗಿರುವ ಶಿಶುಗಳನ್ನು ಹೆಚ್ಚಿನ ಚಿಕಿತ್ಸೆಗಾಗಿ ಸುರಕ್ಷಿತವಾಗಿ ಕರೆದೊಯ್ಯುವ ನಿಟ್ಟಿನಲ್ಲಿ‌ ಈ ಅಂಬ್ಯುಲೆನ್ಸ್ ಗಳು ಸಹಕಾರಿಯಾಗಲಿವೆ. ಸುಧಾರಿತ ಜೀವ ರಕ್ಷಕ ಸೌಲಭ್ಯಗಳನ್ನು ಒಳಗೊಂಡ ವಾಹನದಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ಸುರಕ್ಷಿತವಾಗಿ ಕರೆದೊಯ್ಯಬಹುದಾಗಿದೆ. ಜಿಲ್ಲಾ ಮತ್ತು ತಾಲ್ಲೂಕು ಕೇಂದ್ರಗಳಿಂದ ದೂರದ ಪ್ರದೇಶಗಳಲ್ಲಿ ಆರೋಗ್ಯ ಸಮಸ್ಯೆ ಇರುವ ಮತ್ತು ವಿಶೇಷ ಆರೈಕೆಯ ಅಗತ್ಯವಿರುವ ಶಿಶುಗಳನ್ನು ಹೆಚ್ಚಿನ ಚಿಕಿತ್ಸೆಗಾಗಿ ಸುರಕ್ಷಿತವಾಗಿ ಆಸ್ಪತ್ರೆಗಳಿಗೆ ಸಾಗಿಸುವಲ್ಲಿ ಅಂಬ್ಯುಲೆನ್ಸ್ ಗಳ ಸೇವೆ ಮುಖ್ಯ. https://kannadanewsnow.com/kannada/rohit-sharma-named-captain-for-2024-t20-world-cup/ ನೂತನ ನವಜಾತ ಶಿಶು ಆಂಬ್ಯುಲೆನ್ಸ್‌ಗಳು ಸೇವೆಗೆ ಲಭ್ಯವಾಗುವುದರ ಮೂಲಕ ಆರೈಕೆಯಲ್ಲಿನ ಅಂತರವು ಕಡಿಮೆಯಾಗಲಿದೆ. ವೆಂಟಿಲೇಟ‌ರ್,…

Read More

ಬೆಂಗಳೂರು: 2022-23ನೇ ಸಾಲಿನ ಕಲ್ಯಾಣ ಕರ್ನಾಟಕದ ಪೆÇಲೀಸ್ ಕಾನ್ಸ್‍ಟೇಬಲ್ (ಸಿವಿಲ್) (ಪುರುಷ ಮತ್ತು ಮಹಿಳಾ), (ತೃತೀಯ ಲಿಂಗ ಪುರುಷ ಮತ್ತು ಮಹಿಳಾ)-1137 ಹುದ್ದೆಗಳ ನೇಮಕಾತಿಗೆ ಲಿಖಿತ ಪರೀಕ್ಷೆಯು ಫೆ.25 ರಂದು ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 12.30 ಗಂಟೆಯವರೆಗೆ ನಗರದ 12 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, ಲಿಖಿತ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು ಕಡ್ಡಾಯವಾಗಿ ವಸ್ತ್ರ ಸಂಹಿತೆಯನ್ನು ಪಾಲಿಸಬೇಕಾಗಿದೆ. https://kannadanewsnow.com/kannada/bjp-mla-k-gopalaiahs-death-threat-case-padmaraju-taken-into-police-custody/ https://kannadanewsnow.com/kannada/watch-video-uttar-pradesh-cm-yogi-adityanath-offers-prayers-at-gyanvapi-mosque/ https://kannadanewsnow.com/kannada/watch-out-for-the-public-you-can-also-get-an-ayushman-card-through-your-mobile/ *ಪುರುಷ ಮತ್ತು ತೃತೀಯಲಿಂಗ ಪುರುಷ ಅಭ್ಯರ್ಥಿಗಳ ವಸ್ತ್ರ ಸಂಹಿತೆ* ಪುರುಷ ಮತ್ತು ತೃತೀಯಲಿಂಗ ಪುರುಷ ಅಭ್ಯರ್ಥಿಗಳು ಅರ್ಧ ತೋಳಿನ ಶರ್ಟ್‍ಗಳನ್ನು ಕಡ್ಡಾಯವಾಗಿ ಧರಿಸಬೇಕು ಹಾಗೂ ಸಾಧ್ಯವಾದಷ್ಟು ಕಾಲರ್ ರಹಿತ ಶರ್ಟ್‍ಗಳನ್ನು ಧರಿಸುವುದು, ಜಿಪ್ ಪ್ಯಾಕೆಟ್‍ಗಳು, ದೊಡ್ಡ ಬಟನ್‍ಗಳು ಇರುವ ಶರ್ಟ್‍ಗಳನ್ನು ಧರಿಸುವಂತಿಲ್ಲ. ಜೀನ್ಸ್ ಪ್ಯಾಂಟ್ ಮತ್ತು ಹೆಚ್ಚಿನ ಜೇಬುಗಳಿರುವ ಪ್ಯಾಂಟ್‍ಗಳನ್ನು ಧರಿಸುವಂತಿಲ್ಲ. ಪರೀಕ್ಷಾ ಕೇಂದ್ರದೊಳಗೆ ಹೂಗಳನ್ನು ನಿಷೇಧಿಸಲಾಗಿದೆ. ಅಭ್ಯರ್ಥಿಗಳು ತೆಳುವಾದ ಅಡಿಭಾಗವಿರುವ ಪಾದರಕ್ಷೆಗಳನ್ನು (ಚಪ್ಪಲಿ) ಧರಿಸುವುದು. ಕುತ್ತಿಗೆ ಸುತ್ತಾ ಯಾವುದೇ ಲೋಹದ ಆಭರಣಗಳು ಅಥವಾ ಉಂಗುರ ಮತ್ತು ಕಡಗಳನ್ನು…

Read More