Author: kannadanewsnow07

ಬೆಂಗಳೂರು: ರಾಜ್ಯಸಭೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ. ಕರ್ನಾಟಕದ ಬಿಜೆಪಿ ಅಭ್ಯರ್ಥಿಯಾಗಿ ನಾರಾಯಣಸಾ ಭಾಂಡಗೆ ಅವಕಾಶ ನೀಡಲಾಗಿದೆ ಮೇಲ್ಮನೆಯಲ್ಲಿ ನಾರಾಯಣಸಾ ಭಾಂಡಗೆ ಕೂಡ ಕಾರ್ಯನಿರ್ವಹಿಸಿದ್ದರು. ಇನ್ನೂ ವ ಬಿಹಾರದಿಂಧ ಡಾ.ಧರ್ಮಶೀಲಾ ಗುಪ್ತ, ಡಾ.ಭೀಮಸಿಂಗ್‌ ಅವರಿಗೆ ಮತ್ತು ಛತ್ತೀಸ್‌ಘಡ್‌ನಿಂದ ದೇವೇಂದ್ರ ಪ್ರತಾಪ್‌ ಸಿಂಗ್‌ಗೆ ಟೀಕೇಟ್‌ ಅವರಿಗೆ ಕೂಡ ಟಿಕೇಟ್‌ ನೀಡಲಾಗಿದೆ. ಈ ನಡುವೆ ರಾಜ್ಯ ಸಭಾ ಸದ್ಯಸ ಟಿಕೇಟ್‌ಗಾಗಿ ಕಳೆದ ಒಂದು ತಿಂಗಳಿನಿಂದೆ ದೆಹಲಿ ನಾಯಕರತ್ತ ತಿರುಗಾಡುತ್ತಿದ್ದ ಮಾಜಿ ಸಚಿವ ವಿ.ಸೋಮಣ್ಣನವರಿಗೆ ಬಿಗ್‌ ಶಾಕ್‌ ಹೈಕಮಾಂಡ್ ನೀಡಿದೆ.

Read More

ನವದೆಹಲಿ: 2016 ರಲ್ಲಿ ನ್ಯಾಷನಲ್ ಪೇಮೆಂಟ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ (ಎನ್ಪಿಸಿಐ) ಅಭಿವೃದ್ಧಿಪಡಿಸಿದ ಭಾರತದ ಸ್ವದೇಶಿ ತ್ವರಿತ ಪಾವತಿ ವ್ಯವಸ್ಥೆಯಾದ ಯುನಿಫೈಡ್ ಪೇಮೆಂಟ್ಸ್ ಇಂಟರ್ಫೇಸ್ (ಯುಪಿಐ) ಅನ್ನು ಸೋಮವಾರ (ಫೆಬ್ರವರಿ 12) ವರ್ಚುವಲ್ ಸಮಾರಂಭದಲ್ಲಿ ಶ್ರೀಲಂಕಾ ಮತ್ತು ಮಾರಿಷಸ್ನಲ್ಲಿ ಪ್ರಾರಂಭಿಸಲಾಗುವುದು, ಇದರಲ್ಲಿ ಪ್ರಧಾನಿ ನರೇಂದ್ರ ಮೋದಿ, ಮಾರಿಷಸ್ ಪ್ರಧಾನಿ ಪ್ರವಿಂದ್ ಜುಗ್ನೌತ್ ಮತ್ತು ಶ್ರೀಲಂಕಾ ಅಧ್ಯಕ್ಷ ರನಿಲ್ ವಿಕ್ರಮಸಿಂಘೆ ಸಾಕ್ಷಿಯಾಗಲಿದ್ದಾರೆ. ಪ್ರಧಾನಿ ಕಚೇರಿ ಭಾನುವಾರ ಮಾಹಿತಿ ನೀಡಿದೆ.  ಅದೇ ಸಮಯದಲ್ಲಿ, ಸಮಾರಂಭದಲ್ಲಿ ಮಾರಿಷಸ್ನಲ್ಲಿ ರುಪೇ ಕಾರ್ಡ್ ಸೇವೆಗಳನ್ನು ಸಹ ಪ್ರಾರಂಭಿಸಲಾಗುವುದು ಎಂದು ಪಿಎಂಒ ತಿಳಿಸಿದೆ. ಹಿಂದೂ ಮಹಾಸಾಗರ ಪ್ರದೇಶದ (ಐಒಆರ್) ಉಭಯ ದೇಶಗಳಲ್ಲಿ ಯುಪಿಐ ಪ್ರಾರಂಭಿಸುವುದರಿಂದ ಶ್ರೀಲಂಕಾ ಮತ್ತು ಮಾರಿಷಸ್ಗೆ ಪ್ರಯಾಣಿಸುವ ಭಾರತೀಯ ಪ್ರಜೆಗಳಿಗೆ ಮತ್ತು ಭಾರತಕ್ಕೆ ಪ್ರಯಾಣಿಸುವ ಮಾರಿಷಸ್ ನಾಗರಿಕರಿಗೆ ವ್ಯಾಪಕವಾಗಿ ಜನಪ್ರಿಯವಾದ ಮೊಬೈಲ್ ಆಧಾರಿತ ಪಾವತಿ ವ್ಯವಸ್ಥೆಯ ಮೂಲಕ ಇತ್ಯರ್ಥ ಸೇವೆಗಳ ಲಭ್ಯತೆಯನ್ನು ಶಕ್ತಗೊಳಿಸುತ್ತದೆ ಎಂದು ಪಿಎಂಒ ತಿಳಿಸಿದೆ.

Read More

ಬೆಂಗಳೂರು: ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ದಲಿತ ಸಂಘಟನೆಗಳ ಮುಖಂಡರೊಂದಿಗೆ 2024- 25 ನೇ ಸಾಲಿನ ಆಯವ್ಯಯ ಪೂರ್ವಭಾವಿ ಚರ್ಚೆ ನಡೆಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯಮಂತ್ರಿಗಳು, ಕರ್ನಾಟಕದ ಲ್ಲಿ ಎಸ್.ಸಿ.ಎಸ್.ಪಿ/ ಟಿ. ಎಸ್.ಪಿ ಕಾಯ್ದೆಯನ್ನು ಜಾರಿಗೆ ತರಲಾಗಿದೆ. 2008 ರಿಂದ 2013 ರವರೆಗೆ 22,000 ಕೋಟಿರೂ.ಗಳು ವೆಚ್ಚವಾಗಿದೆ 2013 ರಿಂದ 2018 ರವರೆ 88 ಸಾವಿರ ಕೋಟಿ ರೂ.ಗಳು ವೆಚ್ಚವಾಗಿದೆ . ಹೆಚ್ಚು ದುರುಪಯೋಗವಾಗುತ್ತದೆ ಎಂಬ ಕಾರಣದಿಂದ 7 ಡಿ ಯನ್ನು ತೆಗೆದುಹಾಕಿ ಆದೇಶವನ್ನು ಹೊರಡಿಸಿದೆ. ಯಾವುದೇ ಆರ್ಥಿಕ ವರ್ಷದಲ್ಲಿ ಹಣ ಖರ್ಚಾಗದಿದ್ದರೆ ಮುಂದಿನ ವರ್ಷಕ್ಕೆ ಮುಂದುವರೆಯುತ್ತದೆ. ಅಧಿಕಾರಿಗಳ ನಿರ್ಲಕ್ಷ್ಯ ದಿಂದ ದುರುಪಯೋಗವಾದರೆ ಕ್ರಿಮಿನಲ್ ಮೊಕದ್ದಮೆ ಹೂಡಬಹುದು. ಜನಸಂಖ್ಯೆಗೆ ಅನುಗುಣವಾಗಿ ಹಣವನ್ನು ಖರ್ಚು ಮಾಡಬೇಕು ಎಂದು ಆಂಧ್ರಪ್ರದೇಶ ಹಾಗೂ ಕರ್ನಾಟಕ ದಲ್ಲಿ ಕಾಯ್ದೆ ತರಲಾಗಿದೆ. ಇದು ಇಡೀ ದೇಶದಲ್ಲಿ ಆಗಬೇಕು. ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಯಲ್ಲಿ ಪ್ರಮುಖ ಯೋಜನೆಯಾಗಬೇಕೆಂದು ಸೂಚಿಸಿದೆ ಎಂದರು. ಬಡ್ತಿಯಲ್ಲಿ ಮೀಸಲಾತಿ ಕಾಯ್ದೆ…

Read More

ಜಬುವಾ (ಮಧ್ಯಪ್ರದೇಶ): ಮಧ್ಯಪ್ರದೇಶದ ಝಾಬುವಾದಲ್ಲಿ ಭಾನುವಾರ ನಡೆದ ಬುಡಕಟ್ಟು ರ್ಯಾಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಉತ್ಸಾಹದಿಂದ ತನ್ನತ್ತ ಕೈ ಬೀಸುತ್ತಿದ್ದ ಪುಟ್ಟ ಮಗುವಿಗೆ ಹೃತ್ಪೂರ್ವಕ ಮನವಿ ಮಾಡಿದರು. ಮಗುವಿನ ವಾತ್ಸಲ್ಯಕ್ಕೆ ಕೃತಜ್ಞತೆಯನ್ನು ವ್ಯಕ್ತಪಡಿಸಿದ ಮೋದಿ, ಇದು ಕೈ ನೋವಿಗೆ ಕಾರಣವಾಗಬಹುದು ಎಂದು ಒತ್ತಿಹೇಳುತ್ತಾ, ನಿರಂತರವಾಗಿ ಕೈ ಬೀಸುವುದನ್ನು ನಿಲ್ಲಿಸುವಂತೆ ವಿನಂತಿಸಿದರು. “ನಿನ್ನ ಪ್ರೀತಿ ನನಗೆ ಸಿಕ್ಕಿದೆ, ಮಗಾ. ದಯವಿಟ್ಟು ನಿಮ್ಮ ಕೈಯನ್ನು ಕೆಳಗಿಳಿಸಿ, ಇಲ್ಲದಿದ್ದರೆ ಅದು ನೋವನ್ನು ಪ್ರಾರಂಭಿಸುತ್ತದೆ” ಎಂದು ಮೋದಿ ಮಗುವಿಗೆ ಮನವಿ ಮಾಡಿದರು. ಬಾಲಕನ ಸಿಹಿ ಸನ್ನೆ ಮತ್ತು ಪ್ರಧಾನಿ ಮೋದಿಯವರ ಮೆಚ್ಚುಗೆಯ ವೀಡಿಯೊ ಈಗ ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದೆ. ರ್ಯಾಲಿಯಲ್ಲಿ ಮಾತನಾಡಿದ ಅವರು, ಮುಂಬರುವ ಲೋಕಸಭಾ ಚುನಾವಣೆಯ ಬಗ್ಗೆ ಹೇಳಿಕೊಂಡರು ಮತ್ತು ಭಾರತೀಯ ಜನತಾ ಪಕ್ಷವು ಏಕಾಂಗಿಯಾಗಿ 370 ಸ್ಥಾನಗಳನ್ನು ಗೆಲ್ಲುತ್ತದೆ ಎಂದು ಹೇಳಿದರು. ಎನ್ಡಿಎ 400 ಸ್ಥಾನಗಳೊಂದಿಗೆ ಸತತ ಮೂರನೇ ಬಾರಿಗೆ ಅಧಿಕಾರಕ್ಕೆ ಮರಳಲಿದೆ ಎಂದು ಅವರು ಹೇಳಿದರು. ಪ್ರತಿಪಕ್ಷ ಕಾಂಗ್ರೆಸ್ ಪಕ್ಷವನ್ನು ಗುರಿಯಾಗಿಸಿಕೊಂಡು…

Read More

ಬೆಂಗಳೂರು: ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಬಗ್ಗೆ ಅಪಸ್ವರ ಎತ್ತಿದ್ದವರಿಗೆ ಬಿಜೆಪಿ ಚುನಾವಣಾ ಚಾಣಕ್ಯ ಅಮಿತ್ ಶಾ ಅವರು ಪಕ್ಷದ ನಾಯಕರಿಗೆ ಕಠಿಣ ಎಚ್ಚರಿಕೆ ನೀಡಿದ್ದಾರೆ ಎನ್ನಲಾಗಿದೆ. ಮೈಸೂರಿನ ಱಡಿಸನ್​ ಬ್ಲೂ ಹೋಟೆಲ್‌ನಲ್ಲಿ ಭಾನುವಾರ ನಡೆದ ಕೋರ್ ಕಮಿಟಿ ಸಭೆಯಲ್ಲಿ ಮಾತನಾಡಿದ ಅವರು, ಜೆಡಿಎಸ್ ಹಾಗೂ ಬಿಜೆಪಿ ಮೈತ್ರಿ ಬಗ್ಗೆ ಯಾರೂ ಅಪಸ್ವರ ಎತ್ತಬಾರದು. ಕಳೆದಬಾರಿ ಕಾಂಗ್ರೆಸ್ – ಜೆಡಿಎಸ್ ಮೈತ್ರಿ ಸಂದರ್ಭ ಇಂತಹ ಅಪಸ್ವರದ ಮಾತುಗಳಿಂದಲೇ ಅವರಿಗೆ ಸೋಲಾಗಿತ್ತು. ಅದೇ ಕೆಲಸವನ್ನ ನೀವು ಮಾಡಕೂಡದು ಅಂತ ನಾಯಕರಿಗೆ ಸೂಚನೆ ನೀಡಿದ್ದಾರೆ ಅಂತ ತಿಳಿದು ಬಂದಿದೆ. ಇನ್ನೂ ಮೈತ್ರಿಗೆ ಧಕ್ಕೆಯಾಗುವಂತಹ ಯಾವುದೇ ಹೇಳಿಕೆಗಳನ್ನು ಯಾರೂ ಕೊಡಬಾರದು ಎಂದು ಎಲ್ಲ ನಾಯಕರನ್ನು ಉದ್ದೇಶಿಸಿ ಅಮಿತ್ ಶಾ ಸೂಚನೆ ನೀಡಿದ್ದಾರಂತೆ.

Read More

ನವದೆಹಲಿ: ದೇಶದ ನಿವ್ವಳ ನೇರ ತೆರಿಗೆ ಸಂಗ್ರಹವು ಕಳೆದ ವರ್ಷದ ಇದೇ ಅವಧಿಯ ನಿವ್ವಳ ಸಂಗ್ರಹಕ್ಕಿಂತ ಶೇಕಡಾ 20.25 ರಷ್ಟು ಏರಿಕೆಯಾಗಿ 15.60 ಲಕ್ಷ ಕೋಟಿ ರೂ.ಗೆ ತಲುಪಿದೆ ಎಂದು ಕೇಂದ್ರ ನೇರ ತೆರಿಗೆ ಮಂಡಳಿ ಭಾನುವಾರ ಹೊಸ ವರದಿಯನ್ನು ಬಿಡುಗಡೆ ಮಾಡಿದೆ. ಈ ಸಂಗ್ರಹವು 2023-24ರ ಹಣಕಾಸು ವರ್ಷದಲ್ಲಿ ನೇರ ತೆರಿಗೆಗಳ ಒಟ್ಟು ಪರಿಷ್ಕೃತ ಅಂದಾಜುಗಳ 80.23% ರಷ್ಟಿದೆ ಎಂದು ಸಿಬಿಡಿಟಿ ತಿಳಿಸಿದೆ. ಫೆಬ್ರವರಿ 10 ರ ವೇಳೆಗೆ ಒಟ್ಟು ನೇರ ತೆರಿಗೆ ಸಂಗ್ರಹವು 18.38 ಲಕ್ಷ ಕೋಟಿ ರೂ.ಗೆ ಏರಿದೆ, ಇದು ಕಳೆದ ವರ್ಷದ ಇದೇ ಅವಧಿಯ ಒಟ್ಟು ಸಂಗ್ರಹಕ್ಕಿಂತ 17.30% ಹೆಚ್ಚಾಗಿದೆ ಎಂದು ಸಿಬಿಡಿಟಿ ಅಂಕಿ ಅಂಶಗಳು ತಿಳಿಸಿವೆ. “ನೇರ ತೆರಿಗೆ ಸಂಗ್ರಹದ ತಾತ್ಕಾಲಿಕ ಅಂಕಿಅಂಶಗಳು ಸ್ಥಿರವಾದ ಬೆಳವಣಿಗೆಯನ್ನು ದಾಖಲಿಸುತ್ತಲೇ ಇವೆ. ಫೆಬ್ರವರಿ 10, 2024 ರವರೆಗೆ ನೇರ ತೆರಿಗೆ ಸಂಗ್ರಹವು ಒಟ್ಟು ಸಂಗ್ರಹವು 18.38 ಲಕ್ಷ ಕೋಟಿ ರೂ.ಗಳಷ್ಟಿದೆ ಎಂದು ತೋರಿಸುತ್ತದೆ, ಇದು ಕಳೆದ ವರ್ಷದ…

Read More

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ರೈತ ಸಂಘಟನೆ ಹಾಗೂ ಮುಖಂಡರುಗಳ ಸಭೆಯ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು. ಇದೇ ವೇಳೆ ಅವರು ಮಾತನಾಡಿ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು ಕರ್ನಾಟಕಕ್ಕೆ ಬರಿಗೈಯಲ್ಲಿ ಬಂದಿದ್ದಾರೆ. ಬಡವರು, ರೈತರ ಬಗ್ಗೆ ಮಾತನಾಡಲು ಅವರಿಗೆ ನೈತಿಕತೆ ಇಲ್ಲ. ಇಂದಿನವರೆಗೆ ಬರಗಾಲದ ಬಗ್ಗೆ ಐದು ತಿಂಗಳಾದರೂ ಒಂದು ಸಭೆಯನ್ನೂ ಅಮಿತ್ ಶಾ ಕರೆದಿಲ್ಲ. ಬರಪರಿಹಾರ ಕೊಡಲು ಇರುವ ಸಮಿತಿಗೆ ಅವರೇ ಅಧ್ಯಕ್ಷರು. ದೇಶದ ಬಗ್ಗೆ ಮಾತನಾಡಲು ಅವರಿಗೆ ಯಾವ ನೈತಿಕತೆ ಇದೆ. ರೈತರು ಬರಗಾಲದಲ್ಲಿ ಕಷ್ಟಪಡುತ್ತಿದ್ದಾರೆ. ಬರಗಾಲ ಬಂದಾಗ ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ 150 ಮಾನವ ದಿನಗಳನ್ನು ಹೆಚ್ಚಿಸುವುದು ಕಡ್ಡಾಯವಾದರೂ ಇಂದಿನವರೆಗೆ ಹೆಚ್ಚಿಸಿಲ್ಲ, 2-3 ಪತ್ರ ಬರೆದಿದ್ದರೂ ಉತ್ತರ ನೀಡಿಲ್ಲ. ಈಗ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು ಬಿಜೆಪಿ ಜೊತೆ ಸೇರಿದ್ದಾರೆ. ಇದೇ ದೇವೆಗೌಡರು ಮುಂದಿನ ಜನ್ಮದಲ್ಲಿ ಮುಸ್ಲಿಂ ಆಗಿ ಹುಟ್ಟಬೇಕು ಎಂದಿದ್ದರು, ಈಗೇನು ಹೆಳುತ್ತಿದ್ದಾರೆ. ಅವರು ಯಜಮಾನರು,…

Read More

ಝಬುವಾ (ಮಧ್ಯಪ್ರದೇಶ): ಮಧ್ಯಪ್ರದೇಶದ ಜಬುವಾದಲ್ಲಿ ಭಾನುವಾರ ಜನ ಜಾತಿ ಮಹಾಸಭಾವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಎನ್ಡಿಎ 400 ಸ್ಥಾನಗಳನ್ನು ದಾಟಲು ಸಾಧ್ಯವಾದರೆ, ಬಿಜೆಪಿ ಮಾತ್ರ 370 ಕ್ಕೂ ಹೆಚ್ಚು ಸ್ಥಾನಗಳನ್ನು ಪಡೆಯಬೇಕು ಎಂದು ಹೇಳಿದರು. ಪ್ರಧಾನಿ ಮೋದಿ ಅವರು ತಮ್ಮ ಮಧ್ಯಪ್ರದೇಶ ಭೇಟಿ, ಬರೆಯುತ್ತಿರುವದಕ್ಕೆ ವಿರುದ್ಧವಾಗಿ, ಚುನಾವಣೆಯನ್ನು ಗುರಿಯಾಗಿಸಿಕೊಂಡಿಲ್ಲ ಎಂದು ಹೇಳಿದರು. “ಮಧ್ಯಪ್ರದೇಶದ ವಿಧಾನಸಭಾ ಚುನಾವಣಾ ಫಲಿತಾಂಶಗಳು ಈಗಾಗಲೇ ಇಲ್ಲಿನ ಜನರ ಮನಸ್ಥಿತಿಯನ್ನು ತೋರಿಸಿವೆ… ನಾನು ಸೇವಕನಾಗಿ ಇಲ್ಲಿಗೆ ಬಂದಿದ್ದೇನೆ” ಎಂದು ಪ್ರಧಾನಿ ಮೋದಿ ಹೇಳಿದರು. “ವಿರೋಧ ಪಕ್ಷದ ನಾಯಕರು ಕೂಡ ಸಂಸತ್ತಿನಲ್ಲಿ ’24 ಮೇ 400 ಪಾರ್’ ಎಂದು ಹೇಳುತ್ತಿದ್ದಾರೆ” ಎಂದು ಪ್ರಧಾನಿ ಮೋದಿ ಹೇಳಿದರು.

Read More

ಮಡಿಕೇರಿ ಫೆ.08(ಕರ್ನಾಟಕ ವಾರ್ತೆ):-ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು “ಉನ್ನತ ಶಿಕ್ಷಣ ಎಲ್ಲರಿಗೂ ಎಲ್ಲೆಡೆ” ಎಂಬ ಘೋಷವಾಕ್ಯದೊಂದಿಗೆ 1996ರಲ್ಲಿ ಸ್ಥಾಪನೆಯಾಗಿ, 18 ವರ್ಷದಿಂದ 80 ವರ್ಷ ವಯೋಮಾನದವರೆಗಿನ ಲಕ್ಷಾಂತರ ಮಂದಿಗೆ ವಿದ್ಯೆ ನೀಡಿ, ವಿದ್ಯಾರ್ಥಿಗಳ ಮನೆ ಬಾಗಿಲಿಗೆ ಉನ್ನತ ಶಿಕ್ಷಣ ನೀಡಲು ಪ್ರಯತ್ನಿಸುತ್ತಿದ್ದು, ವಿಶ್ವವಿದ್ಯಾನಿಲಯವು ಕರ್ನಾಟಕದಾದ್ಯಂತ ಪ್ರಸ್ತುತ ಜಿಲ್ಲಾ ಕೇಂದ್ರಗಳಲ್ಲಿ 36 ಪ್ರಾದೇಶಿಕ ಕೇಂದ್ರಗಳನ್ನು ತೆರೆದು ವಿದ್ಯಾರ್ಥಿಗಳಿಗೆ ರೆಗ್ಯೂಲರ್ ವಿಶ್ವವಿದ್ಯಾನಿಲಯಗಳ ಉನ್ನತ ಶಿಕ್ಷಣಕ್ಕೆ ಸರಿಸಮನಾಗಿ ಮನೆ ಬಾಗಿಲಿಗೆ ಉನ್ನತ ಶಿಕ್ಷಣ ಕೊಡುವಲ್ಲಿ ಮುಂಚೂಣಿಯಲ್ಲಿದೆ. ಹೀಗಾಗಿ, 10+2 (ಪದವಿ ಪೂರ್ವ)., 10+2+3 (ಸ್ನಾತಕ ಪದವಿ) ವಿದ್ಯಾರ್ಹತೆ ಹೊಂದಿರುವ ಎಲ್ಲಾ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗ ಮಾಡಿಕೊಂಡು ಕರಾಮುವಿಯಲ್ಲಿ ಪ್ರವೇಶಾತಿ ಪಡೆಯಬಹುದು. ಕ.ರಾ.ಮು.ವಿ.ಯು ಕರ್ನಾಟಕ ರಾಜ್ಯದಲ್ಲಿ ಮೈಸೂರಿನ ಮುಕ್ತಗಂಗೋತ್ರಿಯಲ್ಲಿ ಕೇಂದ್ರ ಕಚೇರಿ ಹೊಂದಿದ್ದು, ಅತ್ಯಂತ ಸುಂದರವಾದ ಹಸಿರು ಪರಿಸರದಲ್ಲಿ ಸುಸಜ್ಜಿತ ಆಡಳಿತ ಭವನ, ಪರೀಕ್ಷಾ ಭವನ, ವಿಜ್ಞಾನ ಭವನ, ಗ್ರಂಥಾಲಯ, ಪ್ರಾಯೋಗಿಕ ಪ್ರಯೋಗಾಲಯವನ್ನು ಹೊಂದಿದ್ದು, ರಾಜ್ಯದಾದ್ಯಂತ 36 ಪ್ರಾದೇಶಿಕ ಕೇಂದ್ರಗಳು ಮತ್ತು 180 ಕಲಿಕಾರ್ಥಿ ಸಹಾಯ…

Read More

ಬೆಂಗಳೂರು: ರಾಜ್ಯ ಸರ್ಕಾರ ಬರ ನಿರ್ವಹಣೆಗೆ ಪರಿಹಾರ ಕ್ರಮವಾಗಿ ರೂ 2000 ಕೋಟಿ ಅನುದಾನವನ್ನು ನಿಗದಿ ಪಡಿಸಿದ್ದು, ಈಗಾಗಲೇ ರೂ 628 ಕೋಟಿ ಹಣವನ್ನು ನೇರವಾಗಿ 33 ಲಕ್ಷ ರೈತರ ಖಾತೆಗೆ ಬಿಡುಗಡೆ ಮಾಡಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿದರು. ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾಡನಾಡಿದ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು, 1.6 ಲಕ್ಷ ರೈತರ ಬ್ಯಾಂಕ್ ಖಾತೆಯ ಮಾರ್ಪಾಡು ಪ್ರಕ್ರಿಯೆ ನಡೆಯುತ್ತಿದ್ದು, ಇದು ಸರಿಯಾದ ಕೂಡಲೇ ಅವರ ಖಾತೆಗಳಿಗೂ ಬರ ಪರಿಹಾರದ ಹಣವನ್ನು ರಾಜ್ಯ ಸರ್ಕಾರದಿಂದ ಬಿಡುಗಡೆ ಮಾಡಲಾಗುವುದು ಎಂದರು. ಅರ್ಹ ರೈತರಿಗೆ ಬರ ಪರಿಹಾರ ತಲುಪಿಸುವ ಹಾಗೂ ವ್ಯವಸ್ಥೆಯಲ್ಲಿ ಪಾರದರ್ಶಕತೆ ತರಲು ಎಲ್ಲಾ ಗ್ರಾಮ ಪಂಚಾಯಿತಿಗಳಿಗೆ ಬರ ಪರಿಹಾರ ಬಿಡುಗಡೆ ಮಾಡಿರುವ ರೈತ ಪಟ್ಟಿಯನ್ನು ಪ್ರಕಟ ಮಾಡಬೇಕು ಎಂದು ಸೂಚನೆ ನೀಡಿರುವ ಹಿನ್ನೆಲೆ, ಬಹುತೇಕ ಗ್ರಾಮ ಪಂಚಾಯಿತಿಗಳಲ್ಲಿ ರೈತರ ಹೆಸರು ಪ್ರಕಟಿಣೆ ಮಾಡಲಾಗಿದೆ. ಆ ಪಟ್ಟಿಯಲ್ಲಿ ರೈತರ ಹೆಸರು…

Read More