Author: kannadanewsnow07

ಕೆಎನ್‌ಎನ್‌ಸಿನಿಮಾಡೆಸ್ಕ್‌: `ಶಭ್ಬಾಷ್’ ಚಿತ್ರ ಅತ್ಯಂತ ವೇಗವಾಗಿ ಮೊದಲ ಹಂತದ ಚಿತ್ರೀಕರಣ ಮುಗಿಸಿಕೊಂಡಿದ್ದು, ಶೀಘ್ರದಲ್ಲಿ ಬೆಳ್ಳಿ ತೆರೆಗೆ ದಾಪುಗಾಲು ಇಡಲಿದೆ. ರುದ್ರಶಿವ ಯೋಜನೆಯಂತೆ ಬೆಂಗಳೂರಿನ ಸುತ್ತಮುತ್ತಲ ಪ್ರದೇಶಗಳಲ್ಲಿ ಏಳು ದಿನಗಳ ಚಿತ್ರೀಕರಣ ಮುಗಿಸಿಕೊಂಡು, ಚನ್ನಗಿರಿಯ ಶಾಂತಿಸಾಗರದ ಪ್ರದೇಶದಲ್ಲಿ ಚಿತ್ರೀಕರಣ ನಡೆಸಿದ್ದಾರೆ. ಅಲ್ಲಿನ ಪೌರಾಣಿಕ, ಐತಿಹಾಸಿಕ ಸ್ಥಳಗಳಲ್ಲಿ ಸಾಂಗವಾಗಿ ಚಿತ್ರೀಕರಣ ನೆರವೇರಿದೆ. ಚನ್ನಗಿರಿಯ ಶಾಂತಿಸಾಗರ ಸೂಳೆಕೆರೆ ಅಂತಲೂ ಕರೆಸಿಕೊಳ್ಳುತ್ತದೆ. ಏಷ್ಯಾ ಖಂಡದಲ್ಲಿಯೇ ಎರಡನೇ ಅತೀ ದೊಡ್ಡ ಕೆರೆ ಎಂಬ ಹೆಗ್ಗಳಿಕೆಯೂ ಶಾಂತಿಸಾಗರಕ್ಕಿದೆ. ಈ ಕೆರೆಗೂ ಹನ್ನೆರಡನೇ ಶತಮಾನಕ್ಕೂ ಎಂದಿಗೂ ಸಡಿಲವಾಗದಂಥಾ ಕೊಂಡಿಗಳಿದ್ದಾವೆ. ಸ್ವರ್ಗಾವತಿ ಪಟ್ಟಣದ ದೊರೆ ವಿಕ್ರಮರಾಜನ ಸುಪುತ್ರಿ ಶಾಂತವ್ವ ತನಗಾದ ಅವಮಾನಕ್ಕೆ ಪ್ರತಿಭಟನೆಯ ಸ್ವರೂಪದಲ್ಲಿ ಈ ಬೃಹತ್ ಕೆರೆಯನ್ನು ಸೃಷ್ಟಿಸಿದಳೆಂಬ ಪ್ರತೀತಿ ಇದೆ. ಇಲ್ಲಿಯೇ ಸರ್ ಎಂ ವಿಶ್ವೇಶ್ವರಯ್ಯ ಕಟ್ಟಿಸಿರುವ ಸೇತುವೆಯೊಂದು ಪ್ರಧಾನ ಆಕರ್ಷಣೆ. ಎರಡು ಬೆಟ್ಟಗಳನ್ನು ಸೇರಿಸಿ ಈ ಸೇತುವೆಯನ್ನು ಕಟ್ಟಿಸಲಾಗಿದೆ. ಈವತ್ತಿಗೂ ಅಚ್ಚರಿಯಾಗಿ ಕಾಣಿಸುವ ಈ ಸೇತುವೆಯ ಮೇಲೆ ಶಭ್ಬಾಷ್ ಚಿತ್ರೀಕರಣ ನಡೆಸಲಾಗಿದೆ. ಇದಲ್ಲದೇ ಈ ಭಾಗದಲ್ಲಿರುವ ಪ್ರಸಿದ್ಧ ದೇವಾಲಯ,…

Read More

ಕೆಎನ್‌ಎನ್‌ಡಿಜಿಟಲ್‌ಡೆಸ್ಕ್‌: ಸಾರಾಂಶ’ ಚಿತ್ರದ ಹಾಡುಗಳು ಈಗಾಗಲೇ ವೈರಲ್ ಆಗಿದೆ. ಈ ನಡುವೆ ಇದೀಗ ನಿರ್ದೇಶಕ ಸೂರ್ಯ ವಸಿಷ್ಠ ಹಾಗೂ ಉದಿತ್ ಸಹಯೋಗದ ಮತ್ತೊಂದು ಮೆಲೋಡಿಯಸ್ ಹಾಡು ಬಿಡುಡೆಯಾಗಿದ್ದು, ಎಲ್ಲ ಮನ ಗೆಲ್ಲುತ್ತಿದೆ. ತೀರದಾಚೆಗೆ ಹಾರಿ ಹೋಗುವಾಸೆ ಅಂತ ಶುರುವಾಗುವ ಈ ಹಾಡು ಸಾಹಿತ್ಯ ಸಂಗೀತದ ಹದವಾದ ಸಂಯೋಗದೊಂದಿಗೆ ಸಂಗೀತರ ಮನ ಗೆಲ್ಲುವುದಕ್ಕೆ ಮುಂದಾಗಿದೆ. ನಿರ್ದೇಶಕ ಸೂರ್ಯ ವಸಿಷ್ಠ ಬರೆದಿರುವ ಸಾಹಿತ್ಯಕ್ಕೆ ಪಂಚಮ್ ಅವರು ಧ್ವನಿಯಾಗಿದ್ದಾರೆ. ಧಾರಾವಾಹಿ, ಸಿನಿಮಾಗಳ ಮೂಲಕ ನಟರಾಗಿದ್ದ ಸೂರ್ಯ ವಸಿಷ್ಠ `ಸಾರಾಂಶ’ದ ಮೂಲಕ ನಿರ್ದೇಶಕರಾಗಿದ್ದು, ಸ್ಯಾಂಡಲ್‌ವುಡ್‌ನಲ್ಲಿ ಭರಸವಸೆ ಮೂಡಿಸಿದ್ದಾರೆ. ಇದಲ್ಲದೇ ಸೂರ್ಯ ವಸಿಷ್ಠ ಹಾಗೂ ಶೃತಿ ಹರಿಹರನ್ ಕಾಂಬಿನೇಷನ್ನಿನ ಈ ಹಾಡು, ಸಾರಾಂಶದ ದೃಷ್ಯಗಳ ಅಸಲೀ ಮೋಡಿಯ ಪರಿಚಯವನ್ನೂ ಮಾಡಿಸಿದೆ. ಅಂಧ ಹಾಗೇ ಇದೇ ಫೆಬ್ರವರಿ 15ರಂದು ಸಿನಿಮಾ ಬಿಡುಗಡೆಯಾಗಲಿದೆ. ರವಿ ಕಶ್ಯಪ್ ಮತ್ತು ಆರ್.ಕೆ ನಲ್ಲಮ್ ವಿಭಾ ಕಶ್ಯಪ್ ಪ್ರೊಡಕ್ಷನ್ಸ್ ಮತ್ತು ಕ್ಲಾಪ್ ಬೋರ್ಡ್ ಪ್ರೊಡಕ್ಷನ್ ಮೂಲಕ ಈ ಸಿನಿಮಾವನ್ನು ನಿರ್ಮಾಣ ಮಾಡಿದ್ದಾರೆ. ಆಸಿಫ್ ಕ್ಷತ್ರಿಯಾ, ರವಿ…

Read More

ಕೆಎನ್‌ಎನ್‌ಸಿನಿಮಾಡೆಸ್ಕ್‌: ನಟಿ ಪ್ರಿಯಾ ಪ್ರಕಾಶ್​ ವಾರಿಯರ್‌ ಮತ್ತು ಶ್ರೇಯಸ್​ ಮಂಜು ಅಭಿನಯದ ವಿಷ್ಣುಪ್ರಿಯನ ರೊಮ್ಯಾಂಟಿಕ್ ಹಾಡು ಬಿಡುಗಡೆಯಾಗಿದ್ದು, ಸ್ಯಾಂಡಲ್‌ವುಡ್‌ನಲ್ಲಿ ಹೊಸ ಅಲೆ ನಿರ್ಮಾಣ ಮಾಡಿದೆ. ಚಿಗುರು ಚಿಗುರೊ ಸಮಯ ಹಿತವಾದ ಒಂದು ಮೌನ.. ಒಲವು ಚಿಗುರೊ ಸಮಯ ಎದೆ ಬೇರಿನಲ್ಲಿ ಮೌನ…’ ಎಂಬ ಸಾಲಿನಿಂದ ಶುರುವಾಗುವ ಈ ಗೀತೆಯು ಸಂಗೀತ ಮತ್ತು ಸಾಹಿತ್ಯದ ಜೊತೆಗೆ ರೊಮ್ಯಾಂಟಿಕ್​ ಆದ ದೃಶ್ಯದ ಮೂಲಕವೂ ಗಮನ ಸೆಳೆಯುತ್ತಿದೆ. ಡಾ. ವಿ. ನಾಗೇಂದ್ರ ಪ್ರಸಾದ್ ಅವರು ಇದಕ್ಕೆ ಸಾಹಿತ್ಯ ಬರೆದಿದ್ದಾರೆ. ನಜೀನ್ ಅರ್ಷಾದ್ ಕಂಠಸಿರಿಯಲ್ಲಿ ಈ ಹಾಡು ಅತ್ಯಂತ ಪರಿಣಾಮಕಾರಿಯಾಗಿ ಮೂಡಿ ಬಂದಿದೆ. ಈ ಮೂಲಕ ಕೇರಳದ ಪ್ರಖ್ಯಾತ ಸಂಗೀತ ನಿರ್ದೇಶಕ ಗೋಪಿ ಸುಂದರ್ ಕನ್ನಡದಲ್ಲಿಯೂ ಕಮಾಲ್ ಮಾಡಿದ್ದಾರೆ. ಈ ವರ್ಷದ ಸುಮಧುರ ಹಾಡು ಎಂದು ಗುರುತಿಸಿಕೊಳ್ಳುವ ಎಲ್ಲ ಗುಣಗಳೂ ಈ ಹಾಡಿಗೆ ಇದೆ. ವಿ.ಕೆ. ಪ್ರಕಾಶ್ ಅವರು ಈ ಸಿನಿಮಾಗೆ ನಿರ್ದೇಶನ ಮಾಡಿದ್ದಾರೆ. ಗಂಡುಗಲಿ ಕೆ.ಮಂಜು ನಿರ್ಮಾಣದ ವಿಷ್ಣುಪ್ರಿಯ ಚಿತ್ರದಲ್ಲಿ ಸುಚೇಂದ್ರಪ್ರಸಾದ್, ಅಚ್ಯುತ್ ಕುಮಾರ್ ಮುಂತಾದವರು…

Read More

ದಾವಣಗೆರೆ : ಸಂಸದ ಡಿ.ಕೆ ಸುರೇಶ್​ರನ್ನು ಗುಂಡಿಕ್ಕಿ ಕೊಲ್ಲಬೇಕು ಅಂತ ಮಾಜಿ ಶಾಸಕ ಕೆ.ಎಸ್‌ ಈಶ್ವರಪ್ಪನಮವರು ಹೇಳಿರುವುದು ಈಗ ವಿವಾದಕ್ಕೆ ಕಾರಣವಾಗಿದೆ. ಅವರು ಇಂದು ದಾವಣಗೆರೆ ನಗರದಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡುತ್ತ ಈ ಬಗ್ಗೆ ತಿಳಿಸಿದರು. ಇದೇ ವೇಳೆ ಅವರು ಮಾತನಾಡುತ್ತ, ಸಂಸದ ಡಿ.ಕೆ. ಸುರೇಶ್, ವಿನಯ್ ಕುಲಕರ್ಣಿ ಇಬ್ಬರು ರಾಷ್ಟ್ರದ್ರೋಹಿಗಳು. ದೇಶ ವಿಭಜನೆ ಮಾತು ಹೇಳುವ ಡಿ.ಕೆ ಸುರೇಶ್, ವಿನಯ್ ಕುಲಕರ್ಣಿ ಅವರನ್ನು ಗುಂಡಿಕ್ಕಿ ಕೊಲ್ಲುವ ಕಾನೂನು ತರಬೇಕು ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು. ಇನ್ನೂ ಇದೇ ವೇಳೆ ಅವರು ಮಾತನಾಡುತ್ತ, ಪ್ರಧಾನಿ ನರೇಂದ್ರ ಮೋದಿಯವರಿಗೆ ಮನವಿ ಮಾಡುತ್ತೇವೆ. ದೇಶ ಛಿದ್ರ ಮಾಡುವವರಿಗೆ, ಇಂತವರಿಗೆ ತಕ್ಕ ಪಾಠ ಕಲಿಸಿ. ದೇಶ ವಿಭಜನೆ ಮಾತು ಆಡುವವರಿಗೆ ಗುಂಡಿಕ್ಕಿ ಕೊಲ್ಲುವ ಕಾನೂನು ತನ್ನಿ. ದೇಶ ತುಂಡು ಮಾಡುವ ಮಾತು ನೆಹರು ಕಾಲದಿಂದಲೂ ಬಂದಿದೆ. ಜಿನ್ನಾ ಸಂಸ್ಕೃತಿ ಡಿ.ಕೆ ಸುರೇಶ್ ಅವರಿಗೆ ಬಂದಿದೆ ಎಂದು ಕೆ.ಎಸ್. ಈಶ್ವರಪ್ಪ ಅವರು ಕಿಡಿಕಾರಿದರು.

Read More

ಬೆಂಗಳೂರು; ಗೃಹ ಕಚೇರಿ ಕೃμÁ್ಣದಲ್ಲಿ ನ.27 ರಂದು ನಡೆದ ಮೊದಲ ಜನಸ್ಪಂದನ ಕಾರ್ಯಕ್ರಮದಲ್ಲಿ ಸ್ವೀಕರಿಸಲಾದ 5 ಸಾವಿರ ಅರ್ಜಿಗಳ ಪೈಕಿ ಶೇ. 98 ರಷ್ಟು ಅರ್ಜಿಗಳನ್ನು ವಿಲೇವಾರಿ ಮಾಡಿ, ಜನರ ಸಮಸ್ಯೆಗಳಿಗೆ ಸ್ಪಂದಿಸುವ ಮೂಲಕ ಪರಿಹಾರಗಳನ್ನು ಒದಗಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು. ವಿಧಾನಸೌಧದ ಆವರಣದಲ್ಲಿ ಬುಧವಾರ ನಡೆದ ರಾಜ್ಯಮಟ್ಟದ ಎರಡನೇ ಜನಸ್ಪಂದನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದ ಮುಖ್ಯಮಂತ್ರಿಗಳು, ಆಡಳಿತ ಜನರ ಬಳಿಗೆ ಹೋಗಬೇಕು, ಜನರ ಸಮಸ್ಯೆಗಳಿಗೆ ಸ್ಪಂದಿಸಬೇಕು ಎನ್ನುವುದು ಸರಕಾರದ ಆಶಯವಾಗಿದೆ. ಜನರು ಸಣ್ಣ ಪುಟ್ಟ ಕೆಲಸಗಳಿಗಾಗಿ ಬೆಂಗಳೂರಿಗೆ ಬರುವಂತಾಗಬಾರದು. ಸ್ಥಳೀಯ ಮಟ್ಟದಲ್ಲಿಯೇ ಸಮಸ್ಯೆ ಬಗೆಹರಿಯಬೇಕು. ಈ ನಿಟ್ಟಿನಲ್ಲಿ ಎಲ್ಲ ಜಿಲ್ಲೆಗಳಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಈ ವರೆಗೆ ಒಟ್ಟು 108 ಜನಸ್ಪಂದನ ಕಾರ್ಯಕ್ರಮಗಳನ್ನು ನಡೆಸಿದ್ದಾರೆ ಎಂದು ಅವರು ವಿವರಿಸಿದರು. ತಾಲ್ಲೂಕು, ಜಿಲ್ಲಾ ಮಟ್ಟದಲ್ಲಿಯೂ ಜನಸ್ಪಂದನ ಕಾರ್ಯಕ್ರಮ ನಡೆಸಲಾಗುತ್ತಿದ್ದು, ಇಲ್ಲಿ ಬಗೆಹರಿಯದ ಸಮಸ್ಯೆಗಳನ್ನು ರಾಜ್ಯಮಟ್ಟದ ಜನಸ್ಪಂದನ ಕಾರ್ಯಕ್ರಮದಲ್ಲಿ ಜನರು ಸಲ್ಲಿಸಬಹುದಾಗಿದೆ. ಕಾನೂನುಬದ್ಧವಾದ ಸಮಸ್ಯೆಗಳಿಗೆ ನಮ್ಮ ಸರ್ಕಾರ…

Read More

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559 ಪ್ರತಿಯೊಬ್ಬರ ಜೀವನದಲ್ಲೂ ಕೂಡ ಕಷ್ಟಗಳು ಇದ್ದೇ ಇರುತ್ತದೆ ಆದರೆ ನಾವು ಮಾಡುವಂತಹ ವ್ಯಾಪಾರ ಉದ್ಯೋಗದಲ್ಲಿ ಏನಾದರೂ ಅಭಿವೃದ್ಧಿ ಹೊಂದುತ್ತೇವೆ ಎಂದರೆ ಶತ್ರುಗಳಿಂದ ನಮಗೆ ತೊಂದರೆಗಳು ಬರುತ್ತದೆ ಆದ್ದರಿಂದ ಅಂತಹ ಶತ್ರುಗಳಿಂದ ನಾವು ಸಮಸ್ಯೆಗಳನ್ನು ದೂರ ಮಾಡಿಕೊಳ್ಳಬೇಕು. ಎಂದರೆ ಈ ತಂತ್ರ ಮಾಡಿ ನಿಮ್ಮ ಜೀವನದಲ್ಲಿರುವ ಶತ್ರುಗಳು ಸಂಪೂರ್ಣ ದೂರವಾಗುತ್ತಾರೆ. ಈ ತಂತ್ರವನ್ನು ನೀವು ಮಾಡುವುದಕ್ಕೆ ಯಾವುದೇ ರೀತಿಯ ಖರ್ಚು ವೆಚ್ಚಗಳನ್ನು ಮಾಡುವ ಅವಶ್ಯಕತೆ ಇಲ್ಲ ಆದರೆ ಸಂಪೂರ್ಣವಾಗಿ ನೀವು ನಿಷ್ಠೆಯಿಂದ ಈ ತಂತ್ರ ಮಾಡಿ ಖಂಡಿತ ಬದಲಾವಣೆ ಕಾಣುತ್ತಿರಿ. ನಿಂಬೆಹಣ್ಣು ಕರ್ಪೂರ ಲವಂಗ ಮತ್ತು ಅಕ್ಷತೆಯನ್ನ ಮಾಡಿಕೊಳ್ಳಬೇಕು. ನಿಂಬೆ ಹಣ್ಣಿನ ಮೇಲೆ ನಿಮ್ಮ ಶತ್ರುವಿನ ಸಂಪೂರ್ಣ ಹೆಸರನ್ನ ಬರೆಯಬೇಕು. ಮೇಲ್ಭಾಗ ಮತ್ತು ಕೆಳಭಾಗದಲ್ಲಿ ಸ್ವಸ್ತಿಕ್ ಚಿನ್ನೆಯನ್ನು ಬರೆಯಬೇಕು ನಂತರ ಈ ಲಿಂಬೆ ಹಣ್ಣನ್ನು ನೀವು ಎರಡು ಭಾಗವಾಗಿ ಮಾಡಬೇಕು ಆ ಎರಡು…

Read More

ಬೆಂಗಳೂರು: ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ಪೂರ್ವ ಸಿದ್ದತಾ ಪರೀಕ್ಷೆಯನ್ನು ನಡೆಸಲು ಫೆಬ್ರವರಿ 26 ರಿಂದ ಮಾರ್ಚ್ 2 ರವರೆಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿಯು ವೇಳಾಪಟ್ಟಿಯನ್ನು ಪ್ರಕಟಿಸಿದೆ. ಪ್ರಥಮ ಭಾಷೆ , ದ್ವಿತೀಯ ಭಾಷೆ , ತೃತೀಯ ಭಾಷೆಗಳು, ಗಣಿತ ಹಾಗೂ ಸಮಾಜ ವಿಜ್ಞಾನ ವಿಷಯಗಳನ್ನು ಬೆಳಿಗ್ಗೆ 10.15 ರಿಂದ ಮಧ್ಯಾಹ್ನ 1.30 ರವರೆಗೆ ಹಾಗೂ ಮಾರ್ಚ್ 01 ರಂದು ದ್ವಿತೀಯ ಪಿ.ಯು.ಸಿ ಪರೀಕ್ಷೆ ಇರುವುದರಿಂದ, ಎಸ್.ಎಸ್.ಎಲ್.ಸಿ ಪರೀಕ್ಷೆಗೆ ಕೆಲವು ಸಂಯುಕ್ತ ಪದವಿ ಪೂರ್ವ ಕಾಲೇಜು ಮತ್ತು ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ಪರೀಕ್ಷಾ ಕೇಂದ್ರಗಳಾಗಿ ರಚಿಸಲಾಗಿರುತ್ತದೆ. ಈ ಶಾಲಾ/ಕಾಲೇಜುಗಳಲ್ಲಿಯೇ ಎಸ್.ಎಸ್.ಎಲ್.ಸಿ ಪೂರ್ವ ಸಿದ್ಧತಾ ಪರೀಕ್ಷೆಯನ್ನು ನಡೆಸಬೇಕಾಗಿರುವುದರಿಂದ ದ್ವಿತೀಯ ಪಿ.ಯುಸಿ ಪರೀಕ್ಷೆಗೆ ತೊಂದರೆ ಉಂಟಾಗುವುದನ್ನು ಪರಿಗಣಿಸಿ ಮಾರ್ಚ್ 1 ರಂದು ನಡೆಯುವ ಎಸ್.ಎಸ್.ಎಲ್.ಸಿ ವಿಜ್ಞಾನ ವಿಷಯದ ಪೂರ್ವ ಸಿದ್ಧತಾ ಪರೀಕ್ಷೆಯನ್ನು ಮಧ್ಯಾಹ್ನ 2 ಗಂಟೆಯಿಂದ ನಿಗದಿಪಡಿಸಲಾಗಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿಯ ಅಧ್ಯಕ್ಷರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ನವದೆಹಲಿ: ನೈನಿತಾಲ್ ಜಿಲ್ಲೆಯ ಹಲ್ದ್ವಾನಿ ಪ್ರದೇಶದಲ್ಲಿ ಗುರುವಾರ ಸಂಜೆ ಅಕ್ರಮವಾಗಿ ನಿರ್ಮಿಸಲಾದ ಮದರಸಾವನ್ನು ನೆಲಸಮಗೊಳಿಸುವ ಬಗ್ಗೆ ಬನ್ಭೂಲ್ಪುರದಲ್ಲಿ ಹಿಂಸಾಚಾರ ಭುಗಿಲೆದ್ದ ನಂತರ ಕೋಮು ಉದ್ವಿಗ್ನತೆ ಉಂಟಾಗಿದೆ ಎಂದು ಈ ವಿಷಯದ ಬಗ್ಗೆ ತಿಳಿದಿರುವ ಅಧಿಕಾರಿಗಳು ತಿಳಿಸಿದ್ದಾರೆ. ಜಿಲ್ಲೆಯ ಜಿಲ್ಲಾ ಮ್ಯಾಜಿಸ್ಟ್ರೇಟ್ ಬನ್ಭೂಲ್ಪುರದಲ್ಲಿ ಕರ್ಫ್ಯೂ ವಿಧಿಸಿದ್ದಾರೆ. ಗಲಭೆಕೋರರ ವಿರುದ್ಧ ‘ಗುಂಡು ಹಾರಿಸಿ’ ಆದೇಶವನ್ನೂ ಹೊರಡಿಸಲಾಗಿದೆ.  ಬನ್ಭೂಲ್ಪುರ ಹಿಂಸಾಚಾರದಲ್ಲಿ ಈವರೆಗೆ ಮೂರರಿಂದ ನಾಲ್ಕು ಜನರು ಸಾವನ್ನಪ್ಪಿದ್ದಾರೆ ಮತ್ತು 100 ಕ್ಕೂ ಹೆಚ್ಚು ಜನರು, ಮುಖ್ಯವಾಗಿ ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ನೈನಿತಾಲ್ ಜಿಲ್ಲಾ ಮ್ಯಾಜಿಸ್ಟ್ರೇಟ್ ವಂದನಾ ಹೇಳಿದ್ದಾರೆ. ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡಿಕೊಳ್ಳಲು ಹಲ್ದ್ವಾನಿಯಲ್ಲಿ ಕರ್ಫ್ಯೂ ವಿಧಿಸಲಾಗಿದೆ, ಆದರೆ ನಗರದಲ್ಲಿ ಇಂಟರ್ನೆಟ್ ಸೇವೆಗಳನ್ನು ಸಹ ಸ್ಥಗಿತಗೊಳಿಸಲಾಗಿದೆ, ಈ ಪ್ರದೇಶದ ಶಾಲೆಗಳನ್ನು ಮುಚ್ಚಲು ಆದೇಶ ಹೊರಡಿಸಲಾಗಿದೆ ಎಂದು ವಂದನಾ ತಿಳಿಸಿದ್ದಾರೆ.

Read More

ನಮ್ಮ ಹಿಂದೂ ಸಂಪ್ರದಾಯ ಪಾಲಿಸುವ ಮನೆಗಳಲ್ಲಿ ಬಹಳಷ್ಟು ಜನ ರಾಘವೇಂದ್ರ ಸ್ವಾಮಿಗಳನ್ನು ಆರಾಧಿಸುವ, ಪೂಜಿಸುವ ಭಕ್ತರು ಇದ್ದೇ ಇರುತ್ತದೆ. ಇವರು ಬಹಳಷ್ಟು ಜನರ ಶಕ್ತಿ, ಭಕ್ತಿಯಾಗಿದ್ದಾರೆ. ರಾಯರ ಪೂಜೆ ಹೆಚ್ಚಿನ ಪ್ರಾಮುಖ್ಯತೆ ಪಡೆದುಕೊಂಡಿರುವ ಪೂಜೆಗಳಲ್ಲಿ ಮುಖ್ಯ ಸ್ಥಾನದಲ್ಲಿದೆ ಎಂದರೆ ತಪ್ಪಲ್ಲ. ರಾಯರ ಪೂಜೆ ಮಾಡುವುದರಿಂದ ನಿಮಗೆ ಏನೆಲ್ಲಾ ಒಳ್ಳೆಯದಾಗುತ್ತದೆ ಎಂದು ತಿಳಿಸುತ್ತೇವೆ ನೋಡಿ.. *ರಾಘವೇಂದ್ರ ಸ್ವಾಮಿಗಳನ್ನು ಶ್ರದ್ಧೆಯಿಂದ ಭಕ್ತಿಯಿಂದ ಪೂಜಿಸಿ, ನಿಷ್ಠೆಯಿಂದ ಧ್ಯಾನಿಸಿದರೆ, ಅವರ ಆಶೀರ್ವಾದ ನಿಮ್ಮ ಮೇಲೆ ಸದಾ ಇರುತ್ತದೆ. ಜೊತೆಗೆ ನಿಮ್ಮ ಬದುಕಿನಲ್ಲಿ ಸಮೃದ್ಧಿ ನೆಲೆಸುತ್ತದೆ. *ರಾಯರ ಪೂಜೆ ವೇಳೆ ಹೂವು ಮತ್ತು ಹಣ್ಣುಗಳನ್ನು ಅರ್ಪಿಸಿ ಭಕ್ತಿಯಿಂದ ಪೂಜೆ ಮಾಡಿದರೆ, ನಿಮ್ಮ ಬದುಕಿನಲ್ಲಿ ಬರುವಂಥ ಎಲ್ಲಾ ಕಷ್ಟಗಳು ಮಾಯವಾಗುತ್ತದೆ. ನಿಮ್ಮಲ್ಲಿ ನೆಮ್ಮದಿ ನೆಲೆಸುತ್ತದೆ ಎಂದು ಬಲ್ಲವರು ಹೇಳುತ್ತಾರೆ. *ರಾಯರ ಪೂಜೆಗೆಂದು ವಿಶೇಷವಾಗಿ ವೀಳ್ಯದ ಎಲೆ ಮತ್ತು ತೆಂಗಿನಕಾಯಿಯನ್ನು ಹಾಗೂ ಕರ್ಪೂರವನ್ನು ಕೂಡ ಪೂಜೆಗೆ ಅರ್ಪಿಸಬಹುದು.. *ರಾಯರಿಗಾಗಿ ಪೂಜೆಯ ವೇಳೆ ಬೇರೆ ಬೇರೆ ಸಿಹಿ ತಿಂಡಿಗಳನ್ನು ನೈವೇದ್ಯವಾಗಿ ಅರ್ಪಿಸಬಹುದು. ಇದರಿಂದ…

Read More

ಬೆಂಗಳೂರು: ಪರಶುರಾಮ ಥೀಮ್ ಪಾರ್ಕ್ ಕಾಮಗಾರಿ ಅವ್ಯವಹಾರ ಪ್ರಕರಣ ಸಿಐಡಿ ತನಿಖೆಗೆ ವಹಿಸಲಾಗುವುದು ಅಂತ ಸಿಎಂ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಉಡುಪಿ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕಳೆದ ತಿಂಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಸಿಎಂಗೆ ಪತ್ರ ಬರೆದಿದ್ದರು. ಜಿಲ್ಲಾ ಉಸ್ತುವಾರಿ ಸಚಿವೆಯ ಶಿಫಾರಸಿನಂತೆ ಮುಖ್ಯಮಂತ್ರಿಗಳು ಸಿಐಡಿ ತನಿಖೆಗೆ ಆದೇಶಿಸಿದ್ದಾರೆ. ಕಾರ್ಕಳ ತಾಲೂಕಿನ ಎರ್ಲಪಾಡಿ ಗ್ರಾಮದ ಬೈಲೂರಿನಲ್ಲಿರುವ ಪರಶುರಾಮ ಥೀಮ್ ಪಾರ್ಕ್ ಕಳಪೆ ಕಾಮಗಾರಿ ಹಾಗೂ ಅವ್ಯವಹಾರ ಕೇಳಿ ಬಂಧಿದೆ. ಈ ನಡುವೆ ರಾಜ್ಯ ಸರ್ಕಾರದ ಆದೇಶದ ಬಗ್ಗೆ ಮಾತನಾಡಿರುವ ಕಾರ್ಕಳ ಶಾಸಕ ಸುನಿಲ್ ಕುಮಾರ್ ಪ್ರತಿಕ್ರಿಯಿಸಿ, ಸಿಐಡಿ ತನಿಖೆ ನಡೆಸಲು ಮುಂದಾಗಿರುವುದನ್ನು ಸ್ವಾಗತಿಸಿ ಟ್ವೀಟ್ ಮಾಡಿದ್ದಾರೆ. ಟ್ವಿಟ್‌ನಲ್ಲಿ ಪರಶುರಾಮ ಥೀಂ ಪಾರ್ಕ್ ವಿಚಾರದ ಬಗ್ಗೆ ಅನಗತ್ಯವಾಗಿ ಎಬ್ಬಿಸುತ್ತಿದ್ದ ಊಹಾಪೋಹ ಹಾಗೂ ಸುಳ್ಳು ಆರೋಪಗಳಿಗೆ ಒಂದು ಪೂರ್ಣ ವಿರಾಮ ಬೇಕಿತ್ತು. ಈ ಸುಳ್ಳು ಆರೋಪಗಳ ತನಿಖೆಗಾಗಿ ರಾಜ್ಯ ಸರ್ಕಾರ ಕೊನೆಗೂ ಸಿಐಡಿ ತನಿಖೆ ನಡೆಸಲು ಮುಂದಾಗಿರುವುದನ್ನು…

Read More