Author: kannadanewsnow07

ಬಳ್ಳಾರಿ:ಗ್ರಾಮ ಪಂಚಾಯಿತಿಯಲ್ಲಿ ಲಭ್ಯವಿರುವಂತಹ ಎಲ್ಲಾ ರೀತಿಯ ಸೇವೆಗಳನ್ನು ಆನ್‍ಲೈನ್‍ನಲ್ಲಿ ಪಡೆಯಬಹುದು. ಗ್ರಾಮ ಪಂಚಾಯಿತಿ ಸೇವೆಗಳಿಗಾಗಿ ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಕೆ, ಸಲ್ಲಿಸಿದ ಅರ್ಜಿಗಳ ಸ್ಥಿತಿಗತಿ ಪರಿಶೀಲನೆ, ಗ್ರಾಮ ಪಂಚಾಯಿತಿ ಮಟ್ಟದಲ್ಲಿನ ಎಲ್ಲಾ ಕುಂದುಕೊರತೆಗಳನ್ನು ದಾಖಲಿಸಿ ಮೊಬೈಲ್‍ನಲ್ಲಿ ವಾಟ್ಸಾಪ್ ಚಾಟ್ ಮೂಲಕ ಪರಿಹಾರವನ್ನು ಪಡೆಯಬಹುದು ಎಂದು ರಾಜ್ಯ ಕೈಮಗ್ಗ ಅಭಿವೃದ್ಧಿ ನಿಗಮದ ಅಧ್ಯಕ್ಷರೂ ಆದ ಕಂಪ್ಲಿ ಶಾಸಕ ಜೆ.ಎನ್.ಗಣೇಶ್ ಅವರು ಹೇಳಿದರು. ಬಳ್ಳಾರಿ ತಾಲ್ಲೂಕಿನ ಶ್ರೀಧರಗಡ್ಡೆ ಗ್ರಾಮದಲ್ಲಿ ಮಂಗಳವಾರ ಏರ್ಪಡಿಸಿದ್ದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು ಸಿದ್ಧಪಡಿಸಿರುವ ಮಹತ್ವದ ‘ಪಂಚಮಿತ್ರ’ ವಾಟ್ಸಾಪ್ ಚಾಟ್ ಲೋಕಾರ್ಪಣೆಗೊಳಿಸಿ ಅವರು ಮಾತನಾಡಿದರು. ಮೊಬೈಲ್‍ನಲ್ಲಿ ನಂಬರ್ ಅನ್ನು ಸೇವ್ ಮಾಡಿಕೊಂಡು ಚಾಟ್ ಅನ್ನು ಆರಂಭಿಸಿದರೆ ಭಾಷೆಯ ಆಯ್ಕೆ, ಹೆಸರು, ವಿಳಾಸ, ಮೊಬೈಲ್ ನಂಬರ್ ಎಲ್ಲಾ ಮಾಹಿತಿ ನೀಡಿ ಲಾಗಿನ್ ಆಗಬೇಕು. ನಂತರ ಆಯ್ಕೆಗಳು ಆರಂಭವಾಗುತ್ತವೆ. ಕ್ರಮ ಸಂಖ್ಯೆಯನ್ನು ನಮೂದಿಸುವ ಮೂಲಕ ಜಿಲ್ಲೆ, ತಾಲೂಕು, ಗ್ರಾಮ ಆಯ್ಕೆಯನ್ನು ಮಾಡಿಕೊಂಡು ನಂತರ ಗ್ರಾಮ ಪಂಚಾಯಿತಿಯ ಆಯ್ಕೆ ಮಾಡಿಯನ್ನು ಚುನಾಯಿತ ಪ್ರತಿನಿಧಿಗಳು ಸಿಬ್ಬಂದಿಯ…

Read More

ಬೆಂಗಳೂರು: ಬೆಂಗಳೂರು ಜಲ ಮಂಡಳಿಯ ವಿವಿಧ ಉಪ ವಿಭಾಗಗಳಾದ ಪೂರ್ವ-1-1, ಪೂರ್ವ-2-1, ಆಗ್ನೇಯ -1, ಆಗ್ನೇಯ -4, ಪಶ್ಚಿಮ -1-1, ಪಶ್ಚಿಮ -2-1, ವಾಯುವ್ಯ – 1, ವಾಯುವ್ಯ – 3, ಕೇಂದ್ರ-1-1 ಈಶಾನ್ಯ – 1 ಮತ್ತು ಉತ್ತರ-1-1, ಉಪವಿಭಾಗಗಳಲ್ಲಿ ನೀರಿನ ಬಿಲ್ಲು, ನೀರು ಮತ್ತು ಒಳಚರಂಡಿ ಸಂಪರ್ಕ ಕಲ್ಪಿಸುವಲ್ಲಿನ ವಿಳಂಬ, ಗೃಹ ಬಳಕೆಯಿಂದ ಗೃಹೇತರ ಬಳಕೆ ಪರಿವರ್ತನೆ ವಿಳಂಬ ಮತ್ತಿತರ ಕುಂದು ಕೊರತೆಗಳಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಪರಿಹರಿಸಲು ಮಾರ್ಚ್ 7ರಂದು ಬೆಳಿಗ್ಗೆ 9.30 ಗಂಟೆಯಿಂದ 11 ಗಂಟೆಯವರೆಗೆ ನೀರಿನ ಅದಾಲತ್‍ನ್ನು ಹಮ್ಮಿಕೊಳ್ಳಲಾಗಿದೆ. ಎ.ಇ.ಸಿ.ಎಸ್ – 1 ಮತ್ತು 2, ಹೂಡಿ, ಹೆಚ್.ಬಿಆರ್.ಲೇಔಟ್, ಕಾಚರಕನಹಳ್ಳಿ, ಕಲ್ಯಾಣನಗರ, ಜೀವನ್ ಭೀಮಾನಗರ, ಹೆಚ್.ಎ.ಎಲ್ 2ನೇ ಹಂತ, ಇಂದಿರಾನಗರ, ಬೈಯ್ಯಪ್ಪನಹಳ್ಳಿ, ಸಿ.ವಿ.ರಾಮನ್‍ನಗರ, ಸದಾನಂದನಗರ, ಮಾಗಡಿ ರಸ್ತೆ – 1,2, ಹೊಸಹಳ್ಳಿ ಪಂಪ್ ಹೌಸ್, ಮೈಸೂರು ರಸ್ತೆ, ಕೆಂಗೇರಿ, ಐಡಿಯಲ್ ಹೋಮ್ಸ್, ಬಿ.ಜಿ.ಎಂ.ಎಲ್ ಲೇಔಟ್, ಆರ್.ಆರ್.ನಗರ, ಕೇತಮಾರನಹಳ್ಳಿ, ಮಹಾಲಕ್ಷ್ಮಿ ಲೇಔಟ್, ರಾಜಾಜಿನಗರ-1, 2, ನಂದಿನಿ ಲೇಔಟ್…

Read More

ಬೆಂಗಳೂರು: ರಾಜ್ಯದ ಪ್ರತಿ ಗ್ರಾಮ ಮತ್ತು ವಾರ್ಡ್‍ಗಳಲ್ಲಿ ಕುಡಿಯುವ ನೀರಿಗೆ ಸಮಸ್ಯೆಯಾಗಬಾರದು. ಸಮಸ್ಯೆ ಉದ್ಭವಿಸಿದಲ್ಲಿ 24 ಗಂಟೆಗಳೊಳಗಾಗಿ ಟ್ಯಾಂಕರ್, ಖಾಸಗಿ ಕೊಳವೆಬಾವಿ ಸೇರಿದಂತೆ ಯಾವುದೇ ಜಲಮೂಲಗಳಿಂದ ನೀರು ಪೂರೈಸಲು ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಲ್ಲಾ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಅವರು ಮಂಗಳವಾರಗೃಹ ಕಚೇರಿ ಕೃಷ್ಣಾದಲ್ಲಿ ರಾಜ್ಯದಲ್ಲಿ ಬರ ಪರಿಸ್ಥಿತಿ ನಿರ್ವಹಣೆ ಕುರಿತು ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು, ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿದರು. ಹಿಂಗಾರು ಹಾಗೂ ಮುಂಗಾರು ಮಳೆ ಕೊರತೆಯಿಂದಾಗಿ ಭಾರಿ ಪ್ರಮಾಣದ ಬರಗಾಲ ಉಂಟಾಗಿದೆ. ಸುಮಾರು 48 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆಹಾನಿಯಾಗಿದೆ. ಏಪ್ರೀಲ್ ಮತ್ತು ಮೇ ತಿಂಗಳಲ್ಲಿ ಬರುವ ತೀವ್ರ ಬರಗಾಲವನ್ನು ಎದುರಿಸಲು ಸಜ್ಜಾಗಬೇಕಿದೆ ಎಂದು ತಿಳಿಸಿದರು. ಪ್ರಸ್ತುತದಲ್ಲಿ ಇರುವ ಪರಿಸ್ಥಿತಿಯನ್ನು ಹೇಗೆ ನಿಭಾಯಿಸಬೇಕು ಮತ್ತು ಮುಂಬರುವ ಸಮಸ್ಯೆಗಳನ್ನು ಹೇಗೆ ಎದುರಿಸಬೇಕು ಎಂಬುದಕ್ಕೆ ಸೂಕ್ತ ಯೋಜನೆ ರೂಪಿಸಬೇಕು ಎಂದು ಜಿಲ್ಲಾಧಿಕಾರಿಗಳಿಗೆ, ಜಿಪಂ ಮುಖ್ಯ ಕಾರ್ಯನಿರ್ವಾಹಕ…

Read More

ಬೆಂಗಳೂರು: ಡಿಜಿಟಲ್ ಉಪಕರಣಗಳಿಂದ ಮಕ್ಕಳ ಮನಸ್ಸು ಕಲುಶಿತವಾಗದಂತೆ ಎಚ್ಚರವಹಿಸಿ, ಅವರಿಗೆ ಆರೋಗ್ಯಕರ ಭವಿಷ್ಯ ನೀಡುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದು ಕರ್ನಾಟಕ ಉಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿಗಳಾದ ಎನ್.ವಿ.ಅಂಜಾರಿಯಾ ತಿಳಿಸಿದರು. ಅವರು ಇಂದು ಕರ್ನಾಟಕ ನ್ಯಾಯಾಂಗ ಅಕಾಡೆಮಿಯಲ್ಲಿ ಕರ್ನಾಟಕ ಉಚ್ಚನ್ಯಾಯಾಲಯದ ಬಾಲ ನ್ಯಾಯ ಸಮಿತಿ, ಕರ್ನಾಟಕ ಉಚ್ಚನ್ಯಾಯಾಲಯ, ಕರ್ನಾಟಕ ನ್ಯಾಯಾಂಗ ಅಕಾಡೆಮಿ ಹಾಗೂ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸಹಯೋಗದಲ್ಲಿ “ಆನ್‍ಲೈನ್‍ನಿಂದ ಮಕ್ಕಳ ಮೇಲಾಗುತ್ತಿರುವ ದುಷ್ಪರಿಣಾಮಗಳು ಮತ್ತು ಮಕ್ಕಳ ಸಾಕ್ಷರತೆ’ ಕುರಿತು ಹಮ್ಮಿಕೊಳ್ಳಲಾದ ರಾಜ್ಯಮಟ್ಟದ ಸಭೆಯಲ್ಲಿ ಉದ್ಘಾಟನಾ ಭಾಷಣ ಮಾಡಿದರು. ಪ್ರಸ್ತುತ ಮೊಬೈಲ್, ಇಂಟರ್‍ನೆಟ್‍ನಿಂದ ಮಕ್ಕಳು ಹೊರಜಗತ್ತಿಗೆ ಸುಲಭವಾಗಿ ಸಂಪರ್ಕ ಹೊಂದಬಲ್ಲವರಾಗಿದ್ದಾರೆ. ಅವರಿಗೆ ಈ ಡಿಜಿಟಲ್ ಉಪಕರಣಗಳ ಬಗ್ಗೆ ಕುತೂಹಲ, ಆಸಕ್ತಿ ಹಾಗೂ ಅವಲಂಬನೆ ಹೆಚ್ಚಾಗುತ್ತದೆ. ಅವುಗಳಲ್ಲಿ ಎಷ್ಟು ಸಕಾರಾತ್ಮಕ ಅಂಶಗಳಿವೆಯೋ ಅಷ್ಟೇ ನಕಾರಾತ್ಮಕ ಅಂಶಗಳು ಸಹ ನಮಗೆ ಕಾಣಸಿಗುತ್ತವೆ. ಅವು ನಮ್ಮ ಆಲೋಚನೆ, ಬುದ್ಧಿವಂತಿಕೆಯನ್ನು ಕೆಲವೊಮ್ಮೆ ಬೇರೆಡೆಗೆ ಕೊಂಡೊಯ್ಯುತ್ತದೆ. ಮೊಬೈಲ್, ಕಂಪ್ಯೂಟರ್ ಬಳಕೆಯಿಂದ ಮಕ್ಕಳಲ್ಲಿ ಜೀವನಶೈಲಿ ಬದಲಾಗಿ ಪಠ್ಯ…

Read More

ದಾವಣಗೆರೆ: ಕನ್ನಡ ಬಳಕೆಗೆ ಕಾಯಿದೆಯನ್ನು ಮಾಡುವ ಮೂಲಕ ರಾಜ್ಯದಲ್ಲಿ ಕನ್ನಡ ಬೆಳಗುವ ಕೆಲಸವನ್ನು ಸರ್ಕಾರ ಮಾಡಿದೆ ಎಂದು ಮಾಯಕೊಂಡ ಶಾಸಕರಾದ ಕೆ.ಎಸ್.ಬಸವಂತಪ್ಪ ತಿಳಿಸಿದರು. ಅವರು ಮಂಗಳವಾರ ದಾವಣಗೆರೆ ತಾ; ಹೆಬ್ಬಾಳು ಗ್ರಾಮದಲ್ಲಿ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನಿಂದ ಏರ್ಪಡಿಸಲಾದ 10 ನೇ ತಾಲ್ಲೂಕು ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟನಾ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸದನದಲ್ಲಿ ಕನ್ನಡ ಭಾಷೆಯ ಅನುಷ್ಟಾನಕ್ಕೆ ಕಾಯಿದೆ ಮಂಡಿಸಿ ಶೇ 60 ರಷ್ಟು ಕನ್ನಡ ಬಳಕೆ ಕಡ್ಡಾಯ ಮಾಡಲಾಗಿದೆ. ಅದೇ ರೀತಿ ರಾಜ್ಯದಲ್ಲಿನ ಉದ್ದಿಮೆಗಳಲ್ಲಿ ರಾಜ್ಯದ ಜನರಿಗೆ ಶೇ 80 ರಷ್ಟು ಉದ್ಯೋಗ ನೀಡುವಂತಹ ಕಾಯಿದೆಯು ಅನುಷ್ಟಾನವಾಗಬೇಕೆಂದು ಅಭಿಪ್ರಾಯಪಟ್ಟರು. ಇಲ್ಲಿನ ರೈತರು ಬೆಳೆದ ಬೆಳೆಗಳಿಗೆ ಸೂಕ್ತವಾದ ಬೆಂಬಲ ಬೆಲೆ ಸಿಗಬೇಕು, ಇದರಿಂದ ರೈತ ಸಶಕ್ತನಾಗಿ ಬದುಕಲು ಸಾಧ್ಯವಾಗಲಿದೆ. ದಾವಣಗೆರೆ ರಾಜ್ಯದ ಮಧ್ಯಭಾಗದಲ್ಲಿದ್ದು ಇಲ್ಲಿ ಯಾವುದೇ ಇತರೆ ರಾಜ್ಯಗಳ ಭಾಷೆಯ ಪ್ರಭಾವವಿರುವುದಿಲ್ಲ. ಇಲ್ಲಿ ಕನ್ನಡ ಮಾತನಾಡುವವರೇ ಸಿಗುತ್ತಾರೆ. ಅಕ್ಕ ಪಕ್ಕದ ಜಿಲ್ಲೆಗಳಿಗೆ ಹೋಲಿಕೆ ಮಾಡಿದರೆ ಇತರೆ ಭಾಷೆಗಳ ಪ್ರಭಾವ…

Read More

ಬೆಂಗಳೂರು: ಬೆಂಗಳೂರು ನಗರ ವಿಶ್ವವಿದ್ಯಾನಿಲಯ ಹಾಗೂ ವಿಶ್ವವಿದ್ಯಾನಿಲಯದ ಬಹುಶಿಸ್ತೀಯ ಮಹಿಳಾ ಘಟಕ ಕಾಲೇಜು, ಮಲ್ಲೇಶ್ವರಂನಲ್ಲಿ 2023-24ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಸಮಾಜ ಕಾರ್ಯ (ಸ್ನಾತಕೋತ್ತರ) ಹಾಗೂ ಗಣಕ ವಿಜ್ಞಾನ (ಸ್ನಾತಕ) ವಿಷಯಗಳ ಬೋಧನಾ ಕಾರ್ಯದ ನಿರ್ವಹಣೆಗಾಗಿ ಅತಿಥಿ ಉಪನ್ಯಾಸಕರ ಸೇವೆಯನ್ನು ಪಡೆಯಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಬಯಸುವ ಆಸಕ್ತ ಅಭ್ಯರ್ಥಿಗಳು ವಿಶ್ವವಿದ್ಯಾನಿಲಯದ ವೆಬ್‍ಸೈಟ್ www.bcu.ac.in ಅನ್ನು ನೋಡಬಹುದು ಹಾಗೂ ಅಭ್ಯರ್ಥಿಗಳು ವಿಶ್ವವಿದ್ಯಾನಿಲಯದ ವೆಬ್‍ಸೈಟ್ ಮುಖಾಂತರ ಅರ್ಜಿಗಳನ್ನು ಡೌನ್‍ಲೋಡ್ ಮಾಡಿಕೊಳ್ಳಬಹುದಾಗಿದೆ. ಮಾರ್ಚ್ 11 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿರುತ್ತದೆ. ಭರ್ತಿ ಮಾಡಿದ ಅರ್ಜಿಯ ಪ್ರತಿಯನ್ನು ದಾಖಲಾತಿಗಳೊಡನೆ ಮಾರ್ಚ್ 11 ರೊಳಗೆ ಕುಲಸಚಿವರ ಕಛೇರಿ, ಬೆಂಗಳೂರು ನಗರ ವಿಶ್ವವಿದ್ಯಾನಿಲಯ, ಸೆಂಟ್ರಲ್ ಕಾಲೇಜ್ ಆವರಣ, ಡಾ.ಅಂಬೇಡ್ಕರ್ ವೀಧಿ, ಬೆಂಗಳೂರು ಇಲ್ಲಿಗೆ ಸಲ್ಲಿಸುವುದು ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.

Read More

ಬೆಂಗಳೂರು : ರಾಷ್ಟ್ರೀಯ ಲೋಕ್ ಅದಾಲತ್‍ನ್ನು ಈ ಹಿಂದೆ ಮಾರ್ಚ್ 9 ರಂದು ನಿಗಧಿಯಾಗಿದ್ದು, ದಿನಾಂಕವನ್ನು ಮಾರ್ಚ್ 16 ಕ್ಕೆ ಮುಂದೂಡಲಾಗಿದೆ. ಸಾರ್ವಜನಿಕರು ಬಾಕಿ ಉಳಿದಿರುವ ವ್ಯಾಜ್ಯಗಳನ್ನು ಲೋಕ್ ಅದಾಲತ್ ಮೂಲಕ ಇತ್ಯರ್ಥಪಡಿಸಿಕೊಳ್ಳಬಹುದಾಗಿದೆ ಎಂದು ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಪ್ರಕಟಣೆ ತಿಳಿಸಿದೆ. ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ- 15100 ಮತ್ತು 1800-425-90900 ಜಾಲತಾಣ www.kslsa.kar.nic.in     ಅಥವಾ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರಗಳು ಅಥವಾ ತಾಲೂಕು ಕಾನೂನು ಸೇವಾ ಸಮಿತಿಯ ಸದಸ್ಯ ಕಾರ್ಯದರ್ಶಿ ಅವರನ್ನು ಸಂಪರ್ಕಿಸಬಹುದು ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.

Read More

ಶಿವಮೊಗ್ಗ: ಜಿಲ್ಲೆಯಲ್ಲಿ ಅವಧಿ ಮುಗಿದಿರುವ ಮರಳು ನಿಕ್ಷೇಪಗಳಿಗೆ ಮರಳು ನೀತಿಯನ್ವಯ ಮಾರ್ಗಸೂಚಿಗಳನ್ನು ಸಿದ್ದಪಡಿಸಿ ನವೀಕರಣಗೊಳಿಸಿ ಆದಷ್ಟು ಶೀಘ್ರದಲ್ಲಿ ಮರಳು ಲಭ್ಯವಾಗುವಂತೆ ಕ್ರಮ ವಹಿಸಬೇಕು ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಜಿಲ್ಲಾ ಟಾಸ್ಕ್ ಫೋರ್ಸ್, ಜಿಲ್ಲಾ ಮರಳು ಸಮಿತಿ ಮತ್ತು ಜಿಲ್ಲಾ ಕ್ರಷರ್ ಲೈಸೆನ್ಸಿಂಗ್ ಮತ್ತು ನಿಯಂತ್ರಣ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಅಧಿಕೃತವಾಗಿ ಸಾರ್ವಜನಿಕರಿಗೆ ಮರಳು ಲಭ್ಯವಾಗುವಂತೆ ಕ್ರಮ ವಹಿಸಬೇಕು ಹಾಗೂ ಅಕ್ರಮ ಮರಳು ಗಣಿಗಾರಿಕೆ ಮತ್ತು ಸಾಗಾಣಿಕೆಯನ್ನು ತಡೆಗಟ್ಟಲು ಸೂಕ್ಷ್ಮ ಪ್ರದೇಶಗಳಲ್ಲಿ ಚೆಕ್‍ಪೋಸ್ಟ್‍ಗಳನ್ನು ಸ್ಥಾಪಿಸಿ ಕಟ್ಟುನಿಟ್ಟಾಗಿ ಪರಿಶೀಲಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು. ಎಸ್‍ಪಿ ಮಿಥುನ್ ಕುಮಾರ್‍ರವರು, ಅಕ್ರಮ ಗಣಿಗಾರಿಕೆ ತಡೆಯಲು ಗಸ್ತು, ಪೊಲೀಸರನ್ನು ಬಳಕೆ ಮಾಡಿಕೊಳ್ಳುವಂತೆ ತಿಳಿಸಿದ ಅವರು ಒಂದು ಉಸ್ತುವಾರಿ ತಂಡ ರಚಿಸುವಂತೆ ಸೂಚನೆ ನೀಡಿದರು. ಜಿಲ್ಲಾಧಿಕಾರಿಗಳು, ಜಿಲ್ಲೆಯಲ್ಲಿ ಸರ್ಕಾರಿ ಕಾಮಗಾರಿಗಳಿಗೆ ಮರಳು ಪೂರೈಕೆ ಸಂಬಂಧ ಬ್ಲಾಕ್‍ಗಳನ್ನು ನಿಗದಿಪಡಿಸಬೇಕು. ಕಡಿಮೆ ಕಾಮಗಾರಿ ಇರುವೆಡೆ ಒಂದು ಬ್ಲಾಕ್…

Read More

ಮಡಿಕೇರಿ :-ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಸೇರಿದಂತೆ ವಿವಿಧ ಯೋಜನೆಯಡಿ 47 ಲಕ್ಷ ರೂ. ವೆಚ್ಚದಲ್ಲಿ ಗಾಳಿಬೀಡು ಗ್ರಾಮ ಪಂಚಾಯಿತಿಯಲ್ಲಿ ನೂತನವಾಗಿ ನಿರ್ಮಿಸಿರುವ ಕಟ್ಟಡವನ್ನು ಸಂಸದರಾದ ಪ್ರತಾಪ್ ಸಿಂಹ ಹಾಗೂ ಶಾಸಕರಾದ ಡಾ.ಮಂತರ್ ಗೌಡ ಅವರು ಮಂಗಳವಾರ ಉದ್ಘಾಟಿಸಿದರು. ಬಳಿಕ ಮಾತನಾಡಿದ ಸಂಸದರಾದ ಪ್ರತಾಪ್ ಸಿಂಹ ಅವರು ಕೇಂದ್ರ ಸರ್ಕಾರದಿಂದ ಪ್ರತೀ ಗ್ರಾಮ ಪಂಚಾಯಿತಿಗೆ 38 ಲಕ್ಷ ರೂ.ನಷ್ಟು ನೇರವಾಗಿ ಅನುದಾನ ಬಿಡುಗಡೆಯಾಗುತ್ತಿದ್ದು, ಗ್ರಾ.ಪಂ.ಗಳು ಆರ್ಥಿಕವಾಗಿ ಸಬಲತೆ ಹೊಂದುವುದರ ಜೊತೆಗೆ ಗ್ರಾಮಗಳ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಬೇಕು ಎಂದು ಹೇಳಿದ್ದಾರೆ. ಕೇಂದ್ರದಿಂದ 14-15ನೇ ಹಣಕಾಸು ಆಯೋಗದಿಂದ ಪಂಚಾಯತ್ ಸೇವಾ ಕೇಂದ್ರದಡಿ ಗ್ರಾ.ಪಂ.ಗಳ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲಾಗಿದೆ. ಕುಡಿಯುವ ನೀರು, ವಿದ್ಯುತ್ ಸಂಪರ್ಕ, ಗ್ರಾಮೀಣ ರಸ್ತೆ, ಚರಂಡಿ ಮತ್ತಿತರ ಮೂಲ ಸೌಲಭ್ಯಕ್ಕೆ ಒತ್ತು ನೀಡಲಾಗಿದೆ ಎಂದರು. ಗಾಳಿಬೀಡು ಗ್ರಾ.ಪಂ.ಸೇರಿದಂತೆ ಕೊಡಗು ಜಿಲ್ಲೆಯ 60 ಕ್ಕೂ ಹೆಚ್ಚು ಕಡೆಗಳಲ್ಲಿ ಮೊಬೈಲ್ ಟವರ್‍ಗಳನ್ನು ನಿರ್ಮಾಣ ಮಾಡಲಾಗಿದೆ ಎಂದು ಪ್ರತಾಪ್ ಸಿಂಹ ಅವರು…

Read More

ಮಡಿಕೇರಿ :-ಕೊಡಗು ಜಿಲ್ಲಾ ಪಂಚಾಯತ್ ಎನ್‍ಆರ್‍ಎಲ್‍ಎಂ ಸಂಜೀವಿನಿ ಯೋಜನೆಯ ವತಿಯಿಂದ ನಗರದ ಬಾಲ ಭವನದ ಆವರಣದಲ್ಲಿ ಮಾರ್ಚ್, 07 ರವರೆಗೆ ಜಿಲ್ಲೆಯ ಸ್ವ ಸಹಾಯ ಸಂಘಗಳ ಸದಸ್ಯರು ತಯಾರಿಸಿರುವ ವಸ್ತುಗಳ ಮಾರಾಟ ಮತ್ತು ವಸ್ತು ಪ್ರದರ್ಶನ ಮೇಳವನ್ನು ಮಂಗಳವಾರ ಮಡಿಕೇರಿ ವಿಧಾನ ಸಭಾಕ್ಷೇತ್ರದ ಶಾಸಕರಾದ ಡಾ.ಮಂತರ್ ಗೌಡ ಅವರು ಉದ್ಘಾಟಿಸಿದರು. ಮಹಿಳೆಯರ ಸ್ವಾವಲಂಬಿ ಆರ್ಥಿಕ ಜೀವನ ಮಟ್ಟಕ್ಕೆ ಪೂರಕವಾದ ಮಾರುಕಟ್ಟೆ ವ್ಯವಸ್ಥೆ ಇದಾಗಿರುತ್ತದೆ ಎಂದು ತಿಳಿಸಿದರು. ಮಹಿಳೆಯರ ಉತ್ಪನ್ನಗಳನ್ನು ಸ್ವಯಿಚ್ಛೆಯಿಂದ ರೂ.5,000 ಕ್ಕೂ ಮೇಲ್ಪಟ್ಟು ಖರೀದಿಸಿದರು ಹಾಗೂ ಮಹಿಳೆಯರ ಒಡನಾಡಿಯಾಗಿ ಸ್ವಸಹಾಯ ಸಂಘಗಳ ಅಭಿವೃದ್ಧಿಗೆ ಪೂರಕವಾಗಿ ಸಹಕರಿಸುವುದಾಗಿ ತಿಳಿಸಿದರು. ಶಾಸಕರು ಸ್ವಸಹಾಯ ಸಂಘದ ಮಹಿಳೆಯರು ಉತ್ಪಾದಿಸಿದ ಉತ್ಪನ್ನಗಳನ್ನು ಖರೀದಿಸಿ ಮಹಿಳೆಯರಿಗೆ ಪೆÇ್ರೀತ್ಸಾಹ ನೀಡುವ ನಿಟ್ಟಿನಲ್ಲಿ ಸಿಹಿ ವಿತರಿಸಿ ಸಂಭ್ರಮಿಸಿದರು. ಮಡಿಕೇರಿ ನಗರಸಭೆ ಅಧ್ಯಕ್ಷರಾದ ಅನಿತಾ ಪೂವಯ್ಯ, ಜಿಲ್ಲಾ ಪಂಚಾಯತ್ ಮುಖ್ಯ ಲೆಕ್ಕಾಧಿಕಾರಿ ಝೀವಲ್ ಖಾನ್, ಸಹಾಯಕ ಯೋಜನಾ ಅಧಿಕಾರಿಗಳು ಜೀವನ್ ಕುಮಾರ್, ಎನ್‍ಆರ್‍ಎಲ್‍ಎಂ ಸಂಜೀವಿನಿ ಯೋಜನೆಯ ಜಿಲ್ಲಾ ಮತ್ತು ತಾಲ್ಲೂಕು ಸಿಬ್ಬಂದಿಗಳು…

Read More