Subscribe to Updates
Get the latest creative news from FooBar about art, design and business.
Author: kannadanewsnow07
ಬೆಂಗಳೂರು: ಕರ್ತವ್ಯಕ್ಕೆ ಅನಧಿಕೃತ ಗೈರುಹಾಜರಾದ ನೌಕರರ ಪ್ರಕರಣಗಳಲ್ಲಿ ಶಿಸ್ತು ಕ್ರಮದ ಬಗ್ಗೆ ಮಹತ್ವದ ಆದೇಶವನ್ನು ಹೊರಡಿಸಲಾಗಿದೆ. ಆದೇಶದಲ್ಲಿ ಉಲ್ಲೇಖ ಮಾಡಲಾಗಿರುವ ಮಾಹಿತಿಗಳು ಈ ಕೆಳಕಂಡತಿದೆ. ಸರ್ಕಾರದ ಅಧಿಕೃತ ಜ್ಞಾಪನ : ಸಿಆಸುಇ 25ಸೇಇವಿ 2001 ದಿನಾಂಕ: 01/08/2001 ವಿಷಯದನ್ವಯ, ಅನಧಿಕೃತವಾಗಿ ಗೈರು ಹಾಜರಾಗಿರುವ ಸರ್ಕಾರಿ ನೌಕರರ ಮೇಲೆ ಇಲಾಖಾ ವಿಚಾರಣೆಯನ್ನು ನಡೆಸಿ ಅಂತಹವರನ್ನು ಕೆಲಸದಿಂದ ತೆಗೆದುಹಾಕುವ ಅಥವಾ ವಜಾಮಾಡುವ ಬಗ್ಗೆ ಕ್ರಮ ತೆಗೆದುಕೊಳ್ಳುವ ವಿಷಯದಲ್ಲಿ ಅನುಸರಿಸಬೇಕಾದ ಕ್ರಮವನ್ನು ಉಲ್ಲೇಖ-1 ರ ಸುತ್ತೋಲೆಯಲ್ಲಿ ಸ್ಪಷ್ಟವಾಗಿ ನಮೂದಿಸಲಾಗಿರುತ್ತದೆ. https://kannadanewsnow.com/kannada/breaking-bomb-threat-to-state-govt-via-email-officials-launch-probe/ ಕೆಲವು ಶಿಕ್ಷಕರು ವರ್ಗಾವಣೆಗೆ ಪರ್ಯಾಯವಾಗಿ ಉದ್ದೇಶಪೂರ್ವಕವಾಗಿ ಕರ್ತವ್ಯಕ್ಕೆ ಅನಧಿಕೃತ ಗೈರುಹಾಜರಾಗಿ ನಂತರ ಅಮಾನತ್ತುಗೊಂಡು ನಂತರ ತಮಗೆ ಅನುಕೂಲಕರವಾದ ಶಾಲೆಗೆ ಸ್ಥಳನಿಯುಕ್ತಿಗೊಳ್ಳುತ್ತಿರುವ ಕುರಿತಾಗಿ ಪತ್ರಿಕೆಗಳಲ್ಲಿ ವರದಿ ಪ್ರಕಟವಾಗಿರುತ್ತದೆ ಮತ್ತು ರಾಜ್ಯದ ಕೆಲವು ಉಪನಿರ್ದೇಶಕರು(ಆಡಳಿತ) ಇವರು ಸರ್ಕಾರದ ನಿಯಮಾವಳಿಗಳನ್ನು ಉಲ್ಲಂಘಿಸಿ ಅನಧಿಕೃತ ಗೈರುಹಾಜರಾಗಿರುವ ಶಿಕ್ಷಕರನ್ನು ಸೇವೆಯಿಂದ ಅಮಾನತ್ತುಗೊಳಿಸಿ ಜಿಲ್ಲೆಯೊಳಗೆ ಒಂದು ತಾಲ್ಲೂಕಿನಿಂದ ಮತ್ತೊಂದು ತಾಲ್ಲೂಕಿಗೆ ಅಂದರೆ ಹೆಚ್ಚು ಖಾಲಿ ಹುದ್ದೆಗಳು ಇರುವ ತಾಲ್ಲೂಕಿನಿಂದ ಶಿಕ್ಷಕರನ್ನು ಅಮಾನತ್ತುಗೊಳಿಸುತ್ತಿರುವುದು ಕಂಡುಬಂದಿರುತ್ತದೆ.…
ಬೆಂಗಳೂರು: ಸರ್ಕಾರಿ ಶಾಲೆಗಳಲ್ಲಿ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ದೊರೆಯಬೇಕು. ವೈಚಾರಿಕತೆ, ವೈಜ್ಞಾನಿಕತೆ ಬೆಳೆಸಿಕೊಳ್ಳಬೇಕು. ಜ್ಞಾನದ ವಿಕಾಸವಾಗಬೇಕು ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ಮೈಸೂರು ವತಿಯಿಂದ ‘ನಮ್ಮ ಶಾಲೆ ನಮ್ಮ ಜವಾಬ್ದಾರಿ’ – ಸರ್ಕಾರಿ ಶಾಲೆಗಳ ಅಭಿವೃದ್ಧಿ ಹಾಗೂ ಬಲವರ್ಧನೆ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗೃಹ ಕಚೇರಿ ಕೃಷ್ಣಾದಲ್ಲಿ ಇಂದು ಚಾಲನೆ ನೀಡಿ ಮಾತನಾಡಿದರು. ಸಂವಿಧಾನ ಪೀಠಿಕೆ ಹೇಳಿದ ಮಕ್ಕಳು : ಗೃಹ ಕಚೇರಿ ಕೃಷ್ಣಾಕ್ಕೆ ಆಗಮಿಸಿದ್ದ ಮುಖ್ಯಮಂತ್ರಿಗಳು ಕಲಿತ ಸಿದ್ದರಾಮನಹುಂಡಿ ಹಾಗೂ ಕುಪ್ಪೆಗಾಲ ಸರ್ಕಾರಿ ಶಾಲೆಯ ಮಕ್ಕ ಳೊಡನೆ ಮುಖ್ಯ ಮಂತ್ರಿಗಳು ಸಂವಾದ ನಡೆಸಿದರು. ಸಂವಿಧಾನವನ್ನು ಅರಿತುಕೊಳ್ಳಬೇಕು ಎಂದ ಮುಖ್ಯ ಮಂತ್ರಿಗಳು, ಸಂವಿಧಾನ ಏನು ಹೇಳುತ್ತದೆ ಹೇಳಿ ನೋಡೋಣ ಮಕ್ಕಳನ್ನು ಕೇಳಿದಾಗ , ಮಕ್ಕಳು ಸಂವಿಧಾನದ ಪೂರ್ಣ ಪೀಠಿಕೆಯನ್ನು ಹೇಳಿದರು. ‘ಕೇವಲ ಕಂಠಪಾಠ ಮಾಡಿದರೆ ಸಾಲದು, ಅದರ ತಿರುಳನ್ನು ಅರಿತು ಅದರಂತೆ ನಡೆಯಬೇಕು ಎಂದರು. ಸ್ವಾತಂತ್ರ್ಯ, ಸಮಾನತೆ, ಭ್ರಾತೃತ್ವ ಸಂವಿಧಾನದ ತಿರುಳು .…
ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣದ ಆರೋಪ ಎದುರಿಸುತ್ತಿರುವ ಡಿಸಿಎಂ ಡಿಕೆ ಶಿವಕುಮಾರ್ಗೆ ಸುಪ್ರಿಂಕೋರ್ಟ್ ಬಿಗ್ ರಿಲೀಫ್ ನೀಡಿದ್ದು, ಶಿವಕುಮಾರ್ ವಿರುದ್ಧ ಜಾರಿ ನಿರ್ದೇಶನಾಲಯ (ED) 120B ಅಡಿ ದಾಖಲಿಸಿದ್ದ ಪ್ರಕರಣವನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ. ಈ ಪ್ರಕರಣಕ್ಕೆ ಸಂಬಂಧಿಸಿ ಕರ್ನಾಟಕ ಹೈಕೋರ್ಟ್ ನೀಡಿದ್ದ ಆದೇಶವನ್ನು ಸುಪ್ರಿಂಕೋರ್ಟ್ ರದ್ದು ಮಾಡಿದೆ. ಡಿಕೆ ಶಿವಕುಮಾರ್ ವಿರುದ್ಧದ ಪ್ರಕರಣದ ಮೇಲ್ಮನವಿ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸೂರ್ಯಕಾಂತ್ ನೇತೃತ್ವದ ಪೀಠ ಈ ಆದೇಶ ನೀಡಿದೆ. ಡಿಕೆ ಶಿವಕುಮಾರ್ ಮತ್ತು ಅವರ ಕುಟುಂಬದ ಸದಸ್ಯರು 74.93 ಕೋಟಿ ರೂಪಾಯಿ ಮೊತ್ತದ ಆಸ್ತಿಯನ್ನು ಅಕ್ರಮವಾಗಿ ಗಳಿಸಿದ್ದಾರೆ ಎಂಬ ಆರೋಪ ಸಂಬಂಧ ಸಿಬಿಐ ಪ್ರಕರಣ ದಾಖಲಿಸಿಕೊಂಡಿತ್ತು. ಅದರಂತೆ 2020ರ ಅಕ್ಟೋಬರ್ 5ರಂದು ದೆಹಲಿ, ಮುಂಬೈ ಸೇರಿದಂತೆ ಡಿಕೆ ಶಿವಕುಮಾರ್ ಅವರಿಗೆ ಸೇರಿದ 14 ಸ್ಥಳಗಳ ಮೇಲೆ ಸಿಬಿಐ ಏಕಕಾಲಕ್ಕೆ ದಾಳಿ ನಡೆಸಿತ್ತು. https://kannadanewsnow.com/kannada/water-crisis-in-cms-home-office-water-supply-through-tankers/ https://kannadanewsnow.com/kannada/acid-attack-case-womens-commission-chairperson-meets-3-girl-students-promises-rs-4-lakh-compensation-each/ ಈ ವೇಳೆ ಕಂಪ್ಯೂಟರ್ ಹಾರ್ಡ್ಡಿಸ್ಕ್ ಹಾಗೂ 57 ಲಕ್ಷ ನಗದು ಸೇರಿದಂತೆ ಹಲವು…
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ತೆಲಂಗಾಣದ ಶ್ರೀ ಉಜ್ಜಯಿನಿ ಮಹಾಂಕಳಿ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದರು ಮತ್ತು ನಂತರ ಸಂಗಾರೆಡ್ಡಿಯಲ್ಲಿ 7,200 ಕೋಟಿ ರೂ.ಗಳ ಯೋಜನೆಗಳಿಗೆ ಚಾಲನೆ ನೀಡಿದರು. ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ, ಕುಟುಂಬವಾದಕ್ಕಾಗಿ ವಿರೋಧ ಪಕ್ಷಗಳನ್ನು ತೀವ್ರವಾಗಿ ಗುರಿಯಾಗಿಸಿಕೊಂಡಿದ್ದಾರೆ. ಅವರಿಗೆ ಕುಟುಂಬವೇ ಮೊದಲು, ಮೋದಿಗೆ ದೇಶವೇ ಮೊದಲು ಎಂದು ಮೋದಿ ಹೇಳಿದರು. https://kannadanewsnow.com/kannada/ram-temple-in-ayodhya-is-impure-hindus-should-not-worship-tmc-mla-ramendu-sinha/ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ತೆಲಂಗಾಣದ ಶ್ರೀ ಉಜ್ಜಯಿನಿ ಮಹಾಂಕಳಿ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದರು ಮತ್ತು ನಂತರ ಸಂಗಾರೆಡ್ಡಿಯಲ್ಲಿ 7,200 ಕೋಟಿ ರೂ.ಗಳ ಯೋಜನೆಗಳಿಗೆ ಚಾಲನೆ ನೀಡಿದರು. ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ, ಕುಟುಂಬವಾದಕ್ಕಾಗಿ ವಿರೋಧ ಪಕ್ಷಗಳನ್ನು ತೀವ್ರವಾಗಿ ಗುರಿಯಾಗಿಸಿಕೊಂಡಿದ್ದಾರೆ. ಅವರಿಗೆ ಕುಟುಂಬವೇ ಮೊದಲು, ಮೋದಿಗೆ ದೇಶವೇ ಮೊದಲು ಎಂದು ಮೋದಿ ಹೇಳಿದರು. https://kannadanewsnow.com/kannada/pro-pakistan-sloganeering-case-police-delete-mobile-data-of-accused/ ಇದೇ ವೇಳೆ ಅವರು ತೆಲಂಗಾಣದ ಅಭಿವೃದ್ಧಿಗೆ ಸಹಾಯ ಮಾಡಲು ಕೇಂದ್ರ ಸರ್ಕಾರ ನಿರಂತರವಾಗಿ ಕೆಲಸ ಮಾಡುತ್ತಿದೆ ಮತ್ತು ರಾಜ್ಯವನ್ನು “ದಕ್ಷಿಣ ಭಾರತದ ಹೆಬ್ಬಾಗಿಲು” ಎಂದು ಕರೆಯಲಾಗುತ್ತದೆ ಎಂದು ಪ್ರಧಾನಿ…
ಬೆಂಗಳೂರು: ಸಿಎಂ ಗೃಹಕಚೇರಿಗೂ ನೀರಿನ ಸಮಸ್ಯೆ ಉಂಟಾಗಿದ್ದು, ಬೆಂಗಳೂರು ನೀರು ಮಂಡಳಿಯಿಂದ ನೀರನ್ನು ತಂದು ಹಾಕಲಾಗುತ್ತಿದೆ ಎನ್ನಲಾಗಿದೆ. ಬೆಂಗಳೂರಿನ ಕುಮಾರ ಕೃಪರಸ್ತೆಯಲ್ಲಿರುವ ಸಿಎಂ ಅವರ ಮನೆಗೆ ಜಲಮಂಡಳಿಯಿಂದ ನೀರಿನ ಟ್ಯಾಂಕರ್ ಮೂಲಕ ನೀರನ್ನು ತಂದು ಬಿಡುತ್ತಿದ್ದಾರೆ ಎನ್ನಲಾಗಿದೆ. https://kannadanewsnow.com/kannada/ram-temple-in-ayodhya-is-impure-hindus-should-not-worship-tmc-mla-ramendu-sinha/ https://kannadanewsnow.com/kannada/acid-attack-case-womens-commission-chairperson-meets-3-girl-students-promises-rs-4-lakh-compensation-each/ https://kannadanewsnow.com/kannada/pro-pakistan-sloganeering-case-police-delete-mobile-data-of-accused/ ಈಗಾಗಲೇ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ನೀರಿನ ಸಮಸ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಇನ್ನೂ ಬೇಸಿಗೆ ಕಾಲ ಆರಂಭಕ್ಕೂ ಮುನ್ನವೇ ನೀರಿನ ಅಭಾವ ಕಾಡುತ್ತಿರುವುದು ಅನೇಕ ಅನುಮಾನಗಳಿಗೆ ಕಾರಣವಾಗಿದೆ. ಇನ್ನೂ ಸಾವಿವಾರರು ರೂ ನೀಡಿ ಟ್ಯಾಂಕರ್‌ಗಳಲ್ಲಿ ನೀರನ್ನು ಹೊಡಿಸಿಕೊಳ್ಳುತ್ತಿದ್ದಾರೆ ಜನ.
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರ ಕನಸಿನ ಕ್ರಾಂತಿಕಾರಕ ಯೋಜನೆಯಾದ ನಮ್ಮ ಶಾಲೆ ನಮ್ಮ ಜವಾಬ್ದಾರಿ- ಸರ್ಕಾರಿ ಶಾಲೆಗಳ ಅಭಿವೃದ್ಧಿ ಹಾಗೂ ಬಲವರ್ಧನೆ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗೃಹ ಕಚೇರಿ ಕೃಷ್ಣಾದಲ್ಲಿ ಇಂದು ಚಾಲನೆ ನೀಡಿದರು. https://kannadanewsnow.com/kannada/ram-temple-in-ayodhya-is-impure-hindus-should-not-worship-tmc-mla-ramendu-sinha/ https://kannadanewsnow.com/kannada/breaking-rameswaram-cafe-bomb-blast-case-nia-officials-conduct-spot-mahazar/ https://kannadanewsnow.com/kannada/mysuru-man-dies-after-being-hit-by-train-while-talking-to-wife-on-video-call/ ಮುಖ್ಯಮಂತ್ರಿಗಳು ಓದಿದ ಉನ್ನತೀಕರಿಸಿದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ , ಕುಪ್ಪೇಗಾಲ ಮತ್ತು ಕೆ.ಪಿ.ಎಸ್. ಸಿದ್ದರಾಮನಹುಂಡಿ ಇಲ್ಲಿಗೆ 10 ಲಕ್ಷ ರೂ. ಗಳ ದೇಣಿಗೆ ನೀಡುವ ಮೂಲಕ ಯೋಜನೆಯನ್ನು ಉದ್ಘಾಟಿಸಲಾಯಿತು. ಪ್ರಾಥಮಿಕ ಶಿಕ್ಷಣ ಸಚಿವ ಮಧು ಬಂಗಾರಪ್ಪ, ಕೈಗಾರಿಕಾ ಸಚಿವ ಎಂ. ಬಿ.ಪಾಟೀಲ್ , ಕಂದಾಯ ಸಚಿವ ಕೃಷ್ಣಬೈರೇಗೌಡ, ಉನ್ನತ ಶಿಕ್ಷಣ ಸಚಿವ ಸುಧಾಕರ್, ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್ , ಅಭಿವೃದ್ಧಿ ಆಯುಕ್ತರು ಹಾಗೂ ಅಪರ ಮುಖ್ಯ ಕಾರ್ಯದರ್ಶಿ ಡಾ: ಶಾಲಿನಿ ರಜನೀಶ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ನವದೆಹಲಿ: ಟಿಎಂಸಿ ಶಾಸಕ ರಾಮೇಂದು ಸಿನ್ಹಾ ಅವರು ರಾಮ ಮಂದಿರದ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಅವರು ರಾಮ ಮಂದಿರವನ್ನು ಅಪವಿತ್ರ ಸ್ಥಳ ಎಂದು ಬಣ್ಣಿಸಿದ್ದಾರೆ. ಇದರೊಂದಿಗೆ, ಯಾವುದೇ ಹಿಂದೂ ಪೂಜೆಗಾಗಿ ರಾಮ ಮಂದಿರಕ್ಕೆ ಹೋಗಬಾರದು ಎಂದು ಅವರು ಹೇಳಿರುವುದು ಈಗ ವಿವಾದಕ್ಕೆ ಕಾರಣವಾಗಿದೆ. ತಾರಕೇಶ್ವರದ ಟಿಎಂಸಿ ಶಾಸಕರ ಈ ಹೇಳಿಕೆ ಕೋಲಾಹಲಕ್ಕೆ ಕಾರಣವಾಗಿದೆ. ರಾಮೇಂದು ಸಿನ್ಹಾ ಅವರ ಈ ಹೇಳಿಕೆಯನ್ನು ಎಲ್ಲೆಡೆ ಖಂಡಿಸಲಾಗುತ್ತಿದೆ. https://kannadanewsnow.com/kannada/mysuru-man-dies-after-being-hit-by-train-while-talking-to-wife-on-video-call/ https://kannadanewsnow.com/kannada/lok-sabha-elections-to-be-held-on-march-14-or-15-polling-to-be-held-in-7-phases-report/ https://kannadanewsnow.com/kannada/appointment-of-anganwadi-asha-workers-for-guarantee-scheme-survey-state-govt/ ಬಂಗಾಳದ ಬಿಜೆಪಿ ನಾಯಕ ಸುವೇಂದು ಅಧಿಕಾರಿ ರಾಮೇಂದು ಸಿನ್ಹಾ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. “ಅವರ ಈ ಅವಹೇಳನಕಾರಿ ಹೇಳಿಕೆಯನ್ನು ನಾನು ಬಲವಾಗಿ ಖಂಡಿಸುತ್ತೇನೆ, ಆದರೆ ವಿಶ್ವದಾದ್ಯಂತದ ಹಿಂದೂಗಳ ಭಾವನೆಗಳನ್ನು ನೋಯಿಸುವ ಇಂತಹ ದ್ವೇಷದ ಹೇಳಿಕೆಗಾಗಿ ಈ ವ್ಯಕ್ತಿಯ ವಿರುದ್ಧ ಎಫ್ಐಆರ್ ದಾಖಲಿಸಲು ತಯಾರಿ ನಡೆಸುತ್ತಿದ್ದೇನೆ” ಎಂದು ಸುವೇಂದು ಅಧಿಕಾರಿ ಸಾಮಾಜಿಕ ಮಾಧ್ಯಮ ಪ್ಲಾಟ್ಫಾರ್ಮ್ ಎಕ್ಸ್ನಲ್ಲಿ ಹೇಳಿದ್ದಾರೆ. ಟಿಎಂಸಿ ವಿರುದ್ಧ ವಾಗ್ದಾಳಿ ನಡೆಸಿದ ಸುವೇಂದು ಅಧಿಕಾರಿ, ಇದು ತೃಣಮೂಲ ಕಾಂಗ್ರೆಸ್…
ಬೆಂಗಳೂರು: 2023-24ನೇ ಸಾಲಿನಲ್ಲಿ ಐದು “ಗ್ಯಾರಂಟಿ ಯೋಜನೆ” ಗಳನ್ನು ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು ಹಾಗೂ ಇತರ ಇಲಾಖೆಗಳ ಸಿಬ್ಬಂದಿಗಳಿಂದ ಸಮೀಕ್ಷೆ ನಡೆಸುವ ಕುರಿತು ಅಧಿಕೃತ ಆದೇಶವನ್ನು ರಾಜ್ಯ ಸರ್ಕಾರ ಹೊರಡಿಸಿದೆ. ಈ ನಡುವೆ ಆದೇಶದಲ್ಲಿ ಸರ್ಕಾರವು ಬಡವರ ಹಾಗೂ ದುರ್ಬಲ ವರ್ಗದವರ ಕಲ್ಯಾಣಕ್ಕಾಗಿ ಐದು ಗ್ಯಾರಂಟಿ ಯೋಜನೆಗಳಾದ ಗೃಹಲಕ್ಷ್ಮಿ, ಶಕ್ತಿ ಯೋಜನೆ, ಯುವನಿಧಿ ಯೋಜನೆ, ಗ್ರಹಜ್ಯೋತಿ ಯೋಜನ ಮತ್ತು ಅನ್ನಭಾಗ್ಯ ಯೋಜನೆಗಳನ್ನು ರೂಪಿಸಿದ, ರಾಜ್ಯದ ಪ್ರತಿ ಮನ ಮನಗೂ ಈ ಐದು ಗ್ಯಾರಂಟಿ ಯೋಜನಗಳು ಸರಿಯಾದ ರೀತಿಯಲ್ಲಿ ತಲುಪಿವೆಯೇ ಎಂಬ ಬಗ್ಗೆ ರಾಜ್ಯ ವ್ಯಾಪ್ತಿ ಸಮೀಕ್ಷೆ ಮಾಡಲು “ಗ್ಯಾರಂಟಿ ಸ್ವಯಂ ಸೇವಕರನ್ನು ನೇಮಕ ಮಾಡಲು ನಿರ್ಧರಿಸಲಾಗಿದೆ. ಮುಂದುವರೆದು, ಅಂಗನವಾಡಿ ಕಾರ್ಯಕರ್ತಯರು, ಆಶಾ ಕಾರ್ಯಕರ್ತೆಯರು ಹಾಗೂ ಇತರ ಇಲಾಖೆಗಳ ಸಿಬ್ಬಂದಿಗಳನ್ನು “ಗ್ಯಾರಂಟಿ ಸ್ವಯಂ-ಸೇವಕರಾಗಿ ನೇಮಿಸಿ ಅವರುಗಳು ಪ್ರತಿ ಮನೆ ಮನೆಗೂ ಭೇಟಿ ನೀಡಿ ಗ್ಯಾರಂಟಿ ಯೋಜನಗಳು ತಲುಪಿರುವ ಬಗ್ಗೆ ಹಾಗೂ ಸದರಿ ಯೋಜನೆಗಳ ಬಗ್ಗೆ, ಜನರ ಅಭಿಪ್ರಾಯ ಮತ್ತು ಅದರ ಸದ್ಬಳಕೆ…
ನವದೆಹಲಿ: ಬಹುನಿರೀಕ್ಷಿತ ಲೋಕಸಭಾ ಚುನಾವಣೆ 2024 ರ ದಿನಾಂಕಗಳನ್ನು ಮಾರ್ಚ್ 14 ಅಥವಾ 15 ರಂದು ಘೋಷಿಸುವ ಸಾಧ್ಯತೆಯಿದೆ. 2019 ರಂತೆ ಏಳು ಹಂತಗಳಲ್ಲಿ ಚುನಾವಣೆ ನಡೆಯಬಹುದು ಮತ್ತು ಮೊದಲ ಹಂತದ ಮತದಾನವು ಏಪ್ರಿಲ್ ಎರಡನೇ ವಾರದಲ್ಲಿ ನಡೆಯಬಹುದು ಎನ್ನಲಾಗಿದೆ. ಮಾರ್ಚ್ 14 ರಿಂದಲೇ ಮಾದರಿ ನೀತಿ ಸಂಹಿತೆ ಜಾರಿಗೆ ಬರುವ ಸಾಧ್ಯತೆಯಿದೆ ಎನ್ನಲಾಗಿದೆ. https://kannadanewsnow.com/kannada/140-crore-indians-are-my-family-congress-hits-back-at-pm-modi/ ಮೊದಲ ಹಂತದ ಮತದಾನ ಏಪ್ರಿಲ್ ಎರಡನೇ ವಾರದಲ್ಲಿ ನಡೆಯಬಹುದು ಎಂದು ಮೂಲಗಳು ತಿಳಿಸಿವೆ. 2019ರಂತೆಯೇ ಈ ಬಾರಿಯೂ 7 ಹಂತಗಳಲ್ಲಿ ಚುನಾವಣೆ ನಡೆಯಲಿದೆ ಎನ್ನಲಾಗುತ್ತಿದೆ. ಮಾರ್ಚ್ 13, 2024 ರ ನಂತರ ಚುನಾವಣಾ ಆಯೋಗವು ದಿನಾಂಕಗಳನ್ನು ಪ್ರಕಟಿಸಲಿದೆ. ಮಾರ್ಚ್ 13 ರೊಳಗೆ, ಭಾರತದ ಚುನಾವಣಾ ಆಯೋಗವು ರಾಜ್ಯಗಳಲ್ಲಿ ತನ್ನ ಮೌಲ್ಯಮಾಪನವನ್ನು ಪೂರ್ಣಗೊಳಿಸುವ ನಿರೀಕ್ಷೆಯಿದೆ. ಸುಮಾರು 97 ಕೋಟಿ ಭಾರತೀಯರು ಮುಂಬರುವ ಸಾರ್ವತ್ರಿಕ ಚುನಾವಣೆಯಲ್ಲಿ ಮತ ಚಲಾಯಿಸಲು ಸಜ್ಜಾಗಿದ್ದಾರೆ. 2024 ರ ಲೋಕಸಭಾ ಚುನಾವಣೆಯ ಜೊತೆಗೆ, ಆಂಧ್ರಪ್ರದೇಶ, ಸಿಕ್ಕಿಂ, ಅರುಣಾಚಲ ಪ್ರದೇಶ ಮತ್ತು ಒಡಿಶಾದಂತಹ…
ನವದೆಹಲಿ: ಸ್ಟಾಫ್ ಸೆಲೆಕ್ಷನ್ ಕಮಿಷನ್ ಫೆಬ್ರವರಿ 26 ರಂದು ಎಸ್ಎಸ್ಸಿ ಸೆಲೆಕ್ಷನ್ ಪೋಸ್ಟ್ ಹಂತ 12 ನೇಮಕಾತಿ 2024 ಅಧಿಸೂಚನೆಯನ್ನು ಹೊರಡಿಸಿದ್ದು, 2049 ಹುದ್ದೆಗಳನ್ನು ಭರ್ತಿ ಮಾಡುವ ಗುರಿಯನ್ನು ಹೊಂದಿದೆ. ಆಸಕ್ತ ಅಭ್ಯರ್ಥಿಗಳು ಮಾರ್ಚ್ 18, 2024 ರವರೆಗೆ ಈ ಕೆಳಗಿನ ಡೈರೆಕ್ಟ್ ಲಿಂಕ್ ಮೂಲಕ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. https://kannadanewsnow.com/kannada/man-arrested-for-threatening-to-kill-pm-modi-yogi-adityanath/ https://kannadanewsnow.com/kannada/good-news-for-job-seekers-rural-development-department-recruitment-2022/ ಸ್ಟಾಫ್ ಸೆಲೆಕ್ಷನ್ ಕಮಿಷನ್ ಫೆಬ್ರವರಿ 26 ರಂದು ಎಸ್ಎಸ್ಸಿ ಸೆಲೆಕ್ಷನ್ ಪೋಸ್ಟ್ ಹಂತ 12 ನೇಮಕಾತಿ 2024 ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ವಿವಿಧ ಆಯ್ಕೆ ಹುದ್ದೆಗಳಿಗೆ ಅರ್ಹ 10 ನೇ ತೇರ್ಗಡೆ, 12 ನೇ ತರಗತಿ ಉತ್ತೀರ್ಣ ಮತ್ತು ಪದವೀಧರರನ್ನು ನೇಮಕ ಮಾಡಲು ನೇಮಕಾತಿ ಡ್ರೈವ್ ನಡೆಸಲಾಗುತ್ತಿದೆ. ಅರ್ಹ ಮಾನದಂಡಗಳನ್ನು ಹೊಂದಿರುವ ಆಸಕ್ತ ಅಭ್ಯರ್ಥಿಗಳು ಮಾರ್ಚ್ 18, 2024 ರವರೆಗೆ ssc.gov.in ಅಧಿಕೃತ ವೆಬ್ಸೈಟ್ ಮೂಲಕ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದು. ಅರ್ಜಿ ನಮೂನೆ ತಿದ್ದುಪಡಿ ವಿಂಡೋ ಮಾರ್ಚ್ 22 ರಂದು ತೆರೆದು ಮಾರ್ಚ್ 24 ರಂದು ಕೊನೆಗೊಳ್ಳುತ್ತದೆ.…