Author: kannadanewsnow07

ಬೆಂಗಳೂರು: ಗ್ರಾಮ ಲೆಕ್ಕಿಗರು ಮನೆ ಬಾಗಿಲಿಗೆ ತೆರಳಿ ಆರ್‌ಟಿಸಿ-ಆಧಾರ್‌ ಜೋಡಣೆ ಕೆಲಸದಲ್ಲಿ ತೊಡಗಿದ್ದಾರೆ. 88 ಸಾವಿರ ಆರ್‌ಟಿಸಿಗಳಲ್ಲಿ ಕೃಷಿ ಭೂಮಿ ಇರುವುದು ಕಂಡುಬಂದಿದೆ. ಆಧಾರ್‌ ಲಿಂಕ್‌ ಮಾಡಲಾಗಿದೆ. ಬಾಕಿ ಪೋಡಿ ಹಾಗೂ ದುರಸ್ತಿ ಪ್ರಕರಣ ಇತ್ಯರ್ಥಕ್ಕೆ ಮೊದಲು ನಿಖರವಾದ ಆಕಾರ್‌ ಬಂದ್‌ ಮಾಹಿತಿ ಪಡೆಯಬೇಕು. ನಿಖರವಾದ ಆಕಾರ್‌ ಬಂದ್‌ ಇಲ್ಲದೇ ಆರ್‌ಟಿಸಿ ಜೊತೆಗೆ ಜೋಡಣೆ ಸಾಧ್ಯವಿಲ್ಲ. ಆ ನಿಟ್ಟಿನಲ್ಲಿ ಎಲ್ಲಾ ಅಧಿಕಾರಿಗಳಿಗೆ ಮುಂದಿನ 2 ತಿಂಗಳಲ್ಲಿ 65 ಲಕ್ಷ ಆಕಾರ್‌ ಬಂದ್‌ ಡಿಜಿಟಲೀಕರಣಗೊಳಿಸಲು ಸೂಚಿಸಲಾಗಿದೆ ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ತಿಳಿಸಿದ್ದಾರೆ. ಇದಲ್ಲದೇ ಬೇಸಿಗೆ ಹಿನ್ನೆಲೆ ನೀರಿನ ಅಭಾವವಿರುವ ಬೆಂಗಳೂರು ನಗರದ ಪ್ರದೇಶಗಳಲ್ಲಿ ಖಾಸಗಿ ಟ್ಯಾಂಕರ್‌ಗಳು ಹೆಚ್ಚಿನ ದರಕ್ಕೆ ಮಾರಾಟ ಮಾಡುವುದನ್ನು ತಡೆಯಲು ಬಿಬಿಎಂಪಿ ಕಠಿಣ ಕ್ರಮ ಕೈಗೊಂಡಿದೆ. ಮಾರ್ಚ್‌ 7ರೊಳಗೆ ಸ್ವಯಂ ನೋಂದಣಿ ಮಾಡಿಕೊಳ್ಳಲು ಟ್ಯಾಂಕರ್‌ ಮಾಲೀಕರಿಗೆ ಗಡುವು ನೀಡಲಾಗಿದೆ. ಇನ್ನೂ ಅಂಗಾಂಗ ದಾನ ಕೋರಿ ನೋಂದಾಯಿಸಿಕೊಂಡವರ ಸಂಖ್ಯೆ 8 ಸಾವಿರಕ್ಕೂ ಹೆಚ್ಚಿದ್ದು, ಕಳೆದ ಒಂದು ವರ್ಷದಲ್ಲಿ 178 ಅಂಗಾಂಗ…

Read More

ಬೆಂಗಳೂರು: ಲಿಯೋ ರಾಷ್ಟ್ರೀಯ ರೋಗನಿರೋಧಕ ದಿನದ ಅಂಗವಾಗಿ ಮಾರ್ಚ್ 3ರಂದು ನಡೆಯುವ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮದಲ್ಲಿ ಯಾವುದೇ ಅರ್ಹ ಮಗು ಪೋಲಿಯೋ ಲಸಿಕೆಯಿಂದ ಹೊರಗುಳಿಯದಂತೆ ಕ್ರಮ ವಹಿಸುವಂತೆ ಕ್ರಮ ವಹಿಸಲಾಗಿದೆ. ನಮ್ಮ ದೇಶದಲ್ಲಿ 2011ರ ನಂತರ ಪೋಲಿಯೋ ಪ್ರಕರಣಗಳು ಕಂಡುಬಂದಿಲ್ಲವಾದರೂ, ನಾವು ಮೈಮರೆಯುವಂತಿಲ್ಲ. ಪೋಲಿಯೋಗೆ ಕಾರಣವಾಗುವ ವೈರಸ್‌ಗಳು ನೆರೆಯ ಪಾಕಿಸ್ತಾನ, ಅಪಘಾನಿಸ್ತಾನ ದೇಶದಿಂದ ವಾತಾವರಣದಲ್ಲಿ ಸೇರಿಕೊಂಡು, ದೇಶದೊಳಗೆ ಬರುವ ಸಾಧ್ಯತೆಗಳಿರುತ್ತವೆ ಎಂಬುದಾಗಿ ವೈದ್ಯಕೀಯ ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಹೀಗಾಗಿ ಜಗತ್ತಿನಿಂದಲೇ ಈ ಪೋಲಿಯೋ ವೈರಸ್ ನಿರ್ಮೂಲನೆಯಾಗುವವರೆಗೂ ಪಲ್ಸ್ ಪೋಲಿಯೋ ಲಸಿಕೆಯನ್ನು ತಪ್ಪದೆ ಮಕ್ಕಳಿಗೆ ಹಾಕಿಸುವುದು ಅತ್ಯವಶ್ಯಕವಾಗಿದೆ ಎಂದು ಹೇಳಿದರು. ಲಸಿಕಾ ದಿನ ಎಲ್ಲಾ ಅಂಗನವಾಡಿ ಕೇಂದ್ರವನ್ನು ತೆರೆದಿಟ್ಟು ಮಕ್ಕಳಿಗೆ ಲಸಿಕೆ ಹಾಕಿಸಲು ಕ್ರಮ ಕೈಗೊಳ್ಳಬೇಕು. ತಾಯಂದಿರ ಸಭೆ, ಬಾಲ ವಿಕಾಸ ಸಮಿತಿ ಸಭೆಗಳಲ್ಲಿ ಲಸಿಕಾ ದಿನಾಂಕದ ಕುರಿತು, ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮದ ಮಹತ್ವದ ಬಗ್ಗೆ ತಿಳಿಸಬೇಕು. ಲಸಿಕಾ ಕಾರ್ಯಕ್ರಮದಲ್ಲಿ ಎಲ್ಲಾ ಅಂಗನವಾಡಿ ಕಾರ್ಯಕರ್ತೆಯರು, ಮೇಲ್ವಚಾರಕರು, ಸ್ತ್ರೀ ಶಕ್ತಿ ಗುಂಪುಗಳ ಸದಸ್ಯರು,…

Read More

ಬೆಂಗಳೂರು: ಸರ್ಕಾರವು ಗ್ಯಾರಂಟಿ ಯೋಜನೆಗಳ ಜೊತೆಗೆ ಕೃಷಿಗೂ ಹೆಚ್ಚಿನ ಪ್ರಾಮುಖ್ಯತೆ ನೀಡಿದ್ದು, ಕೃಷಿ ಇಲಾಖೆಯ ಕಾರ್ಯಚಟುವಟಿಕೆಗಳನ್ನು ಸಮರ್ಪಕವಾಗಿ ನಿರ್ವಹಿಸಲು ಅನುಕೂಲವಾಗುವಂತೆ ಇಲಾಖೆಯಲ್ಲಿ ಖಾಲಿ ಇರುವ 750 ಹುದ್ದೆಗಳನ್ನು ಜೂನ್ ಮಾಹೆಯೊಳಗೆ ಭರ್ತಿ ಮಾಡಲಾಗುವುದು ಎಂದು ಕೃಷಿ ಸಚಿವರಾದ ಎನ್. ಚಲುವರಾಯಸ್ವಾಮಿ ತಿಳಿಸಿದರು. ಅವರು ಇಂದು ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಕೃಷಿ ಇಲಾಖೆಯ 2023-24ನೇ ಸಾಲಿನಲ್ಲಿ ಇದುವರೆಗಿನ ಸಾಧನೆ ಕುರಿತು ಮಾಹಿತಿ ನೀಡಲು ಹಮ್ಮಿಕೊಂಡಿದ್ದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಸಚಿವರು, ಖಾಲಿ ಹುದ್ದೆಯ ಭರ್ತಿಗೆ ಆರ್ಥಿಕ ಇಲಾಖೆಯು ಅಧಿಕೃತವಾಗಿ ಮಂಜೂರಾತಿ ನೀಡಿದೆ. 750 ಹುದ್ದೆಗಳಲ್ಲಿ 100 ಕೃಷಿ ಅಧಿಕಾರಿಗಳು ಮತ್ತು 650 ಸಹಾಯಕ ಕೃಷಿ ಅಧಿಕಾರಿಗಳ ಹುದ್ದೆಗಳನ್ನು ಭರ್ತಿ ಮಾಡುವ ಸಲುವಾಗಿ ಲೋಕಸೇವಾ ಆಯೋಗಕ್ಕೆ ಪತ್ರ ಬರೆಯಲಾಗುವುದು ಎಂದರು. ಕಳೆದ 20 ವರ್ಷಗಳಿಂದ ಆಗದ ಮುಂಬಡ್ತಿಯನ್ನು ನಾವು ಅಧಿಕಾರಕ್ಕೆ ಬಂದ 10 ತಿಂಗಳಲ್ಲಿ 04 ಉಪ ಕೃಷಿ ನಿರ್ದೇಶಕರು, 292 ಸಹಾಯಕ ಕೃಷಿ ನಿರ್ದೇಶಕರು, 253 ಕೃಷಿ ಅಧಿಕಾರಿಗಳು, 33 ಸಿಬ್ಬಂದಿಗಳು ಸೇರಿದಂತೆ…

Read More

ಬೆಂಗಳೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ “ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರ”ದ ವತಿಯಿಂದ ಪಿಯು-ಸಿಇಟಿ/ನೀಟ್ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ 30 ದಿನಗಳ ತರಬೇತಿಯನ್ನು ಆಯೋಜಿಸಿದೆ. ಮೈಸೂರಿನ ವಿಜಯ ವಿಠ್ಠಲ ಶಿಕ್ಷಣ ಸಂಸ್ಥೆ ಸಹಯೋಗದಲ್ಲಿ ಪಿಯುಸಿ ನಂತರದ ವೃತ್ತಿಪರ ಉನ್ನತ ಶಿಕ್ಷಣಕ್ಕಾಗಿ ಕರ್ನಾಟಕ ಸರ್ಕಾರ ನಡೆಸಲಿರುವ ಸಾಮಾನ್ಯ ಪ್ರವೇಶ ಪರೀಕ್ಷೆಗೆ (ಕೆ-ಸಿಇಟಿ ಮತ್ತು ನೀಟ್) ತರಬೇತಿಯನ್ನು ಮೈಸೂರಿನ ಕೇಂದ್ರ ಕಛೇರಿಯಲ್ಲಿ ನಡೆಸಲು ನಿರ್ಧರಿಸಲಾಗಿದೆ. ಆಸಕ್ತರು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಆವರಣದಲ್ಲಿರುವ ‘ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರ’ದ ಕಛೇರಿಯಲ್ಲಿ ಬೆಳಗ್ಗೆ 10.00 ಗಂಟೆಯಿಂದ ಸಂಜೆ 4.00 ಗಂಟೆಯವರೆಗೆ ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಬಹುದೆಂದು ಕರಾಮುವಿ ಮಹಿಳಾ ಕೇಂದ್ರದ ಪ್ರಾದೇಶಿಕ ನಿರ್ದೇಶಕರಾದ ಶಶಿಕಲಾ ಜೆ ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಹೆಚ್ಚಿನ ವಿವರಗಳಿಗೆ 0821-2515944 ಈ ದೂರವಾಣಿ ಸಂಖ್ಯೆಯನ್ನು ಅಥವಾ ಹತ್ತಿರದ ಪ್ರಾದೇಶಿಕ ಕೇಂದ್ರವನ್ನು ಸಂಪರ್ಕಿಸಬಹುದು

Read More

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದ ಅಧ್ಯಕ್ಷರ ವಿರುದ್ಧ ಸಾಮಾಜಿಕ ಜಾಲ ತಾಣಗಳಲ್ಲಿ ಮಾನಹಾನಿಕರ ರೀತಿಯಲ್ಲಿ ಪ್ರಸಾರ ಮಾಡುತ್ತಿದ್ದ ಕಾಂತಕುಮಾರ ಅಲಿಯಾಸ್ ಶ್ರೀಕಾಂತ್ ಮತ್ತು ALL KARNATAKA STATE STUDENTS ASSOCIATION ಇವರುಗಳು, ಮುಂದಿನ ದಿನಾಂಕದವರೆಗೆ ಆಯೋಗದ ಅಧ್ಯಕ್ಷರಿಗೆ ಸಂಬಂಧಪಟ್ಟಂತೆ ಪ್ರತ್ಯಕ್ಷವಾಗಿಯಾಗಲೀ ಅಥವಾ ಪರೋಕ್ಷವಾಗಿಯಾಗಲೀ, ಟಿ.ವಿ.ಮಾಧ್ಯಮ ಅಥವಾ ದಿನಪತ್ರಿಕೆ ಅಥವಾ ಅಂತರ್ಜಾಲ ಅಥವಾ ವೆಬ್‍ಸೈಟ್ ಅಥವಾ ಯೂಟ್ಯೂಬ್ ಅಥವಾ ಇನ್ನಿತರ ಸಾಮಾಜಿಕ ಜಾಲತಾಣಗಳಲ್ಲಿ ಮಾನಹಾನಿಕರ ರೀತಿಯಲ್ಲಿ ಪ್ರಸಾರ ಮಾಡದಂತೆ ಸದರಿ ವ್ಯಕ್ತಿ ಮತ್ತು ಸಂಸ್ಥೆಯ ವಿರುದ್ಧ ಮಾನ್ಯ 17ನೇ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯವು 2024ನೇ ಫೆಬ್ರವರಿ 28ರಂದು ನಿಬರ್ಂಧಕಾಜ್ಞೆ ಆದೇಶವನ್ನು ನೀಡಿರುತ್ತದೆ ಎಂದು ಕರ್ನಾಟಕ ಲೋಕಸೇವ ಆಯೋಗದ ಅಧ್ಯಕ್ಷರಾದ ಶಿವಸಂಕರಪ್ಪ ಎಸ್. ಸಾಹುಕಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ರಾಮನಗರ: ಸರ್ಕಾರದ ಐದು ಗ್ಯಾರಂಟಿ ಯೋಜನೆಗಳು ಆರ್ಥಿಕವಾಗಿ ಹಿಂದುಳಿದ ಜನರನ್ನು ಸಬಲರನ್ನಾಗಿಸಿದೆ ಎಂದು ಉಪ ಮುಖ್ಯಮಂತ್ರಿಗಳು, ಜಲ ಸಂಪನ್ಮೂಲ ಸಚಿವರು ಹಾಗೂ ಬೆಂಗಳೂರು ನಗರ ಜಿಲ್ಲಾ ಉಸ್ತುವಾರಿ ಸಚಿವರಾದ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಅವರು ಮಾ. 2ರ ಶನಿವಾರ ಚನ್ನಪಟ್ಟಣ ಟೌನಿನ ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಮೈದಾನದಲ್ಲಿ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದರು. ಗ್ಯಾರಂಟಿ ಯೋಜನೆಗಳು ಇಡೀ ದೇಶಕ್ಕೆ ಮಾದರಿಯಾಗಿದ್ದು, ರಾಜ್ಯದಲ್ಲಿನ ಪ್ರತೀ ಕುಟುಂಬವು ಇದರ ಪ್ರಯೋಜನ ಪಡೆಯುತ್ತಿದೆ. ಜಿಲ್ಲೆಯಲ್ಲಿನ ರೈತರಿಗೆ ಉಚಿತ ವಿದ್ಯುತ್ ನೀಡಿ, ವಿದ್ಯುತ್ ಸಮಸ್ಯೆಯನ್ನು ಪರಿಹರಿಸಲಾಗಿದೆ. ಈಗಾಗಲೇ 40 ಸ್ಟೇಷನ್ ಸ್ಥಾಪಿಸಲಾಗಿದೆ. ಉಳುವವನೇ ಭೂ ಒಡೆಯ ಎಂಬುದನ್ನು ತಂದಿದ್ದು ನಮ್ಮ ಸರ್ಕಾರ, ಜಿಲ್ಲೆಯ ಜನರಿಗೆ ಮಂಚನಬೆಲೆ ಹಾಗೂ ವೈ.ಜಿ ಗುಡ್ಡೆಯಿಂದ ಕುಡಿಯುವ ನೀರನ್ನು ಸರಬರಾಜು ಮಾಡಲು ಕ್ರಮ ವಹಿಸಲಾಗಿದೆ ಎಂದರು. https://kannadanewsnow.com/kannada/rameswaram-cafe-bomb-blast-case-fsl-probe-reveals-another-explosive-information/ ರಾಮನಗರ ಜಿಲ್ಲೆಗೆ 100 ಬಸ್ಸುಗಳನ್ನು ಹೆಚ್ಚುವರಿಯಾಗಿ ನೀಡಲಾಗಿದೆ. ಇದರಿಂದ…

Read More

ಬಳ್ಳಾರಿ: ಸಂವಿಧಾನವನ್ನು ಪ್ರತಿಯೊಬ್ಬರೂ ಅರಿತುಕೊಳ್ಳಬೇಕು. ಸಂವಿಧಾನದಿಂದಾಗಿ ನಮ್ಮ ದೇಶದಲ್ಲಿ ಸ್ವಾತಂತ್ರ್ಯ, ಸಮಾನತೆ ಹಾಗೂ ಭ್ರಾತೃತ್ವ ಮೌಲ್ಯಗಳನ್ನು ಅಳವಡಿಸಿಕೊಂಡಿದ್ದು, ಎಲ್ಲರೂ ಸಮಾನವಾಗಿ ಬದುಕಿನ ನೆಲೆ ಕಂಡುಕೊಳ್ಳಲು ಸಹಾಯಕವಾಗಿದೆ ಎಂದು ರಾವ್ ಬಹೂದ್ದೂರ್ ವೈ.ಮಹಾಬಲೇಶ್ವರ ಇಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲರಾದ ಟಿ.ಹನುಮಂತರೆಡ್ಡಿ ಅವರು ಹೇಳಿದರು. “ಸಂವಿಧಾನ ಜಾಗೃತಿ ಜಾಥಾ” ಕಾರ್ಯಕ್ರಮದ ಅಂಗವಾಗಿ ಸಂವಿಧಾನದ ಆಶಯ ಮತ್ತು ಮೌಲ್ಯಗಳನ್ನು ಬಗ್ಗೆ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸಲು ನಗರದ ರಾವ್ ಬಹೂದ್ದೂರ್ ವೈ.ಮಹಾಬಲೇಶ್ವರ ಇಂಜಿನಿಯರಿಂಗ್ ಕಾಲೇಜು ಸಭಾಂಗಣದಲ್ಲಿ ಶುಕ್ರವಾರ ಏರ್ಪಡಿದ್ದ ಸಂವಿಧಾನದ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಸಂವಿಧಾನವು ಬಹಳ ಮಹತ್ವ ಪೂರ್ಣವಾಗಿದ್ದು, ಎಲ್ಲರೂ ಗೌರವಿಸುವರ ಮೂಲಕ, ಅದರ ಮೌಲ್ಯ ಮತ್ತು ಆಶೋತ್ತರಗಳನ್ನು ತಿಳಿದುಕೊಳ್ಳಬೇಕು ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು. ಕಾರ್ಯಕ್ರಮದಲ್ಲಿ ಸಂವಿಧಾನದ ಪ್ರತಿಜ್ಞಾ ವಿಧಿಯನ್ನು ಭೋಧಿಸಲಾಯಿತು. ಈ ಸಂದರ್ಭದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಸಿಬ್ಬಂದಿಯವರಾದ ಅಂಬಿಕಾ, ಕಲ್ಗುಡಿ ಬಸವರಾಜ, ಬಸವರಾಜ.ಎನ್ ಹಾಗೂ ಕಾಲೇಜು ವಿದ್ಯಾರ್ಥಿಗಳು, ಬೋಧಕ-ಬೋಧಕೇತರ ಸಿಬ್ಬಂದಿಗಳು ಹಾಜರಿದ್ದರು

Read More

ಬಳ್ಳಾರಿ: ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮ (ಎಂಎಸ್‍ಎಂಇ) ವಲಯವು ಆರ್ಥಿಕತೆಯ ಬೆನ್ನೆಲುಬಾಗಿದ್ದು, ಸಣ್ಣ ಕೈಗಾರಿಕೆಗಳು ಬೆಳವಣೆಗೆಯಾದರೆ ದೊಡ್ಡ ಕೈಗಾರಿಕೆಗಳು ಬೆಳವಣಿಗೆಗೆ ಸಾಧ್ಯ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶರಣಪ್ಪ ಅವರು ಅಭಿಪ್ರಾಯ ಪಟ್ಟರು. ಸಿಡ್ಬಿ, ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ, ಜಿಲ್ಲಾ ಕೈಗಾರಿಕಾ ಕೇಂದ್ರ ಹಾಗೂ ಕಾಸಿಯಾ ಇವರ ಸಂಯುಕ್ತಾಶ್ರಯದಲ್ಲಿ ಸೂಕ್ಷ್ಮ ಮತ್ತು ಸಣ್ಣ ಕೈಗಾರಿಕೆಗಳಿಗೆ ಸವಲತ್ತುಗಳು ಹಾಗೂ ಹಣಕಾಸಿನ ನೆರವು ಕುರಿತು ಖಾಸಗಿ ಹೋಟೆಲ್ ಸಭಾಂಗಣದಲ್ಲಿ ಶುಕ್ರವಾರ ನಡೆದ ಜಾಗೃತಿ ಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ಇತ್ತೀಚಿನ ದಿನಮಾನಗಳಲ್ಲಿ ಸೂಕ್ಷ್ಮ ಮತ್ತು ಸಣ್ಣ ಕೈಗಾರಿಕೆಗಳಿಗೆ ಹೆಚ್ಚೆಚ್ಚು ಪ್ರೋತ್ಸಾಹಿಸಲಾಗುತ್ತಿದೆ. ಹೀಗಾಗಿ ಇಂತಹ ಕಾರ್ಯಗಾರಗಳಲ್ಲಿ ಭಾಗವಹಿಸಿದರೆ ಎಂಎಸ್‍ಎಂಇ ಗಳಿಗೆ ಅನುಕೂಲವಾಗಲಿದೆ ಎಂದು ಹೇಳಿದರು. ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಅಧ್ಯಕ್ಷ ಬಿ.ಮಹಾರುದ್ರ ಗೌಡ ಅವರು ಮಾತನಾಡಿ, ಎಂಎಸ್‍ಎಂಇ ವಲಯಕ್ಕೆ ಸಂಬಂಧಿಸಿದಂತೆ ಇಂತಹ ಜಾಗೃತಿ ಸಭೆಗಳು ಸಂಕಷ್ಟದಲ್ಲಿ ಇರುವ ಅನೇಕ ಕೈಗಾರಿಕೆಗಳ ಪಾಲಿಗೆ ಸಂಜೀವಿನಿ ಆಗಲಿದೆ ಎಂದರು.…

Read More

ಬಳ್ಳಾರಿ: ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದಲ್ಲಿರುವ ಅನುಪಯುಕ್ತ ಪೀಠೋಪಕರಣಗಳ ಮಾರಾಟ ಮಾಡಲಾಗುತ್ತಿದ್ದು, ಖರೀದಿಸಲು ಇಚ್ಛಿಸುವವರು ದರಪಟ್ಟಿ ಸಲ್ಲಿಸಬಹುದು ಎಂದು ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾಯ ಆಯೋಗದ ಸಹಾಯಕ ರಿಜಿಸ್ಟ್ರಾರ್ ಮತ್ತು ಸಹಾಯಕ ಆಡಳಿತಾಧಿಕಾರಿ ಆದಪ್ಪ ರಾಮಪ್ಪ ಜುಮಾಲಾಪುರ ಅವರು ತಿಳಿಸಿದ್ದಾರೆ. *ಮಾರಾಟಕ್ಕಿರುವ ಅನುಪಯುಕ್ತ ಪೀಠೋಪಕರಣಗಳು:* ಎಸ್-ಟೈಪ್ ಚೇರ್ 02, ಎಕ್ಸೂಕ್ಯೂಟೀವ್ ಚೇರ್ 06, ಕಂಪ್ಯೂಟರ್ ಚೇರ್ 03, ಟೇಬಲ್ ಟ್ರೇ 07, ಬಜಾಜ್ ಏರ್ ಕೂಲರ್ಸ್ 02, ಟೈಪ್ ರೈಟರ್ಸ್ (ಕನ್ನಡ, ಇಂಗ್ಲೀಷ್) 02, ಡಸ್ಟ್ ಬಿನ್ (ಐರನ್) 02, ಸ್ಟೀಲ್ ಚೇರ್ಸ್ 02, ರೆಡ್ ಎಸ್-ಟೈಪರ್ ಚೇರ್ 04. ಖರೀದಿಸಲು ಇಚ್ಛಿಸುವವರು ಮಾ.14ರ ಸಂಜೆ 5 ಗಂಟೆಯೊಳಗೆ ದರಪಟ್ಟಿ ತಯಾರಿಸಿ ಇದೇ ಕಚೇರಿಗೆ ನೀಡಬಹುದು. ಯಾವ ಧರದಲ್ಲಿ ಎಂದು ಪ್ರತ್ಯೇಕವಾಗಿ ನಮೂದಿಸಬೇಕು. ಖರೀದಿಸಲು ಇಚ್ಛೆಪಡುತ್ತೀರಿ ಎಂಬುದರ ಬಗ್ಗೆ ಸೀಲ್ ಮಾಡಿದ ಲಕೋಟೆಯಲ್ಲಿ ದರಪಟ್ಟಿಯನ್ನು ಮತ್ತು ಲಕೋಟೆಯ ಮೇಲೆ ಹಳೆಯ ಅನುಪಯುಕ್ತ ಪೀಟೋಪಕರಣಗಳ ಖರೀದಿಗಾಗಿ ಧರಪಟ್ಟಿ ಎಂಬುದಾಗಿ ನಮೂದಿಸಬೇಕು. ಹೆಚ್ಚಿನ…

Read More

ಬಳ್ಳಾರಿ: ಕರ್ನಾಟಕ ಲೋಕಾಯುಕ್ತ ಬಳ್ಳಾರಿ ವಿಭಾಗ ಪೊಲೀಸ್ ಅಧೀಕ್ಷಕ ಸಿದ್ಧರಾಜು.ಸಿ ಅವರ ಮಾರ್ಗದರ್ಶನದಲ್ಲಿ ಪೊಲೀಸ್ ನಿರೀಕ್ಷಕರಾದ ಸಂಗಮೇಶ ಮತ್ತು ಮಹಮ್ಮದ್ ರಫಿ ಇವರ ನೇತೃತ್ವದಲ್ಲಿ ಮಾರ್ಚ್ ಮಾಹೆಯಲ್ಲಿ ವಿವಿಧ ತಾಲ್ಲೂಕು ಕೇಂದ್ರಗಳಲ್ಲಿ ಸಾರ್ವಜನಿಕರಿಂದ ಕುಂದು ಕೊರತೆಗಳ ಅಹವಾಲುಗಳ ಸ್ವೀಕಾರ/ಜನ ಸಂಪರ್ಕ ಸಭೆ ಏರ್ಪಡಿಸಲಾಗಿದೆ. *ಅಹವಾಲು ಸ್ವೀಕರಿಸುವ ದಿನ ಮತ್ತು ಸ್ಥಳ:* ಮಾ.12 ರಂದು ಬೆಳಿಗ್ಗೆ 11.30 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಕುರುಗೋಡು ತಾಲ್ಲೂಕಿನ ತಹಸೀಲ್ದಾರರ ಕಚೇರಿ ಸಭಾಂಗಣ. ಮಾ.13 ರಂದು ಬೆಳಿಗ್ಗೆ 11.30 ರಿಂದ ಮಧ್ಯಾಹ್ನ 2 ರ ವರೆಗೆ ಸಿರುಗುಪ್ಪ ತಾಲ್ಲೂಕಿನ ಸಿ.ಡಿ.ಪಿ.ಓ ಕಚೇರಿ ಸಭಾಂಗಣ. ಮಾ.15 ರಂದು ಬೆಳಿಗ್ಗೆ 11.30 ರಿಂದ ಮಧ್ಯಾಹ್ನ 2 ರ ಸಂಡೂರು ಪಟ್ಟಣದ ತಹಸೀಲ್ದಾರರ ಕಚೇರಿ ಸಭಾಂಗಣ. ಜನ ಸಂಪರ್ಕ ಸಭೆಯಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿ, ವಿಚಾರಿಸಲಾಗುತ್ತದೆ ಹಾಗೂ ಸಾರ್ವಜನಿಕರು ತಮ್ಮ ಅವಹಾಲುಗಳನ್ನು ಬೆಂಗಳೂರಿನ ಕರ್ನಾಟಕ ಲೋಕಾಯುಕ್ತ ಕಚೇರಿಯ ಲೋಕಾಯುಕ್ತರಿಗೆ ಅರ್ಜಿ ಸಲ್ಲಿಸಲು ನಮೂನೆ/ಫಾರಂ ನಂ:1 ಮತ್ತು 2ಗಳನ್ನು ನೀಡಲಾಗುತ್ತದೆ. ಕುಂದುಕೊರತೆಗಳಿರುವ…

Read More