Subscribe to Updates
Get the latest creative news from FooBar about art, design and business.
Author: kannadanewsnow07
ಬೆಂಗಳೂರು: ಕಂದಾಯ ಇಲಾಖೆಯಲ್ಲಿ ಇದೇ ಮೊದಲ ಬಾರಿಗೆ ಕೌನ್ಸಿಲಿಂಗ್ ಮೂಲಕ 31 ಜಿಲ್ಲೆಯ 90 ಉಪ ನೋಂದಣಿ ಅಧಿಕಾರಿಗಳನ್ನು ಏಕ ಕಾಲದಲ್ಲಿ ವರ್ಗಾವಣೆಗೊಳಿಸಿ ಆದೇಶಿಸಲಾಗಿದೆ. ಉಪ ನೋಂದಣಾಧಿಕಾರಿಗಳ ವರ್ಗಾವಣೆಯಲ್ಲಿ ಹಣ ವಹಿವಾಟು ಸೇರಿದಂತೆ ಭ್ರಷ್ಟಾಚಾರದ ಬಗ್ಗೆ ಈ ಹಿಂದೆ ಹಲವು ಬಾರಿ ದೂರುಗಳು ಕೇಳಿಬಂದಿದ್ದವು. ವರ್ಗಾವಣೆ ದಂಧೆಯ ಬಗ್ಗೆ ಹಲವು ನಾಯಕರು ಸದನದಲ್ಲೇ ಧ್ವನಿ ಎತ್ತಿದ್ದರು. ಹೀಗಾಗಿ ಈ ಎಲ್ಲಾ ಅವ್ಯವಹಾರಗಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ, ವರ್ಗಾವಣೆಯಲ್ಲಿನ ಭ್ರಷ್ಟಾಚಾರವನ್ನು ಕೊನೆಗೊಳಿಸುವ ಸಲುವಾಗಿ ಸಚಿವ ಕೃಷ್ಣ ಬೈರೇಗೌಡ ಅವರು ಈ ಸಾಲಿನಿಂದ ಉಪ-ನೋಂದಣಾಧಿಕಾರಿಗಳ ವರ್ಗಾವಣೆಯನ್ನು ಕೌನ್ಸಿಲಿಂಗ್ ಮೂಲಕ ನಡೆಸುವುದಾಗಿ ಭರವಸೆ ನೀಡಿದ್ದರು. ಅದರಂತೆ ಇಂದು ರಾಜ್ಯದ 31 ಜಿಲ್ಲೆಯಲ್ಲಿ ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ಉಪ ನೋಂದಣಿ ಕಚೇರಿಗಳಲ್ಲಿ ನೋಂದಣಾಧಿಕಾರಿಗಳಾಗಿ ಕರ್ತವ್ಯ ನಿರ್ವಹಿಸುತ್ತಿರುವ 90ಜನ ಕೇಂದ್ರಸ್ಥಾನ ಸಹಾಯಕರು/ ಹಿರಿಯ ಉಪನೋಂದಣಾಧಿಕಾರಿಗಳನ್ನು ಇಂದು ಏಕ ಕಾಲದಲ್ಲಿ ವರ್ಗಾವಣೆಗೊಳಿಸಿ ಆದೇಶಿಸಲಾಗಿದೆ. ಈ ವರ್ಗಾವಣೆ ಅವಧಿಯಲ್ಲಿ ಒಂದು ರೂಪಾಯಿ ಸಹ ಹಣ ವಹಿವಾಟು ನಡೆದಿರುವ ಬಗ್ಗೆ ದೂರುಗಳು…
ಮುಂಬೈ: ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾವನ್ನು ಸ್ಫೋಟಿಸುವುದಾಗಿ ಬೆದರಿಕೆ ಇಮೇಲ್ ಅನ್ನು ಗುರುವಾರ ಮಧ್ಯಾಹ್ನ ಕೇಂದ್ರ ಬ್ಯಾಂಕಿಗೆ ಕಳುಹಿಸಲಾಗಿದೆ. ಇಮೇಲ್ ಅನ್ನು ರಷ್ಯನ್ ಭಾಷೆಯಲ್ಲಿ ಕಳುಹಿಸಲಾಗಿದೆ. ಅಪರಿಚಿತ ಆರೋಪಿಗಳ ವಿರುದ್ಧ ಮಾತಾ ರಮಾಬಾಯಿ ಮಾರ್ಗ್ (MRA Marg) ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಪೊಲೀಸರು ತನಿಖೆ ಆರಂಭಿಸಿದ್ದಾರೆ. ಕಳೆದ ತಿಂಗಳು, ಆರ್ಬಿಐ ಗ್ರಾಹಕ ಆರೈಕೆಗೆ ಇದೇ ರೀತಿಯ ಬೆದರಿಕೆಯನ್ನು ಕಳುಹಿಸಲಾಗಿತ್ತು. ಇದಕ್ಕೂ ಮುನ್ನ ಶುಕ್ರವಾರ ಬೆಳಿಗ್ಗೆ ದೆಹಲಿಯ ಆರು ಶಾಲೆಗಳು ಬಾಂಬ್ ಬೆದರಿಕೆಯಿಂದಾಗಿ ತರಗತಿಗಳನ್ನು ಸ್ಥಗಿತಗೊಳಿಸಿದವು. ಶುಕ್ರವಾರ ಮುಂಜಾನೆ 12:54 ಕ್ಕೆ ಬೆದರಿಕೆ ಬಂದಿದ್ದು, ಶಾಲೆಗಳು ತಮ್ಮ ಮಕ್ಕಳನ್ನು ಶಾಲೆಗೆ ಕರೆತರದಂತೆ ಪೋಷಕರಿಗೆ ಮಾಹಿತಿ ನೀಡಿವೆ.
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣ ಆರೋಪಿಗಳ ಜಾಮೀನು ಭವಿಷ್ಯ ಇಂದು ಪ್ರಕಟ ಆಗಲಿದ್ದು, ಈ ನಿಟ್ಟಿನಲ್ಲಿ ಎಲ್ಲರ ಗಮನ ಹೈಕೋರ್ಟ್ ನತ್ತ ನೆಟ್ಟಿದೆ. 7 ಜನ ಆರೋಪಿಗಳ ಪರ ವಿರುದ್ಧ ವಾದ – ಪ್ರತಿವಾದ ಆಲಿಸಿರೋ ನ್ಯಾ. ವಿಶ್ವಜಿತ್ ಶೆಟ್ಟಿ ಪೀಠದಿಂದ ಮಧ್ಯಾಹ್ನ 2:30ರ ವೇಳೆಗೆ ತೀರ್ಪು ಹೊರ ಬೀಳುವ ಸಾಧ್ಯತೆ ಇದೆ. ಒಂದೊಮ್ಮೆ ದರ್ಶನ್ ಜಾಮೀನು ಅರ್ಜಿ ವಜಾಗೊಂಡರೆ, ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆ ಮಾಡಿಸಿ, ಗುಣಮುಖರಾದ ಬಳಿಕ ಮತ್ತೆ ಜೈಲಿಗೆ ಹೋಗಬೇಕಾದ ಸಂಧರ್ಭ ನಿರ್ಮಾಣವಾಗಲಿದೆ. ಇದಲ್ಲದೇ ಬೇಲ್ ಸಿಕ್ಕರೆ ಗುಣಮುಖರಾದ ನಂತರ ಮನೆಗೆ ತೆರಳಲಿದ್ದಾರೆ.
ಬೆಂಗಳೂರು: ಬೆಂಗಳೂರಿನಲ್ಲಿ ಶುಕ್ರವಾರವೂ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿತ್ರದುರ್ಗ, ತುಮಕೂರು ಮತ್ತು ರಾಮನಗರ ಸೇರಿದಂತೆ ಕರ್ನಾಟಕದ ಹಲವಾರು ಜಿಲ್ಲೆಗಳಿಗೆ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಈ ಜಿಲ್ಲೆಗಳಲ್ಲಿ ಹೆಚ್ಚಿನವು ಶುಕ್ರವಾರದ ನಂತರ ಮಳೆಯಿಂದ ವಿರಾಮವನ್ನು ಕಾಣುವ ನಿರೀಕ್ಷೆಯಿದೆ. ಆದಾಗ್ಯೂ, ದಕ್ಷಿಣ ಕನ್ನಡ ಮತ್ತು ಉಡುಪಿಯಲ್ಲಿ ಶನಿವಾರದವರೆಗೆ ಭಾರಿ ಮಳೆಯಾಗುವ ಮುನ್ಸೂಚನೆ ಇದೆ. ಹವಾಮಾನ ಇಲಾಖೆ ಪ್ರಕಾರ, ಆಗ್ನೇಯ ಬಂಗಾಳ ಕೊಲ್ಲಿ ಮತ್ತು ಪೂರ್ವ ಹಿಂದೂ ಮಹಾಸಾಗರದಲ್ಲಿ ಕಡಿಮೆ ಒತ್ತಡದ ಪ್ರದೇಶದಿಂದಾಗಿ, ತೇವಾಂಶ ತುಂಬಿದ ಗಾಳಿಯು ರಾಜ್ಯದ ಕಡೆಗೆ ಸಾಗುತ್ತಿದೆ, ಇದು ಈ ಮಳೆಗೆ ಮುಖ್ಯ ಕಾರಣವಾಗಿದೆ. ಹೀಗಾಗಿ ಕರ್ನಾಟಕದ ದಕ್ಷಿಣ ಒಳನಾಡಿನ ಹೆಚ್ಚಿನ ಜಿಲ್ಲೆಗಳಲ್ಲಿ ಹಗುರದಿಂದ ಮಧ್ಯಮ ಮಳೆಯಾಗುವ ನಿರೀಕ್ಷೆಯಿದೆ. https://twitter.com/Bnglrweatherman/status/1867156871989383516
ಜೈಪುರ: ರಾಜಸ್ಥಾನದ ಜೈಪುರದಲ್ಲಿ ಆಯುರ್ವೇದ ವಿಶ್ವವಿದ್ಯಾಲಯದ ವೈದ್ಯರೊಬ್ಬರು ಮಾನಸಿಕ ಒತ್ತಡದಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪತ್ನಿಯ ಬಗ್ಗೆ ಆಕ್ಷೇಪಾರ್ಹ ಹೇಳಿಕೆಗಳನ್ನು ಒಳಗೊಂಡಿರುವ ಟಿಪ್ಪಣಿಯನ್ನು ಪೊಲೀಸರು ವೈದ್ಯರ ಕೋಣೆಯಿಂದ ವಶಪಡಿಸಿಕೊಂಡಿದ್ದಾರೆ, ಇದು ವೈವಾಹಿಕ ಭಿನ್ನಾಭಿಪ್ರಾಯದ ಬಗ್ಗೆ ಸುಳಿವು ನೀಡುತ್ತದೆ ಎನ್ನಲಾಗಿದೆ. ಬೆಂಗಳೂರು ಟೆಕ್ಕಿ ಅತುಲ್ ಸುಭಾಷ್ ಆತ್ಮಹತ್ಯೆ ಪ್ರಕರಣದ ಬಗ್ಗೆ ಆಕ್ರೋಶದ ನಡುವೆಯೇ ಈ ಪ್ರಕರಣ ಬಂದಿದೆ. ಉತ್ತರ ಪ್ರದೇಶದ ಜೌನ್ಪುರದಲ್ಲಿ ವಿಚ್ಛೇದನ ಮತ್ತು ಮಕ್ಕಳ ಕಸ್ಟಡಿ ಹೋರಾಟದ ನಡುವೆ ಅತುಲ್ (34) ತನ್ನ ಪತ್ನಿ ಮತ್ತು ಅವಳ ಕುಟುಂಬವು ನಿರಂತರ ಕಿರುಕುಳ ನೀಡುತ್ತಿದೆ ಎಂದು ಆರೋಪಿಸಿ 24 ಪುಟಗಳ ಆತ್ಮಹತ್ಯೆ ಪತ್ರ ಮತ್ತು 81 ನಿಮಿಷಗಳ ವೀಡಿಯೊವನ್ನು ಮಾಡಿದ್ದಾರೆ.
ಮನೆಯ ಎಂತಹ ದೊಡ್ಡ ವಾಸ್ತು ಕೊರತೆಯನ್ನು ಒಂದು ಗ್ಲಾಸ್ ನೀರು ನಿವಾರಿಸುತ್ತದೆ. ಇನ್ಮುಂದೆ ವಾಸ್ತು ಫಿಕ್ಸ್ ಮಾಡಲು ಲಕ್ಷಾಂತರ ಹಣ ಖರ್ಚು ಮಾಡುವ ಅವಶ್ಯಕತೆ ಇರುವುದಿಲ್ಲ.. ಒಂದು ಗ್ಲಾಸ್ ನೀರು ಮನೆಯಲ್ಲಿ ಯಾವುದೇ ಪ್ರಮುಖ ವಾಸ್ತು ದೋಷವನ್ನು ಸರಿಪಡಿಸಬಹುದು. ಇನ್ನು ವಾಸ್ತು ಸರಿಪಡಿಸಲು ಲಕ್ಷಗಟ್ಟಲೆ ಹಣ ಖರ್ಚು ಮಾಡಬೇಕಿಲ್ಲ. ವಾಸ್ತು, ಇತ್ತೀಚೆಗೆ ನಾವು ಈ ವಾಸ್ತು ಬಗ್ಗೆ ಹೆಚ್ಚು ಮಾತನಾಡುತ್ತಿದ್ದೇವೆ. ಆದರೆ ವಾಸ್ತು ಇಂದು ನಿನ್ನೆಯದಲ್ಲ. ವಾಸ್ತು ರಾಜರ ಕಾಲದಿಂದಲೂ ಇದೆ. ವಾಸ್ತುವನ್ನು ನಂಬುವವರು ಈ ಪರಿಹಾರವನ್ನು ಅನುಸರಿಸಬಹುದು. ಅನೇಕರ ಮನೆಯಲ್ಲಿ ವಾಸ್ತು ಸರಿಯಾಗಿ ಹೊಂದಿಸದೇ ಇರುವುದರಿಂದ ಕುಟುಂಬದಲ್ಲಿ ಕೆಲವು ಸಮಸ್ಯೆಗಳು ಉದ್ಭವಿಸುತ್ತವೆ. ಕೆಲವರಿಗೆ ಮನೆಯಲ್ಲಿ ನೆಮ್ಮದಿ ಕಳೆದುಕೊಳ್ಳಬಹುದು, ವ್ಯಾಪಾರದಲ್ಲಿ ನಷ್ಟ ಉಂಟಾಗಬಹುದು, ಕೆಲವರಿಗೆ ಮನೆಯಲ್ಲಿ ಜಗಳಗಳು ಕೂಡ ಬರಬಹುದು. ಕೆಲವು ಮನೆಗಳಲ್ಲಿ ವಾಸ್ತು ಸರಿಯಿಲ್ಲದ ಕಾರಣ ಕುಟುಂಬ ಎರಡು ಹೋಳಾಗುತ್ತದೆ. ಸಣ್ಣಪುಟ್ಟ ವಾಸ್ತು ಸಮಸ್ಯೆಯಾಗಿದ್ದರೆ ಅದನ್ನು ಸುಲಭವಾಗಿ ಸರಿಪಡಿಸಬಹುದು. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ…
ಬೆಳಗಾವಿ: ರಾಜ್ಯದಲ್ಲಿ ಔಷಧ ಪರವಾನಗಿ ಇಲ್ಲದೆ ಅನಧಿಕೃತವಾಗಿ ಔಷಧ ಅಂಗಡಿಗಳನ್ನು ನಡೆಸುತ್ತಿರುವುದು ಕಂಡು ಬಂದಲ್ಲಿ ಅಂತಹವರ ವಿರುದ್ಧ ಔಷಧ ಮತ್ತು ಕಾಂತಿವರ್ಧಕ ಅಧಿನಿಯಮ ಮತ್ತು ನಿಯಮಾವಳಿಗಳ ಕೈಗೊಳ್ಳಲಾಗುತ್ತಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಹೇಳಿದರು. ಅವರು ವಿಧಾನ ಪರಿಷತ್ ನಲ್ಲಿ ಸದಸ್ಯ ಗೋವಿಂದ ರಾಜು ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸುತ್ತಾ ರಾಜ್ಯದಲ್ಲಿ ಪ್ರಸ್ತುತ 37,130 ಖಾಸಗಿ ಔಷಧ ಗಳು ಮಳಿಗೆಗಳು ಕಾರ್ಯ ನಿರ್ವಹಿಸುತ್ತಿದ್ದು, ಸರ್ಕಾರಿ ಆಸ್ಪತ್ರೆ ಆವರಣದಲ್ಲಿ 07 ಜತನಾ ಬಜಾರ್ಗಳು, 23 ಜನ ಸಂಜೀವಿನಿ ಕೇಂದ್ರಗಳು ಹಾಗೂ 178 ಜನೌಷಧಿ ಕೇಂದ್ರಗಳು ಕಾರ್ಯನಿರ್ವಹಿಸುತ್ತಿವೆ ಎಂದರು. 2023-24 ರಲ್ಲಿ ದೈನಂದಿನ ಪರಿವೀಕ್ಷಣೆಯಲ್ಲಿ ಇಲಾಖೆಯ ಅಧಿಕಾರಿಗಳು ನಿಯಮಗಳನ್ನು ಉಲ್ಲಂಘಿಸಿದ 1245 ಪರವಾನಾಗಿಗಳನ್ನು ಅಮಾನತ್ತುಗೊಳಿಸಿದ್ದು, 292 ಪರವಾನಗಿಗಳನ್ನು ರದ್ದುಗೊಳಿಸಲಾಗಿದೆ. ಇಲಾಖೆಯ ಅಧಿಕಾರಿಗಳು ಮಾದಕ ಔಷಧಿಗಳ ದಾಸ್ತಾನು ಮತ್ತು ಮಾರಾಟಗಳ ಬಗ್ಗೆ ನಿಗಾವಹಿಸುತ್ತಿದ್ದು ಮತ್ತು ಖಾಸಗಿ ಔಷಧ ಇದು ಮಳಿಗೆಗಳಲ್ಲಿ ಮಾದಕ ವಸ್ತುಗಳು ನಿಯಾಮಬಾಹಿರ ಮಾರಾಟಗಳ ಬಗ್ಗೆ ಪರಿವೀಕ್ಷಣೆಗಳನ್ನು…
ಬೆಳಗಾವಿ: ಅಕ್ರಮ ಪಡಿತರ ಪ್ರಕರಣದಲ್ಲಿ ತಪ್ಪಿತಸ್ಥರೆಂದು ಸಾಬೀತಾದ ವ್ಯಕ್ತಿಗಳ ವಿರುದ್ಧ ಆರೋಪ ಸಾಬೀತಾದಲ್ಲಿ ನ್ಯಾಯಾಲಯದ ಆದೇಶದಂತೆ ಕಾನೂನು ರೀತಿ ಕ್ರಮವಹಿಸಿ ಎಫ್ಐಆರ್ ದಾಖಲಿಸಲಾಗುವುದು ಈ ಸಂಬಂಧ ಅಕ್ರಮ ಪಡಿತರ ವಿರುದ್ಧ ಸರ್ಕಾರದಿಂದ ವಿಶೇಷ ಕಾರ್ಯಾಚರಣೆ ಪ್ರಕ್ರಿಯೆಯು ಚಾಲ್ತಿಯಲ್ಲಿದೆ ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಹಾಗೂ ಕಾನೂನು ಮಾಪನಶಾಸ್ತ್ರಿ ಇಲಾಖೆಯ ಸಚಿವರಾದ ಕೆ.ಎಚ್.ಮುನಿಯಪ್ಪ ಅವರು ಹೇಳಿದರು. ವಿಧಾನ ಪರಿಷತ್ ನ ಪ್ರಶ್ನೋತ್ತರ ಕಲಾಪದ ವೇಳೆ ಸದಸ್ಯರಾದ ಟಿ.ಎನ್.ಜವರಾಯಿಗೌಡ, ಐವನ್ ಡಿ ಸೋಜಾ, ಸಿ.ಟಿ.ರವಿ, ಶರವಣ ಟಿ.ಎ., ನಿರಾಣಿ ರುದ್ರಪ್ರ ಹನುಮಂತಪ್ಪ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಸಚಿವರು ಉತ್ತರಿಸಿದ ಸಚಿವರು, ರಾಜ್ಯಾದ್ಯಂತ ಜನವರಿ-2021 ರಿಂದ ಮೇ 2023ರ ಅವಧಿಯಲ್ಲಿ 3,35,463 ಅನರ್ಹ ಆದ್ಯತಾ ಪಡಿತರ ಚೀಟಿಗಳನ್ನು ಪತ್ತೆ ಹಚ್ಚಲಾಗಿದ್ದು ಇವರಿಂದ ರೂ. 13,51,30,858 ಗಳ ದಂಡ ವಿಧಿಸಿ, ಅನರ್ಹರಿಗೆ ನೀಡಿದ ಸವಲತ್ತುಗಳಿಂದ ಉಂಟಾದ ನಷ್ಟವನ್ನು ಭರಿಸಲು ಸರ್ಕಾರ ಕ್ರಮವಹಿಸಿದೆ ಎಂದು ತಿಳಿಸಿದರು. ಆಹಾರ ಇಲಾಖೆಯ ಉಗ್ರಾಣಗಳಿಂದ ಅಕ್ರಮವಾಗಿ ಕಾಳ…
ಬೆಳಗಾವಿ:ಶಾಲಾ ಶಿಕ್ಷಣ ಇಲಾಖೆಯಿಂದ ರಾಜ್ಯಮಟ್ಟದ ಪ್ರೌಢಶಾಲಾ ಸಹ ಶಿಕ್ಷಕರ ಒಂದೇ ಜೇಷ್ಠತಾ ಪಟ್ಟಿ ಪಡೆದು, ತಾತ್ಕಾಲಿಕ ಜೇಷ್ಠತಾ ಪಟ್ಟಿ ಪ್ರಕಟಿಸಿ, ಸ್ವೀಕೃತವಾಗುವ ಆಕ್ಷೇಪಣೆಗಳನ್ನು ಪರಿಶೀಲಿಸಿ ಅಂತಿಮ ಜೇಷ್ಠತಾ ಪಟ್ಟಿ ಪ್ರಕಟಿಸಿದ ನಂತರ ಪ್ರೌಢಶಾಲಾ ಸಹ ಶಿಕ್ಷಕರಿಗೆ ಬಡ್ತಿ ನೀಡುವ ಪ್ರಕ್ರಿಯೆಯನ್ನು ಬರುವ 2025ರ ಫೆಬ್ರವರಿಯೊಳಗೆ ಪೂರ್ಣಗೊಳಿಸಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರಾದ ಎಸ್ ಮಧು ಬಂಗಾರಪ್ಪ ಅವರು ಹೇಳಿದರು. ವಿಧಾನ ಪರಿಷತ್ ನ ಪ್ರಶ್ನೋತ್ತರ ವೇಳೆಯಲ್ಲಿ ಎಸ್ ವಿ ಸಂಕನೂರ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದ ಸಚಿವರು, ಈಗಾಗಲೇ 2013ನೇ ಸಾಲಿನವರೆಗೆ ಪದೋನ್ನತಿ ಪ್ರಕ್ರಿಯೆ ನಡೆಸಲಾಗಿದೆ. ಪದೋನ್ನತಿ ಪ್ರಕ್ರಿಯೆ ನಡೆಸುವ ಹಿನ್ನೆಲೆಯಲ್ಲಿ ರಾಜ್ಯಮಟ್ಟದಲ್ಲಿ ಒಂದೇ ಜೇಷ್ಠತಾ ಪಟ್ಟಿಯನ್ನು ತಯಾರಿಸುವ ಬಗ್ಗೆ ಮಾರ್ಗದರ್ಶನ ಕೋರಿ 2024ರ ಫೆಬ್ರವರಿ ಮಾಹೆ ಮತ್ತು ಮಾರ್ಚ್ ಮಾಹೆಯಲ್ಲಿ ಶಾಲಾ ಶಿಕ್ಷಣ ಇಲಾಖೆ (ಪ್ರಾಥಮಿಕ ಮತ್ತು ಪ್ರೌಢ)ಯ ಆಯುಕ್ತರು ಹಾಗೂ ಏಪ್ರಿಲ್ ಮಾಹೆಯಲ್ಲಿ ಶಾಲಾ ಶಿಕ್ಷಣ ಇಲಾಖೆಯ (ಪದವಿ ಪೂರ್ವ) ನಿರ್ದೇಶಕರು ಸರ್ಕಾರಕ್ಕೆ ಪ್ರಸ್ತಾವನೆ…
ನವದೆಹಲಿ: ದೆಹಲಿಯ ಕನಿಷ್ಠ ನಾಲ್ಕು ಶಾಲೆಗಳಿಗೆ ಶುಕ್ರವಾರ ಬಾಂಬ್ ಬೆದರಿಕೆ ಬಂದಿದ್ದು, ತರಗತಿಗಳನ್ನು ಸ್ಥಗಿತಗೊಳಿಸುವಂತೆ ಒತ್ತಾಯಿಸಲಾಗಿದೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ. ಅಗ್ನಿಶಾಮಕ ಅಧಿಕಾರಿಗಳು ಮತ್ತು ಪೊಲೀಸರು ಸ್ಥಳಕ್ಕೆ ತಲುಪಿದ್ದು, ಇಲ್ಲಿಯವರೆಗೆ ಅನುಮಾನಾಸ್ಪದವಾಗಿ ಏನೂ ಕಂಡುಬಂದಿಲ್ಲ ಎನ್ನಲಾಗಿದೆ. ಈ ಶಾಲೆಗಳಲ್ಲಿ ಪೂರ್ವ ಕೈಲಾಶ್ನ ದೆಹಲಿ ಪಬ್ಲಿಕ್ ಶಾಲೆ, ಮಯೂರ್ ವಿಹಾರ್ನ ಸಲ್ವಾನ್ ಪಬ್ಲಿಕ್ ಶಾಲೆ ಮತ್ತು ಕೇಂಬ್ರಿಡ್ಜ್ ಶಾಲೆ ಸೇರಿವೆ. ದೆಹಲಿ ಪೊಲೀಸರ ಪ್ರಕಾರ, ಬೆಳಿಗ್ಗೆ 4.30 ಕ್ಕೆ ಕರೆ ಮೂಲಕ ಮೊದಲ ಬಾಂಬ್ ಬೆದರಿಕೆ ಬಂದಿದ್ದು, ನಂತರ ದೆಹಲಿ ಪೊಲೀಸರು ಮತ್ತು ದೆಹಲಿ ಅಗ್ನಿಶಾಮಕ ಸೇವೆಗಳ ತಂಡವನ್ನು ತನಿಖೆಗಾಗಿ ಸ್ಥಳಕ್ಕೆ ರವಾನಿಸಲಾಗಿದೆ.