Author: kannadanewsnow07

ಬೆಂಗಳೂರು: ಆಸ್ತಿ ತೆರಿಗೆ ಕಟ್ಟದವರಿಗೆ ರಾಜ್ಯ ಸರ್ಕಾರದಿಂದ ಗುಡ್‌ನ್ಯೂಸ್‌ ಸಿಕ್ಕಿದ್ದು, ಶೇಕಡ 50 ಕಟ್ಟಲು ಅವಕಾಶ ನೀಡಲಾಗವಿದೆ. ಈ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿದ ಬಿಬಿಎಂಪಿ ಆಯುಕ್ತ ತುಷಾರ್‌ ಗಿರಿನಾಥ್‌ ಅವರು ಶೇಕಡ ಶೇಕಡ 50 ಕಟ್ಟಲು ಅವಕಾಶ ನೀಡಿದ್ದಾರೆ. ಆಸ್ತಿ ತೆರಿಗೆ ಕಟ್ಟುವುದಕ್ಕೆ ತಿದ್ದುಪಡಿಯನ್ನು ತರಲು ಮುಂಧಾಗಿದ್ದು, ಈ ನಿಟ್ಟಿನಲ್ಲಿ ಬಿಬಿಎಂಪಿ ಕೆಲಸ ಮಾಡಲು ಮುಂಧಾಗಿದೆ.  ಇದೇ ವೇಳೆ ಆಸ್ತಿ ತೆರಿಗೆ ಕಟ್ಟುವುದಕ್ಕೆ ಸಂಬಂಧಪಟ್ಠಂತೆ ಅರ್ಜಿ ಸಲ್ಲಿಸಿದವರಿಗೆ ಶೇಕಡ 50 ಕಟ್ಟಲು ಅವಕಾಶ ನೀಡಲಾಗಿದೆ ಅಂತ ತಿಳಿಸಿದರು. ಸದ್ಯ ಬಿಬಿಎಂಪಿ ಆಸ್ತಿ ತೆರಿಗೆ ಕಟ್ಟಿಸಿಕೊಳ್ಳುವುದಕ್ಕೆ ಮುಂದಾಗಿದೆ.

Read More

ಹರ್ದಾ (ಮಧ್ಯಪ್ರದೇಶ): ಮಧ್ಯಪ್ರದೇಶದ ಹರ್ದಾದಲ್ಲಿನ ಅಕ್ರಮ ಪಟಾಕಿ ಕಾರ್ಖಾನೆಯಲ್ಲಿ ಮಂಗಳವಾರ ಬೆಂಕಿ ಕಾಣಿಸಿಕೊಂಡಿದ್ದು, ದೊಡ್ಡ ಸ್ಫೋಟ ಸಂಭವಿಸಿದೆ. ಇದು ಹತ್ತಿರದ 50 ಕ್ಕೂ ಹೆಚ್ಚು ಮನೆಗಳಿಗೆ ಬೆಂಕಿ ಹಚ್ಚಿಕೊಂಡಿವೆ ಎನ್ನಲಾಗಿದೆ. ೃ ಈ ಘಟನೆಯಲ್ಲಿ ಕೆಲವು ವ್ಯಕ್ತಿಗಳು ಪ್ರಾಣ ಕಳೆದುಕೊಂಡಿರಬಹುದು ಎಂದು ಸ್ಥಳೀಯ ಮಾಧ್ಯಮಗಳ ವರದಿಗಳು ಸೂಚಿಸುತ್ತವೆ, ಜನರು ತಮ್ಮನ್ನು ರಕ್ಷಿಸಿಕೊಳ್ಳಲು ತಮ್ಮ ಮನೆಗಳನ್ನು ತೊರೆಯಲು ಓಡಿ ಬರುತ್ತಿರುವುದನ್ನು ಕಾಣಬಹುದಾಗಿದೆ. ವರದಿಗಳ ಪ್ರಕಾರ, ಸ್ಫೋಟದ ಸಮಯದಲ್ಲಿ ಉಂಟಾದ ಗಾಯಗಳಿಂದಾಗಿ 30-35 ಜನರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರ್ಖಾನೆಯು ಹರ್ದಾ ಜಿಲ್ಲೆಯ ಮಗರ್ಧಾ ರಸ್ತೆಯ ಬಳಿ ಇದೆ. ಮಂಗಳವಾರ ಬೆಳಿಗ್ಗೆ, ಕಾರ್ಖಾನೆಯಲ್ಲಿ ಭಾರಿ ಸ್ಫೋಟ ಸಂಭವಿಸಿದೆ ಮತ್ತು ದೊಡ್ಡ ಬೆಂಕಿ ಪ್ರಾರಂಭವಾಯಿತು. ಪಟಾಕಿಗಳಿಗಾಗಿ ಸಂಗ್ರಹಿಸಿದ ಗನ್ ಪೌಡರ್ ಸಂಪರ್ಕದಿಂದಾಗಿ ಬೆಂಕಿ ಬೇಗನೆ ಹರಡಿತು. ಕಾರ್ಖಾನೆಯಿಂದ ಹೊರಹೊಮ್ಮುತ್ತಿರುವ ಜ್ವಾಲೆಗಳು ಮತ್ತು ಹೊಗೆಯನ್ನು ದೂರದಿಂದ ನೋಡಬಹುದು. ಸುದ್ದಿ ತಿಳಿದ ಕೂಡಲೇ ಅಗ್ನಿಶಾಮಕ ದಳದವರು ತಮ್ಮ ವಾಹನಗಳನ್ನು ಘಟನಾ ಸ್ಥಳಕ್ಕೆ ರವಾನಿಸಿದರು. ಬೆಂಕಿ ಅವಘಡಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ.…

Read More

ಬೆಂಗಳೂರು: ಗೃಹ ಜ್ಯೋತಿ” ಯೋಜನೆಯ ನೊಂದಣಿ ವ್ಯವಸ್ಥೆಯಾದ ಸೇವಾ ಸಿಂಧು ತಂತ್ರಾಂಶದಲ್ಲಿ ಗ್ರಾಹಕರನ್ನು De-Link ಮಾಡುವ ಸೌಲಭ್ಯ ಕಲ್ಪಿಸುವ ಬಗ್ಗೆ ರಾಜ್ಯ ಸರ್ಕಾರ ಮಹತ್ವದ ಆದೇಶವನ್ನು ಹೊರಡಿಸಿದೆ. ಆದೇಶದಲ್ಲಿ ಉಲ್ಲೇಖ ಮಾಡಿರುವಂತೆ ಗೃಹ ಜ್ಯೋತಿ” ಯೋಜನೆಯಡಿ ರಾಜ್ಯದಲ್ಲಿನ ಪ್ರತಿ ಮನೆಗೆ ಪ್ರತಿ ತಿಂಗಳಿಗೆ ಗರಿಷ್ಠ 200 ಯೂನಿಟ್‌ಗಳವರೆಗಿನ ಬಳಕೆಯ ಮಿತಿಯಲ್ಲಿ ಪ್ರತಿ ಗ್ರಾಹಕರ ಮಾಸಿಕ ಸರಾಸರಿ ಬಳಕೆಯ (ಆರ್ಥಿಕ ವರ್ಷ 2022-23ರ ಬಳಕೆಯ ಆಧಾರದನ್ವಯ) ಯೂನಿಟ್‌ಗಳ ಮೇಲೆ ಶೇ.10ರಷ್ಟು ಹೆಚ್ಚಿನ ಬಳಕೆಯ ಮಿತಿಯನ್ನು ಅನುಮತಿಸಿ, ಅದಕ್ಕನುಗುಣವಾಗಿ ವಿದ್ಯುತ್ ಬಿಲ್ಲಿನ ಮೊತ್ತವನ್ನು ಉಚಿತವಾಗಿ ಒದಗಿಸಲು; ಹಾಗೂ 200 ಯೂನಿಟ್‌ಗಳ ಬಳಕೆಯನ್ನು ಮೀರಿದ ಗ್ರಾಹಕರು ಪೂರ್ಣ ವಿದ್ಯುತ್ ಬಿಲ್ಲನ್ನು ಪಾವತಿಸಲು ಸರ್ಕಾರವು ಆಡಳಿತಾತ್ಮಕ ಅನುಮೋದನೆ ನೀಡಿದ್ದು, ಅದರಂತೆ, ಸರ್ಕಾರಿ ಆದೇಶ ಸಂಖ್ಯೆ: ಎನರ್ಜಿ/164/ಪಿಎಸ್‌ಆರ್/2023, ದಿನಾಂಕ: 05.06.2023 ರಲ್ಲಿ ಹೊರಡಿಸಿದೆ. “ಗೃಹ ಜ್ಯೋತಿ” ಯೋಜನೆಯಡಿ ಸೌಲಭ್ಯ ಪಡೆಯಲು ಇಚ್ಛಿಸುವ ಗ್ರಾಹಕರು ಸೇವಾ ಸಿಂಧು ತಂತ್ರಾಂಶದ ಮೂಲಕ ನೊಂದಣಿ ಮಾಡಬಹುದಾಗಿರುತ್ತದೆ. ಆದರೆ, ಸೇವಾ ಸಿಂಧು ತಂತ್ರಾಂಶದಲ್ಲಿ ಗ್ರಾಹಕರನ್ನು…

Read More

ನವದೆಹಲಿ: ಕೇಂದ್ರವು ಕರ್ನಾಟಕದ ಪಾಲಿನ ಹಣವನ್ನು ಬಿಡುಗಡೆ ಮಾಡುತ್ತಿಲ್ಲ ಎಂಬ ಕಾಂಗ್ರೆಸ್ ಪಕ್ಷದ ಆರೋಪವನ್ನು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸೋಮವಾರ ತಳ್ಳಿಹಾಕಿದ್ದಾರೆ. ಕೆಲವು ರಾಜ್ಯಗಳು ತಾರತಮ್ಯಕ್ಕೊಳಗಾಗುತ್ತಿರುವ ಈ ವಿಷಯವು “ರಾಜಕೀಯವಾಗಿ ಕೆಟ್ಟ ನಿರೂಪಣೆ” ಎಂದು ಅವರು ಹೇಳಿದರು.  ಲೋಕಸಭೆಯಲ್ಲಿ ಪ್ರಶ್ನೋತ್ತರ ವೇಳೆಯಲ್ಲಿ ಮಾತನಾಡಿದ ಲೋಕಸಭೆಯ ಪ್ರತಿಪಕ್ಷದ ನಾಯಕ ಅಧೀರ್ ರಂಜನ್ ಚೌಧರಿ, ಕರ್ನಾಟಕದ ಬಗ್ಗೆ ಕೇಂದ್ರದ “ವಿವೇಚನಾರಹಿತ ಮತ್ತು ನಿರಂಕುಶ ವರ್ತನೆ” ಯ ಹಿಂದಿನ ಕಾರಣವೇನು ಎಂದು ಸೀತಾರಾಮನ್ ಅವರನ್ನು ಕೇಳಿದರು. “ಕೆಲವು ತಿಂಗಳ ಹಿಂದೆ, ಈ ಪರಿಸ್ಥಿತಿ ಇಲ್ಲದ ಕಾರಣ ಕರ್ನಾಟಕ ರಾಜ್ಯ ಸರ್ಕಾರವು ಅವರ ನ್ಯಾಯಯುತ ಬಾಕಿಯನ್ನು ಪಡೆಯುವಲ್ಲಿ ವಂಚಿತವಾಗಿದೆಯೇ ಎಂದು ನಾನು ತಿಳಿಯಲು ಬಯಸುತ್ತೇನೆ. ಎಲ್ಲವೂ ಗೊಂದಲಮಯವಾಗಿತ್ತು, ಆದರೆ ಹೊಸ ಸರ್ಕಾರ ಸ್ಥಾಪನೆಯಾದ ನಂತರ… ತೊಂದರೆ ಪ್ರಾರಂಭವಾಯಿತು. ಇದರ ಹಿಂದಿನ ಕಾರಣವೇನು?” ಎಂದು ಚೌಧರಿ ಪ್ರಶ್ನಿಸಿದರು. ಹಣಕಾಸು ಸಚಿವರು ಈ ಆರೋಪವನ್ನು ನಿರಾಕರಿಸಿದರು, ಇದನ್ನು “ರಾಜಕೀಯವಾಗಿ ಕೆಟ್ಟ ನಿರೂಪಣೆ” ಎಂದು ಕರೆದರು. ವಿಧಾನಸಭಾ ಚುನಾವಣೆಗೆ…

Read More

ಬೆಂಗಳೂರು: ಕೆ.ಆರ್.ಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಕೊಲೆ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು ಕೊಲೆ ಮಗ ಮಾಡಿದಲ್ಲ ಬದಲಿಗೆ ಅಪ್ಪನ ಕೊಲೆಯನ್ನು ತನ್ನ ಮೇಲೆ ಹಾಕಿಕೊಂಡು ಮಗನೇ ಪೊಲೀಸರಿಗೆ ತಾನೇ ಕೊಲೆ ಮಾಡಿದ್ದ ಎನ್ನಲಾಗಿದೆ. ಈ ನಡುವೆ ಫಿಂಗರ್ ಪ್ರಿಂಟ್ ಪತ್ತೆಯಾದ ಹಿನ್ನೆಲೆ ತನಿಖೆ ನಡೆಸಿದ್ದ ಪೊಲೀಸರು ಕೊಲೆಯಲ್ಲಿ ತಂದೆ ಕೊಲೆ ಮಾಡಿದ್ದ ಎನ್ನಲಾಗಿದೆ. ಮಹಿಳೆ ಕೊಲೆಗೆ ಅಕ್ರಮ ಸಂಬಂಧವೇ ಪ್ರಮುಖ ಕಾರಣ ಎನ್ನಲಾಗಿದೆ. ಈ ನಡುವೆ ನೇತ್ರಾಳಿಗೆ ಅಕ್ರಮ ಸಂಬಂಧದ ಜೊತೆಗೆ ಕುಡಿತದ ಚಟ ಇತ್ತು. ಕೆಲವೊಮ್ಮೆ ಎರಡು ಮೂರು ದಿನಗಳ ಕಾಲ ಮನೆಗೆ ಬರ್ತಾ ಇರಲಿಲ್ಲ. ಹೀಗಾಗಿ ಮಗನ ಜೊತೆ ಸೇರಿ ಕೊಲೆ ಮಾಡಲು ನಿರ್ಧಾರ ಮಾಡಿದೆ ಎಂದು ಆರೋಪಿ ಪೊಲೀಸರ ಮುಂದೆ ಹೇಳಿದ್ದಾನೆ ಎನ್ನಲಾಗಿದೆ. ಅಪ್ರಾಪ್ತರು ಜೈಲಿಗೆ ಹೋದರೆ ಶಿಕ್ಷೆ ಕಡಿಮೆ ಇರುತ್ತೆ, ಜೊತೆಗೆ ಅವರೇ ವಿದ್ಯಾಭ್ಯಾಸ ಕೊಡಿಸ್ತಾರೆ ಎಂದು ಅಪ್ಪನನ್ನು ಮಗ ಓಲೈಸಿದ್ದ ಎನ್ನಲಾಗಿದ್ದು, ಈ ಹಿನ್ನಲೆಯಲ್ಲಿ ಮಗ ಪೊಲೀಸರ ಮುಂದೆ ಹೇಳಿದ್ದ ಎನ್ನಲಾಗಿದೆ.

Read More

ಬೆಂಗಳೂರು : ಭಾರತೀಯ ಹಾಕಿ ಆಟಗಾರ ವರುಣ್ ಕುಮಾರ್ ವಿರುದ್ಧ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಪ್ರಕರಣ ದಾಖಲಿಸಲಾಗಿದೆ. ವರುಣ್ ಕುಮಾರ್ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಮಹಿಳೆಯೊಬ್ಬರು ಆರೋಪಿಸಿದ್ದಾರೆ “ತಾನು 17 ವರ್ಷದವಳಿದ್ದಾಗ ವರುಣ್ ಕುಮಾರ್ ತನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಮಹಿಳೆಯೊಬ್ಬರು ಆರೋಪಿಸಿದ್ದಾರೆ. ವರುಣ್ ತಾನು ಮದುವೆಯಾಗುವುದಾಗಿ ಭರವಸೆ ನೀಡಿದ್ದನು ಮತ್ತು ಕಳೆದ ಐದು ವರ್ಷಗಳಲ್ಲಿ ಅವಳನ್ನು ಅನೇಕ ಬಾರಿ ನನ್ನ ಜೊತೆಗೆ ದೈಹಿಕ ಸಸಂಪರ್ಕ ಇಟ್ಟುಕೊಂಡಿದ್ದ ಎನ್ನಲಾಗಿದೆ. ವರುಣ್ ಕುಮಾರ್ ಇನ್ಸ್ಟಾಗ್ರಾಮ್ ಮೂಲಕ ಮಹಿಳೆಯನ್ನು ಭೇಟಿಯಾದರು ಎಂದು ಮೂಲಗಳು ತಿಳಿಸಿವೆ. ಮೂಲಗಳ ಪ್ರಕಾರ, ಈ ಘಟನೆ 2019 ರಲ್ಲಿ ಸಂಭವಿಸಿದೆ ಎನ್ನಲಾಗಿದೆ. ಜಲಂಧರ್ ಮೂಲದ ವರುಣ್ ಕುಮಾರ್ ಒಬ್ಬ ಭಾರತೀಯ ಫೀಲ್ಡ್ ಹಾಕಿ ಆಟಗಾರ ಆಗಿದ್ದಾರೆ, ಅವರು ಹಾಕಿ ಇಂಡಿಯಾ ಲೀಗ್ ಮತ್ತು ಭಾರತೀಯ ರಾಷ್ಟ್ರೀಯ ತಂಡದಲ್ಲಿ ಪಂಜಾಬ್ ವಾರಿಯರ್ಸ್ ಪರ ಡಿಫೆಂಡರ್ ಆಗಿ ಅಟವಾಡುತ್ತಾರೆ. ಬೆಂಗಳೂರಿನ ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ…

Read More

ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ವೈಯಕ್ತಿಕ ಕಾರ್ಯದರ್ಶಿ ಮತ್ತು ಆಮ್ ಆದ್ಮಿ ಪಕ್ಷಕ್ಕೆ (ಎಎಪಿ) ಸಂಬಂಧಿಸಿದ ಕೆಲವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ಮಂಗಳವಾರ ದಾಳಿ ಮಾಡಿ ಶೋಧ ನಡೆಸಿದೆ. ಕೇಜ್ರಿವಾಲ್ ಅವರ ಆಪ್ತ ಕಾರ್ಯದರ್ಶಿ ಬಿಭವ್ ಕುಮಾರ್ ಮತ್ತು ದೆಹಲಿ ಜಲ ಮಂಡಳಿಯ (ಡಿಜೆಬಿ) ಮಾಜಿ ಸದಸ್ಯ ಶಲಭ್ ಕುಮಾರ್ ಮತ್ತು ಇತರ ಕೆಲವರ ಸ್ಥಳಗಳನ್ನು ತನಿಖಾ ಸಂಸ್ಥೆಯ ಅಧಿಕಾರಿಗಳು ಪರಿಶೀಲಿಸುತ್ತಿದ್ದಾರೆ. ಬಿಭಾವ್ ಮತ್ತು ಶಲಭ್ ಅವರಲ್ಲದೆ, ಪಕ್ಷದ ರಾಜ್ಯಸಭಾ ಸದಸ್ಯರೂ ಆಗಿರುವ ಎಎಪಿ ಖಜಾಂಚಿ ಎನ್ಡಿ ಗುಪ್ತಾ ಅವರ ನಿವಾಸದ ಮೇಲೂ ಇಡಿ ಅಧಿಕಾರಿಗಳು ದಾಳಿ ನಡೆಸುತ್ತಿದ್ದಾರೆ. ಮನಿ ಲಾಂಡರಿಂಗ್ ಪ್ರಕರಣವು ಡಿಜೆಬಿಯ ಟೆಂಡರ್ ಪ್ರಕ್ರಿಯೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದೆ. ಕೇಂದ್ರ ತನಿಖಾ ದಳ (ಸಿಬಿಐ) ಮತ್ತು ದೆಹಲಿ ಸರ್ಕಾರದ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಎಫ್ಐಆರ್ ದಾಖಲಿಸಿದ ಎರಡು ಪ್ರಕರಣಗಳ ಆಧಾರದ ಮೇಲೆ ಡಿಜೆಬಿಯ ಟೆಂಡರ್…

Read More

ನವದೆಹಲಿ: ಪೋಸ್ಟ್ ಆಫೀಸ್ ಯೋಜನೆಗಳು ಭಾರತದಾದ್ಯಂತ ತಮ್ಮದೇ ಆದ ಮೋಡಿಯನ್ನು ಹೊಂದಿವೆ, ಏಕೆಂದರೆ ಅವು ಹೂಡಿಕೆದಾರರಿಗೆ ಖಾತರಿಯ ಆದಾಯವನ್ನು ನೀಡುತ್ತವೆ ಮತ್ತು ಕೆಲವು ಸಂದರ್ಭಗಳಲ್ಲಿ ಸ್ಥಿರ ಮಾಸಿಕ ಆದಾಯವನ್ನು ನೀಡುತ್ತವೆ. ಮಾರುಕಟ್ಟೆಯ ಏರಿಳಿತಗಳ ಭಯದಿಂದ ಮಾರುಕಟ್ಟೆ-ಸಂಬಂಧಿತ ಹೂಡಿಕೆ ಯೋಜನೆಗಳಲ್ಲಿ ಹೂಡಿಕೆ ಮಾಡಲು ಬಯಸದ ಬಹಳಷ್ಟು ಹೂಡಿಕೆದಾರರು ಪೋಸ್ಟ್ ಆಫೀಸ್ ಯೋಜನೆಗಳನ್ನು ಸ್ಥಿರವಾದ ಆದಾಯದ ಮೂಲವೆಂದು ಕಂಡುಕೊಳ್ಳುತ್ತಾರೆ, ಅಲ್ಲಿ ಅವರ ಹಣ ಸುರಕ್ಷಿತವಾಗಿರುತ್ತದೆ. ಪೋಸ್ಟ್ ಆಫೀಸ್ ಟೈಮ್ ಡೆಪಾಸಿಟ್, ಅಂದರೆ, ನ್ಯಾಷನಲ್ ಸೇವಿಂಗ್ಸ್ ಟೈಮ್ ಡೆಪಾಸಿಟ್ ಅಕೌಂಟ್, ಅಂತಹ ಒಂದು ಪೋಸ್ಟ್ ಆಫೀಸ್ ಹೂಡಿಕೆ ಯೋಜನೆಯಾಗಿದ್ದು, ಇದು ಖಾತರಿಯ ಆದಾಯವನ್ನು ಬಯಸುವ ಹೂಡಿಕೆದಾರರಲ್ಲಿ ಜನಪ್ರಿಯವಾಗಿದೆ. ರಾಷ್ಟ್ರೀಯ ಉಳಿತಾಯ ಸಮಯ ಠೇವಣಿ ಖಾತೆ (ಪೋಸ್ಟ್ ಆಫೀಸ್ ಟೈಮ್ ಡೆಪಾಸಿಟ್) ಎಂದರೇನು? ಇದು ಅಂಚೆ ಕಚೇರಿ ನಡೆಸುವ ಸ್ಥಿರ ಠೇವಣಿ ಯೋಜನೆಯಾಗಿದ್ದು, ಇಲ್ಲಿ 1, 2, 3 ಮತ್ತು 5 ವರ್ಷಗಳ ನಿಗದಿತ ಅವಧಿಗೆ ಹೂಡಿಕೆ ಮಾಡಬಹುದು. ಕನಿಷ್ಠ 1000 ರೂ.ಗಳ ಹೂಡಿಕೆಯೊಂದಿಗೆ ಮತ್ತು 100…

Read More

ಬೆಳಗಾವಿ: ಹಸಿವು, ತಾಯಿಯ ಕಷ್ಟ ನೋಡಲಾಗದೆ ಯುವಕನೊಬ್ಬ ಆತ್ಮಹತ್ಯೆಗೆ ಶರಣರಾಗಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಈ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಖಾನಾಪುರ ತಾಲ್ಲೂಕಿನ ನಂದಗಡ ಪೊಲೀಸ್ ಠಾಣೆಯಲ್ಲಿ ಬುಧವಾರ ನಡೆದ ಯುವಕನ ಆತ್ಮಹತ್ಯೆ ಮಾಡಿಕೊಂಡಿಕೊಂಡಿದ್ದಾರೆ ಎನ್ನಲಾಗಿದೆ. ಮೂಲತಃ ಹಾವೇರಿ ಜಿಲ್ಲೆ ಯಲಗಚ್ಚು ಗ್ರಾಮದ ಬಸವರಾಜ ವೆಂಕಟ (30) ಆತ್ಮಹತ್ಯೆ ಮಾಡಿಕೊಂಡ ಯುವಕರಾಗಿದ್ದಾರೆ. ಜ.31ರಂದು ನಡೆದಿದ್ದ ಯುವಕನ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿತ್ತು. ಈ ನಡುವೆ ಹೊಟ್ಟೆಗೆ ಅನ್ನವಿಲ್ಲದೇ ತಾಯಿಯನ್ನು ನೋಡಿಕೊಳ್ಳಲಾಗದೇ ಆ ವ್ಯಕ್ತಿ ಕೊನೆಯುಸಿರು ಎಳೆದಿದ್ದಾನೆ ಎನ್ನುವುದು ತನಿಖೆಯಲ್ಲಿ ತಿಳಿದು ಬಂದಿದೆ. ಕಳೆದ ವಾರ ತಾಯಿ–ಮಗ ಹುಬ್ಬಳ್ಳಿಯಿಂದ ರೈಲನ್ನೇರಿ ಗೋವಾ ರಾಜ್ಯಕ್ಕೆ ತೆರಳಿದ್ದರು. ಅಲ್ಲಿಯೂ ಕೆಲಸ ಸಿಗದ ಕಾರಣ ಜ.30ರಂದು ಮರಳಿ ಹುಬ್ಬಳ್ಳಿಯತ್ತ ಹೊರಟಿದ್ದರು. ಇವರ ಬಳಿ ಟಿಕೆಟ್‌ ಇಲ್ಲದ ಕಾರಣ ಪೊಲೀಸರು ಅಳ್ನಾವರ ನಿಲ್ದಾಣದಲ್ಲಿ ರೈಲಿನಿಂದ ಕೆಳಗಿಳಿಸಿದ್ದರಂತೆ. ಈ ನಡುವೆ ಅಳ್ನಾವರದಲ್ಲಿ ಕೆಲಸಕ್ಕಾಗಿ, ಊಟಕ್ಕಾಗಿ ಎಷ್ಟೇ ಅಲೆದರೂ ತುತ್ತು ಅನ್ನ ಸಿಗಲಿಲ್ಲ. ಹೆತ್ತ ತಾಯಿಗೆ ತುತ್ತು ಅನ್ನ ಹಾಕಲು ಆಗಲಿಲ್ಲ…

Read More

ಬೆಂಗಳೂರು: ಫೆಬ್ರವರಿ 16ರಂದು ಸಿಎಂ ಅವರು ಬಜೆಟ್ ಮಂಡಿಸಲಿದ್ದು, ಆಯವ್ಯಯದ ಮೇಲೆ ಸಾಮಾನ್ಯ ಚರ್ಚೆ ನಡೆಯಲಿದೆ ಎಂದು ಸ್ಪೀಕರ್ ಖಾದರ್ ಅವರು ವಿವರಿಸಿದರು. ಫೆಬ್ರವರಿ 12ರಂದು ರಾಜ್ಯಪಾಲರು ಉಭಯ ಸದನಗಳ ಸದಸ್ಯರನ್ನು ಉದ್ದೇಶಿಸಿ ಮಾಡಲಾಗುವ ಭಾಷಣದ ಮೇಲಿನ ಚರ್ಚೆ ನಡೆದು ತದನಂತರ ನಿರ್ಣಯ ಅಂಗೀಕಾರವಾಗಲಿದೆ. ರಾಜ್ಯಪಾಲರ ಭಾಷಣದ ನಂತರ 16ನೇ ವಿಧಾನಸಭೆಯ 2ನೇ ಅಧಿವೇಶನ ಮುಕ್ತಾಯವಾದ ನಂತರ ಇಲ್ಲಿಯವರೆಗೆ ನಿಧನ ಹೊಂದಿದ ಗಣ್ಯ ವ್ಯಕ್ತಿಗಳ ಕುರಿತು ಸಂತಾಪ ಸೂಚನಾ ನಿರ್ಣಯಗಳನ್ನು ಮಂಡಿಸಲಾಗುವುದು. ಈ ಅಧಿವೇಶನದಲ್ಲಿ ಸರಕಾರದಿಂದ ಸ್ವೀಕರಿಸಲಾಗುವ ವಿಧೇಯಕಗಳನ್ನು ಪರ್ಯಾಲೋಚನೆಗೆ ಹಾಗೂ ಅಂಗೀಕಾರಕ್ಕೆ ತೆಗೆದುಕೊಳ್ಳಲಾಗುವುದು. 10 ದಿನಗಳ ಕಾಲ ನಡೆಯುವ ಈ ಅಧಿವೇಶನದಲ್ಲಿ 8 ದಿನಗಳ ಕಾಲ ಪ್ರಶ್ನೋತ್ತರ ಕಲಾಪಗಳನ್ನು ನಿಗದಿಪಡಿಸಲಾಗಿದೆ. ಇದರ ಜೊತೆಗೆ ಗಮನಸೆಳೆಯುವ ಸೂಚನೆಗಳು, ಶೂನ್ಯವೇಳೆ, ನಿಲುವಳಿ ಸೂಚನೆ, ನಿಯಮ 69ರ ಸೂಚನೆಗಳು, ಖಾಸಗಿ ಸದಸ್ಯರುಗಳ ಕಾರ್ಯಕಲಾಪಗಳನ್ನು ನಡೆಸಲಾಗುವುದು ಎಂದರು. ಶಾಸಕರು, ಮಾಧ್ಯಮ ಪ್ರತಿನಿಧಿಗಳು ಹಾಗೂ ಇಲಾಖಾಧಿಕಾರಿಗಳಿಗಾಗಿ ವಿಧಾನಸಭೆಯ ಸಭಾಂಗಣದಲ್ಲಿದ್ದ ಕ್ಯಾಂಟೀನ್ ಸೌಲಭ್ಯವನ್ನು ಈ ಹಿಂದಿನಂತೆ ವಿಧಾನಸೌಧದ ಮೊದಲನೇ…

Read More